Tag: Kerala Police

  • ನನ್ನನ್ನ ಬೆತ್ತಲೆಗೊಳಿಸಿ ಲೈಂಗಿಕ ಕಿರುಕುಳ ನೀಡಿದ್ರು – ನಿರ್ದೇಶಕ ರಂಜಿತ್‌ ವಿರುದ್ಧ ನಟ ದೂರು, ಕೇಸ್‌ ದಾಖಲು

    ನನ್ನನ್ನ ಬೆತ್ತಲೆಗೊಳಿಸಿ ಲೈಂಗಿಕ ಕಿರುಕುಳ ನೀಡಿದ್ರು – ನಿರ್ದೇಶಕ ರಂಜಿತ್‌ ವಿರುದ್ಧ ನಟ ದೂರು, ಕೇಸ್‌ ದಾಖಲು

    ತಿರುವನಂತಪುರಂ/ಬೆಂಗಳೂರು: ಆಡಿಷನ್‌ ನೆಪದಲ್ಲಿ ಹೋಟೆಲ್‌ಗೆ ಕರೆದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ಪುರುಷನ ನಟರೊಬ್ಬರು ಮಲಯಾಳಂನ ಖ್ಯಾತ ನಿರ್ದೇಶಕ ರಂಜಿತ್‌ ಬಾಲಕೃಷ್ಣನ್‌ (Ranjith Balakrishnan) ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನ್ಯಾ.ಹೇಮಾ ಸಮಿತಿ ವರದಿ (Hema Committee report) ಬಿಡುಗಡೆಯಾದ ನಂತರ ರಂಜಿತ್‌ ಬಂಗಾಳಿ ನಟಿಯೊಬ್ಬರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದರು. ಈ ಬೆನ್ನಲ್ಲೇ ಮತ್ತೊಂದು ಲೈಂಗಿಕ ಕಿರುಕುಳ ಆರೋಪಕ್ಕೆ ಗುರಿಯಾಗಿದ್ದಾರೆ. ನಟನೊಬ್ಬನನ್ನ ಐಷಾರಾಮಿ ಹೋಟೆಲ್‌ಗೆ ಕರೆಸಿ, ವಿವಸ್ತ್ರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಈ ಕುರಿತು ಬೆಂಗಳೂರು ಈಶಾನ್ಯ ವಿಭಾಗದ ಬಿಐಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

    ಕೇರಳ ಪೊಲೀಸರು ಪ್ರಕರಣವನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಿದ ನಂತರ ರಂಜಿತ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ರಂಜಿತ್ ವಿರುದ್ಧ ಐಟಿ ಕಾಯ್ದೆಯ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧಗಳು) ಮತ್ತು 66-ಇ (ಗೌಪ್ಯತೆಯ ಉಲ್ಲಂಘನೆಗಾಗಿ ಶಿಕ್ಷೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕೋಝಿಕ್ಕೋಡ್ ಮೂಲದ ಕಲಾವಿದ ಎಂದು ಗುರುತಿಸಿಕೊಂಡಿರುವ ದೂರುದಾರರು, 2012ರಲ್ಲಿ ಬಾವುಟ್ಟಿಯುಡೆ ನಾಮತ್ತಿಲ್’ ಚಿತ್ರದ ಚಿತ್ರೀಕರಣದ ವೇಳೆ ನಟ ಮಮ್ಮುಟ್ಟಿ ಅವರನ್ನು ಭೇಟಿ ಮಾಡಲು ಕೇರಳದ ಈಸ್ಟ್ ಹಿಲ್‌ಗೆ ಹೋಗಿದ್ದ ಸಂದರ್ಭದಲ್ಲಿ ರಂಜಿತ್ ನನ್ನನ್ನು ಭೇಟಿಯಾಗಿದ್ದರು. ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಬಳಿಯ ಐಷಾರಾಮಿ ಹೋಟೆಲ್‌ಗೆ ನನ್ನನ್ನು ಕರೆಸಿಕೊಂಡಿದ್ದ ರಂಜಿತ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ದೂರಿನಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ

    ನನ್ನನ್ನು ಬೆತ್ತಲೆಯಾಗಿ ನಿಲ್ಲುವಂತೆ ರಂಜಿತ್ ಹೇಳಿದ್ದರು. ನಾನು ಅವರು ಹೇಳಿದಂತೆಯೇ ಮಾಡಿದೆ. ಇದೇ ಸಂದರ್ಭದಲ್ಲಿ ರಂಜಿತ್ ಅವರು ನಟಿ ರೇವತಿ ಅವರೊಂದಿಗೆ ಫೋನ್ನಲ್ಲಿ ಮಾತನಾಡುತ್ತಿದ್ದರು. ರಂಜಿತ್ ಮತ್ತು ರೇವತಿ ನಡುವೆ ಯಾವ ರೀತಿಯ ಸಂಬಂಧವಿದೆ ಎಂದು ನನಗೆ ಗೊತ್ತಿಲ್ಲ. ಆದರೆ, ರಂಜಿತ್ ನನ್ನ ಬೆತ್ತಲೆ ಫೋಟೊಗಳನ್ನು ರೇವತಿ ಅವರಿಗೆ ಕಳುಹಿಸಿದ್ದರು. ಆ ಫೋಟೊಗಳನ್ನು ನೋಡಿ ರೇವತಿ ಇಷ್ಟಪಟ್ಟಿದ್ದಾಳೆ ಎಂದು ರಂಜಿತ್ ಹೇಳಿದ್ದರು ಎಂದು ನಟ ದೂರಿನಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್‌ ಫೋರ್ಸ್‌ಗೆ ತಂದುಕೊಡಿ – ಎಂ.ಬಿ ಪಾಟೀಲ್‌ 

  • ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ಮತೀಯ ದ್ವೇಷಕ್ಕೆ ಪ್ರಚೋದನೆ ಆರೋಪ – ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇಸ್‌

    ತಿರುವನಂತಪುರಂ: ಕೇರಳದ ಕಲಮಶ್ಯೇರಿಯಲ್ಲಿ ಇತ್ತೀಚೆಗೆ ನಡೆದ ಬಾಂಬ್‌ ಬ್ಲಾಸ್ಟ್‌ ಹಿನ್ನೆಲೆಯಲ್ಲಿ ವಿವಿಧ ಸಮುದಾಯಗಳ ನಡುವೆ ದ್ವೇಷ ಭಾವನೆ ಮೂಡಿಸುವ ಹೇಳಿಕೆ ನೀಡಿದ್ದ ಆರೋಪದ ಮೇಲೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrashekhar) ವಿರುದ್ಧ ಕೇರಳದಲ್ಲಿ ಪ್ರಕರಣ ದಾಖಲಾಗಿದೆ.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಅವರು ಜಂಟಿಯಾಗಿ ಅವರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 153(A), ಸೆಕ್ಷನ್ 120(o) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕೇರಳದ ಕಲಮಶ್ಯೇರಿಯಲ್ಲಿ ಬಾಂಬ್ ಸ್ಪೋಟ- ಓರ್ವ ದುರ್ಮರಣ

    ಮಲಪ್ಪುರಂ ಜಿಲ್ಲೆಯಲ್ಲಿ ಇಸ್ಲಾಮಿಸ್ಟ್ ಗ್ರೂಪ್ (Islamic Group) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಹಮಾಸ್ ನಾಯಕನ ವರ್ಚುವಲ್ ಭಾಷಣ ಮತ್ತು ಕೊಚ್ಚಿ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಸಚಿವರು ಇತ್ತೀಚೆಗೆ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕೇರಳ ಪೊಲೀಸರ (Kerala Police) ಸೈಬರ್ ಸೆಲ್‌ ಎಫ್‌ಐಆರ್ ದಾಖಲಿಸಿದೆ. ಇದನ್ನೂ ಓದಿ: ಪ್ರಾರ್ಥನಾ ಮಂದಿರಲ್ಲಿ ಬಾಂಬ್ ಬ್ಲಾಸ್ಟ್- ಕೇರಳ ಸಿಎಂಗೆ ಅಮಿತ್ ಶಾ ಕರೆ

