ಬೆಳಗಾವಿ: ರಸ್ತೆಯಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಟ್ಯಾಂಕರ್ (Tanker) ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಾಲೂಕಿನ ಇಟಗಿ ಕ್ರಾಸ್‌ನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ-4 ಪುಣೆ ಬೆಂಗಳೂರು ರಸ್ತೆಯಲ್ಲಿ ದುರಂತ ಸಂಭವಿಸಿದೆ. ಕಲಬುರಗಿಯಿಂದ ಕೆಲಸಕ್ಕೆಂದು ಬೆಳಗಾವಿಗೆ ಬಂದಿದ್ದ ಕಾರ್ಮಿಕರು ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ರಿಪೇರಿ ಮಾಡುತ್ತಿದ್ದರು. ಈ ವೇಳೆ ಟ್ಯಾಂಕರ್ ಹರಿದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ನೆರವು ಕೇಂದ್ರದ ಬಳಿ ಇಸ್ರೇಲಿ ಪಡೆಗಳಿಂದ ಗುಂಡಿನ ದಾಳಿ – 26 ಮಂದಿ ಪ್ಯಾಲೆಸ್ಟೀನಿಯನ್ನರು ಸಾವು
ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ರಾಮನ್ನ, ಮಹೇಶ್, ರಾಮಚಂದ್ರ ಎಂಬವರು ಮೃತಪಟ್ಟಿದ್ದಾರೆ. ಲಕ್ಷ್ಮೀಬಾಯಿ, ಅನುಶ್ರೀ, ಭೀಮಾಬಾಯಿ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಭೀಮಾಬಾಯಿಯ ಎರಡು ಕಾಲುಗಳು ಕಟ್ ಆಗಿದ್ದು, ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಆಯಿಲ್ ತುಂಬಿದ್ದ ಟ್ಯಾಂಕರ್ ಕಾಮಿಕರ ಮೇಲೆ ಹರಿದು ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸರು ಹೊರತೆಗೆದಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ
ಘಟನೆ ಕುರಿತು ಗಾಯಾಳು ಲಕ್ಷ್ಮೀಬಾಯಿ ಮಾಧ್ಯಮಗಳೊಂದಿಗೆ ಮಾತನಾಡಿ, ನಾವು ಹೆದ್ದಾರಿ ಕೆಲಸಕ್ಕೆಂದು ಕಳೆದ ಏಳು ತಿಂಗಳ ಹಿಂದೆ ಬಂದಿದ್ದೆವು. ಇಂದು ರವಿವಾರವಿದ್ದ ಕಾರಣ ಮಧ್ಯಾಹ್ನವೇ ಕೆಲಸ ಮುಗಿಸಿಕೊಂಡು ಹೊರಟಿದ್ದೆವು. ಲಾರಿ ಚಾಲಕ ಫೋನ್‌ನಲ್ಲಿ ಮಾತನಾಡಿಕೊಂಡು ಡ್ರೈವಿಂಗ್ ಮಾಡುತ್ತಿದ್ದ. ಕೈ ಮಾಡಿದರೂ ಸಹ ನೋಡದೇ ಎಲ್ಲರ ಮೇಲೂ ಲಾರಿ ಹರಿಸಿದ. ನಾವು ಒಟ್ಟು ಆರು ಜನ ಇದ್ದೆವು. ಘಟನೆಯಲ್ಲಿ ನನ್ನ ಪತಿ ಹಾಗೂ ಮಗ ತೀರಿ ಹೋದರು. ನಮ್ಮ ಕುಟುಂಬಕ್ಕೆ ಇನ್ಯಾರು ದಿಕ್ಕು ಎಂದು ಕಣ್ಣೀರು ಹಾಕಿದರು. ಇದನ್ನೂ ಓದಿ: ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
ಪ್ರಕರಣದಲ್ಲಿ ಅಪಘಾತ ಎಸಗಿ ಲಾರಿ ಚಾಲಕ ಪರಾರಿಯಾಗಿದ್ದ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಕ್ರಾರವಾಡಿ ಗ್ರಾಮದ ಮಧುಕರ ಸೋಮವಂಶಿ ಅಪಘಾತ ಎಸಗಿ ಪರಾರಿಯಾಗಿದ್ದ ಲಾರಿ ಚಾಲಕ. ಅಪಘಾತ ಎಸಗಿದ ಲಾರಿಯನ್ನೂ ಸಹ ಕಿತ್ತೂರು ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಯಾರನ್ನೋ ಕೂರಿಸಿ ಬರೆಸಿದಂತೆ ಇದೆ: ಸೂರಜ್ ರೇವಣ್ಣ ಕಿಡಿ
ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯವೂ ಸಹ ಆಗಿತ್ತು. ಈ ಕುರಿತು ಸಚಿವೆ ಹೆಬ್ಬಾಳ್ಕರ್ ಅವರ ಕಾರು ಚಾಲಕ ಶಿವಪ್ರಸಾದ್ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ದೂರಿನ ಅನ್ವಯ ಪ್ರಕರಣದ ವಿಚಾರಣೆ ಆರಂಭಿಸಿದ್ದ ಕಿತ್ತೂರು ಠಾಣೆ ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ 69 ಲಾರಿ ಚಾಲಕರ ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ – ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಮೊದಲಿಗೆ ಅಪಘಾತ ಎಸಗಿಲ್ಲ ಎಂದು ಲಾರಿ ಚಾಲಕ ಮಧುಕರ ಸೋಮವಂಶಿ ಹೇಳಿದ್ದಾನೆ. ಬಳಿಕ ಅಪಘಾತದಲ್ಲಿ ಭಾಗಿಯಾದ ವಾಹನದ ಬಣ್ಣ ಎಫ್‌ಸ್‌ಎಲ್‌ಗೆ ರವಾನೆ ಮಾಡಿದ್ದರು. ಅಲ್ಲದೇ ಘಟನೆ ವೇಳೆ ಫೋನ್ ಕಾಲ್ ಡೀಟೇಲ್ಸ್ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿತ್ತೂರು ಪೊಲೀಸರ ಕಾರ್ಯಕ್ಕೆ ಎಸ್ಪಿ ಭೀಮಾಶಂಕರ ಗುಳೇದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಜಾತಿ ಜಿದ್ದಾಜಿದ್ದಿ – ಸಿಎಂ ಮುಂದಿರುವ ಆಯ್ಕೆ ಏನು?
ಬೆಂಗಳೂರು: ಬಿಸಿಲಿನ ತಾಪಮಾನದ ಕಾರಣಕ್ಕಾಗಿ ಕಿತ್ತೂರು (Kittur) ಕರ್ನಾಟಕದ ಎರಡು ಜಿಲ್ಲೆಗಳು, ಕಲ್ಯಾಣ ಕರ್ನಾಟಕದ (Kalyana Karnataka) 6 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ (Govt Office) ಕೆಲಸದ ಸಮಯ ಬದಲಾವಣೆ ಮಾಡಲಾಗಿದೆ.
ಕಲಬುರಗಿ ವಿಭಾಗದ 6 ಜಿಲ್ಲೆಗಳು, ಬೆಳಗಾವಿ ವಿಭಾಗದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಕೆಲಸದ ಸಮಯ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಳಗ್ಗೆ 8ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದ ತನಕವೂ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ. ಇದನ್ನೂ ಓದಿ: ನಾಳೆ ಹೈಕಮಾಂಡ್ ಮುಂದೆ ವರದಿ ಕೊಡಲಿರುವ ಸಿಎಂ ಸಿದ್ದರಾಮಯ್ಯ: ರಾಜಣ್ಣ ಹನಿಟ್ರ್ಯಾಪ್ ಕೇಸ್‌ಗೆ ಎಳ್ಳುನೀರು?
ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ ಆಗಲಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿ ಮೇರೆಗೆ ಸರ್ಕಾರದ ಆದೇಶ ಹೊರಬಿದ್ದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ| ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಮೂವರು ದುರ್ಮರಣ
8 ಜಿಲ್ಲೆಗಳಲ್ಲಿ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ. ಇದನ್ನೂ ಓದಿ: ಗದಗ| ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ
ಬೆಳಗಾವಿ: ಭಾರತೀಯ ಸೇನೆಯಲ್ಲಿ (Indian Army) ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು (Soldier) ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಕಿತ್ತೂರು (Kittur) ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.
ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು. ಆದರೆ ಇದೀಗ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣ ಗೆಲುವಿಗೆ ಬಿಜೆಪಿಯವರೂ ಸಪೋರ್ಟ್ ಮಾಡಿದ್ದಾರೆ – ಡಿಕೆಶಿ ಅಚ್ಚರಿ ಹೇಳಿಕೆ
ಬೆಳಗಾವಿ: ಹಳೇ ದ್ವೇಷದ (Hatred) ಹಿನ್ನೆಲೆ ಇಬ್ಬರ ನಡುವೆ ಜಗಳ (Uproar) ನಡೆದು 32 ವರ್ಷದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.
