ಬೀದರ್: ಡ್ಯೂಟಿಗೆ ಲೇಟಾಗಿ ಬಂದಿದ್ದನ್ನು ಪ್ರಶ್ನೆ ಮಾಡಿದ ಕರ್ತವ್ಯನಿರತ ಲೇಡಿ ಪಿಎಸ್‌ಐ (Lady PSI) ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಕಾನ್‌ಸ್ಟೇಬಲ್‌ನನ್ನು (Constable) ಅಮಾನತುಗೊಳಿಸಲಾಗಿದೆ.
ಕೆಇಎ ಪರೀಕ್ಷೆ (KEA Exam) ಭದ್ರತಾ ಸಮಯದಲ್ಲಿ ಬಂದೋಬಸ್ತ್‌ಗೆ ಕಾನ್‌ಸ್ಟೇಬಲ್ ಧನರಾಜ್ ತಡಮಾಡಿ ಕೇಂದ್ರಕ್ಕೆ ಬಂದಿದ್ದನ್ನ ಪ್ರಶ್ನೆ ಮಾಡಿದ ಪಿಎಸ್‌ಐ ಮಲ್ಲಮ್ಮ ಮೇಲೆ ಕಾನಸ್ಟೇಬಲ್ ಗಂಬೀರವಾಗಿ ಹಲ್ಲೆ ಮಾಡಿದ್ದಾನೆ. ತಡ ಮಾಡಿ ಬಂದಿದ್ದಲ್ಲದೇ ಪ್ರಶ್ನೆ ಮಾಡಿದ ಪಿಎಸ್‌ಐ ಮಹಿಳೆ ಎಂಬುದನ್ನೂ ನೋಡದೆ ಕುತ್ತಿಗೆಯ ಭಾಗ ಹಿಡಿದು ಬೇವಿನ ಮರಕ್ಕೆ ಗುದ್ದಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಜಮೈಕಾ ಪ್ರಧಾನಿ ಭಾರತ ಪ್ರವಾಸ – ಸೋಮವಾರದಿಂದ 4 ದಿನಗಳ ಭೇಟಿ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನವೆಂಬರ್ 18 ಮತ್ತು 19 ರಂದು ನಡೆಸಲಿರುವ ನಿಗಮ-ಮಂಡಳಿಗಳ ಪರೀಕ್ಷೆಗೆ ಮತ್ತಷ್ಟು ಟಫ್ ರೂಲ್ಸ್ (Tough Rules) ಜಾರಿ ಮಾಡಿದೆ.
ನೇರ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು ಅಭ್ಯರ್ಥಿಗಳು ವಸ್ತ್ರ ಸಂಹಿತೆ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು. ಸೂಕ್ಷ್ಮ ಕೇಂದ್ರಗಳಲ್ಲಿ ಪೊಲೀಸರಿಂದ (Police ತಪಾಸಣೆ ನಡೆಸಲಾಗುತ್ತದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಿದೆ.
ಏನೇನು ರೂಲ್ಸ್?
– ಡ್ರೆಸ್ ಕೋಡ್ (Dress Code) ಜಾರಿಯಾಗಿದ್ದು, ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ.
– ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ.
– ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ.
– ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು – ಇವುಗಳನ್ನು ಹೊಂದಿರಬಾರದು.
– ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸಬೇಕು.
– ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.
– ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವಂತಿಲ್ಲ. ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ/ ಸಾಧನ ಧರಿಸುವುದನ್ನು ನಿಷೇಧಿಸಲಾಗಿದೆ.
– ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್ ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿ ಇಲ್ಲ
– ಪೆನ್ಸಿಲ್, ಪೇಪರ್, ರಬ್ಬರ್, ಜಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ. ಇದನ್ನೂ ಓದಿ: ಓದು ಎಂದು ತಾಯಿ ಬುದ್ಧಿ ಹೇಳಿದ್ದಕ್ಕೆ ಮನನೊಂದು ಪುತ್ರ ನೇಣಿಗೆ ಶರಣು
– ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕೊಂಡೊಯ್ಯಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರುವುದು ಕೂಡ ಕಡ್ಡಾಯ.
– ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ.
