Tag: Kittur Chennamma

  • ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗಕ್ಕೆ ಹೊಂದಿಕೊಳ್ಳುವ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ ಎಂದರು.

    ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಎನ್‌ಇಪಿಯನ್ನು ಜಾರಿಗೊಳಿಸಲಾಗಿದೆ. ಇಂದಿನ ಪೀಳಿಗೆ ಯಾವುದೇ ಸವಾಲುಗಳನ್ನು ಆತ್ಮಸ್ಥೈರ್ಯ, ಧೈರ್ಯದಿಂದ ಎದುರಿಸಲು ಜ್ಞಾನದ ಬಲ ಇರಬೇಕು. ಎನ್‌ಇಪಿ ಈ ಜ್ಞಾನದ ಬಲವನ್ನು ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

    ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿ: ಕಿತ್ತೂರು ರಾಣಿ ಚೆನ್ನಮ್ಮ ಆತ್ಮಸ್ಥೈರ್ಯ, ಧೈರ್ಯದಿಂದ ಹೋರಾಡಿದ ಮೊದಲನೆಯ ಮಹಿಳಾ ಸ್ವತಂತ್ರ ಹೋರಾಟಗಾರ್ತಿ. ರಾಣಿ ಚೆನ್ನಮ್ಮನೇ ಈ ವಿಶ್ವವಿದ್ಯಾಲಯದ ಸ್ಫೂರ್ತಿ. ಈ ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ, ಸ್ಪಷ್ಟತೆ ವಿಶ್ವವಿದ್ಯಾಲಯದ ಪ್ರತಿಯೊಬ್ಬರಿಗೂ ಇರಬೇಕು ಎಂದರು. ಇದನ್ನೂ ಓದಿ: ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

    ವಿಭಿನ್ನ, ವಿನೂತನ ಪ್ರಯೋಗ ಕಾರ್ಯಕ್ರಮಗಳನ್ನು ರೂಪಿಸಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಹಾಗೂ ವೈಚಾರಿಕತೆಯಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೇಂದ್ರಗಳಾಗಬೇಕು. ಕೇವಲ ಡಿಗ್ರಿ ಪಡೆಯಲು ಸೀಮಿತವಾಗಿರಬಾರದು. ಆಧುನಿಕ ತಂತ್ರಜ್ಞಾನ ಹಾಗೂ ಜ್ಞಾನ ಕ್ಷೇತ್ರದಲ್ಲಿನ ಬದಲಾವಣೆ ಹಾಗೂ ಬೆಳವಣಿಗೆಯ ವೇಗಕ್ಕೆ ಸರಿಸಮಾನವಾದ ಚಿಂತನೆಯನ್ನು ವಿಶ್ವವಿದ್ಯಾಲಯಗಳು ಮಾಡಬೇಕು. ಆವಿಷ್ಕಾರಗಳನ್ನು ಮಾಡುವ ಕೇಂದ್ರವಾಗಬೇಕು. ಸಂಶೋಧನೆಗಳಲ್ಲಿ ಸ್ವಂತಿಕೆ, ಹೊಸತನ ಹಾಗೂ ವಿಭಿನ್ನತೆ ಇರಬೇಕು ಎಂದು ತಿಳಿಸಿದರು.

    basavaraj bommai

    ತರ್ಕಬದ್ಧ ಚಿಂತನೆಗೆ ಅವಕಾಶ: ವಿಶ್ವವಿದ್ಯಾಲಯಗಳು ತರ್ಕಬದ್ಧ ಚಿಂತನೆಗೆ ಅವಕಾಶ ನೀಡುವ ಜ್ಞಾನದ ಕೇಂದ್ರವಾಗಬೇಕು. ವಿದ್ಯಾರ್ಜನೆಗೆ ಪೂರಕವಾದ ಪರಿಸರ ವಿಶ್ವವಿದ್ಯಾಲಯದಲ್ಲಿ ದೊರೆಯಬೇಕು. ವಿಶ್ವವಿದ್ಯಾಲಯದಲ್ಲಿರುವವರು ತಮ್ಮ ಸೀಮಿತ ಪ್ರಪಂಚದಿಂದ ಹೊರಗೆ ಬರಬೇಕು. ಸಂಶೋಧನೆಗಳನ್ನು ಸಮರ್ಥಿಸಿಕೊಳ್ಳದೆ ಉಳಿದವರು ಅದರ ಉಪಯುಕ್ತತೆಯನ್ನು ನಿರ್ಧರಿಸಲಿ. ವಿಶ್ವವಿದ್ಯಾಲಯಗಳಿಗೆ ಕುಲಪತಿಗಳೆ ಮುಂದಾಳತ್ವ ವಹಿಸುವ ನಾಯಕ. ಅವರು ಇತರರಿಗೆ ಉದಾಹರಣೆಯಾಗಬೇಕು. ಮಾರ್ಗದರ್ಶನ ತೋರಬೇಕು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