ಮೃತ ವ್ಯಕ್ತಿಯನ್ನು ಕಿತ್ತೂರು (Kittur) ತಾಲೂಕಿನ ತಿಗಡೊಳ್ಳಿ ಗ್ರಾಮದ ರಾಮಚಂದ್ರ ಆರೇರ್ (32) ಎಂದು ಗುರುತಿಸಲಾಗಿದೆ. ಹತ್ಯೆಯಾದ ರಾಮಚಂದ್ರ ಹಾಗೂ ಹತ್ಯೆ ಮಾಡಿದ ಕಲ್ಲಪ್ಪ ಕ್ಯಾತನವರ್ (48) ಇಬ್ಬರ ನಡುವೆ ಹಳೇ ದ್ವೇಷದ ಹಿನ್ನೆಲೆ ಗಲಾಟೆ ನಡೆದಿದೆ. ಈ ವೇಳೆ ಜಗಳ ವಿಕೋಪಕ್ಕೆ ತಿರುಗಿ ರಾಮಚಂದ್ರ ಆರೇರ್ ಮೇಲೆ ಕಲ್ಲಪ್ಪ ತಲ್ವಾರ್‌ನಿಂದ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಪಿಟ್ಸ್ ಬಂದಿಲ್ಲ, ನೊರೆ ಅವರೇ ಮಾಡಿಕೊಂಡಿರೋದು: ಡಾ.ದಿವ್ಯಪ್ರಕಾಶ್
ಗಲಾಟೆಯಲ್ಲಿ ಕಲ್ಲಪ್ಪ ಕ್ಯಾತನವರ್‌ಗೆ ಕಿವಿ ಮತ್ತು ಹಿಂಭಾಗ ಗಾಯವಾಗಿದ್ದು, ಧಾರವಾಡ (Dharwad) ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಾಮಚಂದ್ರ ಆರೇರ್‌ನ ಎರಡೂ ಕೈಗಳಿಗೆ ಭಾರೀ ಗಾಯಗಳಾಗಿದ್ದು, ಅಧಿಕ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಎಗ್ ರೈಸ್ ತಿಂದು ಹಣ ಕೇಳಿದ್ದಕ್ಕೆ ಶುರುವಾದ ಜಗಳ – ಚಾಕುವಿನಿಂದ ಇರಿದು ಅಂಗಡಿ ಮಾಲೀಕನ ಕೊಲೆ
ಬೆಳಗಾವಿ: ಕಿತ್ತೂರು ತಹಶೀಲ್ದಾರ್ (Kittur Tahsildar) ಸೇರಿ ಇಬ್ಬರು ಲೋಕಾಯುಕ್ತ(Lokayukta) ಬಲೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ದೂರುದಾರನ ತಂದೆ ಹೃದಯಾಘಾತದಿಂದ(Heart Attack) ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.
ಜಿಲ್ಲೆಯ ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದ ಬಾಪುಸಾಹೇಬ್ ಇನಾಮದಾರ್ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಮೃತರ ಪುತ್ರ ರಾಜೇಂದ್ರ ಇನಾಮದಾರ 10 ಎಕರೆ ಜಮೀನಿನ ಖಾತಾ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಇತ್ತ ಬಾಪುಸಾಹೇಬ್ ಹೆಸರಲ್ಲಿದ್ದ ಜಮೀನನ್ನು ಮಗ ರಾಜೇಂದ್ರ ಹೆಸರಿಗೆ ಖಾತಾ ಬದಲಾವಣೆಗೆ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ 5 ಲಕ್ಷ ರೂ. ಲಂಚ ಹಾಗೂ ಶ್ಯೂರಿಟಿಗಾಗಿ 20 ಲಕ್ಷ ರೂ. ಮೌಲ್ಯದ ಖಾಲಿ ಚೆಕ್ ಕೇಳಿದ್ದರು.
ಇದರಿಂದ ಬೇಸತ್ತಿದ್ದ ರಾಜೇಂದ್ರ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ತಡರಾತ್ರಿ ನಡೆಸಿದ ದಾಳಿಯಲ್ಲಿ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಭೂಸುಧಾರಣಾ ನಿರ್ವಾಹಕ ಪ್ರಸನ್ನ ಜಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದರು. ಇದನ್ನೂ ಓದಿ: ಜಮೀನಿನ ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ ಕಿತ್ತೂರು ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
ಮಗ ರಾಜೇಂದ್ರ ಇನಾಮದಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿರುವ ಸುದ್ದಿ ತಿಳಿದ ಬಳಿಕ ರಾಜೇಂದ್ರ ತಂದೆ ಬಾಪುಸಾಹೇಬ್ ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಪ್ರಕರಣದ ಆರೋಪಿಗಳಾದ ತಹಶೀಲ್ದಾರ್, ಭೂಸುಧಾರಣಾ ನಿರ್ವಾಹಕ ಹಿಂಡಲಗಾ ಜೈಲು ಸೇರಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಜಮೀನು ಖಾತೆ ಬದಲಾವಣೆ ಮಾಡಿಕೊಡಲು ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಕಿತ್ತೂರು