Tag: Kendriya Vihar Apartment

  • ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ – ಡಿಕೆಶಿ ಖಡಕ್‌ ವಾರ್ನಿಂಗ್‌

    ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ – ಡಿಕೆಶಿ ಖಡಕ್‌ ವಾರ್ನಿಂಗ್‌

    ಬೆಂಗಳೂರು: ಅನೇಕ ಕಡೆ ಖಾಸಗಿಯವರು ರಾಜಕಾಲುವೆ ಒತ್ತುವರಿ (Rajkaluve Encroachment) ತೆರವುಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇವರು ಕೆಲಸ ಮಾಡಲು ಬಿಡುತ್ತಿಲ್ಲ. ತುರ್ತು ಸಂದರ್ಭದಲ್ಲಿ ಇವುಗಳಿಗೆ ಅವಕಾಶವಿಲ್ಲ. ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿದೆ. ಯಾವುದನ್ನೂ ಪರಿಗಣಿಸದೇ ಕೂಡಲೇ ಎಲ್ಲಾ ಒತ್ತುವರಿಗಳನ್ನು ತೆರವುಗೊಳಿಸಿ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಅಡಿಯಲ್ಲಿ ಕೂಡಲೇ ಆದೇಶ ಹೊರಡಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದರು.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡಿಎ ಮತ್ತು ಬಿಬಿಎಂಪಿಗೂ ಸೂಚನೆ ನೀಡಿದ್ದೇನೆ. ಯಾರೇ ಖಾಸಗಿಯವರು ಅಡ್ಡಿ ಪಡಸಿದರೂ ನಾವು ನಮ್ಮ ಕೆಲಸ ಮಾಡುತ್ತೇವೆ. ಇಂತಹ ಸಂದರ್ಭದಲ್ಲಿ ನ್ಯಾಯಲಯದ ಪ್ರಕರಣ ಮುಖ್ಯವಲ್ಲ. ನಮಗೆ ಸಾರ್ವಜನಿಕರ ಹಿತ ಮುಖ್ಯ. ನೀರು ಸರಾಗವಾಗಿ ಹರಿಯುವ ಕಡೆ ಒತ್ತುವರಿ ತೆರವುಗೊಳಿಸಲು ಕೂಡಲೇ ಕೆಲಸ ಮಾಡಬೇಕು ಎಂದು ಆದೇಶ ನೀಡಿದ್ದೇನೆಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಕಟ್ಟಡ ಕುಸಿದು 8 ಕಾರ್ಮಿಕರು ಸಾವು ಪ್ರಕರಣ – ಎಇಇ ಅಮಾನತು

    ಯಲಹಂಕದ ಕೇಂದ್ರಿಯ ವಿಹಾರದಲ್ಲಿ 8 ಬ್ಲಾಕ್ ಗಳಿದ್ದು ಸುಮಾರು 600ಕ್ಕೂ ಹೆಚ್ಚು ಫ್ಲಾಟ್‌ಗಳಿವೆ. ಇವುಗಳನ್ನು ಸದ್ಯದ ಮಟ್ಟಿಗೆ ಬಿಬಿಎಂಪಿ ರಕ್ಷಣಾ ಕಾರ್ಯಕ್ಕಾಗಿ ಸುಪರ್ಧಿಗೆ ತೆಗೆದುಕೊಂಡಿದೆ. ಶೇ.95 ರಷ್ಟು ನಿವಾಸಿಗಳು ಸ್ಥಳಾಂತರಕ್ಕೆ ಸಹಕಾರ ನೀಡಿದ್ದಾರೆ. 20 ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದಿದ್ದರೂ ನಾವು ಇರುತ್ತೇವೆ ಎಂದು ಹೇಳಿದ್ದಾರೆ. ಅವರನ್ನು ಇಲ್ಲಿಯೇ ಬಿಡಲು ಆಗುವುದಿಲ್ಲ. ಏಕೆಂದರೆ ಕುಡಿಯಲು ನೀರಿಲ್ಲ, ತಿನ್ನಲು ಆಹಾರವಿಲ್ಲ ಹೀಗಿದ್ದಾಗ ಏನಾದರೂ ತೊಂದರೆ ಆದರೆ ನಾವು ಜವಾಬ್ದಾರರಾಗುತ್ತೇವೆ. ಈ ಕಾರಣಕ್ಕೆ ಅವರ ಮನವೊಲಿಸಿ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ʻದಂಗಲ್‌ʼ ಸಿನಿಮಾ ಗಳಿಸಿದ್ದು 2,000 ಕೋಟಿ, ನಮಗೆ ಸಿಕ್ಕಿದ್ದು ಕೇವಲ 1 ಕೋಟಿ: ಬಬಿತಾ ಫೋಗಟ್‌

