ಒಟ್ಟೋವಾ: ಖಲಿಸ್ತಾನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆನಡಾದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಹೊರಗೆ ಪೊಲೀಸ್ ಅಧಿಕಾರಿ, ಖಲಿಸ್ತಾನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದರ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಅದರ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡ ಪೀಲ್ ಪ್ರಾದೇಶಿಕ ಪೊಲೀಸ್ ಅಧಿಕಾರಿ ಹರಿಂದರ್ ಸೋಹಿ ಎಂದು ಗುರುತಿಸಲಾಗಿದ್ದು, ಈತ ಖಲಿಸ್ತಾನ್ ಧ್ವಜವನ್ನು ಹಿಡಿದಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರತಿಭಟನೆಯಲ್ಲಿ ಇತರರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ.
ಸೋಹಿ ಪೀಲ್ ಪ್ರಾದೇಶಿಕ ಪೊಲೀಸ್‌ನ ಸಾರ್ಜೆಂಟ್ ಆಗಿದ್ದರು. ‘ಸಮುದಾಯ ಸುರಕ್ಷತೆ ಮತ್ತು ಪೊಲೀಸ್ ಕಾಯಿದೆಯ ಪ್ರಕಾರ ಈ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ವೀಡಿಯೋದಲ್ಲಿ ಚಿತ್ರಿಸಲಾದ ಸಂದರ್ಭಗಳನ್ನು ನಾವು ತನಿಖೆ ಮಾಡುತ್ತಿದ್ದೇವೆ. ಈ ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿಯನ್ನು ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ನವದೆಹಲಿ: ರೋಹಿಣಿಯ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿನ ಸಿಆರ್‌ಪಿಎಫ್ ಶಾಲೆಯ (CRPF) ಬಳಿ ನಡೆದ ಸ್ಫೋಟಕ್ಕೆ (Blast) ಖಲಿಸ್ತಾನಿ ನಂಟಿದ್ಯಾ ಎಂಬ ಶಂಕೆ ಈಗ ಎದ್ದಿದೆ.
ಭಾರತೀಯ ಏಜೆಂಟರು ಖಲಿಸ್ತಾನ್ (Khalistani) ಪರ ಪ್ರತ್ಯೇಕತಾವಾದಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕೆ ಪ್ರತೀಕಾರವಾಗಿ ಸ್ಫೋಟ ನಡೆಸಿದ್ದೇವೆ ಎಂದು ಪಾಕಿಸ್ತಾನದ ಟೆಲಿಗ್ರಾಂ ಚಾನೆಲ್‌ನಲ್ಲಿ ಖಲಿಸ್ತಾನಿ ಗುಂಪು ಹೇಳಿಕೊಂಡಿದೆ.
ಭಾನುವಾರ ನಡೆದ ಸ್ಫೋಟದ (Blast) ತೀವ್ರತೆಗೆ ಹತ್ತಿರದಲ್ಲಿದ್ದ ಕಟ್ಟಡಗಳು ಅದುರಿವೆ. ಸ್ಫೋಟದ ಶಬ್ಧ ಸುಮಾರು 2 ಕಿ.ಮೀ ದೂರದವರೆಗೆ ಕೇಳಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ನಡೆಸುತ್ತಿದೆ.
ಪೋಸ್ಟ್‌ನಲ್ಲಿ ಏನಿದೆ?
ಭಾರತೀಯ ಹೇಡಿ ಸಂಸ್ಥೆ ಮತ್ತು ಮಾಸ್ತರ್ ನಮ್ಮ ಸದಸ್ಯರನ್ನು ಗುರಿಯಾಗಿಸಿ ಗುಂಡಾಗಳನ್ನು ನೇಮಿಸಿ ನಮ್ಮ ಧ್ವನಿಯನ್ನು ಹತ್ತಿಕ್ಕುತ್ತಿದ್ದಾರೆ ಎಂದರೆ ಅದು ಮುರ್ಖತನವಾದಿತು. ನಾವು ಎಷ್ಟು ಹತ್ತಿರದಲ್ಲಿದ್ದೇವೆ ಮತ್ತು ನಾವು ಯಾವಾಗ ಬೇಕಾದರೂ ದಾಳಿ ನಡೆಸಲು ಸಮರ್ಥರಿದ್ದೇವೆ ಎಂದು ಜಸ್ಟೀಸ್ ಲೀಗ್ ಇಂಡಿಯಾ ಹೇಳಿಕೊಂಡಿದೆ. ಈ ಪೋಸ್ಟ್‌ನೊಂದಿಗೆ ಸ್ಫೋಟಗೊಳ್ಳುತ್ತಿರುವ ದೃಶ್ಯದ ವಿಡಿಯೋವನ್ನು ಅಪ್ಲೋಡ್ ಮಾಡಿ ಖಲಿಸ್ತಾನ ಜಿಂದಾಬಾದ್ ಎಂದು ಹೇಳಿದೆ.
