Tag: Khalistan

  • ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ

    ಬಂಧಿತ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದ

    – ಕೃತ್ಯ ಎಸಗಿ ಪೋರ್ಚುಗಲ್‌ಗೆ ಪರಾರಿಯಾಗಲು ಪ್ಲ್ಯಾನ್‌
    – ಗುಪ್ತಚರ ಇಲಾಖೆಯ ಖಚಿತ ಮಾಹಿತಿಯಿಂದ ಇಂದು ಅರೆಸ್ಟ್‌

    ಲಕ್ನೋ: ಪಾಕಿಸ್ತಾನದ (Pakistan) ಗುಪ್ತಚರ ಸಂಸ್ಥೆ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಮಹಾಕುಂಭ ಮೇಳದಲ್ಲಿ (Maha Kumbh Mela) ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

    ಬಂಧನಕ್ಕೆ ಒಳಗಾಗಿರುವ ಉಗ್ರ ಮಸಿಹ್ ಕುಂಭ ಮೇಳದಲ್ಲಿ ಕೃತ್ಯ ಎಸಗಲು ಮುಂದಾಗಿದ್ದ. ಆದರೆ ತೀವ್ರ ಭದ್ರತಾ ತಪಾಸಣೆಯಿಂದಾಗಿ ಈತ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ ಎಂದು ಉತ್ತರ ಪ್ರದೇಶ (Uttar Pradesh) ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

     

    ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಮಹಾಕುಂಭದ ಸಮಯದಲ್ಲಿ ದಾಳಿ ನಡೆಸಿದ ನಂತರ ಪೋರ್ಚುಗಲ್‌ಗೆ ಪಲಾಯನ ಮಾಡುವ ಉದ್ದೇಶ ಹೊಂದಿದ್ದ. ಆದರೆ ಪೊಲೀಸರ ಜಾಗರೂಕತೆಯಿಂದಾಗಿ ಆತನ ಯೋಜನೆಗಳು ವಿಫವಾಗಿತ್ತು. ಮಹಾಕುಂಭದ ಸಿದ್ಧತೆಗಳ ಸಮಯದಲ್ಲಿ ಮಸಿಹ್ ಲಕ್ನೋ ಮತ್ತು ಕಾನ್ಪುರಕ್ಕೆ ಭೇಟಿ ನೀಡಿದ್ದ ಎಂದು ಹೇಳಿದರು.

    ಮಹಾಕುಂಭ ಪ್ರಾರಂಭವಾಗುವ ಮೊದಲು ಶಾಂತಿಯನ್ನು ಭಂಗಗೊಳಿಸುವ ಪ್ರಯತ್ನಗಳ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಮಾಹಿತಿಯ ಮೇರೆಗೆ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ ಮತ್ತು ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಮಸಿಹ್‌ನನ್ನು ಇಂದು ಕೌಶಂಬಿಯಿಂದ ಬಂಧಿಸಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿದ್ದ ಖಲಿಸ್ತಾನಿ ಉಗ್ರ ಯುಪಿಯಲ್ಲಿ ಅರೆಸ್ಟ್

    ಭಯೋತ್ಪಾದಕ ಮಸಿಹ್ ಪಾಕಿಸ್ತಾನದ ಐಎಸ್‌ಐ ಜೊತೆ ನಿರಂತರ ಸಂಪರ್ಕದಲ್ಲಿದ್ದ. ಗಡಿಯಾಚೆಗಿನ ಹ್ಯಾಂಡ್ಲರ್‌ಗಳಿಂದ ಡ್ರೋನ್‌ಗಳ ಮೂಲಕ ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ಪಡೆಯುತ್ತಿದ್ದ. ಮಾಹಿತಿಯ ಪ್ರಕಾರ ಮಸಿಹ್‌ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ) ನ ಜರ್ಮನಿ ಮೂಲದ ಮಾಡ್ಯೂಲ್‌ನ ಮುಖ್ಯಸ್ಥ ಸ್ವರ್ಣ್ ಸಿಂಗ್ ಅಲಿಯಾಸ್ ಜೀವನ್ ಫೌಜಿಗಾಗಿ ಕೆಲಸ ಮಾಡುತ್ತಿದ್ದ.

    ಬಂಧನಕ್ಕೆ ಒಳಗಾದ ಉಗ್ರನಿಂದ 3 ಸಕ್ರಿಯ ಹ್ಯಾಂಡ್ ಗ್ರೆನೇಡ್‌ಗಳು, 2 ಸಕ್ರಿಯ ಡಿಟೋನೇಟರ್‌ಗಳು, 13 ಕಾರ್ಟ್ರಿಡ್ಜ್‌ಗಳು ಮತ್ತು 1 ವಿದೇಶಿ ನಿರ್ಮಿತ ಪಿಸ್ತೂಲ್ ಸೇರಿದಂತೆ ಅಕ್ರಮ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಉತ್ತರ ಪ್ರದೇಶ ಎಸ್‌ಟಿಎಫ್ ಮತ್ತು ಪಂಜಾಬ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಗುರುವಾರ ಮುಂಜಾನೆ ಕೌಶಂಬಿ (Kaushambi) ಜಿಲ್ಲೆಯಲ್ಲಿ ಉಗ್ರನನ್ನು ಬಂಧಿಸಿದ್ದರು.

  • ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರಿಂದ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ

    ಲಂಡನ್‌ನಲ್ಲಿ ಖಲಿಸ್ತಾನಿ ಉಗ್ರರಿಂದ ವಿದೇಶಾಂಗ ಸಚಿವ ಜೈಶಂಕರ್‌ ಮೇಲೆ ದಾಳಿಗೆ ಯತ್ನ

    – ಭಾರತದ ಧ್ವಜವನ್ನು ಹರಿದು ಹಾಕಿದ ಖಲಿಸ್ತಾನಿ ಉಗ್ರ

    ಲಂಡನ್‌: ಲಂಡನ್‌ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ.

    ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

    ಚಾಥಮ್ ಹೌಸ್ ನಡೆಸಿದ ಚರ್ಚೆಯಲ್ಲಿ ವಿದೇಶಾಂಗ ಸಚಿವರು ಭಾಗವಹಿಸಿದ್ದ ಸ್ಥಳದ ಹೊರಗೆ ಖಲಿಸ್ತಾನ್ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ, ಲಂಡನ್ ಪೊಲೀಸ್ ಅಧಿಕಾರಿಗಳ ಮುಂದೆಯೇ ವ್ಯಕ್ತಿಯೊಬ್ಬ ಜೈಶಂಕರ್ ಅವರ ವಾಹನದ ಕಡೆಗೆ ನುಗ್ಗಿ ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕುತ್ತಿರುವುದು ಕಂಡುಬಂದಿದೆ. ವಿಧ್ವಂಸಕ ಕೃತ್ಯಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ.

    ವಿದೇಶಾಂಗ ಸಚಿವ ಜೈಶಂಕರ್ ಚರ್ಚೆಯಲ್ಲಿ ಭಾಗವಹಿಸಿದ್ದ ಸ್ಥಳದ ಹೊರಗೆ ಹಲವಾರು ಖಲಿಸ್ತಾನಿ ಪರ ಬೆಂಬಲಿಗರು ಧ್ವಜಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ಪ್ರತಿಭಟನಾನಿರತ ಖಲಿಸ್ತಾನಿಗಳನ್ನು ಪೊಲೀಸರು ವಶಕ್ಕೆ ಪಡೆದರು.

    ಆಸ್ಟ್ರೇಲಿಯಾ, ಕೆನಡಾ ಮತ್ತು ಯುನೈಟೆಡ್ ಕಿಂಗ್‌ಡಮ್‌ನಂತಹ ದೇಶಗಳು ಖಲಿಸ್ತಾನಿ ಭಯೋತ್ಪಾದಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಲವು ವರ್ಷಗಳಿಂದ ಭಾರತ ಒತ್ತಾಯಿಸಿದೆ. ಪ್ರಧಾನಿ ಮೋದಿ ಈ ರಾಷ್ಟ್ರಗಳ ನಾಯಕರೊಂದಿಗೆ, ವಿಶೇಷವಾಗಿ ಕೆನಡಾದಲ್ಲಿ ಸಿಖ್ಖರು ಸುಮಾರು 2% ರಷ್ಟಿದ್ದಾರೆ, ಈ ವಿಷಯವನ್ನು ವೈಯಕ್ತಿಕವಾಗಿ ಎತ್ತಿದ್ದಾರೆ.

  • ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ರಾಜೀನಾಮೆ!

    ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ರಾಜೀನಾಮೆ!

    ಒಟ್ಟಾವಾ: ಖಲಿಸ್ತಾನಿ (Khalistani) ಉಗ್ರ ಸಂಘಟನೆಯ ವಿಚಾರದಲ್ಲಿ ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

    ಸ್ಥಳೀಯ ಕಾಲಮಾನ ಬೆಳಗ್ಗೆ ರೈಡೋ ಕಾಟೇಜ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಗವರ್ನರ್ ಜನರಲ್ ಅವರಿಗೆ ಸಂಸತ್ತನ್ನು ಮಾರ್ಚ್‌ 24ರ ವರೆಗೆ ಮುಂದೂಡುವಂತೆ ವಿನಂತಿಸಿದ್ದಾರೆ ಎಂದು ವರದಿಯಾಗಿದೆ.

    ರಾಜೀನಾಮೆ ಬಳಿಕ ಟ್ರುಡೋ ಹೇಳಿದ್ದೇನು?
    ಪಕ್ಷದೊಳಗಿನ ಆಂತರಿಕ ಕದನಗಳಿಂದಾಗಿ ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳಲಾಯಿತು. ಕನ್ಸರ್ವೇಟಿವ್ ಪಕ್ಷದ ಮುಖ್ಯಸ್ಥ ಪಿಯರ್ ಪೊಯ್ಲಿವ್ರೆ ತಮ್ಮ ಉತ್ತರಾಧಿಕಾರಿಯಾಗಲು ಉತ್ಸಾಹಿಯಾಗಿದ್ದಾರೆ. ಆದ್ರೆ ಕೆನಡಾವನ್ನು ಮುನ್ನಡೆಸಲು ಆತ ಸರಿಯಾದ ವ್ಯಕ್ತಿಯಲ್ಲ ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದಾರೆ.

    ರಾಜೀನಾಮೆಗೆ ಕಾರಣ ಏನು?
    ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ. ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವಂತೆ ತಿರುಗಿಬಿದ್ದು, ರಾಜೀನಾಮೆಗೆ ಆಗ್ರಹಿಸಿದ್ದರು.

    ಅಲ್ಲದೇ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಜಸ್ಟಿನ್ ಟ್ರುಡೋ ನೇರವಾಗಿ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16 ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿತ್ತು.

  • ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಭಾರತದ ಜೊತೆ ಚೇಷ್ಟೆ ಮಾಡುತ್ತಿದ್ದ ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ?

    ಒಟ್ಟಾವಾ: ಖಲಿಸ್ತಾನ (Khalistan) ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ (Canada) ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ.

    ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ ಪ್ರಧಾನಿ ವಿರುದ್ಧ ತಿರುಗಿ ಬಿದ್ದಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ ಎಂದು ವರದಿಯಾಗಿದೆ. ಟ್ರುಡೋ  ಯಾವಾಗ ರಾಜೀನಾಮೆ ಘೋಷಿಸುತ್ತಾರೆ ಎಂಬುದು ಖಚಿತವಾಗಿ ತಿಳಿದಿಲ್ಲ. ಬುಧವಾರದ ಪಕ್ಷದ ರಾಷ್ಟ್ರೀಯ ಸಭೆ ನಡೆಯುವ ಮೊದಲೇ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟ್ರಂಪ್‌ ಪ್ರಮಾಣವಚನ ಸಮಾರಂಭ – 8.57 ಕೋಟಿ ದೇಣಿಗೆ ನೀಡಲಿದ್ದಾರೆ ಟಿಮ್‌ ಕುಕ್‌

    ಪಕ್ಷದ ಆಂತಂರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕಾಏಕಿ ರಾಜೀನಾಮೆ ಘೋಷಣೆ ಮಾಡುತ್ತಾರಾ ಅಥವಾ ಹೊಸ ನಾಯಕತ್ವ ಆಯ್ಕೆವರೆಗೂ ಪ್ರಧಾನಿಯಾಗಿ ಮುಂದುವರೆಯುತ್ತಾರೋ ಇನ್ನೂ ಸ್ಪಷ್ಟವಾಗಿಲ್ಲ . ಇದನ್ನೂ ಓದಿ: ಮಾರುತಿಯ 40 ವರ್ಷದ ಓಟಕ್ಕೆ ಟಾಟಾ ಬ್ರೇಕ್‌ – ಪಂಚ್‌ ದೇಶದ ನಂ.1 ಕಾರು!

    ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ.

    ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು.

    ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16  ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು  ಜಸ್ಟಿನ್‌ ಟ್ರುಡೋ (Justin Trudeau) ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಟೀಕೆ ವ್ಯಕ್ತವಾಗಿತ್ತು.

     

  • ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂಡಿನ ದಾಳಿ; ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ

    ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂಡಿನ ದಾಳಿ; ಆರೋಪಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ

    – ಪಾತ್ರೆ, ಬೂಟು ಸ್ವಚ್ಛಗೊಳಿಸುವ, ಟಾಯ್ಲೆಟ್ ತೊಳೆಯುವ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಸಿಎಂ

    ಚಂಡೀಗಢ: ಅಮೃತಸರದಲ್ಲಿರುವ (Amritsar) ಗೋಲ್ಡನ್ ಟೆಂಪಲ್‌ನ (Golden Temple) ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದ ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ (Sukhbir Singh Badal) ಮೇಲೆ ಗುಂಡಿನ ದಾಳಿ ನಡೆದಿದೆ.

    ಬಾದಲ್ ಅವರು ಶಿರೋಮಣಿ ಅಕಾಲಿ ದಳದ (Shiromani Akali Dal) ನಾಯಕ. ಪಂಜಾಬ್ ಮಾಜಿ ಉಪಮುಖ್ಯಮಂತ್ರಿಯಾಗಿ (Punjab Former DCM) ಕಾರ್ಯನಿರ್ವಹಿಸಿದ್ದರು. ಇದೀಗ ಧಾರ್ಮಿಕ ಶಿಕ್ಷೆಯ ಭಾಗವಾಗಿ ಗೋಲ್ಡನ್ ಟೆಂಪಲ್‌ನ ಪ್ರವೇಶದ್ವಾರದ ಕಾವಲುಗಾರನಾಗಿ ಸೇವೆ ಸಲ್ಲಿಸುತ್ತಿದ್ದರು. ಇಂದು (ಡಿ.04) ಬೆಳಿಗ್ಗೆ ತಪಸ್ಸಿಗೆ ಕುಳಿತಾಗ ಗುಂಡಿನ ದಾಳಿ ಮೂಲಕ ಕೊಲೆಗೆ ಯತ್ನಿಸಲಾಗಿದೆ.ಇದನ್ನೂ ಓದಿ: ತೆಲಂಗಾಣ ಗೋದಾವರಿ ನದಿ ಪಾತ್ರದ ಬಳಿ ಭೂಕಂಪನ

    ಆರೋಪಿಯನ್ನು ಅಮೃತಸರದಿಂದ ಸುಮಾರು 75 ಕಿ.ಮೀ ದೂರದಲ್ಲಿರುವ ಗುರುದಾಸ್‌ಪುರ ಜಿಲ್ಲೆಯ ದಾಲ್ ಖಾಲ್ಸಾದ ನರೇನ್ ಸಿಂಗ್ ಚೋರ್ಹಾ ಎಂದು ಗುರುತಿಸಲಾಗಿದ್ದು, ಗುಂಡು ಹಾರಿಸಿದಾಗ ಅಲ್ಲಿನ ಜನರು ಆತನ ಮೇಲೆ ಹಲ್ಲೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಬಾದಲ್ ಅವರು 2007 ರಿಂದ 2017 ರವರೆಗೆ ಪಂಜಾಬ್‌ನ ಉಪಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಪ್ರತಿಷ್ಠೆಗೆ ಧಕ್ಕೆ ತರುವಂತಹ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದರು. ಆದ್ದರಿಂದ ಬಾದಲ್ ಅವರಿಗೆ ಹಾಗೂ ಅಕಾಲಿದಳದ ಇನ್ನಿತರ ನಾಯಕರಿಗೆ `ತಂಖಾ’ (ಧಾರ್ಮಿಕ ಶಿಕ್ಷೆ) ಘೋಷಿಸಲಾಗಿತ್ತು. `ಸೇವಾದರ್’ ಅಡಿಯಲ್ಲಿ ಪಾತ್ರೆ ತೊಳೆಯಲು, ಬೂಟು ಸ್ವಚ್ಛಗೊಳಿಸಲು ತಿಳಿಸಲಾಗಿತ್ತು. ನಿನ್ನೆ (ಡಿ.03) ಗೋಲ್ಡನ್ ಟೆಂಪಲ್‌ನಲ್ಲಿ ತಪಸ್ಸನ್ನು ಆರಂಭಿಸಿದ್ದರು.

