Tag: Khushbu Sundar

  • ಸಿನಿಮಾದ ಸುವರ್ಣ ಯುಗವೊಂದು ಅಂತ್ಯವಾಗಿದೆ – ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್‌, ಖುಷ್ಬು

    ಸಿನಿಮಾದ ಸುವರ್ಣ ಯುಗವೊಂದು ಅಂತ್ಯವಾಗಿದೆ – ಸರೋಜಾದೇವಿ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್‌, ಖುಷ್ಬು

    ಚೆನ್ನೈ: ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಬಿ.ಸರೋಜಾ ದೇವಿ (B Saroja Devi) ಅವರು ಇಂದು ವಿಧಿವಶವಾಗಿದ್ದಾರೆ. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಭಾಗ್ಯವಂತರು, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಕನ್ನಡ ಚಿತ್ರರಂಗದ ಕಿತ್ತೂರು ರಾಣಿ ಚೆನ್ನಮ್ಮ ಅಂತಲೇ ಎಲ್ಲರ ಮನದಲ್ಲಿ ಮನೆ ಮಾಡಿದ್ದ ಸರೋಜಾದೇವಿ ಅವರು ತಮ್ಮ ನಿವಾಸದಲ್ಲಿ ಉಸಿರು ಚೆಲ್ಲಿದ್ದಾರೆ. ಹಿರಿಯ ನಟಿಯ ನಿಧನಕ್ಕೆ ಸಿನಿ ಗಣ್ಯರು, ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

    ಕಂಬನಿ ಮಿಡಿದ ತಲೈವಾ
    ಅದರಂತೆ ತಮಿಳಿನ ಖ್ಯಾತ ನಟ ತಲೈವಾ ರಜನಿಕಾಂತ್‌ (Rajinikanth) ಸಹ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ʻಲಕ್ಷಾಂತರ ಅಭಿಮಾನಿಗಳ ಹೃದಯ ಗೆದ್ದ ಮಹಾನ್ ನಟಿ ಸರೋಜಾ ದೇವಿ ಈಗ ನಮ್ಮೊಂದಿಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಒಂದು ಸುವರ್ಣ ಸಿನಿಮಾ ಯುಗ ಅಂತ್ಯಗೊಂಡಿದೆʼ ಅಂತ ಭಾವುಕ ಸಂದೇಶವೊಂದನ್ನ ಫೋಟೋ ಜೊತೆಗೆ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

    ಸರೋಜಾದೇವಿ ಅಮ್ಮ ಎಲ್ಲಾ ಕಾಲಕ್ಕೂ ಶ್ರೇಷ್ಠ
    ಬಹುಭಾಷಾ ನಟಿ ಖುಷ್ಬು ಸುಂದರ್‌ (Khushbu Sundar) ಕೂಡ ಸರೋಜಾ ದೇವಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ʻಸರೋಜಾದೇವಿ ಅಮ್ಮ ಎಲ್ಲಾ ಕಾಲದಲ್ಲೂ ಶ್ರೇಷ್ಠರು. ಇದನ್ನೂ ಓದಿ: ಬಿ.ಸರೋಜಾದೇವಿಯವರ ಸಾವಿನಿಂದ ಕಲಾಜಗತ್ತು ಬಡವಾಗಿದೆ – ಸಿಎಂ ಸಂತಾಪ

    ದಕ್ಷಿಣದಲ್ಲಿ ಅವರಷ್ಟು ಹೆಸರು, ಖ್ಯಾತಿ ಪಡೆದ ಮಹಿಳಾ ನಟಿ ಇನ್ನೊಬ್ಬರಿಲ್ಲ. ಅವರು ನನ್ನ ಪ್ರೀತಿಯ ಮತ್ತು ಆರಾಧ್ಯ ದೈವವೂ ಕೂಡ ಹೌದು. ಅವರನ್ನು ಭೇಟಿಯಾಗದೇ ನನ್ನ ಬೆಂಗಳೂರಿಗೆ ಪ್ರವಾಸ ಅಪೂರ್ಣವಾಗಿತ್ತು. ಚೆನ್ನೈಗೆ ಬಂದಾಗೆಲ್ಲ ಅವರು ನನಗೆ ಕರೆ ಮಾಡಿ ಮಾತನಾಡುತ್ತಿದ್ದರು. ಈಗ ಅವರನ್ನ ತುಂಬಾ ಮಿಸ್‌ ಮಾಡಿಕೊಳ್ತೀನಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.

  • ಕೆಣಕಿದ ನೆಟ್ಟಿಗನಿಗೆ ನಟಿ ಖುಷ್ಬೂ ಸುಂದರ್ ತಿರುಗೇಟು

    ಕೆಣಕಿದ ನೆಟ್ಟಿಗನಿಗೆ ನಟಿ ಖುಷ್ಬೂ ಸುಂದರ್ ತಿರುಗೇಟು

    ನ್ನಡದ ರಣಧೀರ, ಅಂಜದ ಗಂಡು ಸಿನಿಮಾಗಳಲ್ಲಿ ನಟಿಸಿರುವ ಖುಷ್ಬೂ ಸುಂದರ್ (Khushbu Sundar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಬೋಲ್ಡ್ ಫೋಟೋ ಹಂಚಿಕೊಂಡಿದ್ದ ನಟಿಗೆ ಕಾಮೆಂಟ್‌ ಮೂಲಕ ಕಾಲೆಳೆದಿದ್ದಾನೆ. ಕೆಣಕಿದ ನೆಟ್ಟಿಗನಿಗೆ ಸರಿಯಾದ ತಿರುಗೇಟು ನೀಡಿದ್ದಾರೆ ಖುಷ್ಬೂ. ಇದನ್ನೂ ಓದಿ:‘ಸಿಕಂದರ್’ ಸೋಲಿನ ಬೆನ್ನಲ್ಲೇ ಮತ್ತೊಂದು ಬಾಲಿವುಡ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿ

    ಖುಷ್ಬೂ ಸುಂದರ್‌ಗೆ 54 ವರ್ಷವಾಗಿದ್ರೂ ಫಿಟ್‌ನೆಸ್‌ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ನಟಿಯ ಬ್ಯೂಟಿ ಬಗ್ಗೆ ಆಗಾಗ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಾರೆ. ಇದೀಗ ಹಸಿರು ಡ್ರೆಸ್‌ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸಖತ್ ಸ್ಟೈಲೀಶ್ ಆಗಿ ಕಾಣಿಸಿಕೊಂಡಿರುವ ಖುಷ್ಬೂ ನೆಟ್ಟಿಗನೊಬ್ಬ ಕೆಣಕಿ ಕಾಮೆಂಟ್ ಮಾಡಿದ್ದಾನೆ.‌ ಇದನ್ನೂ ಓದಿ:ರೀಲ್ಸ್ ಕೇಸ್: ‘ಬಿಗ್ ಬಾಸ್’ ರಜತ್ ಮತ್ತೆ ಅರೆಸ್ಟ್, ವಿನಯ್‌ಗೂ ಬಂಧನ ಭೀತಿ

     

    View this post on Instagram

     

    A post shared by Kushboo Sundar (@khushsundar)

    ತೆಳ್ಳಗೆ ಬಳುಕುವ ಬಳ್ಳಿಯಂತೆ ಕಾಣಿಸಿಕೊಂಡಿರುವ ನಟಿಗೆ ಇದು ಮೌಂಜಾರೋ ಇಂಜೆಕ್ಷನ್ ಮ್ಯಾಜಿಕ್. ಇದರ ಬಗ್ಗೆ ನಿಮ್ಮ ಫಾಲೋವರ್ಸ್‌ಗೂ ತಿಳಿಸಿ, ಅವರು ಬಳಸುವಂತೆ ಆಗಲಿ ಎಂದು ಕಾಮೆಂಟ್ ಮಾಡಿದ್ದಾನೆ. ಇದು ನಟಿಗೆ ಕೋಪ ತರಿಸಿದೆ. ಅದಕ್ಕೆ ನಟಿ, ನಿಮ್ಮಂತಹ ಜನರ ನೋವು ನನಗೆ ಅರ್ಥವಾಗುತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ನಿಮ್ಮ ಮುಖವನ್ನು ತೋರಿಸುವುದಿಲ್ಲ. ನೀವೆಷ್ಟು ದಡ್ಡರು ಎಂದು ನಿಮಗೆ ತಿಳಿದಿದೆ. ಇದು ನಾಚಿಕೆಗೇಡಿನ ಸಂಗಿನ. ನಿಮ್ಮ ಹೆತ್ತವರ ಬಗ್ಗೆ ಯೋಚಿಸಿದಾಗ ಅಯ್ಯೋ ಅನಿಸುತ್ತದೆ ಎಂದು ಖುಷ್ಬೂ ಖಡಕ್ ಉತ್ತರ ನೀಡಿದ್ದಾರೆ. ನಟಿಯ ನಡೆಗೆ ಫ್ಯಾನ್ಸ್‌ ಮೆಚ್ಚುಗೆ ಸೂಚಿಸಿದ್ದಾರೆ.

  • ಲೋಕಸಭಾ ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ಖುಷ್ಬು

    ಲೋಕಸಭಾ ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ಖುಷ್ಬು

    ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿಯ ಪ್ರಮುಖ ಸದಸ್ಯರಲ್ಲಿ ಒಬ್ಬರಾಗಿರುವ ನಟಿ ಖುಷ್ಬು ಸುಂದರ್ (Khusbhu Sundar) ಅವರು ಲೋಕಸಭಾ ಚುನಾವಣಾ (Loksabha Election 2024) ಪ್ರಚಾರದಿಂದ ಹಿಂದೆ ಸರಿದಿದ್ದಾರೆ.

    ಈ ಸಂಬಂಧ ಖುಷ್ಬು ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (J.P Nadda) ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಪತ್ರದಲ್ಲಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಕೆಲವೊಮ್ಮೆ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆರೋಗ್ಯದ ಮೇಲೆ ಗಮನಹರಿಸಬೇಕು. ಹೀಗಾಗಿ ನಾನು ಇಂದು ಅಂತಹ ಸಂದಿಗ್ಧದಲ್ಲಿದ್ದೇ ನೆ ಎಂದಿದ್ದಾರೆ.

    2019 ರಲ್ಲಿ ದೆಹಲಿಯಲ್ಲಿ ಸಂಭವಿಸಿದ ಅಪಘಾತದಿಂದ ಮೂಳೆ ಮುರಿದಿದೆ. ಕಳೆದ 5 ವರ್ಷಗಳಿಂದ ಆರೋಗ್ಯದ ಕುರಿತು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಆದರೂ ಸಮಸ್ಯೆ ನನ್ನನ್ನು ಕಾಡುತ್ತಿದೆ. ಹೀಗಾಗಿ ವೈದ್ಯರು ಚುನಾವಣಾ ಪ್ರಚಾರದಲ್ಲಿ (Election Campaign) ಭಾಗಿಯಾಗದಂತೆ ಸೂಚಿಸಿದ್ದಾರೆ ಎಂದು ಪತ್ರದಲ್ಲಿ ನಟಿ ತಿಳಿಸಿದ್ದಾರೆ.

