Tag: kembhavi

  • ಯಾದಗಿರಿಯಲ್ಲೊಂದು ಅಮಾನವೀಯ ಕೃತ್ಯ – ಮಹಿಳೆ ತಲೆ ಕೂದಲು ಕತ್ತರಿಸಿ, ಖಾರದ ಪುಡಿ ಹಚ್ಚಿ ದೌರ್ಜನ್ಯ!

    ಯಾದಗಿರಿಯಲ್ಲೊಂದು ಅಮಾನವೀಯ ಕೃತ್ಯ – ಮಹಿಳೆ ತಲೆ ಕೂದಲು ಕತ್ತರಿಸಿ, ಖಾರದ ಪುಡಿ ಹಚ್ಚಿ ದೌರ್ಜನ್ಯ!

    ಯಾದಗಿರಿ: ಜಿಲ್ಲೆಯಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಮಹಿಳೆಯೊಬ್ಬರ (Yadagiri Women) ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಖಾರದ ಪುಡಿ ಎರಚಿ ಅಮಾನುಷವಾಗಿ ವರ್ತಿಸಿದ ಘಟನೆ ನಡೆದಿದೆ. ಪ್ರಕರಣ ಸಂಬಂಧ ಇಬ್ಬರನ್ನ ಬಂಧಿಸಲಾಗಿದ್ದು, 11 ಜನರ ವಿರುದ್ಧ ಕೆಂಭಾವಿ ಪೊಲೀಸ್‌ ಠಾಣೆಯಲ್ಲಿ  (Kembhavi) ಕೇಸ್‌ ದಾಖಲಿಸಲಾಗಿದೆ.

    ಅ.16 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಸ್ತೂರಿಬಾಯಿ ಡಾಕಪ್ಪ ಮತ್ತು ಡಾಕಪ್ಪ ಚಿನ್ನಾರಾಠೋಡ ಬಂಧಿತ ಆರೋಪಿಗಳು. ಇನ್ನುಳಿದಂತೆ ವಿಜಯಕುಮಾರ ಕಿಶನ್ ರಾಠೋಡ (ರೌಡಿ ಶೀಟರ್) ಮತ್ತು ಇತರೆ ಹತ್ತು ಮಂದಿ ಆರೋಪಿಗಳು ತಮ್ಮ ಮೊಬೈಲ್‌ ಫೋನ್‌ಗಳನ್ನು ಸ್ವಿಚ್‌ ಆಫ್ ಮಾಡಿದ್ದು, ಮುಂಬೈ, ಪುಣೆಯಲ್ಲಿ ತಲೆ ಮರೆಸಿಕೊಂಡಿರುವ ಶಂಕೆ ಇದೆ ಎಂದು ಎಂದು ಪೊಲೀಸರು ತಿಳಿಸಿದ್ದಾರೆ.

    ಸಂತ್ರಸ್ತೆ ಆರೋಗ್ಯ ಸಮಸ್ಯೆಯಿಂದಾಗಿ ಕಲಬುರಗಿ ಇರುವ ಚಿಕ್ಕಮ್ಮನ ಮನೆಗೆ ಆಗಾಗ ಹೋಗುತ್ತಿದ್ದಳು. ಆಕೆಯ ಅಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ. ಆದ್ರೆ ಆರೋಪಿಗಳು ಅಳಿಯನ ಜೊತೆಗೆ ಸಂಬಂಧ ಇಟ್ಟುಕೊಂಡು ಓಡಿ ಹೋಗಿ ಮರ್ಯಾದೆ ತೆಗೆದಿದ್ದೀಯಾ ಅಂತ ನಿಂದಿಸಿ ಮನಸೋಇಚ್ಛೆ ಥಳಿಸಿದ್ದಾರೆ. ಸುಮಾರು 11 ಜನ ಗಂಗೂಭಾಯಿಯನ್ನ ಒದ್ದು ನೆಲಕ್ಕೆ ಕೆಡವಿದ್ದಾರೆ. ಆಕೆಯನ್ನ ಹಿಡಿದು ತಲೆಕೂದಲು ಕತ್ತರಿಸಿದ್ದಾರೆ. ನಂತರ ತಲೆಗೆ ಸುಣ್ಣ ಹಚ್ಚಿ, ಮೈಮೇಲೆ ಕಾರದಪುಡಿ ಹಾಕಿ ದುಷ್ಕೃತ್ಯ ಎಸಗಿದ್ದಾರೆ. ಜೊತೆಗೆ ಜೀವ ಬೆದರಿಕೆ ಹಾಕಲಾಗಿದೆ ಎಂಬ ಆರೋಪ ಕೂಡ ಕೇಳಿಬಂದಿದೆ.

    ಘಟನೆ ಸಂಬಂಧ ಕೆಂಭಾವಿ ಪೋಲಿಸ್ ಠಾಣೆಯಲ್ಲಿ 11 ಜನರ ವಿರುದ್ಧ ಕೇಸ್ ದಾಖಲಾಗಿದ್ದು, ಕಸ್ತೂರಿಭಾಯಿ, ಡಾಕಪ್ಪ ಇಬ್ಬರನ್ನ ಬಂಧಿಸಲಾಗಿದೆ. ಇನ್ನುಳಿದ ವಿಜಯಕುಮಾರ್, ತಿಪ್ಪಣ್ಣ, ರಮೇಶ, ದೇವಿಭಾಯಿ, ತಿಪ್ಪಿಭಾಯಿ, ರೂಪ್ಲಿಭಾಯಿ, ಅನುಸೂಯಾ, ಚಾವಳಿಭಾಯಿ, ತಿಪ್ಪಣ್ಣ ನಾಯ್ಕ್ ಆರೋಪಿಗಳಿಗಾಗಿ ಕೆಂಭಾವಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

  • ಯಾದಗಿರಿ | ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತಕ್ಕೆ ಬಲಿ

    ಯಾದಗಿರಿ | ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತಕ್ಕೆ ಬಲಿ

    ಯಾದಗಿರಿ: ಹೃದಯಾಘಾತಕ್ಕೆ ಬಲಿಯಾಗಿದ್ದ ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ಸುರಪುರ (Surpur) ತಾಲೂಕಿನ ಕೆಂಭಾವಿಯಲ್ಲಿ (Kembhavi) ನಡೆದಿದೆ.ಇದನ್ನೂ ಓದಿ: ಅತ್ಯಾಚಾರ ಆರೋಪದಲ್ಲಿ ಬಂಧನ; ಪೊಲೀಸರ ಮೇಲೆ ಗುಂಡು ಹಾರಿಸಿ ಆಪ್ ಶಾಸಕ ಪರಾರಿ

    ತಮ್ಮ ಇರ್ಫಾನ್ ಪೇಶಮಾಮ್ (38) ಹಾಗೂ ಅಣ್ಣ ಶಮಶುದ್ದೀನ್ ಪೇಶಮಾಮ್ (42) ಮೃತರು.

    ಮಂಗಳವಾರ (ಸೆ.2) ಬೆಳಿಗ್ಗೆ ತಮ್ಮ ಇರ್ಫಾನ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಈ ಸುದ್ದಿ ತಿಳಿದ ಅಣ್ಣ ಶಮಶುದ್ದೀನ್ ಗಾಬರಿಯಲ್ಲಿಯೇ ತಮ್ಮನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ. ಈ ವೇಳೆ ಮಾರ್ಗಮಧ್ಯದಲ್ಲಿಯೇ ಅಣ್ಣನೂ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ಮೋದಿ ತಿರುಗೇಟು

  • ಎಣ್ಣೆ ಏಟಲ್ಲಿ ಕಾಲುವೆ ಕಡೆ ಬಸ್ ಚಲಾಯಿಸಿದ ಚಾಲಕ – ಪ್ರಯಾಣಿರಿಂದ ಕ್ಲಾಸ್

    ಎಣ್ಣೆ ಏಟಲ್ಲಿ ಕಾಲುವೆ ಕಡೆ ಬಸ್ ಚಲಾಯಿಸಿದ ಚಾಲಕ – ಪ್ರಯಾಣಿರಿಂದ ಕ್ಲಾಸ್

    ಯಾದಗಿರಿ: ಕುಡಿದ ಅಮಲಿನಲ್ಲಿ ಸಾರಿಗೆ ಬಸ್ ಚಲಾಯಿಸಿದ ಚಾಲಕನಿಗೆ (Driver) ಪ್ರಯಾಣಿಕರು ತರಾಟೆ ತೆಗೆದುಕೊಂಡ ಘಟನೆ ಯಾದಗಿರಿಯ ಕೆಂಭಾವಿಯಲ್ಲಿ (Kembhavi) ನಡೆದಿದೆ.