    ಕಳೆದ ಎರಡು ದಿನಗಳಿಂದ ಬಾದಲ್ ಒಂದು ಕೈಯಲ್ಲಿ ಈಟಿ ಹಿಡಿದು, ನೀಲಿ `ಸೇವಾದರ್’ ಸಮವಸ್ತ್ರವನ್ನು ಧರಿಸಿ ಗೋಲ್ಡನ್ ಟೆಂಪಲ್‌ನ ಗೇಟ್ ಬಳಿ ವ್ಹೀಲ್ ಚೇರ್‌ನಲ್ಲಿ ಕುಳಿತಿದ್ದರು.

    ಸಿಸಿಟಿವಿ ದೃಶ್ಯಗಳಲ್ಲಿ ದಾಳಿಕೋರ ನಿಧಾನವಾಗಿ ಗೇಟ್ ಬಳಿ ಬಂದು ಬಂದೂಕನ್ನು ಹೊರತೆಗೆಯುತ್ತಾನೆ. ಬಳಿಕ ಗುಂಡಿನ ದಾಳಿ ನಡೆಸಿರುವುದು ಸೆರೆಯಾಗಿದೆ. ಸದ್ಯ ಆತನನ್ನು ಬಂಧಿಸಲಾಗಿದ್ದು, ದಾಳಿಯ ಹಿಂದಿನ ಉದ್ದೇಶವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ನರೇನ್ ಸಿಂಗ್ (Naren Singh) ಖಲಿಸ್ತಾನಿ ಭಯೋತ್ಪಾದಕರ ಗುಂಪು ಬಬ್ಬರ್ ಖಾಲ್ಸಾ ಜೊತೆ ಸಂಪರ್ಕ ಹೊಂದಿದ್ದಾನೆ. 2004ರಲ್ಲಿ 94 ಅಡಿ ಸುರಂಗವನ್ನು ಅಗೆದು ಜೈಲಿನಿಂದ ತಪ್ಪಿಸಿಕೊಂಡಿದ್ದ ಬುರೈಲ್ ಜೈಲ್ ಬ್ರೇಕ್ ಪ್ರಕರಣದ ಮಾಸ್ಟರ್ ಮೈಂಡ್ ಆಗಿದ್ದ ಬಬ್ಬರ್ ಖಾಲ್ಸಾ ಜೊತೆ ಸಂಬಂಧವಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ಒಂದೇ ದಿನದಲ್ಲಿ ಮಹಿಳೆಗೆ ಸಿಕ್ತು ನಿವೇಶನ; ಸಿಎಂ ಮುಂದೆ ಗೋಳಾಡಿದ್ದ ರಾಬಿಯಾ

  • ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ

    ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ

    ನವದೆಹಲಿ: ಕೆನಡಾದ (Canada) ಬ್ರಾಂಪ್ಟನ್‌ನಲ್ಲಿರುವ ಹಿಂದೂ (Hindu) ದೇವಾಲಯದ ಮೇಲೆ ಖಲಿಸ್ತಾನ್ (Khalistan) ಪರ ಗುಂಪು ನಡೆಸಿದ ದಾಳಿಯನ್ನು ವಿರೋಧಿಸಿ ಹಿಂದೂ ಮತ್ತು ಸಿಖ್ ಕಾರ್ಯಕರ್ತರು ನವದೆಹಲಿಯ ಕೆನಡಾ ರಾಯಭಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

    ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ವಿವಿಧ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು. ಇದರ ಬೆನ್ನಲ್ಲೇ ಕೆನಡಾದ ರಾಯಭಾರ ಕಚೇರಿ ಎದುರು ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಆದರೂ ಮೆರವಣಿಗೆ ನಡೆಸುತ್ತಿದ್ದ ಹಿಂದೂ ಸಿಖ್ ಗ್ಲೋಬಲ್ ಫೋರಂನ (Hindu Sikh Global Forum) ಹಲವಾರು ಕಾರ್ಯಕರ್ತರು, ಪೊಲೀಸ್ ಬ್ಯಾರಿಕೇಡ್‌ಗಳನ್ನು ಏರಲು ಪ್ರಯತ್ನಿಸಿದರು. ಅಲ್ಲದೇ ಅವುಗಳನ್ನು ಕೆಡವಿ ಹಾಕಿದ್ದಾರೆ.

    ಪ್ರತಿಭಟನಾ ಮೆರವಣಿಗೆಯಲ್ಲಿ ಎರಡೂ ಧರ್ಮದ ಜನರು ‘ಹಿಂದೂಗಳು ಮತ್ತು ಸಿಖ್ಖರು ಒಗ್ಗಟ್ಟಾಗಿದ್ದಾರೆ’ ಮತ್ತು ʻಕೆನಡಾದಲ್ಲಿ ದೇವಸ್ಥಾನಗಳ ಅವಮಾನವನ್ನು ಭಾರತೀಯರು ಸಹಿಸುವುದಿಲ್ಲ’ ಎಂಬ ಬರಹಗಳಿರುವ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು.