ಸ್ಫೋಟದ ನಂತರ, ರಾಷ್ಟ್ರೀಯ ತನಿಖಾ ದಳ, ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ), ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ದೆಹಲಿ ಪೊಲೀಸರ ತಂಡಗಳು ಪ್ರದೇಶವನ್ನು ಸುತ್ತುವರೆದಿವೆ. ವಿಧಿವಿಜ್ಞಾನ ತಜ್ಞರು ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸ್ಫೋಟ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಹತ್ತಿರದ ಅಂಗಡಿಗಳ ಕಿಟಕಿ ಗಾಜುಗಳನ್ನು ನಾಶಪಡಿಸಿದೆ ಮತ್ತು ಹತ್ತಿರದಲ್ಲಿ ನಿಲ್ಲಿಸಿದ್ದ ಕೆಲವು ಕಾರುಗಳನ್ನು ಹಾನಿಗೊಯಾಗಿದೆ.
ಭಾನುವಾರ ಬೆಳಗ್ಗೆ 7:35ರಿಂದ 7:40ರ ನಡುವೆ ಬಾಂಬ್ ಸ್ಫೋಟಗೊಂಡಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದರಿಂದ ತಡರಾತ್ರಿ ಬಾಂಬ್ ಇರಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಒಟ್ಟಾವಾ: ಖಲಿಸ್ತಾನಿ ಪ್ರತ್ಯೇಕತಾವಾದಿ ಗುಂಪಿನ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಹತ್ಯೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಭಾರತ ಮತ್ತು ಕೆನಡಾ (India – Canada) ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿದೆ. ಈ ನಡುವೆ ಕೆನಡಾದ ಖಲಿಸ್ತಾನಿಗಳಿಗೆ ಪಾಕ್ ಬೆಂಬಲ ನೀಡುತ್ತಿದೆ ಎಂದು ಕೆನಡಾ ಗುಪ್ತಚರ ಸಂಸ್ಥೆಯ (CSIS) ನಿರ್ದೇಶಕಿ ವನೆಸ್ಸಾ ಲಾಯ್ಡ್ ಅವರು ಹೇಳಿದ್ದ ವೀಡಿಯೋ ಸದ್ದು ಮಾಡುತ್ತಿದೆ.
Last year I said that the whole Hardeep Singh Nijjar case was:
“Pakistani Foreign interference, marketed as Indian Foreign interference, to distract from Chinese foreign interference.” Looks like I was right. https://t.co/VEXKInuNBK
ಇತ್ತೀಚೆಗೆ ನಡೆದ ವಿದೇಶಿ ಹಸ್ತಕ್ಷೇಪ ಸಮಿತಿಯ ಅಧಿವೇಶನದಲ್ಲಿ ವನೆಸ್ಸಾ ಲಾಯ್ಡ್, ನಿಜ್ಜರ್ ಹತ್ಯೆಗೆ ಸಂಬಂಧಿಸಿಂತೆ ಪ್ರತಿಕ್ರಿಯೆ ನೀಡುತ್ತಿದ್ದರು. ಈ ವೇಳೆ ಕೆನಡಾದ ರಾಜಕೀಯದ ಮೇಲೆ ಪ್ರಭಾವ ಬೀರುವಲ್ಲಿ ಪಾಕಿಸ್ತಾನದ ಪಾತ್ರವೂ ಇದೆ. ಜೊತೆಗೆ ಖಲಿಸ್ತಾನಿಗಳಿಗೆ ಪಾಕ್ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಪ್ರಭಾವ ಕಡಿಮೆಗೊಳಿಸಲು ಪಾಕ್ ಪ್ರಯತ್ನಿಸುತ್ತಿದೆ. ಅದಕ್ಕಾಗಿ ಖಲಿಸ್ತಾನಿಗಳ ಉಗ್ರವಾದಕ್ಕೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಭಾರತ-ಕೆನಡಾ ನಡುವೆ ಮತ್ತೆ ಬಿಕ್ಕಟ್ಟು ಎದುರಾದ ಬೆನ್ನಲ್ಲೇ ಈ ವೀಡಿಯೋ ಭಾರಿ ಸದ್ದು ಮಾಡುತ್ತಿದೆ.
ಹರ್ದೀಪ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಭಾರತದ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕ ಅಧಿಕಾರಿಗಳನ್ನೂ ತನಿಖೆಗೆ ಒಳಪಡಿಸುವುದಾಗಿ ಕೆನಡಾ ಸರ್ಕಾರ ಹೇಳಿತ್ತು. ಈ ಬೆನ್ನಲ್ಲೇ ಭಾರತ ಸರ್ಕಾರ (Indian Gooovernment) ಕೆನಡಾದಲ್ಲಿರುವ ತನ್ನ ಹೈಕಮಿಷನರ್ ಅವರನ್ನು ವಾಪಸ್ ಕರೆಸಿಕೊಳ್ಳುವ ನಿರ್ಧಾರಕ್ಕೆ ಮುಂದಾಗಿದೆ. ಇದನ್ನೂ ಓದಿ: ಟ್ರಂಪ್‌ಗಿಂತಲೂ ಕಮಲಾ ಹ್ಯಾರಿಸ್‌ಗೆ ಹೆಚ್ಚಿನ ಕೋಟ್ಯಧಿಪತಿಗಳ ಬೆಂಬಲ – ಇಲ್ಲಿದೆ ಬಿಲಿಯನೇರ್ಸ್ ಲಿಸ್ಟ್
ಸೋಮವಾರ (ಅ.14) ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತದ 6 ರಾಜತಾಂತ್ರಿಕ ಅಧಿಕಾರಿಗಳನ್ನು ಕೆನಡಾ ಸರ್ಕಾರ ಗಡಿಪಾರು ಮಾಡಿದೆ. ಇದಕ್ಕೆ ಪ್ರತಿಯಾಗಿ ಭಾರತವೂ ಸರ್ಕಾರವೂ ನವದೆಹಲಿಯಲ್ಲಿರುವ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳನ್ನು ದೇಶ ತೊರೆಯುವಂತೆ ಹೇಳಿದೆ. ಇದರಿಂದ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧ ಮತ್ತಷ್ಟು ಬಿಗಡಾಯಿಸಿದೆ. ಇದನ್ನೂ ಓದಿ: ನಿಜ್ಜರ್ ಹತ್ಯೆ ಕೇಸ್ ಸಂಘರ್ಷ – ಭಾರತ-ಕೆನಡಾ ನಡುವೆ ರಾಜತಾಂತ್ರಿಕ ಸಮರ; ಏನಿದು ಬಿಕ್ಕಟ್ಟು?
ನವದೆಹಲಿ: ಖಲಿಸ್ತಾನಿ ಉಗ್ರ (Khalistani) ಗುರುಪಂತ್‍ವಂತ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ ಅಮೆರಿಕ ನ್ಯಾಯಾಲಯವು (United States Court) ಭಾರತ ಸರ್ಕಾರಕ್ಕೆ ಸಮನ್ಸ್ ನೀಡಿದ ವಿಚಾರಕ್ಕೆ, ಈ ಆರೋಪ ಅನಗತ್ಯ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿಕೆಯಲ್ಲಿ, ನಾವು ಮೊದಲೇ ಹೇಳಿದಂತೆ, ಇವು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರ ರಹಿತ ಆರೋಪಗಳಾಗಿವೆ. ಈ ಆರೋಪದ ಮೇಲೆ ನಮ್ಮ ದೃಷ್ಟಿಕೋನವನ್ನು ಬದಲಾಯಿಸುವುದಿಲ್ಲ. ಈ ನಿರ್ದಿಷ್ಟ ಪ್ರಕರಣದ ಹಿಂದಿರುವ ವ್ಯಕ್ತಿಯ ಪೂರ್ವಾಪರಗಳು ಚೆನ್ನಾಗಿ ತಿಳಿದಿವೆ ಎಂದು ಹೇಳಿದ್ದಾರೆ.
1967 ರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ, ದೇಶವಿರೋಧಿ ಮತ್ತು ಅದರಲ್ಲಿ ತೊಡಗಿರುವ ಪನ್ನುನ್ ಪ್ರತಿನಿಧಿಸುವ ಸಂಸ್ಥೆಯನ್ನು ಕಾನೂನುಬಾಹಿರ ಸಂಸ್ಥೆ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಯಾರ್ಕ್‍ನ ಸದರ್ನ್ನ ಜಿಲ್ಲಾ ನ್ಯಾಯಾಲಯವು ಸಮನ್ಸ್‌ನಲ್ಲಿ ಭಾರತ ಸರ್ಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval), ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, ಏಜೆಂಟ್ ವಿಕ್ರಮ್ ಯಾದವ್ ಮತ್ತು ಭಾರತೀಯ ಉದ್ಯಮಿ ನಿಖಿಲ್ ಗುಪ್ತಾ ಅವರನ್ನು ಹೆಸರಿಸಿತ್ತು. ಅಲ್ಲದೇ ಸಮನ್ಸ್‍ನಲ್ಲಿ ಹೆಸರಿಸಿದವರು 21 ದಿನಗಳಲ್ಲಿ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿತ್ತು.
ನ್ಯೂಯಾರ್ಕ್‍ನಲ್ಲಿ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಅಮೆರಿಕ ಸರ್ಕಾರದ ಕೋರಿಕೆಯ ಮೇರೆಗೆ ನಿಖಿಲ್ ಗುಪ್ತಾ ಅವರನ್ನು ಕಳೆದ ವರ್ಷ ಜೆಕ್ ರಿಪಬ್ಲಿಕ್‍ನಲ್ಲಿ ಬಂಧಿಸಲಾಗಿತ್ತು. ಈ ವರ್ಷದ ಜೂನ್‍ನಲ್ಲಿ ಅವರನ್ನು ಜೆಕ್ ಗಣರಾಜ್ಯದಿಂದ ಯುಎಸ್‍ಗೆ ಹಸ್ತಾಂತರಿಸಲಾಯಿತು.
ಮೂಲಭೂತ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್‍ನ ಮುಖ್ಯಸ್ಥ ಮತ್ತು ಅಮೆರಿಕ ಮತ್ತು ಕೆನಡಾದ ದ್ವಿ ಪೌರತ್ವವನ್ನು ಹೊಂದಿರುವ ಪನ್ನುನ್‍ನನು ಕೊಲ್ಲುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ನವೆಂಬರ್‌ನಲ್ಲಿ ಪತ್ರಿಕೆಯೊಂದು ವರದಿ ಮಾಡಿತ್ತು. ಬಳಿಕ ಅಮೆರಿಕದ ಅಧಿಕಾರಿಗಳು ಇದನ್ನು ದೃಢಪಡಿಸಿದ್ದರು.
ಇದರ ಬೆನ್ನಲ್ಲೇ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯ ಇದು ಕಳವಳಕಾರಿ ವಿಷಯ ಎಂದು ಹೇಳಿತ್ತು. ಅಲ್ಲದೇ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಅವರು ಭಾರತವು ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ. ಆದರೆ ಇದು ಭಾರತ-ಅಮೆರಿಕದ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಒತ್ತಿ ಹೇಳಿದ್ದರು.
ಪನ್ನುನ್ ಭಾರತೀಯ ನಾಯಕರ ವಿರುದ್ಧ ದ್ವೇಷ ಭಾಷಣ ಮತ್ತು ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಕೇಂದ್ರ ಸರ್ಕಾರ 2020ರಲ್ಲಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿತ್ತು.
ವಾಷಿಂಗ್ಟನ್: ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿ ಹೂಡಿರುವ ಸಿವಿಲ್ ಮೊಕದ್ದಮೆ ಹಿನ್ನೆಲೆಯಲ್ಲಿ ಅಮೆರಿಕ ಕೋರ್ಟ್ (United States Court) ಭಾರತ ಸರ್ಕಾರಕ್ಕೆ (Indian Government ) ಸಮನ್ಸ್ (Summons) ಜಾರಿ ಮಾಡಿದೆ.
ನ್ಯೂಯಾರ್ಕ್‍ನ ಸದರ್ನ್ನ ಜಿಲ್ಲಾ ನ್ಯಾಯಾಲಯದ ಸಮನ್ಸ್‌ನಲ್ಲಿ ಭಾರತ ಸರ್ಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval), ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, ಏಜೆಂಟ್ ವಿಕ್ರಮ್ ಯಾದವ್ ಮತ್ತು ಭಾರತೀಯ ಉದ್ಯಮಿ ನಿಖಿಲ್ ಗುಪ್ತಾ ಅವರನ್ನು ಹೆಸರಿಸಲಾಗಿದೆ. ಸಮನ್ಸ್‌ನಲ್ಲಿ ಹೆಸರಿಸಿದವರು 21 ದಿನಗಳಲ್ಲಿ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿದೆ.
ಸಮನ್ಸ್‌ಗೆ ಭಾರತ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಸಮನ್ಸ್‌ನ ಪ್ರತಿಯನ್ನು ಹಂಚಿಕೊಂಡ ಪನ್ನು ಅವರ ಎಕ್ಸ್ ಖಾತೆಯನ್ನು ತಡೆಹಿಡಿಯಲಾಗಿದೆ ಎಂದು ವರದಿಯಾಗಿದೆ. ಅಲ್ಲದೇ ಈ ವಿಷಯವು ಭಾರತ-ಯುಎಸ್ ಬಾಂಧವ್ಯದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಭಾರತದಲ್ಲಿನ ಯುಎಸ್ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಮೂಲಭೂತ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್‍ನ ಮುಖ್ಯಸ್ಥ ಮತ್ತು ಅಮೆರಿಕ ಮತ್ತು ಕೆನಡಾದ ದ್ವಿ ಪೌರತ್ವವನ್ನು ಹೊಂದಿರುವ ಪನ್ನುನ್‍ನನು ಕೊಲ್ಲುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ನವೆಂಬರ್‌ನಲ್ಲಿ ಪತ್ರಿಕೆಯೊಂದು ವರದಿ ಮಾಡಿತ್ತು. ಬಳಿಕ ಅಮೆರಿಕದ ಅಧಿಕಾರಿಗಳು ಇದನ್ನು ದೃಢಪಡಿಸಿದ್ದರು.
ಇದರ ಬೆನ್ನಲ್ಲೇ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯ ಇದು ಕಳವಳಕಾರಿ ವಿಷಯ ಎಂದು ಹೇಳಿತ್ತು. ಅಲ್ಲದೇ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಅವರು ಭಾರತವು ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ. ಆದರೆ ಇದು ಭಾರತ-ಅಮೆರಿಕದ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಒತ್ತಿ ಹೇಳಿದ್ದರು.
ಪನ್ನುನ್ ಭಾರತೀಯ ನಾಯಕರ ವಿರುದ್ಧ ದ್ವೇಷ ಭಾಷಣ ಮತ್ತು ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಕೇಂದ್ರ ಸರ್ಕಾರ 2020ರಲ್ಲಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿತು.
ನವದೆಹಲಿ: ದೆಹಲಿಯ ಮೆಟ್ರೋ ನಿಲ್ದಾಣಗಳ (Delhi Metro Station) ಪಿಲ್ಲರ್‌ಗಳಲ್ಲಿ ಖಲಿಸ್ತಾನ್ ಪರ ಮತ್ತು ಪ್ರಧಾನಿ ನರೇಂದ್ರ ಮೋದಿ (Naredra Modi) ಅವರನ್ನು ಗುರಿಯಾಗಿಸಿಕೊಂಡು ಘೋಷಣೆಗಳನ್ನು ಬರೆದಿರುವುದು ಭಾನುವಾರ ಪತ್ತೆಯಾಗಿದೆ.
ಕರೋಲ್ ಬಾಗ್ ಮತ್ತು ಝಾಂಡೇವಾಲನ್ ಮೆಟ್ರೋ ನಿಲ್ದಾಣಗಳಲ್ಲಿ ಈ ಘೋಷಣೆಗಳನ್ನು ಬರೆದಿರುವುದು ಕಂಡುಬಂದಿವೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ವರದಿಯ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಮೂಲದ ನಿಷೇಧಿತ ಸಿಖ್ ಪ್ರತ್ಯೇಕತಾವಾದಿ ಗುಂಪು ಸಿಖ್ಸ್ ಫಾರ್ ಜಸ್ಟಿಸ್ (SFJ) ಬೆಂಬಲಿಗರು ಈ ಘೋಷಣೆಗಳನ್ನು ಬರೆದಿದ್ದಾರೆ.
#WATCH | Delhi: Pro-Khalistan graffiti and slogans against PM Modi were found written on pillars of Karol Bagh and Jhandewalan Metro stations today. Police lodged an FIR in the case and requested CCTV footage from the concerned metro stations. pic.twitter.com/SG9nKX9sJS
ತನಿಖೆ ಆರಂಭ: ಬರಹ ಸಂಬಂಧ ದೆಹಲಿ ಪೊಲೀಸರು ಈಗಾಗಲೇ ದೆಹಲಿ ಮೆಟ್ರೋ ಅಧಿಕಾರಿಗಳಿಂದ ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಂಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಹೆಚ್.ಡಿ ರೇವಣ್ಣಗೆ ಇಂದು ಸಿಗುತ್ತಾ ರಿಲೀಫ್?
ಈ ಸಂಬಂಧ ತನಿಖೆ ನಡೆಸಲು ಈಗಾಗಲೇ ತಂಡಗಳನ್ನು ರಚಿಸಿದ್ದೇವೆ. ಆರೋಪಿಗಳ ಪತ್ತೆಗೆ ಮೆಟ್ರೋ ನಿಲ್ದಾಣಗಳಲ್ಲಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಗೀಚುಬರಹ ಮತ್ತು ಘೋಷಣೆಗಳನ್ನು ಅಳಿಸಲಾಗಿದೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ಕೂಡ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿಯೊಬ್ಬರು ಭಾನುವಾರ ಬೆಳಗ್ಗೆ ಕರ್ತವ್ಯಕ್ಕೆ ಬಂದಾಗ ಮೆಟ್ರೊ ನಿಲ್ದಾಣದ ಪಿಲ್ಲರ್‌ಗಳ ಮೇಲೆ ಕಪ್ಪು ಬಣ್ಣದಲ್ಲಿ ಬರೆದಿರುವ ಘೋಷಣೆಗಳನ್ನು ಗಮನಿಸಿದ್ದಾರೆ. ಹೀಗಾಗಿ ಅವರು ಪ್ರತಿಕ್ರಿಯಿಸಿ, ನಾನು ಬೆಳಗ್ಗೆ 8 ಗಂಟೆಗೆ ಡ್ಯೂಟಿಗೆ ಬಂದಿದ್ದೇನೆ. ಈ ವೇಳೆ ಮೆಟ್ರೋ ನಿಲ್ದಾಣದ ಪಿಲ್ಲರ್‌ಗಳ ಮೇಲೆ ಕಪ್ಪು ಬಣ್ಣದಲ್ಲಿ ಏನೋ ಬರೆದಿರುವುದನ್ನು ಗಮನಿಸಿದ್ದೇನೆ. ಈ ವೇಳೆ ಅಲ್ಲಿ ಸಾಕಷ್ಟು ಜನ ಸೇರಿದ್ದು, ಗೋಡೆ ಬರಹಗಳನ್ನು ಓದುತ್ತಿದ್ದರು ಎಂದು ತಿಳಿಸಿದರು.
ರಾತ್ರಿ ಹೊತ್ತು ಈ ಘೋಷಣೆಗಳನ್ನು ಬರೆಯಲಾಗಿದೆ. ಯಾಕೆಂದರೆ ಆ ಸಮಯದಲ್ಲಿ ಯಾರೂ ಇರುವುದಿಲ್ಲ. ಈ ಘೋಷಣೆಗಳನ್ನು ಯಾರು ಬರೆದಿದ್ದಾರೆ ಎಂಬುದು ತಿಳಿದಿಲ್ಲ ಎಂದು ಅವರು ಹೇಳಿದರು.
ನ್ಯೂಯಾರ್ಕ್: ಅಮೆರಿಕಾದ ಕ್ಯಾಲಿಫೋರ್ನಿಯಾದ (California) ನೆವಾರ್ಕ್ ಸಿಟಿಯಲ್ಲಿ (Newark City) ಹಿಂದೂ ದೇವಾಲಯದ ಗೋಡೆಯಲ್ಲಿ ಖಲಿಸ್ತಾನಿ ಪರ ಘೋಷಣೆಗಳನ್ನು ಬರೆಯಲಾಗಿದೆ. ಈ ಕುರಿತು ಇದೀಗ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.
ಹಿಂದೂ ಅಮೇರಿಕನ್ ಫೌಂಡೇಶನ್ ತನ್ನ ಎಕ್ಸ್ ಖಾತೆಯಲ್ಲಿ, ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ (Swaminarayan Mandir Vasana Sanstha) ಗೋಡೆಗಳ ಮೇಲೆ ಘೋಷಣೆಗಳನ್ನು (Pro-Khalistani Slogans) ಬರೆದಿರುವ ಫೋಟೋಗಳನ್ನು ಹಂಚಿಕೊಂಡಿದೆ. ಫೋಟೋದಲ್ಲಿ, ದೇಗುಲದ ಗೋಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಭಾರತದ (India) ವಿರುದ್ಧ ದ್ವೇಷಪೂರಿತ ಬರಹಗಳನ್ನು ಬರೆಯಲಾಗಿದೆ.
ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಯ ಮೇಲೆ ಬರೆದಿರುವ ದ್ಷೇಷದ ಬರಹಗಳನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ಕಾನ್ಸುಲೇಟ್ ಖಂಡಿಸಿದೆ. ಇದನ್ನು ಬರೆದಿರುವ ಕಿಡಿಗೇಡಿಗಳ ವಿರುದ್ಧ ತ್ವರಿತ ತನಿಖೆ ಮತ್ತು ಕಠಿಣ ಕ್ರಮಕ್ಕಾಗಿ ಯುಎಸ್ ಅಧಿಕಾರಿಗಳಿಗೆ ಒತ್ತಡ ಹೇರಿದೆ.
ಕ್ಯಾಲಿಫೋರ್ನಿಯಾದ ನೆವಾರ್ಕ್‍ನಲ್ಲಿರುವ ಎಸ್‍ಎಂವಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರದ ಗೋಡೆಯಲ್ಲಿ ಭಾರತ ವಿರೋಧಿ ಬರಹದ ಮೂಲಕ ವಿರೂಪಗೊಳಿಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ಈ ಘಟನೆಯು ಭಾರತೀಯ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆ ತಂದಿದೆ. ಈ ಕುರಿತು ಶೀಘ್ರವೇ ತನಿಖೆ ನಡೆಸಿ ಹಾಗೂ ಈ ಕೃತ್ಯ ಎಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದಾಗಿ ನಾವು ಒತ್ತಾಯಿಸಿದ್ದೇವೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ಕಾನ್ಸುಲೇಟ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಅಮೇರಿಕಾದಲ್ಲಿ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ್ದು ಇದೇ ಮೊದಲಲ್ಲ. ಈ ಹಿಂದೆಯೂ ಇಂತಹ ಘಟನೆಗಳು ದೇಶ ಹಾಗೂ ನೆರೆಯ ಕೆನಡಾದಲ್ಲಿಯೂ ನಡೆದಿವೆ.
ಒಟ್ಟೋವಾ: ಖಲಿಸ್ತಾನಿ (Khalistani) ಪರ ಬೆಂಬಲಿಗರು ಹಿಂದೂ ದೇವಾಲಯಗಳನ್ನ ಟಾರ್ಗೆಟ್ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಮೂಲದ ಕೆನಡಾದ (Canada) ಸಂಸದ ಚಂದ್ರ ಆರ್ಯ (Chandra Arya) ಒತ್ತಾಯಿಸಿದ್ದಾರೆ.
ಖಲಿಸ್ತಾನಿಗಳು ಲಕ್ಷ್ಮಿ ನಾರಾಯಣ ಮಂದಿರದಲ್ಲಿ ತೊಂದರೆ ಸೃಷ್ಟಿಸಲು ಮುಂದಾಗಿದ್ದಾರೆ. ಇವರ ವಿರುದ್ಧ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಕ್ರಿ.ಪೂ. ಸರ್ರೆಯಲ್ಲಿರುವ ಸಿಖ್ ಗುರುದ್ವಾರದ ಹೊರಗೆ ಖಲಿಸ್ತಾನ್ ಬೆಂಬಲಿಗರು ಸಿಖ್ ಕುಟುಂಬವನ್ನು ಮೌಖಿಕವಾಗಿ ನಿಂದಿಸಿದ್ದಾರೆ. ಈಗ ಅದೇ ಖಲಿಸ್ತಾನ್ ಗುಂಪು ಸರ್ರೆಯ ಹಿಂದೂ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತೊಂದರೆಯನ್ನು ಸೃಷ್ಟಿಸಲು ಬಯಸಿದೆ ಎಂದು ಚಂದ್ರ ಆರ್ಯ ಅವರು ಎಕ್ಸ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ
Last week Khalistan supporters verbally abused a Sikh family outside a Sikh Gurdwara in Surrey BC according to some reports.
Now it appears the same Khalistan group want to create trouble at the Hindu Laxmi Narayan Mandir in Surrey.
All these are being done in the name of… https://t.co/szTznICBo0
ಇವೆಲ್ಲವನ್ನೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮಾಡಲಾಗುತ್ತಿದೆ. ಕೆನಡಾದ ಅಧಿಕಾರಿಗಳು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳುವಂತೆ ನಾನು ಮತ್ತೊಮ್ಮೆ ಕೇಳುತ್ತಿದ್ದೇನೆ ಎಂದು ಪೋಸ್ಟ್‌ನಲ್ಲಿ ಒತ್ತಾಯಿಸಿದ್ದಾರೆ.
