ಮಂಗಳೂರು: ಕಾವೂರಿನಲ್ಲಿ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪ (K.S Eshwarappa) ಸಿಡಿಮಿಡಿಯಾಗಿದ್ದಾರೆ.
ಈಶ್ವರಪ್ಪ ಭಾಷಣ ಮಾಡ್ತಿದ್ದಾಗ ಸ್ಥಳೀಯ ಮಸೀದಿಯಿಂದ ಆಝಾನ್ (Azan) ಕೇಳಿಬಂತು. ಇದಕ್ಕೆ ಸಿಟ್ಟಾದ ಈಶರಪ್ಪ ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಅಂತ ಹೇಳಿದ್ರು.
ಸುಪ್ರೀಂ ಕೋರ್ಟ್ (Supremecourt) ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆಹ್ವಾನ ನೀಡಿಲ್ಲ ಯಾಕೆ: ಮೋದಿ ವಿರುದ್ಧ ಸುರೇಶ್ ಕಿಡಿ
ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಂಗಳೂರು: ರಾಜ್ಯದ ಕರಾವಳಿಯಲ್ಲಿ ವ್ಯಾಪಾರ ಬಹಿಷ್ಕಾರದ ಧರ್ಮ ದಂಗಲ್ ಮತ್ತೆ ಮುಂದುವರಿದಿದೆ. ಕಳೆದ ವರ್ಷದಿಂದ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಬಹಿಷ್ಕಾರ ಹಾಕಲಾಗುತ್ತಿದೆ. ಇದೀಗ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ಮಂಗಳೂರಿನ (Mangaluru) ಕಾವೂರು (Kavoor) ಶ್ರೀಮಹಾಲಿಂಗೇಶ್ವರ ದೇವಸ್ಥಾನದ (Shree Mahalingeswara Temple) ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ವಿಎಚ್‍ಪಿ – ಭಜರಂಗದಳ ಬಹಿಷ್ಕಾರ ಹಾಕಿದ್ದು, ಕ್ಷೇತ್ರದ ಆಡಳಿತ ಮಂಡಳಿಯೂ ಸಮ್ಮತಿ ನೀಡಿದೆ.
ಕಳೆದ ವರ್ಷದಿಂದ ಕರಾವಳಿಯ ಹೆಚ್ಚಿನ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕಲಾಗಿತ್ತು. ಈ ಸಂಪ್ರದಾಯ ಈ ವರ್ಷವೂ ಮುಂದುವರಿದಿದ್ದು, ಇದೀಗ ಮಂಗಳೂರಿನ ಕಾವೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಈ ಬಹಿಷ್ಕಾರ ಮುಂದುವರಿದಿದೆ. ಈ ದೇವಸ್ಥಾನದ ಜಾತ್ರಾ ಮಹೋತ್ಸವವು (Fair) ಜ. 14ರ ಮಕರ ಸಂಕ್ರಮಣದಿಂದ ಆರಂಭಗೊಂಡು ಜ. 18ರವರೆಗೆ ನಡೆಯಲಿದೆ.
ಈ 4 ದಿನಗಳ ಕಾಲ ಸಾವಿರಾರು ಜನ ಸೇರುವ ಈ ಜಾತ್ರೆಯಲ್ಲಿ ನೂರಾರು ವ್ಯಾಪಾರಸ್ಥರು ವ್ಯಾಪಾರ ಮಾಡ್ತಾರೆ. ಕಳೆದ ಹಲವಾರು ವರ್ಷಗಳಿಂದಲೂ ಈ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಮಾತ್ರ ಮುಸ್ಲಿಂ ವ್ಯಾಪಾರಸ್ಥರಿಗೆ ಈ ಜಾತ್ರೆಯಲ್ಲಿ ಬಹಿಷ್ಕಾರ ಹಾಕಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಅನುಮತಿ ಪಡೆದು ಕ್ಷೇತ್ರದ ಆವರಣದಲ್ಲಿ ವಿಎಚ್‍ಪಿ ಹಾಗೂ ಭಜರಂಗದಳ ಬ್ಯಾನರ್ ಅಳವಡಿಕೆ ಮಾಡಿದ್ದು, ಅನ್ಯಧರ್ಮಿಯರ ವ್ಯಾಪಾರಕ್ಕೆ ಸಂಪೂರ್ಣ ಬಹಿಷ್ಕಾರ ಹಾಕಲಾಗಿದೆ.
