ಲಂಡನ್‌ನಲ್ಲಿ ರಾಹುಲ್‌ಗಾಂಧಿ ಮಾಡಿರುವ ಭಾಷಣಗಳ ವಿರುದ್ಧ ಕಿರಣ್ ರಿಜಿಜು ಕಿಡಿಕಾರಿದ್ದಾರೆ. ತನ್ನನ್ನು ತಾನು ಕಾಂಗ್ರೆಸ್ ರಾಜಕುಮಾರ ಎಂದು ಹೇಳಿಕೊಳ್ಳುವ ವ್ಯಕ್ತಿ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಅವರು ದೇಶದ ಏಕತೆಗೆ ಅತ್ಯಂತ ಅಪಾಯಕಾರಿಯಾಗಿ ಮಾರ್ಪಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗೆಳತಿಯನ್ನು ಖುಷಿ ಪಡಿಸಲು ಹೋಗಿ ಯಡವಟ್ಟು ಮಾಡಿಕೊಂಡ 41ರ ಗೆಳೆಯ
ರಾಹುಲ್ ಗಾಂಧಿಗೆ ದೇಶದ ಬಗ್ಗೆ ನಿಯತ್ತು ಇದ್ದಿದ್ರೆ, ವಿದೇಶದಲ್ಲಿ ಭಾರತವನ್ನ ಟೀಕೆ ಮಾಡ್ತಿರಲಿಲ್ಲ ಎಂದು ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ದೇಶದ್ರೋಹದ ಕೆಲಸ ಮಾಡಿದ್ದಾರೆ. ಅವರು ಈ ಕೂಡಲೇ ದೇಶದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ನವದೆಹಲಿ: ಸುಪ್ರೀಂ ಕೋರ್ಟ್ (Supreme Court) ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮತ್ತಷ್ಟು ಮುಂದುವರಿದಿದೆ. ನ್ಯಾಯಮೂರ್ತಿಗಳನ್ನು ನೇಮಿಸುವ ಕೊಲಿಜಿಯಂ (Collegium) ವ್ಯವಸ್ಥೆಯಲ್ಲಿ ಸರ್ಕಾರದ ಪ್ರತಿನಿಧಿಗೂ ಅವಕಾಶ ಕಲ್ಪಿಸಬೇಕೆಂದು ಕೋರಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಪತ್ರ ಬರೆದಿದ್ದಾರೆ.
ನ್ಯಾಯಮೂರ್ತಿಗಳ ನೇಮಕದಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ಉತ್ತರದಾಯಿತ್ವವನ್ನು ಕಾಪಾಡಲು ಕೇಂದ್ರ ಸರ್ಕಾರದ ಪ್ರತಿನಿಧಿಗೂ ಕೊಲಿಜಿಯಂನಲ್ಲಿ ಅವಕಾಶ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ಡಿ.ವೈ. ಚಂದ್ರಚೂಡ್ (CJI D.Y. Chandrachud) ಅವರಿಗೆ ಪತ್ರ ಬರೆದಿದ್ದಾರೆ.
ತಮ್ಮ ಪತ್ರದಲ್ಲಿ ರಿಜಿಜು ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗವನ್ನು(NJAC) 2015ರಲ್ಲಿ ರದ್ದು ಮಾಡುವಾಗ ನ್ಯಾಯಾಧೀಶರ ನೇಮಕ ಸಂಬಂಧದ ಪುನರ್ ರಚನೆಯ ಬಗ್ಗೆ ಸುಪ್ರೀಂ ಸಂವಿಧಾನಿಕ ಪೀಠ ಉಲ್ಲೇಖಿಸಿತ್ತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
I hope you honour Court's direction! This is precise follow-up action of the direction of Supreme Court Constitution Bench while striking down the National Judicial Appointment Commission Act. The SC Constitution Bench had directed to restructure the MoP of the collegium system. https://t.co/b1l0jVdCkJ
ಈ ಟೀಕೆಗೆ ಪ್ರತಿಕ್ರಿಯಿಸಿದ ಕಿರಣ್ ರಿಜಿಜು, ನ್ಯಾಯಾಲಯದ ನಿರ್ದೇಶನವನ್ನು ನೀವು ಗೌರವಿಸುತ್ತೀರಿ ಎಂದು ಭಾವಿಸುತ್ತೇವೆ. ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗದ ಕಾಯ್ದೆಯನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸಂವಿಧಾನ ಪೀಠದ ನಿರ್ದೇಶನದಂತೆ ಪತ್ರ ಬರೆಯಲಾಗಿದೆ. ಸಾಂವಿಧಾನಿಕ ಪೀಠವು ಕೊಲಿಜಿಯಂ ವ್ಯವಸ್ಥೆಯ ಕಾರ್ಯವಿಧಾನವನ್ನು ಪುನರ್ ಚಿಸುವಂತೆ ಸೂಚಿಸಿತ್ತು ಎಂದು ತಿರುಗೇಟು ನೀಡಿದ್ದಾರೆ.
