Tag: Keerthiraj

  • ‘ಟೆನೆಂಟ್’ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್-ತಿಲಕ್ ಗೆ ಜೊತೆಯಾದ ಸೋನು ಗೌಡ

    ‘ಟೆನೆಂಟ್’ ಸಿನಿಮಾದಲ್ಲಿ ಧರ್ಮ ಕೀರ್ತಿರಾಜ್-ತಿಲಕ್ ಗೆ ಜೊತೆಯಾದ ಸೋನು ಗೌಡ

    ನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಅದರ ಭಾಗವಾಗಿ ಮೂಡಿ ಬರ್ತಿರುವ ಸಿನಿಮಾ ಟೆನೆಂಟ್ (Tennant). ಟೆನೆಂಟ್ ಎಂದರೆ ಬಾಡಿಗೆದಾರ..ಯುವ ಪ್ರತಿಭೆ ಶ್ರೀಧರ್ ಶಾಸ್ತ್ರೀ ನಿರ್ದೇಶನ ಈ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದೆ. ವಿಎಫ್ ಎಕ್ಸ್ ನಲ್ಲಿ 4 ವರ್ಷದ ಅನುಭವವಿರುವ ಶ್ರೀಧರ್ ಮೊದಲ ಪ್ರಯತ್ನ ಟೆನೆಂಟ್. ಒಂದಷ್ಟು ಕಿರುಚಿತ್ರ ನಿರ್ದೇಶಿಸಿರುವ ಅವರೀಗ ನಿರ್ದೇಶಕರಾಗಿ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಡುತ್ತಿದ್ದಾರೆ.

    ಶ್ರೀಧರ್ ಹೊಸ ಪ್ರಯತ್ನಕ್ಕೆ ಪ್ರತಿಭಾನ್ವಿತ ತಾರಾಬಳಗ ಸಾಥ್ ಕೊಟ್ಟಿದೆ. ಧರ್ಮ ಕೀರ್ತಿರಾಜ್ (Keerthiraj), ತಿಲಕ್ ರಾಜ್ (Tilak) , ಸೋನು ಗೌಡ (Sonu Gowda), ರಾಕೇಶ್ ಮಯ್ಯ ಹಾಗೂ ಉಗ್ರಂ ಮಂಜು ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

    ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಶ್ರೀಧರ್ ಶಾಸ್ತ್ರೀ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೆಂಗಳೂರಿನ ಮನೆಯೊಂದರಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಾಸ್ಟರ್ ಚಾಯ್ಸ್ ಕ್ರಿಯೇಷನ್ ನಡಿ ನಾಗರಾಜ್ ಟಿ ಟೆನೆಂಟ್ ಸಿನಿಮಾ ನಿರ್ಮಿಸುತ್ತಿದ್ದು, ಪೃಥ್ವಿರಾಜ್ ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ.

    ಗಿರೀಶ್ ಹೋತೂರ್ ಸಂಗೀತ, ಉಜ್ವಲ್ ಚಂದ್ರ ಸಂಕಲನ, ಮನೋಹರ್ ಜೋಷಿ ಛಾಯಾಗ್ರಹಣ ಚಿತ್ರಕ್ಕಿದೆ. ಶ್ರೀಧರ್ ಶಾಸ್ತ್ರಿ, ಪ್ರವೀಣ್ ಪ್ರಕಾಶ್, ಪ್ರದೀಪ್ ಚಂದ್ರ, ಪ್ರಸನ್ನ ಭಟ್, ಪುರಷೋತ್ತಮ್ ಎ, ರಾಘವೇಂದ್ರ ಸಿ.ಪಿ, ಕಾರ್ತಿಕ್ ಎಸ್.ಎಸ್ ಸಂಭಾಷಣೆ ಬರೆದಿದ್ದು, ಐಶ್ವರ್ಯ ರಂಗರಾಜನ್, ಅನಿರುದ್ಧ ಶಾಸ್ತ್ರಿ, ಗಿರೀಶ್ ಹೋತೂರ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಸದ್ಯ ಫಸ್ಟ್ ಲುಕ್ ರಿಲೀಸ್ ಮಾಡಿರುವ ಚಿತ್ರತಂಡ ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲು ಸಜ್ಜಾಗುತ್ತಿದೆ.

  • ಅವನು ಅಂಬರೀಶ್ ಅಭಿಮಾನಿ, ಈಕೆಗೆ ಐಪಿಎಸ್ ಕನಸು : ಇದು ‘ಆನಂದರಾಗ’ದ ಕಥೆ

    ಅವನು ಅಂಬರೀಶ್ ಅಭಿಮಾನಿ, ಈಕೆಗೆ ಐಪಿಎಸ್ ಕನಸು : ಇದು ‘ಆನಂದರಾಗ’ದ ಕಥೆ

    ಕಿರುತೆರೆ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಕಪ್ಪು ಹುಡುಗನ ಮನಸ್ಥಿತಿ, ಅವನಿಗಾಗುವ ಅವಮಾನ, ಖಿನ್ನತೆಯಿಂದ ಹೊರಬರುವ ಕಥೆ ತರಲಿದೆ ಉದಯ ಟಿವಿ. ದಪ್ಪ ದೇಹ ಮತ್ತು ಕಪ್ಪು ಮೈಬಣ್ಣ ಹೊಂದಿರುವ ಕಥಾನಾಯಕ ತನ್ನ ಮುಗ್ದತೆಯಿಂದ ಜನರ ಮನಸ್ಸನ್ನು ಗೆದ್ದು ವೀಕ್ಷಕರ ಮನೆ ಮಗನಾಗಲು ಬರುತ್ತಿದ್ದಾನೆ. ಇನ್ನೊಂದೆಡೆ ಕಥಾನಾಯಕಿ ಅಪ್ಪನ ಗುರಿಯನ್ನು ತನ್ನ ಗುರಿಯನ್ನಾಗಿಸಿಕೊಂಡು ಐ.ಪಿ.ಎಸ್‌ ಆಗುವ ಕನಸ್ಸನ್ನು ಹೊತ್ತವಳು. ತನ್ನ ಮುಗುಳು ನಗೆಯಿಂದಲೇ ಎಲ್ಲಾ ಸಮಸ್ಯೆ ಬಗೆಹರಿಸುವ ಚತುರೆ ಇವಳು. ಈ ಚಲುವೆಗೂ ಆ ಕಪ್ಪು ಚಲುವನಿಗೂ ಇರುವ ಋಣಾನುಬಂಧದ ಕಥೆಯನ್ನು ಹೇಳಲು ಉದಯ ಟಿವಿ ಸಜ್ಜಾಗಿದೆ.

    ಕಪ್ಪು ಮೈಬಣ್ಣ ಹಾಗು ದಪ್ಪ ದೇಹ ಹೊಂದಿರುವ ಕಥಾ ನಾಯಕ ಹೆಸರಿಗೆ ಮಾತ್ರ ಚೆಲುವರಾಜ್. ಇವನು ರೆಬಲ್‌ ಸ್ಟಾರ್‌ ಅಂಬರೀಷ್‌ ಅವರ ಅಪ್ಪಟ ಅಭಿಮಾನಿ. ಮುಗ್ಧತೆ 100%, ವಿದ್ಯೆ 0%. ಆದರೆ ಇವನು ನೀಡುವ ನಗುವಿನ ಕಚಗುಳಿ 200%. ಹೀಗಿರುವ ಚೆಲುವರಾಜ ಅನುಭವಿಸಿರುವ ಅವಮಾನಕ್ಕೆ ಲೆಕ್ಕವಿಲ್ಲ. ಒಂದಲ್ಲ ಒಂದು ದಿನ ಅಂಬರೀಷ್‌ ಅವರ ರೀತಿ ತಾನೂ ಹೀರೊ ಆಗಬಲ್ಲೆ ಎಂದು ಕನಸು ಕಂಡಿರುವಾತ. ಚೆಲುವನ ತಾಯಿ ವಸುಂಧರ. ಇವಳಿಗೆ ತನ್ನ ಮಗನ ಮೇಲೆ ತುಂಬಾ ಪ್ರೀತಿ. ಮಗನಿಗೆ ವಿದ್ಯೆ ಕಲಿಸಲು ಹರಸಾಹಸ ವಿಫಲವಾಗಿದ್ದರೂ ಸಮಾಜದಲ್ಲಿ ಮಗನಿಗೆ ಉತ್ತಮ ಸ್ಥಾನ ಕೊಡಿಸಲು ಪಣತೊಟ್ಟಿರುವ ಹೆಂಗರುಳು.