    ಜೇವರ್ಗಿ ಡಿಪೋಗೆ ಸೇರಿದ್ದ ಬಸ್ ಯಾದಗಿರಿಯಿಂದ (Yadagiri) ಕಲಬುರಗಿ (Kalaburagi) ಕಡೆಗೆ ಹೊರಟಿತ್ತು. ಬಸ್ ಚಾಲಕ ಕಾಸಿಂ ಅಮಲಿನಲ್ಲಿ ತೇಲಾಡ್ತಾ ಬಸ್ ಚಾಲನೆ ಮಾಡುತ್ತಿದ್ದ. ಚಾಲಕನ ಎಡವಟ್ಟಿಗೆ ಗಾಬರಿಗೊಂಡಿದ್ದ ಪ್ರಯಾಣಿಕರು ಕೆಂಭಾವಿಯ ನಾರಾಯಣಪುರ ಎಡದಂಡೆ ಕಾಲುವೆ ಬಳಿ ಬಸ್ ನಿಲ್ಲಿಸಿ ತರಾಟೆ ತಗೆದುಕೊಂಡಿದ್ದಾರೆ. ಇದನ್ನೂ ಓದಿ: ಮತ್ತೊಂದು ಕೇಸ್ – ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

    ಚಾಲಕನ ಎಡವಟ್ಟಿನಿಂದ ಬಸ್ ಕಾಲುವೆಗೆ ಉರುಳಿ ಬೀಳುವ ಅಪಾಯವಿತ್ತು. ಆದರೆ ಕೂಡಲೇ ಎಚ್ಚೆತ್ತ ಪ್ರಯಾಣಿಕರು ಚಾಲಕನ ಪರಿಸ್ಥಿತಿ ಕಂಡು ಬಸ್ ನಿಲ್ಲಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಸರಿಯಾಗಿ ನಿಲ್ಲಲೂ ಆಗದಷ್ಟು ಮದ್ಯಪಾನ ಮಾಡಿ ಬಸ್ ಚಲಾಯಿಸುತ್ತಿದ್ದ ಚಾಲಕನಿಂದಾಗಿ ನಿರ್ವಾಹಕ ಅಂಬರೀಶ್ ಬಸ್ ಚಾಲನೆ ಮಾಡಿಕೊಂಡು ಪ್ರಯಾಣಿಕರನ್ನು ಕರೆದೊಯ್ದಿದ್ದಾರೆ. ಇದನ್ನೂ ಓದಿ: 50% ಆಫರ್ ಪಡೆದು 33 ಲಕ್ಷ ದಂಡ ಪಾವತಿಸಿದ BMTC

  • ವರ್ಗಾವಣೆಯಾದ ಪಿಎಸ್‍ಐರನ್ನು ಅದ್ಧೂರಿ ಮೆರವಣಿಗೆ ಮಾಡಿ, ಬೀಳ್ಕೊಟ್ಟ ಸ್ಥಳೀಯರು

    ವರ್ಗಾವಣೆಯಾದ ಪಿಎಸ್‍ಐರನ್ನು ಅದ್ಧೂರಿ ಮೆರವಣಿಗೆ ಮಾಡಿ, ಬೀಳ್ಕೊಟ್ಟ ಸ್ಥಳೀಯರು

    ಯಾದಗಿರಿ: ನೆಚ್ಚಿನ ಶಿಕ್ಷಕರು ವರ್ಗಾವಣೆಯಾದರೆ ಅಥವಾ ನಿವೃತ್ತಿ ಹೊಂದಿದರೆ ಅವರನ್ನು ವಾಹನದಲ್ಲಿ ಕೂರಿಸಿ ಮೆರವಣಿಗೆ ಮಾಡಿ, ಅದ್ಧೂರಿಯಾಗಿ ಬೀಳ್ಕೊಡುವುದನ್ನು ನಾವು ನೋಡಿದ್ದೇವೆ. ಆದರೆ ಪೊಲೀಸರಿಗೆ ಇಂತಹ ಅವಕಾಶ ಸಿಗುವುದೇ ಅಪರೂಪ. ಯಾದಗಿರಿ ಜಿಲ್ಲೆಯಲ್ಲಿ ಇಂತಹ ಅಪರೂಪ ದೃಶ್ಯ ಕಂಡು ಬಂದಿದೆ.

    ಕೆಂಭಾವಿ ಪೊಲೀಸ್ ಠಾಣೆಯ ಪಿಎಸ್‍ಐ ಅಧಿಕಾರಿ ಬಾಪುಗೌಡ ಪಾಟೀಲ ಅವರು ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದಾರೆ. ಮೂಲತಃ ವಿಜಯಪುರ ಜಿಲ್ಲೆಯ ಬಾಪುಗೌಡ ಅವರು, ಕೆಂಭಾವಿ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಕಾರ್ಯನಿರ್ವಹಿಸಿದ್ದಾರೆ.

    ಬಾಪುಗೌಡ ಅವರ ಉತ್ತಮವಾಗಿ ಸೇವೆ ಸಲ್ಲಿಸಿ, ಜನರ ಮೆಚ್ಚುಗೆ ಪಡೆದಿದ್ದರು. ಹೀಗಾಗಿ ಅವರಿಗೆ ಸ್ಥಳೀಯರು ಬುಧವಾರ ಬೀಳ್ಕೊಡುಗೆ ಸಮಾರಂಭ ಆಯೋಜಿಸಿದ್ದರು. ಜೊತೆಗೆ ಹೊಸದಾಗಿ ಠಾಣೆಗೆ ಆಗಮಿಸಿದ ಪಿಎಸ್‍ಐ ಅಜೀತ್ ಕುಮಾರ್ ಅವರಿಗೆ ಸ್ವಾಗತ ಕಾರ್ಯಕ್ರಮ ಕೂಡ ಠಾಣೆಯಲ್ಲಿ ನಡೆಯಿತು.

    ಬೀಳ್ಕೊಡುಗೆ ಸಮಾರಂಭ ಬಳಿಕ ಸ್ಥಳೀಯರು ಹಾಗೂ ಠಾಣೆಯ ಸಿಬ್ಬಂದಿ ಬಾಪುಗೌಡ ಪಾಟೀಲ್ ಅವರನ್ನು ತೆರೆದ ಜೀಪ್‍ನಲ್ಲಿ ಕೂರಿಸಿ, ಮೆರವಣಿಗೆ ಮಾಡಿದರು. ಈ ವೇಳೆ ಡಿಜೆ ಹಚ್ಚಿ ಅನೇಕರು ಯುವಕರು ಕುಣಿದು ಕುಪ್ಪಳಿಸಿದರು. ಅಷ್ಟೇ ಅಲ್ಲದೆ ಪೊಲೀಸ್ ಸಿಬ್ಬಂದಿ ಕೂಡ ‘ಚುಟುಚುಟ ಅಂತೈತಿ…’ ಎನ್ನುವ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://youtu.be/oUZGj_2k8ng

  • ಯಾದಗಿರಿ: ಕೆಂಭಾವಿ ಪಟ್ಟಣವನ್ನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡದ್ದನ್ನು ಖಂಡಿಸಿ ಬಂದ್

    ಯಾದಗಿರಿ: ಕೆಂಭಾವಿ ಪಟ್ಟಣವನ್ನ ತಾಲೂಕು ಕೇಂದ್ರವಾಗಿ ಘೋಷಣೆ ಮಾಡದ್ದನ್ನು ಖಂಡಿಸಿ ಬಂದ್

    ಯಾದಗಿರಿ: ಸಿಎಂ ಸಿದ್ದರಾಮಯ್ಯ ಬುಧವಾರ ಮಂಡಿಸಿದ ಬಜೆಟ್‍ನಲ್ಲಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡದಿರುವದನ್ನು ಖಂಡಿಸಿ ಇಂದು ಕೆಂಭಾವಿ ಪುರಸಭೆ ಸದಸ್ಯರು ಹಾಗೂ ವಿವಿಧ ಸಂಘಟನೆ ಮುಖಂಡರು ಹಾಗೂ ಪಟ್ಟಣದ ನಿವಾಸಿಗಳು ಕೆಂಭಾವಿ ಪಟ್ಟಣದಲ್ಲಿ ಬಂದ್ ಆಚರಿಸಿದ್ದಾರೆ.

    ಬೆಳಗ್ಗೆಯಿಂದಲೇ ಕೆಂಭಾವಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನಾ ನಿರತರು ಟೈರ್‍ಗೆ ಬೆಂಕಿ ಹಚ್ಚಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆಂಭಾವಿ ಪಟ್ಟಣ ಬಂದ್‍ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿರುವುದರಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ತೊಂದರೆ ಅನುಭವಿಸಿದ್ರು.

    ಸಾಮೂಹಿಕ ರಾಜೀನಾಮೆ: ಕೆಂಭಾವಿ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡದಿರುವುಕ್ಕೆ ಶುಕ್ರವಾರದಂದು ಪುರಸಭೆಯ 23 ಸದಸ್ಯರು ಪಕ್ಷಭೇದ ಮರೆತು ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸದಸ್ಯರ ಸಾಮೂಹಿಕ ರಾಜೀನಾಮೆ ನಂತರ ಇಂದು ಕೆಂಭಾವಿ ಪಟ್ಟಣ ಬಂದ್ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಕೆಂಭಾವಿಯನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

    ಸಿದ್ದರಾಮಯ್ಯನವರು ಬಜೆಟ್ ಮಂಡನೆ ವೇಳೆ ಕೆಂಭಾವಿ ಪಟ್ಟಣವನ್ನು ಹೊರತುಪಡಿಸಿ ಜಿಲ್ಲೆಯ ವಡಗೇರಾ, ಗುರುಮಠಕಲ್, ಹುಣಸಗಿ ಹೋಬಳಿ ಕೇಂದ್ರಗಳನ್ನು ತಾಲೂಕು ಕೇಂದ್ರವೆಂದು ಘೋಷಣೆ ಮಾಡಿದ್ದಾರೆ.