ಕಳೆದ ವರ್ಷಗಳಲ್ಲಿ ಹಿಂದೂ ದೇವಾಲಯಗಳು ದಾಳಿಗೆ ಗುರಿಯಾಗಿವೆ. ಎರಡು ವರ್ಷಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ಹಲವು ಬಾರಿ ದಾಳಿ ನಡೆಸಲಾಗಿದೆ. ಹಿಂದೂ-ಕೆನಡಿಯನ್ನರ ವಿರುದ್ಧ ದ್ವೇಷದ ಅಪರಾಧಗಳು ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 22 ಕೋಟಿ ರೂ.ಗೆ ಮಾರಾಟವಾಯ್ತು 60 ವರ್ಷ ಹಳೆಯ ಒಂದು ಬಾಟಲಿ ವಿಸ್ಕಿ
ಇಂತಹ ಕೃತ್ಯಗಳನ್ನು ಬಹಿರಂಗವಾಗಿ ಮತ್ತು ಸಾರ್ವಜನಿಕವಾಗಿ ಮಾಡಲು ಅವಕಾಶ ನೀಡುವುದು ಸ್ವೀಕಾರಾರ್ಹವಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಆಗಸ್ಟ್‌ನಲ್ಲಿ ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಉಗ್ರಗಾಮಿಗಳು ಕೆನಡಾದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದರು.
ಒಟ್ಟಾವಾ: ಇತ್ತೀಚೆಗೆ ನಡೆದ ಖಲಿಸ್ತಾನಿ (Khalistani) ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ (India) ಕೈವಾಡವಿದೆ ಎಂದು ಕೆನಡಾ ಗಂಭೀರ ಆರೋಪವೊಂದನ್ನು ಮಾಡಿದೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau), ಹೌಸ್ ಆಫ್ ಕಾಮನ್ಸ್ ಅನ್ನು ಉದ್ದೇಶಿಸಿ ಮಾತನಾಡುತ್ತಾ, ಜೂನ್‍ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದೆ. ಈ ಪ್ರಕರಣದಲ್ಲಿ ಭಾರತೀಯ ಏಜೆಂಟರ ಕೈವಾಡದ ಪ್ರಬಲ ಆರೋಪಗಳು ಇವೆ ಎಂದು ಹೇಳಿದರು. ಈ ಆರೋಪಗಳ ಬಗ್ಗೆ ಸರ್ಕಾರ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಎಂದರು.
ಈ ಸಂಬಂಧ ಕೆನಡಾದ (Canada) ವಿದೇಶಾಂಗ ಸಚಿವೆ ಮೆಲಾನಿ ಜೋಲೀ ಪ್ರತಿಕ್ರಿಯಿಸಿ, ಟ್ರುಡೊ ಸರ್ಕಾರವು ತಕ್ಷಣದ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ಅಧಿಕಾರಿಯ ಹೆಸರು ಉಲ್ಲೇಖಿಸದ ವಿದೇಶಾಂಗ ಸಚಿವರು, ಇಂದು ನಾವು ಹಿರಿಯ ಭಾರತೀಯ ರಾಜತಾಂತ್ರಿಕರನ್ನು ಕೆನಡಾದಿಂದ ಹೊರಹಾಕಿದ್ದೇವೆ. ಉಚ್ಛಾಟಿತ ಭಾರತೀಯ ರಾಜತಾಂತ್ರಿಕರು ಕೆನಡಾದಲ್ಲಿರುವ ಭಾರತದ ವಿದೇಶಿ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥರಾಗಿದ್ದಾರೆ ಎಂದು ಜೋಲಿ ಹೇಳಿದ್ದಾರೆ.
ಜೂನ್ 18 ರಂದು ಹರ್ದೀಪ್ ಸಿಂಗ್ ನಿಜ್ಜರ್ ಮೇಲೆ ಗುಂಡು ಹಾರಿಸಲಾಗಿತ್ತು. ಭಾರತವು ಈತನನ್ನು ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಘೋಷಿಸಿತು ಎಂಬುವುದು ಉಲ್ಲೇಖನೀಯ. ಈ ಮಧ್ಯೆ ಜೂನ್ 18 ರಂದು, ವ್ಯಾಂಕೋವರ್‍ನ ಉಪನಗರವಾದ ಸರ್ರೆಯ ಗುರುದ್ವಾರದ ಬಳಿ ನಿಜ್ಜರ್‍ನನ್ನು ಗುಂಡಿಕ್ಕಿ ಕೊಲ್ಲಲಾಯಿತು. ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ನಿರಂತರವಾಗಿ ಹೆಚ್ಚುತ್ತಿದೆ.
ಒಟ್ಟಾವಾ: ಕೆನಡಾದ ಸರ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತಕ್ಕೆ ಮೋಸ್ಟ್ ವಾಂಟೆಡ್ ಆಗಿದ್ದ ಖಲಿಸ್ತಾನಿ ಉಗ್ರ (Khalistani Terrorist) ಹರ್ದೀಪ್ ಸಿಂಗ್ ನಿಜ್ಜರ್ (Hardeep Singh Nijjar) ಬಲಿಯಾಗಿದ್ದಾನೆ.
ಇತ್ತೀಚೆಗೆ ಭಾರತ ಸರ್ಕಾರ (Government Of India) ಬಿಡುಗಡೆ ಮಾಡಿದ 40 ಉಗ್ರರ ಪಟ್ಟಿಯಲ್ಲಿ ಹರ್ದೀಪ್ ಸಿಂಗ್ ನಿಜ್ಜರ್ ಪ್ರಮುಖ ಉಗ್ರನಾಗಿದ್ದ.
2022 ರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಪಂಜಾಬ್‌ನ ಜಲಂಧರ್‌ನಲ್ಲಿ ಹಿಂದೂ ಅರ್ಚಕನನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲು ಸಕಲ ಪ್ರಯತ್ನ ನಡೆದಿತ್ತು. ಆದ್ರೆ ಆರೋಪಿ ಎಸ್ಕೇಪ್ ಆಗಿದ್ದರಿಂದ ನಿಜ್ಜರ್ ಬಗ್ಗೆ ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಿತ್ತು. ಇದನ್ನೂ ಓದಿ: ಭಯಾನಕ ಅಣ್ವಸ್ತ್ರ ಹೊರತೆಗೆದ ರಷ್ಯಾ – ಕೀವ್‌ನಿಂದ 200 ಕಿಮೀ ದೂರದಲ್ಲಿರೋ ಬೆಲಾರಸ್‌ಗೆ ರವಾನೆ!
ಈ ಹಿಂದೆ ಭಾರತದ ವಿರುದ್ಧ ಭಯೋತ್ಪಾದಕ ಕೃತ್ಯಗಳನ್ನ ಎಸಗಿದ್ದ ಪ್ರಕರಣದಲಿ ನಿಜ್ಜರ್ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಕೂಡ ಸಲ್ಲಿಸಿತ್ತು. ಭಾರತದಿಂದ ಪರಾರಿಯಾಗಿದ್ದ ನಿಜ್ಜರ್ ಕೆನಡಾದಲ್ಲಿ ನೆಲೆಸಿದ್ದ, ಖಲಿಸ್ತಾನಿ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನೂ ಆಗಿದ್ದ ಅನ್ನೋದು ತಿಳಿದುಬಂದಿದೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ತ್ರಿವರ್ಣ ಧ್ವಜ ತೆಗೆದಿದ್ದ ಖಲಿಸ್ತಾನಿ ಉಗ್ರ ಅವತಾರ್ ಸಿಂಗ್ ನಿಗೂಢ ಸಾವು
ಇತ್ತೀಚೆಗಷ್ಟೇ ಖಲಿಸ್ತಾನಿ ಉಗ್ರ ಅಮೃತಪಾಲ್ ಸಿಂಗ್ ಆಪ್ತ, ಬ್ರಿಟನ್ ಮೂಲದ ಖಲಿಸ್ತಾನ್ ಲಿಬರೇಷನ್ ಫೋರ್ಸ್ (KLF) ಮುಖ್ಯಸ್ಥ ಅವತಾರ್ ಸಿಂಗ್ ಖಂಡಾ ನಿಗೂಢವಾಗಿ ಸಾವನ್ನಪ್ಪಿದ್ದ. ಈತನನ್ನ ವಿಷ ಉಣಿಸಿ ಸಾಯಿಸಲಾಗಿದೆ ಎಂದು ಶಂಕೆ ವ್ಯಕ್ತವಾದರೂ ವೈದ್ಯಕೀಯ ದಾಖಲೆಗಳು ರಕ್ತ ಕ್ಯಾನ್ಸರ್ ಎಂದು ಹೇಳಿದ್ದವು.
ಯಾರು ಅವತಾರ್ ಸಿಂಗ್?
2007ರಲ್ಲಿ ಶಿಕ್ಷಣ ವೀಸಾದಡಿ ಬ್ರಿಟನ್‌ಗೆ ತೆರಳಿದ್ದ ಅವತಾರ್ ಸಿಂಗ್ 2012ರಿಂದ ಅಲ್ಲಿಯೇ ನೆಲೆಸಿದ್ದ. ಬಾಂಬ್ ತಜ್ಞನಾಗಿದ್ದ ಖಂಡಾ, ಲಂಡನ್‌ನಲ್ಲಿರುವ ಭಾರತೀಯ ದೂತವಾಸ ಕಚೇರಿಯ ಮೇಲೆ ಆಕ್ರಮಣ ಮಾಡಿಸಿದವರ ಪೈಕಿ ಈತ ಪ್ರಮುಖ ಆರೋಪಿಯಾಗಿದ್ದ. ದೂತವಾಸ ಕಚೇರಿ ಮೇಲಿದ್ದ ತ್ರಿವರ್ಣ ಧ್ವಜ ತೆಗೆದು ಖಲಿಸ್ತಾನ್ ಧ್ವಜ ಹಾರಿಸಿದ್ದ.
ಪಂಜಾಬ್ ಪೊಲೀಸರು ಮಾರ್ಚ್ ಮತ್ತು ಏಪ್ರಿಲ್ ಅವಧಿಯಲ್ಲಿ ಖಲಿಸ್ತಾನಿ ಮುಖಂಡ ಅಮೃತಪಾಲ್ ಸಿಂಗ್ ಬಂಧನಕ್ಕೆ ತೀವ್ರ ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಆತ ತಲೆಮರೆಸಿಕೊಳ್ಳಲು ಅವತಾರ್ ಖಾಂಡಾ ನೆರವಾಗಿದ್ದ. ಅಮೃತಪಾಲ್‌ನನ್ನು ಪೊಲೀಸರು ಬೆನ್ನಟ್ಟಿದಾಗ ಆತ ಲಂಡನ್‌ನಲ್ಲಿದ್ದ ಅವತಾರ್ ಜತೆ ಸಂಪರ್ಕದಲ್ಲಿದ್ದ ವಿಚಾರ ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿತ್ತು.