Tag: Khali

  • ಚಂದನವನಕ್ಕೆ ಎಂಟ್ರಿ ಕೊಟ್ಟ ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿ

    ಚಂದನವನಕ್ಕೆ ಎಂಟ್ರಿ ಕೊಟ್ಟ ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿ

    ರಾಕಿ ಸೋಮ್ಲಿ (Rocky Somli) ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಿನಿಮಾ ‘ಕೆಂಡದ ಸೆರಗು’ (Kenda Seragu). ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಈ ಚಿತ್ರ ಕುಸ್ತಿ ಕುರಿತ ಸಿನಿಮಾ. ಭೂಮಿ ಶೆಟ್ಟಿ (Bhumi Shetty), ಮಾಲಾಶ್ರೀ (Malashree) ಮುಖ್ಯ ತಾರಾಬಳಗದ ಈ ಚಿತ್ರದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ‘ಕೆಂಡದ ಸೆರಗು’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಸಿನಿ ಜಗತ್ತಿಗೆ ವರ್ಲ್ಡ್ ಚಾಂಪಿಯನ್ ಕುಸ್ತಿ ಪಟು ದಿ ಗ್ರೇಟ್ ಖಲಿ (Khali) ಎಂಟ್ರಿ ಕೊಟ್ಟಿದ್ದಾರೆ.

    ಈ ಚಿತ್ರ ನಿರ್ದೇಶಕ ರಾಕಿ ಸೋಮ್ಲಿ ಅವರೇ ಬರೆದ ಕಾದಂಬರಿ ‘ಕೆಂಡದ ಸೆರಗು’ ಆಧರಿಸಿದ ಸಿನಿಮಾ. ಮಹಿಳಾ ಪ್ರಧಾನ ಕಥಾಹಂದರ ಒಳಗೊಂಡ ಈ ಚಿತ್ರ ಕುಸ್ತಿ ಪಟು ಕಥೆ ಹೇಳಲಿದೆ. ಕಮರ್ಶಿಯಲ್ ಎಳೆಯಲ್ಲಿ ಸಿನಿಮಾವನ್ನು ತೆರೆ ಮೇಲೆ ತರಲಾಗುತ್ತಿದ್ದು, ಇದೀಗ  ನಿರ್ದೇಶಕ ರಾಕಿ ಸೋಮ್ಲಿ ವರ್ಲ್ಡ್ ಚಾಂಪಿಯನ್ ದಿ ಗ್ರೇಟ್ ಖಲಿಯನ್ನು ಕರೆ ತರುವ ಮೂಲಕ ಕ್ಯೂರಿಯಾಸಿಟಿ ಮೂಡಿಸಿದ್ದಾರೆ. ಇದನ್ನೂ ಓದಿ:ಮದುವೆಯ ಬಳಿಕ ಮ್ಯಾಂಗೋ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ

    ನಿರ್ದೇಶಕ ರಾಕಿ ಸೋಮ್ಲಿ ದಿ ಗ್ರೇಟ್ ಖಲಿಯನ್ನು ಭೇಟಿ ಮಾಡಿ ಸಿನಿಮಾ ಕಥೆ ಹಾಗೂ ಅವರ ಪಾತ್ರದ ಬಗ್ಗೆ ವಿಶ್ಲೇಷಣೆ ಮಾಡಿದ್ದಾರೆ. ಸಿನಿಮಾ ಬಗ್ಗೆ ಕೇಳಿ ಥ್ರಿಲ್ ಆಗಿರುವ ಖಲಿ ಸಿನಿಮಾದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಖಲಿ ಜೊತೆಗಿನ ಫೋಟೋ ಶೇರ್ ಮಾಡಿಕೊಂಡಿರುವ ರಾಕಿ ಸೋಮ್ಲಿ ಚಿತ್ರತಂಡಕ್ಕೆ ಖಲಿ ಎಂಟ್ರಿ ನೀಡುತ್ತಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಕನ್ನಡ ಸಿನಿಮಾಗೆ  ಎಂಟ್ರಿ ಕೊಡುತ್ತಿದ್ದಾರೆ ಖಲಿ. ಸದ್ಯದಲ್ಲೇ ಖಲಿ ಚಿತ್ರತಂಡ ಸೇರಿಕೊಳ್ಳಲಿದ್ದು, ಚಿತ್ರೀಕರಣ ಆರಂಭವಾಗಲಿದೆ.

    ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣಹಚ್ಚಿದ್ದಾರೆ. ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕೆ.ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ. ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

  • ಮಾಜಿ WWE ಸ್ಟಾರ್ ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ

    ಮಾಜಿ WWE ಸ್ಟಾರ್ ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ

    ನವದೆಹಲಿ: ಮಾಜಿ WWE ಸ್ಟಾರ್ ದಲೀಪ್ ಸಿಂಗ್ ರಾಣಾ ಅವರು ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

    WWF, WWE ಪಂದ್ಯಗಳಲ್ಲಿ ಮಿಂಚುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಖಲಿ ಅವರು ಇಂದು ಬಿಜೆಪಿ ಕಚೇರಿಗೆ ಬೆಳಗ್ಗೆ ತಲುಪಿ, ಮಧ್ಯಾಹ್ನ 1 ಗಂಟೆಗೆ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆ – ಸೋದರ ಮಾವನ ಪರ ಕೇಜ್ರಿವಾಲ್ ಪತ್ನಿ ಪ್ರಚಾರ!

    ಇನ್ನೂ ಖಲಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಜಿತೇಂದ್ರ ಸಿಂಗ್ ಅವರು, ದಿ ಗ್ರೇಟ್ ಖಲಿ ಅವರು ನಮ್ಮ ಪಕ್ಷಕ್ಕೆ ಸೇರುವ ಮೂಲಕ ಅನೇಕ ಯುವಕರಿಗೆ ಮತ್ತು ದೇಶದ ಜನರಿಗೆ ಸ್ಫೂರ್ತಿಯಾಗಿದ್ದಾರೆ.  ಇದನ್ನೂ ಓದಿ: 7.47 ಕೋಟಿ ರೂ.ಗೆ ವಿಮೆ ಮಾಡಿಸಿದ್ದ ಪೇಂಟಿಂಗ್ ನಾಶ ಮಾಡಿದ ಸೆಕ್ಯೂರಿಟಿ!

    49 ವರ್ಷದ ಖಲಿ ಅವರು ಮೂಲತಃ ಹಿಮಾಚಲ ಪ್ರದೇಶದವರಾಗಿದ್ದು, 22 ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕುಸ್ತಿಗೆ ಪದಾರ್ಪಣೆ ಮಾಡಿದರು. ಖಲಿ WWEಯಲ್ಲಿ ವೃತ್ತಿಯನ್ನು ಆರಂಭಿಸುವ ಮುನ್ನ ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರ ಬಾಡಿಗಾರ್ಡ್ ಆಗಿದ್ದರು. ಆದರೆ WWEಯಲ್ಲಿ ವೃತ್ತಿಯನ್ನು ಆರಂಭಿಸಿ ನಂತರ ಖಲಿ ಅವರು ಚಾಂಪಿಯನ್ ಪಟ್ಟಗಳಿಸಿದರು. ಅಲ್ಲದೇ ಹಾಲಿವುಡ್‍ನ ನಾಲ್ಕು ಸಿನಿಮಾ ಹಾಗೂ ಬಾಲಿವುಡ್‍ನ ಎರಡು ಸಿನಿಮಾಗಳಲ್ಲಿ ಖಲಿ ಅಭಿನಯಿಸಿದ್ದಾರೆ.

  • ವಿವಾಹ ಸಮಾರಂಭದಲ್ಲಿ ಖಲಿ ನೋಡಲು ಸಾವಿರಾರು ಮಂದಿ- ಕೊರೊನಾ ರೂಲ್ಸ್ ಬ್ರೇಕ್

    ವಿವಾಹ ಸಮಾರಂಭದಲ್ಲಿ ಖಲಿ ನೋಡಲು ಸಾವಿರಾರು ಮಂದಿ- ಕೊರೊನಾ ರೂಲ್ಸ್ ಬ್ರೇಕ್

    – ಮದುವೆ ಮನೆಯಲ್ಲಿ ಸಾವಿರಾರು ಮಂದಿ ಜಮಾವಣೆ

    ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ, ಇನ್ನೊಂದೆಡೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡುತ್ತಲೇ ಇದೆ. ಆದರೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲ್ಲೀಪುರ ಗ್ರಾಮದಲ್ಲಿನ ಮದುವೆ ಮನೆಯಲ್ಲಿ ಕುಸ್ತಿಪಟು ದಿ ಗ್ರೇಟ್ ಖಲಿ ನೋಡಲು ಸಾವಿರಾರು ಮಂದಿ ಜಮಾಯಿಸಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.

    ಗ್ರಾಮದ ವಜ್ರದ ಉದ್ಯಮಿ ಹಸನ್ ರಾಜಾ ಪುತ್ರಿಯ ವಿವಾಹ ಹಾಗೂ ಹಸನ್ ರಾಜಾರ ಮನೆಯ ಗೃಹ ಪ್ರವೇಶಕ್ಕೆ ಕುಸ್ತಿಪಟು ಖಲಿ ಆಗಮಿಸಿದ್ದರು. ತಾವು ಆಗಮಿಸುತ್ತಿರುವ ಕುರಿತು ಸ್ವತಃ ಖಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ತಿಳಿಯುತ್ತಿದ್ದಂತೆ ಗೌರಿಬಿದನೂರು ಸೇರಿದಂತೆ ಸುತ್ತಲ ತಾಲೂಕಿನ ಸಾವಿರಾರು ಮಂದಿ ಮದುವೆ ಮನೆ ಬಳಿ ಜಮಾಯಿಸಿದ್ದರು.

    ಕೊರೊನಾ ಎರಡನೇ ಅಲೆ ಆತಂಕದಿಂದ ಸರ್ಕಾರ ಅದ್ಧೂರಿ, ಜನಜಂಗುಳಿ ವಿವಾಹಗಳಿಗೆ ಬ್ರೇಕ್ ಹಾಕಿ ಕೇವಲ 500 ಮಂದಿ ಭಾಗವಹಿಸಬೇಕೆಂದು ಆದೇಶ ಮಾಡಿದೆ. ಆದರೆ ಈ ವಿವಾಹಕ್ಕೆ ಸಾವಿರಾರು ಜನ ಸೇರಿದ್ದಾರೆ. ಇಷ್ಟಾದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದ್ದು, ಕೊರೊನಾ ನಿಯಮಗಳನ್ನು ಬ್ರೇಕ್ ಮಾಡಲಾಗಿದೆ.