Tag: Kaziranga National Park

  • ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು

    ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು

    ದಿಸ್ಪುರ್: ಅಸ್ಸಾಂ ಭೀಕರ ಪ್ರವಾಹದಿಂದ ( Assam Flood) ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ (Kaziranga National Park) ಸುಮಾರು 131 ಪ್ರಾಣಿಗಳು ಸಾವಿಗೀಡಾಗಿವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

    85 ಹಂದಿ, ಜಿಂಕೆ, ಎರಡು ಖಡ್ಗಮೃಗ, ಗೂಬೆ, ಮೊಲ, ಆನೆ ಮತ್ತು ಕಾಡು ಬೆಕ್ಕುಗಳನ್ನು ಅಧಿಕಾರಿಗಳು ರಕ್ಷಿಸಿದ್ದಾರೆ. ಸತ್ತ ಪ್ರಾಣಿಗಳಲ್ಲಿ 6 ಘೇಂಡಾಮೃಗಗಳು, 117 ಜಿಂಕೆಗಳು ಸೇರಿವೆ, ಇದರಲ್ಲಿ 98 ನೀರಿನಲ್ಲಿ ಮುಳುಗಿ, ಚಿಕಿತ್ಸೆಯ ಸಮಯದಲ್ಲಿ 25 ವನ್ಯಜೀವಿಗಳು ಸಾವನ್ನಪ್ಪಿವೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ ಪ್ರದೀಪ್ ಈಶ್ವರ್, ಸುಧಾಕರ್ ಜನಸ್ಪಂದನ ಕಾರ್ಯಕ್ರಮ

    ಸುಮಾರು 25 ಪ್ರಾಣಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 52 ವನ್ಯಜೀವಿಗಳಿಗೆ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ನೌಕರರು ವನ್ಯಜೀವಿಗಳ ರಕ್ಷಣೆಗಾಗಿ ಗಸ್ತು ಬೋಟ್‍ಗಳ ಮೂಲಕ ಹುಡುಕಾಟ ನಡೆಸುತ್ತಿದ್ದಾರೆ. ಈ ಮೂಲಕ ವನ್ಯಜೀವಿಗಳ ರಕ್ಷಣೆಗಾಗಿ ಅರಣ್ಯ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ವರ್ಷ ಮಾರ್ಚ್ 8 ರಂದು ಪ್ರಧಾನಿ ನರೇಂದ್ರ ಮೋದಿಯವರು ಕಾಜಿರಂಗ ಪಾರ್ಕ್‍ನಲ್ಲಿ ಸಫಾರಿಗೆ ತೆರಳಿದ್ದರು. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಜಾರಿ – ಮುಂದಿನ ಮೂರು ಗಂಟೆಯಲ್ಲಿ ಭಾರೀ ಮಳೆ ಸಾಧ್ಯತೆ

  • ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಮೋದಿ ಸಫಾರಿ

    ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಮೋದಿ ಸಫಾರಿ

    ಡಿಸ್ಪುರ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ (ಮಾ.9) ಬೆಳಗ್ಗೆ ಅಸ್ಸಾಂನ (Assam) ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ (Kaziranga National Park) ಆನೆ ಸಫಾರಿ ಹಾಗೂ ಜೀಪ್ ಸಫಾರಿ ನಡೆಸಿದ್ದಾರೆ. ನರೇಂದ್ರ ಮೋದಿ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿದ ಮೊದಲ ಪ್ರಧಾನಿ ಎನಿಸಿಕೊಂಡಿದ್ದಾರೆ.

    ಮೋದಿ ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಭೇಟಿ ನೀಡಿದ ಸಂದರ್ಭ ಉದ್ಯಾನದ ಸೆಂಟ್ರಲ್ ಕೊಹೊರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಮೊದಲು ಆನೆ ಸಫಾರಿ ನಡೆಸಿದರು. ಬಳಿಕ ಅದೇ ವ್ಯಾಪ್ತಿಯಲ್ಲಿ ಜೀಪ್ ಸಫಾರಿ ನಡೆಸಿದರು. ಈ ವೇಳೆ ಪ್ರಧಾನಿಯೊಂದಿಗೆ ಉದ್ಯಾನದ ನಿರ್ದೇಶಕಿ ಸೋನಾಲಿ ಘೋಷ್ ಮತ್ತು ಇತರ ಹಿರಿಯ ಅರಣ್ಯ ಅಧಿಕಾರಿಗಳು ಇದ್ದರು. ಇದನ್ನೂ ಓದಿ: ಲೋಕಸಭೆಗೆ ರಾಜ್ಯದಿಂದ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ?

    ರಾಜ್ಯಕ್ಕೆ ಎರಡು ದಿನಗಳ ಭೇಟಿಗಾಗಿ ಪ್ರಧಾನಿ ಶುಕ್ರವಾರ ಸಂಜೆ ಕಾಜಿರಂಗಕ್ಕೆ ಆಗಮಿಸಿದ್ದರು. ಶನಿವಾರ ಮಧ್ಯಾಹ್ನ ಮೋದಿ ಜೋರ್ಹತ್‌ನಲ್ಲಿ ಅಹೋಮ್ ಜನರಲ್ ಲಚಿತ್ ಬರ್ಫುಕನ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: NDA 358, INDIA 110 ಸ್ಥಾನ – ಟೈಮ್ಸ್‌ ನೌ ಸಮೀಕ್ಷೆ

    ಜೋರ್ಹತ್ ಜಿಲ್ಲೆಯ ಮೆಲೆಂಗ್ ಮೆಟೆಲಿ ಪೋಥಾರ್‌ಗೆ ತೆರಳಲಿರುವ ಮೋದಿ ಸುಮಾರು 18,000 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: Congress 1st Lok Sabha List: ಮತ್ತೆ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗಿಳಿದ ರಾಗಾ!

