Tag: kerala

  • ‌ಸೆಕ್ಸ್ ವರ್ಕರ್ ವಸ್ತುವಲ್ಲ‌, ಸೇವೆ‌ ಪಡೆಯುವವನು ಗ್ರಾಹಕನೂ ಅಲ್ಲ: ಕೇರಳ ಹೈಕೋರ್ಟ್

    ‌ಸೆಕ್ಸ್ ವರ್ಕರ್ ವಸ್ತುವಲ್ಲ‌, ಸೇವೆ‌ ಪಡೆಯುವವನು ಗ್ರಾಹಕನೂ ಅಲ್ಲ: ಕೇರಳ ಹೈಕೋರ್ಟ್

    ತಿರುವನಂತಪುರಂ: ಸೆಕ್ಸ್‌ ವರ್ಕರ್ಸ್‌ಗಳಿಂದ (Sex Worker) ಸೇವೆ ಪಡೆಯುವ ವ್ಯಕ್ತಿಯನ್ನು ‘ಗ್ರಾಹಕ’ ಎಂದು ಕರೆಯಲು ಸಾಧ್ಯವಿಲ್ಲ. ಏಕೆಂದರೆ ಲೈಂಗಿಕ ಕಾರ್ಯಕರ್ತೆ ‘ಉತ್ಪನ್ನ’ (ವಸ್ತು) ಅಲ್ಲ ಎಂದು ಕೇರಳ ಹೈಕೋರ್ಟ್‌ (Kerala High Court) ಹೇಳಿದೆ.

    ಲೈಂಗಿಕ ಕಾರ್ಯಕರ್ತೆಯರ ಸೇವೆಗಳನ್ನು ಪಡೆಯುವ ವ್ಯಕ್ತಿಯ ವಿರುದ್ಧ ಅನೈತಿಕ ಕಳ್ಳಸಾಗಣೆ (ತಡೆಗಟ್ಟುವಿಕೆ) ಕಾಯ್ದೆ 1956ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಬಹುದು. ಏಕೆಂದರೆ ಲೈಂಗಿಕ ಕಾರ್ಯಕರ್ತೆಗೆ ಹಣ ಪಾವತಿಸುವ ಮೂಲಕ ವೇಶ್ಯಾವಾಟಿಕೆಗೆ ಪ್ರೇರೇಪಿಸುವಂತಾಗುತ್ತದೆ ಎಂದು ನ್ಯಾಯಮೂರ್ತಿ ವಿ.ಜಿ. ಅರುಣ್ (Justice V.G. Arun) ಅವರಿದ್ದ ಏಕಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ: ಮತ್ತೆ ಅನುಚಿತ ವರ್ತನೆ ತೋರಿದ್ರೆ ದರ್ಶನ್‌ ಬಳ್ಳಾರಿಗೆ ಶಿಫ್ಟ್‌ – ಐಜಿಪಿಗೆ ಅಧಿಕಾರ‌ ಕೊಟ್ಟ ಕೋರ್ಟ್

    ಏನಿದು ಪ್ರಕರಣ?
    1956ರ ಅನೈತಿಕ ಕಳ್ಳಸಾಗಣೆ (ತಡೆಗಟ್ಟುವಿಕೆ) (Immoral Traffic) ಕಾಯ್ದೆಯ ಸೆಕ್ಷನ್ 3 (ವೇಶ್ಯಾಗೃಹವನ್ನು ನಡೆಸಿದ್ದಕ್ಕಾಗಿ ಶಿಕ್ಷೆ), 4 (ಇನ್ನೊಬ್ಬ ವ್ಯಕ್ತಿಯ ವೇಶ್ಯಾವಾಟಿಕೆಯ ಗಳಿಕೆಗೆ ಅವಲಂಬನೆಗೆ ಶಿಕ್ಷೆ), 5(1)(d) (ವೇಶ್ಯಾವಾಟಿಕೆ ಪ್ರೇರಣೆ), ಮತ್ತು 7 (ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಗೆ ಶಿಕ್ಷೆ) ಅಡಿಯಲ್ಲಿ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಪೀಠ ವಿಚಾರಣೆ ನಡೆಸಿತು. ಈ ವೇಳೆ, ಸೇವೆ ಪಡೆಯುವ ವ್ಯಕ್ತಿಯನ್ನು ‘ಗ್ರಾಹಕ’ ಎಂದು ಕರೆಯಲು ಸಾಧ್ಯವಿಲ್ಲ. ಏಕೆಂದರೆ ಲೈಂಗಿಕ ಕಾರ್ಯಕರ್ತೆ ‘ಉತ್ಪನ್ನ’ ಅಲ್ಲ ಎಂದು ಅಭಿಪ್ರಾಯಪಟ್ಟಿದೆ.

    ಮಾರ್ಚ್ 2021 ರಲ್ಲಿ ಪೆರೂರ್ಕಡ ಪೊಲೀಸ್ ಠಾಣೆ ವ್ಯಾಪ್ತಿಯ ಕುಡಪ್ಪನಕುನ್ನುವಿನ ಮನೆಯೊಂದರಲ್ಲಿ ಅರ್ಜಿದಾರ ಮತ್ತು ಮಹಿಳೆಯೊಬ್ಬರು ಬೆತ್ತಲೆಯಾಗಿ ಪತ್ತೆಯಾಗಿದ್ದರು. ಈ ಪ್ರಕರಣದ ಇತರ ಇಬ್ಬರು ಆರೋಪಿಗಳು ಮೂವರು ಮಹಿಳೆಯರನ್ನು ಹಣಕೊಟ್ಟು ಖರೀದಿಸಿ ವೇಶ್ಯಾವಾಟಿಕೆ ಉದ್ದೇಶಕ್ಕಾಗಿ ಬಳಸುತ್ತಿದ್ದರು ಎಂಬುದು ತನಿಖೆ ವೇಳೆ ಗೊತ್ತಾಗಿತ್ತು.

    ಈ ಪ್ರಕರಣದಲ್ಲಿ ಪತ್ತೆಯಾಗಿದ್ದ ವ್ಯಕ್ತಿ ಗ್ರಾಹಕ ಮಾತ್ರ. ಆತನ ವಿರುದ್ಧ ವೇಶ್ಯಾವಾಟಿಕೆಗೆ ಪ್ರೇರೇಪಿಸಿದ ಆರೋಪ ಹೊರಿಸಲು ಸಾಧ್ಯವಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

    ಪೀಠ ಹೇಳಿದ್ದೇನು?
    ಲೈಂಗಿಕ ಕಾರ್ಯಕರ್ತೆಯನ್ನು ಉತ್ಪನ್ನವೆಂದು ಅವಮಾನಿಸಲಾಗುವುದಿಲ್ಲ. ಆ ಲೈಂಗಿಕ ಕಾರ್ಯಕರ್ತೆಗೆ ಹಣ ಪಾವತಿಸುವ ಮೂಲಕ ವೇಶ್ಯಾವಾಟಿಕೆ ನಡೆಸಲು ಪ್ರೇರೇಪಿಸಿದಂತಾಗುತ್ತದೆ. ಆದ್ದರಿಂದ 1956 ರ ಅನೈತಿಕ ಕಳ್ಳಸಾಗಾಣಿಕೆ (ತಡೆಗಟ್ಟುವಿಕೆ) ಕಾಯ್ದೆಯ ಸೆಕ್ಷನ್ 5(1)(d) ಅಡಿಯಲ್ಲಿ ಅಪರಾಧಕ್ಕಾಗಿ ಕಾನೂನು ಕ್ರಮ ಜರುಗಿಸಲು ಹೊಣೆಗಾರನಾಗಿದ್ದಾನೆ. ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಅಪರಾಧಗಳಿಗಾಗಿ ಅರ್ಜಿದಾರರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲಾಗಿದ್ದು, ಸೆಕ್ಷನ್ 5(1)(d) ಮತ್ತು 7 ರ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲು ಅನುಮತಿ ನೀಡಿ ಕೋರ್ಟ್‌ ಆದೇಶಿಸಿದೆ. ಇದನ್ನೂ ಓದಿ: ಪುತ್ರನಿಗೆ ಶಸ್ತ್ರಚಿಕಿತ್ಸೆ – ಶಾಸಕ ವಿನಯ್‌ಗೆ 2 ದಿನಗಳ ಮಧ್ಯಂತರ ಜಾಮೀನು ಮಂಜೂರು

  • ಧರ್ಮಸ್ಥಳ ಕೇಸ್;‌ ಕೇರಳ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್‌

    ಧರ್ಮಸ್ಥಳ ಕೇಸ್;‌ ಕೇರಳ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್‌

    ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಪ್ರಕರಣದಲ್ಲಿರುವ ಗ್ಯಾಂಗ್‌ ಕೇರಳದ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ.

    ಆರೋಪಿ ಚಿನ್ನಯ್ಯ ಹಾಗೂ ಗಿರೀಶ್‌ ಮಟ್ಟಣ್ಣನವರ್‌, ಜಯಂತ್‌.ಟಿ ಅವರು ಕೇರಳಕ್ಕೆ ಭೇಟಿ ನೀಡಿದ್ದರು. ಕೇರಳ ಸಂಸದ ಸಂತೋಷ್‌ ಕುಮಾರ್‌ ಅವರನ್ನು ಭೇಟಿಯಾಗಿದ್ದರು. ಬುರುಡೆಯನ್ನು ಅವರ ಬಳಿ ತೆಗೆದುಕೊಂಡು ಹೋಗಿದ್ದರು ಎಂಬ ವಿಚಾರ ಎಸ್‌ಐಟಿ ತನಿಖೆ ವೇಳೆ ಬಹಿರಂಗವಾಗಿದೆ.

    ಜುಲೈನಲ್ಲೇ ಯೂಟ್ಯೂಬರ್‌ವೊಬ್ಬ ಕೇರಳ ಸಂಸದನ ಸಂದರ್ಶನ ಮಾಡಿದ್ದ. ಎಂಪಿ ಸಂತೋಷ್‌, ಧರ್ಮಸ್ಥಳ ಪ್ರಕರಣದ ಬಗ್ಗೆ ಅತೀವ ಆಸಕ್ತಿ ಹೊಂದಿದ್ದರು. ಕೇಸನ್ನು ಸರ್ಕಾರ ಎಸ್‌ಐಟಿಗೆ ಕೊಡುವ ಮೊದಲೇ ಸಂದರ್ಶನ ನಡೆಸಲಾಗಿತ್ತು.

    ಕೇರಳದಲ್ಲಿ ಸಂಸದನನ್ನು ಬುರುಡೆ ಗ್ಯಾಂಗ್ ಭೇಟಿಯಾದ ವೇಳೆ ಸಂದರ್ಶನ ನೀಡಿರುವ ಸಾಧ್ಯತೆ ಇದೆ. ಪ್ರಕರಣದ ಬಗ್ಗೆ ಸಂದರ್ಶನದಲ್ಲಿ ವಿವರವಾಗಿ ಸಂತೋಷ್‌ ವಿವರವಾಗಿ ಮಾತನಾಡಿದ್ದರು.

  • ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜನ – ರಾಜ್ಯದ ಶಾಲೆಗಳಲ್ಲಿ ಶುರುವಾಗುತ್ತಾ ‘ವಾಟರ್ ಬೆಲ್’?

    ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜನ – ರಾಜ್ಯದ ಶಾಲೆಗಳಲ್ಲಿ ಶುರುವಾಗುತ್ತಾ ‘ವಾಟರ್ ಬೆಲ್’?

    – ಈಗಾಗಲೇ ಕೇರಳದಲ್ಲಿ ವಾಟರ್ ಬೆಲ್ ಕಾರ್ಯಕ್ರಮ ಜಾರಿ

    ಬೆಂಗಳೂರು: ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯೋಕೆ ಉತ್ತೇಜಿಸಲು ರಾಜ್ಯದ ಶಾಲೆಗಳಲ್ಲಿ ‘ವಾಟರ್ ಬೆಲ್’ (Water Bell) ಕಾರ್ಯಕ್ರಮ ಜಾರಿಗೆ ಶಿಕ್ಷಣ ಇಲಾಖೆ ಮುಂದಾಗಿದೆ.

    ಕೇರಳ ಶಾಲೆಗಳಲ್ಲಿ ಈಗಾಗಲೇ ವಾಟರ್ ಬೆಲ್ ಕಾರ್ಯಕ್ರಮ ಅನುಷ್ಠಾನದಲ್ಲಿದೆ. ದಿನಕ್ಕೆ ಎರಡು ಬಾರಿ ಕೇರಳದಲ್ಲಿ ವಾಟಲ್ ಬೆಲ್ ಆಗಲಿದೆ. ಬೆಳಗ್ಗೆ 10:30 ಮತ್ತು ಮಧ್ಯಾಹ್ನ 2:30 ರ ಅವಧಿಯಲ್ಲಿ ವಾಟರ್ ಬೆಲ್ ಆಗುತ್ತದೆ. ಈ ಅವಧಿಯಲ್ಲಿ ಮಕ್ಕಳು ನೀರು ಕುಡಿಯುವುದು ಈ ಕಾರ್ಯಕ್ರಮದ ಉದ್ದೇಶ.‌ ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಅಥಾರಿಟಿ ಹೆಸರು ಬದಲಾವಣೆ?

    ಕೇರಳದಲ್ಲಿ ಶುರು ಆಗಿರುವ ವಾಟರ್ ಬೆಲ್ ಕಾರ್ಯಕ್ರಮ ಕರ್ನಾಟಕದ ಶಾಲೆಗಳಲ್ಲೂ ಅನುಷ್ಠಾನಕ್ಕೆ ಚಿಂತನೆ ನಡೆದಿದೆ. ಈಗಾಗಲೇ ಶಿಕ್ಷಣ ಇಲಾಖೆ ಹಂತದಲ್ಲಿ ವಾಟರ್ ಬೆಲ್ ಜಾರಿ ಬಗ್ಗೆ ಚರ್ಚೆಗಳು ಇವೆ ಎನ್ನಲಾಗುತ್ತಿದೆ. ಶೀಘ್ರವೇ ರಾಜ್ಯದ ಶಾಲೆಗಳಲ್ಲೂ ಈ ಕಾರ್ಯಕ್ರಮ ಅನುಷ್ಠಾನ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ವಾಟರ್ ಬೆಲ್ ಕಾರ್ಯಕ್ರಮ ಉದ್ದೇಶವೇನು?
    * ಶಾಲೆಗಳಲ್ಲಿ ಮಕ್ಕಳು ಹೆಚ್ಚು ನೀರು ಕುಡಿಯಲು ಉತ್ತೇಜಿಸುವ ಕಾರ್ಯಕ್ರಮ ಇದು.
    * ಮಕ್ಕಳು ಹೆಚ್ಚು ನೀರು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಹೀಗಾಗಿ, ಶಾಲೆಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದು.
    * ಕೇರಳದಲ್ಲಿ ದಿನಕ್ಕೆ ಎರಡು ಬಾರಿ ವಾಟರ್ ಬೆಲ್ ಮಾಡೋ ಮೂಲಕ ಮಕ್ಕಳು ನೀರು ಕುಡಿಯಲು ಉತ್ತೇಜಿಸಲಾಗುತ್ತಿದೆ.
    * ದಿನಕ್ಕೆ 2-3 ಬಾರಿ ವಾಟರ್ ಬೆಲ್ ಹೊಡೆದು ಮಕ್ಕಳಿಗೆ ಆರೋಗ್ಯದ ಕಾಳಜಿ ಜತೆ ನೀರಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

  • ಕೊಡಗು | ವಯನಾಡ್‌ ಸಮೀಪದ ತಮರಶೆರಿ ಘಾಟ್ ಬಳಿ ಭೂಕುಸಿತ; ಬದಲಿ ಮಾರ್ಗಕ್ಕೆ ಸೂಚನೆ

    ಕೊಡಗು | ವಯನಾಡ್‌ ಸಮೀಪದ ತಮರಶೆರಿ ಘಾಟ್ ಬಳಿ ಭೂಕುಸಿತ; ಬದಲಿ ಮಾರ್ಗಕ್ಕೆ ಸೂಚನೆ

    – ಮಲೆನಾಡು ಭಾಗದ ಶಾಲೆಗಳಿಗೆ ಶನಿವಾರ ರಜೆ

    ಮಡಿಕೇರಿ: ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ಕೇರಳದ ವಯನಾಡು ಜಿಲ್ಲೆಗೆ ಸಂಪರ್ಕಿಸುವ ತಮರಶೆರಿ ಘಾಟ್ ಬಳಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ವಯನಾಡ್‌ಗೆ (Wayanad) ಬದಲಿ ಮಾರ್ಗ ಸೂಚಿಸಿದೆ.

    ಅದರಂತೆ ಗಡಿಭಾಗವಾದ ಕುಟ್ಟ ಮೂಲಕ ಗುಡಲೂರು ಮಾರ್ಗವಾಗಿ ಸಂಚರಿಸುವ ವಾಹನಗಳನ್ನು ಬದಲೀ ಮಾರ್ಗವಾದ ಗೋಣಿಕೊಪ್ಪ ಕೂಟುಪುಳ – ಇರಿಟ್ಟಿ (ಕಣ್ಣೂರು ಜಿಲ್ಲೆ) ಮಾರ್ಗದ ಮೂಲಕ ಸಂಚರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾಎರೆ.

    ಆದ್ದರಿಂದ, ಗುಡಲೂರು ರಸ್ತೆಯಲ್ಲಿ ವಾಹನ ಸಂಚಾರ ಸುಗಮವಾಗುವವರೆಗೆ ಜಿಲ್ಲೆಯ ಕುಟ್ಟ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಬದಲೀ ರಸ್ತೆ ಮಾಕುಟ್ಟ ಮುಖಾಂತರ ತಮರಶೆರಿ ಘಾಟ್, ಗುಡಲೂರು ಮಾರ್ಗವನ್ನು ಬಳಸಲು ಕೊಡಗು ಜಿಲ್ಲಾಡಳಿತ ಸಲಹೆ ನೀಡಿದೆ.

    ಮಲೆನಾಡು ಭಾಗದ ಶಾಲೆಗಳಿಗೆ ರಜೆ ಘೋಷಣೆ
    ಇನ್ನೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಆಗಸ್ಟ್‌ 30ರ ಶನಿವಾರದಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್.ಪುರ, ಕಳಸ ತಾಲೂಕು, ಚಿಕ್ಕಮಗಳೂರು ತಾಲೂಕಿನ ಕಸಬಾ, ಅಂಬಳೆ, ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗಳು, ತರೀಕೆರೆ ತಾಲೂಕಿನ ಲಿಂಗದಹಳ್ಳಿ-ಲಕ್ಕವಳ್ಳಿ ಹೋಬಳಿಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅದೇಶ ಹೊರಡಿಸಿದ್ದಾರೆ.

  • ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಭುಗಿಲೆದ್ದ ಆಕ್ರೋಶ

    ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಭುಗಿಲೆದ್ದ ಆಕ್ರೋಶ

    ಬಿಗ್ ಬಾಸ್ ಸ್ಪರ್ಧಿಯೊಬ್ಬರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ವಿಚಾರ ದೇಶದಾದ್ಯಂತ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಪವಿತ್ರ ಕೊಳದಲ್ಲಿ ಕಾಲು ತೊಳೆದುಕೊಂಡಿದ್ದ ಆ ಬಿಗ್ ಬಾಸ್ ಸ್ಪರ್ಧಿ, ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದೇ ನೀರಿನಿಂದಲೇ ದೇವರಿಗೆ ಪೂಜೆ ಸಲ್ಲಿಸಿದ್ದರಿಂದ, ಭಕ್ತರು ಮತ್ತು ಪೂಜಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೇರಳದ ಸುಪ್ರಸಿದ್ಧ ದೇವಾಲಯ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನಕ್ಕೆ ಮಲಯಾಳಂ ಬಿಗ್ ಬಾಸ್ ಸ್ಪರ್ಧಿ ಹಾಗೂ ಯೂಟ್ಯೂಬರ್ ಆಗಿರುವ ಜಾಸ್ಮಿನ್ ಜಾಫರ್ (Jasmin Jaffar) ಭೇಟಿ ಕೊಟ್ಟಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿರುವ ಪವಿತ್ರ ಕೊಳದಲ್ಲಿ ಕಾಲು ತೊಳೆದುಕೊಂಡಿದ್ದಾರೆ. ಅದನ್ನು ವಿಡಿಯೋ ಕೂಡ ಮಾಡಿದ್ದಾರೆ. ವಿಡಿಯೋ ಮಾಡಿ ಆರು ದಿನಗಳ ನಂತರ ಆ ವಿಡಿಯೋವನ್ನು ಅಪ್‌ಲೋಡ್ ಮಾಡಿದ್ದಾರೆ. ಈ ವಿಡಿಯೋ ಕಂಡು ಭಕ್ತರು ಆಘಾತಗೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ಹುಟ್ಟುಹಬ್ಬಕ್ಕೆ `ಬಿಗ್’ ಸರ್‌ಪ್ರೈಸ್

    ಆ ಜಾಗದಲ್ಲಿ ಹಿಂದೂಯೇತರರು ಹೋಗುವಂತಿಲ್ಲವಂತೆ. ಫೋಟೋಗ್ರಫಿ ಮಾಡುವಂತಿಲ್ಲ. ಈ ಎಲ್ಲ ನಿಯಮವನ್ನು ಜಾಸ್ಮಿನ್ ಉಲ್ಲಂಘನೆ ಮಾಡಿದ್ದಾರೆ. ಜೊತೆಗೆ ಜಾಸ್ಮಿನ್ ಕಾಲು ತೊಳೆದುಕೊಂಡ ಕೊಳದಿಂದಲೇ ದೇವರ ಪೂಜೆಗೆ ನೀರು ತಗೆದುಕೊಂಡು ಹೋಗಲಾಗಿದೆಯಂತೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ದೇವಸ್ಥಾನ ಮಂಡಳಿಯು ಜಾಸ್ಮಿನ್ ವಿರುದ್ಧ ದೂರು ದಾಖಲಿಸಿದೆ. ಇದನ್ನೂ ಓದಿ: ರಿಷಿಕೇಶದಲ್ಲಿ ಗಂಗಾರತಿ ಮಾಡಿದ ಫರ‍್ಹಾ ಖಾನ್

    ವಿಷಯ ತಿಳಿಯುತ್ತಿದ್ದಂತೆಯೇ ಜಾಸ್ಮಿನ್ ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ. ನನಗೆ ತಿಳಿಯದೇ ಆಗಿರುವಂಥ ಪ್ರಮಾದವಿದು. ಹಾಗಾಗಿ ಕ್ಷಮೆ ಕೇಳುತ್ತೇನೆ ಅಂತ ಹೇಳಿದ್ದಾರೆ. ಆದರೆ, ಭಕ್ತರ ಆಕ್ರೋಶವಂತೂ ನಿಲ್ಲುತ್ತಲೇ ಇಲ್ಲ.

  • ಲೈಂಗಿಕ ಕಿರುಕುಳದ ಆರೋಪ – ಕಾಂಗ್ರೆಸ್‌ನ ಪಾಲಕ್ಕಾಡ್ ಶಾಸಕ ರಾಹುಲ್ ಅಮಾನತು

    ಲೈಂಗಿಕ ಕಿರುಕುಳದ ಆರೋಪ – ಕಾಂಗ್ರೆಸ್‌ನ ಪಾಲಕ್ಕಾಡ್ ಶಾಸಕ ರಾಹುಲ್ ಅಮಾನತು

    ತಿರುವನಂತಪುರಂ: ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿರುವ ಹಿನ್ನೆಲೆ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಪಾಲಕ್ಕಾಡ್ (Palakkad) ಶಾಸಕ ರಾಹುಲ್ ಮಾಂಕೂಟತ್ತಿಲ್ (Rahul Mamkootathil) ಅವರನ್ನು ಕೇರಳ (Kerala) ಪ್ರದೇಶ ಕಾಂಗ್ರೆಸ್ ಸಮಿತಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ.

    ಈ ಬಗ್ಗೆ ಮಾತನಾಡಿದ ಹಿರಿಯ ಕಾಂಗ್ರೆಸ್ (Congress) ನಾಯಕ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಮುರಳೀಧರನ್ (K Muraleedharan), ರಾಹುಲ್ ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವುದನ್ನು ದೃಢಪಡಿಸಿದ್ದಾರೆ. ರಾಹುಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸುವ ಯಾವುದೇ ಅಧಿಕೃತ ಪ್ರಕಟಣೆಯನ್ನು ಕೆಪಿಸಿಸಿ ಇನ್ನೂ ಬಿಡುಗಡೆ ಮಾಡಿಲ್ಲ. ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾಯಿತರಾದ ರಾಹುಲ್ ಅವರು, ಶಾಸಕ ಸ್ಥಾನದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುವುದನ್ನು ಅವರೇ ನಿರ್ಧರಿಸಬೇಕು ಎಂದು ಮುರಳೀಧರನ್ ಹೇಳಿದ್ದಾರೆ. ಇದನ್ನೂ ಓದಿ: ಗೃಹ ಶುದ್ಧಿ ಅಭಿಯಾನಕ್ಕೆ ಚಾಲನೆ – ಮಾನವ ಕಳ್ಳ ಸಾಗಣೆಯನ್ನು ಸರ್ಕಾರ, ಸಮಾಜ ಒಗ್ಗೂಡಿ ಎದುರಿಸಬೇಕು: ಗೆಹ್ಲೋಟ್

    ರಾಹುಲ್ ಅವರು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನ ತೊರೆದಿರುವುದು ಅವರ ವಿರುದ್ಧ ಪಕ್ಷ ಕೈಗೊಂಡಿರುವ ಮೊದಲ ಕ್ರಮ, ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದು ಎರಡನೇ ಕ್ರಮ, ಮುಂದೆ ಇನ್ನೂ ಹೆಚ್ಚಿನ ಆರೋಪಗಳು ಕೇಳಿ ಬಂದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೇರಿದಂತೆ ಮೂರನೇ ಕ್ರಮವೂ ಪಕ್ಷ ತೆಗೆದುಕೊಳ್ಳಲಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಅನ್ನು ದೂಷಿಸಲು ಯಾರಿಗೂ ಅವಕಾಶವಿಲ್ಲ. ಏಕೆಂದರೆ, ಇಂತಹ ಪ್ರಕರಣಗಳಲ್ಲಿ ಯಾವುದೇ ಪಕ್ಷವೂ ಈ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ. ರಾಹುಲ್ ವಿರುದ್ಧದ ಆರೋಪಗಳ ಬಗ್ಗೆ ಪಕ್ಷವು ಆಂತರಿಕ ಪರಿಶೀಲನೆ ನಡೆಸಲಿದೆ. ರಾಹುಲ್ ಅವರಿಗೂ ಉತ್ತರ ನೀಡಲು ಅವಕಾಶ ನೀಡಲಿದೆ ಎಂದು ಮುರಳೀಧರನ್ ತಿಳಿಸಿದ್ದಾರೆ.

  • ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

    ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

    ಚೆನ್ನೈ: ಫುಟ್‌ಬಾಲ್ (Football) ತಾರೆ, ಅರ್ಜೆಂಟಿನಾದ (Argentina) ಆಟಗಾರ ಲಿಯೋನೆಲ್ ಮೆಸ್ಸಿ (Lionel Messi) ಕೇರಳಕ್ಕೆ (Kerala) ಭೇಟಿ ಕನ್ಫರ್ಮ್ ಆಗಿದ್ದು, ಇದೇ ನವೆಂಬರ್‌ನಲ್ಲಿ ಭೇಟಿ ನೀಡಲಿದ್ದಾರೆ ಎಂದು ಕೇರಳದ ಕ್ರೀಡಾ ಸಚಿವ ವಿ. ಅಬ್ದುರ್ ಹಿಮಾನ್ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿದ ಅವರು, ಕೇರಳದಲ್ಲಿ ಆಯೋಜನೆಗೊಳ್ಳಲಿರುವ ಸೌಹಾರ್ದ ಪಂದ್ಯದಲ್ಲಿ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ಆಡಲು ಸಜ್ಜಾಗಿದೆ. ಈ ಪಂದ್ಯಾವಳಿಗಾಗಿ ಫಿಫಾದ ಅಗ್ರ 50 ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಈ ಕುರಿತು ಈಗಾಗಲೇ ಆಸ್ಟ್ರೇಲಿಯಾ ತಂಡ ಉತ್ಸುಕತೆ ತೋರಿದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ವಾಟ್ಸಪ್‌ನಲ್ಲಿ ಬಂತು ಮದುವೆ ಕಾರ್ಡ್ – ಕ್ಲಿಕ್ ಮಾಡ್ತಿದ್ದಂಗೆ 2 ಲಕ್ಷ ರೂ. ಕಳೆದುಕೊಂಡ ಸರ್ಕಾರಿ ನೌಕರ

    ಅರ್ಜೆಂಟೀನಾ ಫುಟ್‌ಬಾಲ್ ಅಸೋಸಿಯೆಷನ್ (Argentine Football Association) ಕೂಡ ಈ ಕುರಿತು ಮಾಹಿತಿಯನ್ನು ದೃಢಪಡಿಸಿದೆ. ಅಕ್ಟೋಬರ್ 6ರಿಂದ 14ರವರೆಗೆ ಯುಎಸ್‌ನಲ್ಲಿ, ಬಳಿಕ ಅಂಗೋಲಾದ ಲುವಾಂಡಾದಲ್ಲಿ, ಆನಂತರ ನವೆಂಬರ್ 10ರಿಂದ 18ರವರೆಗೆ ಭಾರತದ ಕೇರಳದಲ್ಲಿ ಆಡಲಿದೆ ಎಂದು ತಿಳಿಸಿದೆ.