    ಕೇರಳದಲ್ಲಿ ಬಾಂಬ್‌ ಬ್ಲಾಸ್ಟ್‌ ಬೆನ್ನಲ್ಲೇ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಡುವೆ ಮಾತಿನ ಚಕಮಕಿ ಆರಂಭವಾಗಿತ್ತು. ಸ್ಫೋಟದ ನಂತರ, ಚಂದ್ರಶೇಖರ್ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಟೀಕಿಸುವ ಪೋಸ್ಟ್‌ಗಳನ್ನು ಟ್ವಟ್ಟರ್‌ ಎಕ್ಸ್‌ ಖಾತೆಯಲ್ಲಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.

    ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವ ರಾಜೀವ್‌ ಚಂದ್ರಶೇಖರ್‌, ನಾನು ಯಾವುದೇ ನಿರ್ದಿಷ್ಟ ಸಮುದಾಯದ ಬಗ್ಗೆ ಮಾತನಾಡಿಲ್ಲ. ನಾನು ನಿರ್ದಿಷ್ಟವಾಗಿ ಹಮಾಸ್ ಅನ್ನು ಉಲ್ಲೇಖಿಸಿದ್ದೇನೆ. ಹಮಾಸ್ ಅನ್ನು ಸಮುದಾಯದೊಂದಿಗೆ ಸಮೀಕರಿಸಲು ಪಿಣರಾಯಿ ವಿಜಯನ್ ಬಯಸುತ್ತಿರುವಂತಿದೆ ಎಂದು ದೂರಿದ್ದರು. ಇದನ್ನೂ ಓದಿ: Kerala Bomb Blast: ಬಾಂಬ್ ಇಟ್ಟಿದ್ದು ನಾನೇ ಅಂತಾ ಪೊಲೀಸರಿಗೆ ವ್ಯಕ್ತಿ ಶರಣು!

    ರಾಜೀವ್‌ ಚಂದ್ರಶೇಖರ್‌ ಟ್ವೀಟ್‌ನಲ್ಲಿ ಏನಿತ್ತು?
    ಕಾಂಗ್ರೆಸ್ ಮತ್ತು ಸಿಪಿಎಂನ ಓಲೈಕೆ ರಾಜಕಾರಣದ ಬೆಲೆಯನ್ನು ಎಲ್ಲ ಸಮುದಾಯಗಳ ಮುಗ್ಧರು ಭರಿಸಬೇಕಾಗುತ್ತದೆ. ಅದನ್ನೇ ಇತಿಹಾಸ ನಮಗೆ ಕಲಿಸಿದೆ. ಭಯೋತ್ಪಾದಕ ಹಮಾಸ್ ಅನ್ನು ದ್ವೇಷ ಹರಡಲು ಮತ್ತು ಕೇರಳದಲ್ಲಿ ಜಿಹಾದ್‌ಗೆ ಕರೆ ನೀಡಲು ಕಾಂಗ್ರೆಸ್/ಸಿಪಿಎಂ/ಯುಪಿಎ/ಇಂಡಿಯಾ ಬ್ಲಾಕ್‌ ಬಳಸಿಕೊಳ್ಳುತ್ತಿವೆ. ಇದು ತುಷ್ಟೀಕರಣ ರಾಜಕೀಯ. ಇದು ಬೇಜವಾಬ್ದಾರಿ ಹುಚ್ಚು ರಾಜಕಾರಣದ ಪರಮಾವಧಿ. ಸಾಕು! ಎಂದು ಟ್ವೀಟ್‌ ಮಾಡಿದ್ದರು.

    ಇದರೊಂದಿಗೆ ನೀವು ನಿಮ್ಮ ಹಿತ್ತಲಿನಲ್ಲಿ ಹಾವುಗಳನ್ನು ಇಟ್ಟುಕೊಳ್ಳಲು ಸಾಧ್ಯವಿಲ್ಲ. ಅವು ನಿಮ್ಮ ನೆರೆಹೊರೆಯವರನ್ನು ಕಚ್ಚುತ್ತವೆ. ಅಂತಿಮವಾಗಿ ಆ ಹಾವುಗಳು ಹಿತ್ತಲಿನಲ್ಲಿ ಯಾರನ್ನು ಕಂಡರೂ ಅವರ ಮೇಲೆ ಆಕ್ರಮಣ ಮಾಡುತ್ತವೆ ಎಂಬ ಹಿಲರಿ ಕ್ಲಿಂಟನ್ ಅವರ ಕೋಟ್‌ ಅನ್ನು ಉಲ್ಲೇಖಿಸಿದ್ದರು.

    ಕೇರಳದ ಕಲಮಶ್ಯೇರಿಯಲ್ಲಿ ಪ್ರಾರ್ಥನಾ ಮಂದಿರದಲ್ಲಿ ಬಾಂಬ್‌ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದರು. 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್‌ ಆಗಿರುವ ಬೆಂಗಳೂರು ನಾಲ್ವರು ಪೊಲೀಸರು ಸಸ್ಪೆಂಡ್‌

    ಲಂಚಕ್ಕೆ ಬೇಡಿಕೆಯಿಟ್ಟು ಕೇರಳದಲ್ಲಿ ಅರೆಸ್ಟ್‌ ಆಗಿರುವ ಬೆಂಗಳೂರು ನಾಲ್ವರು ಪೊಲೀಸರು ಸಸ್ಪೆಂಡ್‌

    ಬೆಂಗಳೂರು: ವಂಚನೆ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಕೇರಳ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

    ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌, ಹೆಡ್‌ ಕಾನ್‌ಸ್ಟೇಬಲ್‌ಗಳಾದ ವಿಜಯ್‌ ಕುಮಾರ್‌, ಶಿವಾನಿ, ಕಾನ್‌ಸ್ಟೇಬಲ್‌ ಸಂದೇಶ್‌ ಅಮಾನತುಗೊಂಡಿದ್ದಾರೆ. ಎಸಿಪಿ ವರದಿ ಆಧರಿಸಿ ಈ ನಾಲ್ವರನ್ನೂ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ಕೇರಳದ ಕೊಚ್ಚಿಯಲ್ಲಿ ಕರ್ನಾಟಕ ಪೊಲೀಸರ ಅರೆಸ್ಟ್‌ – ಲಂಚಕ್ಕೆ ಬೇಡಿಕೆಯಿಟ್ಟು ಲಾಕ್‌ ಆದ ಬೆಂಗಳೂರು ಪೊಲೀಸರು

    ಏನಿದು ಪ್ರಕರಣ?
    ಕೇರಳದಲ್ಲಿ ಕರ್ನಾಟಕದ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್‌ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿತ್ತು. ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್‌ ಮಾಡಲಾಗಿತ್ತು.

    ಬಂಧಿತರು ಬೆಂಗಳೂರು ವೈಟ್‌ ಫೀಲ್ಡ್‌ ಸೆನ್‌ ಪೊಲೀಸರಾಗಿದ್ದಾರೆ. ಇವರನ್ನು ಕೊಚ್ಚಿಯ ಕಲಂಚೇರಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್‌ ವಂಚನೆ ಕೇಸ್‌ ರಿಕವರಿಗೆ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಉದ್ಯೋಗ ಕೊಡಿಸುವುದಾಗಿ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಮೋಸವಾಗಿತ್ತು. ಚಂದಕ್ ಶ್ರೀಕಾಂತ್ ಎಂಬಾತ ಈ ಸಂಬಂಧ ದೂರು ಕೊಟ್ಟಿದ್ದ. ಆನ್‌ಲೈನ್ ಮೂಲಕ 26 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದ. ಈ ಪ್ರಕರಣ ತನಿಖೆಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ನಡೆಸುತ್ತಿದ್ದರು. ಮೊದಲಿಗೆ ಮಡಿಕೇರಿಯ ಐಸಾಕ್ ಬಗ್ಗೆ ಸುಳಿವು ಸಿಕ್ಕಿತ್ತು. ಅಲ್ಲಿ ಹೋಗಿ ಪರಿಶೀಲನೆ ನಡೆಸಿದಾಗ ಐಸಾಕ್ ಅಕೌಂಟ್‌ನಲ್ಲಿ 2 ಕೋಟಿ ವರ್ಗಾವಣೆಯಾಗಿರುವುದು ಪತ್ತೆಯಾಯಿತು. ಇದರ ಜಾಡು ಹಿಡಿದು ವೈಟ್ ಫೀಲ್ಡ್ ಸಿಇಎನ್ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್ ಮತ್ತು ತಂಡ ಕೇರಳಕ್ಕೆ ಹೊರಟಿತ್ತು.

