Tag: KC Valley Project

  • ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ಗೆ ಸಂಸದ ಸುಧಾಕರ್‌ ಸವಾಲ್‌

    ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ಗೆ ಸಂಸದ ಸುಧಾಕರ್‌ ಸವಾಲ್‌

    – ಕೆಸಿ ವ್ಯಾಲಿ ಮತ್ತು ಹೆಚ್ಎ‌ನ್‌ ವ್ಯಾಲಿ 3ನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂಬ ಕಾಂಗ್ರೆಸ್‌ ಧೋರಣೆಗೆ ಖಂಡನೆ

    ಚಿಕ್ಕಬಳ್ಳಾಪುರ: ಕೆ.ಸಿ.ವ್ಯಾಲಿ ಮತ್ತು ಹೆಚ್‌.ಎನ್‌ ವ್ಯಾಲಿ ಯೋಜನೆಗಳಡಿ (HN Valley Project) 3ನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂಬ ಕಾಂಗ್ರೆಸ್‌ ಸರ್ಕಾರದ ಧೋರಣೆಯನ್ನು ಸಂಸದ ಡಾ.ಕೆ ಸುಧಾಕರ್‌ (K Sudhakar) ಖಂಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರವು (Congress Government) ಜನರು ಸುರಕ್ಷಿತವಲ್ಲದ ನೀರನ್ನ ಕುಡಿಯಬೇಕೆಂದು ಬಯಸುತ್ತಿದೆಯಾ? ಸಾರ್ವಜನಿಕ ಆರೋಗ್ಯ ಸುರಕ್ಷತೆ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲವಾ? ಕೆ.ಸಿ ವ್ಯಾಲಿ (KC Valley Project) ಮತ್ತು ಹೆಚ್.ಎನ್ ವ್ಯಾಲಿ ಯೋಜನೆ ಕುಡಿತು ನೀಡಿದ ಹೇಳಿಕೆಗಳು ಕಳವಳ ಕಾರಿ ಮತ್ತು ಖಂಡನೀಯವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ಅವರೇ, 3ನೇ ಹಂತದ ಶುದ್ಧೀಕರಣ ಇಲ್ಲದೇ ಈ ನೀರನ್ನ ಕುಡಿಯಲು ಬಳಸಬಹುದು ಎಂದು ಹೇಳಿದ್ದಾರೆ. ಈ ನೀರನ್ನು ಮೊದಲು ಸಚಿವರೇ ಕುಡಿದು ಹಾಗೂ ತಮ್ಮ ಮನೆಗಳಲ್ಲಿ ಉಪಯೋಗಿಸಿ ತೋರಿಸಲಿ. ಹಾಗೆಯೇ ಕಾಂಗ್ರೆಸ್‌ ಶಾಸಕರಿಗೆ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಕುಡಿಯಲು ಕೊಡಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗಿದೆ ಅಥವಾ 3ನೇ ಹಂತದ ಶುದ್ಧೀಕರಣ ಮಾಡಲು ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇಲ್ಲ ಎಂದು ಪ್ರಾಮಾಣಿಕತೆಯಿಂದ ಒಪ್ಪಿಕೊಳ್ಳಲಿ. ಅದು ಬಿಟ್ಟು 3ನೇ ಹಂತದ ಶುದ್ಧೀಕರಣವೇ ಅಗತ್ಯವಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವುದು ಯಾವ ಸೀಮೆ ನ್ಯಾಯ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

    ಕಾಂಗ್ರೆಸ್‌ನ ದಿವಾಳಿ ಸರ್ಕಾರದ ಪಾಪಕ್ಕೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜನತೆ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬೇಕಾ? ತಮ್ಮ ಪಾಪರ್ ಸರ್ಕಾರದ ಅಯೋಗ್ಯತೆಗೆ ಅಮಾಯಕ ಜನರು ಬಲಿಯಾಗಬೇಕಾ? ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ 3ನೇ ಹಂತದ ಶುದ್ಧೀಕರಣ ಮಾಡಿಸಲಿ. ಇಲ್ಲವಾದ್ರೆ 2028 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ 3ನೇ ಹಂತದ ಶುದ್ಧೀಕರಣ ಯೋಜನೆ ಜಾರಿ ಮಾಡಲಿದೆ ಎಂದು ಅವರು ಹೇಳಿದ್ದಾರೆ.

