Tag: KGF-2

  • ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್

    ಹೃತಿಕ್ ರೋಷನ್ ಜೊತೆ ಸಿನಿಮಾ- ‘ಹೊಂಬಾಳೆ ಫಿಲಂಸ್’ನಿಂದ ಗುಡ್ ನ್ಯೂಸ್

    ಕಾಂತಾರ (Kantara), ಕೆಜಿಎಫ್ 2, ಸಲಾರ್ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಸಂಸ್ಥೆ ಕಡೆಯಿಂದ ಈಗ ಗುಡ್ ನ್ಯೂಸ್ ಸಿಕ್ಕಿದೆ. ಬಾಲಿವುಡ್‌ನ ಖ್ಯಾತ ನಟ ಹೃತಿಕ್ ರೋಷನ್ ಜೊತೆ ಸಿನಿಮಾ ಮಾಡೋದಾಗಿ ಹೊಂಬಾಳೆ ಫಿಲಂಸ್ ಘೋಷಿಸಿದೆ. ಇದನ್ನೂ ಓದಿ:ಸೋಷಿಯಲ್ ಮೀಡಿಯಾದಿಂದ ದೀಪಿಕಾ ದಾಸ್ ದಿಢೀರ್ ಬ್ರೇಕ್- ಫ್ಯಾನ್ಸ್‌ಗೆ ಶಾಕ್

    ಹೃತಿಕ್ ಅವರನ್ನು ಗ್ರೀಕ್ ಗಾಢ್ ಎಂದು ಕರೆಯುತ್ತಾರೆ. ಅವರು ಅನೇಕರ ಮನಗೆದ್ದಿದ್ದಾರೆ. ಹೃತಿಕ್ ರೋಷನ್ ಅವರು ಹೊಂಬಾಳೆ ಫಿಲಂಸ್ (Hombale Films) ಜೊತೆ ಕೈಜೋಡಿಸಿದ್ದಾರೆ. ನಾವು ಅವರನ್ನು ಸ್ವಾಗತಿಸಲು ಹೆಮ್ಮೆಪಡುತ್ತೇವೆ ಎಂದು ಹೊಂಬಾಳೆ ಸಂಸ್ಥೆ ಅನೌನ್ಸ್ ಮಾಡಿದೆ. ಸದ್ಯದಲ್ಲೇ ಈ ಚಿತ್ರದ ನಿರ್ದೇಶಕರ ಕುರಿತು ಹೆಚ್ಚಿನ ಮಾಹಿತಿಯನ್ನು ನಿರ್ಮಾಣ ಸಂಸ್ಥೆ ತಿಳಿಸಲಿದೆ. ಇದನ್ನೂ ಓದಿ:ಕಮಲ್ ಹಾಸನ್ ಕ್ಷಮೆ ಕೇಳದೇ ಹೋದ್ರೆ ಬ್ಯಾನ್ ಮಾಡಬೇಕು: ಶಿವರಾಜ್ ತಂಗಡಗಿ

    ರಾಜಕುಮಾರ, ಯುವರತ್ನ, ಕೆಜಿಎಫ್, ಕಾಂತಾರ ಮತ್ತು ಬಘೀರಾದಂತಹ ಯಶಸ್ವಿ ಚಿತ್ರಗಳ ಮೂಲಕ ಕರ್ನಾಟಕದಲ್ಲಿ ಭದ್ರ ನೆಲೆ ಕಂಡುಕೊಂಡಿರುವ ಹೊಂಬಾಳೆ ಫಿಲಂಸ್, ಯಾವಾಗಲೂ ಮೌಲ್ಯಯುತ ಕಥೆಗಳನ್ನು ಹೇಳುವಲ್ಲಿ ಮತ್ತು ಉತ್ತಮ ಮನರಂಜನೆ ನೀಡುವಲ್ಲಿ ಬದ್ಧವಾಗಿದೆ. ಈಗ ಹೃತಿಕ್ ರೋಷನ್ ಅವರಂತಹ ಪ್ರತಿಭಾವಂತ ನಟರೊಂದಿಗೆ ಕೈಜೋಡಿಸಿದ್ದು, ದೇಶದ ಗಡಿಗಳನ್ನು ಮೀರಿ ಪ್ರಪಂಚದಾದ್ಯಂತ ಕಥೆಗಳನ್ನು ತಲುಪಿಸುವತ್ತ ಹೊಸ ಹೆಜ್ಜೆ ಇಟ್ಟಿದೆ.

  • ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ

    ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ

    – ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ರಾಧಿಕಾಗೆ ನಾನು ಅಭಿಮಾನಿ ಎಂದ ಅತ್ತೆ

    ಸ್ಟಾರ್ ನಟ ಯಶ್ (Yash) ತಾಯಿ ‘ಕೊತ್ತಲವಾಡಿ’ ಸಿನಿಮಾ ನಿರ್ಮಿಸುವ ಮೂಲಕ ಸ್ಯಾಂಡಲ್‌ವುಡ್‌ಗೆ ನಿರ್ಮಾಪಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್‌ನಲ್ಲಿ ಮಗ ಯಶ್ ಮತ್ತು ಸೊಸೆ ರಾಧಿಕಾ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಕಥೆ ಆಯ್ಕೆ ಮಾಡೋದ್ರಲ್ಲಿ ಯಶ್‌ಗಿಂತ (Yash) ರಾಧಿಕಾ ಕಿಲಾಡಿ ಎಂದು ಪುಷ್ಪ ಅರುಣ್ ಕುಮಾರ್ (Pushpa Arun Kumar) ಹೇಳಿದ್ದಾರೆ. ಇದನ್ನೂ ಓದಿ:ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್

    ‘ಕೊತ್ತಲವಾಡಿ’ ಸಿನಿಮಾದ ಟೀಸರ್ ಲಾಂಚ್‌ನಲ್ಲಿ ಯಶ್ ತಾಯಿ ರಾಧಿಕಾ ಪಂಡಿತ್ (Radhika Pandit) ಕಥೆ ಆಯ್ಕೆ ಮಾಡೋದ್ರಲ್ಲಿ ಎಷ್ಟು ಸೆಲೆಕ್ಟಿವ್ ಎಂದು ರಿವೀಲ್ ಮಾಡಿದ್ದಾರೆ. ನನ್ನ ಮಗಳಾಗಲಿ ಅಥವಾ ಮಗನಿಗೂ ಈ ಬಗ್ಗೆ ಗೊತ್ತಿರಲಿಲ್ಲ. ನಾನು ಹೊಸದಾಗಿ ಚಿಕ್ಕ ಪ್ರಯತ್ನ ಮಾಡುತ್ತಿದ್ದೇನೆ. ನಮ್ಮ ರಾಧಿಕಾ ತುಂಬಾ ಚೆನ್ನಾಗಿ ಕಥೆ ಸೆಲೆಕ್ಟ್ ಮಾಡುತ್ತಾಳೆ. ಕಥೆ ಆಯ್ಕೆ ಮಾಡೋದರಲ್ಲಿ ರಾಧಿಕಾ ಯಶ್‌ಗಿಂತಲೂ ಕಿಲಾಡಿ. ನನ್ನ ಸೊಸೆ ಆಗುವುದಕ್ಕೂ ಮೊದಲಿನಿಂದಲೂ ನಾನು ರಾಧಿಕಾಗೆ ಫ್ಯಾನ್. ಕಥೆ ವಿಚಾರದಲ್ಲಿ ತುಂಬಾ ಚೆನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾಳೆ. ಆ ವಿಚಾರದಲ್ಲಿ ನಾನು ಅವಳಿಂದ ಕಲಿಯಬೇಕಾಗಿರೋದು ತುಂಬಾ ಇದೆ ಎಂದು ಸೊಸೆ ರಾಧಿಕಾ ಬಗ್ಗೆ ಪುಷ್ಪ ಅವರು ಹೊಗಳಿದ್ದಾರೆ. ಇದನ್ನೂ ಓದಿ:ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್

    ಯಶ್ ಅವರು ಈಗಾಗಲೇ ಒಂದು ಮಾನ್‌ಸ್ಟರ್ ಕ್ರಿಯೇಷನ್ಸ್ ಬ್ಯಾನರ್ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದ್ದಾರೆ. ಈ ಕಡೆ ಅವರ ತಾಯಿ ಪುಷ್ಪ ಅವರು ಕೂಡ ಪಿಎ ಪ್ರೊಡಕ್ಷನ್ಸ್ ಶುರು ಮಾಡಿದ್ದಾರೆ. ಎರೆಡೆರೆಡು ಪ್ರೊಡಕ್ಷನ್ ಹೌಸ್ ಯಾಕೆ ಎಂಬುದರ ಬಗ್ಗೆ ಪುಷ್ಪ ಮಾತನಾಡಿ, ಎಲ್‌ಐಸಿಯಲ್ಲಿ ನಿಮ್ಮ ಹಣವನ್ನು ನೀವೆ ಪಾವತಿಸಬೇಕು. ಗಂಡನ ಅಕೌಂಟ್‌ನಿಂದ ಹಣ ಕೊಡುತ್ತೇವೆ ಅಂತಂದರೆ ಎಲ್‌ಐಸಿ ಒಪ್ಪಿಕೊಳ್ಳುವುದಿಲ್ಲ. ಅದನ್ನು ರಿಜೆಕ್ಟ್ ಮಾಡುತ್ತದೆ. ಆಗ ಮಗ ಬೇರೆ, ಗಂಡ ಬೇರೆ, ಮಗಳು ಬೇರೆ, ಸಂಪಾದನೆ ಎಲ್ಲರದ್ದೂ ಬೇರೆ ಬೇರೆ ಅನ್ನೋ ಪಾಠವನ್ನು ಆಗಲೇ ನಾನು ಕಲಿತದ್ದು. ಯಶ್ ದುಡಿಯುತ್ತಿರುವುದು ಅವನ ಸಾಮರ್ಥ್ಯದಿಂದ, ಹಾಗಂತ ಯಶ್ ಅವರ ಅಮ್ಮ ಎಂದು ನನಗೆ ಎಷ್ಟು ದಿನ ಗೌರವ ಕೊಡುತ್ತೀರಾ? ನಿರ್ಮಾಪಕಿಯಾದ ಮೇಲೆ ನನ್ನದೇ ಒಂದು ಸ್ಥಾನವಿರುತ್ತದೆ ಎಂದಿದ್ದಾರೆ ಯಶ್ ತಾಯಿ.

    ‘ಕೊತ್ತಲವಾಡಿ’ ಚಿತ್ರದ ಟೀಸರ್ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್ ರಗಡ್ ಹಾಗೂ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಕ್ವಾಲಿಟಿ ಚೆನ್ನಾಗಿದೆ. ಕೊತ್ತಲವಾಡಿ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್ ಹೇಳೋದಿಕ್ಕೆ ಹೊರಟಿದ್ದಾರೆ. ವಿಕಾಸ್ ವಸಿಷ್ಠ ಅವರು ಸಂಗೀತ, ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ಟೀಸರ್ ಹೈಲೆಟ್.

    ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಪಿಎ ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.


    ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ‘ಕೊತ್ತಲವಾಡಿ’ ಸಿನಿಮಾಗೆ ಇದೆ.

  • ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್

    ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್

    ಟಿ ರಾಧಿಕಾ ಪಂಡಿತ್ (Radhika Pandit) ಅವರು ನಟನೆಯಿಂದ ದೂರವಿದ್ರೂ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಪತಿ ಯಶ್ (Yash) ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ರಾಧಿಕಾ ದಾಂಪತ್ಯದ ಬಗ್ಗೆ ಪಾಠ ಮಾಡಿದ್ದಾರೆ.‌ ಇದನ್ನೂ ಓದಿ:‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಪವನ್ ಕಲ್ಯಾಣ್

    ಸ್ಯಾಂಡಲ್‌ವುಡ್‌ನಲ್ಲಿ ಯಶ್ ಮತ್ತು ರಾಧಿಕಾ ಜೋಡಿಗೆ ಅಪಾರ ಅಭಿಮಾನಿಗಳಿದ್ದಾರೆ. ಒಬ್ಬರ ಯಶಸ್ಸಿಗೆ ಮತ್ತೊಬ್ಬರು ಸಾಥ್ ನೀಡುತ್ತಾ ಜೊತೆಯಾಗಿ ಮುನ್ನಡೆಯುತ್ತಿದ್ದಾರೆ. ಹೀಗಿರುವಾಗ ದಾಂಪತ್ಯದ ಬಗ್ಗೆ ನಟಿ ಹಂಚಿಕೊಂಡಿರುವ ಪೋಸ್ಟ್ ಅಭಿಮಾನಿಗಳ ಗಮನ ಸೆಳೆದಿದೆ. ‘ಸಂಬಂಧದಲ್ಲಿ ಅತ್ಯಂತ ಮುಖ್ಯವಾದ ವಿಷಯ ಏನೆಂದರೆ, ಒಟ್ಟಿಗೆ ಇರೋದರ ಜೊತೆಗೆ ಒಬ್ಬರ ಮೌನವನ್ನು ಕೂಡ ಎಷ್ಟು ಅರ್ಥ ಮಾಡಿಕೊಳ್ಳುತ್ತೇವೆ ಅನ್ನೋದು ಮುಖ್ಯ ಎಂದು ರಾಧಿಕಾ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಸಂಸಾರದಲ್ಲಿ ಖುಷಿಯಾಗಿರೋದರ ಗುಟ್ಟನ್ನು ಹೇಳಿದ್ದಾರೆ. ಇದನ್ನೂ ಓದಿ:‘ಆರ್ಯ 3’ ಟೈಟಲ್ ರಿಜಿಸ್ಟರ್ ಮಾಡಿಸಿದ ನಿರ್ಮಾಪಕ- ಸಾಥ್ ನೀಡ್ತಾರಾ ಅಲ್ಲು ಅರ್ಜುನ್?

     

    View this post on Instagram

     

    A post shared by Radhika Pandit (@iamradhikapandit)


    ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಯಶ್ ಮತ್ತು ರಾಧಿಕಾ ಜೋಡಿ 2016ರಲ್ಲಿ ಮದುವೆಯಾದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳು ಸಾಕ್ಷಿಯಾಗಿದ್ದಾರೆ.

    ನಂದಗೋಕುಲ ಸೀರಿಯಲ್, ಮೊಗ್ಗಿನ ಮನಸ್ಸು, ಸಂತು ಸ್ಟ್ರೈಟ್ ಪಾರ್‌ವರ್ಡ್, Mr & Mrs ರಾಮಾಚಾರಿ ಸಿನಿಮಾಗಳಲ್ಲಿ ಯಶ್ ಮತ್ತು ರಾಧಿಕಾ ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರಗಳು ಯಶಸ್ಸು ಕಂಡಿವೆ.

  • ಭಾರತ-ಪಾಕ್ ಉದ್ವಿಗ್ನತೆ ನಡುವೆ ಖಡಕ್ ಸೂಚನೆ ಕೊಟ್ಟ ಯಶ್

    ಭಾರತ-ಪಾಕ್ ಉದ್ವಿಗ್ನತೆ ನಡುವೆ ಖಡಕ್ ಸೂಚನೆ ಕೊಟ್ಟ ಯಶ್

    ಭಾರತ (India0 ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ ಬೆನ್ನಲ್ಲೇ ಯಶ್ (Yash) ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಭಾರತ ಮತ್ತು ಪಾಕ್ (Pakistan) ನಡುವಿನ ಯುದ್ಧ (War) ಸನ್ನಿವೇಶ ಕುರಿತು ತಪ್ಪು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ

    ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸಿ ಎಂದಿದ್ದಾರೆ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ. ಜೈ ಹಿಂದ್ ಎಂದು ಯಶ್ ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಆಪರೇಷನ್ ಸಿಂಧೂರ’ ಟೈಟಲ್‌ಗೆ ಬೇಡಿಕೆ- ರಿಜಿಸ್ಟರ್ ಮಾಡಲು ಮುಗಿಬಿದ್ದ ನಿರ್ಮಾಪಕರು

    ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆ ಭಾರತ ಈಗ ಪಾಕ್‌ಗೆ ತಕ್ಕ ಪಾಠ ಕಲಿಸುತ್ತಿದೆ.

  • ಕೆಜಿಎಫ್ ಕ್ವೀನ್ ಬ್ಯಾಕ್ ಟು ರಾಕ್- ಫ್ಯಾನ್ಸ್‌ಗೆ ಗುಡ್ ನ್ಯೂಸ್

    ಕೆಜಿಎಫ್ ಕ್ವೀನ್ ಬ್ಯಾಕ್ ಟು ರಾಕ್- ಫ್ಯಾನ್ಸ್‌ಗೆ ಗುಡ್ ನ್ಯೂಸ್

    ನ್ನಡದ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಮತ್ತೆ ಬೆಳ್ಳಿಪರದೆಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಮೂಲಕ ಮಿಂಚಲು ಸಜ್ಜಾಗಿದ್ದಾರೆ. 3 ವರ್ಷಗಳ ಬಳಿಕ ಮತ್ತೆ ಬೆಳ್ಳಿಪರದೆಯತ್ತ ನಟಿ ಎಂಟ್ರಿ ಕೊಡ್ತಿದ್ದಾರೆ. ಯಾವೆಲ್ಲಾ ಸಿನಿಮಾಗಳು ಕುಡ್ಲದ ಬೆಡಗಿ ಕೈಯಲ್ಲಿದೆ ಗೊತ್ತಾ? ಇಲ್ಲಿದೆ ವಿವರ. ಇದನ್ನೂ ಓದಿ:ಟ್ರೋಲ್‌ಗೆ ಡೋಂಟ್ ಕೇರ್ ಎನ್ನುತ್ತಾ ಮಿನಿ ಡ್ರೆಸ್‌ನಲ್ಲಿ ಮಿಂಚಿದ ನಿವೇದಿತಾ ಗೌಡ

    ರಾಕಿಂಗ್ ಸ್ಟಾರ್ ಯಶ್‌ಗೆ (Yash) ನಾಯಕಿಯಾಗಿ ಸತತ 5 ವರ್ಷಗಳ ಕಾಲ ‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ಗೆ (KGF 2) 5 ವರ್ಷ ಮೀಸಲಿಟ್ಟು ಗೆದ್ದು ಬೀಗಿದ್ದರು. ಆ ನಂತರ ಚಿಯಾನ್ ವಿಕ್ರಮ್‌ಗೆ ನಾಯಕಿಯಾಗಿ ‘ಕೋಬ್ರಾ’ ಮೂಲಕ ಹಿಟ್ ಕೊಡಲು ರೆಡಿಯಾದ್ರು. ಆದರೆ ಅದ್ಯಾಕೋ ಸಕ್ಸಸ್ ಸಿಗದೇ ನಟಿ ಸೈಲೆಂಟ್ ಆದರು. ಈಗ ಬರೋಬ್ಬರಿ 3 ಬಿಗ್ ಪ್ರಾಜೆಕ್ಟ್‌ಗಳ ಮೂಲಕ ಮೂರು ವರ್ಷಗಳ ಬಳಿಕ ಕೆಜಿಎಫ್ ಕ್ವೀನ್ ಶ್ರೀನಿಧಿ ಬರುತ್ತಿದ್ದಾರೆ.

    ನ್ಯಾಚುರಲ್ ಸ್ಟಾರ್ ನಾನಿ (Nani) ಜೊತೆ ಹಿಟ್ 3, ಸಿದ್ದು ಜೊನ್ನಲಗಡ್ಡ ಜೊತೆ ‘ತೆಲುಸು ಕದಾ’ ಸಿನಿಮಾಗಳನ್ನ ಮಾಡಿದ್ದಾರೆ. ಕಿಚ್ಚ ಸುದೀಪ್ ನಟನೆಯ ‘ಕಿಚ್ಚ 47’ ಸಿನಿಮಾಗೂ ಇವರೇ ನಾಯಕಿ ಅನ್ನೋದು ಚಿತ್ರತಂಡದ ಕಡೆಯಿಂದ ಅಧಿಕೃತವಾಗಿದೆ. ಅಲ್ಲಿಗೆ ‘ಕೆಜಿಎಫ್’ (KGF) ಕ್ವೀನ್ ಈಸ್ ಬ್ಯಾಕ್. ಹೊಸ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸೋಕೆ ನಟಿ ರೆಡಿಯಾಗಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ದಕ್ಷಿಣದಲ್ಲಿ ಅಧೀರನಿಗೆ ಭಾರೀ ಬೇಡಿಕೆ- ಪ್ರಭಾಸ್ ಸಿನಿಮಾದಲ್ಲಿ ಸಂಜಯ್ ದತ್

    ದಕ್ಷಿಣದಲ್ಲಿ ಅಧೀರನಿಗೆ ಭಾರೀ ಬೇಡಿಕೆ- ಪ್ರಭಾಸ್ ಸಿನಿಮಾದಲ್ಲಿ ಸಂಜಯ್ ದತ್

    ‘ಕೆಜಿಎಫ್ 2′ ಹಿಟ್ ಆದ್ಮೇಲೆ ಸಂಜಯ್ ದತ್‌ಗೆ (Sanjay Dutt) ಸೌತ್‌ನಲ್ಲಿ ಬೇಡಿಕೆ ಹೆಚ್ಚಾಗಿದೆ. ಬಾಲಿವುಡ್‌ಗಿಂತ ದಕ್ಷಿಣದ ಸಿನಿಮಾಗಳಿಗೆ ನಟ ಹೆಚ್ಚು ಪ್ರಾಮುಖ್ಯತೆ ಕೊಡ್ತಿದ್ದಾರೆ. ಸದ್ಯ ಪ್ರಭಾಸ್ (Prabhas) ನಟನೆಯ ಹೊಸ ಸಿನಿಮಾದಲ್ಲಿ ಸಂಜಯ್ ದತ್ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:’ಸಿಕಂದರ್‌’ ಚಿತ್ರದ ಟ್ರೈಲರ್‌ನಲ್ಲಿ ಮಿಂಚಿದ ಕನ್ನಡಿಗ ಕಿಶೋರ್

    ಸೌತ್‌ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಸಂಜಯ್ ದತ್ ಬ್ಯುಸಿಯಾಗಿದ್ದಾರೆ. ಸದ್ಯ ‘ಅನಿಮಲ್’ (Animal) ಖ್ಯಾತಿಯ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್’ನಲ್ಲಿ ಪ್ರಭಾಸ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ಸಂಜಯ್ ದತ್ ಅವರು ಪ್ರಭಾಸ್‌ಗೆ ಅಣ್ಣನಾಗಿ ಬಣ್ಣ ಹಚ್ಚಲಿದ್ದಾರೆ ಎನ್ನಲಾದ ಸುದ್ದಿಯೊಂದು ಟಾಲಿವುಡ್‌ನಲ್ಲಿ ಕೇಳಿ ಬರುತ್ತಿದೆ.

    ಸಂದೀಪ್ ಮಾರ್ಕ್ ಅನ್ನೋ ಪಾತ್ರಕ್ಕೆ ಸಂಜಯ್‌ರನ್ನು ಚಿತ್ರತಂಡ ಸಂಪರ್ಕಿಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಟನಾಗಲಿ, ಚಿತ್ರತಂಡದ ಕಡೆಯಿಂದ ಆಗಲಿ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಅದಷ್ಟೇ ಅಲ್ಲ, ಪ್ರಭಾಸ್ ನಟನೆಯ ರಾಜಾ ಸಾಬ್ ಸಿನಿಮಾದಲ್ಲೂ ಸಂಜಯ್ ದತ್ ವಿಲನ್ ಆಗಿ ನಟಿಸಿದ್ದಾರೆ ಎಂಬ ಸುದ್ದಿ ಕೂಡ ಇದೆ. ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್‌ಡೇಟ್ ಸಿಗುವವರೆಗೂ ಕಾದುನೋಡಬೇಕಿದೆ.

    ಇನ್ನೂ ಕನ್ನಡದ ನಟ ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸಂಜಯ್ ದತ್ ಪವರ್‌ಫುಲ್ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ರಿಲೀಸ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • ಹನಿ ಸಿಂಗ್‌ ಕಾನ್ಸರ್ಟ್‌ನಲ್ಲಿ ರಾಕಿಂಗ್‌ ಸ್ಟಾರ್-‌ ಕನ್ನಡದಲ್ಲಿ ಹಾಡುವಂತೆ ಯಶ್‌ ಕಂಡೀಷನ್‌

    ಹನಿ ಸಿಂಗ್‌ ಕಾನ್ಸರ್ಟ್‌ನಲ್ಲಿ ರಾಕಿಂಗ್‌ ಸ್ಟಾರ್-‌ ಕನ್ನಡದಲ್ಲಿ ಹಾಡುವಂತೆ ಯಶ್‌ ಕಂಡೀಷನ್‌

    ಬಾಲಿವುಡ್‌ನ ಖ್ಯಾತ ಗಾಯಕ, ರ‍್ಯಾಪರ್ ಹನಿ ಸಿಂಗ್ (Honey Singh) ನಿನ್ನೆ (ಮಾ.22) ಬೆಂಗಳೂರಿಗೆ ಆಗಮಿಸಿ ಅದ್ಧೂರಿಯಾಗಿ ಲೈವ್ ಕಾನ್ಸರ್ಟ್ (ಸಂಗೀತ ಕಾರ್ಯಕ್ರಮ) ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ (Yash) ಅವರು ಸಾಥ್ ನೀಡಿದ್ದಾರೆ. ಅದಲ್ಲದೇ, ಹನಿ ಸಿಂಗ್‌ಗೆ ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಹಾಡಬೇಕು ಎಂದು ಯಶ್ ಬೇಡಿಕೆಯಿಟ್ಟಿದ್ದಾರೆ. ಈ ಕುರಿತ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಟಾಕ್ಸಿಕ್‌ ಸಿನಿಮಾ ಮುಂದಿನ ವರ್ಷ ರಿಲೀಸ್‌ – ದಿನಾಂಕ ಘೋಷಿಸಿದ ಯಶ್‌

    ನಿನ್ನೆ ಸಂಜೆ ಬೆಂಗಳೂರಿನಲ್ಲಿ ಹನಿ ಸಿಂಗ್ ಆಗಮಿಸಿ ತಮ್ಮ ಗಾಯನದ ಮೂಲಕ ರಂಜಿಸಿದ್ದಾರೆ. ಈ ವೇಳೆ, ಯಶ್ ಕೂಡ ವೇದಿಕೆಗೆ ಆಗಮಿಸಿ ಕನ್ನಡದಲ್ಲಿಯೇ ಹನಿ ಸಿಂಗ್‌ಗೆ ‘ಬೆಂಗಳೂರಿಗೆ ಸ್ವಾಗತ’ ಎಂದಿದ್ದಾರೆ. ನಮಸ್ಕಾರ ಎಲ್ಲರೂ ಹೇಗಿದ್ದೀರಿ. ತುಂಬಾ ಖುಷಿ ಆಗುತ್ತಿದೆ ನಿಮ್ಮೆಲ್ಲರನ್ನೂ ನೋಡಿ. ನಮ್ಮ ಊರಿಗೆ ಬಂದ ಇವರಿಗೆ ಸ್ವಾಗತಿಸೋಣ, ವೆಲ್ ಕಮ್ ಬ್ರದರ್. ವಿ ಲವ್ ಯೂ ಎಂದು ಹೇಳಿದ್ದಾರೆ.

    ಕಾರ್ಯಕ್ರಮದಲ್ಲಿ ಹನಿ ಸಿಂಗ್‌ಗೆ ನೀವು ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಹಾಡಬೇಕು ಎಂದು ಯಶ್ ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಗಾಯಕ, ಖಂಡಿತ ನಿಮಗಾಗಿ ಕನ್ನಡದಲ್ಲಿ ಹಾಡು ಹಾಡುತ್ತೇನೆ ಎಂದಿದ್ದಾರೆ. ಯಶ್‌ ಕಾರ್ಯಕ್ರಮಕ್ಕೆ ಬಂದು ಸಾಥ್‌ ಕೊಟ್ಟಿದಕ್ಕೆ ಗಾಯಕ ಧನ್ಯವಾದ ಹೇಳಿದ್ದಾರೆ. ಇನ್ನೂ ಹಿಂದಿ ಹಾಡುಗಳ ಕಾನ್ಸರ್ಟ್‌ನಲ್ಲಿ ಕನ್ನಡದಲ್ಲಿ ಯಶ್ ಮಾತನಾಡಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಜೊತೆಗೆ ಕನ್ನಡದ ಹಾಡುಗಳನ್ನು ಹಾಡಿ ಎಂದು ಒತ್ತಾಯಿಸಿರೋದು ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

     

    View this post on Instagram

     

    A post shared by Yo Yo Honey Singh (@yoyohoneysingh)

    ಇನ್ನೂ ಯಶ್ ಕೂಡ ಆಗಮಿಸಿ ನೆರೆದಿದ್ದ ಜನರಿಗೆ ಅಚ್ಚರಿ ಮೂಡಿಸಿದ್ದಾರೆ. ಮುಂಚೆಯೇ ಹನಿ ಸಿಂಗ್ ಕಾನ್ಸರ್ಟ್‌ನಲ್ಲಿ ಯಶ್ ಭಾಗಿಯಾಗ್ತಾರೆ ಎಂಬ ಯಾವುದೇ ಮುನ್ಸೂಚನೆ ಇರಲಿಲ್ಲ. ಇದನ್ನೂ ಓದಿ:ಕನ್ನಡದಲ್ಲಿ ಸಿನಿಮಾ ಮಾಡಲಿದ್ದಾರೆ ತಮಿಳಿನ ಖ್ಯಾತ ನಿರ್ದೇಶಕ ಗೌತಮ್

    ಅಂದಹಾಗೆ, ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಮುಂದಿನ ವರ್ಷ ರಿಲೀಸ್ ಮಾಡೋದಾಗಿ ಗುಡ್ ನ್ಯೂಸ್ ನೀಡಿದ್ದಾರೆ. 2026ರ ಮಾ.19ರಂದು ರಿಲೀಸ್ ಮಾಡೋದಾಗಿ ಯಶ್ ಘೋಷಿಸಿದ್ದಾರೆ. ಈ ಚಿತ್ರವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನ ಮಾಡುತ್ತಿದ್ದಾರೆ.

  • ಮಹಾ ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

    ಮಹಾ ಕುಂಭಮೇಳದಲ್ಲಿ ಭಾಗಿಯಾದ ‘ಕೆಜಿಎಫ್ 2’ ಕ್ವೀನ್‌

    ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ (Kumbh Mela) ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಕುಂಭ ಮೇಳದಲ್ಲಿ ಜನ ಭಾಗಿಯಾಗುತ್ತಿದ್ದಾರೆ. ಇದರ ನಡುವೆ ‘ಕೆಜಿಎಫ್ 2’ (KGF 2) ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಅವರು ಮಾಸ್ಕ್ ಹಾಕಿಕೊಂಡೇ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ತಮ್ಮ ಈ ಆಧ್ಯಾತ್ಮಿಕ ಅನುಭವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಮೌನಿ ಅಮಾವಾಸ್ಯೆಯಂದು ಮಹಾಕುಂಭ ಮೇಳದಲ್ಲಿನ ತ್ರಿವೇಣಿ ಸಂಗಮದಲ್ಲಿ ನಾನು ಪವಿತ್ರವಾದ ಸ್ನಾನ ಮಾಡುತ್ತೇನೆ ಎಂದು ಕನಸು ಮನಸಿನಲ್ಲಿಯೂ ಕೂಡ ಅಂದುಕೊಂಡಿರಲಿಲ್ಲ. ಈ ಅದ್ಭುತವಾದ ಅನುಭವವನ್ನು ನಾನು ಸಂಪೂರ್ಣವಾಗಿ ಅನುಭವಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಬದುಕು ಅಚ್ಚರಿಯ ಸಂತೆ ಈ ದೈವಿಕ ಅನುಗ್ರಹ ಮತ್ತು ಆಶೀರ್ವಾದದಿಂದ ನನ್ನ ಹೃದಯ ತುಂಬಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ದರ್ಶನ್‌-ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ – ರಕ್ಷಿತಾ

    ಅಂದಹಾಗೆ, ಯಶ್‌ಗೆ ನಾಯಕಿಯಾಗಿ ‘ಕೆಜಿಎಫ್’ ಮತ್ತು ‘ಕೆಜಿಎಫ್ 2’ ಸಿನಿಮಾದಲ್ಲಿ ಅವರು ನಟಿಸಿದ್ದಾರೆ. ಈ ಚಿತ್ರದ ಸಕ್ಸಸ್ ಬಳಿಕ ತೆಲುಗು ಹಾಗೂ ತಮಿಳಿನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ನ್ಯಾಚುರಲ್ ಸ್ಟಾರ್ ನಾನಿಗೆ ನಾಯಕಿಯಾಗಿ ‘ಹಿಟ್ 3’ ಸಿನಿಮಾದಲ್ಲಿ ನಟಿಸಿದ್ದಾರೆ.

