Tag: Kendra Sarkar

  • ಪ್ರತಿಭಟನಾ ಸ್ಥಳದಲ್ಲಿಯೇ ದೀಪಾವಳಿ ಆಚರಿಸಲಿದ್ದಾರೆ: ರಾಕೇಶ್ ಟಿಕಾಯತ್

    ಪ್ರತಿಭಟನಾ ಸ್ಥಳದಲ್ಲಿಯೇ ದೀಪಾವಳಿ ಆಚರಿಸಲಿದ್ದಾರೆ: ರಾಕೇಶ್ ಟಿಕಾಯತ್

    ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನು ಕಾಯ್ದೆಯನ್ನು ರದ್ದುಪಡಿಸದ ಹಿನ್ನೆಲೆ ಈ ವರ್ಷ ದೆಹಲಿಯ ಪ್ರತಿಭಟನಾ ಸ್ಥಳದಲ್ಲಿಯೇ ರೈತರು ದೀಪಾವಳಿ ಹಬ್ಬವನ್ನು ಆಚರಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಸೋಮವಾರ ಹೇಳಿದ್ದಾರೆ.

    ರೈತರ ಧರಣಿ ಮುಂದುವರೆಯಲಿದ್ದು, ಸರ್ಕಾರದ ಹಾದಿಗೆ ಯಾವುದೇ ಅಡೆತಡೆಗಳನ್ನು ಸೃಷ್ಟಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳಲು ರೈತರು ಸಿದ್ಧರಾಗಿದ್ದಾರೆ. ಆದರೆ ಸರ್ಕಾರಕ್ಕೆ ಇಷ್ಟವಿಲ್ಲ ಮತ್ತು ವಾಸ್ತವವಾಗಿ ಅವರೆ ತಡೆಯುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: 5 ಕೋಟಿ ಮೌಲ್ಯದ ತಿಮಿಂಗಿಲದ ವಾಂತಿ ವಶ – ಇಬ್ಬರ ಬಂಧನ

    ಆಲುಗಡ್ಡೆ, ನವಣೆಯಿಂದ ರೈತರಿಗೆ ಕನಿಷ್ಠ ಬೆಲೆ ಸಿಗುತ್ತಿಲ್ಲ. ಇದರಿಂದ ರೈತ ಸಮುದಾಯ ಕಂಗಾಲಾಗಿದೆ. ರೈತರು ಗೋಳು ಕೇಳುವವರಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ಕರಾಳ ಕಾನೂನನ್ನು ಮಾಡಿ ರೈತರಿಗಾಗಿ ಅಂತ ಹೇಳುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಜುಕೇಶನ್ ಸಿಸ್ಟಮ್ ಸರಿಯಿಲ್ಲ- ಸೆಲ್ಫಿ ವೀಡಿಯೋ ಮಾಡಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

    ಕಳೆದ ವಾರ ಆಗ್ರಾದ ಜಗದೀಶ್‍ಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಅರುಣ್ ವಾಲ್ಮೀಕಿ ಅವರ ಮನೆಗೆ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದ ರಾಕೇಶ್ ಟಿಕಾಯತ್ ಅವರು, ಸಭೆಯಲ್ಲಿ ” ಕಾರ್ಮಿಕ ಅರುಣ್ ವಾಲ್ಮೀಕಿ ಮತ್ತು ರೈತರ ನಡುವೆ ಯಾವುದೇ ವ್ಯತ್ಯಾಸವಿಲ್ಲ” ಎಂದು ಆರೋಪಿಸಿದ್ದಾರೆ.

    ಇದೇ ವೇಳೆ ಲಖೀಂಪುರ ಖೇರಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ನೀಡಿದಂತೆ ಅರುಣ್ ವಾಲ್ಮೀಕಿ ಕುಟುಂಬಕ್ಕೂ 45 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಅಲ್ಲದೇ ಈ ಪ್ರಕರಣದ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ ನಿಜವಾದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ- ಸಾವು-ಬದುಕಿನ ನಡುವೆ ಮಗ ಹೋರಾಟ

    ಅರುಣ್ ವಾಲ್ಮೀಕಿ ಅವರು ಜಗದೀಶ್‍ಪುರ ಪೊಲೀಸ್ ಠಾಣೆಯ ಮಲ್ಖಾನಾದಿಂದ 25 ಲಕ್ಷ ರೂ.ಗಳನ್ನು ಕದ್ದಿದ್ದಾರೆ ಎಂದು ಆಧಾರ ರಹಿತವಾಗಿ ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಿ ಹತ್ಯೆಗೈದಿರುವ ರೀತಿ ಸಹನೀಯವಲ್ಲ. ಅಲ್ಲದೇ ಪೊಲೀಸ್ ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗಿದೆ ಎಂದು ಹೇಳಲಾಗಿದ್ದ ಅರುಣ್ ಅವರ ಪತ್ನಿ, ವೃದ್ಧ ತಾಯಿ ಮತ್ತು ಇತರ ಕುಟುಂಬ ಸದಸ್ಯರಿಗೆ ಚಿಕಿತ್ಸೆಯನ್ನು ಕೂಡ ನೀಡಲಾಗಿಲ್ಲ. ಪೊಲೀಸರ ಸಹಕಾರದಿಂದಲೇ ಈ ಕಳ್ಳತನ ನಡೆದಿದ್ದು, ಸಿಬಿಐ ತನಿಖೆಯಲ್ಲಿ ಸಂಪೂರ್ಣ ಸತ್ಯ ಹೊರಬರಲಿದೆ ಎಂದು ಆರೋಪಿಸಿದ್ದಾರೆ.