    ನವೆಂಬರ್ 4 ರಂದು ಕಾನ್ಸುಲರ್ ಕ್ಯಾಂಪ್ ನಡೆಯುತ್ತಿದ್ದಾಗ ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ಮಂದಿರದ ಹೊರಗೆ ಹಲವಾರು ಖಲಿಸ್ತಾನಿ ಬೆಂಬಲಿಗರು ಹಿಂದೂಗಳ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯು ಉದ್ದೇಶಪೂರ್ವಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಖಂಡಿಸಿದ್ದರು.

  • ಜೈಶಂಕರ್‌ ಸುದ್ದಿಗೋಷ್ಠಿ ಪ್ರಸಾರ – ಕೆನಡಾದಲ್ಲಿ ಆಸ್ಟ್ರೇಲಿಯಾ ಟುಡೇ ಬ್ಯಾನ್‌

    ಜೈಶಂಕರ್‌ ಸುದ್ದಿಗೋಷ್ಠಿ ಪ್ರಸಾರ – ಕೆನಡಾದಲ್ಲಿ ಆಸ್ಟ್ರೇಲಿಯಾ ಟುಡೇ ಬ್ಯಾನ್‌

    ನವದೆಹಲಿ: ಆಸ್ಟ್ರೇಲಿಯಾದಲ್ಲಿ ಭಾರತ-ಕೆನಡಾ (India-Canada) ರಾಜತಾಂತ್ರಿಕ ಬಿಕ್ಕಟ್ಟಿನ ಬಗ್ಗೆ ಹೇಳಿಕೆ ನೀಡಿದ ವಿದೇಶಾಂಗ ಸಚಿವ ಜೈಶಂಕರ್‌(S Jaishankar) ಅವರ ಸುದ್ದಿಗೋಷ್ಠಿಯನ್ನು ಪ್ರಸಾರ ಮಾಡಿದ್ದಕ್ಕೆ ಅಸ್ಟ್ರೇಲಿಯಾ ಟುಡೇಯನ್ನು (Australia Today) ಕೆನಡಾ ನಿಷೇಧಿಸಿದೆ.

    ಸಿಡ್ನಿಯಲ್ಲಿ ಜೈಶಂಕರ್ ಮತ್ತು ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಖಾತೆಯ ಸಚಿವೆ ಪೆನ್ನಿ ವಾಂಗ್ ಅವರ ಜಂಟಿ ಮಾಧ್ಯಮಗೋಷ್ಠಿಯನ್ನು ಆಸ್ಟ್ರೇಲಿಯಾ ಟುಡೇ ಪ್ರಸಾರ ಮಾಡಿತ್ತು. ಮಾಧ್ಯಮಗೋಷ್ಠಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ಜಸ್ಟಿನ್‌ ಟ್ರುಡೋ ನೇತೃತ್ವದ ಕೆನಡಾ ಸರ್ಕಾರ ಆಸ್ಟ್ರೇಲಿಯಾ ಟುಡೇಯನ್ನು ನಿಷೇಧಿಸಿದೆ.


    ಈ ವಿಚಾರದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಪ್ರತಿಕ್ರಿಯಿಸಿ, ಆಸ್ಟ್ರೇಲಿಯಾ ಟುಡೇಯನ್ನು ನಿಷೇಧಿಸಿದ ಕೆನಡಾ (Canada) ನಿರ್ಧಾರ ಆಶ್ಚರ್ಯ ತಂದಿದೆ. ವಾಕ್‌ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ ಕೆನಡಾದ ಬೂಟಾಟಿಕೆಯನ್ನು ಇದು ತೋರಿಸುತ್ತದೆ ಎಂದು ಕಿಡಿಕಾರಿದರು.

    ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳು ಮತ್ತು ವೆಬ್‌ಸೈಟ್‌ ಅನ್ನು ನಿರ್ಬಂಧಿಸಲಾಗಿದೆ. ಕೆನಡಾದ ವೀಕ್ಷಕರಿಗೆ ಈ ವೆಬ್‌ಸೈಟ್‌ ಲಭ್ಯವಿಲ್ಲ ಎನ್ನುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಜೈಶಂಕರ್‌ ಸುದ್ದಿಗೋಷ್ಠಿ ನಡೆಸಿದ ಕೆಲ ಗಂಟೆಯಲ್ಲಿ ಕೆನಡಾ ಈ ನಿರ್ಧಾರ ಕೈಗೊಂಡಿದೆ ಎಂದು ದೂರಿದರು.

    ಎಸ್‌ ಜೈಶಂಕರ್‌ ಅವರು ಸುದ್ದಿಗೋಷ್ಠಿಯಲ್ಲಿ, ಯಾವುದೇ ನಿರ್ದಿಷ್ಟ ಪುರಾವೆಗಳಿಲ್ಲದೆ ನಮ್ಮ ಮೇಲೆ ಕೆನಡಾ ಆರೋಪಗಳನ್ನು ಮಾಡುತ್ತಿದೆ. ಭಾರತೀಯ ರಾಜತಾಂತ್ರಿಕರ ಮೇಲೆ ಕೆನಡಾ ಕಣ್ಗಾವಲು ಇರಿಸಿದೆ. ಕೆನಡಾದಲ್ಲಿ ಭಾರತ ವಿರೋಧಿ ವ್ಯಕ್ತಿಗಳಿಗೆ ರಾಜಕೀಯವಾಗಿ ಆಶ್ರಯ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದ್ದರು.

     

  • Canada| ಹಿಂದೂಗಳ ಮೇಲೆ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಹಲ್ಲೆ ಖಂಡಿಸಿ ಪ್ರತಿಭಟನೆ

    Canada| ಹಿಂದೂಗಳ ಮೇಲೆ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಹಲ್ಲೆ ಖಂಡಿಸಿ ಪ್ರತಿಭಟನೆ

    ಬ್ರಾಂಪ್ಟನ್: ಬ್ರಾಂಪ್ಟನ್‌ನಲ್ಲಿರುವ (Brompton) ಹಿಂದೂ ಸಭಾ ಮಂದಿರದ (Hindu Sabha Mandir) ಹೊರ ಭಾಗದಲ್ಲಿ ಖಲಿಸ್ತಾನಿ ಪರ ಬೆಂಬಲಿಗರಿಂದ (Khalistan Suppoters) ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಹಿಂದೂಗಳ ಒಕ್ಕೂಟ (CoHNA) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಸಾವಿರಾರು ಕೆನಡಾದ ಹಿಂದೂಗಳು ಒಗ್ಗಟ್ಟಿನಿಂದ ಮೆರವಣಿಗೆ ನಡೆಸಿದರು.

    ಪ್ರತಿಭಟನಾಕಾರರು ಕೆನಡಾ ಮತ್ತು ಭಾರತದ ಧ್ವಜಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಮೆರವಣಿಗೆ ಉದ್ದಕ್ಕೂ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದರು. ಇದೇ ವೇಳೆ ಖಲಿಸ್ತಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಸುಮಾರು 20 ವರ್ಷಗಳಿಂದ ಕೆನಡಾದಲ್ಲಿ ಹಿಂದೂಗಳು ಸತತವಾಗಿ ತಾರತಮ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕೆಲವು ಪ್ರತಿಭಟನಾಕಾರರು ಆರೋಪಿಸಿದರು. ಇದನ್ನೂ ಓದಿ: ಮುಡಾ ಕೇಸ್ ಸಿದ್ದರಾಮಯ್ಯ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ: ಮಹದೇವಪ್ಪ

    ಹಿಂದೂ ಕೆನಡಿಯನ್ನರು ಕೆನಡಾಕ್ಕೆ ತುಂಬಾ ನಿಷ್ಠರಾಗಿದ್ದಾರೆ. ಹಿಂದೂ ಕೆನಡಿಯನ್ನರ ವಿರುದ್ಧ ನಡೆಯುತ್ತಿರುವುದು ತಪ್ಪು. ಎಲ್ಲಾ ರಾಜಕಾರಣಿಗಳು ಪರಿಸ್ಥಿತಿ ಅರ್ಥ ಮಾಡಿಕೊಳ್ಳುವ ಸಮಯ ಬಂದಿದೆ. ಕೆನಡಾ ಇಲ್ಲಿರುವ ಹಿಂದೂಗಳನ್ನು ಚೆನ್ನಾಗಿ ನಡೆಸಿಕೊಳ್ಳಬೇಕೆಂದು ನಾವು ಬಯಸುತ್ತೇವೆ. ನಮಗೆ ಭಾರತ ಬೇಕು ಮತ್ತು ಕೆನಡಾ ಸಂಬಂಧಗಳನ್ನು ಬಲಪಡಿಸಬೇಕು ಎಂದು ಮತ್ತೋರ್ವ ಪ್ರತಿಭಟನಾಕಾರರು ಆಗ್ರಹಿಸಿದರು. ಇದನ್ನೂ ಓದಿ: ಬೆಂಗಳೂರಲ್ಲಿ ರಸ್ತೆ ದಾಟುವಾಗ ಬೆನ್ಜ್ ಕಾರು ಡಿಕ್ಕಿಯಾಗಿ ಟೆಕ್ಕಿ ಸಾವು

    ಹಿಂದೂ ಸಭಾ ದೇವಾಲಯದ ಆವರಣದಲ್ಲಿ ಭಕ್ತರ ಮೇಲೆ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ದಾಳಿ ಮಾಡಿದ್ದಾರೆ. ಈ ದೇವಾಲಯವು ಟೊರೊಂಟೊದಿಂದ ಸುಮಾರು 50 ಕಿ.ಮೀ ದೂರದಲ್ಲಿದೆ. ದಾಳಿಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಖಲಿಸ್ತಾನಿ ಧ್ವಜ ಹಿಡಿದಿರುವುದು, ಭಕ್ತರನ್ನು ನಿಂದಿಸುತ್ತಾ ಹಲ್ಲೆ ನಡೆಸುತ್ತಿರುವುದು ವೀಡಿಯೋದಲ್ಲಿದೆ. ಇದನ್ನೂ ಓದಿ: ಬೆಳಗಾವಿ| ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ

    ಹಿಂದೂ ದೇವಾಲಯದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಖಂಡಿಸಿದ್ದರು. ಇದನ್ನು ಉದ್ದೇಶಪೂರ್ವಕ ಕೃತ್ಯ ಎಂದು ಕರೆದಿದ್ದು, ಭಾರತೀಯ ರಾಯಭಾರಿಗಳನ್ನು ಬೆದರಿಸುವ ಪ್ರಯತ್ನ ಎಂದು ಮೋದಿ ಟೀಕಿಸಿದ್ದರು. ಇದನ್ನೂ ಓದಿ: ದೇವಸ್ಥಾನದಲ್ಲಿ ಕ್ಷಮೆಯಾಚಿಸಿ ಇಲ್ಲವೇ 5 ಕೋಟಿ ಕೊಡಿ: ಸಲ್ಮಾನ್‌ ಖಾನ್‌ಗೆ ಮತ್ತೊಂದು ಬೆದರಿಕೆ