    ನೌಶಾದ್ ಎಂಬವನಿಂದ ಆನ್‌ಲೈನ್ ಫ್ರಾಡ್ ಬಗ್ಗೆ ಸಾಕ್ಷಿ ಸಿಕ್ಕಿತ್ತು. ಅರೆಸ್ಟ್ ಮಾಡಲು ತೆರಳಿದ್ದ ವೈಟ್ ಫೀಲ್ಡ್ ಸಿಇಎನ್ ಪೊಲೀಸರು, ಬಂಧಿಸದೇ ಇರಲು 3 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಈ ಸಂಬಂಧ ನೌಶಾದ್‌ ಕಲ್ಲಂಚೇರಿ ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣದಲ್ಲಿ ತನಿಖೆಗೆ ಎಂದು ಬಂದಿರುವುದಾಗಿ ಬೆಂಗಳೂರು ಪೊಲೀಸರು ತಿಳಿಸಿದ್ದರು. ಆದರೂ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ಎಫ್‌ಐಆರ್‌ ದಾಖಲಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ವಿಮಾ ಏಜೆಂಟ್ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಸ್ನೇಹಿತನಿಂದ ಹೊರಬಂತು ಸತ್ಯ

    ಮಹಿಳಾ ವಿಮಾ ಏಜೆಂಟ್ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಸ್ನೇಹಿತನಿಂದ ಹೊರಬಂತು ಸತ್ಯ

    ತಿರುವನಂತಪುರಂ: ಕೇರಳದ ಕಡಕ್ಕಾವೂರ್‍ನಲ್ಲಿ ಮಹಿಳಾ ವಿಮಾ ಏಜೆಂಟ್ ನಿಗೂಢ ಸಾವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಆಕೆ ತನ್ನ ಸ್ನೇಹಿತನಿಂದಲೇ ಕೊಲೆಯಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

    ಜೆಸ್ಸಿ (54) ಕೊಲೆಯಾದ ಮಹಿಳೆ. ಹತ್ತು ದಿನಗಳ ಹಿಂದೆ ಈ ಮಹಿಳೆ ಮೃತದೇಹವು ರೈಲು ಹಳಿಗಳ ಮೇಲೆ ಪತ್ತೆಯಾಗಿತ್ತು. ಸೂಕ್ತ ಸಾಕ್ಷ್ಯಾಧಾರ ಸಿಗದ ಕಾರಣ ಆರಂಭದಲ್ಲಿ ಪೊಲೀಸರು ಇದನ್ನು ಆತ್ಮಹತ್ಯೆ ಪ್ರಕರಣ ಎಂದು ಪರಿಗಣಿಸಿದ್ದರು. ಆದರೆ ಮೃತಳ ಸಂಬಂಧಿಕರು ಆಕೆ ಧರಿಸಿದ್ದ ಚಿನ್ನಾಭರಣಗಳು ನಾಪತ್ತೆಯಾಗಿರುವ ವಿಚಾರವನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ಕೊನೆಗೂ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ:  ಹಗಲು ಹೊತ್ತಿನಲ್ಲೇ ಬ್ಯಾಂಕ್ ದರೋಡೆ – ಸಿಬ್ಬಂದಿ ಹತ್ಯೆ

    ವಿಧವೆಯಾಗಿದ್ದ ಜೆಸ್ಸಿಯೊಂದಿಗೆ ಆಕೆಯ ಸ್ನೇಹಿತ ಕಡಕ್ಕಾವೂರು ಸಮೀಪದ ಭಜನಮಾಡಂ ನಿವಾಸಿ ಮೋಹನನ್ ಸಂಬಂಧ ಹೊಂದಿದ್ದ. ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಲು ಮೋಹನನ್, ಜೆಸ್ಸಿಯಿಂದ ಹಣಕಾಸಿನ ನೆರವು ಕೋರಿದ್ದ. ಆದರೆ ಜೆಸ್ಸಿ ಅವನ ಮನವಿಯನ್ನು ನಿರಾಕರಿಸಿದ್ದಳು. ಇದಾದ ಬಳಿಕ ಆರೋಪಿಯು ಸೀರೆಯಿಂದ ಜೆಸ್ಸಿ ಕತ್ತು ಹಿಸುಕಿ ಕೊಲೆ ಮಾಡಿ ಆಭರಣಗಳನ್ನು ದೋಚಿದ್ದಾನೆ. ಆರೋಪಿಯು ಮಹಿಳೆಯನ್ನು ಕೊಲೆ ಮಾಡಿ, ಶವವನ್ನು ರೈಲು ಹಳಿ ಮೇಲೆ ಹಾಕಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಯಾರಿಗೆ ಬೇಕು?: ಹೆಚ್.ಡಿ.ದೇವೇಗೌಡ

  • ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ

    ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ

    ಚಿಕ್ಕಮಗಳೂರು: ಶೃಂಗೇರಿ ಮೂಲದ ನಕ್ಸಲರನ್ನು ಕೇರಳದ ಸುಲ್ತಾನ್ ಬತ್ತೇರಿ ಪೊಲೀಸರು ಬಂಧಿಸಿದ್ದಾರೆ.

    ನಕ್ಸಲ್ ನಾಯಕ ಬಿ.ಜಿ.ಕೃಷ್ಣ ಮೂರ್ತಿ, ಸಾವಿತ್ರಿ ಬಂಧಿತ ನಕ್ಸಲರು. ಕೇರಳದ ಸುಲ್ತಾನ್ ಬತ್ತೇರಿನಲ್ಲಿ ಮಲೆನಾಡ ನಕ್ಸಲಿಸಂನಲ್ಲಿ ಮುಂಚೂಣಿಯಲ್ಲಿದ್ದ ಕೃಷ್ಣಮೂರ್ತಿ, ಸಾವಿತ್ರಿಯನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ. 2003ರಿಂದ ಕೃಷ್ಣಮೂರ್ತಿ ಭೂಗತನಾಗಿದ್ದು, ತನ್ನ ತಂದೆ ಗೋಪಾಲ್ ರಾವ್ ತೀರಿಕೊಂಡಾಗಲೂ ಬಂದಿರಲಿಲ್ಲ. ಇದನ್ನೂ ಓದಿ: ಈಡೇರಿತು ಕನ್ನಡಿಗರ ಕಣ್ಮಣಿಯ ಮಹದಾಸೆ – 40 ಸಾವಿರ ಅಭಿಮಾನಿಗಳಿಗೆ ಒಟ್ಟಿಗೇ ಊಟ!

    ಕೃಷ್ಣಮೂರ್ತಿ ಹೆಚ್ಚು ಶೃಂಗೇರಿ ತಾಲೂಕಿನ ಬುಕ್ಕಡಿ ಬೈಲಿನಲ್ಲಿ ವಾಸವಾಗಿದ್ದು, ಶೃಂಗೇರಿಯಲ್ಲಿ ಪದವಿ, ಶಿವಮೊಗ್ಗದಲ್ಲಿ ಎಲ್.ಎಲ್.ಬಿ. ಶಿಕ್ಷಣ ಪಡೆದಿದ್ದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದ ವೇಳೆ ನಕ್ಸಲ್ ಗೆ ಸೇರಿಕೊಂಡಿದ್ದರು. ಈ ಹಿನ್ನೆಲೆ ಇವರು 2003 ರಿಂದಲೂ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.

    ಪ್ರಸ್ತುತ 48 ವರ್ಷದ ಕೃಷ್ಣಮೂರ್ತಿ ಮೇಲೆ ರಾಜ್ಯಾದ್ಯಂತ ಸುಮಾರು 53 ಪ್ರಕರಣಗಳಿವೆ. ಇನ್ನೂ 36 ವರ್ಷದ ಸಾವಿತ್ರಿ ಮೇಲೆ 22 ಕೇಸ್ ಗಳಿವೆ. ಸಾವಿತ್ರಿ ಕಳಸ ತಾಲೂಕಿನ ಮಾವಿನಕೆರೆ ಗ್ರಾಮದವರಾಗಿದ್ದಾರೆ.

  • ನೆಗೆಟಿವ್ ಬಂದ್ರು ಕನ್ನಡಿಗರಿಗಿಲ್ಲ ಅಯ್ಯಪ್ಪನ ದರ್ಶನ ಭಾಗ್ಯ

    ನೆಗೆಟಿವ್ ಬಂದ್ರು ಕನ್ನಡಿಗರಿಗಿಲ್ಲ ಅಯ್ಯಪ್ಪನ ದರ್ಶನ ಭಾಗ್ಯ

    – ಕೇರಳ ಪೊಲೀಸ ದೌರ್ಜನ್ಯಕ್ಕೆ ಕರ್ನಾಟಕ ಭಕ್ತರು ಕಂಗಾಲು

    ಬೆಂಗಳೂರು: ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಮಾಲೆ ಧರಿಸಿ ತಮ್ಮ ಕಷ್ಟ ಕಾರ್ಪಣ್ಯವನ್ನು ನೀಗಿಸು ತಂದೆ ಎಂದು ಕೇರಳದ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಮಾಡುವ ಕನ್ನಡದ ಭಕ್ತರಿಗೆ ಕೊರೊನಾ ವಿಚಾರದಲ್ಲಿ ಸಮಸ್ಯೆ ಎದುರಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೆಲ ಸ್ವಾಮಿ ಭಕ್ತರು ಶಬರಿಮಲೆಯ ಅಯ್ಯಪ್ಪನನ್ನು ನೋಡಲು ಹೋದ ವೇಳೆ ಅಲ್ಲಿನ ಪೊಲೀಸರು ತಡೆ ಹಿಡಿದಿದ್ದಾರೆ. ಜೊತೆಗೆ ಕೊರೊನಾ ವರದಿ ನೆಗೆಟಿವ್ ಬಂದರೂ, ಅಯ್ಯಪ್ಪನ ಬೆಟ್ಟಕ್ಕೆ ಹೋಗಲು ಬಿಟ್ಟಿಲ್ಲ. ಜೊತೆಗೆ ತಲಾ 625 ರೂ. ಪಡೆದು ನೆಗೆಟಿವ್ ರಿಪೋರ್ಟ್ ನೀಡುವ ಪೋಲಿಸರ ವಿರುದ್ಧ ಭಕ್ತರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ಕೇರಳ ಪೊಲೀಸರ ಈ ವರ್ತನೆಯಿಂದ ಕರ್ನಾಟಕ ಭಕ್ತರು ಕಂಗಾಲಾಗಿದ್ದು, ಅಲ್ಲಿನ ಡಾಕ್ಟರ್ ಈ ವರದಿ ಆಗುತ್ತೆ ಅಂದರೂ ಪೊಲೀಸರು ಮಾತ್ರ ಆಗಲ್ಲ ಎಂದು ಕಿರಿಕಿರಿ ಮಾಡುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯದ ಉನ್ನತ ಅಧಿಕಾರಿಗಳು ಪ್ರವಾಸೋದ್ಯಮ ಹಾಗೂ ಮುಜರಾಯಿ ಸಚಿವರು ಕೇರಳ ರಾಜ್ಯದ ಅಧಿಕಾರಿಗಳ ಜೊತೆಗೆ ಮಾತನಾಡಿ ಕನ್ನಡದ ಭಕ್ತರಿಗೆ ಆಗುತ್ತಿರುವ ಕಿರಿಕಿರಿಯನ್ನು ಹಾಗೂ ತೊಂದರೆಯನ್ನು ತಪ್ಪಿಸಬೇಕು ಎಂದು ಭಕ್ತರು ಮನವಿ ಮಾಡಿದ್ದಾರೆ.