    ವಿಶ್ವವಿದ್ಯಾಲಯ ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿ : ವಿಶ್ವವಿದ್ಯಾಲಯಕ್ಕೆ ಸುಂದರ ಪರಿಸರ, ರಸ್ತೆ, ಮೂಲಸೌಕರ್ಯಗಳನ್ನು ಒಳಗೊಂಡ ಕಟ್ಟಡವನ್ನು ಒಂದು ವರ್ಷದಲ್ಲಿ ಮುಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕಟ್ಟಡದ ಪ್ರತಿಯೊಂದು ಕೊಠಡಿಯು ಡಿಜಿಟಲೈಸ್ ಆಗಬೇಕು. ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿಯಂತಿರಬೇಕು ಎಂದು ಸಲಹೆ ನೀಡಿದರು.

    ಇದು ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ವಿಶ್ವವಿದ್ಯಾಲಯಗಳ ಸಂಶೋಧನೆಯನ್ನು ಇಡೀ ವಿಶ್ವ ಒಪ್ಪಿಕೊಂಡರೆ ಅದರ ಉಪಯುಕ್ತತೆ ಹೆಚ್ಚುತ್ತದೆ. ವಿಶ್ವವಿದ್ಯಾಲಯದಲ್ಲಿ ಕಳೆದ 10 ವರ್ಷದಲ್ಲಿ ಕೈಗೊಂಡಿರುವ ಪಿಎಚ್.ಡಿ ಸಂಶೋಧನೆ ಹಾಗೂ ಅದರ ಉಪಯುಕ್ತತೆ ಬಗ್ಗೆ ವಿಶ್ಲೇಷಣೆಯನ್ನು ಕೈಗೊಳ್ಳಲು ತಿಳಿಸಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿಎಂ ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ವಿಧಾನಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

  • ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

    ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

    ಹಾವೇರಿ: ಈ ಬದುಕು ಶಾಶ್ವತವಲ್ಲ. ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ ಹೇಳಿ ಸಿಎಂ ಬಸವರಾಜ ಬೊಮ್ಮಾಯಿ ಭಾವುಕರಾದರು.

    ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ಥಳಿ ಲೋಕಾರ್ಪಣೆ ಹಾಗೂ ಸಮುದಾಯ ಭವನದ ಅಡಿಗಲ್ಲು ಸಮಾರಂಭಕ್ಕೆ ಸಿಎಂ ಆಗಮಿಸಿದ್ದರು.

    ಎರಡು ಪೀಠದ ಸ್ವಾಮೀಜಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಇದು ಸಂತರ ನಾಡು, ಇಲ್ಲಿ ವೈಚಾರಿಕ ಕ್ರಾಂತಿಯನ್ನ ಮಾಡಿದ ಗುರುಗಳಿದ್ದಾರೆ. ಕನಕದಾಸರು, ಸಂತ ಶಿಶುನಾಳ ಶರೀಫರು ಇದ್ದ ತಾಲೂಕು. ಯಾವುದು ಶಾಶ್ವತವಲ್ಲ, ಈ ಬದುಕು ಶಾಶ್ವತವಲ್ಲ. ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ. ಸ್ಥಾನಮಾನಗಳು ಶಾಶ್ವತವಲ್ಲ ಎಂದು ಹೇಳಿ ಭಾವುಕರಾದರು. ಇದನ್ನೂ ಓದಿ: ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

    ನಿಮ್ಮೆಲ್ಲರ ಆಶೀರ್ವಾದದಿಂದ ಈ ರಾಜ್ಯದ ಮುಖ್ಯಮಂತ್ರಿಯಾಗಿ ನಿಂತಿದ್ದೇನೆ. ಕ್ಷೇತ್ರದ ಹೊರಗಡೆ ಇದ್ದಾಗ ನಾನು ಸಿಎಂ, ಗೃಹ ಸಚಿವ. ಆದರೆ ಕ್ಷೇತ್ರದ ಒಳಗಡೆ ಬಂದಾಗ ನಾನು ಬಸವರಾಜ ಬೊಮ್ಮಾಯಿ ಆಗಿ ಉಳಿಯುತ್ತೇನೆ. ಬಸವರಾಜ ಬೊಮ್ಮಾಯಿ ಅನ್ನೋದು ಶಾಶ್ವತ. ಅದರ ಹಿಂದಿರೋ ಪದನಾಮಗಳು ಶಾಶ್ವತವಲ್ಲ. ನಾನು ನಿಮ್ಮೂರಿಗೆ ಬಂದಾಗ ರೊಟ್ಟಿ ತಿನ್ನಿಸಿದ್ದೀರಿ, ನವಣಿ ಅಕ್ಕಿ ಅನ್ನ ಮಾಡಿ ಹಾಕಿದ್ದೀರಿ. ನಾನೇನು ಕೆಲಸ ಮಾಡಿದ್ರೂ ಆ ಋಣ ತೀರಿಸಲು ಆಗೋದಿಲ್ಲ ಎಂದು ಭಾವುಕರಾದರು.

    ಶಾಶ್ವತವಾಗಿ ನಿಮ್ಮ ಪ್ರೀತಿ ವಿಶ್ವಾಸ ಉಳಿಸಿಕೊಂಡು ಹೋಗಬೇಕೆಂಬ ಆಸೆಯಿದೆ. ನಾನು ಭಾವನಾತ್ಮಕವಾಗಿ ಮಾತನಾಡಬಾರ್ದು ಅಂದ್ಕೊಂಡಿದ್ದೆ. ನಿಮ್ಮನ್ನೆಲ್ಲ ನೋಡಿದಾಗ ಭಾವನೆಗಳು ಬರುತ್ತವೆ. ಎಲ್ಲ ಸಮುದಾಯಗಳ ಭಾವನೆಗೆ ಸ್ಪಂದಿಸೋದು ಸೇರಿದಂತೆ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ. ಸರ್ಕಾರಕ್ಕೆ ಸವಾಲುಗಳಿವೆ, ಅವುಗಳನ್ನ ಎದುರಿಸಿಕೊಂಡು ಹೋಗಬೇಕಿದೆ ಎಂದರು.

    ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ್ದು, ಯಾವುದೋ ಒಂದು ರಾಜ್ಯ ಪಡೆದುಕೊಳ್ಳಲು ಅಲ್ಲ. ವಿಸ್ತರಣೆಗಾಗಿ ಹೋರಾಟ ಮಾಡಲಿಲ್ಲ. ತನ್ನ ರಾಜ್ಯದ ಜನರ ರಕ್ಷಣೆ ಮತ್ತು ಸ್ವಾಭಿಮಾನಕ್ಕಾಗಿ ಹೋರಾಟ ಮಾಡಿದಳು. ಎಲ್ಲ ಸಮುದಾಯದವರನ್ನ ಸೇರಿಸಿಕೊಂಡು ಚೆನ್ನಮ್ಮ ರಾಜ್ಯವನ್ನ ಉಳಿಸೋ ಕೆಲಸ ಮಾಡಿದಳು. ಸಂಗೊಳ್ಳಿ ರಾಯಣ್ಣ ಸೆರೆಯಾದಾಗ ಕಿತ್ತೂರು ಚೆನ್ನಮ್ಮ ಕುಸಿದು ಹೋದಳು. ಅಲ್ಲಿಯವರೆಗೂ ಕಿತ್ತೂರು ಚೆನ್ನಮ್ಮ ಬ್ರಿಟಿಷರ ಯಾವುದಕ್ಕೂ ಕುಸಿದಿರಲಿಲ್ಲ. ಸಾಧಕರಿಗೆ ಸಾವು ಅಂತ್ಯವಲ್ಲ ಎಂದು ಸ್ಪೂರ್ತಿ ಮಾತುಗಳನ್ನು ಆಡಿದರು.

