Tag: KDP

  • ಮಠದಲ್ಲಿ ಹುಕ್ಕೇರಿ ಕೆಡಿಪಿ ಸಭೆ ನಡೆಸಿದ ಸಚಿವ ಸತೀಶ್‌ ಜಾರಕಿಹೊಳಿ

    ಮಠದಲ್ಲಿ ಹುಕ್ಕೇರಿ ಕೆಡಿಪಿ ಸಭೆ ನಡೆಸಿದ ಸಚಿವ ಸತೀಶ್‌ ಜಾರಕಿಹೊಳಿ

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕು ಮಟ್ಟದ ಕೆಡಿಪಿ ಸಭೆಯನ್ನು (KDP Meeting) ಸರಕಾರಿ ಕಚೇರಿ ಬಿಟ್ಟು ಮಠದಲ್ಲಿ ಸಚಿವ ಸತೀಶ ಜಾರಕಿಹೊಳಿ (Satish Jarkiholi) ಅಧಿಕಾರಿಗಳ ಸಭೆ ನಡೆಸಿ ಗಮನ ಸೆಳೆದಿದ್ದಾರೆ.

    ಸರಕಾರಿ ಕಚೇರಿಗಳ ಸಭಾ ಭವನಗಳು ಇದ್ದರೂ ಹುಕ್ಕೇರಿ ಪಟ್ಟಣದ ಹೊರವಲಯದ ಅವಜೀಕರ ಆಶ್ರಮ ಮಠದಲ್ಲಿ ಸಭೆ ನಡೆಸಿದ್ದಾರೆ‌. ಸಭೆಯಲ್ಲಿ ಹುಕ್ಕೇರಿ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯತ್‌ ಅಧ್ಯಕ್ಷರು ಹಾಗೂ ಸತೀಶ್‌ ಜಾರಕಿಹೊಳಿ ಅಭಿಮಾನಿಗಳು ಭಾಗಿಯಾಗಿದ್ದರು.

    ಮಠದಲ್ಲಿ ಸಭೆ ಕರೆದ ವಿಚಾರದ ಸಚಿವರನ್ನು ಪ್ರಶ್ನಿಸಿದ್ದಕ್ಕೆ, ಸ್ಥಳದ ಅಭಾವದಿಂದ ಮಠದಲ್ಲಿ ಸಭೆ ಕರೆಯಲಾಗಿದೆ ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಜಾರಿಕೊಂಡಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ| ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

    ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ. ಸಿಎಂ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲೆ ತನಿಖೆ ನಡೆಯಬೇಕು ಎನ್ನುವದು ನಮ್ಮದು ವಾದವಿದೆ. ಇಡಿ ದಾಳಿಗೂ ಸಿಎಂ ರಾಜೀನಾಮೆ ನೀಡಬೇಕು ಎನ್ನುವುದು ಸರಿಯಲ್ಲ ಎಂದರು.

    ಮುಡಾ ವಿಚಾರದಲ್ಲಿ ಯಾವುದೇ ಹಣದ ವ್ಯವಹಾರವಿಲ್ಲದ ಕಾರಣ ಇಡಿ ವ್ಯಾಪ್ತಿಯಲ್ಲಿ ಬರುವುದಿಲ್ಲ ಎನ್ನುವ ವಾದವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ ಆದೇಶ ಮಾಡಬೇಕು. ಸಿಬಿಐ ತನಿಖೆಯಾದರೂ ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದರು.