  • ಕೆಸಿ ವ್ಯಾಲಿ ಯೋಜನೆಯ 2ನೇ ಹಂತಕ್ಕೆ ಚಾಲನೆ – ಕಾರ್ಯಕ್ರಮದ ವೇದಿಕೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಬೇಸರ ಮಾತು

    ಕೆಸಿ ವ್ಯಾಲಿ ಯೋಜನೆಯ 2ನೇ ಹಂತಕ್ಕೆ ಚಾಲನೆ – ಕಾರ್ಯಕ್ರಮದ ವೇದಿಕೆಯಲ್ಲಿ ಸ್ಪೀಕರ್ ರಮೇಶ್ ಕುಮಾರ್ ಬೇಸರ ಮಾತು

    ಕೋಲಾರ: ಬಯಲು ಸೀಮೆ ಜಿಲ್ಲೆಯಾದ ಕೋಲಾರದ 126 ಕೆರೆಗಳಿಗೆ ಕೋರಮಂಗಲ – ಚಲ್ಲಘಟ್ಟ ಸಂಸ್ಕರಿಸಿದ ತ್ಯಾಜ್ಯ ನೀರನ್ನು ತುಂಬಿಸುವ ಕೆ.ಸಿ.ವ್ಯಾಲಿ ಯೋಜನೆಯ 2ನೇ ಹಂತಕ್ಕೆ ಸಚಿವ ಕೃಷ್ಣಬೈರೇಗೌಡ ಚಾಲನೆ ನೀಡಿದರು. ಈ ವೇಳೆ ಯೋಜನೆ ವಿರೋಧಿಸಿ ಕಣ್ಣೀರು ತರಿಸಿ, ನಮ್ಮ ಬದುಕಿಗೆ ಬೆಂಕಿ ಹಾಕಿ ಗೋಳಾಡಿಸಿದವರಿಗೆ ದೇವರ ಒಳ್ಳೆಯದರು ಮಾಡಲಿ ಎಂದು ವಿಧಾನ ಸಭಾ ಸ್ಪೀಕರ್ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

    ಸುಮಾರು 1,400 ಕೋಟಿ ರೂಪಾಯಿ ವೆಚ್ಚದ ಕೋಲಾರ ಜಿಲ್ಲೆಯ 136 ಕೆರೆಗಳನ್ನು ತುಂಬಿಸುವ ಯೋಜನೆಗೆ ಅಂದಿನ ಸಿಎಂ ಸಿದ್ದರಾಮಯ್ಯ ಸರ್ಕಾರ ಬೆಂಗಳೂರಿನ ತ್ಯಾಜ್ಯ ನೀರನ್ನು ಎರಡು ಹಂತಗಳಲ್ಲಿ ಸಂಸ್ಕರಿಸುವ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಸದ್ಯ ಹಲವು ಅಡೆತಡೆಗಳ ಮಧ್ಯೆ 2ನೇ ಹಂತಕ್ಕೆ ಚಾಲನೆ ನೀಡುವ ಮೂಲಕ ಜಿಲ್ಲೆಯ ಕೆರೆಗಳಿಗೆ ಹರಿಸಿದೆ.