ಹಿಂದೂ ಸಂಘಟನೆ ಅಳವಡಿಸಿರುವ ಬ್ಯಾನರ್‍ನಲ್ಲಿ ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಗಳಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ, ವಿಗ್ರಹರಾಧನೆ ಹರಾಂ ಎಂದು ನಂಬಿದ ಯಾರಿಗೂ ವ್ಯಾಪಾರದ ಅವಕಾಶವಿಲ್ಲ ಎಂದು ಬರೆಯಲಾಗಿದೆ. ಈಗಾಗಲೇ ದೇವಸ್ಥಾನದ ಜಾತ್ರೆ ಆರಂಭಗೊಂಡಿದ್ದು, ಕ್ಷೇತ್ರದ ಒಳ ಹಾಗೂ ಹೊರ ಭಾಗದಲ್ಲಿ ನೂರಾರು ಸ್ಟಾಲ್‍ಗಳ ನಿರ್ಮಾಣವಾಗಿದೆ. ಈ ಬಾರಿ ಸ್ಟಾಲ್‍ಗಳ ನಿರ್ವಹಣೆಯ ಉಸ್ತುವಾರಿಯನ್ನು ಭಜರಂಗದಳ ಕಾರ್ಯಕರ್ತರಿಗೆ ನೀಡಿರುವುದರಿಂದ ಇತರ ಧರ್ಮದವರಿಗೆ ಯಾವುದೇ ಕಾರಣಕ್ಕೂ ವ್ಯಾಪಾರ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ. ಮುಸ್ಲಿಮರಿಗೆ ಈ ಕ್ಷೇತ್ರದಲ್ಲಿ ವ್ಯಾಪಾರ ಬಹಿಷ್ಕಾರ ನಡೆಸಲು ಆಡಳಿತ ಮಂಡಳಿಯ ಸಭೆಯಲ್ಲೇ ನಿರ್ಧರಿಸಲಾಗಿದೆ. ಇದನ್ನೂ ಓದಿ: ಗುಜರಾತಿನಲ್ಲಿ ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ
ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಎನ್ನುವ ಬ್ಯಾನರ್ ಪ್ರತ್ಯಕ್ಷವಾಗುತ್ತಿದ್ದಂತೆ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ದೇವಸ್ಥಾನದ ಸುತ್ತ ಸಿಎಆರ್ ತುಕಡಿ ಸೇರಿದಂತೆ ಹೆಚ್ಚುವರಿ ಪೊಲೀಸ್ ಭದ್ರತೆ ಮಾಡಲಾಗಿದೆ. ಒಟ್ಟಿನಲ್ಲಿ ಹಲವು ವರ್ಷಗಳಿಂದ ಸೌಹಾರ್ದಯುತವಾಗಿ ಹಿಂದೂಗಳ ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಸ್ಥರಿಗೆ ಇನ್ನು ಮಾತ್ರ ವ್ಯಾಪಾರ ಮಾಡುವ ಅವಕಾಶ ಕಡಿಮೆಯಾದಂತಿದೆ. ಇದನ್ನೂ ಓದಿ: ಬೆಂಗಳೂರಿನ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಚಿರತೆ ಆತಂಕ
Live Tv
[brid partner=56869869 player=32851 video=960834 autoplay=true]
ಮಂಗಳೂರು: ಮಹಾಶಿವರಾತ್ರಿ ಜಾಗರಣೆಯ ಪ್ರಯುಕ್ತ ನಡೆಯುತ್ತಿದ್ದ ಭಜನೆ ಹಾಗೂ ಯಕ್ಷಗಾನವನ್ನು ನಿಲ್ಲಿಸಲು ಒತ್ತಡ ಹೇರಿದ್ದಾರೆ ಅನ್ನೋ ಆರೋಪವೊಂದು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ವಿರುದ್ಧ ಕೇಳಿಬಂದಿದೆ.
ಹೌದು, ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಜಾಗರಣೆಯ ಅಂಗವಾಗಿ ಭಜನೆಗಳು ಹಾಗೂ ಯಕ್ಷಗಾನ ನಡೆಯುತ್ತಿತ್ತು. ಈ ದೇವಸ್ಥಾನದ ಹತ್ತಿರದಲ್ಲೇ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಬಂಗಲೆ ಇದೆ. ಹೀಗಾಗಿ ಕಾರ್ಯಕ್ರಮದಿಂದ ಪೊಲೀಸ್ ಅಧಿಕಾರಿಯ ನಿದ್ದೆಗೆ ಭಂಗವಾಗಿದ್ದು, ಕಾರ್ಯಕ್ರಮ ನಿಲ್ಲಿಸಲು ಒತ್ತಡ ಹೇರಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕಾರ್ಯಕ್ರಮದಿಂದ ಕಿರಿಕಿರಿಯಾಗುತ್ತದೆ ಎಂದು ಪೊಲೀಸರು ಒತ್ತಡ ಹಾಕಿದ್ದಾರೆ. ಅಲ್ಲದೆ ಧ್ವನಿವರ್ಧಕ ಸ್ಥಗಿತಗೊಳಿಸಿ ಕಾರ್ಯಕ್ರಮ ನಡೆಸಲು ಸೂಚನೆ ನೀಡಿದ್ದಾರೆ. ನಾಗರಿಕರ ದೂರು ನೆಪದಲ್ಲಿ ಕಾರ್ಯಕ್ರಮ ರದ್ದುಪಡಿಸಲು ಒತ್ತಾಯ ಮಾಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ದೇವಸ್ಥಾನದ ಭಕ್ತರ ನಡುವೆ ಜಟಾಪಟಿ ನಡೆದಿದೆ.
ಮಾಹಿತಿ ಪಡೆದ ಉಸ್ತುವಾರಿ ಸಚಿವ ಯು.ಟಿ.ಖಾದರ್, ಶಾಸಕ ಡಾ.ಭರತ್ ಶೆಟ್ಟಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ಜನಪ್ರತಿನಿಧಿಗಳ ಪ್ರವೇಶದಿಂದ ಜಟಾಪಟಿ ನಿಂತು ಕಾರ್ಯಕ್ರಮ ಮುಂದುವರಿದಿದೆ.
ಮಂಗಳೂರು: ಕಾವೂರು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ನವೀಕರಣಗೊಂಡ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು. ನವೀಕೃತ ಕಟ್ಟಡವನ್ನು ಕ್ಯಾನ್ ಫಿನ್ ಹೋಮ್ ಲಿಮಿಟೆಡ್‍ನ ಪ್ರಬಂಧಕ ಉಮೇಶ್ ಪೈ ಉದ್ಘಾಟಿಸಿದರು.
ಕಟ್ಟಡ ಉದ್ಘಾಟಿಸಿ ಮಾತನಾಡಿದ ಉಮೇಶ್ ಪೈ ಅವರು, ವಿದ್ಯಾರ್ಥಿಗಳು ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸತ್ಪ್ರಜೆಗಳಾಗಿ ದೇಶದ ಏಳಿಗೆಗಾಗಿ ಜೀವನ ನಡೆಸಿರಿ ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾದ ಮಂಗಳೂರು ಉತ್ತರ ವಲಯ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಒದಗಿಸಿದ ಸೌಲಭ್ಯಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಸಂವಹನ ಕೌಶಲ್ಯ ಬೆಳೆಸಿಕೊಳ್ಳಲು ಸಹಕಾರಿಯಾಗಬೇಕು. ಕ್ಯಾನ್ ಫಿನ್ ಹೋಮ್ಸ್ ಇವರ ಉದಾರತೆಯ ಸಮಾಜದ ಉಳಿದ ಸಂಘ ಸಂಸ್ಥೆಗಳಲ್ಲಿ ಇದ್ದಲ್ಲಿ ವಿದ್ಯಾ ಸಂಸ್ಥೆಗಳು ಬೆಳೆಯುತ್ತವೆ. ಅದರ ಉಪಯೋಗ ಬಡ ವಿದ್ಯಾರ್ಥಿಗಳಿಗೆ ಸಿಗುವಂತಾಗಲಿ ಎಂದು ತಿಳಿಸಿದರು.
ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್‍ನವರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣ ಕಾರ್ಯ ನಡೆದಿದೆ. ಈ ವೇಳೆ ಗುತ್ತಿಗೆದಾರ ಸುಧೀರ್ ರಾಜ್, ಸುಮಂತ್ ರಾವ್, ಫೆಲ್ಸಿ ರೇಗೋ, ರಮಾನಂದ ಭಂಡಾರಿ, ಜಗದೀಶ್, ನಾಗೇಶ್ ನಾಯಕ್ ಮತ್ತಿತರು ಉಪಸ್ಥತಿರಿದ್ರು. ಶಾಲಾ ಮುಖ್ಯ ಶಿಕ್ಷಕ ಮಲ್ಲೇಶ್ ನಾಯ್ಕ್ ಎ.ಸಿ ಸ್ವಾಗತಿಸಿದರು. ಸಹ ಶಿಕ್ಷಕ ನಾಗೇಶ್ ನಾಯಕ್ ವಂದನಾರ್ಪಣೆಗೈದರು. ಸುಭಾಷಿಣಿ ಕಾರ್ಯಕ್ರಮವನ್ನು ನಿರೂಪಿಸಿದರು.