    ಇನ್ನು ಕಥಾ ನಾಯಕಿ ದುರ್ಗಾ, ಪರಮೇಶ್ವರಿಯಷ್ಟೇ ಸುಂದರಿ ಮತ್ತು ಧೈರ್ಯವಂತೆ. ಅಪ್ಪ-ಅಮ್ಮನ ಮುದ್ದಿನ ಮಗಳು. ತಂದೆ-ತಾಯಿಗಿಂತ ಮಿಗಿಲಾದ ದೇವರಿಲ್ಲ ಎಂಬ ನಂಬಿಕೆ ದುರ್ಗಾಳದ್ದು. ತನ್ನ ತಂಗಿ ಭಾವನಾಳ ಭಾವನೆಗಳಿಗೆ ಮಾತು ಇವಳದ್ದೆ. ಅಪ್ಪನ ಕನಸಿನಂತೆ ಐ.ಪಿ.ಎಸ್‌ ಆಗೋದೆ ಇವಳ ಗುರಿ. ದುರ್ಗಾ ಮತ್ತು ಚೆಲುವನ ನಡುವೆ ಅರಳುವ ವಿಭಿನ್ನವಾದ ಪ್ರೇಮರಾಗವೇ ಆನಂದರಾಗ. ಇದನ್ನೂ ಓದಿ:ನನಗೆ ಮಕ್ಕಳು ಇಲ್ಲದಿರಬಹುದು, ಶ್ವಾನಗಳೇ ನನಗೆ ಮಕ್ಕಳ ಸಮಾನ: ರಮ್ಯಾ

    ವಿನೂತನ ಪ್ರೇಮರಾಗದಲ್ಲಿ ದುರ್ಗಾಳಾಗಿ ದೀಪಾ ಹಿರೇಮಠ್‌ (Deepa Hiremath) ಹಾಗು ಚೆಲುವರಾಜ ಆಗಿ ರಂಗಭೂಮಿ ಮಂಜು (Manju)  ಆನಂದರಾಗದ (Anandaraga) ಘಮ ಬೀರಲಿದ್ದಾರೆ. ಕಥಾ ನಾಯಕಿಯ ತಂದೆಯಾಗಿ ಖ್ಯಾತ ಖಳನಾಯಕ ಕೀರ್ತಿರಾಜ್‌ (Keerthiraj) ಪಾತ್ರ ವಹಿಸಿದರೆ, ತಾಯಿಯಾಗಿ ಪ್ರತಿಭಾನ್ವಿತ ನಟಿ ಉಷಾ ಭಂಡಾರಿ (Usha Bhandari) ಕಾಣಿಸಿಕೊಳ್ಳಲಿದ್ದಾರೆ. ಕಥಾನಾಯಕನ ತಾಯಿಯಾಗಿ‌ ಹೆಸರಾಂತ ನಟಿ ವೀಣಾ ಸುಂದರ್ (Veena Sundar) ನಟಿಸುತ್ತಿದ್ದಾರೆ ಹಾಗೂ ಮತ್ತಷ್ಟು ನುರಿತ ಕಲಾವಿದರ ಬಳಗ ಈ ತಂಡದಲ್ಲಿದೆ.