    ಬೆಳ್ಳಂದೂರು ಕೆರೆಯಿಂದ ಪೈಪ್ ಲೈನ್ ಮೂಲಕ ಲಕ್ಷ್ಮೀಸಾಗರ, ನರಸಾಪುರ ಕೆರೆಗೆ ಸದ್ಯ 140 ಎಂಎಲ್‍ಡಿ ನೀರು ಹರಿಸಲಾಗುತಿದೆ. ಕೆರೆಗೆ ಹರಿದು ಬಂದಿರುವ ಕೆ.ಸಿ.ವ್ಯಾಲಿ ನೀರನ್ನು ಇಲ್ಲಿಂದ ಜಿಲ್ಲೆಯ ಮಾಲೂರು, ಶ್ರೀನಿವಾಸಪುರ, ಬಂಗಾರಪೇಟೆ ಹಾಗೂ ಮುಳಬಾಗಲು ತಾಲೂಕಿನ ಕೆರೆಗಳಿಗೆ ಪಂಪ್ ಮಾಡುವ ಮಾಡುವ 2ನೇ ಹಂತದ ಯೋಜನೆಗೆ ಇಂದು ಚಾಲನೆ ನೀಡಲಾಯಿತು.

    ಗೊಂದಲ ಗೂಡದ ಕಾರ್ಯಕ್ರಮ: ಯೋಜನೆಗೆ ಮೊದಲಿನಿಂದಲೂ ಒಂದಲ್ಲಾ ಒಂದು ರೀತಿಯಲ್ಲಿ ಕಂಟಕಗಳು ಎದುರಾಗುತ್ತಿದ್ದವು. ಇಂದಿನ ಕಾರ್ಯಕ್ರಮವೂ ಕಾಂಗ್ರೆಸ್ ಪಕ್ಷದ ಒಳಗಿನ ಗುಂಪುಗಾರಿಕೆಯಿಂದ ನಗೆ ಪಾಟಲಿಗೀಡಾಗಿತ್ತು. ಮೊದಲಿಗೆ ಯೋಜನೆಗೆ ಸಹಕರಿಸಿದ ಸಚಿವರು, ಸ್ಪೀಕರ್ ಹೆಸರಿನ ಸ್ವಾಗತ ಬ್ಯಾನರ್ ಅಳವಡಿಸಲಾಗಿತ್ತು. ಗಮನಿಸಿದ ಕೋಲಾರ ಸಂಸದ ಮುನಿಯಪ್ಪ ಬೆಂಬಲಿಗರು ಸಂಸದರ ಹೆಸರು ಕೈ ಬಿಟ್ಟಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ಆದರೆ ಈ ವೇಳೆ ಬ್ಯಾನರ್ ತೆರವು ಮಾಡಿ ಅಸಮಾಧಾನಕ್ಕೆ ತೆರೆ ಎಳೆಯಲಾಯಿತು. ಆದರೆ ಕಾರ್ಯಕ್ರಮಕ್ಕೆ ಆಹ್ವಾನವೇ ನೀಡಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯರು ಸ್ಥಳದಲ್ಲಿ ಹೈಡ್ರಾಮಾ ಸೃಷ್ಠಿ ಮಾಡಿದರು.

    ಕಾರ್ಯಕ್ರಮದ ವೇದಿಕೆ ಸ್ಥಳದಲ್ಲೇ ಜಿಲ್ಲಾಡಳಿತದ ವಿರುದ್ಧ ಸದಸ್ಯರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಚಿವರು, ಸಂಸದ ಸದಸ್ಯರ ಮನವೊಲಿಸಿ ವೇದಿಕೆಗೆ ಕರೆತಂದರು. ಬಳಿಕ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಪ್ರತಿಭಟನಾಕಾರರು, ಯೋಜನೆಗೆ ವಿರೋಧಿಸಿದವರನ್ನ ಒಳಗೊಂಡಂತೆ ಯೋಜನೆಗೆ ಯಾರೆಲ್ಲ ಅಡಚಣೆ, ತೊಂದರೆಗಳನ್ನು ನೀಡಿದರೋ ಅವರ ಪಾದಗಳಿಗೆ ನಮಸ್ಕಾರ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿ ಬೇಸರ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಯೋದಾದರೆ ನಾನೇ ಮೊದಲು ಸಾಯುತ್ತೇನೆ-ಕೋಲಾರ ಶಾಸಕ ಶ್ರೀನಿವಾಸ ಗೌಡ