    ಕಿತ್ತೂರು ಚೆನ್ನಮ್ಮ ಅಂದು ಯುದ್ಧ ಮಾಡಿದ್ದನ್ನ ಇಂದು ನಾವು ನೆನಪಿಸಿಕೊಳ್ತಿದ್ದೇವೆ. ಈಗಾಗಲೇ ಅಂಬೇಡ್ಕರ್ ಮೂರ್ತಿ ಕೂಡ ತಯಾರಾಗಿದೆ. ಏಪ್ರಿಲ್ ಒಳಗಾಗಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡ್ತೇವೆ. ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನೂ ಪ್ರತಿಷ್ಠಾಪನೆ ಮಾಡ್ತೇವೆ. ಪಂಚಮಸಾಲಿ ಸಮಾಜಕ್ಕೆ 2ಎ ಕೊಡೋ ಬಗ್ಗೆ ಈಗಾಗಲೇ ಸಭೆಯಲ್ಲಿ ಹೇಳಿದ್ದೇನೆ. ಹಿಂದುಳಿದ ವರ್ಗದ ಆಯೋಗಕ್ಕೆ ಸಹಕಾರ ಕೊಡಿ. ಈ ನಾಡಿದ ಬಹುತೇಕ ಜನರಿಗಾಗಿ ಒಳ್ಳೆಯ ದಿನಗಳು, ನ್ಯಾಯ ಕೊಡಲು ನಿರ್ಣಯ ತೆಗೆದುಕೊಳ್ಳುತ್ತೇವೆ. ನನಗೆ ಶಿಗ್ಗಾಂವಿ-ಸವಣೂರು ಏತ ನೀರಾವರಿ ಯೋಜನೆಯ ಕೆರೆ ತುಂಬಿಸೋ ಕೆಲಸ ಮಾಡಬೇಕು ಅಂತಾ ಇತ್ತು. ಅದು ಪೂರ್ಣವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಅಕ್ಕ-ಪಕ್ಕದಲ್ಲಿ ಓಮಿಕ್ರಾನ್ ಹಾವಳಿ ಇದ್ದರೂ ಕೊಡಗಿನಲ್ಲಿ ಪ್ರವಾಸಿಗರದ್ದೇ ದರ್ಬಾರ್

    ನೂರಕ್ಕಿಂತ ಹೆಚ್ಚು ಕೆರೆಗಳು ತುಂಬಿವೆ. ನಿಮ್ಮ ಬೆಂಬಲ, ಆರ್ಶೀವಾದಕ್ಕೆ ಶ್ರೇಯಸ್ಸು ತರೋ ಕೆಲಸ ಮಾಡ್ತೇನೆ. ಎಲ್ಲರೂ ಬಹಳ ಚೆನ್ನಾಗಿ ಮಾತನಾಡಿದ್ದೀರಿ. ಇವತ್ತು ನನಗೆ ಬಹಳ ಸಂತೋಷ ಆಗಿದೆ. ಸಮುದಾಯದ ಅಭಿವೃದ್ಧಿ ಬಗ್ಗೆ ಇಬ್ಬರು ಪರಮಪೂಜ್ಯರು ಹೇಳಿದ ವಿಚಾರಗಳನ್ನ ಶಿರಸಾ ವಹಿಸಿ ಮಾಡ್ತೇನೆ. ಇವತ್ತಿನಿಂದ ಕಿತ್ತೂರು ಚೆನ್ನಮ್ಮ ನಾವು ಮಾಡೋದನ್ನ ನೋಡ್ತಿದ್ದಾಳೆ ಅನ್ನೋ ಅರಿವಿನಿಂದ ಕೆಲಸ ಮಾಡೋಣ. ಹರಜಾತ್ರೆ ಮತ್ತು ಕೂಡಲಸಂಗಮ ಸಂಕ್ರಮಣ ಕಾರ್ಯಕ್ರಮ ಎರಡಕ್ಕೂ ಕರೆದಿದ್ದಾರೆ. ಸಮಯ ನಿಗದಿ ಮಾಡಿಕೊಂಡು ಎರಡೂ ಕಡೆ ಬರೋ ಕೆಲಸವನ್ನ ಮಾಡ್ತೇನೆ. ಈ ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ಸಮುದಾಯ ಕಡೆಗಣಿಸದೆ ಎಲ್ಲರಿಗೂ ನ್ಯಾಯ ಕೊಡೋ ಕೆಲಸವನ್ನ ಮಾಡ್ತೇವೆ ಎಂದು ಭರವಸೆಯ ಮಾತುಗಳನ್ನು ಆಡಿದರು.