Tag: kempe gowda

  • ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿದ್ದರಾಮಯ್ಯ

    ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿದ್ದರಾಮಯ್ಯ

    ಬೆಂಗಳೂರು: ಕೆಂಪೇಗೌಡರು (Kempe Gowda) ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

    ಬೆಂಗಳೂರಿನ ವಿಧಾನಸೌಧದ (Vidhana Soudha) ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

    ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ (BBMP) ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು. ಇದನ್ನೂ ಓದಿ: ವಿಷ ಪ್ರಾಷನದಿಂದಲೇ 5 ಹುಲಿಗಳು ಸಾವು: ಖಚಿತ ಪಡಿಸಿದ ಸಿಸಿಎಫ್ ಹೀರಾಲಾಲ್

    ಕೆಂಪೇಗೌಡರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ ಸೇರಿದಂತೆ ಅನೇಕ ಪೇಟೆಗಳನ್ನು ತಮ್ಮ ಆಡಳಿತಾವಧಿಯಲ್ಲಿ ನಿರ್ಮಿಸಿದ್ದರು. ಅವರ ಆಡಳಿತ ನಮಗೆಲ್ಲರಿಗೂ ಮಾದರಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ಗ್ವಾಲಿಯರ್‌-ಬೆಂಗಳೂರು ಹೊಸ ರೈಲಿಗೆ ಚಾಲನೆ

    ಬೆಂಗಳೂರು ಅಭಿವೃದ್ಧಿ ಮಾಡುವ ಕನಸನ್ನು ನನಸು ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಸುಮನಹಳ್ಳಿಯ ಜಗಜೀವನ್ ರಾಮ್ ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲಾಗುತ್ತಿದೆ.

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಮಾನನಿಲ್ದಾಣದ ಬಳಿ ಇರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ ಎಂದು ತಿಳಿಸಿದರು.

    ತನಿಖೆಗೆ ಕ್ರಮ :  ಚಾಮರಾಜನಗರದಲ್ಲಿ ಐದು ಹುಲಿಗಳು ಸಾವಿಗೀಡಾಗಿದ್ದು ಈ ಬಗ್ಗೆ ತನಿಖೆ ಕೈಗೊಳ್ಳಲು ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

  • ಕೆಂಪೇಗೌಡ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ – ಅಭಿಯಾನಕ್ಕೆ ಮಂಗಳೂರಿನಲ್ಲಿ ಚಾಲನೆ

    ಕೆಂಪೇಗೌಡ ಕಂಚಿನ ಪ್ರತಿಮೆಗೆ ಪವಿತ್ರ ಮಣ್ಣು ಸಂಗ್ರಹ – ಅಭಿಯಾನಕ್ಕೆ ಮಂಗಳೂರಿನಲ್ಲಿ ಚಾಲನೆ

    ಮಂಗಳೂರು: ಬೆಂಗಳೂರಿನಲ್ಲಿ (Bengaluru) ನಿರ್ಮಾಣಗೊಳ್ಳುತ್ತಿರುವ ನಾಡಪ್ರಭು ಕೆಂಪೇಗೌಡರ (Kempe Gowda) 108 ಅಡಿ ಎತ್ತರದ ಕಂಚಿನ ಪ್ರತಿಮೆ (Bronze Statue) ನಿರ್ಮಾಣಕ್ಕೆ ಪವಿತ್ರ ಮಣ್ಣು (Soil) ಸಂಗ್ರಹಿಸಲಾಗುತ್ತಿದೆ. ಈ ಅಭಿಯಾನಕ್ಕೆ ಬುಧವಾರ ಮಂಗಳೂರಿನ (Mangaluru) ಲೇಡಿಹಿಲ್ ಬಳಿಯಿರುವ ಮನಪಾ ಈಜುಕೊಳದ ಆವರಣದಲ್ಲಿ ಚಾಲನೆ ದೊರಕಿದೆ.

    ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಸುನಿಲ್ ಕುಮಾರ್ (Sunil Kumar), ಸುಸಜ್ಜಿತವಾದ ಪಟ್ಟಣ ಯಾವ ರೀತಿ ಇರಬೇಕೆಂಬ ಕಲ್ಪನೆಯಲ್ಲಿ ಕೆಂಪೇಗೌಡರು ಬೆಂಗಳೂರನ್ನು ನಿರ್ಮಾಣ ಮಾಡಿದರು. ಪ್ರಗತಿಯ ವೇಗದಲ್ಲಿ ಬೆಂಗಳೂರು ಇಂದು ನೂರುಪಟ್ಟು ಬೆಳೆದಿದೆ. ಆದರೆ ಇಡೀ ಬೆಂಗಳೂರು ನಿರ್ಮಾಣಕ್ಕೆ ಭದ್ರ ಅಡಿಪಾಯ ಹಾಕಿದವರು ನಾಡಪ್ರಭು ಕೆಂಪೇಗೌಡರು. ಹಲವಾರು ಆಳರಸರಿಂದ ಇಂದು ನಮ್ಮ ರಾಜ್ಯ ನಿರ್ಮಾಣವಾಗಿದೆ. ಆ ಎಲ್ಲಾ ರಾಜ ಮನೆತನಗಳಿಗೆ ಗೌರವ ಕೊಡುವಂತಹ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿದೆ. ಅದರ ಭಾಗವಾಗಿ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆ ನಿರ್ಮಾಣಗೊಳ್ಳುತ್ತಿದೆ ಎಂದರು.

    ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಮಾತನಾಡಿ, ಇತಿಹಾಸದ ಪುಟಗಳನ್ನು ವಾಸ್ತವಿಕ ಆಧಾರದಲ್ಲಿ ಜನರಿಗೆ ನೀಡಬೇಕಾದ ಕಾರ್ಯ ಆಗಬೇಕಿದೆ. ಈವರೆಗೆ ನಾವು ತಿರುಚಿರುವ ಇತಿಹಾಸವನ್ನೇ ನಂಬಿದ್ದೆವು. ಆದರೆ ದೇಶಕ್ಕಾಗಿ ತ್ಯಾಗ ಮಾಡಿರುವವರ, ಸಾಧನೆಗೈದ ಮಹನೀಯರ ಸ್ಮರಿಸುವ ಕಾರ್ಯ ಆಗಬೇಕಿದೆ ಎಂದರು. ಇದನ್ನೂ ಓದಿ: ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಲೇ ಸ್ಟೇರಿಂಗ್ ಸಮಿತಿ ರಚನೆ – ಕರ್ನಾಟಕದ ಮೂವರಿಗೆ ಸ್ಥಾನ

    ಈ ವೇಳೆ ಅಕ್ಟೋಬರ್ 26ರಿಂದ ನವೆಂಬರ್ 7ರ ವರೆಗೆ ರಾಜ್ಯಾದ್ಯಂತ ನಡೆಯಲಿರುವ ಮಣ್ಣು ಸಂಗ್ರಹ ಅಭಿಯಾನದ ಕೆಂಪೇಗೌಡ ರಥಕ್ಕೆ ಭವ್ಯ ಸ್ವಾಗತ ಕೋರಲಾಯಿತು. ಈ ರಥವು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಿ, ಅಲ್ಲಿನ ಮಣ್ಣನ್ನು ಸಂಗ್ರಹಿಸಿ, ಬೆಂಗಳೂರಿನ ಕೆಂಪೇಗೌಡ ಥೀಮ್ ಪಾರ್ಕ್‌ನಲ್ಲಿ ಹಾಕಲಿದೆ. ಇದನ್ನೂ ಓದಿ: ಅಣ್ವಸ್ತ್ರವನ್ನು ಯಾರು ಕೂಡಾ ಆಶ್ರಯಿಸಬಾರದು: ರಷ್ಯಾಗೆ ರಾಜನಾಥ್ ಸಿಂಗ್ ಸಲಹೆ

    Live Tv
    [brid partner=56869869 player=32851 video=960834 autoplay=true]

  • ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ – ದೆಹಲಿಯಿಂದ ಬೆಂಗ್ಳೂರಿಗೆ ಬಂದ 4,000 ಕೆ.ಜಿ ತೂಕದ ಖಡ್ಗ

    ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ – ದೆಹಲಿಯಿಂದ ಬೆಂಗ್ಳೂರಿಗೆ ಬಂದ 4,000 ಕೆ.ಜಿ ತೂಕದ ಖಡ್ಗ

    ಬೆಂಗಳೂರು: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4,000 ಕೆ.ಜಿ. ತೂಕದ ಖಡ್ಗವು ದೆಹಲಿಯಿಂದ ಬೆಂಗಳೂರನ್ನು ತಲುಪಿದೆ.

    ವಿಶೇಷ ಟ್ರಕ್ ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಸೋಮವಾರ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನೆರೆದಿದ್ದ ಪುರೋಹಿತರು, ಸಚಿವರ ನೇತೃತ್ವದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆಯನ್ನು ನೆರವೇರಿಸಿದರು. ಜೊತೆಗೆ ಈ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಎಲ್ಲ ಕಾರ್ಮಿಕ ಸಿಬ್ಬಂದಿಗೂ ಅಭಿನಂದನೆ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಐಎನಲ್ಲಿ 23 ಎಕರೆ ವಿಸ್ತಾರದಲ್ಲಿ ಕೆಂಪೇಗೌಡರ ಸ್ಮರಣಾರ್ಥ ಹೆರಿಟೇಜ್ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿಗೆ ಬಂದಿಳಿಯುವವರಿಗೆ ಕೆಂಪೇಗೌಡರ ಬೃಹದಾಕಾರದ ಪ್ರತಿಮೆಯ ನೋಟವೇ ಒಂದು ದಿವ್ಯ ಅನುಭೂತಿಯನ್ನು ಮಾಡುವಂತಿರಬೇಕು ಎನ್ನುವುದು ಸರಕಾರದ ಉದ್ದೇಶವಾಗಿದೆ ಎಂದು ಅವರು ಬಣ್ಣಿಸಿದರು.

    ಈ ಸಂದರ್ಭದಲ್ಲಿ ಅಮೆರಿಕದ ‘ಅಕ್ಕ’ ಕನ್ನಡ ಕೂಟಗಳ ಮುಖ್ಯಸ್ಥ ಡಾ.ಅಮರನಾಥ್ ಗೌಡ, ಪ್ರಾಧಿಕಾರದ ಆಯುಕ್ತ ವಿನಯ್ ದೀಪ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಪ್ರಾಧಿಕಾರದ ನಿರ್ದೇಶಕರು ಉಪಸ್ಥಿತರಿದ್ದರು. ಸೋಮವಾರದಂದು ಬೆಂಗಳೂರನ್ನು ತಲುಪಿದ ಕೆಂಪೇಗೌಡರ ಪ್ರತಿಮೆಯ ಖಡ್ಗಕ್ಕೆ (ಕತ್ತಿ) ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಸಾಂಪ್ರದಾಯಿಕವಾಗಿ ಶಕ್ತಿಪೂಜೆಯನ್ನು ನೆರವೇರಿಸಿದರು.