    ಸಾಯೋದಾದರೆ ನಾನೇ ಮೊದಲು ಸಾಯುತ್ತೇನೆ-ಕೋಲಾರ ಶಾಸಕ ಶ್ರೀನಿವಾಸ ಗೌಡ

    ಕೋಲಾರ: ಬಯಲು ಸೀಮೆ ಜಿಲ್ಲೆ ನೀರಿನ ದಾಹ ನೀಗಿಸಲು ರಾಜ್ಯ ಸರ್ಕಾರದ ಕೈಗೊಂಡಿದ್ದ ಕೆ.ಸಿ.ವ್ಯಾಲಿ ನೀರಾವರಿ ಯೋಜನೆಯ ಕುರಿತ ಅಪಪ್ರಚಾರವನ್ನ ನಿವಾರಣೆ ಮಾಡಲು ಕೋಲಾರ ಶಾಸಕ ಶ್ರೀನಿವಾಸ್ ಗೌಡ ಸ್ವತಃ ನರಸಾಪುರ ಕೆರೆಯ ನೀರನ್ನು ಕುಡಿದಿದ್ದಾರೆ.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರಲ್ಲಿರುವ ಆತಂಕವನ್ನು ನಿವಾರಣೆ ಮಾಡಲು ಜಿಲ್ಲೆಯ ನರಸಾಪುರದ ಕೆರೆ ನೀರನ್ನು ನಾನೇ ಸ್ವತಃ ಕುಡಿದಿದ್ದೇನೆ. ಅಲ್ಲದೇ ಯೋಜನೆಯನ್ನ ವಿರೋಧಿಸುವವರು ಸುಮ್ಮನೆ ಅಪಪ್ರಚಾರ ನಡೆಸಿದ್ದಾರೆ. ಒಂದೊಮ್ಮೆ ನೀರು ವಿಷಕಾರಿಯಾದರೆ ನಾನೇ ಸಾಯುವುದಾಗಿ ಹೇಳಿದರು.

    ಈ ನೀರು ಬಳಕೆ ಮಾಡದಿದ್ದರೆ ನೇರ ತಮಿಳುನಾಡಿಗೆ ಹರಿಯುತ್ತದೆ. ಅಲ್ಲಿನ ಜನ ನೀರನ್ನು ಸಂಸ್ಕರಿಸದೇ ಬಳಸುತ್ತಿದ್ದಾರೆ. ಅಲ್ಲಿ ರೈತರು ಇದೆ ನೀರಿನಿಂದ ಕೃಷಿ ಮಾಡುತ್ತಿದ್ದಾರೆ. ಆದರೆ ನಮ್ಮಲ್ಲಿ ಸಂಸ್ಕರಿಸಿದ ನೀರನ್ನು ಬಳಸಲು ಹಿಂದೆ ಮುಂದೆ ನೋಡಲಾಗುತ್ತಿದೆ ಎಂದು ಶಾಸಕರು ಬೇಸರ ವ್ಯಕ್ತಪಡಿಸಿದರು. ಅಲ್ಲದೇ ಹೈಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಕೆ ಮಾಡಿ ನೀರು ಹರಿಸದಂತೆ ತಡೆಯಾಜ್ಞೆ ತಂದಿರುವ ಕಾರಣ ಕಳೆದ ಒಂದೂವರೆ ತಿಂಗಳಿಂದ ಕೆ.ಸಿ.ವ್ಯಾಲಿ ನೀರನ್ನು ಹರಿಸಲಾಗುತ್ತಿಲ್ಲ. ಅದ್ದರಿಂದ ತಾನು ನೀರನ್ನು ಕುಡಿದಿದ್ದು ನ್ಯಾಯಾಲಯಕ್ಕೂ ಅಫಿಡವಿಟ್ ಸಲ್ಲಿಸುವುದಾಗಿ ಶ್ರೀನಿವಾಸ್ ತಿಳಿಸಿದರು.

    ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೆಂಗಳೂರು ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಯ 126 ಕೆರೆಗಳಿಗೆ ಹರಿಸುವ 1,400 ಕೋಟಿ ರೂಪಾಯಿಯ ಕೆ.ಸಿ.ವ್ಯಾಲಿ(ಕೋರಮಂಗಲ- ಚಲ್ಲಘಟ್ಟ) ಯೋಜನೆಯನ್ನು ಅನುಷ್ಠಾನಗೊಳಿಸಿತ್ತು. ಯೋಜನೆ ಜಿಲ್ಲೆಯನ್ನು ತಲುಪುತ್ತಿದ್ದಂತೆ ಜಿಲ್ಲೆಯ ಜನರು ಸಾಕಷ್ಟು ಸಂತಸ ವ್ಯಕ್ತಪಡಿಸಿದ್ದರು. ಆದರೆ ಯೋಜನೆ ಒಂದು ಹಂತದಲ್ಲಿ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ನೀರನ್ನು ಸರಿಯಾಗಿ ಸಂಸ್ಕರಿಸದೆ ಹರಿಸಿದ ಪರಿಣಾಮ ಕೆಲವು ನೀರಾವರಿ ಹೋರಾಟಗಾರರು ಕೆ.ಸಿ.ವ್ಯಾಲಿ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸಿ ಹರಿಸಬೇಕು. ನೀರು ಹರಿಸುವ ಮುನ್ನ ನೀರಿನ ಶುದ್ಧತೆಯನ್ನು ಸಾಬೀತುಪಡಿಸುವಂತೆ ಆಗ್ರಹಿಸಿ ಹೈಕೋರ್ಟ್‍ನಲ್ಲಿ ಪಿಐಎಲ್ ಸಲ್ಲಿಸಿ ತಡೆಯಾಜ್ಞೆ ತಂದಿದ್ದಾರೆ.

    ನ್ಯಾಯಾಲಯದ ತಡೆಯಾಜ್ಞೆ ಹಿನ್ನೆಲೆಯಲ್ಲಿ ಕೋಲಾರ ಶಾಸಕ ಕೆ.ಶ್ರೀನಿವಾಸಗೌಡ ಯೋಜನೆಯ ಬಗ್ಗೆ ಅಪಪ್ರಚಾರ ಮಾಡುವವರ ವಿರುದ್ಧ ಸವಾಲು ಎಸೆದು ನೀರು ಸೇವಿಸಿದ್ದಾರೆ. ಈ ವೇಳೆ ಶಾಸಕ ಶ್ರೀನಿವಾಸಗೌಡ ಹಾಗೂ ಅವರ ನೂರಾರು ಬೆಂಬಲಿಗರು ಕೂಡ ಅವರಿಗೆ ಸಾಥ್ ನೀಡಿದರು. ಇತ್ತೀಚೆಗೆ ಕೋಲಾರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಕೆ.ಸಿ.ವ್ಯಾಲಿ ಯೋಜನೆಯ ಬಗ್ಗೆ ವಿರೋಧ ವ್ಯಕ್ತಪಡಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. ನಾನು ಬಯಲು ಸೀಮೆ ಜಿಲ್ಲೆಗೆ ನೀರು ಹರಿಸುವ ಯೋಜನೆಗಳನ್ನ ಜಾರಿ ಮಾಡಿದ್ದೇನೆ. ಆದರೂ ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದೆ ಎಂದಿದ್ದರು.

    ಕಳೆದ ಕೆಲ ದಿನಗಳ ಹಿಂದೆಯಷ್ಟೇ ಜಿಲ್ಲೆಯ ನರಸಾಪುರ ಗ್ರಾಮ ಪಂಚಾಯ್ತಿಯಿಂದ ಕೆಲವು ಕೊಳವೆ ಬಾವಿ ನೀರು ಬಳಸಲು ಯೋಗ್ಯವಲ್ಲ ಎಂದು ಪಂಚಾಯತ್ ಸಾರ್ವಜನಿಕರಿಗೆ ತಿಳಿಸಿತ್ತು. ಸದ್ಯ ಯೋಜನೆ ಕುರಿತು ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆ ಬುಧವಾರ ನಡೆಯಲಿದೆ.