Tag: kavya Gowda

  • ಮಗಳ ಮುಖ ರಿವೀಲ್ ಮಾಡಿದ ‘ರಾಧಾ ರಮಣ’ ನಟಿ ಕಾವ್ಯಾ ಗೌಡ

    ಮಗಳ ಮುಖ ರಿವೀಲ್ ಮಾಡಿದ ‘ರಾಧಾ ರಮಣ’ ನಟಿ ಕಾವ್ಯಾ ಗೌಡ

    ಕಿರುತೆರೆ ನಟಿ ಕಾವ್ಯಾ ಗೌಡ (Kavya Gowda) ಅವರು ಮಗುವಿಗೆ ಜನ್ಮ ನೀಡಿ 6 ತಿಂಗಳ ನಂತರ ಇಂದು (ಆ.16) ವರಮಹಾಲಕ್ಷ್ಮಿ ಹಬ್ಬದಂದು ಮಗಳ ಮುಖವನ್ನು ರಿವೀಲ್ ಮಾಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಮಗಳು ಸಿಯಾಳ ಮುದ್ದಾದ ವಿಡಿಯೋವನ್ನು ‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಹಂಚಿಕೊಂಡಿದ್ದಾರೆ.

    ಲೈಟ್ ಬಣ್ಣ ಡ್ರೆಸ್ ಧರಿಸಿರುವ ಸಿಯಾಳ ತುಂಟಾಟದ ವಿಡಿಯೋ ಶೇರ್ ಮಾಡಿ, ಕಳೆದ 6 ತಿಂಗಳಿನಿಂದ ತಾಯ್ತನದ ಜರ್ನಿ ತುಂಬ ಪ್ರೀತಿಯಿಂದ ಕೂಡಿತ್ತು. ಇದೊಂದು ಸುಂದರವಾದ ಅನುಭವ. ನನ್ನ ಕೈತೋಳಿನಲ್ಲಿ ಸಿಯಾ ಇಟ್ಟುಕೊಂಡಾಗ ಆದ ಅನುಭವವನ್ನು ಹೇಳಲಾಗದು. ಸಿಯಾಳ ಜರ್ನಿಯನ್ನು ನಿಮ್ಮ ಮುಂದೆ ಹಂಚಿಕೊಳ್ಳಲು ಇಷ್ಟಪಡುವೆ ಎಂದು ಕಾವ್ಯಾ ಅವರು ಹೇಳಿದ್ದಾರೆ. ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮಹೇಶ್ ಬಾಬು ಪತ್ನಿ

    ಅಂದಹಾಗೆ, ಕಾವ್ಯಾ ಮತ್ತು ಸೋಮಶೇಖರ್ ದಂಪತಿ ಮಗಳಿಗೆ ಸಿಯಾ (Siya) ಎಂದು ಹೆಸರಿಟ್ಟಿದ್ದಾರೆ. ಸಿಯಾ ಅಂದರೆ ಸೀತೆ ಎಂದರ್ಥ. ಜೊತೆಗೆ ಸುಂದರವಾದ ಹೂವು ಎಂದು ಅರ್ಥ ಕೂಡ ಇದೆ.

    ಈ ವರ್ಷ ಜನವರಿ 22ರಂದು ಅಯೋಧ್ಯೆಯ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ದಿನ ಮುದ್ದಾದ ಹೆಣ್ಣು ಮಗುವಿಗೆ ನಟಿ ಜನ್ಮ ನೀಡಿದ್ದರು.

  • ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾವ್ಯಾ ಗೌಡ

    ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾವ್ಯಾ ಗೌಡ

    ‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಗೌಡ (Kavya Gowda) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿಗೆ (Baby Girl)  ನಟಿ ಜನ್ಮ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

    ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ.22ರಂದು ಅದ್ಧೂರಿಯಾಗಿ ನೆರವೇರಿದೆ. ಇದೇ ದಿನ ನಟಿ ಕಾವ್ಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕಾವ್ಯಾ ಗೌಡ ಅವರ ಕುಟುಂಬದಲ್ಲಿ ಮತ್ತಷ್ಟು ಸಂತಸ ಹೆಚ್ಚಿಸಿದೆ. ಇದನ್ನೂ ಓದಿ:ಅಯೋಧ್ಯೆಯಲ್ಲಿ ಮಿಂಚಿದ ಆಲಿಯಾ ಭಟ್ : ಸೀರೆ ಮೇಲೆ ಅಭಿಮಾನಿಗಳ ಕಣ್ಣು

    ನಮ್ಮ ಮನೆಗೆ ಮುದ್ದಾದ ರಾಜಕುಮಾರಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ನಿಮ್ಮೆಲ್ಲರ ಶುಭಹಾರೈಕೆಗೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ.

    ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿ 2 ವರ್ಷಗಳ ನಂತರ ನಟಿ ತಾಯಿ ಆಗಿರುವ ಸಿಹಿಸುದ್ದಿ ನೀಡಿದ್ದರು. ಇತ್ತೀಚೆಗಷ್ಟೇ ಕಾವ್ಯಾಗೆ ಅದ್ಧೂರಿಯಾಗಿ ಸೀಮಂತ ಶಾಸ್ತ್ರ ಮಾಡಲಾಗಿತ್ತು. ಕುಟುಂಬಸ್ಥರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೆರವೇರಿತ್ತು. ಈ ಬೆನ್ನಲ್ಲೇ ನಟಿ ಸಿಹಿಸುದ್ದಿ ನೀಡಿದ್ದಾರೆ.

  • ಸೀಮಂತ ಶಾಸ್ತ್ರದ ಸಂಭ್ರಮದಲ್ಲಿ ನಟಿ ಕಾವ್ಯಾ ಗೌಡ

    ಸೀಮಂತ ಶಾಸ್ತ್ರದ ಸಂಭ್ರಮದಲ್ಲಿ ನಟಿ ಕಾವ್ಯಾ ಗೌಡ

    ಪ್ಯಾಟೆ ಮಂದಿ ಕಾಡಿಗ್ ಬಂದ್ರು, ರಾಧಾ ರಮಣ (Radha Ramana) ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ್ದ ನಟಿ ಕಾವ್ಯಾ ಗೌಡ (Kavya Gowda) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸೀಮಂತ ಶಾಸ್ತ್ರದ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ.

    ಕಾವ್ಯಾ ಗೌಡ ಸೀಮಂತ ಕಾರ್ಯಕ್ರಮ ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ನಡೆದಿದೆ. ಕಾರ್ಯಕ್ರಮದಲ್ಲಿ ಲೈಟ್ ಬಣ್ಣದ ಸೀರೆಯಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ‌ ಸೀಮಂತ ಕಾರ್ಯಕ್ರಮ ನಡೆದಿದೆ.

    2021ರಲ್ಲಿ ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿದ್ದಾರೆ. ಗುರುಹಿರಿಯರು ಸಮ್ಮತಿಸಿದ ಮದುವೆಗೆ ಕಾವ್ಯಾ ಗ್ರೀನ್ ಸಿಗ್ನಲ್ ನೀಡಿದ್ದರು. ಇದನ್ನೂ ಓದಿ:ಶಿವರಾತ್ರಿಗೆ ಶಿವಣ್ಣ ನಟನೆಯ ಹೊಸ ಚಿತ್ರದ ಟೈಟಲ್ ಅನಾವರಣ

    ಕಳೆದ ವರ್ಷ ಹೊಸ ಮನೆ ಕಟ್ಟಿ ಗೃಹಪ್ರವೇಶ ಕೂಡ ಅದ್ದೂರಿಯಾಗಿ ಮಾಡಿದ್ದರು. ಹೊಸ ಮನೆಗೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ ಈಗ ಹೊಸ ಅತಿಥಿ ಆಗಮನವಾಗುತ್ತಿರೋ ಖುಷಿಯಲ್ಲಿದ್ದಾರೆ.

    ಮೀರಾ ಮಾಧವ, ರಾಧಾ ರಮಣ, ಬಕಾಸುರ ಸಿನಿಮಾ ಸೇರಿದಂತೆ ಸಾಕಷ್ಟು ಜಾಹೀರಾತುಗಳಲ್ಲಿ ಕಾವ್ಯಾ ಕೆಲಸ ಮಾಡಿದ್ದಾರೆ.

  • ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

    ಸ್ಟೈಲೀಶ್‌ ಆಗಿ ಕಾಣಿಸಿಕೊಂಡ ‘ಅಮೃತಧಾರೆ’ ಸಾರಾ- ಕಾವ್ಯಾ ಗೌಡ

    ಕಿರುತೆರೆಯ ಜನಪ್ರಿಯ ಅಮೃತಧಾರೆ (Amruthadaare) ಮತ್ತು ಭಾಗ್ಯಲಕ್ಷಿ (Bhagyalakshmi) ಸೀರಿಯಲ್ ನಟಿಯರು ಸಾರಾ ಅಣ್ಣಯ್ಯ- ಕಾವ್ಯಾ ಗೌಡ ಅವರು ಒಟ್ಟಿಗೆ ಗೋವಾಗೆ ಜಾಲಿ ಟ್ರಿಪ್ ಮಾಡ್ತಿದ್ದಾರೆ. ಶ್ರೇಷ್ಠಾ ಮತ್ತು ಮಹಿಮಾ ಹಾಟ್ ಫೋಟೋಸ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಅಮೆರಿಕಾದಲ್ಲಿ ಅವಳಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಿದ ಪ್ರೀತಿ ಜಿಂಟಾ