ಕೊಲಿಜಿಯಂ ವ್ಯವಸ್ಥೆಯ ಮೂಲಕ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಿಸಲಾಗುತ್ತದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಜೊತೆ ಐವರು ನ್ಯಾಯಾಧೀಶರು ಕೊಲಿಜಿಯಂ ಸದಸ್ಯರಾಗಿರುತ್ತಾರೆ. ಪ್ರಸ್ತುತ ಸಿಜೆಐ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎಸ್‌ಕೆ ಕೌಲ್, ಕೆಎಂ ಜೋಸೆಫ್, ಎಂಆರ್ ಶಾ, ಅಜಯ್ ರಸ್ತೋಗಿ ಮತ್ತು ಸಂಜೀವ್ ಖನ್ನಾ ಅವರನ್ನು ಕೊಲಿಜಿಯಂ ಒಳಗೊಂಡಿದೆ. ಇದನ್ನೂ ಓದಿ: ನೋಟು ನಿಷೇಧ – ಸಂಸತ್ತು ಇಲ್ಲದೇ ಪ್ರಜಾಪ್ರಭುತ್ವ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ನ್ಯಾ,ನಾಗರತ್ನ
ಧನಕರ್ ಟೀಕೆ:
83ನೇ ಅಖಿಲ ಭಾರತ ಸ್ಪೀಕರ್‌ಗಳ ಸಮ್ಮೇಳನ ಉದ್ದೇಶಿಸಿ ಮಾತನಾಡಿದ್ದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಪ್ರಜಾಪ್ರಭುತ್ವ ವ್ಯವ್ಯವಸ್ಥೆಯಲ್ಲಿ ಶಾಸನಗಳನ್ನು ರೂಪಿಸುವ ಸಂಸತ್ತೇ ಸಾರ್ವಭೌಮ. ಶಾಸನ ರಚನೆಯಲ್ಲಿ ನ್ಯಾಯಾಂಗವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ನ್ಯಾಯಾಂಗ ವ್ಯವಸ್ಥೆಯ ವಿರುದ್ಧ ಕಿಡಿಕಾರಿದ್ದರು.
ಸಂಸತ್ತು ಸಂವಿಧಾನದ ‘ಮೂಲ ರಚನೆ’ಯನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ವಿಧಿಸಿರುವ ನಿರ್ಬಂಧವನ್ನು ನಾನು ಒಪ್ಪುವುದಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಹಿಂದೆ ಸಿಜೆಐ ಡಿ.ವೈ.ಚಂದ್ರಚೂಡ್ ಅವರ ಸಮ್ಮುಖದಲ್ಲೇ ಕೊಲಿಜಿಯಂ ರದ್ದುಗೊಳಿಸಿದ ನಿರ್ಧಾರದ ವಿರುದ್ಧ ಧನಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಸತ್ ಅಂಗೀಕರಿಸಿದ ಕಾನೂನನ್ನು ಸುಪ್ರೀಂ ಕೋರ್ಟ್ ರದ್ದು ಮಾಡುತ್ತದೆ. ಈ ರೀತಿ ಘಟನೆ ಪ್ರಪಂಚದಲ್ಲಿ ಎಲ್ಲೂ ಈವರೆಗೆ ನಡೆದಿಲ್ಲ ಎಂದು ನೇರವಾಗಿಯೇ ಹೇಳಿದ್ದರು.
ಸಾಂವಿಧಾನಿಕ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚಿಸುವಾಗ ಇಡೀ ಸಂಸತ್ತು ಅವಿರೋಧವಾಗಿ ಎನ್‌ಜೆಎಸಿ ಕಾಯ್ದೆಯ ಪರ ಮತ ಹಾಕಿತ್ತು. ರಾಜ್ಯಸಭೆಯಲ್ಲೂ ಅವಿರೋಧವಾಗಿ ಅಂಗೀಕಾರವಾಗಿತ್ತು. ಒಬ್ಬರು ಮಾತ್ರ ಗೈರಾಗಿದ್ದರು ಎಂದು ತಿಳಿಸಿದ್ದರು.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಶೀಲನೆಯನ್ನು ಹೊಸ ಕಾನೂನು ಆಯೋಗವು ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ರಿಜಿಜು ಅವರು, ವಿವಿಧ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳ ನಿಬಂಧನೆಗಳ ಆಳವಾದ ಅಧ್ಯಯನದ ಅಗತ್ಯವಿದೆ. ಹೀಗಾಗಿ ಈ ವಿಷಯದ ಸೂಕ್ಷ್ಮತೆಯ ಅಂಶವನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನು ಆಯೋಗದ ತೆಕ್ಕೆಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಡಿಸೆಂಬರ್ 2020ರಲ್ಲಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗೋವಾದ ವಿಮೋಚನೆಯ 60ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಗೋವಾದ ಸಾಮಾನ್ಯ ನಾಗರಿಕ ಸಂಹಿತೆಯನ್ನು ಶ್ಲಾಘಿಸಿದ್ದರು.
ವಿವಿಧ ಧಾರ್ಮಿಕ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳನ್ನು ಬದಲಿಸಲು ಏಕರೂಪ ನಾಗರಿಕ ಸಂಹಿತೆ ಜಾರಿ ವಿಷಯವು ಆಡಳಿತಾರೂಢ ಬಿಜೆಪಿಯ ಪ್ರಮುಖ ರಾಜಕೀಯ ಗುರಿಗಳಲ್ಲಿ ಒಂದಾಗಿದೆ. ಪಕ್ಷದ 2019ರ ಪ್ರಣಾಳಿಕೆಯನ್ನು ಈ ವಿಷಯ ಕಾಣಿಸಿಕೊಂಡಿತ್ತು.
ನವದೆಹಲಿ: ಭಾರತೀಯ ಯೋಧರು ಬಿಡುವಿನ ವೇಳೆಯಲ್ಲಿ ಭರ್ಜರಿ ಸ್ಟೆಪ್ ಹಾಕಿದ್ದು, ಯೋಧರ ಜೋಶ್ ಕಂಡು ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಲಡಾಖ್‍ನ ಪಾಂಗೋಂಗ್ ತ್ಸೋ ಸರೋವರದ ಬಳಿ ಯೋಧರು ಭರ್ಜರಿಯಾಗಿ ಡ್ಯಾನ್ಸ್ ಮಾಡುವ ವೀಡಿಯೋವನ್ನು ಕೇಂದ್ರ ಸಚಿವ ಕಿರೆನ್ ರಿಜಿಜು ಮಾರ್ಚ್ 25ರಂದು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಈ ವೀಡಿಯೋ ಇದೀಗ ವೈರಲ್ ಆಗಿದೆ. ಸಾಲುಗಳನ್ನು ಬರೆದಿರುವ ಬಿಜೆಪಿ ಕೇಂದ್ರ ಸಚಿವರು, ಯೋಧರು ಈ ರೀತಿ ಆನಂದಿಸುವುದನ್ನು ನೋಡಲು ಹೆಮ್ಮೆಯಾಗುತ್ತದೆ. ಭಾರತೀಯ ಸೇನೆಯ ಗೋರ್ಖಾದ ಕೆಚ್ಚೆದೆಯ ಯೋಧರು ಹಾಗೂ ಸಿಬ್ಬಂದಿ ಲಡಾಖ್‍ನ ಪಾಂಗೋಂಗ್ ತ್ಸೋ ಸರೋವರದ ಬಳಿ ಫುಲ್ ಮ್ಯೂಸಿಕ್‍ನೊಂದಿಗೆ ಡ್ಯಾನ್ಸ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
It feels great whenever soldiers enjoy! Brave Indian Army Gorkha Jawans and colleagues with full music at Pangong Tso in Ladakh. pic.twitter.com/d56Qjl3RhN
ವೀಡಿಯೋದಲ್ಲಿ ಯೋಧರು ಪೆಪ್ಪಿ ಹಾಡಿಗೆ ಫುಲ್ ಡ್ಯಾನ್ಸ್ ಮಾಡಿದ್ದಾರೆ. ಇಬ್ಬರು ಯೋಧರು ಫುಲ್ ಜೋಶ್ ನಲ್ಲಿ ಕುಣಿದು ಕುಪ್ಪಳಿಸಿದ್ದು, ಉಳಿದವರು ಇದನ್ನು ಕಂಡು ಫುಲ್ ಎಂಜಾಯ್ ಮಾಡಿದ್ದಾರೆ. ಈ ವೀಡಿಯೋಗೆ ನೆಟ್ಟಿಗರು ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದು, ಹಲವು ರೀ ಟ್ವೀಟ್ ಮಾಡಿ ಹಾಗೂ ಕಮೆಂಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.
ಈ ವೀಡಿಯೋ 1 ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದಿದ್ದು, ಸಾವಿರಕ್ಕೂ ಅಧಿಕ ಜನ ರೀಟ್ವೀಟ್ ಮಾಡಿದ್ದಾರೆ. 13 ಸಾವಿರಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದಾರೆ. ಅಲ್ಲದೆ ಹಲವರು ಕಮೆಂಟ್ ಮಾಡುವ ಮೂಲಕ ತಮ್ಮ ಖುಷಿ, ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸುಂದರ ವೀಡಿಯೋವನ್ನು ಫುಲ್ ಎಂಜಾಯ್ ಮಾಡಿದ್ದೇವೆ. ಯೋಧರ ಈ ಸ್ಪಿರಿಟ್ ತುಂಬಾ ಇಷ್ಟವಾಯಿತು ಎಂದು ಹೇಳಿದ್ದಾರೆ.
ಬಳಕೆದಾರರೊಬ್ಬರು ತುಂಬಾ ಸುಂದರವಾಗಿದೆ, ನಿಜವಾದ ಸಂತೋಷ ಎಂದರೆ ಇದು ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಲವ್ಡ್ ಇಟ್, ದೇವರ ಆಶೀರ್ವಾದ ನಿಮ್ಮ ಮೇಲೆ ಸದಾ ಇರಲಿ ಸಹೋದರರೇ, ಜೈ ಹಿಂದ್ ಎಂದು ತಿಳಿಸಿದ್ದಾರೆ.
ಶಿವಮೊಗ್ಗ: ಭವಿಷ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕರ್ನಾಟಕ ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದರು.
ಸಹ್ಯಾದ್ರಿ ಕಾಲೇಜಿನಲ್ಲಿ ಸುಮಾರು 5 ಕೋಟಿ ರೂ. ವೆಚ್ಚದ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಕಿರಣ್ ರಿಜಿಜು, ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಉತ್ತಮ ವಾತಾವರಣವಿದೆ. ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಒಂದೊಂದಾಗಿ ಈಡೇರಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ ದೇಶದಲ್ಲೇ ಉತ್ತಮ ಕ್ರೀಡಾ ಕೇಂದ್ರವಾಗಿ ರೂಪಿಸಲು ಎಲ್ಲಾ ನೆರವು ಒದಗಿಸಲಾಗುವುದು. ಮುಂದಿನ ಒಲಂಪಿಕ್ಸ್ ನಲ್ಲಿ ಕರ್ನಾಟಕದಿಂದ ಹೆಚ್ಚಿನ ಚಿನ್ನದ ಪದಕದ ನಿರೀಕ್ಷೆ ಹೊಂದಿರುವುದಾಗಿ ತಿಳಿಸಿದರು.
ನಮ್ಮ ದೇಶದಲ್ಲಿ ವಿಶ್ವದಲ್ಲೇ ಅತಿ ಹೆಚ್ಚಿನ ಸಂಖ್ಯೆಯ ಯುವ ಜನಸಂಖ್ಯೆಯಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡಲು ನಮಗೆ ಉತ್ತಮ ಅವಕಾಶಗಳಿವೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಖೇಲೋ ಇಂಡಿಯಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ನೆರವು ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಇದರ ಗರಿಷ್ಟ ಪ್ರಯೋಜನವನ್ನು ಯುವ ಜನಾಂಗ ಪಡೆದುಕೊಳ್ಳಬೇಕು ಎಂದರು.
2028ರ ಒಲಿಂಪಿಕ್ಸ್ ನಲ್ಲಿ ಪದಕ ಪಟ್ಟಿಯಲ್ಲಿ ನಮ್ಮ ದೇಶ ಟಾಪ್ 10ರ ಒಳಗೆ ಇರುವುದು ನಮ್ಮ ಗುರಿ. ಮುಂದಿನ ವರ್ಷಗಳಲ್ಲಿ ಭಾರತದಲ್ಲಿ ಒಲಂಪಿಕ್ಸ್ ಆಯೋಜನೆ ಮಾಡುವ ಕುರಿತು ಈಗಾಗಲೇ ಸಿದ್ಧತೆಗಳನ್ನು ವಿವಿಧ ಹಂತಗಳಲ್ಲಿ ಪ್ರಾರಂಭಿಸಲಾಗಿದೆ. ದೇಶದ ಸುಮಾರು ಶೇ.70ರಷ್ಟು ಮಂದಿ ಯಾವುದೇ ರೀತಿಯ ದೈಹಿಕ ವ್ಯಾಯಾಮಗಳನ್ನು ನಡೆಸುತ್ತಿಲ್ಲ. ಆರೋಗ್ಯ ಪೂರ್ಣರಾಗಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಫಿಟ್ ಇಂಡಿಯಾ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಸಹ್ಯಾದ್ರಿ ಕಾಲೇಜಿಗೆ ಅಗತ್ಯವಾದ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದು ನುಡಿದರು.
ಯುವಜನ ಸೇವಾ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ, ಕುವೆಂಪು ವಿಶ್ವವಿದ್ಯಾಲಯ ಕುಲಪತಿ ವೀರಭದ್ರಪ್ಪ, ಹೆಚ್ಚುವರಿ ಅಪರ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.
ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಿನಿಮಾ ನಟ, ನಟಿಯರು, ಉದ್ಯಮಿಗಳು, ಕ್ರೀಡಾಪಟುಗಳು, ಕ್ರಿಕೆಟಿಗರು ಸಹಾಯ ನೀಡಲು ಒಬ್ಬೊಬ್ಬರೇ ಮುಂದೆ ಬರುತ್ತಿದ್ದಾರೆ. ಸಚಿನ್ ತೆಂಡೂಲ್ಕರ್, ಬಿಸಿಸಿಐ, ಸೌರವ್ ಗಂಗೂಲಿ, ಸುರೇಶ್ ರೈನಾ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಸಂಸದ ಗೌತಮ್ ಗಂಭೀರ್ 1 ಕೋಟಿ ರೂ. ನೀಡಿದ್ದಾರೆ.
ಬಿಜೆಪಿ ಸಂಸದ ಗಂಭೀರ್ ಅವರು ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಗೆ 1 ಕೋಟಿ ರೂ. ಜಮಾ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅವರು ತಮ್ಮ ಒಂದು ತಿಂಗಳ ವೇತನವನ್ನೂ ದಾನ ಮಾಡಿದ್ದಾರೆ. ಜೊತೆಗೆ ಗಂಭೀರ್ ಅವರು ನಡೆಸುತ್ತಿರುವ ಎನ್‍ಜಿಒ ಬಡವರಿಗೆ ಉಚಿತವಾಗಿ ಆಹಾರವನ್ನು ನೀಡುತ್ತಿದೆ.
It is time that all resources of the country be directed towards fighting COVID-19. Have released INR 1 Crore from my MP LAD fund towards relief efforts. Have also donated one month's salary towards the Central Relief Fund.
ಕ್ರೀಡಾ ಸಚಿವ ರಿಜಿಜು ಅವರು ಟ್ವೀಟ್ ಮಾಡಿ, ನಾನು ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಗೆ ಸಂಸತ್ತಿನ ಸದಸ್ಯರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯ ನಿಧಿ (ಎಂಪಿಎಲ್‍ಡಿಎಸ್)ನಿಂದ ಒಂದು ಕೋಟಿ ರೂ. ಜಮಾ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಜೊತೆಗೆ ತಮ್ಮ ಒಂದು ತಿಂಗಳ ವೇತನವನ್ನೂ ದಾನ ಮಾಡಿದ್ದಾರೆ. ಇತ್ತ ಟೀಂ ಇಂಡಿಯಾ ಕ್ರಿಕೆಟರ್ ಅಜಿಂಕ್ಯ ರಹಾನೆ 10 ಲಕ್ಷ ರೂ. ದೇಣಿಗೆ ಕೊಟ್ಟಿದ್ದಾರೆ.
ಕೊರೊನಾ ವೈರಸ್ ವಿಶ್ವಾದ್ಯಂತ 195 ದೇಶಗಳಿಗೆ ಹರಡಿದ್ದು, ತಮ್ಮ ದೇಶವನ್ನು ರಕ್ಷಿಸಲು ಅಲ್ಲಿಯ ಆಟಗಾರರು, ಸೆಲೆಬ್ರಿಟಿಗಳು, ಉದ್ಯಮಿಗಳು ಸರ್ಕಾರಕ್ಕೆ ನೆರವು ನೀಡುತ್ತಿದ್ದಾರೆ. ಫುಟ್ಬಾಲ್ ಆಗದಂತಕಥೆ ಕ್ರಿಸ್ಟಿಯಾನೊ ರೊನಾಲ್ಡೊ, ತರಬೇತುದಾರ ಮೌರಿಜಿಯೊ ಸಾರಿ. ಇಟಲಿಯನ್ ಫುಟ್ಬಾಲ್ ಕ್ಲಬ್ ಯುವೆಂಟಸ್ ಪರ ಆಡಿರುವ ಇತರ ಆಟಗಾರರು 100 ಮಿಲಿಯನ್ ಯುರೋಗಳನ್ನು (ಸುಮಾರು 753 ಕೋಟಿ ರೂ.) ದೇಣಿಗೆ ನೀಡಿದ್ದಾರೆ.
I'm depositing the amount now… माननीय प्रधानमंत्री श्री @narendramodi जी ने यह आव्हान किया है कि इस महामारी को देखते हुए भाजपा के सभी सांसद अपनी सांसद निधि से ₹1,00,00,000 (एक करोड़) की निधि प्रधानमंत्री राष्ट्रीय राहत कोष में देंगे। https://t.co/F4kUg7ihxY
ರೊನಾಲ್ಡೊ ಅವರು ಮೂರು ತಿಂಗಳ ಸಂಬಳ 10 ಮಿಲಿಯನ್ ಯುರೋಗಳಷ್ಟು (ಸುಮಾರು 84 ಕೋಟಿ ರೂ.)ವನ್ನು ದೇಣಿಗೆ ನೀಡಿದ್ದಾರೆ. ಇತ್ತೀಚೆಗೆ ಡೇನಿಯಲ್ ರುಗಾನಿ, ಬ್ಲೇಸ್ ಮಾಟುಡಿ ಮತ್ತು ಪಾವೊಲೊ ದಿಬಾಲಾ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಪೈಕಿ ದಿಬಾಲಾ ಚೇತರಿಸಿಕೊಂಡಿದ್ದು, ಉಳಿದ ಇಬ್ಬರು ಆಟಗಾರರು ಹೋಮ್ ಕ್ವಾರೆಂಟೈನ್‍ನಲ್ಲಿ ಇದ್ದಾರೆ. ಇಟಲಿಯಲ್ಲಿ ಈವರೆಗೂ 10 ಸಾವಿರಕ್ಕೂ ಅಧಿಕ ಜನರು ಸೋಂಕಿತರು ಮೃತಪಟ್ಟಿದ್ದಾರೆ.
ಕೊರೊನಾ ವೈರಸ್‍ಗೆ ವಿಶ್ವಾದ್ಯಂತ ಭಾನುವಾರ ಮಧ್ಯಾಹ್ನದ ವೇಳೆಗೆ 30,943 ಜನರು ಮೃತಪಟ್ಟಿದ್ದಾರೆ. ಜತ್ತಿನಾದ್ಯಂತ 666,013 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 497,002 ಜನರು ಚಿಕಿತ್ಸೆ ಪಡೆಯುತ್ತಿದ್ದು, 1,38,068 ಮಂದಿ ಗುಣಮುಖರಾಗಿದ್ದಾರೆ.
ಬೆಂಗಳೂರು: ವಿಶ್ವದ ಅತ್ಯಂತ ವೇಗದ ಓಟಗಾರ ಉಸೇನ್ ಬೋಲ್ಟ್ ನನ್ನೇ ಮೀರಿಸಿದ ಕರಾವಳಿಯ ಕುವರ ಶ್ರೀನಿವಾಸ ಗೌಡ ಇಂದು ರಾಷ್ಟ್ರಾದ್ಯಂತ ಮಿಂಚುತ್ತಿದ್ದಾರೆ. ಟ್ಟಿಟ್ಟರ್ ಟ್ರೆಂಡಿಂಗ್ ನಲ್ಲಿ ಸ್ಥಾನ ಪಡೆದ ತುಳುನಾಡಿನ ಯುವಕನ ಸಾಧನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೊಂಡಾಡುತ್ತಿದ್ದಾರೆ.
ಹೌದು. ಶ್ರೀನಿವಾಸ್ ಗೌಡ ಅವರು ವೇಗದಲ್ಲಿ ಉಸೇನ್ ಬೋಲ್ಟ್ ದಾಖಲೆಯನ್ನು ಹೊಸ ದಾಖಲೆ ಬರೆದಿದ್ದಾರೆ. ಈ ವಿಚಾರ ದೇಶಾದ್ಯಂತ ಸುದ್ದಿಯಾಗುತ್ತಿದ್ದ ಬೆನ್ನಲ್ಲೇ ಉದ್ಯಮಿ ಆನಂದ್ ಮಹಿಂದ್ರಾ ಅವರು ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು ಅವರಿಗೆ, ಕಂಬಳವನ್ನು ಒಲಂಪಿಕ್ಸ್ ಗೆ ಸೇರಿಸಿದರೆ ಶ್ರೀನಿವಾಸ್‍ಗೆ ಚಿನ್ನದ ಪದಕ ಸಿಗುವುದು ಖಚಿತ ಎಂದು ಟ್ವೀಟ್ ಮಾಡಿದ್ದಾರೆ.
ಆನಂದ್ ಮಹಿಂದ್ರಾ ಟ್ವೀಟ್‍ನಲ್ಲೇನಿದೆ..?
ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ. ಈತ ಅಸಾಧಾರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ. ಈತನಿಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅವಕಾಶ ಕಲ್ಪಿಸಬೇಕು. ಇಲ್ಲವೇ ಓಲಂಪಿಕ್‍ನಲ್ಲಿ ಕಂಬಳವನ್ನು ಸೇರಿಸಬೇಕು. ಏನೇ ಆಗಲಿ ಶ್ರೀನಿವಾಸ್ ಗೌಡ ಅವರಿಗೆ ಚಿನ್ನದ ಪದಕ ಧಕ್ಕಬೇಕು ಎಂದು ಶ್ರೀನಿವಾಸ್ ಗೌಡರ ಸಾಧನೆ ಕುರಿತು ಪ್ರಕಟವಾದ ವರದಿಯನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಟ್ವೀಟನ್ನು ಕಿರಣ್ ರಿಜಿಜು ಅವರಿಗೆ ಟ್ಯಾಗ್ ಮಾಡಿದ್ದಾರೆ.
ಕಿರಣ್ ರಿಜಿಜು ಉತ್ತರವೇನು?
ಆನಂದ್ ಮಹೀಂದ್ರಾ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಿರಣ್ ರಿಜಿಜು, ನಾನು ಶ್ರೀನಿವಾಸ್ ಗೌಡಗೆ ಫೋನ್ ಮಾಡುತ್ತೇನೆ. ಭಾರತೀಯ ಕ್ರೀಡಾ ಪ್ರಾಧಿಕಾರ (ಸಾಯ್) ಕೋಚ್‍ಗಳಿಂದ ತರಬೇತಿ ನೀಡಲು ಆಹ್ವಾನಿಸುತ್ತೇವೆ. ಭಾರತದ ಯಾವ ಪ್ರತಿಭೆಯೂ ಪರೀಕ್ಷೆಗೊಳಪಡದೇ ಇರಬಾರದು ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳದಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಶ್ರೀನಿವಾಸ್ ಗೌಡ 142.50 ಮೀಟರ್ ದೂರವನ್ನು ಕೇವಲ 13.62 ಸೆಕೆಂಡಲ್ಲಿ ಕ್ರಮಿಸಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದೂವರೆಗಿನ ಅತ್ಯಂತ ವೇಗದ ದಾಖಲೆಯಾಗಿದೆ. ಶ್ರೀನಿವಾಸ್ ಗೌಡ ಗುರಿ ತಲುಪಲು ತೆಗೆದುಕೊಂಡ ಸಮಯವನ್ನು 100 ಮೀ. ಓಟದೊಂದಿಗೆ ತಾಳೆ ಹಾಕಿದರೆ 9.55 ಸೆಕೆಂಡ್‍ನಲ್ಲಿ ಓಟ ಪೂರ್ಣಗೊಳಿಸಿ ಬೋಲ್ಟ್ ದಾಖಲೆಯನ್ನು ಉಡಾಯಿಸಿದ್ದಾರೆ.
ಒಟ್ಟಿನಲ್ಲಿ ವಿಶ್ವದ ಫಾಸ್ಟೆಸ್ಟ್ ರನ್ನರ್ ಉಸೇನ್ ಬೋಲ್ಟ್ ನ ದಾಖಲೆಯನ್ನು ಪುಡಿಪುಡಿ ಮಾಡಿ ಹೊಸ ಭಾಷ್ಯ ಬರೆದಿದ್ದಾರೆ. ಉಸೇನ್ ಬೋಲ್ಟ್ 100 ಮೀ. ಓಟವನ್ನು ಕೇವಲ 9.58 ಸೆಕೆಂಡ್ ಅವಧಿಯಲ್ಲಿ ಕ್ರಮಿಸಿದರೆ, ಶ್ರೀನಿವಾಸ್ ಗೌಡ ಕಂಬಳ ಗದ್ದೆಯ ಕೆಸರಿನಲ್ಲಿ ಕೋಣಗಳ ಜೊತೆ 100 ಮೀಟರನ್ನು ಕೇವಲ 9.55 ಸೆಕೆಂಡ್‍ಗಳಲ್ಲಿ ಪೂರ್ಣಗೊಳಿಸಿ ದಾಖಲೆ ಬರೆದು ಸುದ್ದಿಯಾಗಿದ್ದಾರೆ.
ನವದೆಹಲಿ: ಬಾಲಿವುಡ್ ಬಿಗ್-ಬಿ ಅಮಿತಾಬ್ ಬಚ್ಚನ್ ಹಾಗೂ ಕ್ರೀಡಾ ಸಚಿವ ಕಿರಣ್ ರಿಜಿಜು ಫುಟ್‍ಪಾತ್‍ನಲ್ಲಿ ಜೀವನ ನಡೆಸುತ್ತಿರುವ ಭಾರತ ತಂಡದ ಮಾಜಿ ಹಾಕಿ ಆಟಗಾರನ ನೆರವಿಗೆ ನಿಂತಿದ್ದಾರೆ.
ಭಾರತದ ಜೂನಿಯರ್ ಹಾಕಿ ತಂಡದಲ್ಲಿ ಆಟವಾಡಿದ ಅಮರ್‌ಜೀತ್ ಸಿಂಗ್ ದೆಹಲಿಯ ಫುಟ್‍ಪಾತ್‍ನಲ್ಲಿ ಜೀವನ ನಡೆಸುತ್ತಿದ್ದಾರೆ. ಇವರು ಫುಟ್‍ಪಾತ್‍ನಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಮರ್‌ಜೀತ್ ಅವರ ಫೋಟೋ ವೈರಲ್ ಆಗುತ್ತಿದ್ದಂತೆ ಕೇಂದ್ರ ಕೀಡಾ ಸಚಿವ ಕಿರಣ ರಿಜಿಜು ಹಾಗೂ ಬಿಗ್-ಬಿ ಅಮಿತಾಬ್ ಬಚ್ಚನ್ ಸಹಾಯ ಮಾಡಲು ಮುಂದಾಗಿದ್ದಾರೆ.
