Tag: KhadeBazar Police Station

  • ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಪತ್ರ

    ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಪತ್ರ

    ಬೆಳಗಾವಿ: ಬೆಳಗಾವಿಯ (Belagavi) ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ (SDA Rudresh) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ.

    ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣದ ಆರೋಪಿಗಳಾಗಿರುವ ಎ1 ತಹಶೀಲ್ದಾರ್ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಹೆಬ್ಬಾಳ್ಕರ್ ಪಿಎ ಸೋಮುಗೆ ಜಾಮೀನು ಸಿಕ್ಕಿತ್ತು. ಜಾಮೀನು ಸಿಕ್ಕ ಬೆನ್ನಲ್ಲೇ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿ ತಲುಪಿದೆ.

    ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ನಗರ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿ ಸೇರಿದಂತೆ ಪ್ರಕರಣದ ತನಿಖಾಧಿಕಾರಿಗಳಿಗೆ ಪೋಸ್ಟ್ ಮೂಲಕ ಅನಾಮಧೇಯ ಪತ್ರ ತಲುಪಿದೆ.ಇದನ್ನೂ ಓದಿ: ದನ ಮೇಯಿಸಲು ಹೋಗಿ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕರು – ಓರ್ವನ ಶವ ಪತ್ತೆ

    ಪತ್ರದಲ್ಲೇನಿದೆ?
    ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಇದು ಕೊಲೆ. ತಹಶೀಲ್ದಾರ್ ಆಪ್ತ ಡ್ರೈವರ್ ಯಲ್ಲಪ್ಪ ಬಡಸದ ಈ ಕೊಲೆಯ ಸೂತ್ರಧಾರ. ತಹಶೀಲ್ದಾರ್ ಜೀಪ್ ಚೆಕ್ ಮಾಡಿದರೆ ಎಲ್ಲಾ ಸತ್ಯ ಹೊರಬರುತ್ತದೆ. ಅದು ಸೂಸೈಡ್ ಎಂದು ಹೇಳುತ್ತಿದ್ದಾರೆ ಆದರೆ ಅದು ಸೂಸೈಡ್ ಅಲ್ಲ. ಯಲ್ಲಪ್ಪನ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲ ದುಡ್ಡು ಹೊಡೆದಿರುತ್ತಾಳೆ. ಡ್ರೈವರ್ ಯಲ್ಲಪ್ಪನನ್ನು ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಸತ್ತವನಿಗೆ ನ್ಯಾಯ ಸಿಗಬೇಕು ಕೇಸ್ ಮುಚ್ಚಿ ಹಾಕಬಾರದು ಎಂದು ಉಲ್ಲೇಖಿಸಲಾಗಿದೆ.

    ಅನಾಮಧೇಯ ಪತ್ರದಲ್ಲಿನ ಅಂಶಗಳನ್ನು ಕಂಡು ಖಾಕಿಯೇ ಶಾಕ್ ಆಗಿದ್ದು, ಪತ್ರದಲ್ಲಿನ ಎಲ್ಲ ಅಂಶಗಳ ಕುರಿತು ಖಡೇಬಜಾರ್ ಪೊಲೀಸರು ತನಿಖೆ ನಡೆಸುತ್ತಾರಾ? ಮುಂದೆ ಈ ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ

    ಏನಿದು ಪ್ರಕರಣ?
    ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ (ದ್ವಿತೀಯ ದರ್ಜೆ ಸಹಾಯಕ) ರುದ್ರೇಶ್ (ರುದ್ರಣ್ಣ) ಯಡಣ್ಣನವರ್ ನವೆಂಬರ್ 5 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಅವರು, ತನ್ನ ಸಾವಿಗೆ ಇವರೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು, ತಹಶಿಲ್ದಾರ್ ಬಸವರಾಜ ನಾಗರಾಳ, ಸಹೊದ್ಯೋಗಿ ಅಶೋಕ ಕಬ್ಬಲಿಗೇರ್ ಹೆಸರು ಉಲ್ಲೇಖಿಸಿ ವಾಟ್ಸಪ್ ಗ್ರೂಪಿನಲ್ಲಿ ಸಂದೇಶ ಕಳುಹಿಸಿದ್ದರು.ಇದನ್ನೂ ಓದಿ: ಕೌಟುಂಬಿಕ ಜಗಳ- ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ

  • ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿಯಲ್ಲಿ ಗರ್ಭಿಣಿ ಸಾವು – ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪ

    ಬೆಳಗಾವಿ: ದುಡ್ಡು ಕಟ್ಟಿಲ್ಲ ಎಂದು ಚಿಕಿತ್ಸೆ ನೀಡದ್ದಕ್ಕೆ ಆರು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.

    ಮೃತ ಮಹಿಳೆಯನ್ನು ಜಿಲ್ಲೆಯ ಕಂಗ್ರಾಳ ಗಲ್ಲಿಯ ನಿವಾಸಿ ಆರತಿ ಅನಿಲ್ ಚವ್ಹಾಣ (30) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಫೆಬ್ರವರಿಯಲ್ಲಿ ಕಂಪ್ಲಿ ಕ್ಷೇತ್ರಕ್ಕೆ 10 ಸಾವಿರ ಮನೆ ವಿತರಣೆ: ಜಮೀರ್

    ಮಂಗಳವಾರ ಬೆಳಿಗ್ಗೆ ಹೊಟ್ಟೆನೋವು ಎಂದು ಜಿಲ್ಲೆಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಮಧ್ಯಾಹ್ನ ಎರಡು ಗಂಟೆ ಹೊತ್ತಿಗೆ ಬಂದು ಮಗು ಹೊಟ್ಟೆಯಲ್ಲಿಯೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

    ಈ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ 30 ಸಾವಿರ ರೂ. ಹಣ ಕಟ್ಟುವಂತೆ ವೈದ್ಯರು ತಿಳಿಸಿದ್ದು, ಸದ್ಯಕ್ಕೆ 10 ಸಾವಿರ ರೂ. ಹಣವನ್ನು ಕಟ್ಟಿ, ಉಳಿದ ಹಣವನ್ನು ಆಮೇಲೆ ಕಟ್ಟುವುದಾಗಿ ಕುಟುಂಬಸ್ಥರು ಹೇಳಿದ್ದರು. ಬಾಕಿ ಹಣ ಕಟ್ಟದೇ ಇರುವ ಕಾರಣ ಗರ್ಭಿಣಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ. ಆದ್ದರಿಂದ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಠಾಣೆಯಲ್ಲಿ ನ್ಯಾಯ ಕೊಡಿಸುವಂತೆ ಕಣ್ಣೀರು ಹಾಕಿದ್ದು, ಸದ್ಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ (KhadeBazar Police Station) ದೂರು ದಾಖಲಾಗಿದೆ.ಇದನ್ನೂ ಓದಿ: Valmiki Scam | ಬಳ್ಳಾರಿ ಚುನಾವಣೆಗೆ ಹಣ ಬಳಕೆ – ಹಗರಣದ ಮಾಸ್ಟರ್‌ಮೈಂಡ್‌ ನಾಗೇಂದ್ರ