Tag: kempegowda

  • ‘ಕಟ್ಲೆ’ ಸಿನಿಮಾದ ಸಾಂಗ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ

    ‘ಕಟ್ಲೆ’ ಸಿನಿಮಾದ ಸಾಂಗ್ ರಿಲೀಸ್ ಮಾಡಿದ ಡಾರ್ಲಿಂಗ್ ಕೃಷ್ಣ

    ರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ (Kempegowda)ಪ್ರಮುಖಪಾತ್ರದಲ್ಲಿ ನಟಿಸಿರುವ “ಕಟ್ಲೆ” (Katle) ಚಿತ್ರದ ಮೊದಲ ಹಾಡನ್ನು (Song) ನಟ ಡಾರ್ಲಿಂಗ್ ಕೃಷ್ಣ (Darling Krishna)  ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.  ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ” ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    ಹಾಸ್ಯನಟನಾಗಿದ್ದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನಾಯಕನನ್ನಾಗಿ ಮಾಡಿದ ನಿರ್ಮಾಪಕ ಭರತ್ ಗೌಡ ಅವರಿಗೆ ನಾನು ಆಭಾರಿ ಎಂದು ಮಾತು ಆರಂಭಿಸಿದ ನಾಯಕ ಕೆಂಪೇಗೌಡ, ಶ್ರೀವಿದ ಅವರು “ಕಟ್ಲೆ” ಚಿತ್ರಕ್ಕೆ ಅದ್ಭುತವಾದ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ಚೇತನ್ ಕುಮಾರ್ ಬರೆದು ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿರುವ ಈ ಹಾಡು ಎಲ್ಲರಿಗೂ ಮೆಚ್ಚುಗೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ ಅವರಿಗೆ ಧನ್ಯವಾದ ಎಂದರು.

    ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿರುವ ಭರತ್ ಗೌಡ‌ ಅವರು. ಅವರು ನಮ್ಮ‌ ಮೇಲೆ ನಂಬಿಕೆಯಿಟ್ಟು ಬಂಡವಾಳ ಹಾಕಿರುವುದೇ ನಮ್ಮ ಕನಸು ನನಸಾಗಲು ಕಾರಣ. ಅವರಿಗೆ ಹಾಗೂ ನನ್ನ‌ ತಂಡಕ್ಕೆ ನನ್ನ ಧನ್ಯವಾದ. ನಮ್ಮ ಚಿತ್ರದ ಪ್ರಥಮ ಹಾಡು ಇಂದು ಬಿಡುಗಡೆಯಾಗಿದೆ.  ಸದ್ಯದಲ್ಲೇ “ಕಟ್ಲೆ” ಸೆನ್ಸಾರ್ ವೀಕ್ಷಿಸಲಿದ್ದು, ಡಿಸೆಂಬರ್ ವೇಳೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದರು ನಿರ್ದೇಶಕ ಶ್ರೀವಿದ.

    ಶ್ರೀವಿದ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಎಲ್ಲರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಭರತ್ ಗೌಡ ಹೇಳಿದರು‌. ಹಾಡು ಹುಟ್ಟಿದ ಬಗ್ಗೆ ಹಾಡು ಬರೆದಿರುವ ಚೇತನ್ ಕುಮಾರ್ ಹಾಗೂ ಸಂಗೀತ ಸಂಯೋಜಕನೆ ಕುರಿತು ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಮಾಹಿತಿ ನೀಡಿದರು. ನಾಯಕಿಯರಾದ ಅಮೃತ ರಾಜ್, ಸಂಹಿತ, ನಟರಾದ ಉಮೇಶ್, ತಬಲ ನಾಣಿ, ಹರೀಶ್ ರಾಜ್, ಕರಿಸುಬ್ಬು ನಟಿಯರಾದ ಶೃತಿ, ನಿಸರ್ಗ ಅಪ್ಪಣ್ಣ ಮುಂತಾದವರು “ಕಟ್ಲೆ” ಬಗ್ಗೆ ಮಾತನಾಡಿದರು.

  • ‘ಕೆಂಪೇಗೌಡ’ ಚಿತ್ರದ ಬಜೆಟ್ 60 ಕೋಟಿ ರೂಪಾಯಿ: ಫಿಕ್ಸ್ ಆಗಿದ್ದಾರೆ ಹೀರೋ

    ‘ಕೆಂಪೇಗೌಡ’ ಚಿತ್ರದ ಬಜೆಟ್ 60 ಕೋಟಿ ರೂಪಾಯಿ: ಫಿಕ್ಸ್ ಆಗಿದ್ದಾರೆ ಹೀರೋ

    ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜೀವನ ಚರಿತ್ರೆ (biopic) ಸಿನಿಮಾವಾಗುತ್ತಿರುವ ವಿಚಾರವನ್ನು ಈ ಹಿಂದೆ ಓದಿದ್ದೀರಿ. ‘ಧರ್ಮಬೀರು ನಾಡಪ್ರಭು ಕೆಂಪೇಗೌಡ’ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ. ಇದು 60 ಕೋಟಿ ರೂಪಾಯಿಗೂ ಅಧಿಕ ಬಜೆಟ್ ನಲ್ಲಿ ನಿರ್ಮಾಣವಾಗಲಿದೆಯಂತೆ. ಕನ್ನಡದ ನಟರೇ ಕೆಂಪೇಗೌಡ ಪಾತ್ರವನ್ನು ಮಾಡಲಿದ್ದು, ಕೇರಳದಲ್ಲಿ ಅವರು ಕೆಲ ವಿದ್ಯೆಗಳನ್ನು ಕಲಿಯುತ್ತಿದ್ದಾರಂತೆ.

    ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಅಂತೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡರ ಸಾಹಸ ಕಥೆಯನ್ನು ಸಿನಿಮಾ ರೂಪಕ್ಕೆ ಇಳಿಸುತ್ತಿರುವುದು ರಾಜ್ಯ ಪ್ರಶಸ್ತಿ ವಿಜೇತ ಖ್ಯಾತ ನಿರ್ದೇಶಕ ದಿನೇಶ್ ಬಾಬು. ಇನ್ಸ್‌ಪೆಕ್ಟರ್‌ ವಿಕ್ರಂ, ಅಭಿ ಸೇರಿದಂತೆ 50ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿರುವ ದಿನೇಶ್ ಬಾಬು (Dinesh Babu) ಧರ್ಮಬೀರು ನಾಡಪ್ರಭು ಕೆಂಪೇಗೌಡ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹಾಗಿದ್ರೆ ನಾಡಪ್ರಭು ಕೆಂಪೇಗೌಡರಾಗಿ ಬಣ್ಣ ಹಚ್ಚುತ್ತಿರುವವರು ಯಾರು ಅನ್ನೋದನ್ನು ಸದ್ಯಕ್ಕೆ ಚಿತ್ರತಂಡ ರಿವೀಲ್ ಮಾಡಿಲ್ಲ. ಜನಪ್ರಿಯ ನಟರೊಬ್ಬರು ಕೆಂಪೇಗೌಡರಾಗಿ ರಾರಾಜಿಸಲಿದ್ದಾರೆ ಎನ್ನುತ್ತದೆ ಚಿತ್ರತಂಡ. ಸದ್ಯ ಆ ನಟ ತಮ್ಮ ಪಾತ್ರದ ತಯಾರಿಯಲ್ಲಿ ಬ್ಯುಸಿಯಾಗಿದ್ದು, ಮುಂದಿನ ದಿನಗಳಲ್ಲಿ ಅವರನ್ನು ನಿಮ್ಮ ಮುಂದೆ ಪರಿಚಯಿಸುವುದಾಗಿ ಚಿತ್ರತಂಡ ತಿಳಿಸಿದೆ.

    ವೃತ್ತಿಯಲ್ಲಿ ವೈದ್ಯರಾಗಿರುವ ಕಿರಣ್ ತೋಟಂಬೈಲ್ ಸಿನಿಮಾ ಮೇಲಿನ ಪ್ರೀತಿಯಿಂದಾಗಿ ಈ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೆಂಪೇಗೌಡ ಮೆಡಿಕಲ್ ಕಾಲೇಜ್‌ನಲ್ಲಿ ವ್ಯಾಸಂಗ ಮಾಡುವಾಗಲೇ ಮುಂದೊಂದು ದಿನ ಕೆಂಪೇಗೌಡರ ಸಿನಿಮಾ ಮಾಡಬೇಕು ಅಂದುಕೊಂಡಿದ್ದರಂತೆ. ಅದರಂತೆ ಇಂದು ಧರ್ಮಬೀರು ನಾಡಪ್ರಭು ಕೆಂಪೇಗೌಡರ (Dharmabeeru Nadaprabhu Kempegowda)  ಸಿನಿಮಾ ನಿಮ್ಮ ಮುಂದೆ ತರಲು ಸಜ್ಜಾಗಿದ್ದಾರೆ.

     

    ಧರ್ಮೇಂದ್ರ ಕುಮಾರ್ ಅರೇನಹಳ್ಳಿ ಕಥೆ ಬರೆದಿದ್ದು, ಸಂಕೇತ್ ಎಂವೈಎಸ್ ಈ ಸಿನಿಮಾಗೆ ಕ್ಯಾಮೆರಾ ಹಿಡಿಯುತ್ತಿದ್ದು, ಉಜ್ವಲ್ ಕುಲಕರ್ಣಿ ಸಂಕಲನ, ನಿರ್ಮಾಪಕರಾದ ಕಿರಣ್ ತೋಟಂಬೈಲ್ ಸಂಗೀತ ಒದಗಿಸುತ್ತಿದ್ದಾರೆ. ವಿ ನಾಗೇಂದ್ರ ಪ್ರಸಾದ್ ಹಾಗೂ ಸಂತೋಷ್ ನಾಯಕ್ ಸಾಹಿತ್ಯ ಹಾಡುಗಳಿಗಿದ್ದು, ಮಾಸ್ತಿ ಹಾಗೂ ರಘು‌ ನಿಡುವಳ್ಳಿ ಸಂಭಾಷಣೆ ಧರ್ಮಬೀರು ನಾಡಪ್ರಭು ಕೆಂಪೇಗೌಡ ಚಿತ್ರಕ್ಕಿದ್ದು, ಚೇತನ್ ರಾಜ್ ನಿರ್ಮಾಣ ನಿರ್ವಹಣೆಯನ್ನು  ಮಾಡುತ್ತಿದ್ದಾರೆ.  ಕನ್ನಡ ಹಾಗೂ‌‌‌ ಇಂಗ್ಲೀಷ್ ಭಾಷೆಯಲ್ಲಿ ಚಿತ್ರ‌ ನಿರ್ಮಾಣವಾಗಲಿದ್ದು,  ಮೇ ಅಥವಾ ಜೂನ್ ತಿಂಗಳಲ್ಲಿ‌ ಮುಹೂರ್ತ ನಡೆಯಲಿದೆ. ಮುಹೂರ್ತ ಮುಗಿಸಿಕೊಂಡು ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

