Tag: kavya thapar

  • ‘ಕ್ಯಾ ಲಫ್ಡಾ’ ಅಂತಾ ಹೆಜ್ಜೆ ಹಾಕಿದ ರಾಮ್ ಪೋತಿನೇನಿ, ಕಾವ್ಯಾ ಥಾಪರ್

    ‘ಕ್ಯಾ ಲಫ್ಡಾ’ ಅಂತಾ ಹೆಜ್ಜೆ ಹಾಕಿದ ರಾಮ್ ಪೋತಿನೇನಿ, ಕಾವ್ಯಾ ಥಾಪರ್

    ಪುರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿರುವ ‘ಡಬಲ್ ಇಸ್ಮಾರ್ಟ್’ (Double Ismart) ಸಿನಿಮಾದ ಮೂರನೇ ಹಾಡು ಬಿಡುಗಡೆಯಾಗಿದೆ. ಈಗಾಗಲೇ ಎರಡು ಸಾಂಗ್ಸ್ ಭರ್ಜರಿ ಹಿಟ್ ಆಗಿದ್ದು, ಇದೀಗ ‘ಕ್ಯಾ ಲಫ್ಡಾ’ ಎಂಬ ಗೀತೆಯನ್ನು ಅನಾವರಣ ಮಾಡಲಾಗಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ರಾಮ್ ಪೋತಿನೇನಿ (Ram Pothineni) ಮತ್ತು ಕಾವ್ಯಾ ಥಾಪರ್ (Kavya Thapar) ಮಿಂಚಿದ್ದಾರೆ.

    ‘ಕ್ಯಾ ಲಫ್ಡಾ’ ಹಾಡಿಗೆ ಸಂಗೀತ ನಿರ್ದೇಶಕ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಶ್ರೀ ಹರ್ಷ ಇಮಾನಿ ಸಾಹಿತ್ಯ ಬರೆದಿದ್ದು, ಧನುಂಜಯ್ ಸೀಪಾನ ಮತ್ತು ಸಿಂಧೂಜಾ ಶ್ರೀನಿವಾಸನ್ ಧ್ವನಿಯಾಗಿದ್ದಾರೆ. ಈ ಹಾಡಿನಲ್ಲಿ ‘ಕ್ಯಾ ಲಫ್ಡಾ’ ರಾಮ್ ಮತ್ತು ಕಾವ್ಯಾ ನಡುವಿನ ಕೆಮಿಸ್ಟ್ರೀ ಪ್ರೇಕ್ಷಕರಿಗೆ ಇಷ್ಟವಾಗಿದೆ. ಇದನ್ನೂ ಓದಿ:ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ನಟಿ ಸೋನಲ್, ತರುಣ್ ಸುಧೀರ್

     

    View this post on Instagram

     

    A post shared by Puri Connects (@puriconnects)


    ಸೌತ್ ಸಿನಿಮಾಗಳಲ್ಲಿ ಖಳನಾಗಿ ಅಬ್ಬರಿಸುತ್ತಿರುವ ಸಂಜಯ್ ದತ್ ಅವರು ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ವಿಲನ್ ಆಗಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಡಬಲ್ ಇಸ್ಮಾರ್ಟ್ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಸ್ಯಾಮ್ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಾಹಕರಾಗಿ ದುಡಿದಿದ್ದಾರೆ.

    ‘ಡಬಲ್ ಇಸ್ಮಾರ್ಟ್’ ಸಿನಿಮಾವನ್ನು ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ.  ಅಂದಹಾಗೆ, 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕರ್ಮಷಿಯಲಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ಡಬಲ್ ಇಸ್ಮಾರ್ಟ್ ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.

  • ರಾಮ್ ಪೋತಿನೇನಿ ಜೊತೆ ಕುಣಿದು ಕುಪ್ಪಳಿಸಿದ ಹಾಟ್ ಬೆಡಗಿ ಕಾವ್ಯಾ ಥಾಪರ್

    ರಾಮ್ ಪೋತಿನೇನಿ ಜೊತೆ ಕುಣಿದು ಕುಪ್ಪಳಿಸಿದ ಹಾಟ್ ಬೆಡಗಿ ಕಾವ್ಯಾ ಥಾಪರ್

    ‘ಡಬಲ್ ಇಸ್ಮಾರ್ಟ್’ ಸಿನಿಮಾದ ‘ಸ್ಟೆಪ್ಪಮಾರ್’ ಹಾಡಿಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಚಿತ್ರತಂಡ ಎರಡನೇ ಹಾಡನ್ನು ಬಿಡುಗಡೆ ಮಾಡಿದೆ. ‘ಮಾರ್ ಮುಂತಾ ಚೋಡ್ ಚಿಂತಾ’ ಎಂಬ ಹಾಡಿಗೆ ನಾಯಕ ಉಸ್ತಾದ್ ರಾಮ್ ಪೋತಿನೇನಿ ಮತ್ತು ನಾಯಕಿ ಕಾವ್ಯಾ ಥಾಪರ್ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಶ್ಯಾಮ್ ಬರೆದ ಸಾಹಿತ್ಯಕ್ಕೆ ಮಣಿ ಶರ್ಮಾ ಟ್ಯೂನ್ ಹಾಕಿದ್ದು, ರಾಹುಲ್ ಸಿಪ್ಲಿಗುಂಜ್ ಮತ್ತು ಕೀರ್ತನಾ ಶರ್ಮಾ ಧ್ವನಿಯಾಗಿದ್ದಾರೆ. ‘ಮಾರ್ ಮುಂತಾ ಚೋಡ್ ಚಿಂತಾ’ ಲಿರಿಕಲ್ ವಿಡಿಯೋದ ಜೊತೆಗೆ ಮೇಕಿಂಗ್ ವಿಡಿಯೋ ಕೂಡ ಇರೋದು ವಿಶೇಷವಾಗಿದೆ. ಇದನ್ನೂ ಓದಿ:ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್

    ‘ಇಸ್ಮಾರ್ಟ್ ಶಂಕರ್’ ಸಿನಿಮಾದ ಮುಂದುವರೆದ ಭಾಗವೇ ಈ ಡಬಲ್ ಇಸ್ಮಾರ್ಟ್ ಚಿತ್ರ. ಈ ಮೂಲಕ ಡೈರೆಕ್ಟರ್ ಪುರಿ ಜಗನ್ನಾಥ್ ಹೊಸ ರೀತಿಯಲ್ಲಿ ಶಂಕರ್‌ನ ಕಥೆ ಹೇಳಲು ಹೊರಟ್ಟಿದ್ದಾರೆ. 2019ರಲ್ಲಿ ‘ಇಸ್ಮಾರ್ಟ್ ಶಂಕರ್’ ಸಿನಿಮಾ ರಿಲೀಸ್ ಆಗಿತ್ತು. ಇದರಲ್ಲಿ ಕನ್ನಡತಿ ನಭಾ ನಟೇಶ್ ಅಭಿನಯಿಸಿದ್ದರು. ಆಗ ಈ ಸಿನಿಮಾ ಕಮರ್ಷಿಯಲ್ ಆಗಿ ಸಕ್ಸಸ್ ಆಗಿತ್ತು. ಆದರೆ ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ‘ಡಬಲ್ ಇಸ್ಮಾರ್ಟ್’ (Double Ismart Film) ಸಿನಿಮಾ ಬರುತ್ತಿದೆ. ಟಾಲಿವುಡ್‌ನಲ್ಲಿ ಈಗಾಗಲೇ ನಿರೀಕ್ಷೆಯನ್ನು ಕೂಡ ಹುಟ್ಟುಹಾಕಿದೆ.

    ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಡಬಲ್ ಇಸ್ಮಾರ್ಟ್’ ಸಿನಿಮಾ ಬಿಡುಗಡೆ ಆಗಲಿದೆ. ಮಣಿ ಶರ್ಮಾ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಪುರಿ ಜಗನ್ನಾಥ್, ಚಾರ್ಮಿ ಕೌರ್ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಮ್ ಪೋತಿನೇನಿ ನಟಿ ಕಾವ್ಯಾ ಥಾಪರ್ (Kavya Thapar)  ಜೋಡಿ ಆಗಿದ್ದಾರೆ. ಸಂಜಯ್ ದತ್ (Sanjay Dutt) ಈ ಸಿನಿಮಾದಲ್ಲಿ ಖಡಕ್ ವಿಲನ್ ಆಗಿಯೇ ಕಾಣಿಸುತ್ತಿದ್ದಾರೆ. ‘ಡಬಲ್ ಇಸ್ಮಾರ್ಟ್’ ಸಿನಿಮಾದ ಶೂಟಿಂಗ್ ಇನ್ನು ನಡೆಯುತ್ತಿದೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆ  ಇದೆ.

  • ರಾಮ್ ಪೋತಿನೇನಿ ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

    ರಾಮ್ ಪೋತಿನೇನಿ ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್

    ಟಾಲಿವುಡ್ ನಟ ರಾಮ್ ಪೋತಿನೇನಿ (Ram Pothineni) ಮತ್ತೆ ಇಸ್ಮಾರ್ಟ್ ಶಂಕರ್ ಆಗಿ ಅವತಾರ ಎತ್ತಲು ರೆಡಿಯಾಗಿದ್ದಾರೆ. ಈ ಬಾರಿ ಡಬಲ್ ಇಸ್ಮಾರ್ಟ್ ಆಗಿ ಬರುತ್ತಿದ್ದಾರೆ. ಇದೀಗ ಚಿತ್ರದ ಮೊದಲ ಟೀಸರ್ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಇದನ್ನೂ ಓದಿ:ರಾಗಿಣಿ ಜೊತೆ ಕಿಶನ್ ಬಿಳಗಲಿ ರೊಮ್ಯಾಂಟಿಕ್ ರೈನ್ ಡ್ಯಾನ್ಸ್

    ‘ಲೈಗರ್’ ಚಿತ್ರದ ಸೋಲಿನ ಸುಳಿಯಲ್ಲಿರುವ ಪುರಿ ಜಗನ್ನಾಥ್ ಇದೀಗ ‘ಡಬಲ್ ಇಸ್ಮಾರ್ಟ್’ (Double Ismart) ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಎಂದೂ ಕಾಣಿಸಿಕೊಂಡಿರದ ಗೆಟಪ್‌ನಲ್ಲಿ ರಾಮ್ ಪೋತಿನೇನಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದರ ಝಲರ್ ಸದ್ಯ ಪೋಸ್ಟರ್ ಮೂಲಕ ಸುಳಿವು ಸಿಕ್ಕಿದೆ. ಚಿತ್ರದ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಫ್ಯಾನ್ಸ್‌ಗೆ ಈಗ ಸಿಹಿಸುದ್ದಿ ಸಿಕ್ಕಿದೆ.

     

    View this post on Instagram

     

    A post shared by Charmmekaur (@charmmekaur)

    ‘ಡಬಲ್ ಇಸ್ಮಾರ್ಟ್’ ಚಿತ್ರದ ಫಸ್ಟ್ ಟೀಸರ್ ಇದೇ ಮೇ 15ರಂದು ರಿಲೀಸ್ ಆಗಲಿದೆ. ಇಸ್ಮಾರ್ಟ್ ಶಂಕರ್ ಚಿತ್ರಕ್ಕಿಂತ ಭಿನ್ನವಾಗಿದೆ ಈ ಚಿತ್ರ ಎಂಬುದು ಇನ್‌ಸೈಡ್ ಸ್ಟೋರಿ. ಇದನ್ನೂ ಓದಿ:‘ಹಲಗಲಿ’ ಸಿನಿಮಾದಿಂದ ಹೊರ ಬಂದ ಡಾರ್ಲಿಂಗ್ ಕೃಷ್ಣ

    ಅಂದಹಾಗೆ, ರಾಮ್ ಪೋತಿನೇನಿ ಎದುರು ಸಂಜಯ್ ದತ್ (Sanjay Dutt) ನಟಿಸಿದ್ದಾರೆ. ಚಿತ್ರದ ನಾಯಕಿಯಾಗಿ ಕಾವ್ಯಾ ಥಾಪರ್ (Kavya Thapar)  ನಟಿಸಿದ್ದಾರೆ. ರಾಮ್ ಜೋಡಿಯಾಗಿ ಕಾವ್ಯ ಮೊದಲ ಬಾರಿ ನಟಿಸುತ್ತಿದ್ದಾರೆ. ಒಟ್ನಲ್ಲಿ ಈ ಪ್ರೇಮಕಥೆಯನ್ನು ನೋಡಲು ಫ್ಯಾನ್ಸ್‌ ಕಾಯ್ತಿದ್ದಾರೆ.

