Tag: KGF-2

  • ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾಗೆ ಹೀರೋಯಿನ್‌ ಫಿಕ್ಸ್‌

    ಪ್ರಶಾಂತ್ ನೀಲ್- ಜ್ಯೂ.ಎನ್‌ಟಿಆರ್ ಸಿನಿಮಾಗೆ ಹೀರೋಯಿನ್‌ ಫಿಕ್ಸ್‌

    ‘ಆರ್‌ಆರ್‌ಆರ್’ (RRR) ಸೂಪರ್ ಸಕ್ಸಸ್ ನಂತರ ಜ್ಯೂ.ಎನ್‌ಟಿಆರ್, ಕೊರಟಾಲ ಶಿವ (Kortala Shiva) ನಿರ್ದೇಶನದ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಪ್ರಶಾಂತ್ ನೀಲ್ (Prashanth Neel) ಜೊತೆಗಿನ ತಾರಕ್ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಜ್ಯೂ.ಎನ್‌ಟಿಆರ್ (Jr.ntr) ಮಂದಿನ 31ನೇ ಚಿತ್ರಕ್ಕೆ ನಾಯಕಿ ಫೈನಲ್ ಆಗಿದ್ದಾರೆ. ಬಾಲಿವುಡ್ ಬ್ಯೂಟಿ ಜೊತೆ ತಾರಕ್ ರೊಮ್ಯಾನ್ಸ್ ಮಾಡಲಿದ್ದಾರೆ.

    ಕೊರಟಾಲ ಶಿವ ನಿರ್ದೇಶನದ ಎನ್‌ಟಿಆರ್ 30 ಚಿತ್ರದಲ್ಲಿ ಜ್ಯೂ.ಎನ್‌ಟಿಆರ್ ಶೂಟಿಂಗ್ ಬ್ಯುಸಿಯಾಗಿದ್ದಾರೆ. ಜಾನ್ವಿ ಕಪೂರ್, ಸೈಫ್ ಅಲಿ ಖಾನ್, ಕನ್ನಡದ ನಟಿ ಚೈತ್ರಾ ರೈ ಸೇರಿದಂತೆ ಹಲವರು ಶೂಟಿಂಗ್ ಭಾಗಿಯಾಗಿದ್ದಾರೆ.

    ಕೆಜಿಎಫ್ 2 (KGF2) ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್, ಸಲಾರ್‌ನಲ್ಲಿ (Salaar) ಬ್ಯುಸಿಯಾಗಿದ್ದಾರೆ. ಎನ್‌ಟಿಆರ್ 30 ಬಳಿಕ ತಾರಕ್, ಪ್ರಶಾಂತ್ ನೀಲ್ ಜೊತೆ ಕೈಜೋಡಿಸಲಿದ್ದಾರೆ. ಸಲಾರ್ ಬಳಿಕ ಜ್ಯೂ.ಎನ್‌ಟಿರ್ 31ನೇ ಚಿತ್ರಕ್ಕೆ ನೀಲ್ ನಿರ್ದೇಶನ ಮಾಡಲಿದ್ದಾರೆ. ತಾರಕ್ ಜೊತೆ ರೊಮ್ಯಾನ್ಸ್ ಮಾಡಲು ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shradha Kapoor) ಫೈನಲ್ ಆಗಿದ್ದಾರೆ. ಇದನ್ನೂ ಓದಿ:ಬಣ್ಣದ ಜಗತ್ತಿಗೆ ಎಂಟ್ರಿ ಕೊಟ್ಟ ಕ್ರಿಕೆಟಿಗ ಶುಭಮನ್‌ ಗಿಲ್

    ಮೊದಲ ಬಾರಿಗೆ ಜ್ಯೂ.ಎನ್‌ಟಿಆರ್- ಶ್ರದ್ಧಾ ಕಪೂರ್ ಜೊತೆಯಾಗಿ ನಟಿಸಲಿದ್ದಾರೆ. ಪ್ರಶಾಂತ್ ನೀಲ್ ನಿರ್ದೇಶದ ಭಿನ್ನ ಕಥೆಯಲ್ಲಿ ಶ್ರದ್ಧಾ- ತಾರಕ್ ಕಮಾಲ್ ಮಾಡಲಿದ್ದಾರೆ. ಈ ಜೋಡಿಯನ್ನ ನೋಡಲು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • ಪತ್ನಿಯ ನಿರೀಕ್ಷೆ-‌ ವಾಸ್ತವದ ಬಗ್ಗೆ ಕಾಲೆಳೆದ ರಾಕಿಂಗ್‌ ಸ್ಟಾರ್ ಯಶ್

    ಪತ್ನಿಯ ನಿರೀಕ್ಷೆ-‌ ವಾಸ್ತವದ ಬಗ್ಗೆ ಕಾಲೆಳೆದ ರಾಕಿಂಗ್‌ ಸ್ಟಾರ್ ಯಶ್

    ಪ್ಯಾನ್ ಇಂಡಿಯಾ ಸ್ಟಾರ್ ನಟ ಯಶ್ (Yash) ಅವರು ಸದ್ಯ ತಮ್ಮ ಪತ್ನಿ ಜೊತೆಗಿನ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಪತ್ನಿ ನಿರೀಕ್ಷೆ, ವಾಸ್ತವವೇನು ಎಂಬುದನ್ನ ಫೋಟೋ ಶೇರ್ ಮಾಡಿ, ರಾಧಿಕಾ (Radhika Pandit) ಕಾಲೆಳೆದಿದ್ದಾರೆ.

    ಕೆಜಿಎಫ್, ಕೆಜಿಎಫ್ 2 (KGF 2) ಸಕ್ಸಸ್ ನಂತರ ಯಶ್ ಹೊಸ ಸಿನಿಮಾದ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ‘ಕೆಜಿಎಫ್ 3’ (KGF 3) ಸಿನಿಮಾ ಅನೌನ್ಸ್ ಕೂಡ ಮಾಡಿದ್ದಾರೆ. ಯಶ್ ಮುಂದಿನ ಸಿನಿಮಾ ನಿರೀಕ್ಷೆಯಲ್ಲಿರುವ ಅಭಿಮಾನಿಗಳ ರಾಕಿಭಾಯ್ ಹೊಸ ಫೋಟೋ ನೋಡಿ ಫಿದಾ ಆಗಿದ್ದಾರೆ. ಪತ್ನಿ – ಮಕ್ಕಳ ಜೊತೆಗಿರುವ ಯಶ್ (Yash) ಸುಂದರ ಫೋಟೋವನ್ನು ಶೇರ್ ಮಾಡಿದ್ದಾರೆ.