ಒಂದು ಕೇಂದ್ರದಲ್ಲಿ ಮಾತ್ರ ಪರೀಕ್ಷೆ
– ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಈಗಾಗಲೇ ಲಿಂಕ್ ನೀಡಲಾಗಿದೆ. ಕೆಲವು ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿರುವ ಕಾರಣ ಒಂದಕ್ಕಿಂತ ಹೆಚ್ಚು ಪ್ರವೇಶ ಪತ್ರಗಳು ಬಿಡುಗಡೆಯಾಗಿರುತ್ತದೆ.
– ಇಂತಹ ಅಭ್ಯರ್ಥಿಗಳು ಮಾತ್ರ ಯಾವುದಾದರೂ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯತಕ್ಕದ್ದು, ಪರೀಕ್ಷಾ ದಿನದಂದು ಎರಡೂ ಪ್ರವೇಶ ಪತ್ರಗಳನ್ನು ಕೊಠಡಿಯ ಮೇಲ್ವಿಚಾರಕರಿಗೆ ಸಲ್ಲಿಸಬೇಕು.
ಪೊಲೀಸ್ ಸಿಬ್ಬಂದಿ ನಿಯೋಜನೆ
– ಅಭ್ಯರ್ಥಿಗಳ ಸೂಕ್ತ ತಪಾಸಣೆಗಾಗಿ ಪ್ರತಿ ಪರೀಕ್ಷಾ ಕೇಂದ್ರದಲ್ಲೂ 25 ವಿದ್ಯಾರ್ಥಿಗಳ ಗುಂಪಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು.
– ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಮೆಟಲ್ ಡಿಟೆಕ್ಟರ್ ಮತ್ತು ಪೊಲೀಸ್ ಇಲಾಖೆಗೆ ಸೂಕ್ತವೆನಿಸುವ ಇತರೆ ಉಪಕರಣಗಳನ್ನು ಬಳಸಿ ತಪಾಸಣೆಗೆ ಒಳಪಡಿಸಬೇಕು.
– ಪರೀಕ್ಷೆ ನಡೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಯಾವುದೇ ಕಾರು, ಮಿನಿ ಬಸ್ ವಾಹನಗಳನ್ನು ನಿಲ್ಲಿಸದಂತೆ ನಿರ್ಬಂಧ ಹಾಕಬೇಕು.
– ಪರೀಕ್ಷಾ ಕೇಂದ್ರದ ಸುತ್ತ ಇರುವ ಹೋಟೆಲ್, ಪೇಯಿಂಗ್ ಗೆಸ್ಟ್, ವಸತಿ ನಿಲಯಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿರುವ ವ್ಯಕ್ತಿಗಳನ್ನು ಪರಿಶೀಲಿಸಬೇಕು
– ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಕಮಿಷನರ್ ಅವರನ್ನು/ಪೊಲೀಸ್ ವರಿಷ್ಠಾಧಿಕಾರಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು.
ಪ್ರಕರಣ ಬೆಳಕಿಗೆ ಬಂದ ಬಳಿಕ ಅಂದರೆ ಕಳೆದ 12 ದಿನಗಳಿಂದ ಆರ್‌ಡಿ ಪಾಟೀಲ್ ತಲೆಮರೆಸಿಕೊಂಡಿದ್ದನು. ತೀವ್ರ ಹುಡುಕಾಟದ ನಂತರ ಇಂದು ಪಾಟೀಲ್‌ನನ್ನು ಅರೆಸ್ಟ್ ಮಾಡಲಾಗಿದೆ.
ತಲೆಮರೆಸಿಕೊಂಡಿದ್ದ ಆರ್ ಡಿ ಪಾಟೀಲ್ ಸಂಬಮಧಿಕರ ಮನೆಯಲ್ಲಿಯೇ ಅವಿತುಕೊಂಡಿದ್ದ. ಇಂದು ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ಅಫಜಲಪುರದಲ್ಲಿರುವ ಸಂಬಂಧಿಕರ ಮನೆಯಿಂದಲೇ ಆರ್ ಡಿ ಪಾಟೀಲ್‍ನನ್ನು ಬಂಧನ ಮಾಡಿದ್ದಾರೆ.
ಈ ಹಿಂದೆ ಆರ್.ಡಿ ಪಾಟೀಲ್ ನಗರದಲ್ಲೇ ಅಡಗಿಕೊಂಡು ಮೊಬೈಲ್‍ನ್ನು ಬೇರೊಬ್ಬರ ಬಳಿ ಕೊಟ್ಟು ಉತ್ತರ ಪ್ರದೇಶಕ್ಕೆ ಕಳಿಸಿದ ವಿಚಾರ ಬೆಳಕಿಗೆ ಬಂದಿತ್ತು. ಆರೋಪಿ ಕಲಬುರಗಿಯಲ್ಲೇ ಇರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಎಚ್ಚೆತ್ತಿದ್ದರು. ಕೂಡಲೇ ಆತನನ್ನು ಬಂಧಿಸಲು ತೆರಳಿದ್ದರು. ಈ ವೇಳೆಗಾಗಲೇ ಆರೋಪಿ ತಪ್ಪಿಸಿಕೊಂಡಿದ್ದು, ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದನು. ಇದನ್ನೂ ಓದಿ: ಬಿಡದಿವರೆಗೆ ಮೆಟ್ರೋ, ಡಿಪಿಆರ್‌ಗೆ ಸೂಚನೆ: ಡಿಕೆ ಶಿವಕುಮಾರ್
ಇತ್ತ ಮಹಾರಾಷ್ಟ್ರಕ್ಕೆ ಕರೆದುಕೊಂಡು ಬಿಟ್ಟ ಇಬ್ಬರು ಬಲಗೈ ಬಂಟರನ್ನು ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು 2 ದಿನಗಳ ಹಿಂದಷ್ಟೇ ವಶಕ್ಕೆ ಪಡೆದಿದ್ದರು. ಆರೋಪಿ ರವಿ ಊಕುಲಿ ಹಾಗೂ ಮತ್ತೋರ್ವನನ್ನು ಮಹಾರಾಷ್ಟ್ರದ ಸೊಲ್ಲಾಪುರದ ಬಳಿ ಪೊಲೀಸರು ವಶಕ್ಕೆ ಪಡೆದಿದ್ದರು. ಆರೋಪಿಗಳು ಆರ್.ಡಿ ಪಾಟೀಲ್‍ನನ್ನು ಸೋಲ್ಲಾಪುರದವರೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ ಎಂಬ ವಿಚಾರ ತಿಳಿದು ಬಂದಿತ್ತು. ಬಳಿಕ ಆತ ಅಲ್ಲಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಮಹಾರಾಷ್ಟ್ರದಲ್ಲಿ ಹುಡುಕಾಟ ನಡೆಸುತ್ತಿದ್ದರು.
ತ್ರಿಮೂರ್ತಿ ಸಹೋದರನಿಗೆ PSI ಹಗರಣದ ಕಿಂಗ್‌ಪಿನ್ ಆರ್.ಡಿ ಪಾಟೀಲ್ ಗ್ಯಾಂಗ್ ಕೀ ಆನ್ಸರ್ ಒದಗಿಸಿತ್ತು. ಹೀಗಾಗಿ ಆರ್.ಡಿ ಪಾಟೀಲ್ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಇನ್ನು, ಬಂಧಿತರಲ್ಲಿ ಬಹುತೇಕರು ಅಫ್ಜಲಪುರದ ಸೊನ್ನ ಗ್ರಾಮದವರಾಗಿದ್ದಾರೆ. ಇದನ್ನೂ ಓದಿ: ವಿಜಯಪುರದ 40 ಸರ್ಕಾರಿ ಆಸ್ಪತ್ರೆಗಳಿಗೆ ಕಾಯಕಲ್ಪ ಪ್ರಶಸ್ತಿ – ಡಿಸಿ ಮೆಚ್ಚುಗೆ
ಈ ಸಂಬಂಧ ಕಲಬುರಗಿಯಲ್ಲಿ ನಗರ ಪೋಲಿಸ್ ಆಯುಕ್ತ ಆರ್.ಚೇತನ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ (Kalaburgi Examination Center) ಅಕ್ರಮ ನಡೆದಿದ್ದು, ಅಭ್ಯರ್ಥಿ ತ್ರಿಮೂರ್ತಿ ಹಾಗೂ ಅಭ್ಯರ್ಥಿ ಸಹೋದರ ಅಂಬರೀಷ್ ಮತ್ತು ಆರ್.ಡಿ.ಪಾಟೀಲ್ ವಿರುದ್ಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಅಭ್ಯರ್ಥಿ ತ್ರಿಮೂರ್ತಿ ತನ್ನ ಎಡ ಕಿವಿಯಲ್ಲಿ ಬ್ಲೂಟೂತ್ ಇಟ್ಟುಕೊಂಡು ಪರೀಕ್ಷೆಯಲ್ಲಿ ಅಕ್ರಮವೆಸಗಿದ್ದಾನೆ. ಪರೀಕ್ಷಾ ಕೇಂದ್ರದ ಹೊರಗಡೆ ಕಾರ್‌ನಲ್ಲಿ ಕುಳಿತುಕೊಂಡು ಆತನ ಸಹೋದರ ಅಂಬರೀಷ್, ಕೀ ಉತ್ತರ ಹೇಳುತ್ತಿದ್ದದ್ದು ಕಂಡುಬಂದಿದೆ. ಅಂಬರೀಷ್‌ಗೆ ಆರ್.ಡಿ ಪಾಟೀಲ್ ಹಾಗೂ ಆತನ ಸಂಗಡಿಗರಿಂದ ಕೀ ಉತ್ತರಗಳು ದೊರೆಯುತ್ತಿದ್ದವು ಎಂದು ಮಾಹಿತಿ ಬಂದಿದೆ. ಇದನ್ನೂ ಓದಿ: ಬಿಜೆಪಿ ಕಳೆದ ಹತ್ತು ವರ್ಷಗಳಲ್ಲಿ 2,500 ಶಾಸಕರನ್ನು ಖರೀದಿ ಮಾಡಿದೆ: ಸಂತೋಷ್ ಲಾಡ್
ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾದ ಶಿಲ್ಪಾ ಚನ್ನವೀರ ಚಕ್ಕಿ ಅವರು ನೀಡಿ ದೂರಿನ ಅಡಿಯಲ್ಲಿ ಐಪಿಸಿ ಸೆಕ್ಷನ್ 420, 120ಬಿ, 109, 114, 36, 37, 34 ಅಡಿಯಲ್ಲಿ ಕೇಸ್ ದಾಖಲಿಸಲಾಗಿದ್ದು, ಸಂಪೂರ್ಣ ತನಿಖೆ ನಂತರವೇ ಸತ್ಯಾಂಶ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ಧಾರವಾಡ: ಕರ್ನಾಟಕ ರಾಜ್ಯದಲ್ಲಿನ ವಿವಿಧ ನಿಗಮಗಳಿಗೆ ಸಂಬಂಧಿಸಿದ 656 ಹುದ್ದೆಗೆ ನೇಮಕಾತಿಗಾಗಿ ಇದೇ ಅಕ್ಟೋಬರ್ 28 ಮತ್ತು 29ರಂದು ನೇಮಕಾತಿ ಪರೀಕ್ಷೆ ನಡೆಯಲಿವೆ. ಅದರಲ್ಲಿ ಆಹಾರ ನಿಗಮ, ವಿದ್ಯುನ್ಮಾನ ಅಭಿವೃದ್ಧಿ ನಿಗಮ, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ, ಎಂಎಸ್‍ಐಎಲ್‍ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಲಿದೆ. ಆದರೆ ಈ ಪರೀಕ್ಷೆ ಆಯೋಜನೆ ಮಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೊಡ್ಡ ಎಡವಟ್ಟು ಮಾಡಿದೆ.
ಇದರಿಂದ ಧಾರವಾಡದಲ್ಲಿ (Dharwad) ಕೊಚಿಂಗ್ ಪಡೆಯುತ್ತಿರುವ ಸಾವಿರಾರು ಅಭ್ಯರ್ಥಿಗಳು ಈ ಪರೀಕ್ಷೆಗಳಿಗೆ ಅರ್ಜಿ ಹಾಕಿದ್ದಾರೆ. ಆದರೆ ಒಂದೇ ದಿನ ಈ ಅಭ್ಯರ್ಥಿಗಳು ಒಂದು ಪರೀಕ್ಷೆ ಹಾವೇರಿ ಜಿಲ್ಲೆಯಲ್ಲಿ ಬರೆದ್ರೆ, ಅದೇ ದಿನ ಮತ್ತೊಂದು ಪರೀಕ್ಷೆ ಧಾರವಾಡ, ಬೆಂಗಳೂರಲ್ಲಿದೆ. ಒಂದೇ ನೇಮಕಾತಿಯ ಒಂದೇ ವಿಷಯದ ಎರಡೆರಡು ಪರೀಕ್ಷೆಗಳಿಗೆ ಬೇರೆ ಬೇರೆ ಕೇಂದ್ರ ಕೊಟ್ಟು ಕೆಇಎ ಎಡವಟ್ಟು ಮಾಡಿದೆ. ಇದರಿಂದ ನೂರಾರು ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಎಫ್‍ಡಿಎ, ಎಸ್‍ಡಿಎ, ಸಿನಿಯರ್ ಮತ್ತು ಜ್ಯೂನಿಯರ್ ಅಸಿಸ್ಟಂಟ್ ಆಗಬೇಕು ಎಂದು ಕನಸು ಹೊತ್ತು ಬಂದಿದ್ದ ಎಷ್ಟೋ ಅಭ್ಯರ್ಥಿಗಳು ಈಗ ಅತಂತ್ರ ಸ್ಥಿತಿಗೆ ಬಂದು ನಿಂತಿದ್ದಾರೆ. ಹೀಗಾಗಿ ಸರ್ಕಾರ ಇದನ್ನ ಗಮನಿಸಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕನಕಪುರ ಕ್ಷೇತ್ರದ ಶಿಕ್ಷಕರಿಗಿಲ್ಲ ವರ್ಗಾವಣೆ ಭಾಗ್ಯ- ಸಿಎಂ ಹೇಳಿದ್ರೂ ಟ್ರಾನ್ಸ್‌ಫರ್‌ಗೆ ತಡೆ
ಇದೊಂದೇ ಎಡವಟ್ಟು ಆಗಿದ್ರೆ ಬೇರೆ. ಇದೇ ನವೆಂಬರ್ 5 ರಂದು ನಡೆಯಲಿರುವ ಕೆಪಿಎಸ್‍ಸಿ ಮತ್ತು ಕಾನ್ಸ್‍ಸ್ಟೇಬಲ್ ಪರೀಕ್ಷೆಯಲ್ಲಿಯೂ ಗೊಂದಲ ಸೃಷ್ಟಿಯಾಗಿದೆ. ನವೆಂಬರ್ 5 ರಂದು ಒಂದೇ ದಿನ ಎರಡು ಪರೀಕ್ಷೆ ಇಡಲಾಗಿದೆ. ಎರಡೂ ಪರೀಕ್ಷೆಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು ಒಂದೇ ಪರೀಕ್ಷೆಗೆ ಹಾಜರಾಗಬೇಕು. ಇದನ್ನ ಬೇರೆ ಬೇರೆ ದಿನಾಂಕಕ್ಕೆ ಇಟ್ಟಿದ್ರೆ ಎರಡೂ ಪರೀಕ್ಷೆ ಬರೆಯಲು ಅವಕಾಶ ಸಿಗ್ತಿತ್ತು. ಆದರೆ ಇದೀಗ ಈ ಕೆಇಎ ಎಡವಟ್ಟಿನ ಬೆನ್ನಲ್ಲೇ ಕೆಪಿಎಸ್‍ಸಿ ಹಾಗೂ ಕಾನಸ್ಟೇಬಲ್ ಪರೀಕ್ಷೆ ಕೂಡಾ ಗೊಂದಲಕ್ಕೆ ಎಡೆ ಮಾಡಿವೆ. ಸದ್ಯ ಈ ಎರಡೂ ಪರೀಕ್ಷೆ ಕೂಡಾ ಬೇರೆ ದಿನಾಂಕ ನಿಗದಿ ಮಾಡಿ ನಮಗೆ ಅವಕಾಶ ಮಾಡಿಕೊಡಿ ಎಂದು ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿವೆ.
ಸರ್ಕಾರ ಪರೀಕ್ಷೆ ನಡೆಸಲು ಪ್ರಾಧಿಕಾರಕ್ಕೆ ಕೊಟ್ಟಿದೆ. ಆದರೆ ದಿನಾಂಕ ಹಾಗೂ ಸ್ಥಳ ನಿಗದಿ ಮಾಡಬೇಕಾದ ಪ್ರಾಧಿಕಾರ ಹಾಗೂ ಕೆಪಿಎಸ್ಸಿಯೇ ಇಂತ ಎಡವಟ್ಟು ಮಾಡಿ, ಪರೀಕ್ಷಾ ಅಭ್ಯರ್ಥಿಗಳ ಜೀವನದ ಜೊತೆ ಆಟ ಆಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಎದ್ದಿದೆ. ಇದನ್ನ ಸರಿ ಮಾಡಿ ಅಭ್ಯರ್ಥಿಗಳಿಗೆ ಎಲ್ಲಾ ಪರೀಕ್ಷೆ ಬರೆಯಲು ಅವಕಾಶ ಮಾಡಿದ್ರೆ ಸಾಕು.