    ಆನಂದರಾಗದ ನಿರ್ಮಾಣದ ಹೊಣೆಯನ್ನು ವಿಷನ್‌ ಟೈಮ್ಸ್‌ ನಿಭಾಯಿಸುತ್ತಿದೆ. ಎಸ್.ಗೋವಿಂದ್‌ ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಈಗಾಗಲೇ ಹಲವಾರು ವಿಭಿನ್ನ ರೀತಿಯ ಧಾರಾವಾಹಿಗಳನ್ನು ನೀಡಿರುವ ಉದಯ ಟಿವಿ ಆನಂದರಾಗ ಧಾರಾವಾಹಿಯ ಮೂಲಕ ಆ ಪಯಣವನ್ನು ಮುಂದುವರೆಸಿದೆ. ಆನಂದರಾಗ ಧಾರಾವಾಹಿಯು ಮಾರ್ಚ್ 13 ರಿಂದ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 7.30ಕ್ಕೆ ಪ್ರಸಾರವಾಗುತ್ತಿದೆ.

  • ಕಾರ್ ನಿಲ್ಲಲಿ ಅಂತಾ ಬ್ರೇಕ್ ಹಾಕ್ತೀವಿ, ಕೆಲವೊಮ್ಮೆ ಹೀಗಾಗುತ್ತೆ- ದರ್ಶನ್ ಆರೋಗ್ಯ ವಿಚಾರಿಸಿದ ಕೀರ್ತಿರಾಜ್

    ಕಾರ್ ನಿಲ್ಲಲಿ ಅಂತಾ ಬ್ರೇಕ್ ಹಾಕ್ತೀವಿ, ಕೆಲವೊಮ್ಮೆ ಹೀಗಾಗುತ್ತೆ- ದರ್ಶನ್ ಆರೋಗ್ಯ ವಿಚಾರಿಸಿದ ಕೀರ್ತಿರಾಜ್

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರ್ ಅಪಘಾತಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ಈಗ ಹಿರಿಯ ನಟ ಕೀರ್ತಿರಾಜ್ ಹಾಗೂ ಅವರ ಪುತ್ರ ಧರ್ಮ ಕೀರ್ತಿರಾಜ್ ಆಸ್ಪತ್ರೆಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯವನ್ನು ವಿಚಾರಿಸಿದರು.

    ದರ್ಶನ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಕೀರ್ತಿರಾಜ್ ಮಾಧ್ಯಮಗಳೊಂದಿಗೆ ಮಾತನಾಡಿ, “ಚಾಮುಂಡೇಶ್ಚರಿ ಆಶೀರ್ವಾದದಿಂದ ದರ್ಶನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದರ್ಶನ್ ಜೀವಕ್ಕೆ ಯಾವುದೇ ತೊಂದರೆ ಇಲ್ಲ. ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ. ದರ್ಶನ್ ಅವರನ್ನು ಮಾತನಾಡಿಸಿದ್ದು, ಆರಾಮಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:  ದರ್ಶನ್ ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ- ಪತ್ನಿ ವಿಜಯಲಕ್ಷ್ಮಿ ವಿವರಿಸಿದ್ದು ಹೀಗೆ

    ದರ್ಶನ್ ಸೇಫ್ ಆಗಿದ್ದಾರೆ. ದರ್ಶನ್ ಕೈ ಫ್ರಾಕ್ಚರ್ ಆಗಿದೆ. ಸದ್ಯ ಸರ್ಜರಿ ಮಾಡಿ ವೈದ್ಯರು ಸರಿ ಮಾಡಿದ್ದಾರೆ. ದೇವರಾಜು ಅವರು ಕೂಡ ಆರೋಗ್ಯವಾಗಿದ್ದಾರೆ. ದೇವರ ಆಶೀರ್ವಾದಿಂದ ಪಾರಾಗಿದ್ದಾರೆ. ಕೆಟ್ಟ ಗಳಿಗೆಯಲ್ಲಿ ಅಪಘಾತವಾಗಿದೆ. ಕಾರ್ ಸ್ಕಿಡ್ ಆಗಿ ಈ ಅವಘಡ ಸಂಭವಿದ್ದು, ಕಾರ್ ನಿಲ್ಲಲಿ ಎಂದು ಬ್ರೇಕ್ ಹಾಕುತ್ತೀವಿ, ಆದರೆ ಕೆಲವೊಂದು ಸಲ ಹೀಗಾಗುತ್ತೆ ಅಂದರು.  ಇದನ್ನೂ ಓದಿ: ಬಲಗೈಗೆ ರಾಡ್ ಅಳವಡಿಸಿ 24 ಹೊಲಿಗೆ- ಯಜಮಾನನ ಶಸ್ತ್ರಚಿಕಿತ್ಸೆ ಯಶಸ್ವಿ