    ಯಶ್ ಶೇರ್ ಮಾಡಿರುವ ಎರಡು ಫೋಟೋಗಳಲ್ಲಿ ಮೊದಲ ಫೋಟೋ, ಸುಂದರ ಪ್ರಕೃತಿ ನಡುವೆ ಕೈ ಕೈ ಹಿಡಿದು ಯಶ್ ಮತ್ತು ರಾಧಿಕಾ ನಡೆದುಕೊಂಡು ಬರುತ್ತಿದ್ದಾರೆ. ಮತ್ತೊಂದು ಫೋಟೋದಲ್ಲಿ ಯಶ್ ಮತ್ತು ರಾಧಿಕಾ ಇಬ್ಬರೂ ಮುದ್ದಾದ ಇಬ್ಬರು ಮಕ್ಕಳನ್ನು ಎತ್ತಿಕೊಂಡಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆಗಿನ ಫೋಟೋ ಶೇರ್ ಮಾಡಿ ನನ್ನ ಪತ್ನಿಯ ನಿರೀಕ್ಷೆ ಮತ್ತು ವಾಸ್ತವ ಎಂದು ಕ್ಯಾಪ್ಷನ್ ನೀಡಿದ್ದಾರೆ. ಮಕ್ಕಳಾದ ಮೇಲೆ ಅವರೇ ನಮ್ಮ ಪ್ರಪಂಚ ಎಂದಿದ್ದಾರೆ. ಯಶ್ ಮತ್ತು ರಾಧಿಕಾ ಸುಂದರ ಫೋಟೋಗೆ ಅಭಿಮಾನಿಗಳಿಂದ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ:ಚಿತ್ರೀಕರಣದ ಸಮಯದಲ್ಲಿ ಎದುರಿದ ಸಂಕಷ್ಟಗಳನ್ನ ಬಿಚ್ಚಿಟ್ಟ ಕೀರ್ತಿ ಸುರೇಶ್

     

    View this post on Instagram

     

    A post shared by Yash (@thenameisyash)

    ‘ಕೆಜಿಎಫ್ 2’ ನಟಿ ರವೀನಾ ಟಂಡನ್ (Raveena Tandon) ಕೂಡ ಯಶ್‌ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಅಂದರೆ ಇದೇ ಅಲ್ವಾ ನಮ್ಮ ಮಕ್ಕಳಿಂದ ನಮ್ಮ ಕುಟುಂಬ ಪರಿಪೂರ್ಣ ಎಂಬರ್ಥದಲ್ಲಿ ನಟಿ ಹೇಳಿದ್ದಾರೆ.

  • ಸ್ನೇಹಿತನ ಮದುವೆಯಲ್ಲಿ ಮಿಂಚಿದ ನಟ ಯಶ್- ರಾಧಿಕಾ ಪಂಡಿತ್

    ಸ್ನೇಹಿತನ ಮದುವೆಯಲ್ಲಿ ಮಿಂಚಿದ ನಟ ಯಶ್- ರಾಧಿಕಾ ಪಂಡಿತ್

    ಸ್ಯಾಂಡಲ್‌ವುಡ್ ಸ್ಟಾರ್ ಯಶ್- ರಾಧಿಕಾ ಪಂಡಿತ್ (Radhika Pandit) ಜೋಡಿ ಇದೀಗ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡು ಸುದ್ದಿಯಲ್ಲಿದ್ದಾರೆ. ಸ್ನೇಹಿತನ ಮದುವೆಯಲ್ಲಿ (Wedding) ರಾಕಿಭಾಯ್ ಯಶ್- ರಾಧಿಕಾ ಪಾಲ್ಗೊಂಡಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ.

    ‘ಕೆಜಿಎಫ್ 2’ (KGF2) ಸಕ್ಸಸ್ ನಂತರ ಹೊಸ ಸಿನಿಮಾ ತಯಾರಿಯಲ್ಲಿ ಯಶ್ (Yash) ಬ್ಯುಸಿಯಾಗಿದ್ದಾರೆ. ಅದಕ್ಕಾಗಿ ಶ್ರೀಲಂಕಾದಲ್ಲಿ ಕೆಲವು ದಿನಗಳ ಕಾಲ ಬೀಡು ಬಿಟ್ಟಿದ್ದರು. ಈಗ ಕೊಂಚ ಕೆಲಸಕ್ಕೆ ಬ್ರೇಕ್ ಹಾಕಿ ಸ್ನೇಹಿತನ ಮದುವೆಯಲ್ಲಿ ಪತ್ನಿ ರಾಧಿಕಾ ಜೊತೆ ಯಶ್ ಮಿಂಚಿದ್ದಾರೆ. ಮದುವೆ ಮನೆಯಲ್ಲಿ ಯಶ್-ರಾಧಿಕಾಗೆ ಗ್ರ್ಯಾಂಡ್‌ ವೆಲ್‌ಕಮ್ ಕೂಡ ಮಾಡಲಾಗಿದೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್- ಸೈಫ್ ಅಲಿ ಖಾನ್ ಚಿತ್ರದಲ್ಲಿ ಕನ್ನಡದ ನಟಿ ಚೈತ್ರಾ ರೈ

    ನವಜೋಡಿಗೆ ಮನಸಾರೆ ಶುಭಹಾರೈಸಿ ಕುಶಲೋಪರಿ ವಿಚಾರಿಸಿ ಬಂದಿದ್ದಾರೆ. ಸ್ನೇಹಿತನ ಮದುವೆ ಸಂಭ್ರಮದಲ್ಲಿ ಅದ್ಭುತವಾಗಿ ಎಂಟ್ರಿ ಕೊಟ್ಟಿದ್ದಾರೆ. ಯಶ್ ನೇರಳೆ ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡರೆ, ಗ್ರೇ ಬಣ್ಣದ ಸೀರೆಯಲ್ಲಿ ರಾಧಿಕಾ ಪಂಡಿತ್ ಕಂಗೊಳಿಸಿದ್ದಾರೆ.

    ‘ಕೆಜಿಎಫ್ 2’ ಸಿನಿಮಾ ನಂತರ ಕೆಜಿಎಫ್ ಪಾರ್ಟ್ 3ಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇತ್ತೀಚಿಗಷ್ಟೇ ಹೊಂಬಾಳೆ ಸಂಸ್ಥೆ ಈ ಬಗ್ಗೆ ಅನೌನ್ಸ್‌ ಕೂಡ ಮಾಡಿತ್ತು.

  • Hombale Films: ತಲೈವಾಗೆ ‘ವಿಕ್ರಮ್‌’ ನಿರ್ದೇಶಕ ಆ್ಯಕ್ಷನ್ ಕಟ್?

    Hombale Films: ತಲೈವಾಗೆ ‘ವಿಕ್ರಮ್‌’ ನಿರ್ದೇಶಕ ಆ್ಯಕ್ಷನ್ ಕಟ್?

    ಕೆಜಿಎಫ್, ಕೆಜಿಎಫ್ 2 (KGF2), ಕಾಂತಾರ (Kantara) ಅಂತಹ ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನ ಕೊಟ್ಟಿರೋ ಹೊಂಬಾಳೆ ಫಿಲ್ಮ್ಸ್ ಟೀಮ್ ಯಶ್, ಪ್ರಭಾಸ್, ರಿಷಬ್, ಪುನೀತ್ ರಾಜ್‌ಕುಮಾರ್ ಜೊತೆ ಸಿನಿಮಾ ಮಾಡಿ ಗೆದ್ದು ಬೀಗಿದ್ದಾರೆ. ಇದೀಗ ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್‌ಗೆ (Rajanikanth) ನಿರ್ದೇಶಕನ ಮಾಡಲು ಪ್ರತಿಭಾನ್ವಿತ ನಿರ್ದೇಶಕ ಲೋಕೇಶ್ ಕನಕರಾಜ್‌ಗೆ (Lokesh Kanagaraj) ಗಾಳ ಹಾಕಿದ್ದಾರೆ.

    ಸೂಪರ್ ಸ್ಟಾರ್‌ಗಳ ಜೊತೆಗೆ ಕೆಲಸ ಮಾಡಿ ಅದ್ಭುತ ಸಿನಿಮಾಗಳನ್ನ ಕೊಟ್ಟಿರೋ ಹೊಂಬಾಳೆ ಟೀಮ್ ಇದೀಗ ತಲೈವಾ ಜೊತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ರಜಿನಿಕಾಂತ್ ಜೊತೆ ಸಿನಿಮಾ ಮಾಡುವ ವಿಚಾರ ಕೆಲವು ದಿನಗಳಿಂದ ಚಾಲ್ತಿಯಲ್ಲಿತ್ತು. ಈ ಬೆನ್ನಲ್ಲೇ ಮತ್ತೊಂದು ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ. ಇದನ್ನೂ ಓದಿ:ಪಡ್ಡೆಹೈಕ್ಳಿಗೆ ಬೋಲ್ಡ್‌ ಲುಕ್‌ನಿಂದ ಹಾಟ್‌ ಟ್ರೀಟ್‌ ನೀಡಿದ ಲಕ್ಷ್ಮಿ ರೈ

    ‘ವಿಕ್ರಮ್’ (Vikram) ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಜೊತೆ ಚಿತ್ರ ಮಾಡಲು ಹೊಂಬಾಳೆ ಸಂಸ್ಥೆ ಪ್ಲ್ಯಾನ್ ಮಾಡಿದೆ. ರಜನಿಕಾಂತ್‌ಗಾಗಿಯೇ ಲೋಕೇಶ್ ಈಗಾಗಲೇ ಕಥೆ ಮಾಡಿದ್ದಾರೆ. ತಲೈವಾ 171ನೇ ಚಿತ್ರಕ್ಕೆ ಇವರೇ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮೂಲಗಳ ಪ್ರಕಾರ, ರಜನಿಕಾಂತ್ ಅವರು ಲೋಕೇಶ್ ಕಥೆ ಕೇಳಿ ಓಕೆ ಎಂದಿದ್ದಾರೆ ಅಂತೆ.

    ಲೋಕೇಶ್ ಕನಕರಾಜ್- ರಜನಿಕಾಂತ್ ಜೊತೆ ಸಿನಿಮಾ ಮೂಡಿ ಬರಲಿರುವ ಸುದ್ದಿ ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ? ಅಥವಾ ಜಸ್ಟ್ ಗಾಸಿಪ್ ಸುದ್ದಿನಾ ಎಂಬುದನ್ನ ಮುಂದಿನ ದಿನಗಳಲ್ಲಿ ಹೊಂಬಾಳೆ ಟೀಮ್ (Hombale Films) ಅಧಿಕೃತವಾಗಿ ಹೇಳುವವರೆಗೂ ಕಾಯಬೇಕಿದೆ.

  • Hombale Films ಜೊತೆ ಕೈಜೋಡಿಸಿದ ರಜನಿಕಾಂತ್?

    Hombale Films ಜೊತೆ ಕೈಜೋಡಿಸಿದ ರಜನಿಕಾಂತ್?

    ಹೊಂಬಾಳೆ ಫಿಲ್ಮ್ಸ್ಇದೀಗ ಕೆಜಿಎಫ್, ಕೆಜಿಎಫ್ 2 (KGF 2), ಕಾಂತಾರ (Kantara) ಅಂತಹ ಬ್ಯಾಕ್ ಟು ಬ್ಯಾಕ್ ಸೂಪರ್ ಹಿಟ್ ಸಿನಿಮಾಗಳನ್ನ ಕೊಡ್ತಿದೆ. ಸ್ಟಾರ್ ಕಲಾವಿದರ ಜೊತೆ ಸಿನಿಮಾ ಮಾಡ್ತಿದ್ದಾರೆ. ಈ ಬೆನ್ನಲ್ಲೇ ಹೊಂಬಾಳೆ ಸಂಸ್ಥೆ (Hombale Films) ಜೊತೆ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಹೊಂಬಾಳೆ ಸಂಸ್ಥೆ ನಿರ್ಮಾಣದಲ್ಲಿ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ ‘ಕಾಂತಾರ’ ಸಿನಿಮಾ ನೋಡಿ ತಲೈವಾ ಭೇಷ್ ಎಂದಿದ್ದರು. ರಿಷಬ್‌ನ ಮನೆಗೆ ಆಹ್ವಾನಿಸಿ ಸನ್ಮಾನಿಸಿದ್ದರು. ಇದೆಲ್ಲದರ ಬೆನ್ನಲ್ಲೇ ಹೊಂಬಾಳೆ ಬ್ಯಾನರ್ ಚಿತ್ರದಲ್ಲಿ ರಜನಿಕಾಂತ್ (Rajanikanth) ನಟಿಸ್ತಾರೆ ಎನ್ನುವ ಊಹಾಪೋಹ ಶುರುವಾಗಿತ್ತು. ಆದರೆ ಈ ಬಗ್ಗೆ ಇದುವರೆಗೂ ಅಧಿಕೃತ ಮಾಹಿತಿ ಮಾತ್ರ ಸಿಕ್ಕಿಲ್ಲ.‌ ಇದನ್ನೂ ಓದಿ: ವಿಜಯ್‌ ವರ್ಮಾ ಜೊತೆ KGF ನಟಿ ತಮನ್ನಾ ಡಿನ್ನರ್‌ ಡೇಟ್‌

    ರಜನಿಕಾಂತ್ (Rajanikanth) ಅವರು ಹೊಂಬಾಳೆ ಫಿಲ್ಮ್ಸ್ ಚಿತ್ರದಲ್ಲಿ ನಟಿಸೋದು ಪಕ್ಕಾ ಎನ್ನುವ ಚರ್ಚೆ ಈಗ ಕಾಲಿವುಡ್‌ನಲ್ಲಿ (Kollywood) ಶುರುವಾಗಿದೆ. ಸುಧಾ ಕೊಂಗರ (Sudha Kongara) ಅವರು ತಲೈವಾ ನಟನೆಯ ಚಿತ್ರಕ್ಕೆ ನಿರ್ದೇಶನ ಮಾಡುತ್ತಾರೆ ಎನ್ನಲಾಗ್ತಿದೆ. ಈ ಹಿಂದೆಯೇ ಹೊಂಬಾಳೆ ಸಂಸ್ಥೆ- ಸುಧಾ ಕೊಂಗರ ನಿರ್ದೇಶನದಲ್ಲಿ ಒಂದು ಸಿನಿಮಾ ಘೋಷಿಸಿತ್ತು. ಆದರೆ ಆ ಚಿತ್ರಕ್ಕೆ ಹೀರೋ ಯಾರು ಎನ್ನುವುದು ಪಕ್ಕ ಆಗಿರಲಿಲ್ಲ. ತಮಿಳಿನ ಸೂರ್ಯ, ಯಶ್, ಸಿಂಬು ಸೇರಿದಂತೆ ಹಲವರ ಹೆಸರುಗಳು ಕೇಳಿಬಂದಿತ್ತು. ಆದರೆ ಈಗ ತಲೈವಾ ಹೆಸರು ಚಾಲ್ತಿಗೆ ಬಂದಿದೆ. ಈಗಾಗಲೇ ಸುಧಾ ಕೊಂಗರ ಸೂಪರ್ ಸ್ಟಾರ್‌ಗೆ ಕಥೆ ಹೇಳಿದ್ದಾರಂತೆ. ಅದಕ್ಕೆ ತಲೈವಾ ಕೂಡ ಓಕೆ ಎಂದಿದ್ದಾರೆ ಅಂತೆ. ಈ ವಿಚಾರ ಅದೆಷ್ಟರ ಮಟ್ಟಿಗೆ ನಿಜಾ? ಎಂಬುದನ್ನ ಚಿತ್ರತಂಡ ತಿಳಿಸುವವರೆಗೂ ಕಾದುನೋಡಬೇಕಿದೆ.

    3 ವರ್ಷಗಳ ಹಿಂದೆ ಬಂದ ‘ಸುರರೈ ಪೋಟ್ರು’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಕೊರೊನಾ ಸಂಕಷ್ಟದ ಸಮಯದಲ್ಲಿ ನೇರವಾಗಿ ಓಟಿಟಿಗೆ ಬಂದಿದ್ದ ಸಿನಿಮಾ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಜಿ.ಆರ್ ಗೋಪಿನಾಥ್ ಜೀವನಾಧರಿತ ಈ ಚಿತ್ರದಲ್ಲಿ ಸೂರ್ಯ ಹೀರೊ ಆಗಿ ನಟಿಸಿದ್ದರು. ಸುಧಾ ಕೊಂಗರ ನಿರ್ದೇಶನಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ನಿರ್ದೇಶಕಿ ಸುಧಾ ಕೊಂಗರ ಹೊಸ ಬಗೆಯ ಸಿನಿಮಾ ಮಾಡಲು ಮುಂದಾಗಿದ್ದಾರೆ.

  • ಹಾರ್ದಿಕ್ ಪಾಂಡ್ಯ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಯಶ್ ವೀಡಿಯೋ ವೈರಲ್

    ಹಾರ್ದಿಕ್ ಪಾಂಡ್ಯ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಯಶ್ ವೀಡಿಯೋ ವೈರಲ್

    ‘ಕೆಜಿಎಫ್ 2′ (KGF 2) ಸೂಪರ್ ಸ್ಟಾರ್ ಯಶ್‌ಗೆ (Yash) ಸಿನಿಮಾ ರಂಗವಲ್ಲದೇ ಬೇರೇ ಬೇರೇ ಕ್ಷೇತ್ರಗಳಲ್ಲಿ ಸ್ನೇಹಿತರಿದ್ದಾರೆ. ಇದೀಗ ಇತ್ತೀಚಿಗೆ ನಡೆದ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ಮದುವೆಯಲ್ಲಿ (Wedding)  ನಟ ಯಶ್ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ:ದಾಂಪತ್ಯ ಜೀವನ, ಮಗನ ಆರೋಗ್ಯದ ಬಗ್ಗೆ ಅಸಲಿ ವಿಚಾರ ಬಿಚ್ಚಿಟ್ಟ ಅವಿನಾಶ್‌ ದಂಪತಿ

    ಈ ವರ್ಷ ಫೆಬ್ರವರಿಯಲ್ಲಿ ಹಾರ್ದಿಕ್ ಪಾಂಡ್ಯ- ನತಾಶಾ ಜೊತೆ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಆದರು. ಉದಯಪುರದಲ್ಲಿ ನಡೆದ ಅದ್ದೂರಿ ವಿವಾಹ ಸಮಾರಂಭಕ್ಕೆ ಅನೇಕ ಗಣ್ಯರು ಭಾಗಿ ಆಗಿದ್ದರು. ಕ್ರಿಕೆಟ್ ಮತ್ತು ಸಿನಿಮಾ ಗಣ್ಯರು ಸಹ ಹಾರ್ದಿಕ್ ಪಾಂಡ್ಯ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ರಾಕಿಂಗ್ ಸ್ಟಾರ್ ಭಾಗಿಯಾಗಿದ್ದ ವಿಡಿಯೋಗಳು ಈಗ ವೈರಲ್ ಆಗಿದೆ. ಯಶ್ ಭಾಗಿಯಾಗಿದ್ದು ಅಷ್ಟೇ ಅಲ್ಲದೇ, ಹಾರ್ದಿಕ್ ಪಾಂಡ್ಯ ಜೊತೆ ಸಖತ್ ಆಗಿ ಡಾನ್ಸ್ ಮಾಡಿದ್ದರು. ಪಾಂಡ್ಯ ಜೊತೆ ಡಾನ್ಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಯಶ್ ಸಖತ್ ಸ್ಟೈಲಿಶ್ ಆಗಿ ಕಾಣಿಸುತ್ತಿದ್ದರು. ಕಪ್ಪು ಬಣ್ಣದ ಶೆರ್ವಾನಿಯಲ್ಲಿ ಯಶ್ ಮಿಂಚಿದ್ದಾರೆ. ಮದುವೆಯಲ್ಲಿ ಹಾರ್ದಿಕ್-ಯಶ್ ಮಸ್ತ್ ಆಗಿ ಡಾನ್ಸ್ ಮಾಡಿದ್ದಾರೆ. ಹಾರ್ದಿಕ್ ಮತ್ತು ಯಶ್ ಇಬ್ಬರೂ ಉತ್ತಮ ಸ್ನೇಹಿತರು. ಹಾಗಾಗಿ ಯಶ್ ಕ್ರಿಕೆಟಿಗ ಪಾಂಡ್ಯ ಮದುವೆಗೆ ಹಾಜರಾಗಿದ್ದರು. ಯಶ್ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ‘ಕೆಜಿಎಫ್-2’ ರಿಲೀಸ್ ಆಗಿ ಒಂದು ವರ್ಷವಾಗಿದೆ. ಆದರೂ ಮುಂದಿನ ಸಿನಿಮಾ ಅನೌನ್ಸ್ ಮಾಡಿಲ್ಲ. ಯಾವಾಗ ಹೊಸ ಸಿನಿಮಾ ಅನೌನ್ಸ್ ಮಾಡುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಯಶ್ ಕಡೆಯಿಂದ ಅಧಿಕೃತ ಅಪ್‌ಡೇಟ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ. ಈ ನಡುವೆ ‘ಕೆಜಿಎಫ್ 3’ ಬರುವ ಬಗ್ಗೆ ಫ್ಯಾನ್ಸ್‌ಗೆ ಸಿಹಿಸುದ್ದಿ ಕೂಡ ಸಿಕ್ಕಿದೆ.

  • ಯಶ್ ಕಾಲ್ ಮಾಡಿ ಕೆಜಿಎಫ್- 3ಗೆ ರೆಡಿಯಾಗಿ ಅಂದ್ರು- ನಟಿ ರವೀನಾ ಟಂಡನ್

    ಯಶ್ ಕಾಲ್ ಮಾಡಿ ಕೆಜಿಎಫ್- 3ಗೆ ರೆಡಿಯಾಗಿ ಅಂದ್ರು- ನಟಿ ರವೀನಾ ಟಂಡನ್

    ಕೆಜಿಎಫ್, ಕೆಜಿಎಫ್ 2 (KGF 2) ಸಿನಿಮಾಗಳು ಗಲ್ಲಾಪೆಟ್ಟಿಗೆಯನ್ನ ಶೇಕ್ ಮಾಡಿತ್ತು. ಸಾವಿರಾರು ಕೋಟಿ ಕಲೆಕ್ಷನ್ ಮಾಡುವ ಮೂಲಕ ಹಿಸ್ಟರಿ ಕ್ರಿಯೆಟ್ ಮಾಡಿತ್ತು. ಇತ್ತೀಚಿಗಷ್ಟೇ ಹೊಂಬಾಳೆ ಫಿಲ್ಮ್ಸ್(Hombale Films) ‘ಕೆಜಿಎಫ್ 3’ (KGF 3) ಮಾಡುವ ಬಗ್ಗೆ ಸುಳಿವು ನೀಡಿತ್ತು. ಈ ಬೆನ್ನಲ್ಲೇ ‘ಕೆಜಿಎಫ್ 3’ಗೆ ರೆಡಿಯಾಗಿ ಎಂದು ಯಶ್ ಹೇಳಿರುವುದನ್ನು ರವೀನಾ ಟಂಡನ್ (Raveena Tandon) ರಿವೀಲ್ ಮಾಡಿದ್ದಾರೆ.

    ‘ಕೆಜಿಎಫ್’ ಪಾರ್ಟ್ 2 ಸಿನಿಮಾ ಏ.14ಕ್ಕೆ ರಿಲೀಸ್ ಆಗಿ ಒಂದು ವರ್ಷವಾಗಿದೆ. ಇದೇ ಖುಷಿಯಲ್ಲಿ ಕೆಜಿಎಫ್ 3 ಬರುವ ಬಗ್ಗೆ ಸಿಹಿಸುದ್ದಿ ನೀಡಿದ್ದಾರೆ. ಮತ್ತೆ ರಾಕಿ ಭಾಯ್ ಕಣ್ತುಂಬಿಕೊಳ್ಳಲು ಕಾಯ್ತಿದ್ದಾರೆ. ಈಗ ಕೆಜಿಎಫ್-3 ಚರ್ಚೆಯ ನಡುವೆಯೇ ನಟಿ ರಮಿಕಾ ಸೇನ್ ಖ್ಯಾತಿಯ ರವೀನಾ ಟಂಡನ್ ಅಚ್ಚರಿಯ ಮಾಹಿತಿ ರಿವೀಲ್ ಮಾಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್- ಪ್ರಶಾಂತ್ ನೀಲ್ ಕರೆ ಮಾಡಿ ಹೇಳಿದ್ದೇನು ಎನ್ನುವುದನ್ನು ರವೀನಾ ಬಹಿರಂಗ ಪಡಿಸಿದ್ದಾರೆ. ಇದನ್ನೂ ಓದಿ:ಹಾಲಿವುಡ್ ‘ಸಿಟಾಡೆಲ್’ ಪ್ರೀಮಿಯರ್‌ನಲ್ಲಿ ಸಮಂತಾ

    ಸಂದರ್ಶನದಲ್ಲಿ ಮಾತನಾಡಿದ ರವೀನಾ, ಕೆಜಿಎಫ್ 2 ಮೊದಲ ವಾರ್ಷಿಕೋತ್ಸವದ ದಿನ ಮೊದಲು ವಿಶ್ ಮಾಡಿದ್ದು, ಯಶ್ ಪತ್ನಿ ರಾಧಿಕಾ ಪಂಡಿತ್ ಎಂದು ಹೇಳಿದ್ದಾರೆ. ಏಪ್ರಿಲ್ 14ರ ಬೆಳಗ್ಗೆಯೇ ಯಶ್ ಪತ್ನಿ ರಾಧಿಕಾ ಪಂಡಿತ್ (Radhika Pandit) ವಿಶ್ ಮಾಡಿದ್ದರು ಎಂದು ಬಹಿರಂಗ ಪಡಿಸಿದ್ದಾರೆ. ಅದೇ ದಿನ ಸಂಜೆ ಯಶ್ ಫೋನ್ ಮಾಡಿದ ವಿಚಾರವನ್ನು ಹಂಚಿಕೊಂಡಿದ್ದಾರೆ.

    ಆ ದಿನ ಸಂಜೆ (ಏ.14) ಯಶ್ ನನಗೆ ಫೋನ್ ಮಾಡಿದ್ದರು. ನಾವಿಬ್ಬರೂ ವಾರ್ಷಿಕೋತ್ಸವಕ್ಕೆ ಒಬ್ಬರಿಗೊಬ್ಬರು ವಿಶ್ ಮಾಡಿಕೊಂಡೆವು. ಆಗ ಯಶ್ ಕೆಜಿಎಫ್ 3ಗೆ ರೆಡಿಯಾಗಬೇಕು ಅಂತ ಹೇಳಿದರು. ಆಗ ಮೊದಲ ಸೀನ್‌ನಲ್ಲೇ ನನ್ನನ್ನು ಸಾಯಿಸಬೇಡಿ ಅಂತ ಹೇಳಿದೆ. ಹೀಗೆ ಜೋಕ್ ಮಾಡಿಕೊಂಡೆ ನಕ್ಕೆವು. ಹಾಗೇ ಪ್ರಶಾಂತ್ ಕೂಡ ಫೋನ್ ಮಾಡಿದ್ದರು. ಆದರೆ, ಕೆಜಿಎಫ್ -3 ಯಾವಾಗ ಬರುತ್ತೆ ಅನ್ನೋದು ನಮಗೆ ಗೊತ್ತಿಲ್ಲ. ನಾವೆಲ್ಲರೂ ಬೇಗ ಬರಲಿ ಅಂತ ಕಾಯುತ್ತಿದ್ದೇವೆ. ಪ್ರಶಾಂತ್ ನೀಲ್ (Prashanth Neel) ಫೋನ್ ಮಾಡಿ ಪ್ರತಿ ದೃಶ್ಯದಲ್ಲೂ ಅದ್ಭುತವಾಗಿ ಮಾಡಿದ್ದೀರಿ ಎಂದು ಹೇಳಿದ್ದರು. ಪ್ರಶಾಂತ್ ನೀಲ್ ಕೂಡ ಆದಷ್ಟು ಬೇಗ ಮಾಡೋಣ ಅಂತ ಹೇಳಿದರು ಎಂದು ರವೀನಾ ಟಂಡನ್ ಹೇಳಿದ್ದಾರೆ.

  • ರಾಕಿ ಭಾಯ್ ಲೆಜೆಂಡ್ ಎಂದು ಹಾಡಿ ಹೊಗಳಿದ ಪೂಜಾ ಹೆಗ್ಡೆ

    ರಾಕಿ ಭಾಯ್ ಲೆಜೆಂಡ್ ಎಂದು ಹಾಡಿ ಹೊಗಳಿದ ಪೂಜಾ ಹೆಗ್ಡೆ

    ರಾವಳಿ ಸುಂದರಿ ಪೂಜಾ ಹೆಗ್ಡೆ (Pooja Hegde) ಅವರು ಸೌತ್ ಸಿನಿಮಾಗಳಲ್ಲಿ ಮೋಡಿ ಮಾಡಿದ ಮೇಲೆ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಸಲ್ಮಾನ್ ಖಾನ್ ಜೊತೆಗಿನ ‘ಕಿಸಿ ಕಾ ಭಾಯ್ ಕಿಸಿ ಕೀ ಜಾನ್’ (Kisi Ka Bhai Kisi Ki Jaan) ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಯಶ್‌ನ (Yash) ಲೆಜೆಂಡ್ (Legend) ಎಂದು ಹಾಡಿಹೊಗಳಿದ್ದಾರೆ.

    ಮೊದಲ ಬಾರಿಗೆ ಸಲ್ಮಾನ್ ಖಾನ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಸಾಲು ಸಾಲು ಸಿನಿಮಾ ಸೋಲುಗಳ ಕಂಡಿರುವ ನಟಿ ಪೂಜಾ, ಗೆಲುವಿಗಾಗಿ ಎದುರು ನೋಡ್ತಿದ್ದಾರೆ. ಪ್ರಸ್ತುತ ‘ಕಿಸಿ ಕಾ ಭಾಯ್ ಕಿಸಿ ಕೀ ಜಾನ್’ ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ನಂತರ ಪೂಜಾ ಲಕ್ ಬದಲಾಗುತ್ತಾ ಎಂದು ಕಾದುನೋಡಬೇಕಿದೆ.

    ಸಂದರ್ಶನವೊಂದರಲ್ಲಿ ನಟಿ ಮುಕ್ತವಾಗಿ ಮಾತನಾಡಿದ್ದಾರೆ. ಫನ್ ರೌಂಡ್‌ನಲ್ಲಿ ವಿವಿಧ ನಟರ ಫೋಟೋಗಳು ಬಂದಾಗ ಅವರ ಬಗ್ಗೆ ಮಾತನಾಡಿದ ಪೂಜಾ ಹೆಗ್ಡೆ ಕನ್ನಡದ ರಾಕಿಂಗ್ ಸ್ಟಾರ್ ಯಶ್ (Rocking Star Yash) ಕುರಿತಾಗಿಯೂ ಸಹ ಮಾತನಾಡಿದರು. ಯಶ್ ಚಿತ್ರವನ್ನು ತೋರಿಸಿದಾಗ ಮಾತನಾಡಿದ ಪೂಜಾ ಹೆಗ್ಡೆ, ಕೆಜಿಎಫ್ (KGF) ಬಳಿಕ ರಾಕಿ ಭಾಯ್ ಕೂಡ ಲೆಜೆಂಡ್ ಆಗಿದ್ದಾರೆ. ನಾನು ಅವರ ಜೊತೆ ಹೆಚ್ಚೇನೂ ಮಾತನಾಡಿಲ್ಲ. ಆದರೆ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಅವರನ್ನು ಭೇಟಿಯಾಗಿದ್ದೆ. ಆದಷ್ಟು ಬೇಗ ಅವರ ಜತೆ ನಟಿಸುತ್ತೇನೆ ಎಂದು ಹೇಳಬಹುದು ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ:‘ಎಂದೆಂದಿಗೂ ಆರ್‌ಸಿಬಿ’ ಎಂದ ನಟಿ ದಿವ್ಯಾ ಉರುಡುಗ

    ಈ ಮೂಲಕ ಯಶ್ ಜೊತೆ ನಟಿಸುವ ಆಸೆಯನ್ನು ಪೂಜಾ ಹೆಗ್ಡೆ ವ್ಯಕ್ತಪಡಿಸಿದ್ದಾರೆ. ನಟಿಯ ಹೇಳಿಕೆ ಬೆನ್ನಲ್ಲೇ ಯಶ್ ಮುಂದಿನ ಸಿನಿಮಾಗೆ ಪೂಜಾ ಹೆಗ್ಡೆನೇ ನಾಯಕಿ ಎಂಬ ಮಾತುಗಳು ವ್ಯಕ್ತವಾಗುತ್ತಿದೆ. ಈ ವಿಚಾರ ಅನೇಕರ ಚರ್ಚೆಗೆ ಗ್ರಾಸವಾಗಿದೆ.

  • ಯಶ್ ಹೊಸ ಸಿನಿಮಾದ ಶೂಟಿಂಗ್ ಆರಂಭ ಆಯಿತಾ?

    ಯಶ್ ಹೊಸ ಸಿನಿಮಾದ ಶೂಟಿಂಗ್ ಆರಂಭ ಆಯಿತಾ?

    ಕೆಜಿಎಫ್ 2 (KGF 2) ಸಿನಿಮಾದ ನಂತರ ಯಶ್ (Yash) ಹೊಸ ಸಿನಿಮಾದ ನಡೆ ಸಾಕಷ್ಟು ನಿಗೂಢವಾಗಿದೆ. ದಿನಕ್ಕೊಂದು ನಿರ್ದೇಶಕರ ಹೆಸರು ಕೇಳಿ ಬರು‍ತ್ತಿವೆ. ಇದೀಗ ಮತ್ತೊಂದು ಸುದ್ದಿ ಹೊರ ಬಂದಿದ್ದು, ಆಗಲೇ ಸಿನಿಮಾದ ಶೂಟಿಂಗ್ ಅನ್ನು ಚಿತ್ರತಂಡ ಶುರು ಮಾಡಿದೆಯಂತೆ. ಶ್ರೀಲಂಕಾದಲ್ಲೇ ಹೊಸ ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

    ಮೊನ್ನೆಯಷ್ಟೇ ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ (Geethu Mohan Das) ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿತ್ತು. ಲಯರ್ಸ್ ಡೈರಿ ಸಿನಿಮಾಗಾಗಿ ಎರಡು ರಾಷ್ಟ್ರಪ್ರಶಸ್ತಿಯನ್ನು ಪಡೆದಿರುವ ಗೀತು ಅವರ ಸ್ಕ್ರಿಪ್ಟ್ ಬಗ್ಗೆ ಯಶ್ ಒಲವು ತೋರಿದ್ದಾರೆ ಎಂದು ವರದಿಯಾಗಿದೆ. ಸತತ ಒಂದು ವರ್ಷಗಳಿಂದ ಗೀತು ಮತ್ತು ಯಶ್ ಸ್ಕ್ರಿಪ್ಟ್ ಬಗ್ಗೆ ಚರ್ಚೆ ಮಾಡುತ್ತಲೇ ಇದ್ದಾರೆ ಎಂದು ಅವರ ಆಪ್ತರು ಹಂಚಿಕೊಂಡಿದ್ದಾರೆ.

    ಕಳೆದೊಂದು ವಾರದಿಂದ ಯಶ್ ಶ್ರೀಲಂಕಾದಲ್ಲಿ (Sri Lanka) ಬೀಡು ಬಿಟ್ಟಿದ್ದಾರೆ. ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋ ನೋಡಿದವರು ಯಶ್ ಶ್ರೀಲಂಕಾ ಪ್ರವಾಸದಲ್ಲಿ ಇದ್ದಾರೆ ಅಂದುಕೊಂಡಿದ್ದರು. ಬೇಸಿಗೆ ರಜೆಯನ್ನು ಕಳೆಯಲು ಅವರು ಅಲ್ಲಿಗೆ ಹೋಗಿದ್ದಾರೆ ಎಂದು ನಂಬಲಾಗಿತ್ತು. ಆದರೆ, ಶ್ರೀಲಂಕಾ ಸರಕಾರ ಬೇರೆಯದ್ದೇ ಮಾಹಿತಿಯನ್ನು ಕೊಟ್ಟಿದೆ.

    ಈ ಕುರಿತು ಬೋರ್ಡ್ ಆಫ್ ಇನ್ವೆಸ್ಟ್‌ಮೆಂಟ್‌ ಇನ್ ಶ್ರೀಲಂಕಾದ ಮುಖ್ಯಾಧಿಕಾರಿ ದಿನೇಶ್ ವೇರಕ್ಕೋಡಿ (Dinesh Verakkodi) ಅವರು ಮಾಹಿತಿ ಹಂಚಿಕೊಂಡಿದ್ದು, ‘ಭಾರತದ ಜನಪ್ರಿಯ ವ್ಯಕ್ತಿಯಾಗಿರುವ, ಯಶ್ ಎಂಬ ಹೆಸರಿನಿಂದ ಜನಪ್ರಿಯವಾಗಿರುವ ನಟ ನವೀನ್ ಕುಮಾರ್ ಅವರನ್ನು ಭೇಟಿ ಮಾಡಿದೆ. ಮೂರು ಫಿಲ್ಮ್ ಫೇರ್ ಪ್ರಶಸ್ತಿ ವಿಜೇತರು ಆಗಿರುವ ಅವರು ಶ್ರೀಲಂಕಾದಲ್ಲಿ ಚಿತ್ರೀಕರಣ ಮಾಡಲು ಅನುಮತಿ ಕೇಳಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.

    ಹಲವು ದಿನಗಳಿಂದ ಯಶ್ ಮತ್ತು ತಂಡ ಶ್ರೀಲಂಕಾದಲ್ಲಿ ಬೀಡು ಬಿಟ್ಟಿದೆ. ಅಲ್ಲಿನ ಸಿನಿಮಾ ಉದ್ಯಮಿಗಳನ್ನು ಮತ್ತು ತಂತ್ರಜ್ಞರನ್ನು ಯಶ್ ಭೇಟಿ ಮಾಡುತ್ತಿದ್ದಾರೆ. ಅಲ್ಲದೇ, ಚಿತ್ರೀಕರಣ ಸ್ಥಳವನ್ನೂ ಅವರು ಹುಡುಕುತ್ತಿದ್ದಾರೆ ಎಂದು ಹೇಳಲಾಗತ್ತೆ. ನಂತರದ ಬೆಳವಣಿಗೆಯಲ್ಲಿ ಚಿತ್ರೀಕರಣ ಕೂಡ ಆರಂಭವಾಗಿದೆ ಎಂದು ಹೇಳಲಾಗುತ್ತಿದೆ.

  • ಯಶ್ ಚಿತ್ರಕ್ಕೆ ಮಲಯಾಳಂ ಗೀತು ಮೋಹನ್ ದಾಸ್  ಡೈರೆಕ್ಟರ್

    ಯಶ್ ಚಿತ್ರಕ್ಕೆ ಮಲಯಾಳಂ ಗೀತು ಮೋಹನ್ ದಾಸ್ ಡೈರೆಕ್ಟರ್

    ಶ್ (Yash) ಅವರ 19ನೇ ಚಿತ್ರದ ಬಗ್ಗೆ ದಿನಕ್ಕೊಂದು ಸುದ್ದಿ ಹೊರಬರುತ್ತಿದೆ. ಕೆಜಿಎಫ್ 2 (KGF 2) ಸಿನಿಮಾ ರಿಲೀಸ್ ನಂತರ ಅವರ ಮುಂದಿನ ಚಿತ್ರವನ್ನು ಯಾರೆಲ್ಲ ನಿರ್ದೇಶನ ಮಾಡಲಿದ್ದಾರೆ ಎನ್ನುವ ಕುರಿತಾಗಿ ನಾನಾ ಹೆಸರುಗಳು ಕೇಳಿ ಬಂದವು. ನರ್ತನ್, ಶಂಕರ್ ಹೀಗೆ ಹಲವಾರು ನಿರ್ದೇಶಕರ ಹೆಸರನ್ನು ತೇಲಿಬಿಟ್ಟರು. ಇದೀಗ ಮತ್ತೊಂದು ಹೆಸರು ಕೇಳಿ ಬಂದಿದ್ದು, ಇದೇ ನಿರ್ದೇಶಕರ ಸಿನಿಮಾದಲ್ಲೇ ಯಶ್ ನಟಿಸಲಿದ್ದಾರೆ ಎನ್ನುವ ವಿಷಯ ಹರಿದಾಡುತ್ತಿದೆ.

    ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ (Geethu Mohan Das) ಸಿನಿಮಾದಲ್ಲಿ ಯಶ್ ನಟಿಸಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ. ಲಯರ್ಸ್ ಡೈರಿ ಸಿನಿಮಾಗಾಗಿ ಎರಡು ರಾಷ್ಟ್ರಪ್ರಶಸ್ತಿಯನ್ನು ಪಡೆದಿರುವ ಗೀತು ಅವರ ಸ್ಕ್ರಿಪ್ಟ್ ಬಗ್ಗೆ ಯಶ್ ಒಲವು ತೋರಿದ್ದಾರೆ ಎಂದು ವರದಿಯಾಗಿದೆ. ಸತತ ಒಂದು ವರ್ಷಗಳಿಂತ ಗೀತು ಮತ್ತು ಯಶ್ ಸ್ಕ್ರಿಪ್ಟ್ ಬಗ್ಗೆ ಚರ್ಚೆ ಮಾಡುತ್ತಲೇ ಇದ್ದಾರೆ ಎಂದು ಅವರ ಆಪ್ತರು ಹಂಚಿಕೊಂಡಿದ್ದಾರೆ.  ಇದನ್ನೂ ಓದಿ: ನಟ ಚೇತನ್‌ ಭಾರತದ ವೀಸಾ ರದ್ದು

    ಕಳೆದೊಂದು ವಾರದಿಂದ ಯಶ್ ಶ್ರೀಲಂಕಾದಲ್ಲಿ (Sri Lanka) ಬೀಡು ಬಿಟ್ಟಿದ್ದಾರೆ. ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಂಡಿದ್ದಾರೆ. ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋ ನೋಡಿದವರು ಯಶ್ ಶ್ರೀಲಂಕಾ ಪ್ರವಾಸದಲ್ಲಿ ಇದ್ದಾರೆ ಅಂದುಕೊಂಡಿದ್ದರು. ಬೇಸಿಗೆ ರಜೆಯನ್ನು ಕಳೆಯಲು ಅವರು ಅಲ್ಲಿಗೆ ಹೋಗಿದ್ದಾರೆ ಎಂದು ನಂಬಲಾಗಿತ್ತು. ಆದರೆ, ಶ್ರೀಲಂಕಾ ಸರಕಾರ ಬೇರೆಯದ್ದೇ ಮಾಹಿತಿಯನ್ನು ಕೊಟ್ಟಿದೆ.

    ಈ ಕುರಿತು ಬೋರ್ಡ್ ಆಫ್ ಇನ್ವೆಸ್ಟ್‌ಮೆಂಟ್‌ ಇನ್ ಶ್ರೀಲಂಕಾದ ಮುಖ್ಯಾಧಿಕಾರಿ ದಿನೇಶ್ ವೇರಕ್ಕೋಡಿ (Dinesh Verakkodi) ಅವರು ಮಾಹಿತಿ ಹಂಚಿಕೊಂಡಿದ್ದು, ‘ಭಾರತದ ಜನಪ್ರಿಯ ವ್ಯಕ್ತಿಯಾಗಿರುವ, ಯಶ್ ಎಂಬ ಹೆಸರಿನಿಂದ ಜನಪ್ರಿಯವಾಗಿರುವ ನಟ ನವೀನ್ ಕುಮಾರ್ ಅವರನ್ನು ಭೇಟಿ ಮಾಡಿದೆ. ಮೂರು ಫಿಲ್ಮ್ ಫೇರ್ ಪ್ರಶಸ್ತಿ ವಿಜೇತರು ಆಗಿರುವ ಅವರು ಶ್ರೀಲಂಕಾದಲ್ಲಿ ಚಿತ್ರೀಕರಣ ಮಾಡಲು ಅನುಮತಿ ಕೇಳಿದ್ದಾರೆ’ ಎಂದು ಟ್ವೀಟ್ ಮಾಡಿದ್ದಾರೆ.

    ಹಲವು ದಿನಗಳಿಂದ ಯಶ್ ಮತ್ತು ತಂಡ ಶ್ರೀಲಂಕಾದಲ್ಲಿ ಬೀಡು ಬಿಟ್ಟಿದೆ. ಅಲ್ಲಿನ ಸಿನಿಮಾ ಉದ್ಯಮಿಗಳನ್ನು ಮತ್ತು ತಂತ್ರಜ್ಞರನ್ನು ಯಶ್ ಭೇಟಿ ಮಾಡುತ್ತಿದ್ದಾರೆ. ಅಲ್ಲದೇ, ಚಿತ್ರೀಕರಣ ಸ್ಥಳವನ್ನೂ ಅವರು ಹುಡುಕುತ್ತಿದ್ದಾರೆ. ಅಲ್ಲಿಗೆ ಸದ್ಯದಲ್ಲಿ ಯಶ್ 19ನೇ ಸಿನಿಮಾ ಬಗ್ಗೆ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.