Tag: Keshavmurthy

  • ರೇಣುಕಾಸ್ವಾಮಿ ಹತ್ಯೆ ಕೇಸ್‌ – ಮೊದಲ ಜಾಮೀನು ಮಂಜೂರು

    ರೇಣುಕಾಸ್ವಾಮಿ ಹತ್ಯೆ ಕೇಸ್‌ – ಮೊದಲ ಜಾಮೀನು ಮಂಜೂರು

    ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  (Renukaswamy Murder Case)  ಮೊದಲ ಜಾಮೀನು (Bail) ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ (KeshavMurthy) ಹೈಕೋರ್ಟ್‌ ಜಾಮೀನು  ಮಂಜೂರು ಮಾಡಿದೆ.

    ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು.

    ಆರಂಭದಲ್ಲಿ ಕೇಶವಮೂರ್ತಿ ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು. ಆದರೆ ತನಿಖೆ ವೇಳೆ ಕೊಲೆಯಲ್ಲಿ ಭಾಗಿಯಾಗಿಲ್ಲ. ಸಾಕ್ಷಿನಾಶ ಮಾಡಲು ಮುಂದಾಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಹೀಗಾಗಿ ಪೊಲೀಸರು ಸಾಕ್ಷ್ಯನಾಶ ಆಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕೊಲೆಯಲ್ಲಿ ನೇರವಾಗಿ ಭಾಗಿಯಾಗದ ಕಾರಣ ಕೇಶವಮೂರ್ತಿಗೆ ಇಂದು ಜಾಮೀನು ಸಿಕ್ಕಿದೆ.

    ಯಾರು ಈ ಕೇಶವಮೂರ್ತಿ?
    ಗಿರಿನಗರದ ಹೀರಣ್ಣನಗುಡ್ಡದ ಕೇಶವಮೂರ್ತಿ, ಸಣ್ಣಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ನಟ ದರ್ಶನ್ ಅಭಿಮಾನಿಯಾಗಿದ್ದ ಆತ ಅದೇ ಅಭಿಮಾನದಲ್ಲೇ ಕೊಲೆ ಪ್ರಕರಣದ ಆರೋಪ ಹೊತ್ತು ಜೈಲಿಗೆ ಹೋಗಲು ಸಹ ಸಿದ್ದನಾಗಿದ್ದ.

    ದರ್ಶನ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಪವನ್ ಮೂಲಕ ಈ ಕೃತ್ಯದಲ್ಲಿ ಕೇಶವ ಸಿಲುಕಿದ್ದ. ಹಣದಾಸೆ ತೋರಿಸಿ ದರ್ಶನ್ ಹೆಸರು ಹೇಳದೆ ಪೊಲೀಸರಿಗೆ ಶರಣಾಗುವಂತೆ ದರ್ಶನ್ ಆಪ್ತರು ಸೂಚಿಸಿದ್ದರು. ಅದರಂತೆ ಕಾಮಾಕ್ಷಿಪಾಳ್ಯ ಠಾಣೆಗ ಬಂದು ಕೇಶವ ಮೂರ್ತಿ ಶರಣಾಗಿದ್ದ ಪೊಲೀಸರ ವಿಚಾರಣೆ ವೇಳೆ ಕೊಲೆ ರಹಸ್ಯವನ್ನು ಬಾಯ್ದಿಟ್ಟಿದ್ದ. ಈತನ ಹೇಳಿಕೆ ಆಧರಿಸಿಯೇ ತನಿಖೆ ದಿಕ್ಕು ಬದಲಾಗಿತ್ತು.

  • ಪಾರ್ಕ್‍ನಲ್ಲಿ ಎಸಿ ಹಾಕಿಸಿದ ಶಾಸಕರು- ಸುಮ್ಮನೆ ಹಣಪೋಲು ಎಂದು ಸ್ಥಳೀಯರ ಆಕ್ರೋಶ

    ಪಾರ್ಕ್‍ನಲ್ಲಿ ಎಸಿ ಹಾಕಿಸಿದ ಶಾಸಕರು- ಸುಮ್ಮನೆ ಹಣಪೋಲು ಎಂದು ಸ್ಥಳೀಯರ ಆಕ್ರೋಶ

    ಬೆಂಗಳೂರು: ಮಳೆ ಬಂದ್ರೆ ಬೆಂಗಳೂರು ತೊಯ್ದು ತೊಪ್ಪೆಯಾಗತ್ತೆ. ಮತ್ತೊಂದು ಕಡೆ ರಸ್ತೆ ಗುಂಡಿ ವಾಹನ ಸವಾರರನ್ನ ಹಿಂಡಿ ಹಿಪ್ಪೆ ಮಾಡತ್ತೆ. ನೈಸರ್ಗಿಕ ಗಾಳಿ ಸಿಗಲಿ ಅಂತ ಪಾರ್ಕ್‍ಗೆ ವೃದ್ಧರು, ಮಹಿಳೆಯರು, ಮಕ್ಕಳು ಪಾರ್ಕ್‍ಗೆ ಬರ್ತಾರೆ. ಆದ್ರೆ ಈ ಪಾರ್ಕ್ ಮಾತ್ರ ಸಿಕ್ಕಾಪಟ್ಟೆ ಹೈಫೈ. ಈ ಪಾರ್ಕ್‍ಗೆ ಬಂದ್ರೆ ಎಸಿ ಗಾಳಿ ಕುಡೀಬೇಕು.

    ಇಂಥದ್ದೊಂದು ಪಾರ್ಕ್ ಇರೋದು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‍ನಲ್ಲಿ. ಇದನ್ನ ಉಪಮಹಾಪೌರರ ಅನುದಾನದಡಿಯಲ್ಲಿ ಮಾಡಿದ್ದಾರೆ. ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಹಾಗೂ ಕಾರ್ಪೊರೇಟರ್ ಕೇಶವಮೂರ್ತಿ ಪಾರ್ಕ್‍ನಲ್ಲೂ ಎಸಿ ಹಾಕಿಸಿದ್ದಾರೆ.

    ಪಾರ್ಕ್‍ನಲ್ಲಿ ಎಸಿ ಅಳವಡಿಕೆ ಮಾಡುವ ಯೋಜನೆಗೆ ಬಿಬಿಎಂಪಿ ಹಾಗೂ ಸರ್ಕಾರದ ಹಣವನ್ನು ಬಳಕೆ ಮಾಡಿ ಹಣ ದೋಚುವ ಸಾಹಸಕ್ಕೆ ಶಾಸಕ ಗೋಪಾಲಯ್ಯ ಹಾಗೂ ಕಾರ್ಪೊರೇಟರ್ ಕೇಶವಮೂರ್ತಿ ಮುಂದಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಕೆಲ ಸ್ಥಳೀಯರು ಮಾತನಾಡಿ, ಬಡಾವಣೆಯಲ್ಲಿ ಎಷ್ಟೆಲ್ಲಾ ಸಮಸ್ಯೆಗಳು ಇವೆ. ಮಳೆ ಬಂತೆಂದರೆ ಬಡಾವಣೆಯ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ ಮಾಡುತ್ತಿದೆ. ಅಲ್ಲದೇ ರಸ್ತೆಗಳೆಲ್ಲ ಹದಗೆಟ್ಟಿದ್ದು, ವಾಹನ ಸವಾರರಿಗೆ ತಲೆ ನೋವಾಗಿದೆ. ಇಂತಹ ಕೆಲಸಗಳಿಗೆ ಅನುದಾನ ಪಡೆದು ಸಾರ್ವಜನಿಕರಿಗೆ ಅನುಕೂಲವಾಗುವಂತಹ ಮೂಲಭೂತ ಸೌಕರ್ಯಗಳ ಬಗ್ಗೆ ಜನಪ್ರತಿನಿಧಿಗಳು ತಲೆಕೆಡಿಸಿಕೊಳ್ಳಬೇಕು. ಅದನ್ನು ಬಿಟ್ಟು ಹೈಫೈ ಎಸಿ ಪಾರ್ಕ್ ಯೋಜನೆ ಸಮಂಜಸವಲ್ಲ ಎಂದು ಆರೋಪಿಸಿದ್ದಾರೆ.

    ಸರ್ಕಾರದ ಮತ್ತು ಬಿಬಿಎಂಪಿ ಉಪಮೇಯರ್ ಅನುದಾನವನ್ನ ಒಳ್ಳೆಯ ಕೆಲಸಗಳಿಗೆ ಬಳಕೆ ಮಾಡಿಕೊಳ್ಳಬೇಕು. ಅವ್ಯವಸ್ಥೆಯ ಬಗ್ಗೆ ಗಮನಹರಿಸದೇ ಶಾಸಕ ಗೋಪಾಲಯ್ಯ ಹಾಗೂ ಕಾರ್ಪೊರೇಟರ್ ಕೇಶವಮೂರ್ತಿ ಸಾರ್ವಜನಿಕ ಪಾರ್ಕ್‍ನಲ್ಲಿ ಎಸಿ ಅಳವಡಿಕೆ ಮಾಡಲು ಮುಂದಾಗಿದ್ದಾರೆ. ಜನರಿಗೆ ಹೈಫೈ ಎಸಿ ಪಾರ್ಕ್‍ನ ಅವಶ್ಯಕತೆಯಿಲ್ಲ. ಇದು ಹುಚ್ಚಾಟದ ಆಲೋಚನೆ. ಪಾರ್ಕ್‍ನಲ್ಲಿ ಎಸಿ ಅಳವಡಿಕೆ ಆಲೋಚನೆ ಬಿಟ್ಟು ಜನಪರ ಕೆಲಸ ಮಾಡಬೇಕು ಎಂದು ಸ್ಥಳೀಯ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.