Tag: Khandwa

  • ದುರ್ಗಾ ಮೂರ್ತಿ ವಿಸರ್ಜನೆಗೆಂದು ತೆರಳುತ್ತಿದ್ದಾಗ ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ – ಕನಿಷ್ಠ 10 ಮಂದಿ ಸಾವು

    ದುರ್ಗಾ ಮೂರ್ತಿ ವಿಸರ್ಜನೆಗೆಂದು ತೆರಳುತ್ತಿದ್ದಾಗ ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ – ಕನಿಷ್ಠ 10 ಮಂದಿ ಸಾವು

    – ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಘೋಷಿಸಿದ ಮಧ್ಯಪ್ರದೇಶ ಸಿಎಂ 

    ಭೋಪಾಲ್: ದುರ್ಗಾ ಪೂಜೆಯ ಬಳಿಕ ಮೂರ್ತಿಯನ್ನು ವಿಸರ್ಜಿಸಲು (Durga Idol Immersion) ಭಕ್ತರನ್ನು ಕರೆದೊಯ್ಯುತ್ತಿದ್ದ ಟ್ರ‍್ಯಾಕ್ಟರ್ ಟ್ರಾಲಿ (Tractor Trolley) ಉರುಳಿ ಕೊಳಕ್ಕೆ ಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಘಟನೆ ಮಧ್ಯಪ್ರದೇಶದ (Madhya Pradesh) ಖಾಂಡ್ವಾ (Khandwa) ಜಿಲ್ಲೆಯ ಪಂಧಾನ ಪ್ರದೇಶದಲ್ಲಿ ಗುರುವಾರ ನಡೆದಿದೆ.

    ಮೃತರಲ್ಲಿ ಹೆಚ್ಚಿನವರು ಯುವತಿಯರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅರ್ದ್ಲಾ ಮತ್ತು ಜಮ್ಲಿ ಗ್ರಾಮಗಳಿಂದ ಸುಮಾರು 20-25 ಮಂದಿ ದುರ್ಗಾ ಭಕ್ತರು ದುರ್ಗಾ ದೇವಿಯ ಮೂರ್ತಿಯನ್ನು ವಿಸರ್ಜನೆಗಾಗಿ ಕೊಂಡೊಯ್ಯುತ್ತಿದ್ದರು. ಕೊಳದ ಹತ್ತಿರ ನಿಲ್ಲಿಸಿದ್ದ ಟ್ರ‍್ಯಾಕ್ಟರ್ ಸಮತೋಲನ ತಪ್ಪಿ ನೀರಿಗೆ ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಇದನ್ನೂ ಓದಿ: ಎನ್‌ಕೌಂಟರ್ ಭೀತಿ – ಏಕಕಾಲಕ್ಕೆ 103 ನಕ್ಸಲರ ಶರಣಾಗತಿ

    ಅಪಘಾತದ ನಂತರ ಸ್ಥಳೀಯ ಪೊಲೀಸ್ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ಹಲವರನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಾಲಿಯಲ್ಲಿ ಜನಸಂಖ್ಯೆ ಹೆಚ್ಚಾದ ಕಾರಣ ಸಮತೋಲನ ತಪ್ಪಿ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ಚಳ್ಳಕೆರೆಯಲ್ಲಿ ಮಳೆ ಇಲ್ಲದೆ ಒಣಗಿದ ಶೇಂಗಾ ಬೆಳೆ – ರೈತರು ಕಂಗಾಲು

    ಇನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ಕಸ್ಟಮ್ಸ್‌ ಭಾರೀ ಲಂಚ- ಭಾರತದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎಂದ ಲಾಜಿಸ್ಟಿಕ್ಸ್ ಕಂಪನಿ

  • ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ 10 ವರ್ಷದ ಬಾಲಕನಿಗೆ ಥಳಿತ

    ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ 10 ವರ್ಷದ ಬಾಲಕನಿಗೆ ಥಳಿತ

    ಭೋಪಾಲ್: ಜೈ ಶ್ರೀ ರಾಮ್ (Jai Shri Ram) ಎಂದು ಘೋಷಣೆ ಕೂಗಲು ನಿರಾಕರಿಸಿದ 10 ವರ್ಷದ ಮುಸ್ಲಿಂ ಬಾಲಕನಿಗೆ (Muslim Boy) ಥಳಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ (Madhya Pradesh) ಕೋಮು ಸೂಕ್ಷ್ಮ ಪ್ರದೇಶವಾಗಿರುವ ಖಾಂಡ್ವಾ (Khandwa) ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಘಟನೆಯ ಬಳಿಕ ಪೊಲೀಸರು ಆರೋಪಿ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

    ಗುರುವಾರ ಸಂಜೆ ಖಾಂಡ್ವಾದ ಪಂಧನಾ ಪ್ರದೇಶದಲ್ಲಿ ಬಾಲಕ ಅಭ್ಯಾಸಕ್ಕೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಅಜಯ್ ಭಿಲ್ ಎಂದು ಗುರುತಿಸಲಾದ ಆರೋಪಿ ಬಾಲಕನನ್ನು ತಡೆದು ಜೈ ಶ್ರೀ ರಾಮ್ ಎಂದು ಹೇಳಲು ಒತ್ತಾಯಿಸಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏಷ್ಯಾ ಬುಕ್ ಆಫ್ ರೆಕಾರ್ಡ್ ಸೇರಿದ ಪಂಚರತ್ನ ಯಾತ್ರೆಯ 500 ಬಗೆಯ ಹಾರಗಳು

    ಆರಂಭದಲ್ಲಿ ಬಾಲಕ ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ್ದಾನೆ. ಇದಕ್ಕೆ ಕೋಪಗೊಂಡ ವ್ಯಕ್ತಿ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಭಯಭೀತನಾದ ಬಾಲಕ ಘೋಷಣೆ ಕೂಗಿದ್ದು, ಬಳಿಕ ಆರೋಪಿ ಆತನನ್ನು ಹೋಗಲು ಬಿಟ್ಟಿದ್ದಾನೆ.

    ನಡೆದೆಲ್ಲಾ ಘಟನೆಯ ಬಗ್ಗೆ ಬಾಲಕ ಬಳಿಕ ತನ್ನ ಪೋಷಕರಿಗೆ ತಿಳಿಸಿದ್ದಾನೆ. ಬಾಲಕನ ತಂದೆ ಪಂಧನಾ ಪೊಲೀಸ್ ಠಾಣೆಗೆ ತೆರಳಿ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಅಜಯ್ ಭಿಲ್ ವಿರುದ್ಧ ಐಪಿಸಿ ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳಿಗೆ ಆಕ್ರೋಶ ಅಥವಾ ಅವಮಾನ) ಹಾಗೂ 323 (ಸ್ವಯಂಪ್ರೇರಿತನಾಗಿ ನೋವುಂಟು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಯಿಂದ 113 ಬಾರಿ ಭದ್ರತಾ ನಿಯಮ ಉಲ್ಲಂಘನೆ: CRPF

    Live Tv
    [brid partner=56869869 player=32851 video=960834 autoplay=true]