ತಹಶೀಲ್ದಾರ್ (Tahsildar) ಮತ್ತು ಕೇಸ್ ವರ್ಕರ್ 2 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಲೋಕಾಯುಕ್ತ (Lokayukta) ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು (Kittur) ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ಹಾಗೂ ಕೇಸ್ ವರ್ಕರ್ ಪ್ರಸನ್ನ ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕಿತ್ತೂರು ತಾಲೂಕಿನ ಖೊದಾನಪೂರ ಗ್ರಾಮದ ಬಾಪುಸಾಹೇಬ ಇನಾಮದಾರ ಎಂಬುವವರು ತಮ್ಮ 10 ಎಕರೆ ಜಮೀನಿನ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ಕಿತ್ತೂರು ತಹಶೀಲ್ದಾರ್ 5 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಕುಕ್ಕೆಯ ಬಳಿಕ ಬೆಂಗಳೂರಿಗೆ ತಟ್ಟಿದ ಧರ್ಮ ದಂಗಲ್
ಈ ಬಗ್ಗೆ ಬಾಪುಸಾಹೇಬ್ ಪುತ್ರ ರಾಜೇಂದ್ರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಕಿತ್ತೂರು ತಹಶೀಲ್ದಾರ್ ಮನೆಯಲ್ಲಿಯೇ ಜಮೀನಿನ ಖಾತೆ ಬದಲಾವಣೆ ಮಾಡಲು 2 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ಮಾಡಿದ್ದಾರೆ. ಎರಡು ಲಕ್ಷ ಹಣ ಮತ್ತು ಶ್ಯೂರಿಟಿಗಾಗಿ 20 ಲಕ್ಷ ಮೌಲ್ಯದ ಖಾಲಿ ಚೆಕ್ ಅನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಬೆಳಗಾವಿ ಎಸ್‍ಪಿ ಯಶೋಧಾ ವಂಟಗೂಡಿ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯಾಗಿ ಅಪೂರ್ಣ ಹುಲಗೂರ ತಂಡದ ಸಿಬ್ಬಂದಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಈಗಲೂ ಮೋದಿ ನಂ.1 ಜನಪ್ರಿಯ ನಾಯಕ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಝಾನ್ಸಿ ರಾಣಿ ಲಕ್ಷ್ಮೀಬಾಯಿ (Jhansi Rani Lakshmi Bai) 1857ರಲ್ಲಿ ಬ್ರಿಟಿಷರ (British) ವಿರುದ್ಧ ಹೋರಾಟ ಮಾಡಿದ್ದಾರೆ. ಆದರೆ ವೀರರಾಣಿ ಕಿತ್ತೂರು ಚನ್ನಮ್ಮ (Kittur Rani Chennamma) ಅದಕ್ಕೂ ಮುನ್ನವೇ 1824ರಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದಾರೆ. ಈ ಸತ್ಯವನ್ನು ಪ್ರಕಟಣೆ ಮಾಡುವ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೂಡ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಕಿತ್ತೂರು (Kittur) ರಾಜ್ಯಮಟ್ಟದ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಿನ್ನೆಯಿಂದ ಕಿತ್ತೂರು ಉತ್ಸವ ಚಾಲನೆ ನೀಡಬೇಕಿತ್ತು. ನಮ್ಮೆಲ್ಲರ ದುರ್ದೈವ ಸಹೋದರ ಆನಂದ ಮಾಮನಿ ನಿಧನದ ಹಿನ್ನೆಲೆ ಒಂದು ದಿನ ವಿಳಂಬವಾಗಿ ಇಂದು ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಲಾಗಿದೆ ಎಂದರು.
1824 ಅಕ್ಟೋಬರ್ 21 ಭಾರತ ಎಂದೂ ಮರೆಯದ ದಿನವಾಗಿದೆ. ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಪ್ರಥಮ ಬಾರಿಗೆ ಧ್ವನಿ ಎತ್ತಿದ ಮಹಿಳೆ ವೀರರಾಣಿ ಕಿತ್ತೂರು ಚನ್ನಮ್ಮ. ಬ್ರಿಟಿಷರ ವಿರುದ್ಧ ಧ್ವನಿ ಎತ್ತುವ ಧೈರ್ಯ ಆ ಸಮಯದಲ್ಲಿ ಯಾರಿಗೂ ಇರಲಿಲ್ಲ. ಕಿತ್ತೂರು ಚನ್ನಮ್ಮ ಬರೀ ಧ್ವನಿ ಅಷ್ಟೆ ಅಲ್ಲ, ತಲೆ ಎತ್ತಿ ಹೋರಾಡಿದ್ದರು. ಇದನ್ನು ಸುವರ್ಣ ಅಕ್ಷರಗಳಲ್ಲಿ ಬರೆದಿಡಬೇಕು ಎಂದರು.