  • ನಾಯಿ, ನರಿ ಬೊಗಳಿದರೆ ಇತಿಹಾಸ ಬದಲಾಗಲ್ಲ: ನಟ ಚೇತನ್ ಬಗ್ಗೆ ಜಗ್ಗೇಶ್ ಕಟುನುಡಿ

    ನಾಯಿ, ನರಿ ಬೊಗಳಿದರೆ ಇತಿಹಾಸ ಬದಲಾಗಲ್ಲ: ನಟ ಚೇತನ್ ಬಗ್ಗೆ ಜಗ್ಗೇಶ್ ಕಟುನುಡಿ

    ನಾಡಪ್ರಭು ಕೆಂಪೇಗೌಡ ವಿಚಾರವಾಗಿ ನಟ ಚೇತನ್ ಮಾಡಿರುವ ಎಕ್ಸ್ (ಟ್ವೀಟ್) ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತಂತೆ ಸಾಕಷ್ಟು ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ. ನಟ ಜಗ್ಗೇಶ್ (Jaggesh) ಕೂಡ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.

    ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಸಾರ್ವಭೌಮ. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ. ಚಿತ್ರರಂಗದಲ್ಲಿ ನೆಲೆಕಾಣದೆ ಚಾಪು ಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿನಿದೆ ಎಚ್ಚರ  ಎಂದು ಸೋಷಿಯಲ್ ಮೀಡಿಯಾದಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.

    ಚೇತನ್ ವಿರುದ್ಧ ದೂರು

    ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ (Chetan) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ಚೇತನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ನಾಡಪ್ರಭು ಕೆಂಪೇಗೌಡರ (Kempegowda) ವಿರುದ್ಧ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ (Seshadripuram) ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು (complaint) ನೀಡಿದ್ದಾರೆ.

    ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಚೇತನ್ ಬರೆದಿದ್ದರು.

     

    ಈ ಟ್ವೀಟ್ ಅನ್ನು ಆಧರಿಸಿ ಮೂರ್ತಿ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ನೇರ ನಿಷ್ಠುರದ ಕಾರಣದಿಂದಾಗಿ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಇಂತಹ ವಿಚಾರಗಳಿಗಾಗಿ ಹಲವಾರು ಬಾರಿ ಇವರ ಮೇಲೆ ದೂರುಗಳು ದಾಖಲಾಗಿವೆ.

  • ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ವಿರುದ್ಧ ದೂರು

    ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ವಿರುದ್ಧ ದೂರು

    ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ (Chetan) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಟ ಚೇತನ್ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ನಾಡಪ್ರಭು ಕೆಂಪೇಗೌಡರ (Kempegowda) ವಿರುದ್ಧ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ (Seshadripuram) ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು (complaint) ನೀಡಿದ್ದಾರೆ.

    ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಚೇತನ್ ಬರೆದಿದ್ದರು.

    ಈ ಟ್ವೀಟ್ ಅನ್ನು ಆಧರಿಸಿ ಮೂರ್ತಿ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ನೇರ ನಿಷ್ಠುರದ ಕಾರಣದಿಂದಾಗಿ ಆಗಾಗ್ಗೆ ಸುದ್ದಿ ಆಗುತ್ತಲೇ ಇರುತ್ತಾರೆ. ಇಂತಹ ವಿಚಾರಗಳಿಗಾಗಿ ಹಲವಾರು ಬಾರಿ ಇವರ ಮೇಲೆ ದೂರುಗಳು ದಾಖಲಾಗಿವೆ.

  • ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ ನಟ ಚೇತನ್‌ ಪೋಸ್ಟ್‌

    ನಾಡಪ್ರಭು ಕೆಂಪೇಗೌಡರಿಗೆ ಅಗೌರವ ತೋರಿ ನಟ ಚೇತನ್‌ ಪೋಸ್ಟ್‌

    – ನಟ ಚೇತನ್‌ ವಿರುದ್ಧ ಎನ್‌ಸಿಆರ್‌ ದಾಖಲಿಸಿದ ಶೇಷಾದ್ರಿಪುರಂ ಪೊಲೀಸ್‌
    – ಸಿಎಂ ಕ್ರಮ ಕೈಗೊಳ್ಳುವಂತೆ ಅಶ್ವಥ್‌ ನಾರಾಯಣ್‌ ಆಗ್ರಹ

    ಬೆಂಗಳೂರು: ಆಗಾಗ್ಗೆ ಸೋಶಿಯಲ್‌ ಮೀಡಿಯಾ ಪೋಸ್ಟ್‌ಗಳ ಮೂಲಕ ಹೇಳಿಕೆ ನೀಡುತ್ತಾ ವಿವಾದಕ್ಕೆ ಗುರಿಯಾಗುತ್ತಿರುವ ನಟ ಚೇತನ್‌ (Chetan Kumar Ahimsa) ಮತ್ತೊಂದು ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ.

    ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Kempegowda) ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶೇಷಾದ್ರಿಪುರಂ ಪೊಲೀಸರು ಎನ್‌ಸಿಆರ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿನ ಭದ್ರತಾ ಲೋಪಕ್ಕೂ, ಸಂಸದರ ಅಮಾನತಿಗೂ ಸಂಬಂಧವಿಲ್ಲ: ಲೋಕಸಭಾ ಸ್ಫೀಕರ್‌ ಸ್ಪಷ್ಟನೆ

    ಇಬ್ಬರು ಯೋಧರ ಕಥೆ ಎಂದು ಕೆಂಪೇಗೌಡ ಹಾಗೂ ಟಿಪ್ಪು ಸುಲ್ತಾನ್ (Tipu Sultan) ಬಗ್ಗೆ ಬರಹವೊಂದನ್ನು ಚೇತನ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೆಂಪೇಗೌಡ: ಊಳಿಗಮಾನ್ಯ ಜಾತಿ ಲಾಭಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್: ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಈ ಬರಹವನ್ನು ಗಮನಿಸಿ ವಕೀಲ ಆರ್.ಎಲ್.ಎನ್ ಮೂರ್ತಿ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದಾರೆ.

    ತಾನೊಬ್ಬ ನಟ ಎಂದು ಹೇಳಿಕೊಳ್ಳುವ ಚೇತನ್‌ ಅಹಿಂಸಾ ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಾಕಿ ನಾಡಪ್ರಭುಗಳಿಗೆ ಅಗೌರವ ತೋರಿದ್ದಾರೆ. ಅವರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿವೆ. ಈ ದೇಶದ ಪ್ರಜೆಯಾಗಿರದ ಚೇತನ್‌ ಗೌರವಾನ್ವಿತ ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿರುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಆದ್ದರಿಂದ ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಿ, ಸೋಶಿಯಲ್‌ ಮೀಡಿಯಾದಲ್ಲಿ ಹಾಕಿರುವ ಪೋಸ್ಟ್‌ಗಳನ್ನು ತೆಗೆಸಬೇಕು, ಚೇತನ್‌ ಪಾಸ್‌ಪೋರ್ಟ್‌ ರದ್ದು ಮಾಡಿ ಅವರನ್ನ ಮಾತೃದೇಶಕ್ಕೆ ಗಡಿಪಾರು ಮಾಡಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪೆಂಟಗನ್‌ ಮೀರಿಸುವ ವಿಶ್ವದ ಅತಿದೊಡ್ಡ ಕಚೇರಿ ಸಂಕೀರ್ಣ ʻಸೂರತ್ ಡೈಮಂಡ್ ಬೋರ್ಸ್ʼ – ಭಾನುವಾರ ಪ್ರಧಾನಿ ಮೋದಿಯಿಂದ ಉದ್ಘಾಟನೆ

    ಕ್ರಮ ವಹಿಸಲು ಸಿಎಂಗೆ ಆಗ್ರಹ: ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌ ಅಶ್ವಥ್‌ ನಾರಾಯಣ್‌ ಅವರೂ ಸಹ ಚೇತನ್‌ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಚೇತನ್‌ ಎನ್ನುವ ವ್ಯಕ್ತಿಯು ನಾಡಪ್ರಭು ಕೆಂಪೇಗೌಡರ ಕುರಿತು ಕೀಳು ಅಭಿರುಚಿಯ ಪದ ಬಳಕೆ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ. ಯಾವುದೇ ಒಂದು ಸಮುದಾಯದ ಭಾವನೆಗೆ ಧಕ್ಕೆ ತಂದು ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರನ್ನು ನಿಯಂತ್ರಿಸಲು ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ ಎನ್ನುವುದಕ್ಕೆ ಇಷ್ಟೊಂದು ಸ್ಪಷ್ಟ ನಿದರ್ಶನ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆತ್ಮಾಹುತಿಗೂ ಪ್ಲಾನ್ ಮಾಡಿದ್ದ ಸಂಸತ್ ದಾಳಿಕೋರರು – ಶೀಘ್ರವೇ ಪ್ರತಾಪ್ ಸಿಂಹ ವಿಚಾರಣೆ

  • ನಟಿ ಅನು ಗೌಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ನಟಿ ಅನು ಗೌಡ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ- ಆಸ್ಪತ್ರೆಗೆ ದಾಖಲು

    ನ್ನಡ ಕಿರುತೆರೆ, ಹಿರಿತೆರೆಯಲ್ಲಿ ಆಕ್ಟೀವ್ ಆಗಿರುವ ಅನು ಗೌಡ (Actress Anu Gowda) ಅವರ ಮೇಲೆ ಜಮೀನು ವಿವಾದದ ವಿಚಾರವಾಗಿ ಹಲ್ಲೆ ನಡೆದಿದೆ. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ಪರಿಚಿತರಾಗಿರುವ ಅನು ಗೌಡ ಮೇಲೆ ಜಮೀನು ವಿಚಾರಕ್ಕೆ ಸ್ಥಳಿಯ ನಿವಾಸಿಗಳಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಇದನ್ನೂ ಓದಿ:ನೀನು ಆಂಟಿಯಾಗಿ 1 ವರ್ಷದ ಅನುಭವವಿದೆ- ಬರ್ತ್‌ಡೇಯಂದು ಪತ್ನಿ ಕಾಲೆಳೆದ ನಟ ಸುದರ್ಶನ್

    ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸದ್ಯ ನಟಿ ಅನು ಗೌಡ ಸಾಗರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ- ಮೋಹನ್ ಎನ್ನುವರು ಅನು ಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಸ್ಪಡಿಯಲ್ಲಿರುವ ಜಮೀನನ್ನು ನಟಿ ಅನು, ಅಪ್ಪ ಅಮ್ಮ ನೋಡಿಕೊಳ್ಳುತ್ತಿದ್ದು, ಅನು ಗೌಡ ಆಗಾಗ ಬೆಂಗಳೂರಿನಿಂದ ಬಂದು ಹೋಗುತ್ತಿದ್ದರು. ಆದರೆ, ಜಮೀನು ವಿವಾದ ವಿಚಾರಕ್ಕೆ ಅನು ಗೌಡ ಮೇಲೆ ಹಲ್ಲೆ ಮಾಡಲಾಗಿದೆ.

    ನಟಿ ಅನು ಗೌಡ ತಮಿಳು ಸೇರಿದಂತೆ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ವಿಷ್ನುವರ್ಧನ್, ಶಿವಣ್ಣ, ಅಪ್ಪು ಹಾಗೂ ಸುದೀಪ್ ಸಿನಿಮಾಗಳಲ್ಲಿ ಸೈಡ್ ಆಕ್ಟಿಂಗ್ ಮಾಡಿದ್ದಾರೆ. ಕನ್ನಡದಲ್ಲಿ ಸವಿಸವಿ ನೆನಪುಮ ಭೂಗತ, ವಿಷ್ಣುವರ್ಧನ್ ಜೊತೆಗೆ ಸ್ಕೂಲ್ ಮಾಸ್ಟರ್, ಕಿಚ್ಚ ಸುದೀಪ್ ಜೊತೆ ಕೆಂಪೇಗೌಡ ಚಿತ್ರದಲ್ಲಿ ನಟಿಸಿದ್ದಾರೆ. ‘ದಂಡಂ ದಶಗುಣಂ’ ಚಿತ್ರದಲ್ಲಿ ರಮ್ಯಾ ಸಹೋದರಿ ಪಾತ್ರದಲ್ಲಿ ನಟಿಸಿದ್ದಾರೆ.  ಸುಗ್ರೀವ, ಹುಡುಗರು ಸಿನಿಮಾದಲ್ಲಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • LKGಯಿಂದ ಸ್ನಾತಕೋತ್ತರ ಪದವಿವರೆಗೂ ಕೆಂಪೇಗೌಡರ ಪಠ್ಯ ಸೇರಿಸಿ: ನಂಜಾವಧೂತ ಶ್ರೀ

    LKGಯಿಂದ ಸ್ನಾತಕೋತ್ತರ ಪದವಿವರೆಗೂ ಕೆಂಪೇಗೌಡರ ಪಠ್ಯ ಸೇರಿಸಿ: ನಂಜಾವಧೂತ ಶ್ರೀ

    ಬೆಂಗಳೂರು: ನಾಡಪ್ರಭು ಕೆಂಪೇಗೌಡರ (Kempegowda) 514ನೇ ಜಯಂತಿಯನ್ನು ವಿಧಾನಸೌಧದಲ್ಲಿ (Vidhana Soudha) ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ನಂಜಾವಧೂತ ಸ್ವಾಮೀಜಿ (Nanjavadutha Swamiji) ಸರ್ಕಾರ ಪಠ್ಯದಲ್ಲಿ ಎಲ್‍ಕೆಜಿಯಿಂದ ಪಿಜಿವರೆಗೂ ಕೆಂಪೇಗೌಡರ ಪಠ್ಯ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು.

    ಮುಂದುವರೆದು ಮಾತನಾಡಿದ ಅವರು, ಕೆಂಪೇಗೌಡರ ಫೋಟೋವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಳವಡಿಕೆ ಮಾಡಲು ಸರ್ಕಾರ ಆದೇಶ ಹೊರಡಿಸಬೇಕು. ಲಾಲ್ ಬಾಗ್ ಗೋಪುರದ ಬಳಿ ಕೆಂಪೇಗೌಡರ ಥೀಮ್ ಪಾರ್ಕ್ ಸ್ಥಾಪನೆ ನಿರ್ಮಿಸಬೇಕು. ಇಂಗ್ಲೆಂಡ್‍ನಲ್ಲಿ ಕೆಂಪೇಗೌಡರ ಪುತ್ಥಳಿ ಮಾಡಲು ಅಲ್ಲಿನ ಮೇಯರ್ ಸಿದ್ದರಿದ್ದಾರೆ. ಸರ್ಕಾರ ಪತ್ರ ವ್ಯವಹಾರ ಮಾಡಿ ಅದನ್ನು ಮಾಡಿಸಬೇಕು. ಸಂಕ್ರಾಂತಿ ಹಬ್ಬದ ವೇಳೆ ಕೆಂಪೇಗೌಡರ ಹೆಸರಲ್ಲಿ ಅಂತರಾಷ್ಟ್ರೀಯ ಬೆಂಗಳೂರು ಹಬ್ಬ ಆಚರಿಸಬೇಕು. ಕೆಂಪೇಗೌಡರ ಹೆಸರಲ್ಲಿ ಒಂದು ಜಿಲ್ಲೆ ಸ್ಥಾಪನೆಯಾಗಬೇಕು. ಅವರ ಹೆಸರಲ್ಲಿ ಒಂದು ವಿಶ್ವವಿದ್ಯಾಲಯ ಪ್ರಾರಂಭ ಮಾಡಬೇಕು. ಬೆಂಗಳೂರು ವಿವಿ ಸೆಂಟ್ರಲ್ ಯುನಿವರ್ಸಿಟಿಗೆ ಕೆಂಪೇಗೌಡರ ಹೆಸರಿಡಬೇಕು ಎಂದು ಸರ್ಕಾರವನ್ನ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮೋದಿ ಪ್ರಶ್ನಿಸಿದ್ದ ಅಮೆರಿಕ ಪತ್ರಕರ್ತೆಗೆ ಕಿರುಕುಳ – ವೈಟ್‍ಹೌಸ್ ಪ್ರತಿಕ್ರಿಯೆ

    ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್ (D.K Shivakumar), ಕೆಂಪೇಗೌಡರನ್ನ ಕೇವಲ ಒಕ್ಕಲಿಗರಿಗೆ ಸೀಮಿತ ಮಾಡುವುದು ಬೇಡ. ಅವರು ರಾಷ್ಟ್ರದ ಆಸ್ತಿಯಾಗಿದ್ದಾರೆ. ಬಹಳ ಉತ್ಸಾಹದಲ್ಲಿ ಬೆಂಗಳೂರು ಅಭಿವೃದ್ಧಿ ಖಾತೆ ತೆಗೆದುಕೊಂಡಿದ್ದೇನೆ. ಬೆಂಗಳೂರನ್ನು ಮಾದರಿ ನಗರವನ್ನಾಗಿಸಲು ಸಲಹೆಗಳನ್ನು ನೀಡುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಹಿಂದೆ ಕಾಂಗ್ರೆಸ್ ಅವಧಿಯಲ್ಲಿ ನಿಂತು ಹೋಗಿದ್ದ ಸ್ಟೀಲ್ ಬ್ರಿಡ್ಜ್ ನಿರ್ಮಾಣದ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಿದ್ದಾರೆ.

    ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಡಿ.ಕೆ ಶಿವಕುಮಾರ್ ಅವರು ಕೆಂಪೇಗೌಡರಂತೆ ದಿಟ್ಟ ನಾಯಕ ಎಂದು ಬಣ್ಣಿಸಿದರು. ಅವರು ಮುಖ್ಯಮಂತ್ರಿ ಆಗಬೇಕು ಎಂಬ ಬಯಕೆಯನ್ನು ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಯುವ ಉದ್ಯಮಿ ನಿತಿನ್ ಕಾಮತ್, ಅಂತಾರಾಷ್ಟ್ರೀಯ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜಯದೇವ ಹೃದ್ರೋಗ ಸಂಸ್ಥೆಗೆ ಈ ವರ್ಷದ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ: ಸಿದ್ದರಾಮಯ್ಯ

    ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ: ಸಿದ್ದರಾಮಯ್ಯ

    ಹಾಸನ: ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್, ಕೊರೊನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಪಿಎಸ್‍ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್‍ಕಾಯಿನ್‍ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಹಾಸನ (Hassan) ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ. ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಿತ್ತು ಎಂದರು. ಇದನ್ನೂ ಓದಿ: ಅಕ್ಕಪಕ್ಕ ಕೂರಿಸಿಕೊಂಡು ಡಿಕೆಶಿ-ಅಶ್ವಥ್‍ಗೆ ನಿರ್ಮಲಾನಂದ ಶ್ರೀಗಳು ಕಿವಿಮಾತು

    ಗ್ಯಾರಂಟಿ ಯೋಜನೆ (Guarantee Scheme) ಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ (Gruhajyoti) ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮಿ (Gruhalaxmi Scheme) ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದು ಹೇಳಿದರು.

    ಕೆಂಪೇಗೌಡರು ಜನಪರ ಹಾಗೂ ಜಾತ್ಯಾತೀತ ದೊರೆ: ಕೆಂಪೇಗೌಡರು (Kempegowda) ಜನಪರ ಹಾಗೂ ಜಾತ್ಯಾತೀತ ದೊರೆಯಾಗಿದ್ದರು. ಇವರ ಕಾಲದಲ್ಲಿ ಎಲ್ಲರೂ ಸೌಹಾರ್ದತೆಯಿಂದಿದ್ದರು. ಇಂತಹ ಮಾದರಿ ನಾಡಪ್ರಭುವನ್ನು ಸ್ಮರಿಸುವ ಸಲುವಾಗಿ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರದ ವತಿಯಿಂದಲೇ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ಆದೇಶ ನೀಡಲಾಗಿತ್ತು. ಕೆಂಪೇಗೌಡರ ಪ್ರತಿಮೆಯನ್ನೂ ನಮ್ಮ ಅವಧಿಯಲ್ಲಿಯೇ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕೆಂಪೇಗೌಡರು ಒಬ್ಬ ಪ್ರಗತಿಪರವಾದ, ಜಾತ್ಯಾತೀತವಾದ ದೊರೆಯನ್ನು ಸ್ಮರಿಸುವ ದಿನವಾಗಿದೆ ಎಂದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ನಾಡಪ್ರಭು ಕೆಂಪೇಗೌಡರ ಸಿನಿಮಾಗೆ ಸಿದ್ಧತೆ: ಡಾ.ರಾಜ್ ಆಸೆಯನ್ನ ಮೊಮ್ಮಗ ಯುವ ಈಡೇರಿಸ್ತಾನಾ?

    ನಾಡಪ್ರಭು ಕೆಂಪೇಗೌಡರ ಸಿನಿಮಾಗೆ ಸಿದ್ಧತೆ: ಡಾ.ರಾಜ್ ಆಸೆಯನ್ನ ಮೊಮ್ಮಗ ಯುವ ಈಡೇರಿಸ್ತಾನಾ?

    ಸ್ಯಾಂಡಲ್ ವುಡ್ ನಲ್ಲಿ ಅಚ್ಚರಿಯ ಘಟನೆಗಳು ನಡೆಯುತ್ತಿವೆ. ಅದರಲ್ಲೂ ಸದ್ದಿಲ್ಲದೇ ನಡೆಯುವ ಕೆಲಸಗಳೇ ಸಖತ್ ಸದ್ದು ಮಾಡುತ್ತವೆ. ಈಗ ಸದ್ದು ಮಾಡುವಂತಹ ಸುದ್ದಿಯೊಂದು ಗಾಂಧಿನಗರದಲ್ಲಿ ಹರಿದಾಡುತ್ತಿದ್ದು, ಅದು ನಿಜವಾದರೆ ತೆರೆಗೆ ಬರಲಿದ್ದಾನೆ ಬೆಂಗಳೂರು ನಿರ್ಮಾತೃ ಕೆಂಪೇಗೌಡ.

    ಹೌದು, ನಾಡಪ್ರಭು ಕೆಂಪೇಗೌಡ (Kempegowda) ಅವರ ಜೀವನದ ಕುರಿತಾಗಿ ಸಿನಿಮಾವೊಂದು ತಯಾರಾಗಲಿದ್ದು, ಅದರ ನೇತೃತ್ವವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಟಿ.ಎಸ್ ನಾಗಾಭರಣ (TS Nagabharana) ವಹಿಸಿದ್ದಾರೆ. ಈಗಾಗಲೇ ನಾಗಾಭರಣ ಕಥೆಯನ್ನೂ ಸಿದ್ಧಪಡಿಸಿದ್ದು, ನಾಯಕನಿಗಾಗಿ ಅವರು ಕಾಯುತ್ತಿದ್ದಾರಂತೆ.

    ಅಂದುಕೊಂಡಂತೆ ಆಗಿದ್ದರೆ ನಾಡಪ್ರಭು ಕೆಂಪೇಗೌಡರ ಬಗ್ಗೆ ಬಹಳ ವರ್ಷಗಳ ಹಿಂದೆಯೇ ಸಿನಿಮಾ ಬರಬೇಕಿತ್ತು. ಕೆಂಪೇಗೌಡರ ಪಾತ್ರವನ್ನು ಮಾಡುವಂತೆ ವರನಟ ಡಾ.ರಾಜ್ ಕುಮಾರ್ ಅವರನ್ನು ಕೇಳಲಾಗಿತ್ತು. ಆ ಪಾತ್ರವನ್ನು ಮಾಡುವ ಆಸೆ ಡಾ.ರಾಜ್ ಕುಮಾರ್ ಅವರಿಗೆ ಇದ್ದರೂ, ಕೆಂಪೇಗೌಡರಿಗೆ ಅಪಚಾರವಾಗದಂತಹ ಸ್ಕ್ರಿಪ್ಟ್‌ಗಾಗಿ ಡಾ.ರಾಜ್ ಕಾದರು. ಆದರೆ, ಕೊನೆಗೂ ಅವರಿಗೆ ಅದು ಸಿಗಲಿಲ್ಲ.

    ಇದೀಗ ಕೆಂಪೇಗೌಡರ ಕುರಿತಾದ ಸಿನಿಮಾ ಮಾಡುವ ಅವಕಾಶ ಮತ್ತೆ ದೊಡ್ಮನೆ ಕುಟುಂಬಕ್ಕೆ ಬಂದಿದೆ ಎಂದು ಹೇಳಲಾಗುತ್ತಿದೆ. ಕೆಂಪೇಗೌಡ ಅವರ ಪಾತ್ರವನ್ನು ಯುವರಾಜ್ ಕುಮಾರ್ (Yuvraj Kumar) ಮಾಡಬೇಕು ಎನ್ನುವುದು ನಿರ್ದೇಶಕರ ಆಸೆ. ಯುವರಾಜ್ ಕುಮಾರ್ ಅವರನ್ನೇ ಮನಸ್ಸಲ್ಲಿಟ್ಟುಕೊಂಡು ಚಿತ್ರಕಥೆ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಮುಂದೆ ಏನಾಯಿತು ಎನ್ನುವ ವಿವರ ಲಭ್ಯವಿಲ್ಲ.

    ಸದ್ಯ ಯುವ ರಾಜ್ ಕುಮಾರ್ ‘ಯುವ’ ಸಿನಿಮಾದ ಶೂಟಿಂಗ್‌ನಲ್ಲಿದ್ದಾರೆ. ಮಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾದ ನಂತರ ಅವರು ಮತ್ತೊಂದು ಕಥೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಕೆಂಪೇಗೌಡ ಸಿನಿಮಾ ಒಪ್ಪುತ್ತಾರಾ, ತಾತನ ಆಸೆಯನ್ನು ಯುವ ಈಡೇರಿಸುತ್ತಾರಾ ಎನ್ನುವುದು ಕುತೂಹಲದ ಪ್ರಶ್ನೆ.

  • ಸೀರೆಯುಟ್ಟು ಮಿಂಚಿದ ತುಪ್ಪದ ಬೆಡಗಿ ರಾಗಿಣಿ

    ಸೀರೆಯುಟ್ಟು ಮಿಂಚಿದ ತುಪ್ಪದ ಬೆಡಗಿ ರಾಗಿಣಿ

    ಚಂದನವನದ ಚೆಂದದ ನಟಿ ರಾಗಿಣಿ ದ್ವಿವೇದಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಟುನ್ ಟುನ್ ಅಂತಾ ಇತ್ತೀಚಿಗೆ ಚಂದನ್ ಶೆಟ್ಟಿ ಜೊತೆ ರಾಗಿಣಿ ಸೊಂಟ ಬಳುಕಿಸಿದ್ದರು. ಈಗ ಸೀರೆಯುಟ್ಟು ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ.

    ಕಿಚ್ಚ ಸುದೀಪ್, ದುನಿಯಾ ವಿಜಯ್, ಶರಣ್, ಶ್ರೀನಗರ ಕಿಟ್ಟಿ ಸೇರಿದಂತೆ ಹಲವರಿಗೆ ನಾಯಕಿಯಾಗಿ ಚಂದನವನದಲ್ಲಿ ಗುರುತಿಸಿಕೊಂಡಿದ್ದಾರೆ. ಮಹಿಳಾ ಪ್ರಧಾನ ಚಿತ್ರಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ:ವರುಣ್ ಧವನ್ ಜೊತೆ ಇಂಗ್ಲೆಂಡ್‌ಗೆ ಹಾರಿದ ಸಮಂತಾ

    ಹೂವಿನ ಡಿಸೈನ್ ಇರುವ ಬ್ಯೂಟಿಫುಲ್ ಸೀರೆಯುಟ್ಟು ರಾಗಿಣಿ ದ್ವಿವೇದಿ ಕಂಗೊಳಿದ್ದಾರೆ. ನಟಿಯ ಲುಕ್ ಇದೀಗ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿದೆ. ಸೀರೆಯಲ್ಲೂ ಕೂಡ ನಟಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

     

    View this post on Instagram

     

    A post shared by Ragini Dwivedi (@rraginidwivedi)

    ರಾಗಿಣಿ ದ್ವಿವೇದಿ ಅವರು ಬಾಲಿವುಡ್, ಕನ್ನಡ ಸಿನಿಮಾಗಳು ಸೇರಿದಂತೆ 8ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ವರ್ಷ ಒಂದೊಂದೇ ಸಿನಿಮಾಗಳು ತೆರೆಗೆ ಬರಲಿದೆ.