    ಕನ್ನಡತಿ, ನಮ್ಮ ಲಚ್ಚಿ ಸೀರಿಯಲ್ ಮೂಲಕ ಗಮನ ಸೆಳೆದ ಕೂರ್ಗ್ ಬ್ಯೂಟಿ ಸಾರಾ ಅಣ್ಣಯ್ಯ (Sara Annaiah) ಅವರು ಸದ್ಯ ಅಮೃತಧಾರೆ ಸೀರಿಯಲ್‌ನ ಮಹಿಮಾ ರೋಲ್‌ನಲ್ಲಿ ಮಿಂಚಿದ್ದಾರೆ. ಉದ್ಯಮಿ ಗೌತಮ್ ದಿವಾನ್ ಸಹೋದರಿ ಪಾತ್ರಕ್ಕೆ ಸಾರಾ ಜೀವ ತುಂಬುತ್ತಿದ್ದಾರೆ. ಜೀವಾ ಎಂಬ ಹುಡುಗನನ್ನು ಹುಚ್ಚಿಯಂತೆ ಪ್ರೀತಿಸೋ ಹುಡುಗಿಯಾಗಿ ಸಾರಾ ಕಾಣಿಸಿಕೊಂಡಿದ್ದಾರೆ. ಸದ್ಯ ಅಮೃತಧಾರೆ ಸೀರಿಯಲ್ ಒಳ್ಳೆಯ ಟಾಕ್‌ನಲ್ಲಿದೆ. ಸಖತ್ ಹೈಪ್ ಕ್ರಿಯೆಟ್ ಮಾಡಿದೆ.

    ಸಾರಾ ಅವರ ಫ್ರೆಂಡ್ ಕಾವ್ಯಾ ಗೌಡ (Kavya Gowda) , ಕೂಡ ಶ್ರೇಷ್ಠಾ ಎಂಬ ಪಾತ್ರದಲ್ಲಿ ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ಮಿಂಚ್ತಿದ್ದಾರೆ. ಮದುವೆಯಾಗಿರುವ ಹೀರೋ ತಾಂಡವ್ ಹಿಂದೆ ಬೀಳುವ ಯುವತಿಯಾಗಿ ಕಾವ್ಯಾ ಕಾಣಿಸಿಕೊಂಡಿದ್ದಾರೆ.

    ಬಡವ ರಾಸ್ಕಲ್ (Badava Rascal) ನಟಿ ಅಮೃತಾ ಐಯ್ಯಂಗಾರ್ ಅವರ ಸ್ನೇಹಿತೆ ಈ ಕಾವ್ಯಾ ಗೌಡ. ಅಲ್ಲದೇ ರಿಂಗಾ ರಿಂಗಾ ರೋಸಸ್ ಸಿನಿಮಾದಲ್ಲೂ ಕಾವ್ಯ ನಟಿಸಿದ್ದಾರೆ. ಮತ್ತಷ್ಟು ಸಿನಿಮಾದಲ್ಲಿ ನಟಿಸುವ ಆಸೆ ಹೊಂದಿದ್ದಾರೆ. ಕಾವ್ಯಾ ಗೌಡ ಅವರು ಭಾಗ್ಯಲಕ್ಷ್ಮಿ ಸೀರಿಯಲ್‌ನಲ್ಲಿ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

    ಸಾರಾ ಅಣ್ಣಯ್ಯ- ಕಾವ್ಯಾ ಗೌಡ ಅವರು ಹಲವು ವರ್ಷಗಳಿಂದ ಸ್ನೇಹಿತರು. ಇಬ್ಬರು ಸೀರಿಯಲ್, ಸಿನಿಮಾ ಅಂತಾ ಬ್ಯುಸಿಯಿದ್ದರು. ಈಗ ಶೂಟಿಂಗ್ ಬ್ರೇಕ್ ಹಾಕಿ ಗೋವಾಗೆ ಹಾರಿದ್ದಾರೆ. ಅಲ್ಲಿ ಬೋಲ್ಡ್ ಲುಕ್‌ನಲ್ಲಿ ಸಾರಾ- ಕಾವ್ಯಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ಫೋಟೋ ಇಂಟರ್‌ನೆಟ್‌ನಲ್ಲಿ ಬೆಂಕಿ ಹಚ್ಚಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೃಹ ಪ್ರವೇಶದ ಸಂಭ್ರಮದಲ್ಲಿ ‘ರಾಧಾ ರಮಣ’ ನಟಿ ಕಾವ್ಯ ಗೌಡ