    ಸದ್ಯ ಭಾರತದಲ್ಲಿ ಆಡಲು ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ ತಯಾರಾಗಿದ್ದು, ಕೇರಳ ಸರ್ಕಾರ ಮೆಸ್ಸಿ ಭೇಟಿಯನ್ನು ಖಚಿತಪಡಿಸಿದೆ. ಈ ಹಿಂದೆ 2011ರಲ್ಲಿ ಮೆಸ್ಸಿ ಒಳಗೊಂಡ ಅರ್ಜೆಂಟೀನಾ ತಂಡವು ವೆನೆಜುವೆಲಾ ವಿರುದ್ಧ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಆಡಿತ್ತು.ಇದನ್ನೂ ಓದಿ: ಬಾಘಿ-4 ಟ್ರೈಲರ್‌ಗೆ ಮುಹೂರ್ತ ಫಿಕ್ಸ್

  • ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ತಿರುವನಂತಪುರಂ: ಭಾರತೀಯ ಕಮ್ಯುನಿಸ್ಟ್ ಪಕ್ಷದ (CIP) ಹಿರಿಯ ನಾಯಕ ಹಾಗೂ ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ (Suravaram Sudhakar Reddy) ಅವರು ಶುಕ್ರವಾರ ತಡರಾತ್ರಿ ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು.

    ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸುರವರಂ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ (Private Hospital) ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ಮುಂಬೈ-ಜೋಧ್‌ಪುರ ವಿಮಾನ ರನ್‌ವೇಯಲ್ಲೇ ಸ್ಟಾಪ್ ಮಾಡಿದ ಪೈಲಟ್

    1942ರ ಮಾರ್ಚ್‌ 25ರಂದು ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಕೊಂಡ್ರಾವಪಲ್ಲಿ ಗ್ರಾಮದಲ್ಲಿ ಜನಿಸಿದ ಸುರವರಂ ಸುಧಾಕರ ರೆಡ್ಡಿ ಎಡಪಂಥೀಯ ಸಿದ್ಧಾಂತಗಳಿಂದ ಆಕರ್ಷಿತರಾಗಿದ್ದರು. ವಿದ್ಯಾರ್ಥಿ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. 15 ವರ್ಷ ವಯಸ್ಸಿನವರಾಗಿದ್ದಾಗಲೇ ಕರ್ನೂಲ್‌ನ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಆಂದೋಲನ ನಡೆಸಿ ಗಮನ ಸೆಳೆದಿದ್ದರು.

    ರೆಡ್ಡಿ ಅವರು 1998-1999 ಮತ್ತು 2004-2009ರ ಅವಧಿಯಲ್ಲಿ 2 ಬಾರಿ ನಲ್ಗೊಂಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿದ್ದರು. ಸಂಸತ್ತಿನಲ್ಲಿದ್ದ ಅವಧಿಯಲ್ಲಿ, ಕಾರ್ಮಿಕರ ಹಕ್ಕುಗಳು, ಸಾಮಾಜಿಕ ನ್ಯಾಯ, ರೈತರು ಹಾಗೂ ಮತ್ತು ಅಂಚಿನಲ್ಲಿರುವ ಸಮುದಾಯಗಳ ಕಲ್ಯಾಣಕ್ಕಾಗಿ ಹೋರಾಡಿದ್ದರು. ಅಷ್ಟೇ ಅಲ್ಲ ಸರ್ಕಾರದ ಭ್ರಷ್ಟಾಚಾರವನ್ನ ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

    2012 ರಿಂದ 2019ರ ವರೆಗೆ, ಅವರು ಭಾರತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಮೂರು ಅವಧಿಗೆ ಈ ಹುದ್ದೆಯನ್ನು ಅಲಂಕರಿಸಿದ್ದ ಸುರವರಂ ಅವರು ಜೀವನದುದ್ದಕ್ಕೂ ಸಾಮೂಹಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಸರಳ, ಸಜ್ಜನಿಕೆಯ ಜೀವನ ಶೈಲಿಯಿಂದಾಗಿ ಜನಮನ ಗೆದ್ದಿದ್ದರು. ಇದನ್ನೂ ಓದಿ: ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

  • ನೆಲಮಂಗಲ | ಹಸುಗಳನ್ನು ಕೊಂದು ಎಸೆದಿದ್ದ ಮೂವರು ಆರೋಪಿಗಳು ಅರೆಸ್ಟ್

    ನೆಲಮಂಗಲ | ಹಸುಗಳನ್ನು ಕೊಂದು ಎಸೆದಿದ್ದ ಮೂವರು ಆರೋಪಿಗಳು ಅರೆಸ್ಟ್

    – ಕೇರಳಕ್ಕೆ ಹಸುಗಳನ್ನು ಸಾಗಿಸುತ್ತಿದ್ದ ಗ್ಯಾಂಗ್
    – ಮಾಂಸಕ್ಕೆ ಯೋಗ್ಯವಲ್ಲ ಅಂತ ಕೊಂದು ಎಸೆದಿದ್ದ ಪಾಪಿಗಳು

    ನೆಲಮಂಗಲ: ಹಸುಗಳ (Cow) ಕತ್ತು ಕೊಯ್ದು ರಸ್ತೆಯಲ್ಲಿ ಬಿಸಾಡಿದ್ದ ಮೂವರು ಆರೋಪಿಗಳನ್ನು ನೆಲಮಂಗಲ (Nelamangala) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಗಳನ್ನು ಇಮ್ರಾನ್ (30) ಸೈಯದ್ ನವಾಜ್ (35) ಗುರುತಿಸಲಾಗಿದೆ. ಮತ್ತೋರ್ವ ಆರೋಪಿಯ ಹೆಸರು ಬಹಿಂಗಪಡಿಸಿಲ್ಲ. ಆರೋಪಿಗಳು ಇತ್ತೀಚೆಗೆ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದ ಸೇತುವೆ ಮೇಲೆ 2 ನಾಟಿ ಹಸುಗಳ ಕತ್ತು ಕೊಯ್ದು ಬಿಸಾಡಿದ್ದರು. ಈ ಪ್ರಕರಣದ ಬಗ್ಗೆ ಸದನದಲ್ಲೂ ಚರ್ಚೆ ಆಗಿತ್ತು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳದ ಆರೋಪ – ಮಗುವಿನ ಎದುರೇ ತಾಯಿ ನೇಣಿಗೆ ಶರಣು

    ಈ ಸಂಬಂಧ ತನಿಖೆ ಕೈಗೆತ್ತಿಕೊಂಡಿದ್ದ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು, ಕೇರಳಕ್ಕೆ (Kerala) ಹಸುಗಳನ್ನ ಸಾಗಿಸುತ್ತಿದ್ದ ಗ್ಯಾಂಗ್‍ನ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಹತ್ಯೆಯಾದ ಹಸುಗಳ ಮಾಂಸ ತಿನ್ನಲು ಯೋಗ್ಯವಲ್ಲದ ಕಾರಣ ಆರೋಪಿಗಳು ಕೊಂದು ಬಿಸಾಡಿದ್ದಾರೆ ಎಂಬುದು ತಿಳಿದು ಬಂದಿದೆ.

    ಈ ಪ್ರಕರಣ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಗದಗ | ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ – ಗ್ರಾಮ ಸಹಾಯಕ ಸಾವು

  • ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ

    ಶಬರಿಮಲೆ ಯಾತ್ರೆಗೆ ಶ್ರೀಲಂಕಾ ಸರ್ಕಾರದಿಂದಲೂ ಮಾನ್ಯತೆ

    ಕೊಲಂಬೋ: ಕೇರಳದ ಶಬರಿಮಲೆ ಅಯ್ಯಪ್ಪ (Sabarimala) ದೇಗುಲಕ್ಕೆ ಶ್ರೀಲಂಕಾ (Sri Lanka) ಪ್ರಜೆಗಳು ವಾರ್ಷಿಕ ತೀರ್ಥಯಾತ್ರೆ ಕೈಗೊಳ್ಳಬಹುದು ಎಂದು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ.

    ಸೋಮವಾರ (ಆ.11) ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಮಂಗಳವಾರ (ಆ.12) ಹೇಳಿಕೆ ಬಿಡುಗಡೆಗೊಳಿಸಿದೆ.ಇದನ್ನೂ ಓದಿ: Delhi | ಈಜು ತರಗತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್

    ಶ್ರೀಲಂಕಾದ ಭಕ್ತಾದಿಗಳು ಶಬರಿಮಲೆ ಅಯ್ಯಪ್ಪನನ್ನು ಪೂಜಿಸುತ್ತಾರೆ. ಅದಲ್ಲದೇ ಪ್ರತಿ ವರ್ಷ ಸುಮಾರು 15 ಸಾವಿರಕ್ಕೂ ಅಧಿಕ ಶೀಲಂಕಾ ಪ್ರಜೆಗಳು ಶಬರಿಮಲೆ ದೇಗುಲಕ್ಕೆ ಭೇಟಿ ನೀಡುತ್ತಾರೆ. ಹೀಗಾಗಿ ಶ್ರೀಲಂಕಾ ಸರ್ಕಾರ ಶಬರಿಮಲೆ ಯಾತ್ರೆಯನ್ನು ಸರ್ಕಾರದ ಮಾನ್ಯತೆ ಪಡೆದ ಯಾತ್ರೆ ಎಂದು ಪರಿಗಣಿಸಿದೆ.

    ಶಬರಿಮಲೆ ಅಯ್ಯಪ್ಪನ ದೇಗುಲದಲ್ಲಿ ವಾರ್ಷಿಕ ಮಂಡಲ ಪೂಜೆ ಉತ್ಸವವು ನವೆಂಬರ್‌ನಿAದ ಡಿಸೆಂಬರ್‌ವರೆಗೆ ನಡೆಯುತ್ತದೆ. ಬಳಿಕ ಜನವರಿಯಲ್ಲಿ ಮಕರವಿಳಕ್ಕು ಉತ್ಸವ ನಡೆಯುತ್ತದೆ. ಈ ಅವಧಿಯಲ್ಲಿ ಭಕ್ತರು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ.ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