ಕಿತ್ತೂರು ಚನ್ನಮ್ಮ ಬ್ರಿಟಿಷರ ವಿರುದ್ಧ ಮೊದಲನೇ ಯುದ್ಧದಲ್ಲಿ ಜಯ ಸಾಧಿಸಿ ವಿಜಯೋತ್ಸವ ಮಾಡಿದ್ದರು. ಅದರ ಸವಿನೆನಪಿಗಾಗಿ ಇವತ್ತು ಕಿತ್ತೂರು ಉತ್ಸವ ಮಾಡಲಾಗುತ್ತಿದೆ. ಕಿತ್ತೂರು ಚನ್ನಮ್ಮ ಎಂದರೆ ಮೈಯಲ್ಲಿರುವ ಕೂದಲು ಎದ್ದು ನಿಲ್ಲುತ್ತದೆ, ಅದು ಚನ್ನಮ್ಮಳ ಶಕ್ತಿ. ಸಮಸ್ಯೆ, ಸವಾಲುಗಳನ್ನು ಎದುರಿಸಿ ಹಿಮ್ಮೆಟ್ಟಿ ಜಯ ಸಾಧಿಸಿ ಕೆಲಸ ಮಾಡುವುದು ನಮ್ಮ ಧರ್ಮವಾಗಿದೆ. ಅದರಿಂದ ಹಿಂದೆ ಸರಿದರೆ ಅದು ಸಾರ್ಥಕತೆ ಆಗಲ್ಲ. ಬಾಹ್ಯವಾಗಿ, ಆಂತರಿಕವಾಗಿ ದೇಶದ ಅಖಂಡತೆ ಕಾಪಾಡುವುದು ಬಹಳ ಮುಖ್ಯವಾಗಿದೆ. ಸುದೈವವಾಗಿ ನಮ್ಮ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಉಗ್ರವಾದ ದಮನ ಮಾಡಿದ್ದಾರೆ. ಅಮೆರಿಕ, ಯೂರೋಪ್ ಎಲ್ಲಾ ದೇಶಗಳಲ್ಲಿ ಆರ್ಥಿಕ ಕಂಟಕ ಬಂದಿದೆ, ಆದರೆ ಭಾರತಕ್ಕೆ ಬಂದಿಲ್ಲ. ನರೇಂದ್ರ ಮೋದಿ ಆಡಳಿತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ದೈರ್ಯ, ಮುಂದಾಲೋಚನೆ ಆಡಳಿತ ಇದೆ. ಕಿತ್ತೂರು ಬಗ್ಗೆ ಎಷ್ಟು ಅಭಿಮಾನ ಪಡುತ್ತಿದ್ದೇವೆಯೋ ಅಷ್ಟೇ ಅಭಿವೃದ್ಧಿಯ ಅವಶ್ಯಕವಿದೆ ಎಂದರು.
ಈ ಭಾಗದ ನೀರಾವರಿ ಯೋಜನೆಗೆ 580 ಕೋಟಿ ರೂ. ಪಡೆದಿದ್ದಾರೆ. ಎಲ್ಲಾ ಊರಿಗೆ ಕುಡಿಯುವ ನೀರು ಪೂರೈಕೆಗೂ ಪ್ರಧಾನಿಯವರ ಜಲಜೀವನ್ ಮಿಷನ್ ಯೋಜನೆ ಅನುಕೂಲವಾಗಿದೆ. ಕಿತ್ತೂರು, ಬೈಲಹೊಂಗಲ, ಖಾನಾಪುರ, ಸವದತ್ತಿ ಸೇರಿ 980 ಕೋಟಿ ರೂ. ನೀಡಿದ್ದೇವೆ ಎಂದು ತಿಳಿಸಿದರು.
ಚನ್ನಮ್ಮ ಅರಮನೆ ನಿರ್ಮಾಣಕ್ಕೆ ನಮ್ಮ ನಾಯಕ ಬಿಎಸ್ ಯಡಿಯೂರಪ್ಪ 50 ಕೋಟಿ ರೂ. ನೀಡಿದ್ದರು. ನಾವು ಈಗ ಅದನ್ನು 115 ಕೋಟಿ ರೂ. ಮಾಡಿದ್ದೇವೆ. ಭೂಸ್ವಾಧೀನಕ್ಕೆ ಎಷ್ಟು ಖರ್ಚು ಬರುತ್ತೋ ಅದನ್ನು ಕೊಟ್ಟು ಅರಮನೆಯ ಪಕ್ಕದಲ್ಲೇ ಕೋಟೆ ನಿರ್ಮಾಣ ಮಾಡುತ್ತೇವೆ. ಮೂಲ ಚನ್ನಮ್ಮ ಕೋಟೆ ಅಭಿವೃದ್ಧಿಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 27 ಕೋಟಿ ರೂ. ನೀಡಲಾಗಿದೆ. ಕಿತ್ತೂರು ಬಳಿಯ ಕೆಐಎಡಿಬಿ ಯೋಜನೆಯಲ್ಲಿ 1 ಸಾವಿರ ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದೇವೆ. ಅಲ್ಲಿ ಕನಿಷ್ಟ 50 ಸಾವಿರ ಯುವಕರಿಗೆ ಕೆಲಸ ಸಿಗಬೇಕೆಂಬ ಅಭಿಲಾಷೆ ನಮ್ಮದಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.
ಧಾರವಾಡ – ಕಿತ್ತೂರು – ಬೆಳಗಾವಿ ರೈಲು ಕಾಮಗಾರಿಗೆ ಕೇಂದ್ರ ಒಪ್ಪಿಗೆ ಕೊಟ್ಟಿದೆ. ಭೂಸ್ವಾಧೀನ ಮಾಡಿ ಆದಷ್ಟು ಬೇಗ ಮಾಡುತ್ತೇವೆ ಎಂಬ ಭರವಸೆ ಕೊಡುತ್ತೇನೆ. ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿ ಸಂಕಲ್ಪವನ್ನು ನಮ್ಮ ಸರ್ಕಾರ ಮಾಡಿದೆ. ನಿಮ್ಮೆಲ್ಲರ ಆಶೀರ್ವಾದ, ಚನ್ನಮ್ಮ ಆಶೀರ್ವಾದದಿಂದ 2 ನೀರಾವರಿ ಯೋಜನೆಗೆ ಅನುಮತಿ ಪಡೆಯಬೇಕಿದೆ. ಕೃಷ್ಣ ಮೇಲ್ದಂಡೆ ಸ್ಟೇಜ್ 3 ಯೋಜನೆಗೆ ಅನುಮತಿ ನೀಡಿ, ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಕ್ರಮಕೈಗೊಳ್ಳಲಾಗಿದೆ. ಆದಷ್ಟು ಬೇಗ ಕಳಸಾ ಬಂಡೂರಿ ಯೋಜನೆಗೂ ಚಾಲನೆ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸತತ 2ನೇ ಸಲ ಉತ್ಸವಕ್ಕೆ ಬಂದಿರುವ ಸಿಎಂ ನಾನೇ. ಈ ಹಿಂದೆ ಮಾಜಿ ಸಿಎಂ ಬಂಗಾರಪ್ಪ ಕಿತ್ತೂರು ಉತ್ಸವವನ್ನು ಆರಂಭ ಮಾಡಿದ್ದರು. ಆದರೆ, ಇದಾದ ಕೆಲವೇ ದಿನಗಳಲ್ಲಿ ಅಧಿಕಾರ ಕಳೆದುಕೊಂಡಿದ್ದರು. ನಂತರ ಯಾರೊಬ್ಬ ಸಿಎಂ ಕೂಡಾ ಕಿತ್ತೂರು ಉತ್ಸವಕ್ಕೆ ಬರಲು ಹಿಂದೇಟು ಹಾಕಿದ್ದಾರೆ. ಕಿತ್ತೂರು ಉತ್ಸವಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬ ಮೂಢನಂಬಿಕೆ ಇದೆ. ಚಾಮರಾಜನಗರಕ್ಕೆ ಹೋದರೂ ಸಿಎಂ ಪದವಿ ಹೋಗುತ್ತದೆ ಎನ್ನುತ್ತಾರಾದರೂ ಅಲ್ಲಿಗೆ ಹೋಗಿ ಬಂದಿದ್ದೇನೆ. ಎಂತಹ ಮೂಢನಂಬಿಕೆ ನಮ್ಮಲ್ಲಿ ಇದೆ! ನಾನು 2ನೇ ಸಲ ಕಿತ್ತೂರಿಗೆ ಬಂದು, ನಿಮ್ಮ ಮುಂದೆ ನಿಂತಿದ್ದೇನೆ. ಪುಣ್ಯಾತ್ಮ ಒಬ್ಬ ಕಳೆದ ವರ್ಷ ಉತ್ಸವಕ್ಕೆ ಹೋಗಬೇಡಿ ಅಂತ ಹೇಳಿದ್ರು. ಆದರೆ, ನನಗೆ ಅಧಿಕಾರ ಮುಖ್ಯ ಅಲ್ಲ, ರಾಣಿ ಚನ್ನಮ್ಮಳಿಗೆ ಗೌರವ ಸಲ್ಲಿಸುವುದು ಮುಖ್ಯ ಎಂದು ನಾನು ಉತ್ಸವಕ್ಕೆ ಬಂದಿದ್ದೇನೆ ಎಂದು ನುಡಿದರು. ಇದನ್ನೂ ಓದಿ: ಬ್ರಿಟಿಷರು ನಮ್ಮನ್ನು ಇನ್ನೂರು ವರ್ಷಗಳ ಕಾಲ ಆಳಿದರು ಈಗ ಚಕ್ರ ತಿರುಗಿದೆ: ಬೊಮ್ಮಾಯಿ
ಸುವರ್ಣ ಸೌಧದ ಮುಂಭಾಗದಲ್ಲಿ ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ. ನವೆಂಬರ್ ತಿಂಗಳಲ್ಲಿ ಬಂದು ನಾನೇ ಪ್ರತಿಷ್ಠಾಪನೆಗೆ ಶಂಕುಸ್ಥಾಪನೆ ಮಾಡುತ್ತೇನೆ. ಬೈಲಹೊಂಗಲದ ರಾಣಿ ಚನ್ನಮ್ಮ ಸಮಾಧಿಗೆ 2 ಕೋಟಿ ರೂ. ಹಣ ಬಿಡುಗಡೆ ಹಾಗೂ ರಾಣಿ ಬೆಳವಡಿ ಮಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇವೆ ಎಂದರು.