    ಗೃಹ ಪ್ರವೇಶದ ಸಂಭ್ರಮದಲ್ಲಿ ‘ರಾಧಾ ರಮಣ’ ನಟಿ ಕಾವ್ಯ ಗೌಡ

    ರಾಧಾ ರಮಣ (Radha Ramana), ಮೀರಾ ಮಾಧವ, ಶುಭವಿವಾಹ ಸೀರಿಯಲ್‌ಗಳ ಮೂಲಕ ಮನೆ ಮಾತಾದ ನಟಿ ಕಾವ್ಯ ಗೌಡ (Kavya Gowda) ನೂತನ ಮನೆಗೆ ಕಾಲಿಟ್ಟಿದ್ದಾರೆ. ಗೃಹ ಪ್ರವೇಶದ (House Warming) ಸಂಭ್ರಮದಲ್ಲಿದ್ದಾರೆ ನಟಿ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ‘ಬಕಾಸುರ’ ಚಿತ್ರ ಖ್ಯಾತಿಯ ನಟಿ ಕಾವ್ಯ ಅವರು ಉದ್ಯಮಿ ಸೋಮಶೇಖರ್ (Somashekar) ಜೊತೆ 2021ರಲ್ಲಿ ಮೇ 13ರಂದು ಹೊಸ ಬಾಳಿಗೆ ಕಾಲಿಟ್ಟಿದ್ದರು. ಗುರು ಹಿರಿಯರು ನಿಶ್ಚಯಿಸಿದ ಮದುವೆ ಇದಾಗಿದೆ. ಮದುವೆಯ ನಂತರ ನಟನೆಯಿಂದ ಬ್ರೇಕ್ ತೆಗೆದುಕೊಂಡು ಜ್ಯುವೆಲ್ಲರಿ ಡಿಸೈನರ್ ಆಗಿ ಕಾವ್ಯ ಗುರುತಿಸಿಕೊಂಡಿದ್ದಾರೆ. ಇದನ್ನೂ ಓದಿ:ತಪ್ಪೆಲ್ಲ ನನ್ನದೇ ಎಂದು ಮಾಜಿ ಪ್ರೇಯಸಿಯರ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

    ಮದುವೆಯಾಗಿ ಒಂದು ವರ್ಷವಾಗುವ ಮುಂಚೆಯೇ ಇದೀಗ ಹೊಸ ಮನೆಗೆ ಕಾವ್ಯ ಗೌಡ ದಂಪತಿ ಪಾದಾರ್ಪಣೆ ಮಾಡಿದ್ದಾರೆ. ಅದ್ದೂರಿಯಾಗಿ ಗೃಹ ಪ್ರವೇಶ ಮಾಡಿ ಮಿಂಚಿದ್ದಾರೆ. ನಟಿ ಕಾವ್ಯ ಕೂಡ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸವ್ಯಸಾಚಿ ಸೀರೆಯಲ್ಲಿ ನಟಿ ಕಾವ್ಯ ಮಿಂಚಿದ್ದಾರೆ.

    ಕಾವ್ಯ ದಂಪತಿ ಅವರ ಮನೆ ನೋಡುಗರ ಗಮನ ಸೆಳೆಯುತ್ತಿದೆ. ಮನೆಯಲ್ಲಿ ಎಲ್ಲಾ ಕಡೆ ಮರದ ತುಂಡಿನಿಂದ ವಿನ್ಯಾಸ ಮಾಡಿದ ಹಾಗೇ ಕಾಣುತ್ತಿದೆ. ಮನೆ ಕಟ್ಟಿಸಿದ ರೀತಿ ವಿಭಿನ್ನವಾಗಿದೆ. ನಟಿಯ ಹೊಸ ಮನೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇನ್ನೂ ನೆಚ್ಚಿನ ನಟಿಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

  • ಕೂರ್ಗ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ `ರಾಧಾ ರಮಣ’ ನಟಿ ಕಾವ್ಯಾ ಗೌಡ

    ಕೂರ್ಗ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ `ರಾಧಾ ರಮಣ’ ನಟಿ ಕಾವ್ಯಾ ಗೌಡ

    ಮೀರಾ ಮಾಧವ, ಗಾಂಧಾರಿ, ರಾಧಾ ರಮಣ ಸೀರಿಯಲ್ ಮೂಲಕ ಮನೆಮಾತಾದ ನಟಿ ಕಾವ್ಯಾ ಗೌಡ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇದೀಗ ಕೂರ್ಗ್‌ನಲ್ಲಿ ಪತಿಯೊಂದಿಗೆ ವಿಶೇಷವಾಗಿ ಬರ್ತಡೇ ಆಚರಿಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಸಾಕಷ್ಟು ಸೀರಿಯಲ್ ಮತ್ತು `ಬಕಾಸುರ’ ಚಿತ್ರದೊಂದಿಗೆ ಹಿರಿತೆರೆಗೆ ಕಾಲಿಟ್ಟ ನಟಿ ಕಾವ್ಯಾ ಗೌಡ, ಕಳೆದ ವರ್ಷ ಉದ್ಯಮಿ ಸೋಮಶೇಖರ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ, ನಟನೆಗೆ ಬೈ ಹೇಳಿ ದಾಂಪತ್ಯ ಜೀವನದತ್ತ ಮುಖ ಮಾಡಿದ್ದಾರೆ. ಇನ್ನು ಆಭರಣ ವಿನ್ಯಾಸ ತರಬೇತಿ ಸಹ ಪಡೆಯುತ್ತಿದ್ದಾರೆ. ಸದ್ಯ ನಟಿ ಕಾವ್ಯಾ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಪತಿಯೊಂದಿಗೆ ಕೂರ್ಗ್‌ನಲ್ಲಿ ಆಚರಿಸಿಕೊಂಡಿದ್ದಾರೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    ಕೂರ್ಗ್‌ ರೆಸಾರ್ಟ್‌ವೊಂದರಲ್ಲಿ ಬೀಡು ಬಿಟ್ಟಿರುವ ಕಾವ್ಯಾ ಗೌಡ ದಂಪತಿ, ಕೂರ್ಗ್ನ ಸುಂದರ ತಾಣದಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ವೈಟ್ ಕಲರ್ ಔಟ್‌ಪೀಟ್‌ನಲ್ಲಿ ಮಿಂಚುತ್ತಿದ್ದಾರೆ. ತಮ್ಮ ಬರ್ತಡೇ ಬಂದಿರುವ ಗಿಫ್ಟ್ಗಳನ್ನ ಶೇರ್ ಮಾಡಿರುವ ಕಾವ್ಯಾ ಅವರ ಉಡುಗೊರೆ ಅನ್ನು ನೋಡಿ ಫ್ಯಾನ್ಸ್ ಕೂಡ ಥ್ರಿಲ್ ಆಗಿದ್ದಾರೆ. ನೆಚ್ಚಿನ ನಟಿಯ ಬರ್ತಡೇಗೆ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಶುಭಹಾರೈಸುತ್ತಿದ್ದಾರೆ.

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ ಗೌಡ

    ವೈವಾಹಿಕ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಕಾವ್ಯ ಗೌಡ

    ಬೆಂಗಳೂರು: ಕಿರುತೆರೆ ನಟಿ ಕಾವ್ಯ ಗೌಡ, ಉದ್ಯಮಿ ಸೋಮಶೇಖರ್ ಜೊತೆ ಸಪ್ತಪದಿ ತುಳಿದ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಡಿಸೆಂಬರ್ 1ರಂದು ಸೋಮಶೇಖರ್, ಕಾವ್ಯ ಮದುವೆ ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಎರಡೂ ಕುಟುಂಬದವರು, ಆತ್ಮೀಯರು, ಸ್ನೇಹಿತರು, ರಾಜಕೀಯ ಗಣ್ಯರು, ಚಿತ್ರರಂಗದವರು ಪಾಲ್ಗೊಂಡಿದ್ದರು. ಇದನ್ನೂ ಓದಿ: ನಟಿ ಕಾವ್ಯಾ ಗೌಡ ಬ್ಯಾಚುಲರ್ ಪಾರ್ಟಿ

    ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‍ನಲ್ಲಿ ಕಾವ್ಯ ಗೌಡ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಸ್ಯಾಂಡಲ್‍ವುಡ್ ಮತ್ತು ಕಿರುತೆರೆ ಅನೇಕ ಕಲಾವಿದರು ಆಗಮಿಸಿನಿ ಕಾವ್ಯಾ, ಸೋಮಶೇಖರ್ ಜೋಡಿಗೆ ಶುಭ ಹಾರೈಸಿದ್ದಾರೆ. ಸಂಗೀತ್ ಮೆಹೆಂದಿ, ಅರಿಶಿಣ ಶಾಸ್ತ್ರ ಕೂಡ ಅದ್ದೂರಿಯಾಗಿ ನಡೆದಿದೆ. ಅವರ ಕನಸಿನಂತೆ ಕಾವ್ಯ ಗೌಡ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಗೆ ಸಂಬಂಧಪಟ್ಟ ಎಲ್ಲ ಶಾಸ್ತ್ರಗಳಿಗೂ ಕೂಡ ಕಾವ್ಯ ಗೌಡ ತುಂಬ ವಿಭಿನ್ನವಾಗಿ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಮದುವೆ ಶಾಸ್ತ್ರದ ಪ್ರತಿಯೊಂದು ಫೋಟೋವನ್ನು ಕಾವ್ಯ ಅವರು ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ಶುಭಹಾರೈಸಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:  ಪ್ರಿಯತಮನನ್ನು ಪರಿಚಯಿಸಿದ ನಟಿ ಕಾವ್ಯ ಗೌಡ

    ಮಿಸ್ಟರ್ ಎಸ್ ನೀವು ನನ್ನ ಉತ್ತಮ ಸ್ನೇಹಿತ ಮತ್ತು ನನ್ನ ಪ್ರೇಮಿಯಾಗಿದ್ದೀರಿ. ನಾನು ನಿನ್ನನ್ನು ಪ್ರೀತಿಸುತ್ತೇನೆ ಮಾ… ಎಂದು ಬರೆದುಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಬ್ಯಾಚುಲರ್ ಪಾರ್ಟಿಯ ಕಲರ್ ಕಲರ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು. ಇದೀಗ ಮದುವೆಯ ಸಂತೋಷದ ಕ್ಷಣಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

  • ನಟಿ ಕಾವ್ಯಾ ಗೌಡ ಬ್ಯಾಚುಲರ್ ಪಾರ್ಟಿ

    ನಟಿ ಕಾವ್ಯಾ ಗೌಡ ಬ್ಯಾಚುಲರ್ ಪಾರ್ಟಿ

    ಬೆಂಗಳೂರು: ಕಿರುತೆರೆ ನಟಿ ಕಾವ್ಯಾ ಗೌಡ ಅವರು ಡಿಸೆಂಬರ್ 2ಕ್ಕೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಇದೀಗ ಬ್ಯಾಚುಲರ್ ಪಾರ್ಟಿಯಲ್ಲಿ ಎಂಜಾಯ್ ಮಾಡಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಮಿಸ್ಟರ್ ಎಸ್ ನೀವು ನನ್ನ ಉತ್ತಮ ಸ್ನೇಹಿತ ಮತ್ತು ನನ್ನ ಪ್ರೇಮಿಯಾಗಿದ್ದೀರಿ. ನಾನು ನಿನ್ನನ್ನು ಪ್ರೀತಿಸುತ್ತೇನೆ ಮಾ… ಎಂದು ಬರೆದುಕೊಂಡು ಇನ್‍ಸ್ಟಾಗ್ರಾಮ್‍ನಲ್ಲಿ ಬ್ಯಾಚುಲರ್ ಪಾರ್ಟಿಯ ಕಲರ್ ಕಲರ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

    ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಕಾವ್ಯಾ ಮಾತನಾಡಿ ಮದುವೆಯ ಕುರಿತು ಕೆಲವು ಇಂಟ್ರೆಸ್ಟಿಂಗ್ ಮಾಹಿತಿ ಹಂಚಿಕೊಂಡಿದ್ದಾರೆ. ಡೆಸ್ಟಿನಿಯನ್ನು ನಾನು ನಂಬುತ್ತೇನೆ, ನಾನು ಏನು ಅಂದುಕೊಳ್ಳುವೆನೋ ಅದೇ ರೀತಿ ಆಗುತ್ತೆ. ಹಾಗೆಯೇ ಬ್ಯಾಚುಲರ್ ಪಾರ್ಟಿ ನಡೆದಿದ್ದು, ನನ್ನ ಹುಡುಗ, ಅಕ್ಕ ಆಯೋಜಿಸಿದ್ದರು ಎಂದಿದ್ದಾರೆ. ಇದನ್ನೂ ಓದಿ:   ಚಿಕ್ಕವಯಸ್ಸಿನ ಹುಡುಗನ ಜೊತೆ ಡೇಟಿಂಗ್ ಮಾಡುವ ಬಗ್ಗೆ ರಶ್ಮಿಕಾ ಉತ್ತರ ಏನು ಗೊತ್ತಾ?

    ನವೆಂಬರ್ 29ರಂದು ಬೆಂಗಳೂರಿನ ಜೆ ಡಬ್ಲ್ಯು ಮ್ಯಾರಿಯೇಟ್‍ನಲ್ಲಿ ಸಂಗೀತ್ ಮೆಹೆಂದಿ ನಡೆಯಲಿದೆ. ಡಿಸೆಂಬರ್ 1ರಂದು ಆರತಕ್ಷತೆ, ಡಿಸೆಂಬರ್ 2ರಂದು ತಾಜ್ ವೆಸ್ಟೆಂಡ್‍ನಲ್ಲಿ ಮದುವೆ ನಡೆಯಲಿದೆ. ಸೋಮಶೇಖರ್‍ರಂತಹ ಹುಡುಗನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೇನೆ. ನಿಜಕ್ಕೂ ಅವರ ಗುಣ, ಸ್ವಭಾವ ನನಗೆ ತುಂಬ ಇಷ್ಟ. ನಾನು ಸಾಯಿಬಾಬಾ ಅವರನ್ನು ತುಂಬ ನಂಬುತ್ತೇನೆ. ನನ್ನ ಜೊತೆಗೆ ಎಲ್ಲರಿಗೂ ಒಳ್ಳೆಯದನ್ನು ಮಾಡು ಅಂತ ಕೇಳಿಕೊಳ್ಳುತ್ತೇನೆ, ಅಂತೆಯೇ ಒಳ್ಳೆಯದಾಗುತ್ತಿದೆ ಎಂದು ಭಾವಿಸುವೆ ಎಂದಿದ್ದಾರೆ. ಇದನ್ನೂ ಓದಿ:  ಪ್ರಿಯತಮನನ್ನು ಪರಿಚಯಿಸಿದ ನಟಿ ಕಾವ್ಯ ಗೌಡ

    ಕಳೆದ ಮೇ ತಿಂಗಳಿನಲ್ಲಿಯೇ ಮದುವೆ ನಡೆಯಬೇಕಿತ್ತು, ಕೊರೊನಾ ಎರಡನೇ ಅಲೆ ಇರೋದಕ್ಕೆ ಮದುವೆ ಮುಂದೂಡಲಾಗಿತ್ತು. ಕೊರೊನಾ ವೈರಸ್ ನಿಯಮಗಳನ್ನು ಪಾಲಿಸಿ ನಾವು ಮದುವೆಯಾಗುತ್ತಿದ್ದೇವೆ. ಸ್ಯಾಂಡಲ್‍ವುಡ್‍ನ ಕೆಲ ಕಲಾವಿದರು, ತಂತ್ರಜ್ಞರು, ಸ್ನೇಹಿತರನ್ನು ಆಹ್ವಾನಿಸಿದ್ದೇವೆ. ನಮ್ಮ ಎರಡು ಕುಟುಂಬದ ಸದಸ್ಯರು, ಆತ್ಮೀಯರು ಈ ಮದುವೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮದುವೆಯ ಕುರಿತಾಗಿ ಕೆಲವು ಮಾಹಿತಿ ಹಂಚಿಕೊಂಡಿದ್ದಾರೆ.

  • ಮದ್ವೆಗೂ ಮುನ್ನ ಡೇಟಿಂಗ್ ಮಾಡೋದು ಸರಿ, ಆದ್ರೆ ಮಂಚಕ್ಕೆ ಹೋಗೋದು ಸರಿಯಿಲ್ಲ: ರಾಧಾರಮಣ ಖ್ಯಾತಿಯ ನಟಿ

    ಮದ್ವೆಗೂ ಮುನ್ನ ಡೇಟಿಂಗ್ ಮಾಡೋದು ಸರಿ, ಆದ್ರೆ ಮಂಚಕ್ಕೆ ಹೋಗೋದು ಸರಿಯಿಲ್ಲ: ರಾಧಾರಮಣ ಖ್ಯಾತಿಯ ನಟಿ

    – ನಿಮ್ಮ ಪ್ರೀತಿಯನ್ನ ಸಾಬೀತು ಪಡಿಸಲು ನೀವು ಬಟ್ಟೆ ಬಿಚ್ಚಬೇಕಿಲ್ಲ

    ಬೆಂಗಳೂರು: ನಿಮಗಾಗಿ ಸೇಫ್ಟಿ ಪ್ಯಾಡ್ ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಆದರೆ ಕಾಂಡೋಮ್ ಕೊಳ್ಳುವವನಲ್ಲ ಎಂದು ‘ರಾಧಾರಮಣ’ ಸೀರಿಯಲ್ ಖ್ಯಾತಿಯ ನಟಿ ಕಾವ್ಯ ಗೌಡ ಹೇಳಿದ್ದಾರೆ.

    ನಟಿ ಕಾವ್ಯ ಗೌಡ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಕುರಿತು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. “ಆತ್ಮೀಯ ಹುಡುಗಿಯರೇ, ನಿಮ್ಮ ಪ್ರೀತಿಯನ್ನು ಸಾಬೀತುಪಡಿಸಲು ನಿಮ್ಮ ಬಟ್ಟೆಗಳನ್ನು ಎಂದಿಗೂ ಬಿಚ್ಚಬೇಕಾಗಿಲ್ಲ. ಅದೇ ರೀತಿ ಮದುವೆಗೂ ಮುನ್ನ ಡೇಟಿಂಗ್ ಹೋಗುವುದು ಸರಿ. ಆದರೆ ಮಂಚಕ್ಕೆ ಹೋಗುವುದು ಸರಿಯಿಲ್ಲ. ನಿಮಗಾಗಿ ಸೇಫ್ಟಿ ಪ್ಯಾಡ್‍ಗಳನ್ನು ಖರೀದಿಸಬಹುದಾದ ಹುಡುಗನನ್ನು ಪಡೆಯಿರಿ, ಕಾಂಡೋಮ್ ಕೊಳ್ಳುವವನಲ್ಲ” ಎಂದು ಕಾವ್ಯಗೌಡ ಹೇಳಿದ್ದಾರೆ.

