ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್ (Illegal Online Betting) ಪ್ರಕರಣ ಸಂಬಂಧ ಚಿತ್ರದುರ್ಗ (Chitradurga) ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು (Veerendra Puppy) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಸಾವಿರಾರು ಕೋಟಿ ಹಣ ಹೂಡಿಕೆ ಮತ್ತು ವರ್ಗಾವಣೆ ಆರೋಪದಲ್ಲಿ ಇಡಿ ಅಧಿಕಾರಿಗಳಿಂದ ಬಂಧನವಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ವೀರೇಂದ್ರ ಪಪ್ಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತು. ಇದನ್ನೂ ಓದಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್ – ಅಲ್ಪಾವಧಿಯಲ್ಲಿ 2,000 ಕೋಟಿ ರೂ. ಲಾಭಗಳಿಸಿದ ವೀರೇಂದ್ರ ಪಪ್ಪಿ
ಈ ಹಿಂದೆ ವೀರೇಂದ್ರ ಪಪ್ಪಿಗೆ ಸೇರಿದ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ವಹಿವಾಟಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸಿಕ್ಕ ಹಲವು ಮಾಹಿತಿ ಆಧಾರದ ಮೇಲೆ ಮತ್ತೆ ಎರಡು ಬಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಈ ವೇಳೆ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಹಣ ಹೂಡಿಕೆ ಮತ್ತು ವರ್ಗಾವಣೆ ಮಾಡಿದ್ದ ಬಗ್ಗೆ ದಾಖಲೆಗಳು ಲಭ್ಯವಾಗಿತ್ತು. ಇಡಿ ಅಧಿಕಾರಿಗಳ ತನಿಖೆಯಲ್ಲಿ ವೀರೇಂದ್ರ ಪಪ್ಪಿ ಸುಮಾರು ಏಳು ಸಾವಿರ ಕೋಟಿ ಅಕ್ರಮ ವ್ಯವಹಾರ ನಡೆಸಿರೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಮುಂದುವರೆದು ಸುಮಾರು ಇಪ್ಪತ್ತು ಸಾವಿರ ಕೋಟಿ ಅಕ್ರಮ ವ್ಯವಹಾರದ ಬಗ್ಗೆ ತನಿಖೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ
ಚಿತ್ರದುರ್ಗ: ಜನಪ್ರತಿನಿಧಿ ಅಂದ್ರೆ ಜನಸಾಮಾನ್ಯರಿಗೆ ಮಾದರಿಯಾಗಿರಬೇಕು. ಆದರೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆಸಿ ವೀರೇಂದ್ರ ಪಪ್ಪಿ (KC Veerendra Puppy) ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ (Online Betting) ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆಂಬ ಮಾಹಿತಿ ಇಡಿ (ED) ದಾಳಿ ವೇಳೆ ಬಯಲಾಗಿದೆ.
