Tag: Kiccha

  • ಸುದೀಪ್ ನನ್ನನ್ನು ಬೆಂಬಲಿಸಿದರೆ ಬಿಜೆಪಿಯನ್ನೂ ಬೆಂಬಲಿಸಿದಂತೆ : ಸಿಎಂ ಬೊಮ್ಮಾಯಿ

    ಸುದೀಪ್ ನನ್ನನ್ನು ಬೆಂಬಲಿಸಿದರೆ ಬಿಜೆಪಿಯನ್ನೂ ಬೆಂಬಲಿಸಿದಂತೆ : ಸಿಎಂ ಬೊಮ್ಮಾಯಿ

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗಾಗಿ ನಾನು ಚುನಾವಣೆಯಲ್ಲಿ ಬೆಂಬಲಿಸಲು ಬಂದಿದ್ದೇನೆ. ಚಿಕ್ಕಂದಿನಿಂದಲೂ ನನಗೆ ಅವರು ಪರಿಚಯ. ನನ್ನ ಕಷ್ಟ ಕಾಲದಲ್ಲಿ ಅವರು ನನ್ನೊಂದಿಗೆ ನಿಂತಿದ್ದಾರೆ. ಹಾಗಾಗಿ ಬೆಂಬಲ ಸೂಚಿಸುತ್ತಿದ್ದೇನೆ  ಎಂದು ನಟ ಕಿಚ್ಚ (Kiccha) ಸುದೀಪ್ (Sudeep) ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಆದರೆ, ಬಿಜೆಪಿಯನ್ನು ಬೆಂಬಲಿಸುತ್ತೇನೆ ಎಂದು ಅವರು ಅಪ್ಪಿತಪ್ಪಿಯೂ ಹೇಳಿಲ್ಲ. ಹಾಗಾಗಿ ಮಾಧ್ಯಮದವರು ಬಿಜೆಪಿಯನ್ನು ಬೆಂಬಲಿಸುತ್ತಿಲ್ಲವಾ? ಎಂದು ಪ್ರಶ್ನೆ ಮಾಡಿದರು.

    CM BOMMAI ASHOKA HOTEL

    ಈ ಕುರಿತು ಸುದೀಪ್ ಯಾವುದೇ ಸ್ಪಷ್ಟನೆ ನೀಡಲಿಲ್ಲ. ಹಾಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಮೈಕ್ ತಗೆದುಕೊಂಡು, ‘ನನಗೆ ಬೆಂಬಲಿಸುತ್ತಾರೆ ಅಂದರೆ, ಅದು ಬಿಜೆಪಿಗೆ ಬೆಂಬಲಿಸಿದಂತೆ’ ಎಂದು ಹೇಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರೂ, ಸುದೀಪ್ ಯಾವುದೇ ಕಾರಣಕ್ಕೂ ಬಿಜೆಪಿ ಎನ್ನುವ ಪದವನ್ನೇ ಬಳಸಲಿಲ್ಲ. ಜಾಣ್ಮೆಯ ನಡೆಯನ್ನು ಈ ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದರು ಸುದೀಪ್. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    Sudeep BJP Ashoka Hotel

    ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ‘ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

    ಈ ಕುರಿತಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಆರಂಭಿಸಿದ್ದಾರೆ. ನೆಚ್ಚಿನ ನಟ ಈಗಾಗಲೇ ತಮ್ಮದೇ ಟ್ರಸ್ಟ್ ಮೂಲಕ ಸಮಾಜಸೇವೆ ಆರಂಭಿಸಿದ್ದಾರೆ. ರಾಜಕಾರಣಕ್ಕೆ ಹೋದರೆ ಮತ್ತಷ್ಟು ಸಹಾಯ ಮಾಡಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಅವರು ರಾಜಕೀಯ ಕ್ಷೇತ್ರಕ್ಕೆ ಹೋಗುವುದು ಬೇಡ ಎಂದು ನೇರವಾಗಿ ಹೇಳಿಕೆ ನೀಡಿದ್ದಾರೆ.

    ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಅಂತಾನೂ ಹೇಳಲಿಲ್ಲ. ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದಷ್ಟೇ ಹೇಳಿದರು.

  • Breaking- ಬಿಜೆಪಿ ಪರವಾಗಿ ಪ್ರಚಾರಕ್ಕೆ ಹೊರಟ ಸುದೀಪ್ : ‘ಮಾಮಾ’ಗಾಗಿ ಇದೆಲ್ಲ ಎಂದ ಕಿಚ್ಚ

    Breaking- ಬಿಜೆಪಿ ಪರವಾಗಿ ಪ್ರಚಾರಕ್ಕೆ ಹೊರಟ ಸುದೀಪ್ : ‘ಮಾಮಾ’ಗಾಗಿ ಇದೆಲ್ಲ ಎಂದ ಕಿಚ್ಚ

    ಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುವೆ ಅಂತಾನೂ ಹೇಳಲಿಲ್ಲ. ಬಸವರಾಜ ಬೊಮ್ಮಾಯಿ ಪರವಾಗಿ ನಿಂತುಕೊಳ್ಳುತ್ತೇನೆ ಎಂದಷ್ಟೇ ಹೇಳಿದರು.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸುದೀಪ್, ‘ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರನ್ನು ನಾನು ಚಿಕ್ಕಂದಿನಿಂದಲೇ ಮಾಮಾ ಎಂದು ಕರೆಯುತ್ತಿದ್ದೆ. ಈಗಲೂ ಅವರನ್ನು ಹಾಗೆಯೇ ಕರೆಯುವೆ. ನಾನು ಸಿನಿಮಾ ರಂಗಕ್ಕೆ ಬರುವಾಗ ತುಂಬಾ ಕಷ್ಟದ ದಿನಗಳಲ್ಲಿ ಇದ್ದೆ. ಅವತ್ತು ನನಗೆ ಸಪೋರ್ಟ್ ಮಾಡಿದವರು ಅವರು. ಹಾಗಾಗಿ ಅವರಿಗೆ ನಾನು ಸಪೋರ್ಟ್ ಕೊಡುತ್ತಿದ್ದೇನೆ. ನನ್ನ ಸ್ನೇಹಿತರೂ ಇಲ್ಲಿದ್ದಾರೆ. ಅವರ ಪರವಾಗಿ ನಾನು ನಿಲ್ಲುತ್ತೇನೆ’ ಎಂದರು.

    ಬಿಜೆಪಿ (BJP) ಜೊತೆಗಿನ ಬಾಂಧವ್ಯದ ಕುರಿತು ಮಾತನಾಡಿರುವ ಸುದೀಪ್ (Sudeep), ‘ನನಗೆ ಆತ್ಮೀಯರು, ಆಪ್ತರು ತುಂಬಾ ಜನ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಅಲ್ಲದೇ, ಅವರು ನನ್ನ ಕಷ್ಟದ ಕಾಲದಲ್ಲಿ ಕೈ ಹಿಡಿದಿದ್ದಾರೆ. ಅವರ ಪರವಾಗಿ ನಿಲ್ಲಬೇಕಾಗಿದ್ದು ನನ್ನ ಕರ್ತವ್ಯ ಈ ಕಾರಣದಿಂದಾಗಿ ನಾನು ಇಂಥದ್ದೊಂದು ನಿರ್ಧಾರವನ್ನು ತಗೆದುಕೊಂಡಿದ್ದೇನೆ’ ಎಂದರು. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ‘ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

    ಈ ಕುರಿತಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಆರಂಭಿಸಿದ್ದಾರೆ. ನೆಚ್ಚಿನ ನಟ ಈಗಾಗಲೇ ತಮ್ಮದೇ ಟ್ರಸ್ಟ್ ಮೂಲಕ ಸಮಾಜಸೇವೆ ಆರಂಭಿಸಿದ್ದಾರೆ. ರಾಜಕಾರಣಕ್ಕೆ ಹೋದರೆ ಮತ್ತಷ್ಟು ಸಹಾಯ ಮಾಡಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಅವರು ರಾಜಕೀಯ ಕ್ಷೇತ್ರಕ್ಕೆ ಹೋಗುವುದು ಬೇಡ ಎಂದು ನೇರವಾಗಿ ಹೇಳಿಕೆ ನೀಡಿದ್ದಾರೆ.

  • ಸುದೀಪ್ ಬಿಜೆಪಿಗೆ? : ಡಾ.ವಿಷ್ಣು ನೆನಪಿಸಿಕೊಂಡ ಅಭಿಮಾನಿಗಳು

    ಸುದೀಪ್ ಬಿಜೆಪಿಗೆ? : ಡಾ.ವಿಷ್ಣು ನೆನಪಿಸಿಕೊಂಡ ಅಭಿಮಾನಿಗಳು

    ಕಿಚ್ಚ ಸುದೀಪ್ (Sudeep) ಬಿಜೆಪಿಗೆ (BJP) ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮತ್ತು ಆತಂಕ ಎರಡನ್ನೂ ಮೂಡಿಸಿದೆ. ಈ ಕುರಿತಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆ ಆರಂಭಿಸಿದ್ದಾರೆ. ನೆಚ್ಚಿನ ನಟ ಈಗಾಗಲೇ ತಮ್ಮದೇ ಟ್ರಸ್ಟ್ ಮೂಲಕ ಸಮಾಜಸೇವೆ ಆರಂಭಿಸಿದ್ದಾರೆ. ರಾಜಕಾರಣಕ್ಕೆ ಹೋದರೆ ಮತ್ತಷ್ಟು ಸಹಾಯ ಮಾಡಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದರೆ, ಇನ್ನೂ ಕೆಲವರು ಅವರು ರಾಜಕೀಯ ಕ್ಷೇತ್ರಕ್ಕೆ ಹೋಗುವುದು ಬೇಡ ಎಂದು ನೇರವಾಗಿ ಹೇಳಿಕೆ ನೀಡಿದ್ದಾರೆ.

    ಈ ನಡುವೆ ಅನೇಕ ಅಭಿಮಾನಿಗಳು ಡಾ.ವಿಷ್ಣುವರ್ಧನ್ (Vishnuvardhan) ಅವರನ್ನು ನೆನಪಿಸಿಕೊಂಡಿದ್ದಾರೆ. ವಿಷ್ಣು ಕಾಲವಾದ ನಂತರ ವಿಷ್ಣುವರ್ಧನ್ ಅವರ ಸಾಕಷ್ಟು ಅಭಿಮಾನಿಗಳು ಕಿಚ್ಚ ಸುದೀಪ್ ಬೆಂಬಲಕ್ಕೆ ನಿಂತಿದ್ದರು. ಸುದೀಪ್ ಕೂಡ ವಿಷ್ಣುವರ್ಧನ್ ಅವರ ಹೆಸರಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೇ, ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಹೋರಾಟಕ್ಕೂ ಬಂದಿದ್ದರು. ಈ ಎಲ್ಲ ಕಾರಣದಿಂದಾಗಿ ವಿಷ್ಣು ಅಭಿಮಾನಿಗಳು ಸುದೀಪ್ ಅಭಿಮಾನಿಗಳಾಗಿಯೂ ಇದ್ದರು. ರಾಜಕೀಯ ನಡೆಗಾಗಿ ಕೊಂಚ ಬೇಸರ ವ್ಯಕ್ತ ಪಡಿಸಿದ್ದಾರೆ ವಿಷ್ಣು ಅಭಿಮಾನಿಗಳು.

    ಡಾ.ವಿಷ್ಣುವರ್ಧನ್  ಅವರು ಯಾವುದೇ ಕಾರಣಕ್ಕೂ ರಾಜಕಾರಣ ಮಾಡಲಿಲ್ಲ. ಯಾವ ಪಕ್ಷದ ಪರವಾಗಿಯೂ ಅವರು ಮಾತನಾಡಲಿಲ್ಲ. ಅವರಂತೆಯೇ ಸುದೀಪ್ ಕೂಡ ಇರಬೇಕು ಎನ್ನುವುದು ನಮ್ಮ ಅಭಿಪ್ರಾಯ. ನಾವು ನಿಮ್ಮಲ್ಲಿ ವಿಷ್ಣುದಾದಾ ಅವರನ್ನು ಕಾಣುತ್ತಿದ್ದೇವೆ ಎಂದು ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದಾರೆ.

    ಬಿಜೆಪಿ ಸೇರುವ ವಿಚಾರವಾಗಿ ಸುದೀಪ್ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಕೆಲವು ವಿಚಾರಗಳನ್ನು ಸದ್ಯ ಹೇಳುವುದು ಕಷ್ಟ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದಾರೆ. ನಾನು ಹೋಗುತ್ತಿದ್ದೇನೆ. ಅಲ್ಲೇ ಹಲವು ವಿಚಾರಗಳನ್ನು ಮಾತನಾಡುತ್ತೇನೆ’ ಎಂದಿದ್ದಾರೆ ಸುದೀಪ್. ಈ ಸಂದರ್ಭದಲ್ಲಿ ಅವರು ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ.

    ಮುಂದುವರೆದು ಮಾತನಾಡಿದ ಅವರು, ‘ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ. ಆದರೆ, ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.

  • ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ : ಕಿಚ್ಚ ಸುದೀಪ್

    ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ : ಕಿಚ್ಚ ಸುದೀಪ್

    ಬಿಜೆಪಿ (BJP) ಸೇರುವ ವಿಚಾರವಾಗಿ ಸುದೀಪ್ ((Sudeep) )ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಕೆಲವು ವಿಚಾರಗಳನ್ನು ಸದ್ಯ ಹೇಳುವುದು ಕಷ್ಟ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ರಿಕಾಗೋಷ್ಠಿಗೆ ಆಹ್ವಾನಿಸಿದ್ದಾರೆ. ನಾನು ಹೋಗುತ್ತಿದ್ದೇನೆ. ಅಲ್ಲೇ ಹಲವು ವಿಚಾರಗಳನ್ನು ಮಾತನಾಡುತ್ತೇನೆ’ ಎಂದಿದ್ದಾರೆ ಸುದೀಪ್. ಈ ಸಂದರ್ಭದಲ್ಲಿ ಅವರು ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ.

    ಮುಂದುವರೆದು ಮಾತನಾಡಿದ ಅವರು, ‘ಬಿಜೆಪಿ ಜೊತೆಗಿನ ಸಂಬಂಧವನ್ನು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೇನೆ. ಆದರೆ, ಈ ಸಂದರ್ಭದಲ್ಲಿ ಒಂದು ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ (Election) ಸ್ಪರ್ಧೆ ಮಾಡುವುದಿಲ್ಲ. ಇದನ್ನು ಅಭಿಮಾನಿಗಳಿಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಟಿಕೆಟ್ ಕೇಳುವುದಿಲ್ಲ’ ಎಂದಿದ್ದಾರೆ ಸುದೀಪ್.  ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ಸುದೀಪ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಕಾಶ್ ರೈ ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಗೆ ಅಸಂಖ್ಯಾತ ಜನರು ಪ್ರತಿಕ್ರಿಯಿಸಿದ್ದಾರೆ.

    ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

  • ಅತ್ಯಾಪ್ತ ಜಾಕ್ ಮಂಜುಗಾಗಿ ಟಿಕೆಟ್ ಬೇಡಿಕೆ ಇಟ್ರಾ ಕಿಚ್ಚ ಸುದೀಪ್?

    ಅತ್ಯಾಪ್ತ ಜಾಕ್ ಮಂಜುಗಾಗಿ ಟಿಕೆಟ್ ಬೇಡಿಕೆ ಇಟ್ರಾ ಕಿಚ್ಚ ಸುದೀಪ್?

    ಟ ಸುದೀಪ್ (Sudeep) ಬಿಜೆಪಿ (BJP) ಸೇರ್ಪಡೆ ವಿಚಾರ ನಾನಾ ತಿರುವುಗಳಿಗೆ ಕಾರಣವಾಗುತ್ತಿದೆ. ಚಿತ್ರೋದ್ಯಮದಲ್ಲಿ ಪರ ವಿರೋಧದ ಚರ್ಚೆ ಶುರುವಾಗಿದ್ದರೆ, ರಾಜಕೀಯ ಕ್ಷೇತ್ರದಲ್ಲಿ ಇದನ್ನು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ. ಎಲ್ಲ ಪಕ್ಷಗಳಲ್ಲೂ ಗುರುತಿಸಿಕೊಂಡಿರುವ ಅಸಂಖ್ಯಾತ ಅಭಿಮಾನಿಗಳಿಗೆ ಸುದೀಪ್ ಯಾವ ಸಂದೇಶ ರವಾನಿಸಲಿದ್ದಾರೆ ಎಂದೂ ಪ್ರಶ್ನೆ ಮಾಡಲಾಗುತ್ತಿದೆ. ಈ ಮಧ್ಯ ಮತ್ತೊಂದು ಸುದ್ದಿಯೂ ಹರಿದಾಡುತ್ತಿದೆ.

    ಸುದೀಪ್ ಅವರ ಆಪ್ತ ಸ್ನೇಹಿತ ಹಾಗೂ ಮ್ಯಾನೇಜರ್ ಕೂಡ ಆಗಿರುವ ಜಾಕ್ ಮಂಜು (Jack Manju) ಈ ಬಾರಿಯ ವಿಧಾನಸಭೆಯ ಚುನಾವಣೆಗೆ ಸ್ಪರ್ಧಿಸಲು ತಯಾರಿ ನಡೆಸಿದ್ದಾರಂತೆ. ಚಿಕ್ಕಪೇಟೆ ಕ್ಷೇತ್ರದಿಂದ ಸ್ಪರ್ಧಿಸಲು ಅವರು ಮನಸ್ಸು ಮಾಡಿದ್ದಾರಂತೆ. ಮಂಜು ಅವರಿಗೆ ಟಿಕೆಟ್ ಕೊಡುವಂತೆ ಸುದೀಪ್ ಬೇಡಿಕೆ ಇಟ್ಟಿದ್ದಾರೆ. ಈ ಕಾರಣಕ್ಕಾಗಿ ಅವರು ಬಿಜೆಪಿಯನ್ನು ಬೆಂಬಲಿಸಲು ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಕುರಿತು ಯಾವುದೇ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

    ಕಿಚ್ಚ ಸುದೀಪ್ ಬಿಜೆಪಿಗೆ ಸೇರಲಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಸ್ಟಾರ್ ನಟರಾಗಿ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿರುವ ಸುದೀಪ್ ರಾಜಕೀಯ ಕ್ಷೇತ್ರಕ್ಕೆ ಬಂದು ಮತ್ತಷ್ಟು ಸೇವೆ ಮಾಡಲಿ ಎಂದು ಹಾರೈಸುತ್ತಿದ್ದಾರೆ. ನಟ ಪ್ರಕಾಶ್ ರಾಜ್ ಈ ನಡೆಗೆ ಬಿಜೆಪಿಯನ್ನು ದೂರಿದ್ದಾರೆ. ಮತ್ತು ಈ ಸುದ್ದಿ ಸುಳ್ಳಾಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

    ಸುದೀಪ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಕಾಶ್ ರೈ ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಗೆ ಅಸಂಖ್ಯಾತ ಜನರು ಪ್ರತಿಕ್ರಿಯಿಸಿದ್ದಾರೆ.

    ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

  • ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ : ಬಿಜೆಪಿ ವಿರುದ್ಧ ಪ್ರಕಾಶ್ ರೈ ಕಿಡಿ

    ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ : ಬಿಜೆಪಿ ವಿರುದ್ಧ ಪ್ರಕಾಶ್ ರೈ ಕಿಡಿ

    ಕಿಚ್ಚ (Kiccha) ಸುದೀಪ್ (Sudeep) ಬಿಜೆಪಿಗೆ (BJP) ಸೇರಲಿದ್ದಾರೆ ಎನ್ನುವ ಸುದ್ದಿ ಹರಡುತ್ತಿದ್ದಂತೆಯೇ ಹಲವರು ಹಲವು ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಸ್ಟಾರ್ ನಟರಾಗಿ ಅಸಂಖ್ಯಾತ ಅಭಿಮಾನಿಗಳ ಹೃದಯದಲ್ಲಿರುವ ಸುದೀಪ್ ರಾಜಕೀಯ ಕ್ಷೇತ್ರಕ್ಕೆ ಬಂದು ಮತ್ತಷ್ಟು ಸೇವೆ ಮಾಡಲಿ ಎಂದು ಹಾರೈಸುತ್ತಿದ್ದಾರೆ. ನಟ ಪ್ರಕಾಶ್ ರಾಜ್ (Prakash Raj) ಈ ನಡೆಗೆ ಬಿಜೆಪಿಯನ್ನು ದೂರಿದ್ದಾರೆ. ಮತ್ತು ಈ ಸುದ್ದಿ ಸುಳ್ಳಾಗಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

    ಸುದೀಪ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಕಾಶ್ ರೈ ‘ಕರ್ನಾಟಕದಲ್ಲಿ ಸೋಲುವ ಭಯದಲ್ಲಿ ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ. ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಗೆ ಅಸಂಖ್ಯಾತ ಜನರು ಪ್ರತಿಕ್ರಿಯಿಸಿದ್ದಾರೆ.

    ನಟ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ ಸುದೀಪ್ ತಾವು ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಪಕ್ಷಗಳಲ್ಲೂ ಅವರ ಆಪ್ತರು ಇರುವುದರಿಂದ ಒಂದು ಪಕ್ಷವನ್ನು ಬೆಂಬಲಿಸುವುದಿಲ್ಲ ಎನ್ನುವ ಮಾತನ್ನು ಪದೇ ಪದೇ ಆಡುತ್ತಾ ಬಂದಿದ್ದಾರೆ. ಆ ಮಾತನ್ನು ಅವರು ಉಳಿಸಿಕೊಳ್ಳುತ್ತಾರೆ ಎನ್ನುವುದು ಆಪ್ತರ ಮಾತು. ಬಿಜೆಪಿ ಪಕ್ಷದಲ್ಲಿ ಸುದೀಪ್ ಅವರ ಹಲವಾರು ಸ್ನೇಹಿತರು ಇದ್ದಾರೆ. ಈ ಕಾರಣಕ್ಕಾಗಿ ಬೆಂಬಲಿಸಬಹುದು ಎನ್ನುವುದು ಆಪ್ತರ ಅನಿಸಿಕೆ.

  • Breaking- ಕಿಚ್ಚ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ : ಆಪ್ತರ ಮಾಹಿತಿ

    Breaking- ಕಿಚ್ಚ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ : ಆಪ್ತರ ಮಾಹಿತಿ

    ಟ ಸುದೀಪ್ (Sudeep) ಇಂದು ಬಿಜೆಪಿಗೆ (BJP) ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ( Basavaraja Bommai) ನೇತೃತ್ವದಲ್ಲಿ ಅವರು ಪಕ್ಷವನ್ನು ಸೇರಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸುದೀಪ್ ಅವರ ಆಪ್ತರ ಪ್ರಕಾರ ಅಧಿಕೃತವಾಗಿ ಬಿಜೆಪಿಗೆ ಸೇರದೆ ಸ್ಟಾರ್ ಪ್ರಚಾರಕರಾಗಿ (Star Campaigner) ಉಳಿಯಲಿದ್ದಾರೆ ಎನ್ನಲಾಗುತ್ತಿದೆ.

    ಈಗಾಗಲೇ ಸುದೀಪ್ ತಾವು ಯಾವುದೇ ಪಕ್ಷದ ಜೊತೆ ಗುರುತಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಎಲ್ಲ ಪಕ್ಷಗಳಲ್ಲೂ ಅವರ ಆಪ್ತರು ಇರುವುದರಿಂದ ಒಂದು ಪಕ್ಷವನ್ನು ಬೆಂಬಲಿಸುವುದಿಲ್ಲ ಎನ್ನುವ ಮಾತನ್ನು ಪದೇ ಪದೇ ಆಡುತ್ತಾ ಬಂದಿದ್ದಾರೆ. ಆ ಮಾತನ್ನು ಅವರು ಉಳಿಸಿಕೊಳ್ಳುತ್ತಾರೆ ಎನ್ನುವುದು ಆಪ್ತರ ಮಾತು. ಬಿಜೆಪಿ ಪಕ್ಷದಲ್ಲಿ ಸುದೀಪ್ ಅವರ ಹಲವಾರು ಸ್ನೇಹಿತರು ಇದ್ದಾರೆ. ಈ ಕಾರಣಕ್ಕಾಗಿ ಬೆಂಬಲಿಸಬಹುದು ಎನ್ನುವುದು ಆಪ್ತರ ಅನಿಸಿಕೆ. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ರಾಜುಗೌಡ, ‘ಸುದೀಪ್ ನನ್ನ ಸಹೋದರನಿದ್ದಂತೆ. ಅವರೊಂದಿಗೆ ಸಾಕಷ್ಟು ಒಡನಾಟ ಹೊಂದಿದ್ದೇನೆ. ಎರಡ್ಮೂರು ಬಾರಿ ನಾನು ಕೂಡ ಬಿಜೆಪಿಗೆ ಸೇರುವಂತೆ ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಅವರು ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತ ಪಡಿಸಿರಲಿಲ್ಲ. ಇಂದು ಮಾಧ್ಯಮಗಳಲ್ಲಿ ಸುದ್ದಿ ನೋಡಿ, ನಾನೇ ಅವರಿಗೆ ಬೆಳಗ್ಗೆ ಫೋನ್ ಮಾಡಿದ್ದೆ. ಒಂದು ರೀತಿಯಲ್ಲಿ ಸಸ್ಪನ್ಸ್ ಸಿನಿಮಾದಂತೆ ಆ ವಿಷಯವನ್ನು ಇಟ್ಟಿದ್ದಾರೆ’ ಎಂದಿದ್ದಾರೆ.

    ಈ ಹಿಂದೆ ರಮ್ಯಾ ಮೂಲಕ ಕಾಂಗ್ರೆಸ್‍ ಗೆ ಕರೆತರುವ ಪ್ರಯತ್ನ ಕೂಡ ನಡೆದಿತ್ತು. ಸುದೀಪ್ ಮನೆಗೆ ಸ್ವತಃ ಡಿ.ಕೆ. ಶಿವಕುಮಾರ್  ಭೇಟಿ ನೀಡಿ ಚರ್ಚೆ ನಡೆಸಿದ್ದರು. ಅಲ್ಲದೇ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಕಾಂಟ್ಯಾಕ್ಟ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಈ ಎಲ್ಲ ಸಂದರ್ಭದಲ್ಲೂ ಕಿಚ್ಚ ರಾಜಕೀಯ ಪ್ರವೇಶ ಮಾಡಿಲ್ಲ ಎಂದೇ ಹೇಳಿದ್ದರು. ಆ ಮಾತನ್ನು ಇವತ್ತು ಉಳಿಸಿಕೊಳ್ಳುತ್ತಾರಾ ಕಾದು ನೋಡಬೇಕು.

  • ಸಿಎಂ ಸಮ್ಮುಖದಲ್ಲಿ ಇಂದು ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ?

    ಸಿಎಂ ಸಮ್ಮುಖದಲ್ಲಿ ಇಂದು ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ?

    ಕಿಚ್ಚ (Kiccha) ಸುದೀಪ್ (Sudeep) ಇಂದು ಬಿಜೆಪಿಗೆ (BJP) ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಚಾರ ರಾಜಕೀಯದ ಪಡಸಾಲೆಯಲ್ಲಿ ಗಿರಕಿ ಹೊಡೆಯುತ್ತಿದೆ. ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.

    ಈ ಕುರಿತು ಸುದೀಪ್ ಯಾವುದೇ ಹೇಳಿಕೆಯನ್ನು ನೀಡದೇ ಇದ್ದರೂ, ಸುದೀಪ್ ಅವರ ಆಪ್ತರು ಹೇಳುವ ಪ್ರಕಾರ  ಕಿಚ್ಚ ಬಿಜೆಪಿಗೆ ಬರುವುದು ಕನ್ಫರ್ಮ್. ಆದರೆ, ಸ್ಟಾರ್ ಪ್ರಚಾರಕರಾಗಿ ಬರಲಿದ್ದಾರಾ ಅಥವಾ ಅಧಿಕೃತವಾಗಿ ಪಕ್ಷವನ್ನು ಸೇರುತ್ತಿದ್ದಾರೆ ಎನ್ನುವ ಗೊಂದಲವಿದೆ. ಈ ಗೊಂದಲಕ್ಕೆ ಮಧ್ಯಾಹ್ನ ತೆರೆಬೀಳಲಿದೆ. ಇದನ್ನೂ ಓದಿ:ಮಾಜಿ ಪತಿ ಹೊಸ ಸಂಬಂಧದ ಬಗ್ಗೆ ನಾನೇನು ಮಾತನಾಡಲೇ ಇಲ್ಲ: ಸಮಂತಾ ಸ್ಪಷ್ಟನೆ

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ರಾಜುಗೌಡ, ‘ಸುದೀಪ್ ನನ್ನ ಸಹೋದರನಿದ್ದಂತೆ. ಅವರೊಂದಿಗೆ ಸಾಕಷ್ಟು ಒಡನಾಟ ಹೊಂದಿದ್ದೇನೆ. ಎರಡ್ಮೂರು ಬಾರಿ ನಾನು ಕೂಡ ಬಿಜೆಪಿಗೆ ಸೇರುವಂತೆ ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಅವರು ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತ ಪಡಿಸಿರಲಿಲ್ಲ. ಇಂದು ಮಾಧ್ಯಮಗಳಲ್ಲಿ ಸುದ್ದಿ ನೋಡಿ, ನಾನೇ ಅವರಿಗೆ ಬೆಳಗ್ಗೆ ಫೋನ್ ಮಾಡಿದ್ದೆ. ಒಂದು ರೀತಿಯಲ್ಲಿ ಸಸ್ಪನ್ಸ್ ಸಿನಿಮಾದಂತೆ ಆ ವಿಷಯವನ್ನು ಇಟ್ಟಿದ್ದಾರೆ’ ಎಂದಿದ್ದಾರೆ.

    ಈ ಹಿಂದೆ ರಮ್ಯಾ ಮೂಲಕ ಕಾಂಗ್ರೆಸ್‍ ಗೆ ಕರೆತರುವ ಪ್ರಯತ್ನ ಕೂಡ ನಡೆದಿತ್ತು. ಸುದೀಪ್ ಮನೆಗೆ ಸ್ವತಃ ಡಿ.ಕೆ. ಶಿವಕುಮಾರ್ (D.K. Shivakumar)  ಭೇಟಿ ನೀಡಿ ಚರ್ಚೆ ನಡೆಸಿದ್ದರು. ಅಲ್ಲದೇ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಕಾಂಟ್ಯಾಕ್ಟ್ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಈ ಎಲ್ಲ ಸಂದರ್ಭದಲ್ಲೂ ಕಿಚ್ಚ ರಾಜಕೀಯ ಪ್ರವೇಶ ಮಾಡಿಲ್ಲ ಎಂದೇ ಹೇಳಿದ್ದರು. ಆ ಮಾತನ್ನು ಇವತ್ತು ಉಳಿಸಿಕೊಳ್ಳುತ್ತಾರಾ ಕಾದು ನೋಡಬೇಕು.

  • ಅನೂಪ್ ಭಂಡಾರಿ ಮುಂದಿನ ಸಿನಿಮಾ ‘ಬಿಲ್ಲ ರಂಗಾ ಬಾಷಾ’ ಫಿಕ್ಸ್: ಸುದೀಪ್ ಹೀರೋ

    ಅನೂಪ್ ಭಂಡಾರಿ ಮುಂದಿನ ಸಿನಿಮಾ ‘ಬಿಲ್ಲ ರಂಗಾ ಬಾಷಾ’ ಫಿಕ್ಸ್: ಸುದೀಪ್ ಹೀರೋ

    ವಿಕ್ರಾಂತ್ ರೋಣ ಸಿನಿಮಾದ ನಂತರ ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ಯಾವ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಅದರಲ್ಲೂ ಅನೂಪ್ ಮತ್ತು ಸುದೀಪ್ (Sudeep) ಮತ್ತೆ ಒಂದಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯೂ ಇದೆ. ಈ ಹಿಂದೆ ಮಾಡಬೇಕಿದ್ದ ಬಿಲ್ಲ ರಂಗಾ ಬಾಷಾ ರಂಗಾ ಬಾಷಾ (Billa Ranga Basha) ಸಿನಿಮಾವನ್ನು ಮತ್ತೆ ಅವರು ಶುರು ಮಾಡಲಿದ್ದಾರೆ ಎನ್ನುವ ಚರ್ಚೆ ಕೂಡ ನಡೆದಿದೆ. ಈ ಎಲ್ಲದಕ್ಕೂ ಉತ್ತರ ನೀಡುವಂತೆ ಅನೂಪ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದಾರೆ.

    ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಷನ್ ನ ‘ವಿಕ್ರಾಂತ್ ರೋಣ’ ದೊಡ್ಡ ಮಟ್ಟದಲ್ಲೇ ಹಿಟ್ ಆಗಲಿದೆ ಎಂದು ಸಿನಿಪಂಡಿತರ ಲೆಕ್ಕಾಚಾರವಾಗಿತ್ತು. ಬಾಕ್ಸ್ ಆಫೀಸಿಗೆ 500 ಕೋಟಿ ಹರಿದು ಬರಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ಹಾಗಂತ ಸಿನಿಮಾ ಸೋಲಲಿಲ್ಲ. ನಿರೀಕ್ಷಿತ ಮಟ್ಟಕ್ಕೆ ಗೆಲ್ಲಲಿಲ್ಲವಷ್ಟೇ. ಹಾಗಾಗಿ ಹಿಂದಿನ ಎಲ್ಲ ನೋವನ್ನು ಹೊಸ ಸಿನಿಮಾದ ಮೂಲಕ ನಿವಾರಿಸಿಕೊಳ್ಳಲು ಅನೂಪ್ ಸಿದ್ಧವಾದಂತೆ ಕಾಣುತ್ತಿದೆ. ಇದನ್ನೂ ಓದಿ ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

    ವಿಕ್ರಾಂತ್ ರೋಣ ಸಿನಿಮಾಗೂ ಮುನ್ನ ಅನೂಪ್ ‘ಬಿಲ್ಲ ರಂಗ ಬಾಷಾ’ ಚಿತ್ರವನ್ನು ಮಾಡಬೇಕಿತ್ತು. ಪೋಸ್ಟರ್ ಕೂಡ ರಿಲೀಸ್ ಆಗಿತ್ತು. ಆದರೆ, ಅದನ್ನು ಪಕ್ಕಕ್ಕಿಟ್ಟು ‘ವಿಕ್ರಾಂತ್ ರೋಣ’ ಚಿತ್ರ ಮಾಡಿದರು. ಕಿಚ್ಚನ ಪಾತ್ರದ ಆಯ್ಕೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು. ಸಾಕಷ್ಟು ಸದ್ದು ಕೂಡ ಮಾಡಿತು. ಕನ್ನಡ ಸಿನಿಮಾವೊಂದು ದುಬೈನಲ್ಲಿ ಭಾರತದ ಬಾವುಟವನ್ನು ಹಾರಿಸುವ ಮೂಲಕ ದಾಖಲೆ ಮಾಡಿತು. ಈಗ ಈ ಜೋಡಿಯ ಮತ್ತೊಂದು ಸಿನಿಮಾದ ಸುಳಿವನ್ನು ಸ್ವತಃ ನಿರ್ದೇಶಕರೇ ನೀಡಿದ್ದಾರೆ.

    ಅನೂಪ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ‘ಬಿ’ ಗಿಯಾಗ್ ಕೂತ್ಕೋಳಿ, ‘ರಂ’ ಪಾಟ ಶುರುವಾಗೋಕ್ ಸ್ವಲ್ಪ ಸಮಯ ಬೇಕು. ‘ಬಾ’ ಡೂಟದ್ ಜೊತೆ ಬರ್ತೀವಿ. ಅಲ್ಲಿವರ್ಗೂ ಎಂದಿನ ಹಾಗೆ ತಾಳ್ಮೆ ಇರ್ಲಿ’ ಎಂದು ಬರೆದುಕೊಂಡಿದ್ದಾರೆ. ಕೆಲವು ಅಕ್ಷರಗಳಿಗೆ ಗ್ಯಾಪ್ ನೀಡುವ ಮೂಲಕ ತಮ್ಮ ಮುಂದಿನ ಸಿನಿಮಾ ಯಾವುದು ಎನ್ನುವುದರ ಸುಳಿವು ಬಿಟ್ಟು ಕೊಟ್ಟಿದ್ದಾರೆ.

  • ಪ್ರಧಾನಿ ಮೋದಿ ಔತಣಕೂಟಕ್ಕೆ ಕಿಚ್ಚನಿಗೂ ಆಹ್ವಾನವಿತ್ತು: ಜೊತೆಗೆ ಜ್ವರವೂ ಇತ್ತು

    ಪ್ರಧಾನಿ ಮೋದಿ ಔತಣಕೂಟಕ್ಕೆ ಕಿಚ್ಚನಿಗೂ ಆಹ್ವಾನವಿತ್ತು: ಜೊತೆಗೆ ಜ್ವರವೂ ಇತ್ತು

    ಸ್ಯಾಂಡಲ್ ವುಡ್ ಹಲವು ಸಿಲೆಬ್ರಿಟಿ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಔತಣಕೂಟದಲ್ಲಿ ಭಾಗಿಯಾಗಿದ್ದರು. ನಟರಾದ ಯಶ್, ರಿಷಬ್ ಶೆಟ್ಟಿ, ನಿರ್ಮಾಪಕರಾದ ವಿಜಯ್ ಕಿರಗಂದೂರು ಮತ್ತು ಅಶ್ವಿನಿ ಪುನೀತ್ ರಾಜ್ ಕುಮಾರ್, ಕಾಮಿಡಿಯನ್ ಶ್ರದ್ಧಾ ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಇವರಷ್ಟೇ ಭಾಗಿಯಾಗಿದ್ದು ಚರ್ಚೆಗೂ ಕಾರಣವಾಗಿತ್ತು.

    ಕನ್ನಡ ಸಿನಿಮಾ ರಂಗದಲ್ಲಿ ಇನ್ನೂ ಸಾಧಕರು ಇರುವಾಗ ಅವರನ್ನು ಯಾಕೆ ಕಡೆಗಣಿಸಲಾಯಿತು ಎನ್ನುವ ಪ್ರಶ್ನೆ ಕೂಡ ಮೂಡಿತ್ತು. ಅದರಲ್ಲೂ ಶಿವರಾಜ್ ಕುಮಾರ್, ಸುದೀಪ್ ಸೇರಿದಂತೆ ಹಲವರನ್ನು ಮೋದಿ ಯಾಕೆ ಕರೆಯಲಿಲ್ಲ ಎನ್ನುವ ಚರ್ಚೆ ಜೋರಾಗಿತ್ತು. ಇದೀಗ ಸುದೀಪ್ ಅದಕ್ಕೆ ಪ್ರತಿಕ್ರಿಯೆ ಎನ್ನುವಂತೆ ಕೆಲ ಮಾತುಗಳನ್ನು ಆಡಿದ್ದಾರೆ. ಮೋದಿ ಅವರಿಂದ ತಮಗೂ ಆಹ್ವಾನವಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಮದುವೆಯ ಬಳಿಕ ಸಿಹಿ ಸುದ್ದಿ ನೀಡಿದ ಸಿದ್-ಕಿಯಾರಾ ಜೋಡಿ

    ಪ್ರಧಾನಿ ನರೇಂದ್ರ ಮೋದಿ ಅವರು ತಮಗೂ ಆಹ್ವಾನ ನೀಡಿದ್ದರು. ಆದರೆ, ಜ್ವರದ ಕಾರಣದಿಂದಾಗಿ ನಾನು ಹೋಗಲಿಲ್ಲ. ಪ್ರಧಾನಿಯನ್ನು ಭೇಟಿ ಮಾಡಲು ಹಲವು ಪ್ರೊಟೊಕಾಲ್ ಇರುತ್ತವೆ. ಶೀತ ಮತ್ತು ಜ್ವರ ಇದ್ದ ಕಾರಣದಿಂದಾಗಿ ಅವರನ್ನು ಭೇಟಿ ಮಾಡಲಿಲ್ಲ. ಆರ್.ಟಿ.ಪಿ.ಸಿ.ಆರ್ ಮಾಡಿಸಬೇಕಿತ್ತು. ಜ್ವರ ಇದ್ದರಿಂದ ಭೇಟಿ ಸಾಧ್ಯವಾಗಲ್ಲ ಅನಿಸಿ ಹೋಗುವುದನ್ನು ಬಿಟ್ಟೆ ಎಂದು ಸುದೀಪ್ ಹೇಳಿಕೊಂಡಿದ್ದಾರೆ.

    ಅಲ್ಲದೇ ಅವರು ಇದೀಗ ಕ್ರಿಕೆಟ್ ಪಂದ್ಯಾವಳಿಯಲ್ಲೂ ಬ್ಯುಸಿಯಾಗಿದ್ದಾರೆ. ದಿನವೂ ಪ್ರಾಕ್ಟಿಸ್ ಮ್ಯಾಚ್ ನಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಇದೇ ತಿಂಗಳಲ್ಲೇ ಪಂದ್ಯಾವಳಿ ಕೂಡ ಇರುವುದರಿಂದ ಸುದೀಪ್, ಅದರಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k