Tag: kireeti

  • ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ

    ರೆಡ್ಡಿ ಮಗನ ಸಿನಿಮಾದಲ್ಲಿ ಶ್ರೀಲೀಲಾ- 3 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ನಟಿ

    ನ್ನಡದ ನಟಿ ಶ್ರೀಲೀಲಾ (Sreeleela) ತೆಲುಗು, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ 3 ವರ್ಷಗಳ ಬಳಿಕ ಮತ್ತೆ ಕನ್ನಡ ಸಿನಿಮಾದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಜನಾರ್ದನ ರೆಡ್ಡಿ ಪುತ್ರ ಕಿರೀಟಿಗೆ ನಾಯಕಿಯಾಗಿ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ದರ್ಶನ ಕೊಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ರಣವೀರ್ ಸಿಂಗ್ ನಟನೆಯ ‘ಡಾನ್ 3’ ಸಿನಿಮಾ ಶುರುವಾಗೋದು ಯಾವಾಗ?- ಸಿಕ್ತು ಅಪ್‌ಡೇಟ್

    ಶ್ರೀಲೀಲಾ ಮತ್ತು ಕಿರೀಟಿ ನಟನೆಯ ‘ಜೂನಿಯರ್’ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಬಿಡುಗಡೆಯಾಗಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ‘ಜೂನಿಯರ್’ ಸಿನಿಮಾ ಜುಲೈ 18ಕ್ಕೆ ರಿಲೀಸ್ ಆಗಲಿದೆ. ಅದಷ್ಟೇ ಅಲ್ಲ, ಇದೇ ತಿಂಗಳ 19ಕ್ಕೆ ಜೂನಿಯರ್ ಸಿನಿಮಾ ಮೊದಲ ಸಾಂಗ್ ಬಿಡುಗಡೆಯಾಗಲಿದೆ. ಈ ಸಿನಿಮಾ ಕಿಸ್ಸಿಕ್ ಬೆಡಗಿ ಶ್ರೀಲೀಲಾ ಕನ್ನಡಕ್ಕೆ ಬರುತ್ತಿದ್ದಾರೆ. ಇದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಇದನ್ನೂ ಓದಿ:ಕಾರ್ತಿಕ್ ಆರ್ಯನ್ ಜೊತೆ ಶ್ರೀಲೀಲಾ ಸೆಲ್ಫಿ- ಡೇಟಿಂಗ್ ಬಗ್ಗೆ ಹಿಂಟ್ ಕೊಟ್ರಾ ಈ ಜೋಡಿ?

    ‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ‘ಜೂನಿಯರ್’ ಸಿನಿಮಾ ತಯಾರಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಚಿತ್ರ ಮೂಡಿ ಬಂದಿದೆ. ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್.

    ಕಿರೀಟಿ ಜೊತೆ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್‌ಮುಖ್, ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಜೂನಿಯರ್’ ಸಿನಿಮಾದ ತಾಂತ್ರಿಕ ಬಳಗ ಶ್ರೀಮಂತಿಕೆಯಿಂದ ಕೂಡಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್ ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.

  • ಗಾಲಿ ಜನಾರ್ದನ ರೆಡ್ಡಿ ಮಗನ ಸಿನಿಮಾ ಲಾಂಚ್ ಗೆ ರಾಜಮೌಳಿ ಅತಿಥಿ

    ಗಾಲಿ ಜನಾರ್ದನ ರೆಡ್ಡಿ ಮಗನ ಸಿನಿಮಾ ಲಾಂಚ್ ಗೆ ರಾಜಮೌಳಿ ಅತಿಥಿ

    ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ಅದ್ಧೂರಿಯಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡುತ್ತಿದ್ದಾರೆ. ಕಿರೀಟಿ ಪಟ್ಟಾಭಿಷೇಕಕ್ಕಾಗಿ ಜನಾರ್ದನ ರೆಡ್ಡಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ಈಗಾಗಲೇ ಹೆಸರಾಂತ ನಿರ್ಮಾಣ ಸಂಸ್ಥೆಯು ಈ ಚಿತ್ರವನ್ನು ನಿರ್ಮಾಣ ಮಾಡಲು ಮುಂದೆ ಬಂದಿದ್ದು, ಇಂದು ಅಧಿಕೃತವಾಗಿ ಕಿರೀಟಿ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ. ಅದಕ್ಕಾಗಿ ಕಾರ್ಯಕ್ರವೂ ರೆಡಿಯಾಗಿದೆ. ಇದನ್ನೂ ಓದಿ : ಏಳು ತಿಂಗಳ ಗರ್ಭಿಣಿಗೆ ಇದೆಂಥ ಟಾರ್ಚರ್? : ಶಾಕ್ ನಲ್ಲಿ ನಟಿ ಸಂಜನಾ

    ಸಿನಿಮಾರಂಗಕ್ಕೆ ಲಾಂಚ್ ಆಗುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಹೆಸರಾಂತ ನಿರ್ದೇಶಕ ರಾಜಮೌಳಿ ಬೆಂಗಳೂರಿಗೆ ಆಗಮಿಸುತ್ತಾರೆ. ಜತೆಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕೂಡ ಭಾಗಿಯಾಗಲಿದ್ದಾರೆ. ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕರನ್ನು ಈ ಕಾರ್ಯಕ್ರಮಕ್ಕಾಗಿ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ : ರವಿಚಂದ್ರನ್ ಸಿನಿಮಾ ಹಿರೋಯಿನ್ ಈಗ ನಿರ್ದೇಶಕಿ

    ಕಿರೀಟಿ ಪಕ್ಕಾ ತಯಾರಿ ಮಾಡಿಕೊಂಡೆ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಸಾಹಸ ಕಲೆಗಳನ್ನು ಕಲಿತಿದ್ದಾರಂತೆ. ನುರಿತ ನಿರ್ದೇಶಕರಿಂದಲೇ ನಟನಾ ತರಬೇತಿ ಕೂಡ ಪಡೆದಿದ್ದಾರೆ. ಎಲ್ಲ ತಯಾರಿ ಮಾಡಿಕೊಂಡೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ : ಮಾರ್ಚ್ 27ಕ್ಕೆ ಕೆಜಿಎಫ್ 2 ಟ್ರೈಲರ್ ರಿಲೀಸ್

    ಸಿನಿಮಾ ರಂಗಕ್ಕೆ ಬರುತ್ತಿರುವ ಕಿರೀಟಿ, ಓದಿನಲ್ಲೂ ಹಿಂದೆ ಬಿದ್ದಿಲ್ಲ. ಲಂಡನ್ ನಲ್ಲಿ ರಾಜಕೀಯ ಶಾಸ್ತ್ರ ಮತ್ತು ಬ್ಯುಸಿನೆಸ್ ಮ್ಯಾನೇಜಮೆಂಟ್ ಕುರಿತಾಗಿ ಪದವಿ ಮಾಡಿದ್ದಾರೆ. ಪದವಿ ಮುಗಿಸಿಕೊಂಡೇ ಸಿನಿಮಾ ಮೇಲಿನ ಆಸಕ್ತಿಯಿಂದ ಚಿತ್ರರಂಗ ಪ್ರವೇಶ ಮಾಡಿದ್ದಾರೆ.