    ಅಷ್ಟೇ ಅಲ್ಲದೇ “ನಿಮ್ಮನ್ನು ಹೋಟೆಲ್‍ಗಳಿಗೆ ಕರೆದುಕೊಂಡು ಹೋಗದೆ ತನ್ನ ಮನೆಗೆ ಕರೆದುಕೊಂಡು ಹೋಗುವ ಹುಡುಗನನ್ನು ಪಡೆಯಿರಿ. ನಿಮ್ಮ ಮುಟ್ಟಿನ ನೋವಿನ ಬಗ್ಗೆ ಕೇಳುವ ಹುಡುಗನನ್ನು ಪಡೆಯಿರಿ. ನಿಮ್ಮ ಬೆತ್ತಲೆಯನ್ನು ಕೇಳುವವನಲ್ಲ. ನಿಮ್ಮ ಮನಸ್ಸು ಮತ್ತು ಹೃದಯವನ್ನು ಅರ್ಥ ಮಾಡಿಕೊಳ್ಳುವ ಹುಡುಗನನ್ನು ಪಡೆಯಿರಿ. ನಿಮ್ಮ ದೇಹವನ್ನು ಬಯಸುವವನಲ್ಲ” ಎಂದು ಕಾವ್ಯ ಬರೆದುಕೊಂಡಿದ್ದಾರೆ.

    “ಗೌರವವು ಪ್ರೀತಿಯ ಅತ್ಯುತ್ತಮ ಅಭಿವ್ಯಕ್ತಿಗಳಲ್ಲಿ ಒಂದಾಗಿದೆ. ಒಬ್ಬ ನಿಜವಾದ ವ್ಯಕ್ತಿ ಎಂದಿಗೂ ಮಹಿಳೆಯನ್ನು ನೋಯಿಸುವುದಿಲ್ಲ. ಮಹಿಳೆ ಎಂದರೆ ಕೇವಲ ನಿಮಗೆ ಅಡುಗೆ ಮಾಡುವ, ನಿಮ್ಮ ಬಟ್ಟೆ ತೊಳೆಯುವ ಗೃಹಿಣಿ ಮಾತ್ರವಲ್ಲ. ಅವಳು ಗೃಹಿಣಿಯಾಗಿದ್ದು, ನಿಮ್ಮ ಮನೆಗೆ ಬಂದಮೇಲೆ ಇಡೀ ಕುಟುಂಬವನ್ನು ನೋಡಿಕೊಳ್ಳುತ್ತಾ, ಎಲ್ಲ ಜವಾಬ್ದಾರಿಯನ್ನು ನಿಭಾಯಿಸುತ್ತಾಳೆ. ಅಂತಹ ಮಹಿಳೆಯರಿಗೆ ಗೌರವ ತೋರಿಸುವುದು ದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ” ಎಂದು ನಟಿ ಕಾವ್ಯ ಗೌಡ ಮಹಿಳೆಯರ ಬಗ್ಗೆ ಹೇಳಿದ್ದಾರೆ.

    ನಟಿ ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾರಮಣ’ ಸೀರಿಯಲ್‍ನಲ್ಲಿ ರಾಧಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಧಾರಾವಾಹಿಯಲ್ಲಿ ಕಾವ್ಯ ಗೌಡ ರಾಧಾ ಮಿಸ್ ಎಂತಲೇ ಖ್ಯಾತಿ ಪಡೆದುಕೊಂಡಿದ್ದಾರೆ. ಕಾವ್ಯಗೌಡ ಸೀರಿಯಲ್ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ.

    https://www.instagram.com/p/CE8KB0snzdp/?utm_source=ig_embed

  • ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಗೆ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.

    ರಾಧಾ ಪಾತ್ರಧಾರಿಯ ನಟಿ ಶ್ವೇತಾ ಪ್ರಸಾದ್ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರವನ್ನು ಕಿರುತೆರೆ ನಟಿ ಕಾವ್ಯ ಗೌಡ ನಿರ್ವಹಿಸಲಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಧಾರಾವಾಹಿಯಲ್ಲಿ ಶ್ವೇತಾ ಅವರ ಬದಲು ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

    ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಯಲ್ಲಿ ನಟಿಸಿದ್ದರು.

    ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

    ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ನಟಿಸಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಸದ್ಯಕ್ಕೆ ನಟಿ ಶ್ವೇತಾ ಪ್ರಸಾದ್ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.