    ಅನೇಕರು ವಯಸ್ಸಾದವರು ಮನೆ ಬಿಟ್ಟು ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಮನೆಯ ಬಗ್ಗೆ ಭಾವನಾತ್ಮಕವಾಗಿ ಯೋಚನೆ ಮಾಡುತ್ತಿದ್ದಾರೆ. ಅಂತಹವರಿಗೆ ಒಂದು ವಾರದ ಮಟ್ಟಿಗೆ ಹತ್ತಿರದಲ್ಲಿಯೇ ವಸತಿಗೃಹಗಳಲ್ಲಿ ವ್ಯವಸ್ಥೆ ಮಾಡಿಕೊಡಲಾಗುವುದು. ಇದು ನಮ್ಮ ಜವಾಬ್ದಾರಿ. ಇಲ್ಲಿನ ನಿವಾಸಿಗಳ ಸಂಘದವರೂ ಸಹಕಾರ ನೀಡುತ್ತಿದ್ದಾರೆ. ತೊಂದರೆಗೆ ಒಳಗಾದವರಿಗೆ ಅವರ ಮನೆಯಂತೆಯೇ ಸೌಲಭ್ಯ ಕಲ್ಪಿಸಿಕೊಡಲಾಗುವುದು. ನಿವಾಸಿಗಳು ಮುಜುಗರಕ್ಕೆ ಒಳಗಾಗದೇ ಅಧಿಕಾರಿಗಳ ಬಳಿ ಕೇಳಿ ಸೌಲಭ್ಯ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

    ಮಳೆ ನೀರು ತುಂಬಿಕೊಂಡಿರುವುದಕ್ಕೆ ಭವಿಷ್ಯದಲ್ಲಿ ಪರಿಹಾರವೇನು ಎಂದು ಕೇಳಿದಾಗ, ಬೆಂಗಳೂರಿನ ಹಾಗೂ ಯಲಹಂಕ ಇತಿಹಾಸದಲ್ಲಿಯೇ 115- 120 ವರ್ಷಗಳ ನಂತರ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ನಮಗೆ ಇಷ್ಟು ಜಾಸ್ತಿ ಮಳೆ ಬರುತ್ತದೆ ಎನ್ನುವ ಕಲ್ಪನೆಯೂ ಇರಲಿಲ್ಲ. ಎಲ್ಲೆಲ್ಲಿ ನೀರು ನುಗ್ಗುತ್ತಿದೆ ಹಾಗೂ ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಮಾಡುವುದಕ್ಕೆ ಜಾಗಗಳನ್ನು ಗುರುತಿಸಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ:  ಅಮರಾವತಿ ಡ್ರೋನ್ ಸಮ್ಮೇಳನ 2024 | ಆಕಾಶವನ್ನೇ ಬೆಳಗಿದ 5,500 ಡ್ರೋನ್, 5 ಗಿನ್ನಿಸ್ ರೆಕಾರ್ಡ್

    ಅಕ್ಕಪಕ್ಕದಲ್ಲಿ ಕೆರೆಗಳ ಪಕ್ಕ ನೀರು ಹರಿಯಲು ಮತ್ತು ನಿಂತುಕೊಳ್ಳಲು ಜಾಗವಿತ್ತು, ಈಗ ಜಾಗ ಕಡಿಮೆಯಾಗಿದೆ, ಅದಕ್ಕಾಗಿ ಶಾಶ್ವತ ಪರಿಹಾರವನ್ನು ಕಲ್ಪಿಸಲಾಗುವುದು. ಈ ರೀತಿಯ ಅವಘಡ ನಮ್ಮಲ್ಲಿ ಮಾತ್ರವಲ್ಲ, ಮುಂಬೈ ಸೇರಿದಂತೆ ಅನೇಕ ನಗರಗಳಲ್ಲಿ ಆಗಿದೆ. ಇತ್ತೀಚೆಗೆ ಫ್ರಾನ್ಸ್‌ನಲ್ಲಿಯೂ ತೊಂದರೆ ಆಗಿದೆ. ನಾವು ಶೀಘ್ರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

  • ಬೆಂಗಳೂರಲ್ಲಿ ಮಳೆಯಾರ್ಭಟ: ದಿ. ಅಬ್ದುಲ್ ಕಲಾಂ ಸಂಬಂಧಿಕರಿಗೆ ತಟ್ಟಿದ ಜಲ ಕಂಟಕ

    ಬೆಂಗಳೂರಲ್ಲಿ ಮಳೆಯಾರ್ಭಟ: ದಿ. ಅಬ್ದುಲ್ ಕಲಾಂ ಸಂಬಂಧಿಕರಿಗೆ ತಟ್ಟಿದ ಜಲ ಕಂಟಕ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ವರುಣ ಅಬ್ಬರಿಸುತ್ತಿದ್ದು, ದಿವಂಗತ ಅಬ್ದುಲ್ ಕಲಾಂ (Abdul Kalam) ಸಂಬಂಧಿಕರಿಗೆ ಬೆಂಗಳೂರು ಜಲ ಕಂಟಕ ತಟ್ಟಿದೆ.

    ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ನಗರಗಳು ಜಲಾವೃತಗೊಂಡಿದೆ. ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ (Kendriya Vihar Apartment) ಕೆರೆಯಂತಾಗಿದ್ದು, ಬೋಟಿಂಗ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.ಇದನ್ನೂ ಓದಿ: ಕೆಂಗೇರಿ ಕೆರೆಗೆ ಬಿದ್ದ ಅಣ್ಣ ತಂಗಿ, 3 ಗಂಟೆಗಳಿಂದ ಸತತ ಕಾರ್ಯಾಚರಣೆ – ಅಣ್ಣನ ಮೃತದೇಹ ಪತ್ತೆ

    ಅಪಾರ್ಟ್ಮೆಂಟ್‌ನ ಡಿ.6 ಬ್ಲಾಕ್‌ನಲ್ಲಿ ಮಾಜಿ ದಿವಂಗತ ಅಬ್ದುಲ್ ಕಲಾಂ ಸಂಬಂಧಿಕರು ವಾಸಿಸುತ್ತಿದ್ದು, ಬೆಂಗಳೂರು ಜಲ ಕಂಟಕ ತಟ್ಟಿದೆ. ಅಬ್ದುಲ್ ಕಲಾಂ ಸಂಬಂಧಿ ಹಾಗೂ ಅವರ ಮಗಳು ನಾಗು ರೋಜಾ ಎಂಬುವರು ವಾಸವಾಗಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ. ಸುಮಾರು 80 ವರ್ಷ ಆಗಿರುವುದರಿಂದ ಅಪಾರ್ಟ್ಮೆಂಟ್‌ನಿಂದ ಅಂಬುಲೆನ್ಸ್‌ನಲ್ಲಿ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

    ಅಪಾರ್ಟ್ಮೆಂಟ್‌ನಲ್ಲಿ 2500 ಜನರಿದ್ದು, ಮಹಿಳೆಯರಿಗೆ ಲೈಫ್ ಜಾಕೆಟ್ ಹಾಕಿ ಹೊರತರಲಾಗುತ್ತಿದ್ದು, SDRF, NDRF ತಂಡದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬೆಳಗಿನ ಜಾವ 3 ಗಂಟೆಯಿಂದ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಅಪಾರ್ಟ್ಮೆಂಟ್‌ನ ನೀರಿನ ಪ್ರಮಾಣ ಕಡಿಮೆಯಾಗುತ್ತಿಲ್ಲ. ಜನರಿಗೆ ಅಲ್ಲಿಂದ ಬೇರೆ ಕಡೆಗೆ ತೆರಳುವಂತೆ ಸೂಚಿಸಿದ್ದು, 250 ಕುಟುಂಬಗಳು ಬೇರೆ ಕಡೆ ತೆರಳಿದ್ದಾರೆ. ಇನ್ನೂ 2000 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕಿದೆ.

    ಬಿಬಿಎಂಪಿ ಕಮಿಷನರ್ ಆದೇಶದ ಮೇರೆಗೆ ಅಲ್ಲಿಯ ಜನರು ಬೇರೆ ಕಡೆಗೆ ತೆರಳಿದ್ದು, ಬಟ್ಟೆ ಬರೆಯೊಂದಿಗೆ ತಾತ್ಕಾಲಿಕವಾಗಿ ಮನೆ ಖಾಲಿ ಮಾಡುತ್ತಿದ್ದಾರೆ.ಇದನ್ನೂ ಓದಿ: ಲವ್ ಸ್ಟೋರಿ ಶುರು ಮಾಡಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