    ಯಾಕೆ ಅಪಘಾತವಾಯ್ತು, ಹೇಗೆ ಆಯ್ತು ಅನ್ನೋದು ಗೊತ್ತಿಲ್ಲ. ನಾವು ಕಾರು ಓಡಿಸುವಾಗ ಬ್ರೇಕ್ ಹಾಕುತ್ತೇವೆ. ಆಗ ವಾಹನ ನಿಲ್ಲುತ್ತೆ ಅಂದುಕೊಳ್ಳುತ್ತೇವೆ. ನಿಲ್ಲದೆ ಯಾವುದೋ ವಾಹನಕ್ಕೆ ಡಿಕ್ಕಿ ಹೊಡೆದರೆ ಏನು ಮಾಡಲು ಸಾಧ್ಯ? ಭಾನುವಾರ ರಾತ್ರಿ ಮಳೆಯಾಗಿತ್ತು. ಕಾರಿನಲ್ಲಿ ಬರುವಾಗ ಸ್ಕಿಡ್ ಆಗಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ದರ್ಶನ್ ಅವರು ಚೆನ್ನಾಗಿದ್ದಾರೆ. ನಾನು ಮಾತನಾಡಿಸಿಕೊಂಡು ಬಂದಿದ್ದೇನೆ ಎಂದು ಖಳನಟ ಕೀರ್ತಿರಾಜ್ ಹೇಳಿದರು. ಇದನ್ನೂ ಓದಿ: ದರ್ಶನ್ ಕಾರ್ ಅಪಘಾತದ ಬಗ್ಗೆ ನಿರ್ಮಾಪಕ ಸಂದೇಶ್ ನಾಗರಾಜ್ ಹೀಗಂದ್ರು

    ಘಟನೆಯೇನು?:
    ಶನಿವಾರ ನಟರಾದ ದರ್ಶನ್, ಸೃಜನ್ ಲೋಕೇಶ್ ಹಾಗೂ ದೇವರಾಜ್ ಕುಟುಂಬ ಮೈಸೂರು ಮೃಗಾಲಯಕ್ಕೆ ತೆರಳಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದರು. ಆ ಬಳಿಕ ಮೈಸೂರಿನಲ್ಲೇ ಉಳಿದುಕೊಂಡು ಇಂದು ಮುಂಜಾನೆ ಅಲ್ಲಿಂದ ಹೊರಟಿದ್ದರು. ಹೀಗೆ ಕಾರ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ಹೊರವಲಯದ ಹಿನಕಲ್ ಬಳಿ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದರ್ಶನ್ ಅವರ ಬಲಗೈನ ಮೂಳೆ ಮುರಿದಿದ್ದು, ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಸದ್ಯ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಬಲಗೈಗೆ ರಾಡ್ ಅಳವಡಿಸಲಾಗಿದ್ದು, 24 ಹೊಲಿಗೆ ಹಾಕಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಅಪಘಾತದ ಬಳಿಕ ನಾಪತ್ತೆಯಾಗಿದ್ದ ದರ್ಶನ್ ಕಾರ್ ಪತ್ತೆ

    ಘಟನೆಯಲ್ಲಿ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಮುಂಜಾನೆ ಮಳೆಯಾಗುತ್ತಿದ್ದರಿಂದ ರಸ್ತೆ ಸರಿಯಾಗಿ ಕಾಣದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv