Tag: Khargone

  • ರಾಮನವಮಿಯಂದು ಖಾರ್ಗೋನ್‌ನಲ್ಲಿ ಹಿಂಸಾಚಾರ – ಐವರ ಬಂಧನ

    ರಾಮನವಮಿಯಂದು ಖಾರ್ಗೋನ್‌ನಲ್ಲಿ ಹಿಂಸಾಚಾರ – ಐವರ ಬಂಧನ

    ಭೋಪಾಲ್: ರಾಮನವಮಿಯಂದು ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಭುಗಿಲೆದ್ದ ಹಿಂಸಾಚಾರದ ವೇಳೆ ವ್ಯಕ್ತಿಯೊಬ್ಬರ ಸಾವಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

    ಈ ತಿಂಗಳ ಆರಂಭದಲ್ಲಿ ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ರಾಮನವಮಿಯ ಪ್ರಯುಕ್ತ ನಡೆದ ಮೆರವಣಿಗೆಯ ಸಂದರ್ಭ ಘರ್ಷಣೆ ಏರ್ಪಟ್ಟಿತ್ತು. ಈ ಸಂದರ್ಭದಲ್ಲಿ ಇಬ್ರಿಶ್ ಖಾನ್ ಸಾವನ್ನಪ್ಪಿದ್ದರು. ಏಪ್ರಿಲ್ 14ರಂದು ಇಬ್ರಿಶ್ ಖಾನ್ ಕಾಣೆಯಾಗಿದ್ದಾರೆ ಎಂದು ಅವರ ಕುಟುಂಬಸ್ಥರು ದೂರು ನೀಡಿದ್ದರು. ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ – ಜಿಲ್ಲಾ ಪಂಚಾಯತ್‌ ಪತ್ರವೇ ನಕಲು

    ಪೊಲೀಸರು ಏಪ್ರಿಲ್ 10 ರಂದು ಇಬ್ರಿಶ್ ಖಾನ್ ದೇಹವನ್ನು ವಶಪಡಿಸಿಕೊಂಡು, ಮರಣೋತ್ತರ ಪರೀಕ್ಷೆಗೆ ಇಂದೋರ್‌ಗೆ ಕಳುಹಿಸಿದ್ದರು, ಏಪ್ರಿಲ್ 11 ರಂದು ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದರು.

    ಇಬ್ರಿಶ್ ಖಾನ್ ದೇಹವನ್ನು ಅಲ್ಲಿಯವರೆಗೆ ಗುರುತಿಸಲಾಗಿರಲಿಲ್ಲ. ಬಳಿಕ ಏಪ್ರಿಲ್ 14 ರಂದು ಇಬ್ರಿಶ್ ಖಾನ್ ಕುಟುಂಬಸ್ಥರು ನಾಪತ್ತೆಯ ದೂರು ನೀಡಿದ ಬಳಿಕ, ಇಂದೋರ್‌ನಲ್ಲಿ ಶವವನ್ನು ಗುರುತಿಸಿದ್ದಾರೆ. ಬಳಿಕ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ, ಅಂತ್ಯಕ್ರಿಯೆ ಮಾಡಲಾಯಿತು ಎಂದು ನರೋತ್ತಮ್ ಮಿಶ್ರಾ ತಿಳಿಸಿದ್ದರು. ಇದನ್ನೂ ಓದಿ: ಯೋಗಿ ಸರ್ಕಾರವನ್ನು ಜನರೇ ಬಲ್ಡೋಜರ್‌ನಿಂದ ಕಿತ್ತೆಸೆಯುವ ದಿನ ಬರಲಿದೆ: ಅಖಿಲೇಶ್ ಯಾದವ್

    ಖಾರ್ಗೋನ್‌ನಲ್ಲಿ ನಡೆದ ಘರ್ಷಣೆಯಲ್ಲಿ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 44 ಪ್ರಕರಣಗಳನ್ನು ದಾಖಲಿಸಲಾಗಿದೆ ಹಾಗೂ 148 ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇಬ್ರಿಶ್ ಖಾನ್ ಸಾವಿಗೆ ಸಂಬಂಧಿಸಿದಂತೆ ಇದೀಗ ಐವರನ್ನು ಬಂಧಿಸಲಾಗಿದ್ದು, ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಮಧ್ಯಪ್ರದೇಶಲ್ಲಿ ಜೆಸಿಬಿ ಘರ್ಜನೆ – ರಾಮನವಮಿ ಕಲ್ಲುತೂರಾಟ, 20 ಅಕ್ರಮ ಕಟ್ಟಡಗಳು ನೆಲಸಮ

    ಮಧ್ಯಪ್ರದೇಶಲ್ಲಿ ಜೆಸಿಬಿ ಘರ್ಜನೆ – ರಾಮನವಮಿ ಕಲ್ಲುತೂರಾಟ, 20 ಅಕ್ರಮ ಕಟ್ಟಡಗಳು ನೆಲಸಮ

    ಭೋಪಾಲ್: ಭಾನುವಾರ ರಾಮನವಮಿ ಮೆರವಣಿಗೆ ವೇಳೆ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸೋಮವಾರ 20 ಅಕ್ರಮ ಕಟ್ಟಡ ಹಾಗೂ ಅಂಗಡಿಗಳನ್ನು ನೆಲಸಮಗೊಳಿಸಿ ಬಿಸಿ ಮುಟ್ಟಿಸಿದೆ.

    ನಗರದ ಛೋಟೆ ಮೋಹನ್ ಟಾಕೀಸ್ ಪ್ರದೇಶದಿಂದ ಧ್ವಂಸ ಕಾರ್ಯ ಆರಂಭಗೊಂಡು, ನಾಲ್ಕು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಇದಾದ ಕೆಲವೇ ಹೊತ್ತಲ್ಲಿ ಆನಂದ್ ನಗರ ಮತ್ತು ಖಾಸ್ಖಾಸ್ವಾಡಿಯಲ್ಲಿ ಅಕ್ರಮ ಕಟ್ಟಡಗಳನ್ನು ಕೆಡವಲಾಯಿತು. ಇದನ್ನೂ ಓದಿ: ರಾಮನವಮಿ ರ‍್ಯಾಲಿ ವೇಳೆ ಕೋಮುಸಂಘರ್ಷ: 4 ರಾಜ್ಯಗಳಲ್ಲಿ ನಡೆದಿದ್ದೇನು?

    ಕೆಡವಲಾದ ಎಲ್ಲಾ ಅಂಗಡಿಗಳು ಹಾಗೂ ಮನೆಗಳು ಅತಿಕ್ರಮಣ ಮಾಡಲಾದ ಭೂಮಿಯಲ್ಲಿ ನಿರ್ಮಿಸಲಾದ ಕಟ್ಟಡಗಳಾಗಿವೆ. ಈ ಪ್ರದೇಶಗಳಲ್ಲಿ ಕಲ್ಲು ತೂರಾಟ ವರದಿಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಅಕ್ರಮ ಕಟ್ಟಡಗಳನ್ನು ಕೆಡವಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.

    ರಾಮನವಮಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 84 ಜನರನ್ನು ಬಂಧಿಸಲಾಗಿದೆ. ಅವರಿಗೆ ತಕ್ಕ ಪಾಠ ಕಲಿಸಲು, ಅವರ ಅಕ್ರಮ ಆಸ್ತಿಗಳನ್ನು ನೆಲಸಮ ಮಾಡಲಾಗುತ್ತಿದೆ ಎಂದು ಕಮಿಷನರ್ ಡಾ. ಪವನ್ ಕುಮಾರ್ ಶರ್ಮಾ ತಿಳಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ವದಂತಿಗಳನ್ನು ಹರಡಿದ್ದಕ್ಕಾಗಿ ರಾಜ್ಯ ಸರ್ಕಾರದ ಮೂವರು ಗುತ್ತಿಗೆ ನೌಕರರನ್ನು ವಜಾ ಮಾಡಿದ್ದರೆ ಒಬ್ಬ ನೌಕರರನ್ನು ಅಮಾನತುಗೊಳಿಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಇದು ಅತ್ಯಾಚಾರವೋ? ಅಥವಾ ಅವಳು ಗರ್ಭಿಣಿಯೋ?: ಮಮತಾ ಬ್ಯಾನರ್ಜಿ ಪ್ರಶ್ನೆ

    ಭಾನುವಾರ ರಾತ್ರಿ ನಡೆದ ಹಿಂಸಾಚಾರದ ಹಿನ್ನೆಲೆ ಖಾರ್ಗೋನ್ ಶಾಸಕ ರವಿ ಜೋಶಿ ಸ್ಥಳಕ್ಕೆ ಭೇಟಿ ನೀಡಿ, ಹಿಂಸಾಚಾರಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಇಂತಹ ಬೃಹತ್ ರ‍್ಯಾಲಿಯಲ್ಲಿ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು. ಇದರಿಂದಾಗಿ ಪರಿಸ್ಥಿತಿ ಕೈಮೀರಿದೆ ಎಂದು ಆರೋಪಿಸಿದ್ದಾರೆ.