    ಪ್ರಚಾರದ ಸಂದರ್ಭದಲ್ಲಿ ಹೆಚ್ಚು ಪ್ರಯಾಣ, ಕುಳಿತುಕೊಳ್ಳುವುದು ಅತ್ಯಗತ್ಯ. ಹೀಗಾಗಿ ಮತ್ತೆ ನನಗೆ ಸಮಸ್ಯೆ ಕಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಅಲ್ಪ ವಿರಾಮ ಘೋಷಿಸಿದ್ದೇನೆ ಎಂದು ಖುಷ್ಬು ಪತ್ರದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಸಮಾಜವಾದಿ ಪಕ್ಷದ ಅಭ್ಯರ್ಥಿ ಕಾಜಲ್ ನಿಶಾದ್ ಆಸ್ಪತ್ರೆಗೆ ದಾಖಲು

  • ಖುಷ್ಬು ಉಡುಪಿ ಭೇಟಿ ವೇಳೆ ಆಸ್ಕರ್ ಫರ್ನಾಂಡಿಸ್ ಸಂಬಂಧಿಗೆ ಏನು ಕೆಲಸ? – ಬಿಜೆಪಿ ಪ್ರಶ್ನೆ

    ಖುಷ್ಬು ಉಡುಪಿ ಭೇಟಿ ವೇಳೆ ಆಸ್ಕರ್ ಫರ್ನಾಂಡಿಸ್ ಸಂಬಂಧಿಗೆ ಏನು ಕೆಲಸ? – ಬಿಜೆಪಿ ಪ್ರಶ್ನೆ

    ಉಡುಪಿ: ವಿಡಿಯೋ ಪ್ರಕರಣಕ್ಕೆ (Udupi College Video Row) ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ (Khushbu Sundar) ಉಡುಪಿ ಭೇಟಿ ವೇಳೆ ಅವರ ಜೊತೆಗಿದ್ದ ಕಾಂಗ್ರೆಸ್ ಪಕ್ಷದ ದಿವಂಗತ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಸಂಬಂಧಿ, ಉಡುಪಿಯ ಹಿರಿಯ ವಕೀಲೆ ಮೇರಿ ಶ್ರೇಷ್ಠ (Meri Shreshtha) ಉಪಸ್ಥಿತಿ ಬಗ್ಗೆ ಬಿಜೆಪಿ ನಾಯಕರು (BJP Leaders) ತಗಾದೆ ಎತ್ತಿದ್ದಾರೆ.

    ಖುಷ್ಬು ಜೊತೆ ಮೇರಿ ಶ್ರೇಷ್ಠ ಯಾಕೆ ಇದ್ದರು? ಅವರ ಪಾತ್ರ ಏನು? ಇದರ ಹಿಂದೆ ಏನಾದರೂ ಸಂಚು ಇದೆಯಾ? ಅವರು ಆರೋಪಿ ವಿದ್ಯಾರ್ಥಿನಿಯರ ಪರವಾಗಿದ್ದಾರೆಯೋ? ಅವರು ಪ್ರಕರಣ ಮುಚ್ಚಿ ಹಾಕಲು ಯತ್ನಿಸ್ತಿದ್ದಾರಾ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಕುಯ್ಲಾಡಿ (Kuilady Suresh Nayak) ಪ್ರಶ್ನಿಸಿದ್ದಾರೆ. ಈ ಮೂಲಕ ಖುಷ್ಬು ಹೇಳಿಕೆಯಲ್ಲಿ ಮೇರಿಶ್ರೇಷ್ಠ ಪ್ರಭಾವ ಇದ್ದಂತೆ ಕಾಣಿಸುತ್ತಿದೆ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: Udupi College Video Row – ತನಿಖೆ ಶುರು ಮಾಡಿದ ಕುಂದಾಪುರ ಡಿವೈಎಸ್ಪಿ

     

    ಇದಕ್ಕೆ ಸ್ಥಳೀಯ ಕಾಂಗ್ರೆಸ್ ನಾಯಕಿ ಸುನಿತಾ ಶೆಟ್ಟಿ ತಿರುಗೇಟು ನೀಡಿದ್ದಾರೆ. ಮೇರಿ ಶ್ರೇಷ್ಠ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ, ಅವರು ಪಕ್ಷಕ್ಕೆ ಸೀಮಿತವಾದ ಮಹಿಳೆ ಅಲ್ಲ. ತನಿಖೆ ವೇಳೆ ಹಾಜರು ಇರಬೇಕೆಂಬ ನೋಟಿಸ್‌ ಬಂದ ಹಿನ್ನೆಲೆಯಲ್ಲಿ ಅವರು ಹೋಗಿದ್ದಾರೆ ಅಷ್ಟೇ ಎಂದಿದ್ದಾರೆ. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಜೊತೆಗೆ ಸುಳ್ಯದ ಶಾಸಕಿ ಭಾಗೀರಥಿ ಮರುಳ್ಯ (Bhagirathi Murulya) ಕೂಡ ಇದ್ದರೇಕೆ ಎಂದು ಮರು ಪ್ರಶ್ನೆ ಹಾಕಿದ್ದಾರೆ.