  • ಭೀಕರ ಪ್ರವಾಹಕ್ಕೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಜಲಾವೃತ – ಜೀವ ರಕ್ಷಣೆಗೆ ಪ್ರಾಣಿಗಳ ಪರದಾಟ

    ಭೀಕರ ಪ್ರವಾಹಕ್ಕೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಜಲಾವೃತ – ಜೀವ ರಕ್ಷಣೆಗೆ ಪ್ರಾಣಿಗಳ ಪರದಾಟ

    ಬಿಸ್ಪುರ್: ಭೀಕರ ಪ್ರವಾಹದಿಂದಾಗಿ ಅಸ್ಸಾಂ ತತ್ತರಿಸಿ ಹೋಗಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈ ಮಧ್ಯೆ ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಮತ್ತು ಅದರ 95 ಶಿಬಿರಗಳು ಶೇ.70 ರಷ್ಟು ಜಲಾವೃತಗೊಂಡಿದೆ.

    ಕಾಜಿರಂಗಾ ರಾಷ್ಟ್ರೀಯ ಉದ್ಯಾನವನ ಪ್ರಾಣಿಗಳು ಜೀವ ರಕ್ಷಣೆಗಾಗಿ ಪರದಾಟ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಅರಣ್ಯ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದ್ದು, ಕರ್ತವ್ಯದಲ್ಲಿ ಹಾಜರಿರುವಂತೆ ಇಲಾಖೆ ಸೂಚನೆ ರವಾನಿಸಿದೆ ಎನ್ನಲಾಗಿದೆ.

    ರಾಷ್ಟ್ರೀಯ ಉದ್ಯಾನವನದ ಮುಕ್ಕಾಲು ಭಾಗದಷ್ಟು ಪ್ರದೇಶ ಜಲಾವೃತಗೊಂಡಿದ್ದು, ಇಲ್ಲಿದ್ದ ಪ್ರಾಣಿಗಳನ್ನು ಎತ್ತರದ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವ ಕಾರ್ಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತೊಡಗಿದ್ದಾರೆ. ಈ ಮಧ್ಯೆ ಬೇಟೆಗಾರರು ಪ್ರಾಣಿಗಳ ಬೇಟೆಯಾಡುವ ಸಂಭವ ಹೆಚ್ಚಾಗಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ 37ರಲ್ಲಿ ಅರಣ್ಯ ಇಲಾಖೆ ಸಂಪೂರ್ಣ ಎಚ್ಚರಿಕೆ ವಹಿಸಿದೆ. ಉದ್ಯಾನವನದ ಪ್ರದೇಶದ ಸುತ್ತಾಮುತ್ತ ರಾತ್ರಿ ವೇಳೆಯೂ ಸಹ ಭದ್ರತಾ ದೃಷ್ಟಿಯಿಂದ ಅರಣ್ಯ ಕಾವಲುಗಾರರನ್ನು ನಿಯೋಜಿಸಲಾಗಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ಅಸ್ಸಾಂನ ಬಹುತೇಕ ನದಿಗಳು ತುಂಬಿ ಹರಿಯುತ್ತಿದೆ. ಬಾಲಿಪುರ್ ಚಾರ್ ಪ್ರದೇಶದಲ್ಲಿ ಇರುವ ಬೇಕಿ ನದಿಯೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿಯ ಸುತ್ತಮುತ್ತ ಪ್ರದೇಶದ ಜನರು ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

    ಹೀಗಾಗಿ ಭಾರತೀಯ ಸೇನೆ, ಎನ್‍ಡಿಆರ್‍ಎಫ್ ಮತ್ತು ಸಿವಿಲ್ ಅಡ್ಮಿನಿಸ್ಟ್ರೇಷನ್ ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬಾಲಿಪುರ್ ಚಾರ್ ನಲ್ಲಿ ಪ್ರವಾಹಕ್ಕೆ ಸಿಲುಕಿದ್ದ 55 ಮಹಿಳೆಯರು, 40 ಪುರುಷರು, 25 ಹಿರಿಯ ನಾಗರಿಕರು ಮತ್ತು 30 ಮಕ್ಕಳು ಸೇರಿದಂತೆ ಸುಮಾರು 150 ಗ್ರಾಮಸ್ಥರನ್ನು ರಕ್ಷಿಸಿ ಸ್ಥಳಾಂತರಿಸಿಸಲಾಗಿದೆ.

    ಬ್ರಹ್ಮಪುತ್ರ ನದಿಯು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಲಕ್ಷಾಂತರ ಮಂದಿ ಆತಂಕದಲ್ಲಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ ಜನರ ಮೇಲೆ ಪ್ರವಾಹ ಪರಿಣಾಮ ಬೀರಿದೆ ಎನ್ನಲಾಗಿದೆ.