ಜೂನಿಯರ್ ಹಾಕಿ ತಂಡದಲ್ಲಿ ಆಟವಾಡಿದ ಅಮರ್‌ಜೀತ್ ಅಥ್ಲೆಟಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ತಮ್ಮ ಉತ್ತಮ ಆಟದಿಂದ ಗುರುತಿಸಿಕೊಂಡಿದ್ದ ಅಮರ್‌ಜೀತ್ ಅವರು ಹಲವು ವರ್ಷಗಳ ಕಾಲ ಲಂಡನ್ ಹಾಗೂ ಜರ್ಮನಿಯಲ್ಲೂ ಕಳೆದಿದ್ದರು. ಆದರೆ ಈಗ ಅಮರ್‌ಜೀತ್ ದೆಹಲಿಯ ಪಹಾಡ್‍ಗಂಜ್ ಏರಿಯಾದ ಫುಟ್‍ಪಾತ್‍ನಲ್ಲಿ ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ಅಮರ್‌ಜೀತ್ ಯಾವಾಗಿನಿಂದ ಈ ಸ್ಥಿತಿಯಲ್ಲಿದ್ದಾರೆ ಇಲ್ಲಿ ವಾಸಿಸುತ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ.
ಟ್ವಿಟ್ಟರಿನಲ್ಲಿ ಈ ವಿಷಯ ತಿಳಿದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಮಾಜಿ ಆಟಗಾರನ ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ನಾನು ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಒಂದು ಮಾತನ್ನು ಹೇಳುತ್ತಿರುತ್ತೇನೆ. ಭಾರತವನ್ನು ಪ್ರತಿನಿಧಿ ಸದ್ಯ ಕಷ್ಟದಲ್ಲಿರುವ ಕ್ರೀಡಾಪಟುಗಳಿಗೆ ಆರ್ಥಿಕ ಸಹಾಯ ಮಾಡುತ್ತೇವೆ. ಇವರ ವಿಳಾಸ ಸಿಕ್ಕರೆ ಖಂಡಿತವಾಗಿ ಸಹಾಯ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕಿರಣ್ ರಿಜಿಜು ಅವರ ಮೊದಲು ಬಿಗ್-ಬಿ ಅಮಿತಾಬ್ ಬಚ್ಚನ್ ಮಾಜಿ ಆಟಗಾರನ ಸಹಾಯ ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಅಮಿತಾಬ್ ತಮ್ಮ ಟ್ವಿಟ್ಟರಿನಲ್ಲಿ, ಅವರಿಗೆ ಎಲ್ಲಿ ಹಾಗೂ ಹೇಗೆ ಸಹಾಯ ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ತಿಳಿಯಲು ಸಾಧ್ಯವೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಮುಂಬೈ: ರಸ್ತೆಯಲ್ಲಿ ಕಸ ಎಸೆದವನಿಗೆ ಜಾಡಿಸಿದ ಅನುಷ್ಕಾ ವಿರುದ್ಧ ಅಭಿಮಾನಿ ರೊಚ್ಚಿಗೆದ್ದು ಪೋಸ್ಟ್ ಹಾಕಿದ್ದನು. ಈಗ ಈ ಪೋಸ್ಟ್ ಕೇಂದ್ರ ಸಚಿವರು ನೋಡಿ ವಿರಾಟ್ ಹಾಗೂ ಅನುಷ್ಕಾ ಬೆಂಬಲಕ್ಕೆ ನಿಂತಿದ್ದಾರೆ.
ಅರ್ಹಾನ್ ಸಿಂಗ್ ಕಸ ಎಸೆದಿದ್ದಕ್ಕೆ ಕ್ಷಮೆಯಾಚಿಸಿ ಅನುಷ್ಕಾ ಹಾಗೂ ಕೊಹ್ಲಿ ವಿರುದ್ಧ ರೊಚ್ಚಿಗೆದ್ದಿದ್ದನು. ತನ್ನ ಇನ್‍ಸ್ಟಾಗ್ರಾಂನಲ್ಲಿ ಅನುಷ್ಕಾ ಹಾಗೂ ವಿರಾಟ್ ವಿರುದ್ಧ ಪೋಸ್ಟ್ ಹಾಕಿದ್ದು, ಆತನಿಗೆ ಆತನ ತಾಯಿ ಕೂಡ ಸಾಥ್ ನೀಡಿದ್ದರು.
ಈಗ ವಿರುಷ್ಕಾಗೆ ಕೇಂದ ಗೃಹ ಖಾತೆಯ ರಾಜ್ಯ ಸಚಿವ ಕಿರಣ್ ರಿಜಿಜು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಬೆಂಬಲಿಸಿದ್ದಾರೆ. “ವಿರಾಟ್ ಹಾಗೂ ಅನುಷ್ಕಾಗೆ ಪಬ್ಲಿಸಿಟಿ ಬೇಕಾ? ನಮ್ಮ ನಡತೆ ನಮ್ಮ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಸಾಮಾಜಿಕ ನೈತಿಕತೆ ಮತ್ತು ನೈತಿಕತೆಯಿಂದ ಗುಣಗಳು ಸಂಪತ್ತು ಹಾಗೂ ಶಿಕ್ಷಣದಿಂದ ಬರುವುದಿಲ್ಲ. ನಮ್ಮ ಭಾರತವನ್ನು ಸ್ವಚ್ಛತೆಯಿಂದ ಇರಿಸಿಕೊಳ್ಳಿ” ಎಂದು ಟ್ವೀಟ್ ಕಿರಣ್ ರಿಜಿಜು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲೇ ವ್ಯಕ್ತಿಯೊಬ್ಬನಿಗೆ ಅನುಷ್ಕಾ ಶರ್ಮಾ ತರಾಟೆ – ಪತ್ನಿಯ ಕ್ಲಾಸ್ ನೋಡಿ ಹೆಮ್ಮೆಗೊಂಡ ವಿರಾಟ್
C'mon, Virat & Anushka need publicity!! They would rather crave for privacy!! Our conduct reflects our mentality. Civic sense is social ethics and ethical behaviour doesn't come with wealth & education. Let's keep India clean. #SwachhBharat
ಅನುಷ್ಕಾ ಶರ್ಮಾ ಕಾರಿನಲ್ಲಿ ಹೋಗುತ್ತಿದ್ದಾಗ ಪಕ್ಕದಲ್ಲೇ ಹೋಗುತ್ತಿದ್ದ ಅರ್ಹಾನ್ ಸಿಂಗ್ ಕಾರಿನಿಂದ ಪ್ಲಾಸ್ಟಿಕ್ ಕವರ್ ಎಸೆದಿದ್ದಾನೆ. ಇದನ್ನು ಕಂಡ ಅನುಷ್ಕಾ ಶರ್ಮಾ ತನ್ನ ಕಾರಿನ ಕಿಟಕಿ ತೆಗೆದು ಅರ್ಹಾನ್ ಸಿಂಗ್ ವ್ಯಕ್ತಿಗೆ ಹಿಗ್ಗಾಮುಗ್ಗಾ ಬೈದಿದ್ದರು. ರಸ್ತೆಯಲ್ಲಿ ಕಸವನ್ನು ಯಾಕೆ ಎಸುತ್ತಿದ್ದೀಯಾ? ದಯವಿಟ್ಟು ಎಚ್ಚರದಿಂದ ಇರು. ನೀನು ಪ್ಲಾಸ್ಟಿಕ್ ಕವರ್ ಗಳನ್ನು ಈ ರೀತಿ ರಸ್ತೆಯ ಮೇಲೆ ಎಸೆಯುವ ಹಾಗೇ ಇಲ್ಲ ಎಂದು ಅನುಷ್ಕಾ ಶರ್ಮಾ ಅರ್ಹಾನ್ ಸಿಂಗ್ ಖಡಕ್ ವಾರ್ನಿಂಗ್ ನೀಡಿದ್ದರು. ಇದನ್ನೂ ಓದಿ: ರಸ್ತೆಯಲ್ಲಿ ಕಸ ಎಸೆದಿದ್ದಕ್ಕೆ ವಾರ್ನಿಂಗ್ ನೀಡಿದ ಅನುಷ್ಕಾಗೆ ಆ ವ್ಯಕ್ತಿಯಿಂದ ಕ್ಲಾಸ್!
ಅನುಷ್ಕಾ ಪತಿ ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿಯ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅದಕ್ಕೆ, “ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಸ ಎಸೆಯುತ್ತಿರುವುದನ್ನು ನೋಡಿ ಅನುಷ್ಕಾ ಅವನಿಗೆ ತರಾಟೆಗೆ ತೆಗೆದುಕೊಂಡಿದ್ದರು. ದುಬಾರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಅವರ ಮೆದುಳು ಕೆಲಸ ಮಾಡುವುದಿಲ್ಲ. ಇಂತಹ ಜನರು ನಮ್ಮ ದೇಶವನ್ನು ಸ್ವಚ್ಛತೆಯಿಂದ ಇಡುತ್ತಾರಾ? ನೀವು ಕೂಡ ಈ ರೀತಿ ಆಗುವುದನ್ನು ನೋಡಿದ್ದರೆ, ಹೀಗೆ ಮಾಡಿ ಜಾಗೃತಿ ಮೂಡಿಸಿ ಎಂದು ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: ಮಗನ ವಿಡಿಯೋ ಮಾಡಿದ್ದಕ್ಕೆ ವಿರುಷ್ಕಾ ವಿರುದ್ಧ ರೊಚ್ಚಿಗೆದ್ದ ಆ ವ್ಯಕ್ತಿಯ ತಾಯಿ!
ನಾನು ನನ್ನ ಅಜಾಗರೂಕತೆಗೆ ಕ್ಷಮೆಯಾಚಿಸಿದ್ದೇನೆ. ಮಿಸೆಸ್ ಅನುಷ್ಕಾ ಶರ್ಮಾ ಕೊಹ್ಲಿ ನೀವು ಹೇಳಿದ ಡೈಲಾಗ್‍ನಲ್ಲಿ ಸ್ವಲ್ಪ ತಾಳ್ಮೆಯಿಂದ ಹಾಗೂ ಶಿಷ್ಟಚಾರದಿಂದ ಇದ್ದರೆ ಅದು ನಿಮ್ಮ ಸ್ಟಾರ್ ಲೆವಲ್ ಕಡಿಮೆ ಮಾಡುವುದಿಲ್ಲ. ದುಬಾರಿ ಕಾರಿನಲ್ಲಿ ಕುಳಿತುಕೊಂಡು ನಿಮ್ಮ ಬಾಯಿಯಿಂದ ಬಂದ ಕಸಗಿಂತ ನನ್ನ ಕಾರಿನಿಂದ ಹಾರಿಹೋದ ಕಸ ಕಡಿಮೆಯಿತ್ತು. ವಿರಾಟ್ ಕೊಹ್ಲಿ ಈ ವಿಡಿಯೋ ಪೋಸ್ಟ್ ಮಾಡಿದರಿಂದ ನಿಮಗೆ ಎನು ದೊರೆಯಿತು ಎಂದು ಪೋಸ್ಟ್ ಮಾಡಿದ್ದನು.