Tag: Kavishaila

  • ಕುಪ್ಪಳ್ಳಿಯ ಕವಿಮನೆಯಲ್ಲಿ ಖ್ಯಾತ ನಟ ಸಾಯಿಕುಮಾರ್

    ಕುಪ್ಪಳ್ಳಿಯ ಕವಿಮನೆಯಲ್ಲಿ ಖ್ಯಾತ ನಟ ಸಾಯಿಕುಮಾರ್

    ಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನಗೆದ್ದಿರುವ ದಕ್ಷಿಣ ಭಾರತದ ಖ್ಯಾತ ನಟ ಸಾಯಿಕುಮಾರ್ (Sai Kumar) ಇತ್ತೀಚಿಗೆ ರಾಷ್ಟ್ರಕವಿ ಕುವೆಂಪು (Kuvempu) ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ (Kavishaila) ಭೇಟಿ ನೀಡಿದ್ದಾರೆ. ಆ ಸುಂದರ ಸ್ಥಳಕ್ಕೆ  ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಸಾಯಿಕುಮಾರ್ ಹಂಚಿಕೊಂಡಿದ್ದಾರೆ.

    ನಾನು ಹಾಗೂ ನನ್ನ ಕೆಲವು ಸ್ನೇಹಿತರು ಇತ್ತೀಚಿಗೆ ತೀರ್ಥಹಳ್ಳಿಯಿಂದ  ರಾಷ್ಟ್ರಕವಿ ಕುವೆಂಪು ಅವರ ಮನೆ ಹಾಗು ಕವಿಶೈಲಕ್ಕೆ ಭೇಟಿ ನೀಡಿದ್ದೆ. ಅಬ್ಬಾ ಆ ಸ್ಥಳವನ್ನು ಬಣಿಸಲು ಪದಗಳೆ ಸಿಗುತ್ತಿಲ್ಲ ಎಂದಿದ್ದಾರೆ.

    ಈ ಕುರಿತು ಮಾತನಾಡಿರು ಅವರು ನಾನು ನನ್ನ ಸಿನಿಮಾಗಳಲ್ಲಿ ಕುವೆಂಪು ಅವರ ‘ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು’, ‘ಕನ್ನಡಕ್ಕೆ ಹೋರಾಡು ಕನ್ನಡದ ಕಂದ’, ‘ಬಾರಿಸು ಕನ್ನಡ ಡಿಂಡಿಮವ’ ಮುಂತಾದ ಕವನಗಳನ್ನು ಹಾಗೂ ‘ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಹಾಡುತ್ತಿರುತ್ತೇನೆ.  ಆದರೆ ಈವರೆಗೂ ಕುಪ್ಳಳ್ಳಿಗೆ ಹೋಗಿರಲಿಲ್ಲ. ಇತ್ತೀಚಿಗೆ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಹೋಗಿದ್ದೆ. ಪ್ರಕೃತಿಯ ಮಡಿಲಲ್ಲಿರುವ ಆ ಪುಣ್ಯಸ್ಥಳವನ್ನು ನೋಡಿ ಪುಳಕಿತನಾದೆ. ಅವರು ಬಳಸುತ್ತಿದ್ದ ಲೇಖನಿ ಹಾಗೂ ಪುಸ್ತಕ ಮುಂತಾದವುಗಳನ್ನು ಕಂಡು ಧನ್ಯನಾದೆ’ ಎಂದಿದ್ದಾರೆ.

     

    ನಾನು ಸುಮಾರು ಮೂವತ್ತು ವರ್ಷಗಳಿಂದ ಕರ್ನಾಟಕದಲ್ಲಿ ಕನ್ನಡ ಚಿತ್ರಗಳನ್ನು ಮಾಡುತ್ತಾ ಬಂದಿದ್ದರೂ ಕುಪ್ಪಳ್ಳಿಯನ್ನು ನೋಡುವ ಯೋಗ ಬಂದಿರಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಾಗೂ ಯುವಕರು ಕುಪ್ಪಳ್ಳಿಗೆ ಭೇಟಿ ನೀಡಿ. ಅಲ್ಲಿನ ಸೊಬಗನ್ನ ಕಣ್ತುಂಬಿಕೊಂಡೆ ಎನ್ನುತ್ತಾರೆ ನಟ ಸಾಯಿಕುಮಾರ್.

  • ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ

    ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಾದಯಾತ್ರೆ

    ಶಿವಮೊಗ್ಗ: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಕುಪ್ಪಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಂಡಿದೆ.

    ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಕನ್ನಡ ಸಾಹಿತಿಗಳಿಗೆ ಆದ ಅಪಮಾನವನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡುತ್ತಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕವಿಶೈಲದಿಂದ ಪಾದಯಾತ್ರೆ ಪ್ರಾರಂಭವಾಗಿದ್ದು, ಇದರ ನೇತೃತ್ವವನ್ನು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಹಿಸಿದ್ದಾರೆ.

    ಈ ಪಾದಯಾತ್ರೆಯಲ್ಲಿ ಸಾಹಿತಿಗಳು, ಪ್ರಗತಿಪರರು, ವಿವಿಧ ಸಂಘ ಸಂಸ್ಥೆ ಮುಖಂಡರು ಭಾಗಿಯಾಗಿದ್ದಾರೆ.

    ಏನಿದು ವಿವಾದ?
    ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅಲ್ಲದೇ ಅನೇಕ ಪಠ್ಯಗಳನ್ನು ಕೈಬಿಡಲಾಗಿದ್ದು, ಹಿಂದೂಪರ ಧೋರಣೆಗಳನ್ನು ಪಠ್ಯದಲ್ಲಿ ಬಿಂಬಿಸಲಾಗುತ್ತಿದೆ ಎಂದು ದೂರಲಾಗಿತ್ತು. ಇದನ್ನೂ ಓದಿ: 2 ಶಿಕ್ಷಕ, 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು- 3 ಪಕ್ಷಗಳ ಭವಿಷ್ಯ ನಿರ್ಧಾರ

    ವಿವಾದದ ಬಳಿಕ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೈಬಿಡಲಾಯಿತು. ಆದರೂ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಸಾಕಷ್ಟು ಲೋಪಗಳಾಗಿವೆ. ಹೀಗಾಗಿ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯ ಪಠ್ಯವನ್ನೇ ಈ ಶೈಕ್ಷಣಿಕ ಸಾಲಿನಲ್ಲೂ ಮುಂದುವರಿಸಬೇಕು ಎಂಬ ಆಗ್ರಹಗಳು ಕೇಳಿಬರುತ್ತಿವೆ.