  • ಕುಡಿದು ವಾಹನ ಚಾಲನೆ, ಮಹಿಳಾ ಪೊಲೀಸ್‌ ಮೇಲೆ ಹಲ್ಲೆ – ನಟಿ ಕಾವ್ಯ ಥಾಪರ್ ಅರೆಸ್ಟ್‌

    ಕುಡಿದು ವಾಹನ ಚಾಲನೆ, ಮಹಿಳಾ ಪೊಲೀಸ್‌ ಮೇಲೆ ಹಲ್ಲೆ – ನಟಿ ಕಾವ್ಯ ಥಾಪರ್ ಅರೆಸ್ಟ್‌

    ಮುಂಬೈ: ಕುಡಿದು ವಾಹನ ಚಲಾಯಿಸಿದ್ದಲ್ಲದೇ ಮಹಿಳಾ ಪೊಲೀಸ್‌ ಕಾನ್‌ಸ್ಟೇಬಲ್‌ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಟಿ ಕಾವ್ಯ ಥಾಪರ್‌ರನ್ನು ಪೊಲೀಸರು ಬಂಧಿಸಿದ್ದಾರೆ.

    ಜೆಡಬ್ಲ್ಯೂ ಮ್ಯಾರಿಯಟ್‌ ಹೋಟೆಲ್‌ ಬಳಿ ಗುರುವಾರ ಮಧ್ಯರಾತ್ರಿ 1 ಗಂಟೆ ಸುಮಾರಿ ಈ ಘಟನೆ ನಡೆದಿದ್ದು, ಜುಹು ಪೊಲೀಸರು ನಟಿಯನ್ನು ಬಂಧಿಸಿದ್ದಾರೆ. ನಟಿ ಅಲ್ಲಿಗೆ ಪಾರ್ಟಿಗಾಗಿ ಬಂದಿದ್ದರು. ತಮ್ಮ ಕಾರಿನಲ್ಲಿ ಸ್ನೇಹಿತನೊಂದಿಗೆ ಪೂರ್ವ ಉಪನಗರದಲ್ಲಿರುವ ತಮ್ಮ ನಿವಾಸಕ್ಕೆ ಹಿಂತಿರುಗುತ್ತಿದ್ದರು. ಇದನ್ನೂ ಓದಿ: ಅರ್ಧಂಬರ್ಧ ಬಟ್ಟೆ ತೊಡೋದೇ ಉರ್ಫಿ ಸ್ಟೈಲ್- ನೆಟ್ಟಿಗರು ಸಖತ್ ಖುಷ್

    ಥಾಪರ್‌ ಮದ್ಯದ ಅಮಲಿನಲ್ಲಿದ್ದ ಕಾರಣ ಆಕೆ ತನ್ನ ಕಾರನ್ನು, ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾಳೆ. ಅಪಘಾತದ ಬಗ್ಗೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ಮಾಹಿತಿ ಲಭಿಸಿದೆ. ಜುಹು ಪೊಲೀಸ್‌ ಠಾಣೆಯಿಂದ ನಿರ್ಭಯಾ ಸ್ಕ್ವಾಡ್‌ ಸ್ಥಳಕ್ಕೆ ಧಾವಿಸಿದೆ. ನಟಿ ಥಾಪರ್‌, ಮಹಿಳಾ ಪೇದೆಯೊಬ್ಬರ ಕಾಲರ್‌ ಹಿಡಿದು ಹಲ್ಲೆ ನಡೆಸಿದ್ದಾರೆ. ಈ ವೇಳೆ ಮಹಿಳಾ ಪೇದೆ ನೆಲದ ಮೇಲೆ ಬಿದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ನಟಿ ವಿರುದ್ಧ ಐಪಿಸಿ ಮತ್ತು ಮೋಟಾರು ವಾಹನಗಳ ಕಾಯ್ದೆಯಡಿ ಮದ್ಯಪಾನ ಮಾಡಿ ವಾಹನ ಚಾಲನೆ, ಸಾರ್ವಜನಿಕ ಸೇವಕರ ಕರ್ತವ್ಯ ನಿರ್ವಹಣೆಗೆ ಅಡ್ಡಿ ಪ್ರಕರಣ ದಾಖಲಿಸಲಾಗಿದೆ. ನಟಿಯನ್ನು ಅಂಧೇರಿಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಬಿರಿಯಾನಿ ಊಟ, ಹೆಲಿಕಾಪ್ಟರ್ ನಿಂದ ಹೂಮಳೆ : ಇನ್ನೇನಿದೆ ವಿಶೇಷ?