    ಖುಷ್ಬು ಹೇಳಿಕೆಯಿಂದ ಬಿಜೆಪಿಗರು ಚಿಂತೆಗೀಡಾಗಿದ್ದಾರೆ.ಅದಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ಸುನಿತಾ ಶೆಟ್ಟಿ ಟಾಂಗ್ ಕೊಟ್ಟಿದ್ದಾರೆ. ಈ ಮಧ್ಯೆ ಉಡುಪಿ ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ವಹಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಗೃಹಸಚಿವ ಪರಮೇಶ್ವರ್‌ ಸಭೆ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಖುಷ್ಬೂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- ಡಿಎಂಕೆ ನಾಯಕ ಅರೆಸ್ಟ್, ಪಕ್ಷದಿಂದ ಉಚ್ಛಾಟನೆ

    ನಟಿ ಖುಷ್ಬೂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ- ಡಿಎಂಕೆ ನಾಯಕ ಅರೆಸ್ಟ್, ಪಕ್ಷದಿಂದ ಉಚ್ಛಾಟನೆ

    ಚೆನ್ನೈ: ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ (Khushbu Sundar) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಡಿಎಂಕೆ (DMK) ನಾಯಕ ಶಿವಾಜಿ ಕೃಷ್ಣಮೂರ್ತಿ (Sivaji Krishnamurthy) ಯನ್ನು ಭಾನುವಾರ ಚೆನ್ನೈ ಪೊಲೀಸರು (Chennai Police) ಬಂಧಿಸಿದ್ದಾರೆ. ಅಲ್ಲದೆ ಪಕ್ಷದಿಂದಲೂ ಉಚ್ಛಾಟನೆ ಮಾಡಲಾಗಿದೆ.

    ತಮ್ಮ ವಿರುದ್ಧ ಕೃಷ್ಣಮೂರ್ತಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ವೀಡಿಯೋವನ್ನು ಖುಷ್ಬೂ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಡಿಎಂಕೆ ವಿರುದ್ಧ ಅವರು ಕಿಡಿಕಾರಿರುವ ಅವರು ಮಹಿಳೆಯರನ್ನು ಕೀಳಾಗಿ ಕಾಣುವ ವ್ಯಕ್ತಿಗಳಿಗೆ ಡಿಎಂಕೆ ಆಶ್ರಯ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದಾಗಲೂ ಗದ್ಗದಿತರಾಗಿ ಮಾತನಾಡಿರುವ ಖುಷ್ಬೂ, ಪ್ರಕರಣದ ಗಂಭೀರತೆಯನ್ನು ಎತ್ತಿ ತೋರಿಸಿದ್ದಾರೆ. ಇದು ಕೇವಲ ಬಿಜೆಪಿ ಮಹಿಳಾ ನಾಯಕಿಯ ಮೇಲಿನ ದಾಳಿಯಲ್ಲ, ಒಟ್ಟಾರೆ ಮಹಿಳೆಯರ ಮೇಲಿನ ದಾಳಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರೀ ಅನಾಹುತದಿಂದ ಮಹಾರಾಷ್ಟ್ರ ಸಚಿವರು ಜಸ್ಟ್ ಮಿಸ್

    ಸದ್ಯ ಬಿಜೆಪಿ (BJP) ಯಿಂದ ಭಾರೀ ಟೀಕೆಗಳು ವ್ಯಕ್ತವಾದ ನಂತರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ. ಡಿಎಂಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ದುರೈಮುರುಗನ್ ಅವರು ಪಕ್ಷದ ಶಿಸ್ತಿನ ಉಲ್ಲಂಘನೆ ಮತ್ತು ಪಕ್ಷಕ್ಕೆ ಅಪಖ್ಯಾತಿ ತಂದಿರುವ ಕಾರಣ ಕೃಷ್ಣಮೂರ್ತಿ ಅವರ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸುವುದು ಸೇರಿದಂತೆ ಪಕ್ಷದ ಎಲ್ಲ ಹುದ್ದೆಗಳಿಂದಲೂ ಉಚ್ಛಾಟನೆ ಮಾಡುವುದಾಗಿ ಘೋಷಿಸಿದರು.

  • ಖೂಷ್ಬೂ ಸುಂದರ್ ಅತ್ತೆಯನ್ನು ಭೇಟಿಯಾದ ಧೋನಿ

    ಖೂಷ್ಬೂ ಸುಂದರ್ ಅತ್ತೆಯನ್ನು ಭೇಟಿಯಾದ ಧೋನಿ

    ಮುಂಬೈ: ಎಂಎಸ್ ಧೋನಿ (Dhoni) ಇತ್ತೀಚೆಗೆ ಬಿಜೆಪಿ (BJP) ನಾಯಕಿ ಖುಷ್ಬೂ ಸುಂದರ್ (Khushbu Sundar) ಅವರ ಅತ್ತೆಯವರನ್ನು ಭೇಟಿಯಾಗಿದ್ದಾರೆ.

    ದೇಶದಲ್ಲಿ, ಒಂಬತ್ತರಿಂದ ತೊಂಬತ್ತು ವರ್ಷ ವಯಸ್ಸಿನವರೆಗಿನ ಎಲ್ಲರೂ ಧೋನಿಯನ್ನು ಮೆಚ್ಚುತ್ತಾರೆ. ಯಾಕೆಂದರೆ ಧೋನಿ ಭಾರತದ ಕ್ರಿಕೆಟ್ ಅಭಿಮಾನಿಗಳ ಹೃದಯಸ್ಪರ್ಶಿಯಾಗಿದ್ದಾರೆ. ಆದರಲ್ಲೂ ಚೆನ್ನೈನಲ್ಲಿ (Chennai) ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕನಿಗೆ ಇನ್ನೂ ಹೆಚ್ಚಿನ ವಿಶೇಷ ಸ್ಥಾನಮಾನ ನೀಡಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ (CSK) ನಾಯಕತ್ವ ವಹಿಸಿದ್ದಾಗಿನಿಂದ ಧೋನಿ ಚೆನ್ನೈನೊಂದಿಗಿನ ಪ್ರೀತಿಯ ಸಂಬಂಧವು ಗಾಢವಾಗಿ ಬೆಳೆದಿದೆ.

    ಖುಷ್ಬೂ ಸುಂದರ್ ಅವರ ಅತ್ತೆಯನ್ನು ಭೇಟಿಯಾಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ನಾಯಕಿ ಹಂಚಿಕೊಂಡಿದ್ದಾರೆ. ಅಲ್ಲದೆ ಹೀರೋಗಳನ್ನು ಸೃಷ್ಟಿಸಲಾಗುವುದಿಲ್ಲ, ಅವರು ಹುಟ್ಟುತ್ತಲೇ ಹೀರೋಗಳಾಗಿರುತ್ತಾರೆ. ಧೋನಿ ಅದನ್ನು ಸಾಬೀತು ಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. 88ರ ನನ್ನ ಅತ್ತೆಯನ್ನು ಭೇಟಿಯಾಗಿ ನೀವು ಅವರ ಜೀವನಕ್ಕೆ ಅನೇಕ ವರ್ಷಗಳ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಸೇರಿಸಿದ್ದೀರಿ. ಇದಕ್ಕಾಗಿ ನಿಮಗೆ ಧನ್ಯವಾದಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಯಾವ ತಂಡದ ಕೋಚ್ ಆಗ್ತೀರಿ – ಅಭಿಮಾನಿಯ ಪ್ರಶ್ನೆಗೆ ಜಾಣ್ಮೆಯ ಉತ್ತರ ಕೊಟ್ಟ ರವಿ ಶಾಸ್ತ್ರಿ

    ಈ ನಡುವೆ ಧೋನಿಯ ಕೊನೆಯ ಐಪಿಎಲ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಧೋನಿ ನಂತರ ಋತುರಾಜ್ ಗಾಯಕ್ವಾಡ್ ಸಿಎಸ್‍ಕೆ ನಾಯಕರಾಗಬಹುದು. ರವೀಂದ್ರ ಜಡೇಜಾ (Ravindra Jadeja) ಜೊತೆಗೆ ಬೆನ್ ಸ್ಟೋಕ್ಸ್ ಹೆಸರು ಪಟ್ಟಿಯಲ್ಲಿದೆ. ಇದನ್ನೂ ಓದಿ: ಕೊನೆಯವರೆಗೂ ಹೋರಾಡಿದ ರಿಂಕು – ಹೈದರಾಬಾದ್‌ಗೆ 23 ರನ್‌ಗಳ ಜಯ

  • ನಟಿ ಖುಷ್ಬೂ ಸುಂದರ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

    ನಟಿ ಖುಷ್ಬೂ ಸುಂದರ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

    ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಕಮ್ ನಟಿ ಖುಷ್ಬೂ (Khushbu Sundar) ಅವರ ಆರೋಗ್ಯ ಏರುಪೇರಾಗಿದೆ. ತೀವ್ರ ಜ್ವರದಿಂದ (Fever) ಬಳಲುತ್ತಿದ್ದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಚುನಾವಣೆ ಗದ್ದಲದ ನಡುವೆ ಸೈಲೆಂಟ್ ಆಗಿ ಶೂಟಿಂಗ್ ನಲ್ಲಿ ಭಾಗಿಯಾದ ಕಿಚ್ಚ ಸುದೀಪ್

    ಕನ್ನಡದ ರಣಧೀರ, ಶಾಂತಿ ಕ್ರಾಂತಿ, ಹೃದಯಗೀತೆ, ಪಾಳೇಗಾರ ಸೇರಿದಂತೆ ಪರಭಾಷೆಗಳಲ್ಲೂ ನಟಿ ಖುಷ್ಬೂ ಸುಂದರ್ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾ- ರಾಜಕೀಯ ಎರಡು ಕ್ಷೇತ್ರಗಳಲ್ಲೂ ಗುರುತಿಸಿಕೊಂಡಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಖುಷ್ಬೂ ಅವರು ಜ್ವರ ಮತ್ತು ಬಾಡಿ ವೀಕ್‌ನೆಸ್‌ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸ್ವತಃ ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ. ವಿಪರೀತ ಜ್ವರ, ತುಂಬಾ ನೋವು ಮತ್ತು ದೌರ್ಬಲ್ಯ ನನನ್ನು ಕೊಲ್ಲುತ್ತಿದೆ. ಆದರೆ ನಾನು ಹೈದರಾಬಾದ್‌ನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ದಯವಿಟ್ಟು ಆರೋಗ್ಯವನ್ನು ನಿರ್ಲಕ್ಷಿಸಬೇಡಿ ಎಂದು ಬರೆದುಕೊಂಡಿದ್ದಾರೆ.

    ನಟಿ ಖುಷ್ಬೂ ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ನನ್ನ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡಿದೆ. ನಾನು ಹುಷಾರಾಗಿದ್ದೇನೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

  • ಬಾಲ್ಯದಲ್ಲಿ ನನ್ನ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ್ದೆ – ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ

    ಬಾಲ್ಯದಲ್ಲಿ ನನ್ನ ತಂದೆಯಿಂದಲೇ ಲೈಂಗಿಕ ದೌರ್ಜನ್ಯ ಅನುಭವಿಸಿದ್ದೆ – ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ

    ನವದೆಹಲಿ: ನಟಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ (NCW) ಸದಸ್ಯೆ ಖುಷ್ಬೂ ಸುಂದರ್ ಅವರು ಬಾಲ್ಯದಲ್ಲಿ ತನ್ನ ತಂದೆಯಿಂದ ಲೈಂಗಿಕ ಕಿರುಕುಳಕ್ಕೊಳಗಾದ ಬಗ್ಗೆ ಹೇಳಿಕೊಂಡ ಬೆನ್ನಲ್ಲೇ, ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ (Swati Maliwal) ತಮಗಾದ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ.

    “ನಾನು ಚಿಕ್ಕ ಹುಡುಗಿಯಾಗಿದ್ದಾಗ ನನ್ನ ತಂದೆಯೇ ನನಗೆ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅವರು ನನ್ನನ್ನು ತುಂಬಾ ಥಳಿಸುತ್ತಿದ್ದರು. ಅವರು ಮನೆಗೆ ಬಂದಾಗ ನಾನು ಭಯಭೀತಳಾಗುತ್ತಿದ್ದೆ. ಆಗಾಗ್ಗೆ ಹಾಸಿಗೆಯ ಕೆಳಗೆ ಅಡಗಿಕೊಳ್ಳುತ್ತಿದ್ದೆ” ಎಂದು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಕರಾಳ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಗಿಲ್‌ ಶತಕದ ಮಿಂಚು, ಬ್ಯಾಟಿಂಗ್‌ ಲಯಕ್ಕೆ ಮರಳಿದ ಕೊಹ್ಲಿ ಅರ್ಧ ಶತಕ – ಉತ್ತಮ ಸ್ಥಿತಿಯಲ್ಲಿ ಭಾರತ

    ಮಹಿಳೆಯರಿಗೆ ತಮ್ಮ ಹಕ್ಕುಗಳನ್ನು ಪಡೆಯಲು ಹೇಗೆ ಸಹಾಯ ಮಾಡಬೇಕು ಎಂದು ಯೋಚಿಸುತ್ತೇನೆ. ಹೆಣ್ಣುಮಕ್ಕಳನ್ನು ಶೋಷಿಸುವಂತಹ ಪುರುಷರಿಗೆ ಪಾಠ ಕಲಿಸುವ ಕೆಲಸ ಮಾಡುತ್ತೇವೆ. ಆದರೆ ನನ್ನ ಬಾಲ್ಯದಲ್ಲಿ ನಾನು ಕೂಡ ಲೈಂಗಿಕ ದೌರ್ಜನ್ಯದ ಕರಾಳತೆಯನ್ನು ಎದುರಿಸಿದ್ದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ವಧುದಕ್ಷಿಣೆ ಕಡಿಮೆ ಆಯ್ತು ಅಂತಾ ಮದುವೆ ಬೇಡವೆಂದ ಯುವತಿ – ಪ್ರಕರಣ ದಾಖಲಿಸದ ಪೊಲೀಸರು

    ತಂದೆ ನನ್ನ ತಲೆಯನ್ನು ಹಿಡಿದು ಗೋಡೆಗೆ ಹೊಡೆಸಿ ಹಲ್ಲೆ ಮಾಡಿದ್ದರು. ತಲೆಯಿಂದ ರಕ್ತಸ್ರಾವವಾಗಿ ನೋವು ಅನುಭವಿಸಿದ್ದೆ. ಯಾರೇ ಆಗಲಿ, ದೌರ್ಜನ್ಯಗಳನ್ನು ಅನುಭವಿಸಿದಾಗ ಮಾತ್ರ ಇತರರ ನೋವನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ಇಡೀ ವ್ಯವಸ್ಥೆಯನ್ನು ಅಲುಗಾಡಿಸುವ ಜಾಗೃತರಾಗುತ್ತಾರೆ ಎಂದು ನಾನು ನಂಬುದ್ದೇನೆ ಎಂದಿದ್ದಾರೆ.

    ತಂದೆಯಿಂದ ನಾನು ಲೈಂಗಿಕ ಕಿರುಕುಳ ಅನುಭವಿಸಿದ್ದೆ ಎಂದು ಈಚೆಗಷ್ಟೇ ಖುಷ್ಬೂ ಸುಂದರ್‌ ಅವರು ತಮ್ಮ ಬಾಲ್ಯದ ಕೆಲವು ದುರಂತ ಸನ್ನಿವೇಶಗಳ ಬಗ್ಗೆ ಹೇಳಿಕೊಂಡಿದ್ದರು.

  • ತಂದೆಯಿಂದಲೇ ಲೈಂಗಿಕ ಕಿರುಕುಳ ಅನುಭವಿಸಿದ್ದರ ಬಗ್ಗೆ ಬಾಯ್ಬಿಟ್ಟ `ಶಾಂತಿ ಕ್ರಾಂತಿ’ ನಟಿ

    ತಂದೆಯಿಂದಲೇ ಲೈಂಗಿಕ ಕಿರುಕುಳ ಅನುಭವಿಸಿದ್ದರ ಬಗ್ಗೆ ಬಾಯ್ಬಿಟ್ಟ `ಶಾಂತಿ ಕ್ರಾಂತಿ’ ನಟಿ

    ನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿರುವ ಬಹುಭಾಷಾ ನಟಿ ಖುಷ್ಬೂ (Kushboo Sundar) ಬಾಲ್ಯದಲ್ಲಿ ತಂದೆಯಿಂದಲ್ಲೇ (Father) ಕಿರುಕುಳ (Sexually Abused) ಅನುಭವಿಸಿರುವ ಘಟನೆಯನ್ನ ಇದೀಗ ರಿವೀಲ್ ಮಾಡಿದ್ದಾರೆ. ನಟಿ ಕಮ್ ರಾಜಕಾರಣಿಯಾಗಿರುವ ಖುಷ್ಬೂ ತಮ್ಮ ಜೀವನದಲ್ಲಿ ಮರೆಯಲಾಗದ ಘಟನೆಯನ್ನು ತೆರೆದಿಟ್ಟಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣಗೆ ಪ್ರಪೋಸ್ ಮಾಡಿದ ಯುವ ಕ್ರಿಕೆಟಿಗ

    ತಮ್ಮ ಬಾಲ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯವಾದರೆ ಮಾನಸಿಕವಾಗಿ ದೊಡ್ಡ ಪರಿಣಾಮ ಬೀರುತ್ತದೆ ಆದರಿಂದ ಇಡೀ ಜೀವನ ಹೆದರಿಕೊಳ್ಳಲು ಆರಂಭಿಸುತ್ತಾರೆ. ನನ್ನ ತಾಯಿ ದಾಂಪತ್ಯ ಬದುಕಿನಲ್ಲಿ ಅತಿ ಹೆಚ್ಚು ನಿಂದನೆಗಳನ್ನು ಎದುರಿಸಿದ್ದರು. ನನ್ನ ತಾಯಿಯ ಮೇಲೆ ಹಲ್ಲೆ ಮಾಡುವುದು, ಮಕ್ಕಳನ್ನು ಹೊಡೆಯುವುದು ಅಪರಾಧ ಆದರೆ ಆ ವ್ಯಕ್ತಿ, ತಮ್ಮ ಜನ್ಮ ಹಕ್ಕು ಎನ್ನುವ ರೀತಿ ವರ್ತಿಸುತ್ತಿದ್ದ. ನಾನು 8 ವರ್ಷದ ಹುಡುಗಿ ಆಗಿದ್ದಾಗ ನನಗೆ ಕಿರುಕುಳ ನೀಡಲು ಆರಂಭಿಸಿದ್ದ. ತಂದೆಯ ದೌರ್ಜನ್ಯದ ಬಗ್ಗೆ ಧ್ವನಿ ಎತ್ತಿ ಮಾತನಾಡಲು ಧೈರ್ಯ ಬಂದಿದ್ದೇ ನಾನು 15 ವರ್ಷ ಮುಟ್ಟಿದ್ದಾಗ ಎಂದು ಸಂದರ್ಶನವೊಂದರಲ್ಲಿ ನಟಿ ಮಾತನಾಡಿದ್ದಾರೆ.

    ಕುಟುಂಬದವರ ಭಯದಿಂದ ಖುಷ್ಬೂ ಕಿರುಕುಳದ ಬಗ್ಗೆ ಹೇಳಿಕೊಳ್ಳಲು ಹೆದರುತ್ತಿದ್ದರಂತೆ. ಕಿರುಕುಳದ ಬಗ್ಗೆ ಹೇಳಿಕೊಂಡರೂ ನನ್ನ ತಾಯಿ ನಂಬುತ್ತಾರೋ ಇಲ್ವೋ ಅನ್ನೋ ಭಯ ನನ್ನಲ್ಲಿತ್ತು ಏಕೆಂದರೆ ಏನೇ ಆದರೂ ನನ್ನ ಪತಿ ದೇವರು ಎನ್ನುವ ಮೈಂಡ್‌ಸೆಟ್ ಅವರದ್ದು. ತಾಳ್ಮೆ ಮೀರಿದ ಮೇಲೆ ನಾನು ತಂದೆ ವಿರುದ್ಧ ಮಾತನಾಡಲು ಶುರು ಮಾಡಿದೆ, ಆಗ ನನಗೆ 15 ವರ್ಷ. ನಮ್ಮ ಬಳಿ ಏನಂದ್ರೆ ಏನೂ ಇರಲಿಲ್ಲ ಆ ಸಮಯದಲ್ಲಿ ನಮ್ಮನ್ನು ಬಿಟ್ಟು ಹೋದರು. ಒಂದು ಹೊತ್ತು ಊಟಕ್ಕೂ ತುಂಬಾ ಯೋಚನೆ ಮಾಡಬೇಕಿತ್ತು. 16 ವರ್ಷದ ಹುಡುಗಿ ಆಗಿದ್ದಾಗ ಜೀವನ ಪಾಠ ಕಲಿಸಿತ್ತು ಎಂದು ಖುಷ್ಬೂ ಹೇಳಿದ್ದಾರೆ. ಈ ಸಂದರ್ಶನದ ಮೂಲಕ ತಾವು ಎದುರಿಸಿದ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ.

    ಇನ್ನೂ ಕನ್ನಡದ ರಣಧೀರ, ಶಾಂತಿ ಕ್ರಾಂತಿ, ಮ್ಯಾಜಿಕ್ ಅಜ್ಜಿ, ಜೀವನದಿ, ಪಾಳೆಗಾರ ಚಿತ್ರಗಳಲ್ಲಿ ಖುಷ್ಬೂ ನಟಿಸಿದ್ದಾರೆ.