  • ಮತ್ತೆ ಕ್ಯಾತೆ – ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ

    ಮತ್ತೆ ಕ್ಯಾತೆ – ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ ಸೇರಿಸಿದ ಕೆನಡಾ

    ಒಟ್ಟಾವಾ: ಖಲಿಸ್ತಾನಿ (Khalistan) ಉಗ್ರ ಸಂಘಟನೆಯ ವಿಚಾರವನ್ನೇ ಮುಂದಿಟ್ಟುಕೊಂಡು ಭಾರತದೊಂದಿಗೆ ಪದೇ ಪದೇ ಖ್ಯಾತೆ ತೆಗೆಯುತ್ತಿರುವ ಕೆನಡಾದ (Canada), ಈಗ ಮತ್ತೊಂದು ಕುಚೇಷ್ಟೆ ಮಾಡಿದೆ. ಕೆನಡಾ ಸರ್ಕಾರ ಭಾರತವನ್ನು ಸೈಬರ್‌ ಬೆದರಿಕೆ ಪಟ್ಟಿಗೆ (Cyber Adversary Label) ಸೇರಿಸಿದೆ. ತನ್ನ ವಿರುದ್ಧ ಭಾರತ ಸರ್ಕಾರ ಪ್ರಾಯೋಜಿತ ಬೇಹುಗಾರಿಕೆ ನಡೆಯಬಹುದು ಎಂದು ಆರೋಪಿಸಿದೆ.

    ಕೆನಡಾ ಸರ್ಕಾರದ ಈ ನಡೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ (NCTA) 2025-26 ವರದಿ ಬಿಡುಗಡೆಯಾಗಿದೆ. ಕೆನಡಾದ ಸೈಬರ್ ಭದ್ರತೆಯ ತಾಂತ್ರಿಕ ಪ್ರಾಧಿಕಾರ ʻಸೈಬರ್ ಸೆಕ್ಯುರಿಟಿ ಕೇಂದ್ರʼ ಅಕ್ಟೋಬರ್ 30 ರಂದು ಈ ವರದಿ ಬಿಡುಗಡೆ ಮಾಡಿದೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ ದಾಳಿ ಬೆದರಿಕೆ – ಇರಾನ್ ಸರ್ವೋಚ್ಚ ನಾಯಕನ ಎಕ್ಸ್‌ ಖಾತೆ ಅಮಾನತು

    ಅದರಲ್ಲಿ, ಚೀನಾ, ರಷ್ಯಾ, ಇರಾನ್ ಮತ್ತು ಉತ್ತರ ಕೊರಿಯಾದ ನಂತರದ ಸ್ಥಾನದಲ್ಲಿ ಭಾರತವನ್ನು ಹೆಸರಿಸಲಾಗಿದೆ. ಬೇಹುಗಾರಿಕೆ ಉದ್ದೇಶದಿಂದ ಭಾರತ ಪ್ರಾಯೋಜಿತ ವ್ಯಕ್ತಿಗಳು ಕೆನಡಾ ಸರ್ಕಾರದ ನೆಟ್‌ವರ್ಕ್‌ಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆ ಇದೆ ಎಂದು ಅಂದಾಜಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಿದೆ. ಅಂದಹಾಗೆ, 2018, 2020 ಮತ್ತು 2023-24ರಲ್ಲಿ ಪ್ರಕಟವಾಗಿದ್ದ ವರದಿಗಳಲ್ಲಿ ಭಾರತದ ಹೆಸರು ಉಲ್ಲೇಖವಾಗಿರಲಿಲ್ಲ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಕೆನಡಾದ ರಾಷ್ಟ್ರೀಯ ಸೈಬರ್ ಬೆದರಿಕೆ ಮೌಲ್ಯಮಾಪನ 2025-2026 ವರದಿಯನ್ನು ಟೀಕಿಸಿದ್ದಾರೆ. ಭಾರತ ಇಡೀ ವಿಶ್ವದಲ್ಲಿ ಶಾಂತಿ ಕಾಪಾಡಲು ಪ್ರಯತ್ನಿಸುತ್ತಿದೆ. ಆದ್ರೆ ಕೆನಡಾ ಯಾವುದೇ ಪುರಾವೆಗಳಿಲ್ಲದೇ ಆರೋಪ ಮಾಡಿದೆ. ಇದು ಭಾರತದ ಮೇಲೆ ಕೆನಡಾ ದಾಳಿ ಮಾಡುವ ಮತ್ತೊಂದು ತಂತ್ರಕ್ಕೆ ಉದಾಹರಣೆಯಾಗಿದೆ, ಇದು ತಪ್ಪು ಎಂದು ಹೇಳಿದ್ದಾರೆ. ಇದನ್ನೂ ಓದಿ: ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಭಾರತ-ಚೀನಾ ಹ್ಯಾಂಡ್‌ಶೇಕ್; ಫಲ ನೀಡುತ್ತಾ ಒಪ್ಪಂದ?

    2023ರ ಜೂನ್‌ನಲ್ಲಿ ಕೆನಡಾದಲ್ಲಿ ನಡೆದಿರುವ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಏಜೆಂಟರ ಪಾತ್ರದ ಬಗ್ಗೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ (Justin Trudeau) ವರ್ಷದ ಹಿಂದೆ ಹೇಳಿದ್ದರು.

    ಟ್ರುಡೋ ಹೇಳಿಕೆಯನ್ನು ಭಾರತ ಅಲ್ಲಗಳೆದಿದೆಯಾದರೂ, ಉಭಯ ದೇಶಗಳ ಸಂಬಂಧ ಹದಗೆಟ್ಟಿದೆ. ಏತನ್ಮಧ್ಯೆ, ಸಿಖ್ ಪ್ರತ್ಯೇಕತಾವಾದಿಗಳನ್ನು ಹತ್ಯೆಗೈಯುವ ಸಂಚಿನಲ್ಲಿ ಅಮಿತ್ ಶಾ ಅವರ ಕೈವಾಡವಿದೆ ಎಂದು ಕೆನಡಾದ ಸಚಿವರೊಬ್ಬರು ಇತ್ತೀಚೆಗೆ ಆರೋಪಿಸಿರುವುದು, ಪರಿಸ್ಥಿತಿಯನ್ನು ಇನ್ನಷ್ಟು ಜಟಿಲಗೊಳಿಸಿದೆ. ಇದನ್ನೂ ಓದಿ: ಇಸ್ರೇಲ್‌ಗೆ ನಮ್ಮ ಶಕ್ತಿ ಏನೆಂದು ತೋರಿಸಬೇಕು: ಮತ್ತೆ ಯುದ್ಧದ ಎಚ್ಚರಿಕೆ ನೀಡಿದ ಇರಾನ್‌ ಸುಪ್ರೀಂ ಲೀಡರ್‌

  • ಅಮಿತ್‌ ಶಾ ವಿದೇಶಿ ಪ್ರವಾಸದ ಮಾಹಿತಿ ಕೊಟ್ಟವರಿಗೆ 10 ಲಕ್ಷ ಬಹುಮಾನ: ಉಗ್ರ ಪನ್ನುನ್‌ ಘೋಷಣೆ

    ಅಮಿತ್‌ ಶಾ ವಿದೇಶಿ ಪ್ರವಾಸದ ಮಾಹಿತಿ ಕೊಟ್ಟವರಿಗೆ 10 ಲಕ್ಷ ಬಹುಮಾನ: ಉಗ್ರ ಪನ್ನುನ್‌ ಘೋಷಣೆ

    ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರ ವಿದೇಶಿ ಪ್ರವಾಸದ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ನಿಷೇಧಿತ ಸಜ್ಜು ‘ಸಿಖ್ಸ್ ಫಾರ್ ಜಸ್ಟಿಸ್ (SFJ)’ ಮುಖ್ಯಸ್ಥ ಗುರುಪತ್‌ವಂತ್ ಸಿಂಗ್ ಪನ್ನುನ್ (Gurpatwant Singh Pannun) ಘೋಷಿಸಿದ್ದಾನೆ.

    ಇತ್ತೀಚೆಗೆ ಬಿಡುಗಡೆಯಾದ ವೀಡಿಯೋವೊಂದರಲ್ಲಿ ಪನ್ನುನ್, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) 1984 ರಲ್ಲಿ ಪಂಜಾಬ್‌ನಲ್ಲಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದ. ಇದನ್ನೂ ಓದಿ: ನಾವು ಪಾಕಿಸ್ತಾನದ ಭಾಗವಾಗಲ್ಲ: ಉಗ್ರರ ದಾಳಿಗೆ ಫಾರೂಕ್‌ ಅಬ್ದುಲ್ಲಾ ಕೆಂಡ

    ಸಿಖ್ಖರ ಕಾನೂನುಬಾಹಿರ ಹತ್ಯೆಗಳಿಗೆ ಸಿಆರ್‌ಪಿಎಫ್ ಅಧಿಕಾರಿಗಳು, ಕೆಪಿಎಸ್ ಗಿಲ್‌ನಿಂದ ಹಿಡಿದು ವಿಕಾಶ್ ಯಾದವ್ ಕಾರಣರಾಗಿದ್ದಾರೆ. ಇದು ಮೊದಲು ಪಂಜಾಬ್‌ನಲ್ಲಿ ಸಂಭವಿಸಿತ್ತು, ಈಗ ವಿದೇಶಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾನೆ.

    ಅ.20 ರಂದು ದೆಹಲಿಯ ರೋಹಿಣಿ ಪ್ರದೇಶದಲ್ಲಿ CRPF ಶಾಲೆಯ ಬಳಿ ನಿಗೂಢ ಸ್ಫೋಟ ಸಂಭವಿಸಿದ ನಂತರ ಪನ್ನುನ್ ಕರೆ ಬಂದಿದೆ. ಇದು ಭದ್ರತಾ ಎಚ್ಚರಿಕೆಯನ್ನು ಹುಟ್ಟುಹಾಕಿದೆ. ಕಚ್ಚಾ ಬಾಂಬ್‌ನಿಂದ ಸ್ಫೋಟ ಮಾಡಲಾಗಿತ್ತು. ಶಾಲೆಯ ಗೋಡೆಗೆ ಭಾಗಶಃ ಹಾನಿಯಾಗಿದ್ದು, ಹತ್ತಿರದಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜು ಪುಡಿಯಾಗಿದ್ದವು. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಇದನ್ನೂ ಓದಿ: ಸಾರ್ವಜನಿಕ-ಖಾಸಗಿ ಭದ್ರತಾ ಸಹಕಾರಕ್ಕೆ ಉತ್ತೇಜನ – OSAC ಇಂಡಿಯಾದ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟನೆ