Tag: kerala

  • ಕೊರೊನಾಗೆ ಕೇರಳದಲ್ಲಿ ಮೊದಲ ಬಲಿ – ಮೃತನ ಪತ್ನಿ, ಚಾಲಕನಿಗೂ ಸೋಂಕು

    ಕೊರೊನಾಗೆ ಕೇರಳದಲ್ಲಿ ಮೊದಲ ಬಲಿ – ಮೃತನ ಪತ್ನಿ, ಚಾಲಕನಿಗೂ ಸೋಂಕು

    – ದೇಶದಲ್ಲಿ 20ಕ್ಕೆ ಏರಿದ ಸಾವಿನ ಸಂಖ್ಯೆ
    – ಸಾವಿನ ಸಂಖ್ಯೆ ‘ಮಹಾ’ ಟಾಪ್

    ತಿರುವನಂತಪುರಂ: ಹೆಮ್ಮಾರಿ ಕೊರೊನಾ ವೈರಸ್‍ಗೆ ಕೇರಳದಲ್ಲಿ ಮೊದಲ ಸಾವು ಸಂಭವಿಸಿದೆ. ಕೊಚ್ಚಿಯ ಕಲಾಮಸ್ಸೆರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ 69 ವರ್ಷದ ವೃದ್ಧ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

    ಕೊಚ್ಚಿಯ ಚುಲ್ಲಿಕಲ್ ನಿವಾಸಿ ವೃದ್ಧ ಮಾರ್ಚ್ 16ರಂದು ದುಬೈನಿಂದ ಮರಳಿದ್ದರು. ಅವರೊಂದಿಗೆ ಸಂಪರ್ಕ ಹೊಂದಿದ್ದ ಪತ್ನಿ ಹಾಗೂ ಚಾಲಕನಿಗೂ ಸೋಂಕು ತಗುಲಿದ್ದು, ಅವರನ್ನು ಕೂಡ ಕಲಾಮಸ್ಸೆರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

    ಶುಕ್ರವಾರ ಸಂಜೆವರೆಗೂ ಕೇರಳದಲ್ಲಿ 176 ಪ್ರಕರಣಗಳು ಪತ್ತೆಯಾಗಿದ್ದು, 12 ಜನರು ಚೇತರಿಸಿಕೊಂಡಿದ್ದಾರೆ. ಆದರೆ ಮೃತ ವೃದ್ಧ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಕೇರಳ ಸರ್ಕಾರ ಹೇಳಿದೆ.

    ವೃದ್ಧ ಮಾರ್ಚ್ 16ರಂದು ದುಬೈನಿಂದ ಮರಳಿದ್ದಾಗ ಅವರಲ್ಲಿ ಸೋಂಕು ತಗುಲಿರುವ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಹೋಮ್ ಕ್ವಾರೆಂಟೈನ್ ಇರುವಂತೆ ಸೂಚನೆ ನೀಡಲಾಗಿತ್ತು. ಮಾರ್ಚ್ 22ರಂದು ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ವೆಂಟಿಲೇಟರ್ ಮೇಲೆ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

    ಭಾರತದಲ್ಲಿ ಈವರೆಗೂ ಒಟ್ಟು 20 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಕೇರಳ, ದೆಹಲಿ, ಹಿಮಾಚಾಲ, ತಮಿಳುನಾಡು, ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಜಮ್ಮು ಕಾಶ್ಮೀರಗಳಲ್ಲಿ ತಲಾ ಒಂದು, ಗುಜರಾತ್ ಮತ್ತು ಕರ್ನಾಟಕದಲ್ಲಿ ತಲಾ ಮೂರು, ಮಧ್ಯಪ್ರದೇಶದಲ್ಲಿ ಎರಡು ಮತ್ತು ಮಹಾರಾಷ್ಟ್ರದಲ್ಲಿ ಐದು ಜನರು ಮೃತಪಟ್ಟಿದ್ದಾರೆ.

    ಕೇರಳದ ಅಂಕಿ-ಅಂಶ:
    ಕೇರಳದ ವಿವಿಧ ಆಸ್ಪತ್ರೆಗಳಲ್ಲಿ ಬುಧವಾರ 112 ಕೊರೊನಾ ಶಂಕಿರತನ್ನು ವೀಕ್ಷಣೆಗಾಗಿ ದಾಖಲಿಸಲಾಗಿದೆ. ಆಸ್ಪತ್ರೆಗಳಲ್ಲಿ ಈವರೆಗೂ 616 ಜನರು ಚಿಕಿತ್ಸೆ ಪಡೆಯುತ್ತಿದ್ದರೆ, 1,09,683 ಜನ ಹೋಮ್ ಕ್ವಾರೆಂಟೈನ್‍ನಲ್ಲಿದ್ದಾರೆ. ಹೆಚ್ಚಿನ ಸಂಖ್ಯೆಯ ಸೋಂಕಿತರು ಕಾಸರಗೋಡುನಲ್ಲಿರುವುದರಿಂದ ಈಗಿರುವ ನಿರ್ಬಂಧಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಮುಂದುವರಿಸಬೇಕು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ.

    ಇಲ್ಲಿಯವರೆಗೆ ವೇಳೆಗೆ ರಾಜ್ಯದಲ್ಲಿ 1,10,299 ಜನರನ್ನು ನಿಗಾದಲ್ಲಿ ಇಡಲಾಗಿದ್ದು, ಈ ಪೈಕಿ 616 ಜನರನ್ನು ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಒಟ್ಟು 5,679 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 4,448 ಮಂದಿಯ ರಿಪೋರ್ಟ್ ನೆಗೆಟಿವ್ ಬಂದಿದೆ ಎಂದು ಪಿಣರಾಯಿ ವಿಜಯನ್ ಖಚಿತಪಡಿಸಿದ್ದಾರೆ.

  • ಶುಕ್ರವಾರ ಅತಿ ಹೆಚ್ಚು 125 ಪ್ರಕರಣ – ದೇಶದಲ್ಲಿ 834ಕ್ಕೆ ಏರಿಕೆ

    ಶುಕ್ರವಾರ ಅತಿ ಹೆಚ್ಚು 125 ಪ್ರಕರಣ – ದೇಶದಲ್ಲಿ 834ಕ್ಕೆ ಏರಿಕೆ

    ನವದೆಹಲಿ: ಶುಕ್ರವಾರ ಒಂದೇ ದಿನ ದೇಶದಲ್ಲಿ ಅತಿ ಹೆಚ್ಚು 125 ಕೊರೊನಾ ಪಾಸಿಟಿವ್ ದಾಖಲಾಗಿದ್ದು, ಒಟ್ಟು ಪೀಡಿತರ ಸಂಖ್ಯೆ 834ಕ್ಕೆ ಏರಿಕೆಯಾಗಿದೆ.

    ಒಂದೇ ದಿನದಲ್ಲಿ ಅತಿ ಹೆಚ್ಚು ಏರಿಕೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 19 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಮೂರು ಸೇರಿದಂತೆ ದೆಹಲಿ, ಮಹಾರಾಷ್ಟ್ರ, ಪಂಜಾಬ್, ಗುಜರಾತ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ರೋಗಿಗಳು ಸಾವನ್ನಪ್ಪಿದ್ದಾರೆ.

    ಕೇರಳದಲ್ಲಿ 39 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸಂಖ್ಯೆ 164ಕ್ಕೆ ಏರಿಕೆಯಾಗಿದೆ. 39ರ ಪೈಕಿ 34 ಪ್ರಕರಣಗಳು ಕಾಸರಗೋಡನಲ್ಲೇ ದಾಖಲಾಗಿದೆ.

    ಕಾಸರಗೋಡು ಗಡಿ ಬಂದ್:ಕೊರೋನಾ ವೈರಸ್ ಸೋಂಕಿತರ ಕಾಸರಗೋಡಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಂಪ್ಲೀಟ್ ಲಾಕ್‍ಡೌನ್‍ಗೆ ಪೊಲೀಸ್ ಆಯುಕ್ತ ಐಪಿಎಸ್ ಹರ್ಷ ಆದೇಶಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರೂ, ಶಾಸಕರೂ, ಸಂಸದರೊಂದಿಗೆ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

    https://twitter.com/compolmlr/status/1243567168048029699

    ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಲ್ಫ್ ದೇಶ ಮತ್ತು ದುಬೈನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇಳಿದ ಪರಿಣಾಮ ಕಾಸರಗೋಡಿನಲ್ಲೂ ಸೋಂಕಿತರ ಸಂಖ್ಯೆ ಅತಿವೇಗದಲ್ಲಿ ಏರಿಕೆಯಾಗುತ್ತಿದೆ.

  • ಮೂರನೇ ಹಂತಕ್ಕೆ ತಲುಪಿತಾ ಭಾರತ?- ಉಡಾಫೆ ಜನರೇ ಎಚ್ಚರ, ಎಚ್ಚರ

    ಮೂರನೇ ಹಂತಕ್ಕೆ ತಲುಪಿತಾ ಭಾರತ?- ಉಡಾಫೆ ಜನರೇ ಎಚ್ಚರ, ಎಚ್ಚರ

    – ಮಣಿಪಾಲದ ಕೆಎಂಸಿ ಆಸ್ಪತ್ರೆಯ ಒಪಿಡಿ ಬಂದ್

    ಬೆಂಗಳೂರು: ಹೆಮ್ಮಾರಿ, ಡೆಡ್ಲಿ ವೈರಸ್ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಿಸುತ್ತಿದೆ. ಬುಧವಾರ 51 ಇದ್ದ ಕೊರೊನಾ ಪ್ರಕರಣ ಗುರುವಾರ ದಿಢೀರ್ 55ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ನಾಲ್ಕು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

    ವಿವಿಧ ರಾಜ್ಯಗಳಲ್ಲಿ ನಿತ್ಯವೂ ಸೋಂಕಿತರ ಸಂಖ್ಯೆ ಏರುವುದನ್ನು ಗಮನಿಸಿದರೆ ದೇಶದಲ್ಲಿ ಕೊರೊನಾ 3ನೇ ಹಂತಕ್ಕೆ ಕಾಲಿಟ್ಟಿದೇಯಾ ಎಂಬ ಅನುಮಾನ ಮೂಡಲು ಶುರುವಾಗಿದೆ. ಕರ್ನಾಟಕ, ತೆಲಂಗಾಣ ಮತ್ತು ದೆಹಲಿಯಲ್ಲಿ ಗುರುವಾರ ತಲಾ 4 ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕೊರೊನಾ ಥರ್ಡ್ ಸ್ಟೇಜ್‍ಗೆ ಲಗ್ಗೆ ಇಟ್ಟಿದೇಯಾ? ಸಮುದಾಯಕ್ಕೆ ಕೊರೊನಾ ಹಬ್ಬುತಿದೇಯಾ ಎಂಬ ಅನುಮಾನಕ್ಕೆ ಕಾರಣ ಆಗಿದೆ.

    ಮಣಿಪಾಲ:
    ಮಣಿಪಾಲದ ಕೆಎಂಸಿ ಆಸ್ಪತ್ರೆ ಇಂದಿನಿಂದ ಏಪ್ರಿಲ್ 15 ರವರೆಗೆ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ. ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ಸೇವೆ ಮಾತ್ರ ಮಣಿಪಾಲ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಸಿಗಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ.

    ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗೆ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವ್ಯಕ್ತಿಗೆ ಕೆಎಂಸಿಯಲ್ಲಿ ಚಿಕಿತ್ಸೆ ಸಿಗುತ್ತಿರುವುದರಿಂದ ಒಪಿಡಿ ರೋಗಿಗಳಿಗೆ ಯಾವುದೇ ಸಮಸ್ಯೆಗಳು ಆಗಬಾರದು ಎನ್ನುವ ಉದ್ದೇಶದಿಂದ ಕೆಎಂಸಿಯ ವೈದ್ಯಕೀಯ ಅಧೀಕ್ಷಕರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

    ಕೊಡಗು ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹರಡದಂತೆ ಮುಂಜಾಗೃತ ಕ್ರಮ ತೆಗೆದುಕೊಳ್ಳಲಾಗಿದೆ. ಮಡಿಕೇರಿಯಲ್ಲಿ ತರಕಾರಿ ಹಾಗೂ ಅಗತ್ಯ ವಸ್ತುಗಳ ಖರೀದಿಸುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಮಾರುಕಟ್ಟೆಯಲ್ಲಿ ಮತ್ತು ಅಂಗಡಿ ಮುಂಗಟ್ಟುಗಳ ಮುಂದೆ ಖುದ್ದು ಪೊಲೀಸರೇ ಲ್ಯಾಂಡ್ ಮಾಕ ಮಾಡಿದ್ದಾರೆ. ಜನರು ಅಂತರಕಾಯ್ದುಕೊಂಡು ವಹಿವಾಟು ನಡೆಸುವಂತೆ ಸೂಚಿಸಿದ್ದಾರೆ.

    ಮೈಸೂರಿನಲ್ಲಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಕಿರಾಣಿ ಅಂಗಡಿ ಮಾಲೀಕರು ತಮ್ಮ ಅಂಗಡಿಯನ್ನು ಗಾಜಿನಲ್ಲಿ ಕವರ್ ಮಾಡಿದ್ದಾರೆ. ಮೈಸೂರಿನ ಇಟ್ಟಿಗೆಗೂಡಿನ ರಿಷಭ್ ಬಂಢಾರ್ ದಿನಸಿ ಅಂಗಡಿಯನ್ನು ಮಾಲೀಕರು ಗಾಜಿನಲ್ಲಿ ಮುಚ್ಚಿ ಅಂಗಡಿ ಪಕ್ಕ ಚಿಕ್ಕದೊಂದು ಜಾಗದ ತೆರೆದು ಅಲ್ಲಿಂದ ದಿನಸಿ ಪದಾರ್ಥ ವಿತರಣೆ ಮಾಡುತ್ತಿದ್ದಾರೆ. ಅಂಗಡಿಯ ಹೊರಗೆ ಸರತಿ ಸಾಲಿನಲ್ಲಿ ಮೂರು ಅಡಿ ಅಂತರದಲ್ಲಿ ಮಾರ್ಕಿಂಗ್ ಮಾಡಲಾಗಿದೆ. ಮಾಸ್ಕ್ ಧರಿಸಿ ಬಂದವರಿಗೆ ಮಾತ್ರ ಪದಾರ್ಥ ನೀಡಲಾಗುತ್ತಿದೆ.

  • ವಿದೇಶದಿಂದ ಬಂದ ಕೇರಳಿಗರು ಖಾಸಗಿ ವಾಹನ ಬಳಸುವಂತಿಲ್ಲ – ದ.ಕ ಜಿಲ್ಲಾಡಳಿತ ಕಟ್ಟೆಚ್ಚರ

    ವಿದೇಶದಿಂದ ಬಂದ ಕೇರಳಿಗರು ಖಾಸಗಿ ವಾಹನ ಬಳಸುವಂತಿಲ್ಲ – ದ.ಕ ಜಿಲ್ಲಾಡಳಿತ ಕಟ್ಟೆಚ್ಚರ

    ಮಂಗಳೂರು: ದೇಶದಿಂದ ಬಂದ ಕೇರಳಿಗರಿಗೆ ಖಾಸಗಿ ವಾಹನ ಬಳಸುವಿಕೆಯನ್ನು ಮಂಗಳೂರು ವಿಮಾನ ನಿಲ್ದಾನದಲ್ಲಿ ಜಿಲ್ಲಾಡಳಿತ ನಿಷೇಧಿಸಿದೆ.

    ಕೇರಳದಿಂದ ಬಂದ ಪ್ರಯಾಣಿಕರಿಗೆ ಜಿಲ್ಲಾಡಳಿತ ಸರ್ಕಾರಿ ಬಸ್ ಸೇವೆ ಕಲ್ಪಿಸಿದೆ. ಕರ್ನಾಟಕದ ಸರ್ಕಾರಿ ಬಸ್ ನಲ್ಲಿ ಕೇರಳದ ಗಡಿವರೆಗೂ ಡ್ರಾಪ್ ಮಾಡಲಾಗುತ್ತಿದೆ. ಇಂದು ದುಬೈನಿಂದ ಬಂದ ಪ್ರಯಾಣಿಕರನ್ನು 3 ಬಸ್ ನಲ್ಲಿ ತಲಪಾಡಿಯವರೆಗೂ ಬಿಡಲಾಗಿದೆ.

    ವಿಮಾನದಲ್ಲಿ ಬಂದ ಪ್ರಯಾಣಿಕರು ತಲಪಾಡಿಯಿಂದ ತಮ್ಮ ಖಾಸಗಿ ವಾಹನಗಳಲ್ಲಿ ಕೇರಳಕ್ಕೆ ಪ್ರಯಾಣ ಬೆಳಸಬೇಕಿದ್ದು, ವಿದೇಶದಿಂದ ಬಂದವರಿಗೆ ಮಂಗಳೂರಿನಲ್ಲಿ ಸುತ್ತಾಡಲು ನಿರ್ಬಂಧ ಹೇರಲಾಗಿದೆ. ವಿದೇಶದಿಂದ ಬಂದವರು ವಿಮಾನ ನಿಲ್ದಾಣದಿಂದ ಸೀದಾ ಬಸ್ ಹತ್ತಬೇಕು ಎಂದು ಕಟ್ಟಪ್ಪಣೆ ಮಾಡಲಾಗಿದೆ.

  • ಕೊರೊನಾ ಜೊತೆ ಸೆಲ್ಫಿಗೆ ಮುಂದಾದ ಜನ

    ಕೊರೊನಾ ಜೊತೆ ಸೆಲ್ಫಿಗೆ ಮುಂದಾದ ಜನ

    ತಿರುವನಂತಪುರಂ: ವಿಶ್ವದಾದ್ಯಂತ ಕೊರೊನಾ ವೈರಸ್ ಭಯದ ವಾತಾವರಣ ಉಂಟು ಮಾಡಿದೆ. ಆದರೆ ಕೇರಳದ ಕೊಚ್ಚಿಯಿಂದ 40 ಕಿ.ಮೀ ದೂರದ ಹಳ್ಳಿಯಲ್ಲಿ ಕಳೆದ ಒಂದು ವರ್ಷದಿಂದ ಇರುವ ಕೊರೊನಾ ಟೆಕ್ಸ್‌ಟೈಲ್‌ ಎಂಬ ಅಂಗಡಿಯೊಂದು ಈಗ ಭಾರೀ ಸುದ್ದಿಯಲ್ಲಿದೆ.

    ತನ್ನ ಹೆಸರಿನಿಂದಾಗಿ ಕೊಚ್ಚಿ ಸಮೀಪದ ಕೊರೊನಾ ಟೆಕ್ಸ್‌ಟೈಲ್‌ ಇದ್ದಕ್ಕಿದ್ದಂತೆ ಭಾರೀ ಜನಪ್ರಿಯವಾಗಿದೆ. ಕೆಲವರು ಈಗ ಅಂಗಡಿಯ ಮುಂದೆ ನಿಂತು ದೂರದಿಂದ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲದೆ ಅನೇಕ ಜನರು ಅಂಗಡಿಯ ಹೆಸರನ್ನು ನೋಡಿ ಮುಗುಳ್ನಗೆಯೊಂದಿಗೆ ಮುಂದೆ ಸಾಗುತ್ತಿದ್ದಾರಂತೆ. ಇದನ್ನೂ ಓದಿ: ಬೆಂಗಳೂರಿನಿಂದ ಮಡಿಕೇರಿಗೆ ರಾಜಹಂಸದಲ್ಲಿ ತೆರಳಿದ್ದ ಕೊರೊನಾ ಪೀಡಿತ

    ಅಂಗಡಿ ಮಾಲೀಕ ಫರಿದ್ ಪ್ರಕಾರ, ಅವರು ನಿಘಂಟಿನಲ್ಲಿ ಹೆಸರನ್ನು ನೋಡಿ ಅಂಗಡಿಗೆ ಇಟ್ಟಿದ್ದರು. ಆದರೆ ಮುಂದೊಂದುದಿನ ಈ ಹೆಸರಿನ ವೈರಸ್ ಕೂಡ ಬರುತ್ತದೆ ಎನ್ನುವುದನ್ನು ಭಾವಿಸಿರಲಿಲ್ಲವಂತೆ. ಸದ್ಯ ಅವರು ಗ್ರಾಹಕರಿಗೆ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಅಂಗಡಿಯಲ್ಲಿ ಇಟ್ಟುಕೊಂಡಿದ್ದಾರೆ. ಯಾರೇ ಅಂಗಡಿಗೆ ಪ್ರವೇಶಿಸಿದರೂ ಅವರಿಗೆ ಹ್ಯಾಂಡ್ ಸ್ಯಾನಿಟೈಜರ್ ನೀಡುತ್ತಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಫರಿದ್, ‘ಜನರು ಅಂಗಡಿಯ ಹತ್ತಿರ ಬಂದು ಸೆಲ್ಫಿ ತೆಗೆದುಕೊಳ್ಳುತ್ತಾರೆ. ಕೆಲವರು ನನ್ನನ್ನು ನೋಡಿ ನಗುತ್ತಾರೆ. ಜನರು ರೈಲುಗಳಿಂದ ಹೊರಬಂದಾಗ ನಮ್ಮ ಅಂಗಡಿಯ ಹೆಸರನ್ನು ನೋಡಿ ಆಶ್ಚರ್ಯ ಪಡುತ್ತಾರೆ. ಕೆಲವರು ಕಾರನ್ನು ನಿಲ್ಲಿಸಿ ಮತ್ತೆ ಮತ್ತೆ ನೋಡುತ್ತಾರೆ. ಕೊರೊನಾ ವೈರಸ್ ಹರಡಿದ ನಂತರ ನಾನು ಕೂಡ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಪ್ರಾರಂಭಿಸಿದೆ ಎಂದು ಎಂದು ತಿಳಿಸಿದ್ದಾರೆ.

  • ಕಾಟಾಚಾರಕ್ಕೆ ಥರ್ಮಲ್ ಸ್ಕ್ರೀನಿಂಗ್ – ತಪಾಸಣೆ ಮಾಡುವ ಸಿಬ್ಬಂದಿಗೆ ಇಲ್ಲ ಮಾಸ್ಕ್

    ಕಾಟಾಚಾರಕ್ಕೆ ಥರ್ಮಲ್ ಸ್ಕ್ರೀನಿಂಗ್ – ತಪಾಸಣೆ ಮಾಡುವ ಸಿಬ್ಬಂದಿಗೆ ಇಲ್ಲ ಮಾಸ್ಕ್

    – ಕ್ಯಾಮೆರಾ ಕಂಡು ತಪಾಸಣೆಗೆ ಮುಂದಾದ ಆರೋಗ್ಯ ಇಲಾಖೆ ಸಿಬ್ಬಂದಿ

    ಮಡಿಕೇರಿ: ಕೊರೊನಾ ವೈರಸ್ ಹೆಸರು ಕೇಳಿದೆ ಜನರ ಎದೆ ನಡುಗಲಾರಂಭಿಸುತ್ತೆ. ಈಗಾಗಲೇ ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಹಿನ್ನೆಲೆ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೆ ಸಾರ್ವಜನಿಕರಿಗೆ ವೈರಸ್ ತಗುಲಿದೆಯೋ ಇಲ್ಲವೋ ಎಂದು ಥರ್ಮಲ್ ಪರಿಶೀಲನೆ ಮಾಡುವ ಸಿಬ್ಬಂದಿಗೆ ಸುರಕ್ಷತೆ ಇಲ್ಲ.

    ಕರ್ನಾಟಕ ಕೇರಳ ಗಡಿಭಾಗವಾದ ಕೊಡಗಿನ ವಿರಾಜಪೇಟೆ ತಾಲೂಕಿನ ಪೆರಂಬಾಡಿಯಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಇದೆ. ಆದರೆ ಆರೋಗ್ಯ ಇಲಾಖೆ ಸಿಬ್ಬಂದಿ ಇಲ್ಲಿ ನಾಮಕಾವಸ್ಥೆಗೆ ಇರುವ ಹಾಗೆ ಇದ್ದಾರೆ. ಪೆರಂಬಾಡಿ ಚೆಕ್ ಪೋಸ್ಟ್ ಆದರೂ ಕೂಡ ಒಂದೇ ಒಂದು ವಾಹನ ನಿಂತಿಲ್ಲ. ಯಾವಾಗ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‍ಗೆ ಇಳಿಯಿತೋ ಪೊಲೀಸರು ವಾಹನ ನಿಲ್ಲಿಸಿದರು, ಆಶಾ ಕಾರ್ಯಕರ್ತೆಯರು ಕೇರಳದಿಂದ ಬರುವವರನ್ನು ಸ್ಕ್ರೀನಿಂಗ್ ಮಾಡೋದಕ್ಕೆ ಮುಂದಾದರು. ಆದರೆ ತಪಾಸಣೆ ಮಾಡುವ ಆಶಾ ಕಾರ್ಯಕರ್ತರು ಆರೋಗ್ಯ ಇಲಾಖೆ ಸಿಬ್ಬಂದಿ ಮುಖಕ್ಕೆ ಮಾಸ್ಕ್ ಹಾಕದೇ ಕಾರ್ಯನಿರ್ವಹಿಸುತ್ತಿದ್ದಾರೆ.

    ಈಗಾಗಲೇ ಕೇರಳದಲ್ಲಿ 27 ಜನರಿಗೆ ಕೊರೊನಾ ಸೋಂಕು ತಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಗಡಿಭಾಗದಲ್ಲಿ ತಪಾಸಣೆ ಮಾಡುವವರಿಗೆ ಯಾವುದೇ ಅಗತ್ಯ ಸಲಕರಣೆಗಳು ಇಲ್ಲದೇ ಮಾಸ್ಕ್ ಧರಿಸದೇ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಇನ್ನಾದರೂ ಗಡಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಡಬೇಕಿದೆ. ಅಲ್ಲದೇ ಜಿಲ್ಲಾಡಳಿತ ಇತ್ತ ಕಡೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಾಹಿಸಿದ್ದಾರೆ.

    ಇಂದು ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕಿತ ಪ್ರಕರಣ ವರದಿಯಾಗಿದೆ. ಈ ವ್ಯಕ್ತಿಯು ಸೌದಿ ಅರೇಬಿಯಾ ಪ್ರವಾಸದಿಂದ ಹಿಂದಿರುಗಿದ್ದರು. ಇವರನ್ನು ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಿ ನಿಗಾವಹಿಸಲಾಗಿದೆ. ಇದು ಕರ್ನಾಟಕದ 15ನೇ ಕೊರೊನಾ ಸೋಂಕಿತ ಪ್ರಕರಣವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

    ಏನಿದು ಥರ್ಮಲ್ ಸ್ಕ್ಯಾನರ್?
    ಥರ್ಮಲ್ ಸ್ಕ್ಯಾನರ್ ಮನುಷ್ಯನ ದೇಹದ ತಾಪಮಾನವನ್ನು ಅಳೆಯುವ ಸಾಧನ. ಮನುಷ್ಯನ ದೇಹದ ತಾಪಮಾನ ತುಸು ಹೆಚ್ಚುಕಡಿಮೆ 98.6 ಡಿಗ್ರಿ ಫ್ಯಾರನ್‍ಹೀಟ್ ಅಥವಾ 37 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಆದರೆ ಥರ್ಮಲ್ ಸ್ಕ್ಯಾನರ್ ನಿಂದ ತಪಾಸಣೆಗೆ ಒಳಪಟ್ಟ ವ್ಯಕ್ತಿಯ ದೇಹದ ತಾಪಮಾನ 98.6 ಡಿಗ್ರಿ ಫ್ಯಾರನ್‍ಹೀಟ್‍ಗಿಂತ ಅಧಿಕವಾಗಿದ್ದರೆ ಅವರನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುತ್ತದೆ.

    ಥರ್ಮಲ್ ಸ್ಕ್ಯಾನರ್ ಯಾಕೆ?
    ಕೊರೊನಾ ವೈರಸ್ ಇರುವವರಿಗೆ ಜ್ವರ, ಕೆಮ್ಮು ಪ್ರಮುಖ ಲಕ್ಷಣಗಳಾಗಿವೆ. ಇಂತಹ ಸಂದರ್ಭದಲ್ಲಿ ಹಲವರು ತಮಗೆ ಜ್ವರ ಇರುವ ಕುರಿತು ಮಾಹಿತಿ ಕೊಡಲು ಹಿಂಜರಿಯುತ್ತಾರೆ. ಇದಲ್ಲದೇ ಈಗಿರುವ ಹಳೆಯ ತಂತ್ರಜ್ಞಾನ ಬಳಸಿ ಸಾವಿರಾರು ಜನರನ್ನು ಪರೀಕ್ಷೆ ಮಾಡಲು ವೈದ್ಯರಿಗೆ ಕಷ್ಟಸಾಧ್ಯ. ಹೀಗಾಗಿ ತಕ್ಷಣ ಪರೀಕ್ಷಿಸಲು ಜ್ವರದ ತೀವ್ರತೆ ತಿಳಿದುಕೊಳ್ಳಲು ಥರ್ಮಲ್ ಸ್ಕ್ಯಾನರ್ ತಕ್ಷಣದಲ್ಲಿ ಉಪಯೋಗಕ್ಕೆ ಬರುತ್ತದೆ. ಈ ಕಾರಣದಿಂದ ಇದರ ಬಳಕೆ ವೈದ್ಯರಿಗೆ ರೋಗಿಯ ದೇಹಸ್ಥಿತಿ ಅರಿಯಲು ಸಹಕಾರಿಯಾಗುತ್ತದೆ.

  • ನಿನ್ನೆ 95 ಇಂದು 119ಕ್ಕೆ ಜಿಗಿತ – ಯಾವ ರಾಜ್ಯದಲ್ಲಿ ಎಷ್ಟು ಮಂದಿಗೆ ಕೊರೊನಾ?

    ನಿನ್ನೆ 95 ಇಂದು 119ಕ್ಕೆ ಜಿಗಿತ – ಯಾವ ರಾಜ್ಯದಲ್ಲಿ ಎಷ್ಟು ಮಂದಿಗೆ ಕೊರೊನಾ?

    ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ 95 ಇದ್ದ ಕೊರೋನಾ ಸೋಂಕಿತರ ಸಂಖ್ಯೆ ಇವತ್ತು 119ಕ್ಕೆ ಜಗಿದಿದೆ.

    ರಾಜ್ಯಗಳ ಪೈಕಿ ಮಹಾರಾಷ್ಟ್ರದಲ್ಲಿ ಮಾರಕ ಸೋಂಕು ವಿಪರೀತ ವೇಗದಲ್ಲಿ ಹರಡುತ್ತಿದ್ದು 38 ಮಂದಿಗೆ ವೈರಸ್ ಹಬ್ಬಿದೆ. ಕೇರಳದಲ್ಲಿ ಸೋಂಕಿತರ ಸಂಖ್ಯೆ 24 ಆಗಿದೆ. ಲಡಾಖ್, ಜಮ್ಮು, ಭುವನೇಶ್ವರ, ಹೈದ್ರಾಬಾದ್, ತಿರುವನಂತಪುರಂನಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿವೆ.

    ತಿರುವನಂತಪುರದಲ್ಲಿ ಸ್ಪೇನ್‍ನಿಂದ ಹಿಂತಿರುಗಿದ ವೈದ್ಯರೊಬ್ಬರಲ್ಲಿ ಸೋಂಕು ಕಂಡುಬಂದಿದ್ದು, 25 ವೈದ್ಯರು ಸೇರಿ 75 ಮಂದಿ ಮೇಲೆ ನಿಗಾ ಇಡಲಾಗಿದೆ.

    ಈ ಮಧ್ಯೆ, ತ್ರಿಶ್ಯೂರಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಸೌದಿಯಿಂದ ವಾಪಸ್ ಆದ ವೃದ್ಧದಂಪತಿಗೆ ಕೊರೋನಾ ನೆಗೆಟಿವ್ ಬಂದಿತ್ತು. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಗೃಹಬಂಧನದಲ್ಲಿದ್ದ ವೃದ್ಧದಂಪತಿಗೆ ನೆರೆ ಹೊರೆಯವರು ಕಿರುಕುಳ ನೀಡಿದ್ದಾರೆ. ಬಾಗಿಲಿಗೆ ಬೀಗ ಹಾಕಿ ಸ್ಟಿಕ್ಕರ್ ಅಂಟಿ, ಕಿರುಕುಳ ನೀಡಿದ್ದಾರೆ. ಸಂಬಂಧ ವೃದ್ಧ ದಂಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

    ಗುರುಗ್ರಾಮದ ಆಸ್ಪತ್ರೆಯಿಂದ ಸೋಂಕಿತನೊಬ್ಬ ಪರಾರಿಯಾಗಿದ್ದಾನೆ. ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಶಾಲಾಕಾಲೇಜುಗಳ ರಜೆಯನ್ನು ಗ್ರಾಮೀಣ ಭಾಗಕ್ಕೂ ಮಹಾರಾಷ್ಟ್ರ ಸರ್ಕಾರ ವಿಸ್ತರಿಸಿದೆ.

    50ಕ್ಕೂ ಹೆಚ್ಚು ಮಂದಿ ಒಂದು ಕಡೆ ಸೇರುವಂತೆ ಇಲ್ಲ ದೆಹಲಿ ಸರ್ಕಾರ ಆದೇಶ ನೀಡಿದೆ. ಸಾರಿಗೆ ಬಸ್‍ಗಳನ್ನು ಶುದ್ಧೀಕರಿಸಲು ಸೂಚಿಸಲಾಗಿದೆ. ಕೊರೋನಾ ಬಗ್ಗೆ ಸುಳ್ಳುಸುದ್ದಿ ಹಬ್ಬಿಸಿದ ಆರೋಪದ ಮೇಲೆ ವ್ಯಕ್ತಿ ಮೇಲೆ ಎಫ್‍ಐಆರ್ ಹಾಕಿದೆ. ಕೊರೋನಾ ಬಗ್ಗೆ ಭಯ ಬೇಡ ಜಾಗ್ರತೆ ಇರಲಿ ಎಂದು ಪ್ರಧಾನಿ ಮೋದಿ ಸಂದೇಶ ನೀಡಿದ್ದಾರೆ.

  • ವೈದ್ಯರಿಗೆ ಕೊರೊನಾ – ಈಗ ಆಸ್ಪತ್ರೆಯ 30 ಸಿಬ್ಬಂದಿ ಮೇಲೆ ನಿಗಾ

    ವೈದ್ಯರಿಗೆ ಕೊರೊನಾ – ಈಗ ಆಸ್ಪತ್ರೆಯ 30 ಸಿಬ್ಬಂದಿ ಮೇಲೆ ನಿಗಾ

    – ವಿದೇಶದಿಂದ ಮಾರ್ಚ್ 2 ರಂದು ಮರಳಿದ್ದ ವೈದ್ಯ
    – ಭಾನುವಾರ ನಡೆಸಿದ ಎರಡನೇ ಪರೀಕ್ಷೆಯಲ್ಲಿ ದೃಢ

    ತಿರುವನಂತಪುರಂ: ಕೇರಳದ ವೈದ್ಯರೊಬ್ಬರಿಗೆ ಕೊರೊನಾ ಬಂದಿದ್ದು ಈಗ ಆಸ್ಪತ್ರೆಗೆ 30 ಮಂದಿ ಸಿಬ್ಬಂದಿ ಮೇಲೆ ನಿಗಾ ಇಡಲಾಗಿದೆ.

    ತಿರುವನಂತಪುರದ ಶ್ರೀ ಚಿತ್ರ ತಿರುನಲ್ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ ಮತ್ತು ಟೆಕ್ನಾಲಜಿಯ ವೈದ್ಯರೊಬ್ಬರು ಮಾರ್ಚ್ 1 ರಂದು ಸ್ಪೇನ್ ದೇಶದಿಂದ ಬಂದಿದ್ದರು. ಭಾನುವಾರ ಈ ವೈದ್ಯರ ಫಲಿತಾಂಶದಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ವೈದ್ಯರ ಜೊತೆ ಇವರ ಸಂಪರ್ಕಕ್ಕೆ ಬಂದ ಎಲ್ಲ ವೈದ್ಯ ಸಿಬ್ಬಂದಿಯನ್ನು ಪ್ರತ್ಯೇಕ ನಿಗಾದಲ್ಲಿ ಇಡಲಾಗಿದೆ.

    ಮಾರ್ಚ್ 2 ರಂದು ಈ ವೈದ್ಯರು ಕರ್ತವ್ಯಕ್ಕೆ ಹಾಜರಾಗಿದ್ದರು. ಮಾರ್ಚ್ 8 ರಂದು ಗಂಟಲು ನೋವಿನ ಸಮಸ್ಯೆಯಿದೆ ಎಂದು ಹೇಳಿಕೊಂಡಿದ್ದರು.

    ಕರ್ತವ್ಯದ ವೇಳೆ ಮಾಸ್ಕ್ ಧರಿಸಿದ್ದ ಇವರು ಮಾರ್ಚ್ 10, 11 ರಂದು ರೋಗಿಗಳ ತಪಾಸಣೆ ಸಹಾ ಮಾಡಿದ್ದರು. ನೋವು ಜಾಸ್ತಿಯಾದ ಹಿನ್ನೆಲೆಯಲ್ಲಿ ಮಾರ್ಚ್ 14 ರಂದು ಮತ್ತೆ ಕೊರೊನಾ ಪರೀಕ್ಷೆ ನಡೆಸಿದಾಗ ಭಾನುವಾರ ಪಾಸಿಟಿವ್ ಫಲಿತಾಂಶ ಬಂದಿದೆ.

    ತಿರುವನಂತಪುರದ ದೊಡ್ಡ ವೈದ್ಯಕೀಯ ಸಂಸ್ಥೆ ಇದಾಗಿದ್ದು ಉಳಿದ ವೈದ್ಯರನ್ನು ಕರ್ತವ್ಯದಿಂದ ತೆರವುಗೊಳಿಸಿ ನಿಗಾ ಇರಿಸಿದ ಕಾರಣ ನಿತ್ಯದ ಸೇವೆಗೆ ಕೆಲ ಸಮಸ್ಯೆಯಾಗಿದೆ.

  • ಕೇರಳ ಆಸ್ಪತ್ರೆಯಿಂದ ಓಡಿ ಹೋಗಿದ್ದ ಅಮೆರಿಕ ದಂಪತಿ ಕೊನೆಗೂ ಪತ್ತೆ

    ಕೇರಳ ಆಸ್ಪತ್ರೆಯಿಂದ ಓಡಿ ಹೋಗಿದ್ದ ಅಮೆರಿಕ ದಂಪತಿ ಕೊನೆಗೂ ಪತ್ತೆ

    – ಅಲೆಪ್ಪಿ ಆಸ್ಪತ್ರೆಯಿಂದ ಶುಕ್ರವಾರ ಪರಾರಿ
    – ದಂಪತಿಗಾಗಿ ಶೋಧ ಕಾರ್ಯ ನಡೆಸಿದ್ದ ಪೊಲೀಸರು

    ತಿರುವನಂತಪುರಂ: ಆಸ್ಪತ್ರೆಗೆ ದಾಖಲಾದ ಬಳಿಕ ಪರಾರಿಯಾಗಿದ್ದ ಅಮೆರಿಕ ಪ್ರಜೆಗಳು ಕೊನೆಗೂ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಅಮೆರಿಕದ ಮೂಲದ ದಂಪತಿ ದೋಹಾ ಮೂಲಕ ಮಾರ್ಚ್ 9 ರಂದು ಕೇರಳದ ಕೊಚ್ಚಿಗೆ ಬಂದಿದ್ದರು. ದಂಪತಿ ಪೈಕಿ ಒಬ್ಬರಲ್ಲಿ ಕೊರೊನಾ ಲಕ್ಷಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲೆಪ್ಪಿ ಮೆಡಿಕಲ್ ಕಾಲೇಜಿಗೆ ದಾಖಲಾಗಿದ್ದರು.

    ಆಸ್ಪತ್ರೆ ದಾಖಲಾಗುವಾಗ ನಾವು ಅಮೆರಿಕದ ಪ್ರಜೆಗಳು, ಕಳೆದ ಮೂರು ವರ್ಷಗಳಿಂದ ಲಂಡನ್ ನಲ್ಲಿ ನೆಲೆಸಿದ್ದೇವೆ ಎಂದು ತಿಳಿಸಿದ್ದರು. ಆಸ್ಪತ್ರೆಯ ಸಿಬ್ಬಂದಿ ನಿಮ್ಮನ್ನು  ಕೊರೊನಾ ಪರೀಕ್ಷೆಗೆ ಒಳಪಡಿಸಬೇಕು. ಪ್ರತ್ಯೇಕ ನಿಗಾದಲ್ಲಿರಬೇಕು ಎಂದು ಸೂಚಿಸಿದ್ದರು. ಅದರೆ ದಂಪತಿ ಕೊರೊನಾ ಪರೀಕ್ಷೆ ನಡೆಸಲು ಅನುಮತಿ ನೀಡಿರಲಿಲ್ಲ.

    ಈ ಸಂಬಂಧ ಪೊಲೀಸರು ಮಾಹಿತಿ ನೀಡಿ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ಪರೀಕ್ಷೆಗೆ ವೈರಾಲಜಿ ಆಸ್ಪತ್ರೆಗೆ ದಾಖಲಾಗಬೇಕು, ಪ್ರತ್ಯೇಕ ನಿಗಾದಲ್ಲಿರಬೇಕು ಎಂದು ಸೂಚಿಸಿದ್ದರು. ಈ ಮಧ್ಯೆ ದಂಪತಿ ಯಾರಿಗೂ ತಿಳಿಸದೇ ಶುಕ್ರವಾರ ಆಸ್ಪತ್ರೆಯಿಂದ ಪರಾರಿಯಾಗಿದ್ದರು. ನಾಪತ್ತೆಯಾದ ಈ ದಂಪತಿ ಪತ್ತೆ ಹಚ್ಚಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರು.

    ಇಂದು ಬೆಳಗ್ಗೆ ಈ ದಂಪತಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದ್ದು, ಈಗ ಆಸ್ಪತ್ರೆಗೆ ದಾಖಲಿಸಿ ನಿಗಾ ಇಡಲಾಗಿದೆ. ದಂಪತಿ ಕ್ಯಾಬ್ ಮೂಲಕ ಪ್ರಯಾಣಿಸಿದ್ದು ಕ್ಯಾಬ್ ಚಾಲಕನನ್ನು ಸಹ ದಾಖಲಿಸಿ ನಿಗಾ ಇಡಲಾಗಿದೆ.

    ಕೇರಳದಲ್ಲಿ 19 ಮಂದಿ ಕೊರೊನಾ ಪೀಡಿತರಿದ್ದಾರೆ. ಶುಕ್ರವಾರ ಒಂದು ಕೇಸ್ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಂಖ್ಯೆ 19ಕ್ಕೆ ಏರಿಕೆ ಆಗಿತ್ತು.

  • ಪರೀಕ್ಷೆ ಮುಗಿಸಿ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಕಾರು – ಡಿಕ್ಕಿಯ ರಭಸಕ್ಕೆ ಕಾಲುವೆಗೆ ಬಿದ್ದ ಬಾಲಕಿಯರು

    ಪರೀಕ್ಷೆ ಮುಗಿಸಿ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಕಾರು – ಡಿಕ್ಕಿಯ ರಭಸಕ್ಕೆ ಕಾಲುವೆಗೆ ಬಿದ್ದ ಬಾಲಕಿಯರು

    – ಸಿಸಿಟಿಯಲ್ಲಿ ದೃಶ್ಯ ಸೆರೆ
    – ಬೈಕ್‌ನಲ್ಲಿ ಕುಳಿತಿದ್ದ ತಂದೆ, ಮಗಳಿಗೂ ಗುದ್ದಿದ ಕಾರು

    ತಿರುವನಂತಪುರ: ಪರೀಕ್ಷೆ ಮುಗಿಸಿ ಶಾಲೆಯಿಂದ ತಮ್ಮ ಪಾಡಿಗೆ ರಸ್ತೆ ಬದಿಯಲ್ಲಿ ಬರುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಎದುರಿನಿಂದ ಬಂದ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಘಟನೆ ಕೇರಳದ ಅಲೆಪ್ಪಿಯ ಪೂಚಕ್ಕಲ್‍ನಲ್ಲಿ ನಡೆದಿದೆ.

    ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮೂವರು ವಿದ್ಯಾರ್ಥಿನಿಯರು ರಸ್ತೆ ಪಕ್ಕದಲ್ಲಿದ್ದ ಕಾಲುವೆಗೆ ಬಿದ್ದಿದ್ದಾರೆ. ಅಷ್ಟೇ ಅಲ್ಲದೆ ಇದೇ ರಸ್ತೆಯಲ್ಲಿ ಸೈಕಲ್ ಮೇಲೆ ಬರುತ್ತಿದ್ದ ವಿದ್ಯಾರ್ಥಿನಿಗೂ ಕಾರು ಡಿಕ್ಕಿ ಹೊಡೆದು ಹೋಗಿದೆ. ಹಾಗೆಯೇ ರಸ್ತೆ ಬದಿಯಲ್ಲಿ ಬೈಕ್‌ನಲ್ಲಿ ಕುಳಿತ್ತಿದ್ದ ತಂದೆ, ಮಗಳಿಗೂ ಕಾರು ಗುದ್ದಿದೆ. ಈ ಎಲ್ಲಾ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಗಾಯಗೊಂಡ ಬಾಲಕಿಯರು ಪೂಚಕ್ಕಲ್‍ನ ಶ್ರೀಕಂಠೇಶ್ವರಂ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ. ಅನಕಾ, ಚಂದನ, ಸಾಹಿ, ಅರ್ಚನಾ ಗಾಯಗೊಂಡ ವಿದ್ಯಾರ್ಥಿನಿಯರು ಎಂದು ಗುರುತಿಸಲಾಗಿದೆ. ಹಾಗೆಯೇ ಗಾಯಗೊಂಡ ತಂದೆಯನ್ನು ಅನೀಶ್(36) ಹಾಗೂ ಮಗಳನ್ನು ವೇದು(4) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯರು ಪರೀಕ್ಷೆ ಮುಗಿಸಿಕೊಂಡು ಶಾಲೆಯಿಂದ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

    ಒಬ್ಬರ ನಂತರ ಒಬ್ಬರನ್ನು ಡಿಕ್ಕಿ ಹೊಡೆಯುತ್ತ ಸಾಗಿದ ಕಾರು ಕೊನೆಗೆ ಕಾಂಕ್ರೀಟ್ ಪೋಸ್ಟ್ ಗೆ ಡಿಕ್ಕಿ ಹೊಡೆದು ನಿಂತಿದೆ. ಈ ವೇಳೆ ಕಾರಿನಲ್ಲಿದ್ದ ಮನೋಜ್ ಹಾಗೂ ಅನಂದ್ ತೀವ್ರ ಗಾಯಗೊಂಡಿದ್ದಾರೆ. ಇತ್ತ ವಿದ್ಯಾರ್ಥಿನಿಯರ ಕಾಲು ಹಾಗೂ ಕೈ ಮುರಿದಿದ್ದು ಆಸ್ಪತ್ರೆಯಲ್ಲಿ ಅವರೆಲ್ಲಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕಾರು ಡಿಕ್ಕಿ ಹೊಡೆದಿದ್ದ ತಂದೆ, ಮಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಮಂಗಳವಾರ ಈ ಘಟನೆ ನಡೆದಿದೆ. ಕಾರನ್ನು ನಾವು ವಶಕ್ಕೆ ಪಡೆದಿದ್ದೇವೆ. ಗಾಯಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಆದರೆ ಈ ಘಟನೆ ನಡೆದ ವೇಳೆ ಚಾಲಕ ಮದ್ಯ ಸೇವಿಸಿದ್ದನು ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈಗಾಗಲೇ ಚಾಲಕನ ರಕ್ತದ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಿದ್ದೇವೆ. ವರದಿ ಬಂದ ಬಳಿಕ ಮಾಹಿತಿ ಸಿಗಲಿದೆ ಎಂದು ಹೇಳಿದರು.