  • ಜಾಡಿಸಿ ಒದ್ದರೆ ಎಲ್ಲಿಹೋಗಿ ಬಿದ್ದಿರ್ತಿಯಾ ಗೊತ್ತಾ, ಎಲ್ಲರನ್ನು ಸಸ್ಪೆಂಡ್ ಮಾಡ್ರಿ – ಮಾಧುಸ್ವಾಮಿ ಗರಂ

    ಜಾಡಿಸಿ ಒದ್ದರೆ ಎಲ್ಲಿಹೋಗಿ ಬಿದ್ದಿರ್ತಿಯಾ ಗೊತ್ತಾ, ಎಲ್ಲರನ್ನು ಸಸ್ಪೆಂಡ್ ಮಾಡ್ರಿ – ಮಾಧುಸ್ವಾಮಿ ಗರಂ

    – ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಕ್ಲಾಸ್

    ತುಮಕೂರು: ಜಾಡಿಸಿ ಒದ್ದರೆ ಎಲ್ಲಿಹೋಗಿ ಬಿದ್ದಿರ್ತಿಯಾ ಗೊತ್ತಾ ರಾಸ್ಕಲ್, ಈ ನನ್ಮಕ್ಕಳನ್ನ ಎಲ್ಲರನ್ನೂ ಸಸ್ಪೆಂಡ್ ಮಾಡಿ ಎಂದು ಕೆಡಿಪಿ ಸಭೆಯಲ್ಲಿ ಉಸ್ತುವಾರಿ ಸಚಿವ ಮಾಧುಸ್ವಾಮಿ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.

    ಜಡ್ಪಿ ಇಂಜಿನಿಯರಿಂಗ್ ವಿಭಾಗದಲ್ಲಿ ಮಾಡಬೇಕಾಗಿದ್ದ ಕೆಲಸಗಳು ಸರಿಯಾಗಿ ಆಗದ್ದಕ್ಕೆ ಸಚಿವ ಮಾಧುಸ್ವಾಮಿ ಅವರು ಕೆಡಿಪಿ ಸಭೆಯಲ್ಲಿ ಎಇಇ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಜಾಡಿಸಿ ಒದ್ದರೆ ಎಲ್ಲಿಗೋಗಿ ಬಿದ್ದಿರ್ತಿಯ ಗೊತ್ತಾ ರಾಸ್ಕಲ್, ಜಡ್ಪಿ ಇಂಜಿನಿಯರಿಂಗ್ ವಿಭಾಗದಲ್ಲಿ ಯಾವುದೇ ಕೆಲಸಗಳು ನಡೆದಿಲ್ಲ ಯಾಕೆ ಎಂದು ಪ್ರಶ್ನಿಸಿ ಸಭೆಯಲ್ಲಿ ಗುಡುಗಿದ್ದಾರೆ.

    ಕಳೆದ 4 ರಂದೇ ಕಂಟ್ರಾಕ್ಟರ್ ಕರೆಸಿ ಮಾಡಿ ಎಂದು ಸೂಚಿಸಿದ್ದೆ. ಸೂಚನೆ ನೀಡಿದ್ದರೂ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ರಂಗಸ್ವಾಮಿ ನನ್ನಿಂದ ತಪ್ಪಾಗಿದೆ ಎಂದು ಹೇಳಿದ್ದಾರೆ. ಈ ಉತ್ತರವನ್ನು ಕೇಳಿ ಕೆಂಡಮಂಡಲವಾದ ಮಾಧುಸ್ವಾಮಿ, ಯಾವ ತಪ್ಪಾಗಿದೆ? ನಿನ್ನ ಹೆಂಡ್ತಿಗೆ ಯಾವ ಸೋಪಲ್ಲಿ ತೊಳೆಯಕ್ಕೆ ಹೋಗ್ತೀಯಾ? ಜಾಡ್ಸಿ ಒದ್ದರೆ ಎಲ್ಲಿಗೋಗ್ತಿಯ ಗೊತ್ತಾ? ಇಲ್ಲಿಗೆ ನೀನು  ಕತ್ತೆ ಕಾಯೋಕ್ ಬಂದಿದ್ದಿಯ ಎಂದು ಪ್ರಶ್ನಿಸಿ ಎಇಇ ಅಧಿಕಾರಿ ರಂಗಸ್ವಾಮಿಗೆ ಲೆಫ್ಟ್ ರೈಟ್ ಫುಲ್ ಕ್ಲಾಸ್ ಮಾಡಿದ್ದಾರೆ

    ಈ ನನ್ಮಕ್ಕಳನ್ನು ಸಭೆ ಕರೆದು ಎಲ್ಲರನ್ನೂ ಸಸ್ಪೆಂಡ್ ಮಾಡ್ರಿ ಎಂದು ಸಭೆಯಲ್ಲೇ ಸಿಇಒಗೆ ಮಾಧುಸ್ವಾಮಿ ಸೂಚನೆ ನೀಡಿದ್ದಾರೆ.

  • ಬರ, ನೆರೆ ಎರಡೂ ಅನುದಾನ ನಿಮಗೇ, ನಾವ್ಯಾಕೆ ಇರೋದು- ಏಕವಚನದಲ್ಲಿ ಶಿವಲಿಂಗೇಗೌಡ-ಪ್ರೀತಂಗೌಡ ವಾಗ್ದಾಳಿ

    ಬರ, ನೆರೆ ಎರಡೂ ಅನುದಾನ ನಿಮಗೇ, ನಾವ್ಯಾಕೆ ಇರೋದು- ಏಕವಚನದಲ್ಲಿ ಶಿವಲಿಂಗೇಗೌಡ-ಪ್ರೀತಂಗೌಡ ವಾಗ್ದಾಳಿ

    ಹಾಸನ: ನೆರೆ ಪರಿಹಾರದ ವಿಚಾರದಲ್ಲಿ ಶಾಸಕರಿಬ್ಬರ ನಡುವೆ ವಾಕ್ಸಮರ ಏರ್ಪಟ್ಟಿದ್ದು, ಏಕವಚನದಲ್ಲೇ ವಾಗ್ವಾದ ನಡೆಸಿದ್ದಾರೆ. ಜೆಡಿಎಸ್‍ನ ಅರಿಸಿಕೇರೆ ಶಾಸಕ ಶಿವಲಿಂಗೇಗೌಡ ಹಾಗೂ ಬಿಜೆಪಿಯ ಹಾಸನ ಶಾಸಕ ಪ್ರೀತಂಗೌಡ ಅನುದಾನದ ವಿಚಾರದಲ್ಲಿ ಜಗಳವಾಡಿಕೊಂಡಿದ್ದಾರೆ.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಇಬ್ಬರು ಶಾಸಕರು ಕಚ್ಚಾಡಿದ್ದು, ಬರಕ್ಕೆ ಹಣ ಬಂದ್ರೂ ನಿಮಗೇ, ಮಳೆಗೆ ಅನುದಾನ ಬಂದ್ರೂ ನಿಮಗೆ, ಹಾಗಿದ್ರೆ ನಾವ್ಯಾಕೆ ಇರೋದು ಎಂದು ಸಭೆಯಲ್ಲಿ ಶಿವಲಿಂಗೇಗೌಡ ಆಕ್ರೋಶ ಭರಿತವಾಗಿ ಮಾತನಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರೀತಂಗೌಡ ವಾಗ್ದಾಳಿ ನಡೆಸಿದ್ದು, ಹೌದು ಗೌಡ್ರೆ ನೀವು ಹೇಳ್ತಿರೋದು ಸರಿ, ಯಾವುದಕ್ಕೆ ಅನುದಾನ ಬಂದ್ರೂ ರೇವಣ್ಣೋರು ತಗೊಂಡ್ ಹೋಗ್ತಿದ್ದರು ಎಂದು ತಿರುಗೇಟು ನೀಡಿದ್ದಾರೆ.

    ಶಿವಲಿಂಗೇಗೌಡರು ನೇರವಾಗಿ ರೇವಣ್ಣೋರಿಗೆ ಹೇಳೋಕ್ಕಾಗದೆ ನಮ್ಮೆದುರು ಹೇಳುತ್ತಿದ್ದಾರೆ. ರೇವಣ್ಣವರಿಗೆ ಹೇಳಿ, ಶಿವಲಿಂಗೇಗೌಡರು ನಿಮ್ಮ ವಿರುದ್ಧ ಭಾರೀ ಆಕ್ರೋಶ ವ್ಯಕ್ತಪಡಿಸಿದರು, ಪ್ರೀತಂಗೌಡ ಕೂಡ ಶಿವಲಿಂಗೇಗೌಡರಿಗೆ ಧ್ವನಿಗೂಡಿಸಿದರು ಎಂದು ಹೇಳಿ ಎಂದು ಶಿವಲಿಂಗೇಗೌಡರ ಮಾತಿಗೆ ಪ್ರೀತಂಗೌಡ ತಿರುಗೇಟು ನೀಡಿದ್ದಾರೆ.