  • ನಮ್ಮ ಜಗತ್ತನ್ನು ಯಾವಾಗಲೂ ಬೆಳಗಿಸುವ ಸ್ಟಾರ್- ಯಶ್‌ಗೆ ರಾಧಿಕಾ ಲವ್ಲಿ ವಿಶ್

    ನಮ್ಮ ಜಗತ್ತನ್ನು ಯಾವಾಗಲೂ ಬೆಳಗಿಸುವ ಸ್ಟಾರ್- ಯಶ್‌ಗೆ ರಾಧಿಕಾ ಲವ್ಲಿ ವಿಶ್

    ರಾಕಿಂಗ್ ಸ್ಟಾರ್ ಯಶ್ (Yash) ಅವರು ಜ.8ರಂದು 39ನೇ ವರ್ಷದ ಹುಟ್ಟುಹಬ್ಬವನ್ನು ಗೋವಾದಲ್ಲಿ ಆಚರಿಸಿದ್ದಾರೆ. ಚಿತ್ರರಂಗದ ಅನೇಕ ನಟ-ನಟಿಯರು ಶುಭಕೋರಿದ್ದಾರೆ. ಇದೀಗ ಯಶ್ ಬರ್ತ್‌ಡೇಗೆ ಪತ್ನಿ ರಾಧಿಕಾ ಪಂಡಿತ್ (Radhika Pandit) ಪ್ರೀತಿಯಿಂದ ವಿಶ್ ಮಾಡಿದ್ದಾರೆ. ನನ್ನ ಹೃದಯವನ್ನು ಆಳುವ ಕಿಂಗ್ ನೀವು ಎಂದು ಕ್ಯೂಟ್ ಆಗಿ ವಿಶ್ ಮಾಡಿದ್ದಾರೆ.

    ಯಶ್ (Yash) ಜೊತೆಗಿನ ಬ್ಯೂಟಿಫುಲ್ ಫೋಟೋಸ್ ಶೇರ್ ಮಾಡಿದ ರಾಧಿಕಾ ಪಂಡಿತ್, ಬೆಸ್ಟ್ ಪತಿ ಹಾಗೂ ಅಪ್ಪ, ನೀವು ನಮ್ಮ ಮಕ್ಕಳಿಗೆ ಸದಾ ರಾಕ್, ನನ್ನ ಹೃದಯವನ್ನ ಆಳುವ ಕಿಂಗ್ ಮತ್ತು ನಮ್ಮ ಜಗತ್ತನ್ನು ಯಾವಾಗಲೂ ಬೆಳಗಿಸುವ ಸ್ಟಾರ್. ನಾವು ನಿಮ್ಮನ್ನು ಸದಾ ಪ್ರೀತಿಸುತ್ತೇವೆ. ಜನ್ಮದಿನದ ಶುಭಾಶಯಗಳು ಪತಿಗೆ ಶುಭಕೋರಿದ್ದಾರೆ. ಇದನ್ನೂ ಓದಿ:ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

     

    View this post on Instagram

     

    A post shared by Radhika Pandit (@iamradhikapandit)

    ಗೋವಾದಲ್ಲಿ ಮಧ್ಯರಾತ್ರಿ ಯಶ್ ಕೇಕ್ ಕತ್ತರಿಸಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದರು. ಪತ್ನಿ ರಾಧಿಕಾ ಮತ್ತು ಮಕ್ಕಳೊಂದಿಗೆ ಬರ್ತ್‌ಡೇ ಆಚರಿಸಿ ಯಶ್ ಖುಷಿಪಟ್ಟಿದ್ದಾರೆ. ನಟನ ಆಪ್ತ ಪಾನಿ ಪುರಿ ಕಿಟ್ಟಿ, ಕೆವಿಎನ್ ಸಂಸ್ಥೆಯ ರೂವಾರಿ ವೆಂಕಟ್ ಸೇರಿದಂತೆ ಅನೇಕರು ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿ ಶುಭಕೋರಿದ್ದರು.

    ಈ ಮೊದಲೇ ತಾವು ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ. ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಹಾರೈಸಿ ಎಂದು ನಟ ತಿಳಿಸಿದ್ದರು. ಅದರಂತೆ ಜ.8ರಂದಯ ‘ಟಾಕ್ಸಿಕ್’ ಲುಕ್‌ನಿಂದ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಫ್ಯಾನ್ಸ್ ನಿರೀಕ್ಷೆಗೆ ಅವರು ನಿರಾಸೆ ಮಾಡಿಲ್ಲ. ರಾಕಿ ಭಾಯ್ ಬರ್ತ್ಡೇ ಪ್ರಯುಕ್ತ 59 ಸೆಕೆಂಡ್ ಗ್ಲಿಂಪ್ಸ್ ರಿವೀಲ್ ಆಗಿದ್ದು, ಡ್ರಗ್ಸ್ ಮಾಫಿಯಾ ಕುರಿತ ಚಿತ್ರವಾಗಿದೆ. ರಿಲೀಸ್ ಆದ ಗ್ಲಿಂಪ್ಸ್‌ನಲ್ಲಿ ಕಲರ್‌ಫುಲ್ ಸೆಟ್‌ನಲ್ಲಿ ನಟನ ಸ್ಟೈಲೀಶ್ ವಾಕ್, ಹಾಟ್ ಮ್ಯಾನರಿಸಮ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    ಇನ್ನೂ ‘ಟಾಕ್ಸಿಕ್’ ಸಿನಿಮಾವು ಬೆಂಗಳೂರಿನ HMT ಮೈದಾನದಲ್ಲಿ ಮೊದಲ ಹಂತದ ಚಿತ್ರೀಕರಣ ಶುರುವಾದ ಬಳಿಕ ಮುಂಬೈ, ಗೋವಾ, ಮಂಗಳೂರಿನಲ್ಲಿ ಶೂಟಿಂಗ್ ನಡೆಸಿದೆ ಚಿತ್ರತಂಡ.

    ಈ ಸಿನಿಮಾವನ್ನು KVN ಪ್ರೊಡಕ್ಷನ್ಸ್ ಹಾಗೂ ಯಶ್ ನಿರ್ಮಾಣದ ಸಂಸ್ಥೆ ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಚಿತ್ರಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಯಶ್ ನಟನೆಯ 19ನೇ ಸಿನಿಮಾ ಟಾಕ್ಸಿಕ್ ಚಿತ್ರವಾಗಿದ್ದು, ಕೆಜಿಎಫ್ 2 ಸಕ್ಸಸ್ ಬಳಿಕ ಈ ಸಿನಿಮಾ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

  • ಮಂಗಳೂರಿಗೆ ಯಶ್‌ ಬಂದಿದ್ಯಾಕೆ?- ಇಲ್ಲಿದೆ ಅಸಲಿ ಕಾರಣ

    ಮಂಗಳೂರಿಗೆ ಯಶ್‌ ಬಂದಿದ್ಯಾಕೆ?- ಇಲ್ಲಿದೆ ಅಸಲಿ ಕಾರಣ

    ನ್ಯಾಷನಲ್ ಸ್ಟಾರ್ ಯಶ್ (Yash) ‘ಟಾಕ್ಸಿಕ್’ (Toxic) ಸಿನಿಮಾದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಜ.8ರಂದು ಯಶ್ ಹುಟ್ಟುಹಬ್ಬದ (Birthday) ಹಿನ್ನೆಲೆ ‘ಟಾಕ್ಸಿಕ್’ ಕುರಿತು ಅಪ್‌ಡೇಟ್ ತಿಳಿಸೋದಾಗಿ ಅನೌನ್ಸ್ ಮಾಡಿದ್ರೆ, ಇದರ ನಡುವೆ ನಟ ಮಂಗಳೂರಿನ (Mangaluru) ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

    ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಯಶ್ ಮುಖಕ್ಕೆ ಮಾಸ್ಕ್ ಹಾಕಿ ತೆರಳುವ ದೃಶ್ಯ ಸಖತ್ ವೈರಲ್ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾದ ಮುಂದಿನ ಶೆಡ್ಯೂಲ್ ಶೂಟಿಂಗ್‌ಗಾಗಿ ಲೊಕೇಶನ್ ನೋಡಲು ನಟ ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಯಾವ ಸ್ಥಳದಲ್ಲಿ ಚಿತ್ರೀಕರಣ ಮಾಡಬೇಕು? ಏನೆಲ್ಲಾ ಯೋಜನೆಗಳಿವೆ ಎಂಬುದು ಇನ್ನೂ ಅಧಿಕೃತವಾಗಿ ತಿಳಿಯಬೇಕಿದೆ.

    ಇನ್ನೂ ಈ ಹಿಂದೆ ಕೂಡ ‘ಕೆಜಿಫ್‌ 2’ ಸಿನಿಮಾದ ಶೂಟಿಂಗ್‌ ಉಡುಪಿಯ ಮಲ್ಪೆ, ಪಡುಕೆರೆ ಭಾಗದಲ್ಲಿ  ಮಾಡಲಾಗಿತ್ತು. ಶ್ರೀನಿಧಿ ಶೆಟ್ಟಿ ಜೊತೆಗಿನ ಕೆಲವು ದೃಶ್ಯಗಳನ್ನು ಉಡುಪಿಯಲ್ಲಿ ಶೂಟಿಂಗ್‌ ಮಾಡಿದ್ದರು.


    ಇನ್ನೂ ಜ.8ರಂದು ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಲುಕ್ ಅನಾವರಣ ಆಗಲಿದೆ. ಬೆಳಗ್ಗೆ 10:25ಕ್ಕೆ ಅನೌನ್ಸ್ ಆಗಲಿದೆ. ಈ ಕುರಿತು ಕೆವಿಎನ್ ನಿರ್ಮಾಣ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ:BBK 11: ತ್ರಿವಿಕ್ರಮ್‌ ಡೇಂಜರ್‌ ಎಂದ ಭವ್ಯಾ ಗೌಡ

    ಇನ್ನೂ ಜ.8ರಂದು ಬೆಂಗಳೂರಿನಲ್ಲಿ ಇರುವುದಿಲ್ಲ ಬರ್ತ್ಡೇ ಆಚರಣೆ ಮಾಡಲ್ಲ ಎಂದು ಫ್ಯಾನ್ಸ್ ಯಶ್ ಈಗಾಗಲೇ ಮಾಹಿತಿ ನೀಡಿದ್ದಾರೆ. ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಯಶ್ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದರು.

    ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು (ಜ.8) ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ, ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ ಎಂದಿದ್ದಾರೆ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಬರೆದಿದ್ದರು.

    ಅಂದಹಾಗೆ, ಕಳೆದ ವರ್ಷ ಯಶ್ ಹುಟ್ಟುಹಬ್ಬದಂದು ಅವರ ಫ್ಲೆಕ್ಸ್ ಕಟ್ಟುವಾಗ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಮೂವರು ಯುವಕರು ಮೃತಪಟ್ಟಿದ್ದರು. ಹಾಗಾಗಿ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.