ಇದಕ್ಕೂ ಮೊದಲು ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಹಮ್ಮಿಕೊಂಡ 2022ರ ರಾಜ್ಯಮಟ್ಟದ ಕಿತ್ತೂರು ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಿತ್ತೂರು ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಕಿತ್ತೂರು ಬಿಜೆಪಿ ಕಾರ್ಯಾಲಯ ಉದ್ಘಾಟನೆ ಮಾಡಿದರು. ಬಳಿಕ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ವೀರ ರಾಣಿ ಕಿತ್ತೂರು ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಕಿತ್ತೂರು ಆಡಳಿತ ಸೌಧ ಉದ್ಘಾಟನೆ ಮಾಡಿದರು.
ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಕಿತ್ತೂರು ಶಾಸಕರಾದ ಮಹಾಂತೇಶ ದೊಡ್ಡಗೌಡರ, ಮಹಾಂತೇಶ ಕೌಜಲಗಿ, ದುರ್ಯೋಧನ ಐಹೊಳೆ, ಎಂಎಲ್‌ಸಿ ಸಾಬಣ್ಣ ತಳವಾರ ಹಾಗೂ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚಣಕಿ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ ಉಪಸ್ಥಿತರಿದ್ದರು. ಇದನ್ನೂ ಓದಿ: ವರ್ಷಕ್ಕೊಮ್ಮೆ ಪೂಜೆ ಸಲ್ಲುವ ಬೆಟ್ಟದ ತುದಿಯ ದೇವೀರಮ್ಮನ ನೋಡಲು ಹರಿದು ಬಂದ ಭಕ್ತಸಾಗರ
Live Tv
[brid partner=56869869 player=32851 video=960834 autoplay=true]
ಬೆಳಗಾವಿ: ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ನಿಪ್ಪಾಣಿಯಿಂದ ಕಿತ್ತೂರಿನವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಐದು ರಾಷ್ಟ್ರೀಯ ಹೆದ್ದಾರಿಗಳ ಶಂಕು ಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ದೂರದೃಷ್ಟಿಯಿಂದ ದೇಶದಲ್ಲಿ ರಸ್ತೆ ಅಭಿವೃದ್ಧಿಗಳಾಗುತ್ತಿವೆ. ರಸ್ತೆ ಮೂಲಕ ನರೇಂದ್ರ ಮೋದಿ ಕಂಡಿರುವ ಕನಸನ್ನು ನನಸು ಮಾಡಲು ರಸ್ತೆ ಅಭಿವೃದ್ಧಿಗೆ ಚಾಲನೆ ಕೊಡಲಾಗುತ್ತಿದೆ. ಮೋದಿ ಅವರ ಕನಸನ್ನು ನಿತಿನ್ ಗಡ್ಕರಿ ಅವರು ಸಾಕಾರಗೊಳಿಸುವ ಕಾರ್ಯ ಮಾಡುತ್ತಿದ್ದಾರೆ. ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರ ಲೋಕೋಪಯೋಗಿ ಸಚಿವರಾಗಿ ಕ್ರಾಂತಿಯನ್ನು ಮಾಡಿದ್ದಾರೆ. 20 ವರ್ಷಗಳ ಹಿಂದೆ ಈ ಕಾರ್ಯವನ್ನ ಮಾಡಿದ್ದರು. ಇಂದು ಇಡೀ ದೇಶದಲ್ಲಿ ನ್ಯಾಷನಲ್ ಹೈವೇ ಅಭಿವೃದ್ಧಿ ಮಾಡುತ್ತಿದ್ದಾರೆ. ರಸ್ತೆಗಳನ್ನ ರಸ್ತೆಗಳಾಗಿ ನೋಡಲಿಲ್ಲ. ಹಲವು ಉಪಯುಕ್ತ ಯೋಜನೆಗಳನ್ನ ರೂಪಿಸಲಾಗುತ್ತಿದೆ. ಬೆಳಗಾವಿಯಲ್ಲಿನ ನ್ಯಾಷನಲ್ ಹೈವೇ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಮಾಡುತ್ತೇನೆ. ನಿಪ್ಪಾಣಿಯಿಂದ ಕಿತ್ತೂರುವರೆಗಿನ ರಾಷ್ಟ್ರೀಯ ಪಕ್ಕದಲ್ಲಿ ಜಲಶಕ್ತಿ ನಿರ್ಮಾಣ ಮಾಡಲಾಗುವುದು. ಬೆಳಗಾವಿಯಿಂದಲೇ ಈ ಯೋಜನೆ ಆರಂಭ ಮಾಡುತ್ತೇನೆ ಎಂದು ಸಿಎಂ ಘೋಷಣೆ ಮಾಡಿದರು. ಇದನ್ನೂ ಓದಿ: ವಿದ್ಯುತ್ ಪೂರೈಕೆ ಉಚಿತವಲ್ಲ, ಬಿಲ್ ಪಾವತಿಸದಿದ್ದರೆ ಕರೆಂಟ್ ಕಟ್ : ನಿತಿನ್ ರಾವತ್
ಗಡ್ಕರಿಯವರು ರಿಂಗ್ ರೋಡ್ ಮಾಡಲು ಒತ್ತು ನೀಡಿದ್ದಾರೆ. ಬೆಳಗಾವಿಯಲ್ಲಿ ರಿಂಗ್ ರೋಡ್ ಮಾಡಬೇಕೆಂದು ಬಹಳ ವರ್ಷಗಳ ಯೋಜನೆಯಿದೆ. ಆದಷ್ಟು ಬೇಗ ಬೆಳಗಾವಿಯಲ್ಲಿ ರಿಂಗ್ ರೋಡ್ ಮಾಡುತ್ತೇನೆ. ಮಹಾರಾಷ್ಟ್ರ ಧಾರ್ಮಿಕ ಸ್ಥಳಗಳು, ಕರ್ನಾಟಕ ಧಾರ್ಮಿಕ ಸ್ಥಳಗಳಿಗೆ ಜೋಡಣೆ ಮಾಡುವ ಕನಸು ಗಡ್ಕರಿ ಕಂಡಿದ್ದಾರೆ. ಆ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಿದ್ದಾರೆ. ರಸ್ತೆಗಳು ಅಭಿವೃದ್ಧಿಗೆ ಮಾದರಿ ಆಗಲಿ. ಇದು ರಾಷ್ಟ್ರೀಯ ಐಕ್ಯತೆಗೆ ಸಹಕಾರಿ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ
ಬೆಳಗಾವಿ: ಬ್ರೇಕ್ ಫೇಲ್‍ನಿಂದಾಗಿ ಸಂಭವಿಸುತ್ತಿದ್ದ ಭಾರೀ ಅನಾಹುತವನ್ನು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ತಪ್ಪಿಸಿ ಸಮಯ ಪ್ರಜ್ಞೆ ಮೆರೆದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.
ಗುರುವಾರ ಬೆಳಗಾವಿ ಘಟಕದ ಧಾರವಾಡದಿಂದ ಬೆಳಗಾವಿಗೆ ಹೊರಟಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನಾಹುತದಿಂದ ಪಾರಾಗಿದೆ. ಕಿತ್ತೂರು ಬಸ್ ನಿಲ್ದಾಣಕ್ಕೆ ಹೊರಟಿದ್ದಾಗ ಬ್ರೇಕ್ ಫೇಲ್ ಆಗಿರುವುದನ್ನು ತಿಳಿದ ಚಾಲಕ, ಬಸ್ಸನ್ನು ನಿಧಾನವಾಗಿ ಚಾಲನೆ ಮಾಡುತ್ತ ರಸ್ತೆ ಪಕ್ಕದಲ್ಲಿದ್ದ ದಿಬ್ಬಕ್ಕೆ ತಾಕಿಸುತ್ತ ವರ್ಷಿಣಿ ಬಾರ್ ಕಂಪೌಂಡ್‍ಗೆ ಡಿಕ್ಕಿ ಹೊಡೆಸಿದ್ದಾರೆ.
ಅದೃಷ್ಟವಶಾತ್ ಕೇವಲ ನಾಲ್ಕು ಜನ ಪ್ರಯಾಣಿಕರಿಗೆ ಮಾತ್ರ ಸಣ್ಣ ಪುಟ್ಟ ಗಾಯಗಳಾಗಿದ್ದು, ಬಸ್ಸಿನಲ್ಲಿದ್ದ ನಾಲ್ವತ್ತಕ್ಕೂ ಅಧಿಕ ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯು ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.