Tag: Kethaganahalli

  • ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

    ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ(Kethaganahalli Land Encroachment Case) ಕೇಂದ್ರ ಭಾರೀ ಕೈಗಾರಿಕಾ ಸಚಿವ ಕುಮಾರಸ್ವಾಮಿಗೆ (HD Kumaraswamy) ಹೈಕೋರ್ಟ್‌ನಿಂದ (High Court) ಬಿಗ್ ರಿಲೀಫ್ ಸಿಕ್ಕಿದೆ.

    ಬಿಡದಿಯ ಕೇತಗಾನಹಳ್ಳಿ ಬಳಿಯ ಸರ್ವೆ ನಂಬರ್ 7,8,9 ರ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.  ಇದನ್ನೂ ಓದಿ: Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

     

    ಎಸ್‌ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಮಾರಸ್ವಾಮಿ ಪರ ವಕೀಲರಾದ ಉದಯ್ ಹೊಳ್ಳ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರನಾದ ಅಧಿಸೂಚನೆಯನ್ನು ಪ್ರಕಟಿಸಿಲ್ಲ ಎಂದು ಮಂಡಿಸಿದರು. ಇದನ್ನೂ ಓದಿ: ಬೆಂಗಳೂರು | ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು

    ವಾದ ಪುರಸ್ಕರಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಜೊತೆಗೆ ಎಸ್‌ಐಟಿ ರಚನೆಯ ಬಳಿಕ ಕುಮಾರಸ್ವಾಮಿಗೆ ನೀಡಿದ್ದ ಸಮನ್ಸ್ ಅನ್ನು ಕೂಡ ತಡೆ ಹಿಡಿದಿದ್ದು, ರಾಮನಗರ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್‌ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.

  • ಒತ್ತುವರಿ ಆಗಿದ್ರೆ ತೆರವು ಮಾಡಿಕೊಳ್ಳಿ, ನಮ್ಮ ಜಮೀನು ಹುಡುಕಿಕೊಡಿ – ಭೂ ದಾಖಲೆಗಳ ಇಲಾಖೆಗೆ ಹೆಚ್‌ಡಿಕೆ ಪತ್ರ

    ಒತ್ತುವರಿ ಆಗಿದ್ರೆ ತೆರವು ಮಾಡಿಕೊಳ್ಳಿ, ನಮ್ಮ ಜಮೀನು ಹುಡುಕಿಕೊಡಿ – ಭೂ ದಾಖಲೆಗಳ ಇಲಾಖೆಗೆ ಹೆಚ್‌ಡಿಕೆ ಪತ್ರ

    ರಾಮನಗರ: ಬಿಡದಿಯ ಕೇತಗಾನಹಳ್ಳಿ (Kethaganahalli) ಸರ್ವೇ ನಂ. 7, 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಭೂ ಒತ್ತುವರಿ ಆರೋಪ ಹಿನ್ನೆಲೆ ಇಂದಿನಿಂದ ತೆರವು ಕಾರ್ಯಾಚರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಭೂ ದಾಖಲೆಗಳ ಇಲಾಖೆಗೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಪತ್ರ ಬರೆದಿದ್ದಾರೆ.

    ರಾಮನಗರದ (Ramanagara) ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಪತ್ರ ಬರೆದಿರುವ ಹೆಚ್‌ಡಿಕೆ, ಕಾನೂನು ಬಾಹಿರವಾಗಿ ಹೆಚ್ಚುವರಿ ಜಮೀನು ನನ್ನಲ್ಲಿದ್ದರೆ, ಅದನ್ನ ವಶಕ್ಕೆ ತೆಗೆದುಕೊಳ್ಳಬಹುದು. ಹಾಗೆಯೇ ಕೇತಗಾನಹಳ್ಳಿ ಗ್ರಾಮದ ಸರ್ವೇ ನಂ.7ರಲ್ಲಿ ತಪ್ಪಿ ಹೋಗಿರುವ ನನ್ನ ಜಮೀನುನನ್ನು (Land) ಹುಡುಕಿಕೊಡಿ ಎಂದು ಆಗ್ರಹಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ರಾಮನಗರ ತಾಲೂಕು ಬಿಡದಿ ಹೋಬಳಿಯ ಕೇತಗಾನಹಳ್ಳಿ ಸರ್ವೇ ನಂ. 7, 8, 9, 10, 16, 17 ಮತ್ತು 79ರಲ್ಲಿ ಭೂ ಒತ್ತುವರಿ ಆಗಿದ್ದರೆ, ಸರ್ವೇ ನಡೆಸಿ ವರದಿ ನೀಡುವಂತೆ ರಾಜ್ಯ ಗೌರವಾನ್ವಿತ ಹೈಕೋರ್ಟ್‌ ನಿರ್ದೇಶನ ನೀಡಿರುವುದು ಸರಿಯಷ್ಟೇ. ಕೋರ್ಟ್‌ ಆದೇಶದಂತೆಯೇ ಸಮೀಕ್ಷಾ ತಂಡ ಕಳೆದ ಫೆ.18ರಂದು ಮಂಗಳವಾರ ಎಲ್ಲಾ ಸರ್ವೇ ನಂಬರ್‌‌ ಜಾಗದಲ್ಲಿಯೂ ಸಮೀಕ್ಷೆ ನಡೆಸಿದೆ.

    ಸರ್ವೇ ನಂ. 7 ರಲ್ಲಿ ನಾನು 5 ಎಕರೆ 20 ಗುಂಟೆ ಜಮೀನು ಖರೀದಿಸಿದ್ದೇನೆ. ಈ ಪೈಕಿ 1.25 ಎಕರೆ ಜಮೀನಿನಲ್ಲಿ ಮಾತ್ರ ನನ್ನ ಅನುಭವದಲ್ಲಿದೆ. ಈ ಜಮೀನನ್ನು ಕೇತಗಾನಹಳ್ಳಿ ಗ್ರಾಮದವರಿಂದಲೇ ಖರೀದಿ ಮಾಡಿದ್ದು. ಉಳಿದ ಜಮೀನನ್ನು ತಾವು ಹುಡುಕಿಕೊಡುವಂತೆ ಮನವಿ ಮಾಡುತ್ತೇನೆ ಎಂದು ಭೂದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕರಿಗೆ ಪತ್ರದಲ್ಲಿ ತಿಳಿಸಿದ್ದಾರೆ.

  • ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ

    ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಹೆಚ್‍ಡಿಕೆ ಕೇತಗಾನಹಳ್ಳಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆ

    ರಾಮನಗರ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕುಟುಂಬಕ್ಕೆ ಸೇರಿದ್ದ ಕೇತಗಾನಹಳ್ಳಿ (Kethaganahalli) ಜಮೀನಿನಲ್ಲಿ ಒತ್ತುವರಿ ಭೂಮಿಯನ್ನು ತೆರವು ಮಾಡುವಂತೆ ಹೈಕೋರ್ಟ್ (High Court) ಸೂಚನೆ ನೀಡಿದ್ದ ಬೆನ್ನಲ್ಲೇ ತೆರವು ಕಾರ್ಯಾಚರಣೆ ಆರಂಭವಾಗಿದೆ.

    ಬಿಡದಿಯ ಕೇತಗಾನಹಳ್ಳಿಯ ಸರ್ವೇ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕಂದಾಯ ಇಲಾಖೆ ಹಾಗೂ ಸರ್ವೇ ಇಲಾಖೆಯಿಂದ ಜಂಟಿ ಸರ್ವೇ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಇಂದು (ಮಾ.18) ಒತ್ತುವರಿ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ನನ್ನನ್ನ ಟಾರ್ಗೆಟ್‌ ಮಾಡೋದಕ್ಕೆ ಕೇತಗಾನಹಳ್ಳಿ ಜಮೀನು ಸರ್ವೆ – ಕುಮಾರಸ್ವಾಮಿ ಕಿಡಿ

    ಸ್ಥಳಕ್ಕೆ ಡಿಸಿ ಯಶವಂತ್ ವಿ ಗುರುಕರ್, ಎಎಸ್‍ಪಿ ಸುರೇಶ್, ಎಎಸ್‍ಪಿ ರಾಮಚಂದ್ರಯ್ಯ ಭೇಟಿ ನೀಡಿದ್ದಾರೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ.

    ಈ ಹಿಂದೆ ನನ್ನನ್ನು ಟಾರ್ಗೆಟ್ ಮಾಡಲು ಸರ್ಕಾರ ಒತ್ತುವರಿ ಆರೋಪ ಮಾಡ್ತಿದೆ. ಯಾವುದೇ ತನಿಖೆಗೆ ನಾನು ಸಿದ್ಧ. ಎಲ್ಲಾ ದಾಖಲಾತಿಗಳು ನನ್ನ ಬಳಿ ಇವೆ‌ ಎಂದು ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು.

    ಈ ಆರೋಪದ ವಿಚಾರವಾಗಿ ಭೂ ದಾಖಲೆಗಳ ಇಲಾಖೆಗೆ ಕುಮಾರಸ್ವಾಮಿಯವರು ಬರೆದ ಪತ್ರ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕಾನೂನು ಬಾಹಿರವಾಗಿ ನನ್ನನ್ನಲ್ಲಿ ಹೆಚ್ಚುವರಿ ಜಮೀನು ಇದ್ದರೆ ವಶಪಡಿಸಿಕೊಳ್ಳಬಹುದು. ಅಲ್ಲದೇ ಇದರಲ್ಲಿ ಕಳೆದು ಹೋಗಿರುವ ಜಮೀನನ್ನೂ ಹುಡುಕಿಕೊಡಿ. ಸರ್ವೇ ನಂಬರ್ 7ರಲ್ಲಿ 5 ಎಕರೆ 20ಗುಂಟೆ ಜಮೀನು ಖರೀದಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದರು.

  • ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

    ಹೆಚ್‌ಡಿಕೆ ವಿರುದ್ಧ ಭೂ ಒತ್ತುವರಿ ಆರೋಪ – ಎರಡನೇ ದಿನವೂ ಮುಂದುವರಿದ ಸರ್ವೇ ಕಾರ್ಯ

    ರಾಮನಗರ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಭೂ ಒತ್ತುವರಿ (Land Encroachment) ಆರೋಪ ಹಿನ್ನೆಲೆ ಎರಡನೇ ದಿನವೂ ಸರ್ವೇ (Survey) ಕಾರ್ಯ ಮುಂದುವರಿದಿದೆ.

    ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ತೋಟವನ್ನು ಕಂದಾಯ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿದ್ದಾರೆ. ರೆವೆನ್ಯೂ ಇನ್ಸ್ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಸರ್ವೇ ಕಾರ್ಯ ನಡೆಯುತ್ತಿದ್ದು, ಕುಮಾರಸ್ವಾಮಿ ತೋಟ ಹಾಗೂ ಸುತ್ತಮುತ್ತಲಿನ ಜಮೀನುಗಳನ್ನೂ ಸರ್ವೇ ಮಾಡಲಾಗಿದೆ. ಆಧುನಿಕ ಸರ್ವೇ ಉಪಕರಣಗಳ ಮೂಲಕ ಸರ್ವೇ ಕಾರ್ಯ ನಡೆಸಿ ಜಮೀನಿನ ಮೂಲ ಮಾಲೀಕರನ್ನೂ ಸ್ಥಳಕ್ಕೆ ಕರೆಸಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಚಾಮರಾಜನಗರ: ಚಿರತೆ ದಾಳಿಗೆ ನಾಲ್ಕು ಕರುಗಳು ಬಲಿ

    ಕಂದಾಯ ಇಲಾಖೆ ಅಧಿಕಾರಿಗಳ ಸರ್ವೆ ಕಾರ್ಯಕ್ಕೆ ಜಮೀನಿನ ಮೂಲ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಸರಿಯಾದ ರೀತಿಯಲ್ಲಿ ಸರ್ವೇ ಮಾಡುತ್ತಿಲ್ಲ. ಬೇಕಾಬಿಟ್ಟಿ ಸರ್ವೆ ಮಾಡುತ್ತಿದ್ದಾರೆ. ನೋಟಿಸ್ ಕೊಟ್ಟು ಮೂಲ ಮಾಲೀಕರನ್ನು ಸ್ಥಳಕ್ಕೆ ಕರೆಸಿದ್ದಾರೆ. ಆದರೆ ಕುಮಾರಸ್ವಾಮಿ ಅವರ ತೋಟದ ಒಳಗೆ ಸರ್ವೇ ಮಾಡುವಾಗ ನಮ್ಮನ್ನು ಒಳಗೆ ಬಿಟ್ಟಿಲ್ಲ ಎಂದು ಸರ್ವೇ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಶಿಂಧೆ ನೇತೃತ್ವದ ಶಿವಸೇನೆಯ 20 ಶಾಸಕರ Y-ಭದ್ರತೆ ವಾಪಸ್ ಪಡೆದ ಫಡ್ನವಿಸ್

  • Kolar| ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಟ್ರಕ್ ಡಿಕ್ಕಿ – ಚಾಲಕ ಸ್ಥಳದಲ್ಲೇ ಸಾವು

    Kolar| ಕೆಟ್ಟು ನಿಂತಿದ್ದ ಟಿಪ್ಪರ್‌ಗೆ ಟ್ರಕ್ ಡಿಕ್ಕಿ – ಚಾಲಕ ಸ್ಥಳದಲ್ಲೇ ಸಾವು

    ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್ ಟ್ರಕ್ (Truck) ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಶ್ರೀನಿವಾಸಪುರ (Srinivaspur) ತಾಲೂಕಿನ ಕೇತಗಾನಹಳ್ಳಿ (Kethaganahalli) ಗ್ರಾಮದ ಬಳಿ ಮುಂಜಾನೆ ಈ ಘಟನೆ ನಡೆದಿದ್ದು, ಶಿವಪುರ ಗ್ರಾಮದ ಟಿಪ್ಪರ್ ಚಾಲಕ ಬಾಬು (30) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಆರ್‌ಟಿಪಿಎಸ್, ವೈಟಿಪಿಎಸ್‌ನಿಂದ ನದಿಗೆ ವಿಷಕಾರಿ ರಾಸಾಯನಿಕ ಬಿಡುಗಡೆ – ಕಲುಷಿತಗೊಂಡ ಕೃಷ್ಣೆಯ ಒಡಲು

    ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ ರಿಪೇರಿ ಮಾಡುತ್ತಿದ್ದ ಬಾಬು ಮೇಲೆ ಟ್ರಕ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಂಡೂರು ಉಪ ಚುನಾವಣೆ – ಮಸ್ಟರಿಂಗ್ ಕಾರ್ಯ ಪೂರ್ಣ