ಚಿತ್ರದುರ್ಗ ಕಾಂಗ್ರೆಸ್ ಶಾಸಕ ಹಾಗೂ ಸಿನಿಮಾ ನಟ ದೊಡ್ಡಣ್ಣನ ಅಳಿಯ ಕೆಸಿ ವೀರೇಂದ್ರ ಪಪ್ಪಿ ಹಿಂದಿನಿಂದಲೂ ಕ್ಯಾಸಿನೋ ದೊರೆ ಅಂತಾನೇ ಫೇಮಸ್. ಗೋವಾ, ಶ್ರೀಲಂಕಾ ಸೇರಿದಂತೆ ವಿವಿದೆಡೆಗಳಲ್ಲಿ ಕ್ಯಾಸಿನೋ ನಡೆಸುತ್ತಿರುವ ಕೆಸಿ ವೀರೇಂದ್ರ, ನಾವು ಹಿಂದಿನಿಂದಲೂ ಕೋಟ್ಯಾಧೀಶ್ವರರು, ನಮಗೆ ಜನಸಾಮಾನ್ಯರು ಹಾಗೂ ಸರ್ಕಾರದ ಹಣ ಬೇಕಿಲ್ಲ, ನಾನು ಜನಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆಂದು 2023ರ ವಿಧಾನಸಭೆ ಚುನಾವಣೆ ವೇಳೆ ಭರ್ಜರಿ ಪ್ರಚಾರ ಗಿಟ್ಟಿಸಿದ್ದರು. ಚಿತ್ರದುರ್ಗ ಕ್ಷೇತ್ರದಲ್ಲಿ ಹಣದಹೊಳೆ ಹರಿಸಿ ಕಾಂಗ್ರೆಸ್ ಶಾಸಕರಾಗಿ ಗೆದ್ದಿದ್ದಾರೆ. ಆದರೆ ಶಾಸಕ ವೀರೇಂದ್ರ ಹೇಗೆ ಕೋಟ್ಯಾಧಿಪತಿ ಆದ ಎನ್ನೋದನ್ನ ಶಾಸಕರ ತವರೂರಾದ ಚಳ್ಳಕೆರೆ, ಬೆಂಗಳೂರು, ಪಣಜಿ, ಗ್ಯಾಂಗ್ಟಾಕ್, ಜೋಧಪುರ, ಹುಬ್ಬಳ್ಳಿ ಮತ್ತು ಮುಂಬೈ ಸೇರಿದಂತೆ 31 ಕಡೆಗಳಲ್ಲಿ ದಾಳಿ ನಡೆಸಿದ್ದ ಅಧಿಕಾರಿಗಳು ಶಾಸಕರ ಅಸಲಿ ಬಂಡವಾಳವನ್ನು ಬಯಲುಮಾಡಿದ್ದಾರೆ. ಇದನ್ನೂ ಓದಿ: ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ – 55 ಕೋಟಿ ರೂ. ನಗದು ಫ್ರೀಜ್ ಮಾಡಿದ ಇ.ಡಿ
ಶಾಸಕ ವೀರೇಂದ್ರನ ಅಸಲಿ ಬಂಡವಾಳದ ಬೆನ್ನತ್ತಿರುವ ಇಡಿ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಕಿಂಗ್ 567, ರಾಜಾ 567, ಲಯನ್ 567 ಸೇರಿದಂತೆ ಇತ್ಯಾದಿಗಳ ಹೆಸರಿನಲ್ಲಿ ನಡೆಸುತ್ತಿರುವ ಆನ್‌ಲೈನ್ ಬೆಟ್ಟಿಂಗ್ ತಾಣಗಳನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಹಣ ವರ್ಗಾವಣೆಗೆ ವೆಬ್‌ಸೈಟ್, ರೂಟಿಂಗ್ ಮಾಡಲು ಹಲವು ಗೇಟ್‌ವೇಗಳನ್ನು ಬಳಕೆ ಮಾಡಿದ್ದು, ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿರುವ ಅಕ್ರಮವನ್ನು ಬಯಲಿಗೆಳೆದಿದ್ದಾರೆ. ಈ ದಂಧೆಗೆ ಶಾಸಕವೀರೇಂದ್ರ ಪಪ್ಪಿಯ ಸಹೋದರ ಕೆಸಿ ತಿಪ್ಪೆಸ್ವಾಮಿ ಪ್ರಮುಖ ಕಿಂಗ್‌ಪಿನ್ ಆಗಿದ್ದು, ದುಬೈನಿಂದ 3 ವ್ಯಾಪಾರ ಘಟಕಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ. ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಹೆಸರಲ್ಲಿ ಶಾಸಕ ಕೆಸಿ ವೀರೇಂದ್ರ ಸಹೋದರನಾದ ಕೆಸಿ ತಿಪ್ಪೆಸ್ವಾಮಿ ಹಾಗೂ ಕೆಸಿ ನಾಗರಾಜ್ ಪುತ್ರ ಪೃಥ್ವಿ ಎನ್ ರಾಜ್, ಅನಿಲ್ ಗೌಡ ಸೇರಿದಂತೆ ಇತರರ ಸಹಭಾಗಿತ್ವದಲ್ಲಿ ಅಕ್ರಮ ದಂಧೆ ನಡೆಸುತ್ತಿದ್ದಾರೆ. ಜೊತೆಗೆ ಈ ವಹಿವಾಟುಗಳಲ್ಲಿ ಗೇಟ್‌ವೇಗಳು ಮತ್ತು ಟಿಎಸ್‌ಪಿಗಳ ಎಸ್ಕ್ರೊ ಖಾತೆಗಳ ಮೂಲಕವೂ ಆಟಗಾರರ ಹಣದ ಠೇವಣಿ ಮಾಡುತ್ತಿದ್ದು, ಈ ಹಣವನ್ನು ಹವಾಲಾ ವಹಿವಾಟುಗಳು ಸೇರಿದಂತೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡಿದ್ದಾರೆಂದು ಇಡಿ ಶೋಧಕಾರ್ಯದಲ್ಲಿ ಬಹಿರಂಗಪಡಿಸಿದೆ. ಇದನ್ನೂ ಓದಿ: ‘ಕೈ’ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇ.ಡಿ ದಾಳಿ – ಆರು ಐಷಾರಾಮಿ ಕಾರುಗಳು ವಶಕ್ಕೆ
ಇನ್ನು ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಇದನ್ನೂ ಓದಿ: ಮಣಿಪುರ ಮಾತುಕತೆ ಸಫಲ; ರಾಷ್ಟ್ರೀಯ ಹೆದ್ದಾರಿ ತೆರೆಯಲು ಕುಕಿ ಗ್ರೂಪ್ ಒಪ್ಪಿಗೆ
ಒಟ್ಟಾರೆ ಹಾಸಿಗೆ ಇದ್ದಷ್ಟು ಕಾಲು ಚಾಚಬೇಕೆಂಬ ಮಾತಿದೆ. ಆದರೆ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಯ ಅಕ್ರಮ ಆನ್‌ಲೈನ್ ಬೆಟ್ಟಿಂಗ್ ದಂಧೆಯಿಂದ ಅಲ್ಪಾವಧಿಯಲ್ಲೇ 2,000 ಕೋಟಿ ರೂ. ಲಾಭಗಳಿಸಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕ ಹವಾಲದಲ್ಲು ತನ್ನ ವಹಿವಾಟು ನಡೆಸಿರುವ ಪರಿಣಾಮ ಇಡಿ ಕಸ್ಟಡಿಯಲ್ಲಿರುವ ವೀರೇಂದ್ರಗೆ ದಿನದಿಂದ ದಿನಕ್ಕೆ ಮತ್ತಷ್ಟು ಸಂಕಷ್ಟ ಎದುರಾಗೋದು ಗ್ಯಾರಂಟಿ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ
ಇನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿಯನ್ನು 4 ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದು ಇಡಿ ಕಸ್ಟಡಿ ಅವಧಿ ಅಂತ್ಯಗೊಂಡ ಬೆನ್ನಲ್ಲೇ ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು. ಪೊಲೀಸ್ ಕಸ್ಟಡಿ ವೇಳೆ ಕೆಲವೊಂದು ನಿಯಮಗಳನ್ನು ಪಾಲಿಸಲು ಕೋರ್ಟ್ ಸೂಚನೆ ಕೊಟ್ಟಿದೆ. ರಾತ್ರಿ 9 ಗಂಟೆವರೆಗೆ ಮಾತ್ರ ವಿಚಾರಣೆ ನಡೆಸುವಂತೆ ಸೂಚಿಸಿದೆ. ಉತ್ತಮ ಆಹಾರ, ವೈದ್ಯಕೀಯ ಸೇವೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆದೇಶ ಕೊಟ್ಟಿದೆ. ಸೆಪ್ಟೆಂಬರ್ 8ರಂದು ಸಂಜೆ 5 ಗಂಟೆಗೆ ಕೋರ್ಟ್ ಮುಂದೆ ವೀರೇಂದ್ರ ಪಪ್ಪಿಯನ್ನು ಹಾಜರುಪಡಿಸಲು ಸೂಚನೆ ನೀಡಿದೆ. ಇದನ್ನೂ ಓದಿ: ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು
55 ಕೋಟಿ ರೂ. ನಗದು ಫ್ರೀಜ್:
ಈಗಾಗಲೇ ಪಪ್ಪಿ ಬ್ಯಾಂಕ್ ಖಾತೆಯಿಂದ 55 ಕೋಟಿ ನಗದು ಫ್ರೀಜ್ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.