    ಈ ವೇಳೆ ಮಾತಿಗೆ ಮಾತು ಬೆಳೆದಿದ್ದು, ಏಕವಚನದಲ್ಲಿ ಇಬ್ಬರು ಶಾಸಕರು ಜಗಳವಾಡಿದ್ದಾರೆ. ನೆರೆ ಪರಿಹಾರದಲ್ಲಿ ಸುಮಾರು 19 ಕೋಟಿ ರೂ. ಅನುದಾದ ಬಂದಿದೆ. ಸರಿಯಾಗಿ ಹಣ ಹಂಚಿಕೆ ಆಗಿಲ್ಲ. ಅರಸೀಕೆರೆ ಕ್ಷೇತ್ರಕ್ಕೆ ಏನೂ ಕೊಟ್ಟಿಲ್ಲ. ಇದೇನು ಜಿಲ್ಲೇನಾ? ಎಲ್ಲವನ್ನು ಬೇಕಾದಹಾಗೆ ಬಳಸಿಕೊಳ್ತಿದ್ದಾರೆ ಶಿವಲಿಂಗೇಗೌಡರು ಕಿಡಿಕಾರಿದ್ದಾರೆ. ಮಾತ್ರವಲ್ಲದೆ ನಿಂದು ಏನಿದೆ ಅದನ್ನು ನೀ ತಗೋ, ನಂದು ಏನಿದೆ ಅದನ್ನು ತಗೋತಿನಿ. ನಿನ್ನ ಕ್ಷೇತ್ರದ್ದು ನಾ ಕೇಳುತ್ತಿದ್ದೇನಾ ಎಂದು ಶಿವಲಿಂಗೇಗೌಡರು ಆಕ್ರೋಶ ಹೊರ ಹಾಕಿದ್ದಾರೆ.

    ಅನುದಾನ ನೀನು ತಂದಿದ್ದು ಎನ್ನಬೇಡ, ಸರ್ಕಾರ ಕೊಟ್ಟಿರೋದು. ನಾವೇನು ದನ ಕಾಯೋಕೆ ಬಂದಿಲ್ಲ ಎಂದು ಮತ್ತೆ ಶಿವಲಿಂಗೇಗೌಡ ಕಿಡಿಕಾರಿದ್ದಾರೆ. ಶಿವಲಿಂಗೇಗೌಡರ ಆರೋಪಕ್ಕೆ ಪ್ರತ್ಯುತ್ತರ ನೀಡಲು ಮುಂದಾದ ಶಾಸಕ ಪ್ರೀತಂಗೌಡ, ನಿಮ್ಮ ಸರ್ಕಾರ ಇದ್ದಾಗ ನೀವು ತಂದಿದ್ದು ಅಂತೀರಿ, ನಮ್ಮ ಸರ್ಕಾರ ಇದ್ದಾಗ ನಾನೇ ತಂದಿದ್ದೇನೆ ಅಂತೀವಿ. ಇದು ಯಡಿಯೂರಪ್ಪನವರ ಸರ್ಕಾರ. ಯಡಿಯೂರಪ್ಪ ಅವರೇ ಕೊಟ್ಟಿರೊ ಅನುದಾನ ಎಂದೇ ಹೇಳೋದು. ನನಗೂ ಟೇಬಲ್ ಕುಟ್ಟಿ ಮಾತನಾಡಲು ಬರುತ್ತೆ ಎಂದು ಶಾಸಕ ಪ್ರೀತಂಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.