  • ಬಿಜೆಪಿಯಲ್ಲಿರುವ ನಟಿಯರು ಐಟಂಗಳು ಹೇಳಿಕೆಗೆ ಕ್ಷಮೆಯಾಚಿಸಿದ ಕನಿಮೋಳಿ

    ಬಿಜೆಪಿಯಲ್ಲಿರುವ ನಟಿಯರು ಐಟಂಗಳು ಹೇಳಿಕೆಗೆ ಕ್ಷಮೆಯಾಚಿಸಿದ ಕನಿಮೋಳಿ

    ಚೆನ್ನೈ: ಬಿಜೆಪಿ (BJP) ನಾಯಕರಾಗಿ ಬದಲಾದ ಹಲವರು ನಟಿಯರ ಬಗ್ಗೆ ಡಿಎಂಕೆ (DMK) ವಕ್ತಾರ ಸೈದಾಯಿ ಸಾಧಿಕ್ (Saidai Sadiq) ಆಕ್ಷೇಪಾರ್ಹ ಹೇಳಿಕೆ ನೀಡಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ತಮಿಳುನಾಡು ಬಿಜೆಪಿಯಲ್ಲಿರುವ ನಟಿ ಖುಷ್ಬು ಸುಂದರ್ (Khushbu Sundar), ನಮಿತಾ (Namitha), ಗೌತಮಿ (Gowthami), ಗಾಯತ್ರಿ ರಘುರಾಮ್‍ರನ್ನು ಐಟಂಗಳು ಎಂದು ಬಹಿರಂಗ ಸಮಾವೇಶವೊಂದಲ್ಲಿ ಸಾಧಿಕ್ ವ್ಯಾಖ್ಯಾನಿಸಿದ್ದಾರೆ.

    ತಮಿಳುನಾಡಲ್ಲಿ ಬಿಜೆಪಿ ತಳವೂರುತ್ತಿದೆ ಎಂದು ಖುಷ್ಬು ಹೇಳ್ತಾರೆ. ಅಮಿತ್ ಶಾ (Amit Shah) ನೆತ್ತಿಯ ಮೇಲೆ ಕೂದಲಾದರೂ ಬರಬಹುದು ಆದ್ರೆ, ಇಲ್ಲಿ ಕಮಲದ ವಿಕಸನ ಆಗಲ್ಲ. ಡಿಎಂಕೆಯನ್ನು ನಾಶ ಮಾಡಿ ಬಿಜೆಪಿ ಬಲಿಷ್ಠಗೊಳಿಸಲು ಇಂತವರೆಲ್ಲ ನೆರವಾಗ್ತಾರಾ? ಖಂಡಿತವಾಗಲೂ ಸಾಧ್ಯವಿಲ್ಲ. ನನ್ನ ಬ್ರದರ್ ಇಳಯ ಅರುಣ ಖುಷ್ಬುರನ್ನು ಎಷ್ಟೋ ಬಾರಿ ಭೇಟಿ ಮಾಡಿದ್ರು. ಅಂದ್ರೆ ನಾನು ಹೇಳೋದು, ಆಕೆ ಡಿಎಂಕೆಯಲ್ಲಿದ್ದಾಗ (DMK) ಆರು ಬಾರಿ ಸಮಾವೇಶಗಳಲ್ಲಿ ಮೀಟ್ ಮಾಡಿದ್ರು ಎಂದು ನಾನಾರ್ಥ ಬರುವಂತೆ ಮಾತನಾಡಿದ್ದಾರೆ. ಇದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಜುಟ್ಟು ಹಿಡಿದು ರೋಗಿಯನ್ನು ಬೆಡ್ ಮೇಲೆ ಎಳೆದೊಯ್ದ ನರ್ಸ್ – ನಡೆದಿದ್ದೇನು ಗೊತ್ತಾ?

    ಸಾದಿಕ್ ಹೇಳಿಕೆ ಖಂಡಿಸಿ ಬಿಜೆಪಿ ಬೀದಿಗೆ ಇಳಿದಿದೆ. ನಟಿ ಖುಷ್ಬು ಟ್ವೀಟ್ ಮಾಡಿ, ಮಹಿಳೆಯರನ್ನು ಅಪಮಾನಿಸುವುದು ಹೊಸ ದ್ರಾವಿಡ ಮಾದರಿಯ ಭಾಗವೇ ಎಂದು ಪ್ರಶ್ನೆ ಮಾಡಿದ್ದಾರೆ. ಈ ಬೆನ್ನಲ್ಲೇ ಡಿಎಂಕೆ ನಾಯಕಿ ಕನಿಮೋಳಿ ಕ್ಷಮೆಯಾಚಿಸಿದ್ದಾರೆ. ನಾನೊಬ್ಬ ಮಹಿಳೆಯಾಗಿ, ಹೇಳಿಕೆಗೆ ಕ್ಷಮೆಯಾಚಿಸುತ್ತೇನೆ. ಇದನ್ನು ಯಾರೇ ಹೇಳಿದ್ರೂ ಕ್ಷಮಿಸಲು ಸಾಧ್ಯವಿಲ್ಲ. ನನ್ನ ನಾಯಕ ಸ್ಟಾಲಿನ್, ನನ್ನ ಪಕ್ಷ ಡಿಎಂಕೆ ಇದನ್ನು ಎಂದಿಗೂ ಕ್ಷಮಿಸಲ್ಲ ಎಂದು ಕನಿಮೋಳಿ (Kanimozhi) ಟ್ವೀಟ್ ಮಾಡಿದ್ದಾರೆ. ಇತ್ತೀಚಿಗಷ್ಟೇ ಮಹಿಳೆಯರನ್ನು ಐಟಂ ಎಂದು ಅವಹೇಳನಕಾರಿ ಎಂದು ಮುಂಬೈ ವಿಶೇಷ ಕೋರ್ಟ್ (Court) ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ಭಾರತೀಯ ರೂಪಾಯಿ, ಏಮ್ಸ್ ಯೋಜನೆ ಬಗ್ಗೆ ಟೀಕೆ – ಬಿಜೆಪಿ ವಿರುದ್ಧ ಉದಯನಿಧಿ ಸ್ಟಾಲಿನ್ ವಾಗ್ದಾಳಿ

    Live Tv
    [brid partner=56869869 player=32851 video=960834 autoplay=true]