Tag: Kaveri Water

  • ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರಿಗೆ ಅನ್ಯಾಯ: ತ.ನಾಡು ಸಚಿವ

    ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರಿಗೆ ಅನ್ಯಾಯ: ತ.ನಾಡು ಸಚಿವ

    ನವದೆಹಲಿ: ಸಂಕಷ್ಟ ಸೂತ್ರದಲ್ಲಿ ನೀರು ಹರಿಸಲು ಕಾವೇರಿ ನೀರು (Kaveri Water) ನಿಯಂತ್ರಣ ಸಮಿತಿ ಸೂಚಿಸಿದ್ದು, ಆದೇಶದಂತೆ ನೀರು ಹರಿಸದೇ ಕುಡಿಯುವ ನೀರಿನ ಹೆಸರಿನಲ್ಲಿ ಕರ್ನಾಟಕ ತಮಿಳುನಾಡು (Tamil Nadu) ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ತಮಿಳುನಾಡು ಜಲ ಸಂಪನ್ಮೂಲ ಸಚಿವ ದುರೈ ಮುರುಗನ್ (Durai Murugan) ಆರೋಪಿಸಿದ್ದಾರೆ.

    ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಕ್ಕೆ ಕರ್ನಾಟಕ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ ಅವರು, CWRC ಅಂಕಿ ಅಂಶಗಳ ಆಧರಿಸಿ ನೀರು ಬಿಡಲು ಸೂಚಿಸಿದೆ. ಅತ್ಯಂತ ಕಡಿಮೆ ನೀರು ಬಿಡಲು ಸೂಚಿಸಿದರೂ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೇಳಿದೆ. CWRC ಆದೇಶ ಪಾಲನೆ ಮಾಡದಿರುವುದು ಸುಪ್ರೀಂಕೋರ್ಟ್ (Supreme Court) ಆದೇಶದ ಉಲ್ಲಂಘನೆ ಎಂದಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಹಸ್ತಾಂತರವಾದ ಸ್ಪೇನ್‌ನ C-295 ಮಿಲಿಟರಿ ವಿಮಾನ – ಏನಿದರ ವಿಶೇಷ?

    ಕಾವೇರಿ ಜಲಾನಯನದಿಂದ 6.75 ಟಿಎಂಸಿ ಮಾತ್ರ ಕುಡಿಯುವ ನೀರಿಗೆ ಬಳಕೆ ಮಾಡಬೇಕು. ಕುಡಿಯುವ ನೀರು ಹೊರತುಪಡಿಸಿ 27 ಟಿಎಂಸಿ ನೀರು ಉಳಿಯಲಿದೆ. ಆದರೆ ಕರ್ನಾಟಕ ಕುಡಿಯುವ ನೀರಿನ ಹೆಸರಿನಲ್ಲಿ ತಮಿಳುನಾಡು ರೈತರನ್ನು ವಂಚಿಸಿದೆ. ರೈತರ ಕಲ್ಯಾಣಕ್ಕೆ ಅಡ್ಡಿಯಾಗುವ ಇಂತಹ ನಿರ್ಧಾರಗಳನ್ನು ತಮಿಳುನಾಡು ಸರ್ಕಾರ ಒಪ್ಪುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ

    ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ

    ಮಂಡ್ಯ: ತೀವ್ರ ವಿರೋಧದ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೇಳಿದ ಹಾಗೆ ತಮಿಳುನಾಡಿಗೆ (Tamil Nadu) ರಾಜ್ಯ ಸರ್ಕಾರ 75,000 ಕ್ಯೂಸೆಕ್ ನೀರು ಬಿಟ್ಟಿದ್ದು ಆಗಿದೆ. ಇಂದು ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ (New Delhi) ಪ್ರಾಧಿಕಾರ ಕರ್ನಾಟಕ ಹಾಗೂ ತಮಿಳುನಾಡಿನ ನೀರು ಹಂಚಿಕೆಯ ವಿವಾದದ ಸಂಬಂಧ ಹೈವೋಲ್ಟೇಜ್ ಸಭೆ ನಡೆಸಲಿದೆ.

    ಕಳೆದ ಆಗಸ್ಟ್ 29ರಂದು ದೆಹಲಿಯಲ್ಲಿ ನಡೆದ ಕಾವೇರಿ ನೀರು ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕ ಸರ್ಕಾರಕ್ಕೆ 15 ದಿನಗಳ ಕಾಲ ನಿತ್ಯ 5,000 ಕ್ಯೂಸೆಕ್ ಅಂದರೆ ಒಟ್ಟು 75,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಸೂಚನೆ ನೀಡಲಾಗಿತ್ತು. ಪ್ರಾಧಿಕಾರ ಸೂಚನೆಯಂತೆ ರಾಜ್ಯ ಸರ್ಕಾರ ರೈತರ ತೀವ್ರ ವಿರೋಧದ ನಡುವೆಯೂ ಹತ್ತೇ ದಿನಕ್ಕೆ ತಮಿಳುನಾಡಿಗೆ ಮಳೆ ನೀರು ಸೇರಿದಂತೆ ಕೆಆರ್‌ಎಸ್ ಡ್ಯಾಂನಿಂದ 75,000 ಕ್ಯೂಸೆಕ್ ನೀರು ಬಿಟ್ಟಿದೆ. ಸದ್ಯ ಕಾವೇರಿ ನೀರು ಹಂಚಿಕೆ ವಿವಾದದ ವಿಚಾರಣೆ ಸೆ.21ಕ್ಕೆ ಸುಪ್ರೀಂಕೋರ್ಟ್‌ನಲ್ಲಿ (Supreme Court) ನಡೆಯಲಿದೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?

    ಈ ನಡುವೆ ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸಮಿತಿ ಅಧಿಕಾರಿಗಳು ಹಾಗೂ ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಇರಲಿದ್ದಾರೆ. ಆಗಸ್ಟ್ 29ರಂದು ನಡೆದ ಪ್ರಾಧಿಕಾರದ ಸಭೆಯಲ್ಲಿ ಆದ ನಿರ್ಣಯಗಳನ್ನು ಕರ್ನಾಟಕ ಸರ್ಕಾರ ಚಾಚು ತಪ್ಪದೇ ಪಾಲಿಸಿದೆ. ಹೀಗಿದ್ದರೂ ಸಹ ತಮಿಳುನಾಡು ನಮಗೆ ಈಗ ಬಿಟ್ಟಿರುವ ನೀರು ಸಾಲಲ್ಲ. ಇನ್ನೂ 10 ದಿನಗಳ ಕಾಲ 24,000 ಕ್ಯೂಸೆಕ್ ನೀರು ಹರಿಸುವಂತೆ ಬೇಡಿಕೆ ಇಡಲು ತಯಾರು ಮಾಡಿಕೊಂಡಿದೆ. ಇದನ್ನೂ ಓದಿ: ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

    ಸದ್ಯದ ಪರಿಸ್ಥಿತಿಯಲ್ಲಿ ಈಗ ತಮಿಳುನಾಡಿಗೆ 75,000 ಕ್ಯೂಸೆಕ್ ನೀರು ಬಿಟ್ಟಿರುವುದೇ ದೊಡ್ಡ ವಿಚಾರ. ಈ ಮಧ್ಯೆ ತಮಿಳುನಾಡು ಇನ್ನೂ ಭಾರೀ ಪ್ರಮಾಣದ ನೀರು ಕೇಳಿರುವುದು ತಪ್ಪು. ಅದರಲ್ಲೂ ಪ್ರಾಧಿಕಾರವೂ ಸಹ ತಮಿಳುನಾಡಿನ ಮನವಿಯನ್ನು ನಿರಾಕರಿಸಬೇಕಾಗಿದೆ. ಈ ಬಗ್ಗೆ ಈಗಾಗಲೇ ಪ್ರಾಧಿಕಾರಕ್ಕೆ ಕರ್ನಾಟಕ ಸರ್ಕಾರ ಮನವರಿಕೆ ಮಾಡಿಕೊಟ್ಟಿದೆ. ಒಂದು ವೇಳೆ ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಳ್ಳದೇ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಿದರೆ ರಾಜ್ಯ ಸರ್ಕಾರ ಗಟ್ಟಿ ನಿರ್ಧಾರ ಮಾಡಿ ನಾವು ನೀರು ಬಿಡಲು ಆಗಲ್ಲ ಎಂದು ಕಡ್ಡಿ ತುಂಡು ಮಾಡಿದ ಹಾಗೆ ಹೇಳಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಸಕ್ಕರೆ ನಾಡು ಮಂಡ್ಯ (Mandya) ಜಿಲ್ಲೆಯ ಕೆಆರ್‌ಎಸ್ ಡ್ಯಾಂನಲ್ಲಿ (KRS Dam) ಇರೋದು ಕೇವಲ 98 ಅಡಿಗಳಷ್ಟೇ ನೀರು. ಟಿಎಂಸಿ ಲೆಕ್ಕಾಚಾರದಲ್ಲಿ ನೋಡುವುದಾದರೆ 21 ಟಿಎಂಸಿ ನೀರು ಅಷ್ಟೇ ಇರೋದು. ಈ ಪೈಕಿ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿರುವ ಕಾರಣ ಬಳಕೆಗೆ ಇರೋದು ಕೇವಲ 16 ಟಿಎಂಸಿ ನೀರು ಮಾತ್ರ. ಮಳೆ ಬಾರದೇ ಇದ್ದರೆ ಈ ನೀರು ಕುಡಿಯೋಕು ಸಾಲಲ್ಲ. ಇದನ್ನೂ ಓದಿ: ರಕ್ತಚಂದನ ಸಾಗಿಸ್ತಿದ್ದ ಕಾರು ಭೀಕರ ಅಪಘಾತಕ್ಕೆ ಜಖಂ – ಪವಾಡವೆಂಬಂತೆ ಪಾರಾದ ಕಳ್ಳರು

    ಒಟ್ಟಾರೆ ಇಂದಿನ ಕಾವೇರಿ ನೀರು ನಿರ್ವಹಣಾ ಸಮಿತಿಯಲ್ಲಿ ತಮಿಳುನಾಡು ಬೇಡಿಕೆಯನ್ನು ಸಮಿತಿ ತಿರಸ್ಕಾರ ಮಾಡಬೇಕಿದೆ. ಒಂದು ವೇಳೆ ಪ್ರಾಧಿಕಾರ ಮತ್ತೆ ತಮಿಳುನಾಡಿಗೆ ನೀರು ಬಿಡಿ ಎಂದು ಹೇಳಿದರೆ ಕರ್ನಾಟಕ ಸರ್ಕಾರ ನಾವು ನೀರು ಬಿಡೋದೆ ಇಲ್ಲ ಎಂದು ಹೇಳಬೇಕಾದ ಅನಿವಾರ್ಯ ಹಾಗೂ ಅಗತ್ಯತೆ ಇದೆ. ಇದನ್ನೂ ಓದಿ: ಸರ್ಕಾರಿ ಬಸ್, ಕಾರು ಮುಖಾಮುಖಿ ಡಿಕ್ಕಿ – 9 ಮಂದಿಗೆ ಗಂಭೀರ ಗಾಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಮಿಳುನಾಡು ಕೇಳಿದಷ್ಟು ನೀರು ಹರಿಸಲು ಸಾಧ್ಯವಿಲ್ಲ: ಅಫಿಡವಿಟ್‌ನಲ್ಲಿ ಕರ್ನಾಟಕ ಹೇಳಿದ್ದೇನು?

    ನವದೆಹಲಿ: ಕಾವೇರಿ ನ್ಯಾಯಾಧಿಕರಣ (Kaveri Tribunal) ಆದೇಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕುರುವೈ ಬೆಳೆ ಬೆಳೆದಿರುವ ತಮಿಳುನಾಡು (Tamil Nadu) ಅದಕ್ಕೆ ನೀರು ಒದಗಿಸಲು ಕರ್ನಾಟಕದ (Karnataka) ಮೇಲೆ ಒತ್ತಡ ಹೇರುತ್ತಿದೆ. ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ಅವಧಿಯಲ್ಲೂ ತಮಿಳುನಾಡು ಸಾಮಾನ್ಯ ಜಲ ವರ್ಷದ ನೀರಿನ ಪಾಲು ಕೇಳುತ್ತಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ.

    ಜೂನ್, ಜುಲೈ, ಆಗಸ್ಟ್ ಅವಧಿಯಲ್ಲಿನ ಕಾವೇರಿ ನೀರು ಹರಿಸಲು ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ನ್ಯಾ. ಬಿ.ಆರ್ ಗವಾಯಿ ಪೀಠದಲ್ಲಿ ವಿಚಾರಣೆಗೆ ಬರಲಿದೆ. ಈ ಹಿನ್ನೆಲೆ ವಿಚಾರಣೆಗೂ ಮುನ್ನ ಕರ್ನಾಟಕ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಇದನ್ನೂ ಓದಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ – ಬಸ್ ಕಂಡಕ್ಟರ್ ಅರೆಸ್ಟ್

    ಈ ಜಲ ವರ್ಷದ ಆರಂಭದಲ್ಲಿ ತಮಿಳುನಾಡಿನ ಜಲಾಶಯದಲ್ಲಿ 69 ಟಿಎಂಸಿ ನೀರಿತ್ತು. ಕರ್ನಾಟಕ ಅಗಸ್ಟ್ 22ರವರೆಗೂ 26 ಟಿಎಂಸಿ ನೀರು ಹರಿಸಿದೆ. ಇದರಿಂದ 96 ಟಿಎಂಸಿ ನೀರು ತಮಿಳುನಾಡು ಬಳಿ ಸಂಗ್ರಹವಾದಂತಾಗಿದೆ. ಸದ್ಯ ತಮಿಳುನಾಡು 21 ಟಿಎಂಸಿ ನೀರಿದೆ ಎಂದು ಹೇಳುತ್ತಿದೆ. ಕುರುವೈ ಬೆಳೆಗೆ 32 ಟಿಎಂಸಿ ನೀರು ಬೇಕು. ಈಗಾಗಲೇ 22 ಟಿಎಂಸಿ ನೀರು ಬಳಕೆ ಮಾಡಿಕೊಂಡಿದೆ. ಬಾಕಿ 9.83 ಟಿಎಂಸಿ ನೀರು ಸೆಪ್ಟೆಂಬರ್ ಅಂತ್ಯದವರೆಗೂ ಬೇಕಾಗುತ್ತದೆ. ಆದರೆ 1.85 ಲಕ್ಷ ಎಕರೆ ಮೀರಿ ಕುರುವೈ ಬೆಳೆ ಬೆಳೆದು ಅಗತ್ಯಕ್ಕಿಂತ ಹೆಚ್ಚು ನೀರಿನ ಬಳಕೆ ಮಾಡುತ್ತಿದೆ. ಇದು ಟ್ರಿಬ್ಯುನಲ್ ಆದೇಶದ ಉಲ್ಲಂಘನೆಯಾಗಿದ್ದು, ತಮಿಳುನಾಡು ಕಾವೇರಿ ನೀರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅಫಿಡವಿಟ್‌ನಲ್ಲಿ ಆರೋಪಿಸಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಭೂಕುಸಿತಕ್ಕೆ ಭಾರೀ ಕಟ್ಟಡಗಳು ನೆಲಸಮ

    ಪ್ರಸ್ತುತ ನೀರಿನ ಸಮಸ್ಯೆ ಉದ್ಭವಿಸಲು ತಮಿಳುನಾಡು ಕಾರಣ. ಅನಗತ್ಯವಾಗಿ ಮೇಕೆದಾಟು ಯೋಜನೆಗೆ ವಿರೋಧಿಸುತ್ತಿದೆ. ಮೇಕೆದಾಟು ಕುಡಿಯುವ ನೀರಿನ ಯೋಜನೆ. ಇದರಿಂದ ತಮಿಳುನಾಡಿಗೆ ಹೆಚ್ಚು ಸಹಾಯವಾಗಲಿದೆ. ಮಳೆ ಕೊರತೆಯ ವರ್ಷದಲ್ಲಿ ತಮಿಳುನಾಡಿಗೆ ನೀರು ಹರಿಸಬಹುದು. 13 ಟಿಎಂಸಿ ನೀರು ಬಳಕೆ ಮಾಡಬಹುದು. ಕಾವೇರಿ ಜಲಾನಯನದಲ್ಲಿರುವ ನೀರು ಸದ್ಯಕ್ಕೆ ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಕಾವೇರಿ ಜಲಾನಯನ ಪ್ರದೇಶದಲ್ಲಿ 42% ಮಳೆ ಕೊರತೆಯಾಗಿದೆ. ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದಲ್ಲಿ 17 ಕೋಟಿ ರೂ. ಮೌಲ್ಯದ ಕೊಕೇನ್ ವಶ – ಇಬ್ಬರು ಕೀನ್ಯಾ ಪ್ರಜೆಗಳ ಬಂಧನ

    ಈಗ ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯದಲ್ಲಿರುವ ಪ್ರಸ್ತುತ ಬೆಳೆ ಮತ್ತು ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಲಿದೆ. ಬೆಂಗಳೂರಿನಂತಹ ಮಹಾ ನಗರಕ್ಕೂ ನೀರಿನ ಕೊರತೆಯಾಗಲಿದೆ. ಈ ಎಲ್ಲಾ ಸವಾಲುಗಳ ನಡುವೆ CWMA ಆದೇಶದ ಬಳಿಕ ಕರ್ನಾಟಕ ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ. ಆದರೆ ಸಾಮಾನ್ಯ ವರ್ಷದ ನೀರು ಹರಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ – ಇಸ್ರೋ ಅಧ್ಯಕ್ಷರಿಗೆ ಸೋನಿಯಾ ಗಾಂಧಿ ಪತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ, ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ: ಡಿಕೆಶಿ

    ಕಾವೇರಿ, ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ: ಡಿಕೆಶಿ

    ಬೆಂಗಳೂರು: ಮಹದಾಯಿ, ಕಾವೇರಿ ನೀರು (Kaveri Water) ವಿಚಾರವಾಗಿ ಇದೇ ಆಗಸ್ಟ್ 23 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ (All Party Meeting) ನಡೆಯಲಿದೆ. ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಎಲ್ಲ ಸಂಸದರನ್ನ ಆಹ್ವಾನಿಸಲಾಗಿದೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಆ.21ರಂದು ಮಾಜಿ ಕಾರ್ಪೊರೇಟರ್ಸ್ ಸೇರಿದಂತೆ ಹಲವರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೂ ಅರ್ಜಿ ಹಾಕಿಲ್ಲ, ಮುಂದೆ ಕಾದು ನೋಡಬೇಕು. ಅವರವರ ಬದುಕು ಭವಿಷ್ಯ ನೋಡಿಕೊಳ್ತಾರೆ. ಸಿಟಿ ರವಿ ಹಿರಿಯರಿದ್ದಾರೆ, ಅವರು ಬೆದರಿಕೆಯೊಡ್ಡುತ್ತಿದ್ದಾರೆ, ಕೈಕತ್ತರಿಸಿಬಿಡ್ತೀವಿ ಅಂತಾ? ಜೆಡಿಎಸ್, ಕಾಂಗ್ರೆಸ್ ಶಾಸಕರನ್ನ ಕರ್ಕೊಂಡು ಮಜಾ ಮಾಡಿದ್ರಲ್ಲ ಆವಾಗ ಏನಾಗಿತ್ತು? ಅವರ ರಾಜಕಾರಣ ಅವರು ಮಾಡಲಿ, ನಿಮಗೆ ಬರೋ ಬೆದರಿಕೆ ತರ, ಬೇರೆಯವರಿಗೂ ಬರುತ್ತೆ. ನಾವು ಯಾರನ್ನೂ ಕರೀತಿಲ್ಲ. ನಮಗಿರೋ ನಂಬರ್‌ಗೆ ಯಾರೂ ಅವಶ್ಯಕತೆ ಇಲ್ಲ. ಆದ್ರೆ ಪಕ್ಷಕ್ಕೆ ಬರೋರನ್ನ ನಾನು ತಡೆಯೋಕೆ ಆಗುತ್ತಾ? ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗುತ್ತಾ? ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಶಾಕ್‌ ಕೊಟ್ಟ ಮದ್ಯಪ್ರಿಯರು – ಮದ್ಯ ಮಾರಾಟ ಪ್ರಮಾಣ 15% ಇಳಿಕೆ

    ಎರಡೂವರೆ ವರ್ಷ ಆದ್ಮೇಲೆ ಸಚಿವ ಸ್ಥಾನ ಬಿಟ್ಟುಕೊಡಬೇಕೆಂಬ ಮುನಿಯಪ್ಪ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಡಿಸಿಎಂ, ಪಾರ್ಟಿ, ಹೈಕಮಾಂಡ್ ಏನ್ ಹೇಳುತ್ತೋ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಾವು ಯಾರು ಅದನ್ನ ಬಹಿರಂಗವಾಗಿ ಚರ್ಚೆ ಮಾಡುವ ವಿಷಯವಲ್ಲ. ಮುಂದಿನ ವಾರ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಾರೆ, ಅವರ ಬಳಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ ಆಗುತ್ತೆ – ಕೋಡಿಮಠ ಶ್ರೀಗಳ ಭವಿಷ್ಯ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ – ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

    ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ – ರಾಜ್ಯದ ರೈತರ ಹಿತ ಕಾಯುವಂತೆ ಸಿಎಂಗೆ ಬೊಮ್ಮಾಯಿ ಪತ್ರ

    ಬೆಂಗಳೂರು: ತಮಿಳುನಾಡು (Tamil Nadu) ಸರ್ಕಾರ ಕಾವೇರಿ ನೀರಿನ (Kaveri Water) ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿದ್ದು, ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಜ್ಯದ ರೈತರ ಹಿತ ಕಾಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ (Letter) ಬರೆದಿದ್ದಾರೆ.

    ತಮಿಳುನಾಡು ಸರ್ಕಾರ ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದಿರುವುದು ನಿಮ್ಮ ಗಮನಕ್ಕೆ ಬಂದಿದೆ ಎಂದು ಭಾವಿಸಿದ್ದೇನೆ ಹಾಗೂ ತಮಿಳುನಾಡು ಸುಪ್ರಿಂ ಕೋರ್ಟ್‌ಗೆ (Supreme Court) ಹೋಗಬಹುದೆಂದು ಮಾಧ್ಯಮದಲ್ಲಿ ನಾವು ನೋಡಿದ್ದೇವೆ. ಈ ವಿಚಾರದಲ್ಲಿ ಕೆಳಕಂಡ ಮಹತ್ವದ ವಾಸ್ತವಿಕ ಅಂಶಗಳನ್ನು ಇಟ್ಟುಕೊಂಡು ಬರುವ ದಿನಗಳಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕೆಂದು ನಾನು ಈ ಪತ್ರ ಬರೆಯುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನಾನು ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ನನ್ನ ಗುರುಗಳಾದ ಡಿಕೆಶಿ ಕಾರಣ: ಎಸ್‌.ಟಿ.ಸೋಮಶೇಖರ್‌

    ಪತ್ರದಲ್ಲಿ ಏನಿದೆ?
    ಜೂನ್ 1 ರಂದು ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಒಟ್ಟು 24.352 ಟಿಎಂಸಿ ನೀರಿತ್ತು. ಅದೇ ರೀತಿ ಮೆಟ್ಟೂರು ಜಲಾಶಯದಲ್ಲಿ 69.77 ಟಿಎಂಸಿ, ಭವಾನಿ ಸಾಗರ ಜಲಾಶಯದಲ್ಲಿ 16.653 ಟಿಎಂಸಿ ಇದ್ದು, ಬಿಳಿಗುಂಡ್ಲು ಮಾಪನ ಕೇಂದ್ರದಿಂದ ಆಗಸ್ಟ್ 6ಕ್ಕೆ 14.054 ಟಿಎಂಸಿ ನೀರು ಬಿಡುಗಡೆಯಾಗಿರುವುದು ಮಾಧ್ಯಮಗಳಿಂದ ತಿಳಿದಿದೆ. ಒಟ್ಟು ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿ ಈ ವರ್ಷ 83.831 ಟಿಎಂಸಿ ನೀರು ಬಂದಿರುತ್ತದೆ. ತಮಿಳುನಾಡು ಕುರುವೈ ಬೆಳೆಗೆ 32 ಟಿಎಂಸಿ ನೀರು ಬಳಸಬೇಕು. ಆದರೆ ತಮಿಳುನಾಡು ಆಗಸ್ಟ್ 7ಕ್ಕೆ 60.97 ಟಿಎಂಸಿ ನೀರು ಕುರುವೈ ಬೆಳೆಗೆ ಬಳಕೆ ಮಾಡಿದ್ದು, ಸಿಡಬ್ಲ್ಯುಡಿಟಿ ಆದೇಶದ ಎರಡು ಪಟ್ಟು ಹೆಚ್ಚಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ: ಯಡಿಯೂರಪ್ಪ

    ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಇರುವುದನ್ನು ಲೆಕ್ಕಿಸದೇ  ಆದೇಶ ಉಲ್ಲಂಘನೆ ಮಾಡಿ ನಾಲ್ಕು ಪಟ್ಟು ಕುರುವೈ ಏರಿಯಾ ಬೆಳೆಗೆ ನೀರನ್ನು ಒದಗಿಸಿದೆ. ಇದನ್ನು ನಮ್ಮ ಸಿಡಬ್ಲ್ಯುಡಿಟಿ ಅಧಿಕಾರಿಗಳು ಸಿಡಬ್ಲ್ಯುಎಂಎದಲ್ಲಿ ಪ್ರತಿಭಟಿಸದೇ ಸುಮ್ಮನಿದ್ದದ್ದು ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಿದೆ. ಈಗಿರುವ ನಮ್ಮ ನಾಲ್ಕು ಡ್ಯಾಮ್‌ಗಳ ನೀರಿನ ಮಟ್ಟ ಬೆಂಗಳೂರು ನಗರ, ಕಾವೇರಿ ಜಲಾನಯನ ಪ್ರದೇಶದ ನಗರ ಮತ್ತು ಗ್ರಾಮಗಳ ಕುಡಿಯುವ ನೀರಿಗೆ ಕೊರತೆಯಾಗುತ್ತದೆ. ಅದೇ ರೀತಿ ಕಾವೇರಿ ಜಲಾನಯನ ಪ್ರದೇಶದ ಖಾರೀಫ್ ಬೆಳೆಗಳಿಗೆ ನೀರಿನ ಕೊರತೆಯಾಗುತ್ತದೆ. ಹೀಗಾಗಿ ನೀರು ಬಿಡುವುದು ಕರ್ನಾಟಕದ ಜನತೆ ಮತ್ತು ರೈತರನ್ನು ಸಂಕಷ್ಟಕ್ಕೆ ಈಡು ಮಾಡುತ್ತದೆ. ಇದನ್ನೂ ಓದಿ: ಗುದ್ದಲಿ ಪೂಜೆನೇ ಆಗಿಲ್ಲ, ಕಮಿಷನ್ ಎಲ್ಲಿಂದ?- ಬಿಜೆಪಿಗೆ ಹೆಬ್ಬಾಳ್ಕರ್ ತಿರುಗೇಟು

    ತಮಿಳುನಾಡಿಗೆ ಸೌಥ್ ವೆಸ್ಟ್ ಮತ್ತು ನಾರ್ಥ್ ಈಸ್ಟ್ ಮಾನ್ಸೂನ್ ಮಳೆ ಆಗುತ್ತಿರುವುದರಿಂದ ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ಈ ವಾಸ್ತವಾಂಶದ ಮೇಲೆ ನಾವು ಗಟ್ಟಿ ನಿಲುವು ತೆಗೆದುಕೊಳ್ಳಬೇಕೆಂದು ನಾನು ತಮ್ಮಲ್ಲಿ ಆಗ್ರಹ ಮಾಡುತ್ತೇನೆ. ತಾವು ಕಾವೇರಿ ಜಲಾನಯನ ಪ್ರದೇಶದ ನೀರಿನ ಹಿತಾಸಕ್ತಿ ಕಾಪಾಡುತ್ತೀರೆಂದು ನಂಬಿರುವೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಸರ್ಕಾರ ಇದ್ದಾಗಲೆಲ್ಲಾ ಭ್ರಷ್ಟಾಚಾರ ಇತ್ತು: ಡಾ.ಶರಣ ಪ್ರಕಾಶ್ ಪಾಟೀಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]