Tag: KGF government hospital

  • ವೈದ್ಯರ ನಿರ್ಲಕ್ಷ್ಯಕ್ಕೆ ಕಣ್ಬಿಡದ ಕಂದಮ್ಮ ಬಲಿ..!

    ವೈದ್ಯರ ನಿರ್ಲಕ್ಷ್ಯಕ್ಕೆ ಕಣ್ಬಿಡದ ಕಂದಮ್ಮ ಬಲಿ..!

    ಕೋಲಾರ: ವೈದ್ಯರ ನಿರ್ಲಕ್ಷ್ಯದಿಂದ ತಾಯಿಯ ಗರ್ಭದಲ್ಲಿಯೇ ಗಂಡು ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

    ಕೇತಗಾನಹಳ್ಳಿಯ ಸುಮಲತಾ ಎಂಬ ಮಹಿಳೆಯ ಮಗು ಸಾವನ್ನಪ್ಪಿದೆ. ಇಂದು ಬೆಳಗ್ಗೆ 6:30 ಗಂಟೆಗೆ ಹೆರಿಗೆಗೆಂದು ಜಿಲ್ಲೆಯ ಕೆಜಿಎಫ್ ಆಸ್ಪತ್ರೆಗೆ ಸುಮಲತಾ ದಾಖಲಾಗಿದ್ದರು. ಆದ್ರೆ ಸೂಕ್ತ ಸಮಯದಲ್ಲಿ ಅವರಿಗೆ ಚಿಕಿತ್ಸೆ ದೊರೆಯದ ಪರಿಣಾಮ ಗರ್ಭದಲ್ಲಿಯೇ ಮಗು ಮೃತಪಟ್ಟಿದೆ.

    ಸರಿಯಾದ ಸಮಯಕ್ಕೆ ವೈದ್ಯರು ಮಹಿಳೆಗೆ ಚಿಕಿತ್ಸೆ ನೀಡದಿದ್ದಕ್ಕೆ ಮಗು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವನ್ನು ಖಂಡಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಜೀವ ಉಳಿಸಬೇಕಾದ ವೈದ್ಯರೇ ಈ ರೀತಿ ಬೇಜವಾಬ್ದಾರಿ ತೋರಿದರೆ ಹೇಗೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಈ ಘಟನೆ ಕುರಿತು ರಾಬರ್ಟ್ ಸನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv