Tag: KJ George

  • ಗೃಹಜ್ಯೋತಿ – ಅರ್ಜಿ ಸಲ್ಲಿಕೆಗೆ 5ನೇ ದಿನವೂ ಸರ್ವರ್‌ ಸಮಸ್ಯೆ

    ಗೃಹಜ್ಯೋತಿ – ಅರ್ಜಿ ಸಲ್ಲಿಕೆಗೆ 5ನೇ ದಿನವೂ ಸರ್ವರ್‌ ಸಮಸ್ಯೆ

    – ಕಾದು ಕಾದು ಹೈರಾಣಾದ ಜನ

    ಬೆಂಗಳೂರು: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಷರತ್ತುಗಳೊಂದಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವ ಗೃಹಜ್ಯೋತಿ ಯೋಜನೆ (Gruhajyothi Scheme)ನೋಂದಣಿ ಕಾರ್ಯ 5ನೇ ದಿನಕ್ಕೆ ಕಾಲಿಟ್ಟಿದ್ದು, 5ನೇ ದಿನವೂ ಸರ್ವರ್‌ ಸಮಸ್ಯೆ (Server Down Problem) ಎದುರಿಸುವಂತಾಗಿದೆ.

    5ನೇ ದಿನವಾದ ಗುರುವಾರವೂ ರಾಜಾಜೀನಗರದ 4ನೇ ಬ್ಲಾಕ್‌, ಮಲ್ಲೇಶ್ವರಂ ಕಾಡುಮಲ್ಲೇಶ್ವರ ವಾರ್ಡ್, ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ವೃಷಭಾವತಿ ನಗರ ಹಾಗೂ ವಿಲ್ಸನ್ ಗಾರ್ಡನ್ ಸೇರಿದಂತೆ ವಿವಿಧೆಡೆ ಬೆಂಗಳೂರು ಒನ್‌ (Bengaluru One) ಕೇಂದ್ರಗಳಲ್ಲಿ ಬೆಳ್ಳಂ ಬೆಳಗ್ಗೆ ಸರ್ವರ್‌ ಸಮಸ್ಯೆ ಕಂಡುಬಂದಿದೆ. ಇದರಿಂದ ಅರ್ಜಿ ಸಲ್ಲಿಸಲು ಕಾದು ನಿಂತ ಜನರು ಹಾಗೂ ಬೆಂಗಳೂರು ಒನ್‌ ಕೇಂದ್ರದ ಸಿಬ್ಬಂದಿ ಹೈರಾಣಾಗಿದ್ದಾರೆ. ಇದನ್ನೂ ಓದಿ: ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ – ವಿದ್ಯಾರ್ಥಿಗಳ ಬ್ಯಾಗ್ ತೂಕ ಇಳಿಸಿದ ಶಿಕ್ಷಣ ಇಲಾಖೆ

    ಬೆಳಗ್ಗಿನ ಜಾವ 5 ಗಂಟೆಯಿಂದಲೇ ಬೆಂಗಳೂರು ಒನ್‌ ಕೇಂದ್ರಗಳ ಮುಂದೆ ಜನ ಸಾಲುಗಟ್ಟಿ ನಿಂತಿದ್ದಾರೆ. ಒಂದು ಅರ್ಜಿ ಸಲ್ಲಿಕೆಗೆ 30 ನಿಮಿಷಗಳ ಸಮಯ ಬೇಕಾಗುತ್ತಿದೆ. ಆದ್ರೆ ಸರ್ವರ್‌ ಸಮಸ್ಯೆಯಿಂದಾಗಿ ಸಾಲುಗಟ್ಟಿ ನಿಲ್ಲುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಿಂದ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾಚಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

    ಅರ್ಜಿ ಸಲ್ಲಿಕೆ ಆರಂಭವಾದ ಮೊದಲ ದಿನವೇ ವಿವಿಧೆಡೆ ಸರ್ವರ್‌ ಸಮಸ್ಯೆಯ ಹೊರತಾಗಿಯೂ 1,61,958 ಗ್ರಾಹಕರು (ಸಂಜೆ 5 ಗಂಟೆವರೆಗೆ) ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಣಿ ಮಾಡಲಾಗುತ್ತಿದೆ. ನೋಂದಣಿ ಪ್ರಕ್ರಿಯೆಗೆ ಯಾವುದೇ ಗಡುವು ನಿಗದಿಪಡಿಸಲಾಗಿಲ್ಲ, ಆದ್ದರಿಂದ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ.

  • ಪ್ರತಿ ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

    ಪ್ರತಿ ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

    ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದ ಗೃಹಜ್ಯೋತಿ (Gruha Jyoti scheme) ಗ್ಯಾರಂಟಿಗೆ (Guarantee) ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ (KJ George) ಬುಧವಾರ ಸುದ್ದಿಗೋಷ್ಠಿ ನಡೆಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಜೆ ಜಾರ್ಜ್, ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ತಿಳಿಸಿದರು.

    ಗೃಹಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಜನರು ಆಧಾರ್ ಕಾರ್ಡ್ ಅನ್ನು ಆರ್‌ಆರ್ ನಂಬರ್‌ಗೆ ಲಿಂಕ್ ಮಾಡಬೇಕು. ವಾಸದ ಕರಾರು ಪತ್ರ ಅಥವಾ ವೋಟರ್ ಐಡಿ ನೀಡಬೇಕು. ಬಾಡಿಗೆ ಮನೆಯವರಿಗೂ, ಸ್ವಂತ ಮನೆಯವರಿಗೂ ಇದು ಅನ್ವಯಿಸುತ್ತದೆ. ಬೆಂಗಳೂರು ಒನ್ ಸೇವಾಕೇಂದ್ರದಲ್ಲಿ ಈ ವ್ಯವಸ್ಥೆಯನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.

    ಜೂನ್ 15 ರಿಂದ ನೋಂದಣಿ ಆರಂಭವಾಗಿ, ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. 2 ಕೋಟಿ 16 ಲಕ್ಷ ಗೃಹಬಳಕೆ ಗ್ರಾಹಕರು ಇದ್ದಾರೆ. ಅದರಲ್ಲಿ 2 ಕೋಟಿ 14 ಲಕ್ಷ ಗ್ರಾಹಕರು 200 ಯೂನಿಟ್ ಒಳಗೆ ಬಳಕೆ ಮಾಡುವವರು ಇದ್ದಾರೆ. 2 ಲಕ್ಷ ಮಾತ್ರ 200 ಯೂನಿಟ್‌ಗೂ ಹೆಚ್ಚು ವಿದ್ಯುತ್ ಬಳಕೆ ಮಾಡುವವರು ಇದ್ದಾರೆ. ಅದರಲ್ಲಿ 53 ಯೂನಿಟ್ ಅತಿ ಹೆಚ್ಚು ಬಳಕೆ ಮಾಡುವವರು ಇದ್ದಾರೆ ಎಂದು ಹೇಳಿದರು.

    200 ಯೂನಿಟ್ ಒಳಗೆ ಇದ್ದರೂ ಹೆಚ್ಚುವರಿ ಟ್ಯಾಕ್ಸ್ ಅನ್ವಯ ಆಗುತ್ತದೆ. ಆದರೆ ಫಿಕ್ಸ್ಡ್ ಚಾರ್ಜ್ ಇರಲ್ಲ. ಸರಾಸರಿ ಬಳಕೆಯ 10% ಹೆಚ್ಚುವರಿ ಆದ ಬಳಿಕದ ಹೆಚ್ಚುವರಿ ಯೂನಿಟ್‌ಗೆ 9% ಟ್ಯಾಕ್ಸ್ ಬೀಳುತ್ತದೆ. ಪ್ರತಿ ತಿಂಗಳ ಸರಾಸರಿ ಮೀರಿದರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು. 200 ಯೂನಿಟ್ ಮೇಲ್ಪಟ್ಟ ಬಳಕೆದಾರರು ಮುಂದಿನ ವರ್ಷ ಏನಾದರೂ ಕಡಿಮೆ ಬಳಕೆ ಮಾಡಿದರೆ ಅದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚುನಾವಣೆ ಗೆಲ್ಲೋಕೆ ಚೀಪ್ ಪಾಪ್ಯುಲಾರಿಟಿ ಮಾಡಬೇಕು- ಗ್ಯಾರಂಟಿಗಳ ಬಗ್ಗೆ ಕೃಷಿ ಸಚಿವ ಬಾಂಬ್

    ನೋಂದಣಿ ಹೇಗೆ?
    * ಸೇವಾ ಸಿಂಧು ಪೋರ್ಟಲ್‌ನಲ್ಲಿ ಯೋಜನೆಗಾಗಿ ಅಪ್ಲೈ ಮಾಡಬೇಕು. ಅದರಲ್ಲಿ ಪ್ರತ್ಯೇಕ ವ್ಯವಸ್ಥೆಯ ಪೋರ್ಟಲ್ ಲಭ್ಯವಿರುತ್ತದೆ.
    * ಆಧಾರ್ ಕಾರ್ಡ್ ಬೇಕು, ಕನೆಕ್ಷನ್ ಐಡಿ, ಸ್ವಂತ ಕನೆಕ್ಷನ್ ಇದ್ದರೆ ಹೆಚ್ಚುವರಿ ಮಾಹಿತಿ ಬೇಡ.
    * ಸ್ವಂತ ಮನೆ ಇಲ್ಲದವರು ಕರಾರು ಪತ್ರ ನೀಡಬೇಕು.
    * ಸ್ವಯಂ ರಿಜಿಸ್ಟ್ರೇಷನ್ ಮಾಡಿಕೊಳ್ಳಬಹುದು.
    * ಬಾಡಿಗೆದಾರರು ಲೀಸ್ ಆಗ್ರಿಮೆಂಟ್ ವೋಟರ್ ಐಡಿ (ಅದೇ ಮನೆಯ ಅಡ್ರೆಸ್), ಕರಾರು ಪತ್ರ ಸಲ್ಲಿಸಬೇಕು.
    * ಆಧಾರ್, ಆರ್‌ಆರ್, ನಂಬರ್ ಬೇಕು.
    * ನೋಟರಿ, ರಿಜಿಸ್ಟರ್ ಎರಡು ಆಗುತ್ತೆ ಕರಾರು. ಅದಕ್ಕೆ ಕಂಡಿಷನ್ ಇರುವುದಿಲ್ಲ.
    * ಬೋಗಸ್ ಎಂಬುದು ಗೊತ್ತಾದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹಾಗೂ ಅವರಿಗೆ ಯೋಜನೆ ಕ್ಯಾನ್ಸಲ್ ಆಗುತ್ತದೆ.

    ಗೃಹಜ್ಯೋತಿ ಯೋಜನೆ ಹೊರರಾಜ್ಯದವರಿಗೂ ಸಿಗಲಿದೆ. ಆಸ್ತಿ ತೆರಿಗೆ ಕಡ್ಡಾಯ ಇಲ್ಲ. ನೋಂದಣಿ ಜೂನ್ 15 ರಿಂದ ಆರಂಭವಾಗಿ ಜುಲೈ 5 ರವರೆಗೆ ಅವಕಾಶ ಇರುತ್ತದೆ. ಹೊಸ ಬಾಡಿಗೆದಾರರು ಅಥವಾ 12 ತಿಂಗಳಿಗಿAತ ಕಡಿಮೆ ವಾಸವಾಗಿರುವವರ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗುತ್ತದೆ. ಇದರ ಬಗ್ಗೆ ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇವೆ. ಹೊಸ ಮಾರ್ಗಸೂಚಿ 2 ದಿನದಲ್ಲಿ ಕ್ಯಾಬಿನೆಟ್‌ನಲ್ಲಿ ಚರ್ಚೆ ಆಗಲಿದೆ ಎಂದರು. ಇದನ್ನೂ ಓದಿ: ಟ್ಯಾಕ್ಸ್ ಕಟ್ಟೋರು ಯಾರೂ ಗೃಹಲಕ್ಷ್ಮಿ ಬೇಕು ಅಂತ ಕೇಳ್ತಿಲ್ಲ: ಡಿಕೆಶಿ

  • 200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

    200 ಯೂನಿಟ್ ಫ್ರೀ ಅಂದಿಲ್ಲವೆಂದ್ರು ಜಾರ್ಜ್- ಗ್ಯಾರಂಟಿ ಬೆನ್ನಲ್ಲೇ ವಿದ್ಯುತ್ ಹೊಂದಾಣಿಕೆ ಶುಲ್ಕ ಹೆಚ್ಚಳ

    – ಬಾಡಿಗೆ ಮನೇಲಿದ್ರೂ ಗೃಹಜ್ಯೋತಿ ಎಂದ ಡಿಕೆ

    ಬೆಂಗಳೂರು: ಗ್ಯಾರಂಟಿ ಪಾಲಿಟಿಕ್ಸ್ ಮುಂದುವರಿದಿದೆ. ಬಾಡಿಗೆ ಮನೆ ಇರಲಿ, ಸ್ವಂತ ಮನೆ ಇರಲಿ. ನಮ್ಮ ಮಾತು ಖಚಿತ, ವಿದ್ಯುತ್ ಉಚಿತ ಎಂದು ಡಿಕೆ ಶಿವಕುಮಾರ್ (D.K Shivakumar) ಸ್ಪಷ್ಟಪಡಿಸಿದ್ದಾರೆ. ಆದರೆ ಇಂಧನ ಸಚಿವ ಕೆ.ಜೆ. ಜಾರ್ಜ್ (K.J George) ಮಾತ್ರ, 200 ಯೂನಿಟ್ ಫ್ರೀ ಅಂತಾ ಹೇಳಿಲ್ಲ. 200 ಯೂನಿಟ್ (200 Unit) ತನಕ ಎಂದಿದ್ದೇವೆ ಅಂತಾ ಸಮಜಾಯಿಷಿ ನೀಡಿದ್ದಾರೆ.

    ಯಾರು ಜಾಸ್ತಿ ವಿದ್ಯುತ್ ಬಳಸ್ತಾರೋ ಅವರು ಕಟ್ತಾರೆ ಬಿಡಿ. ಮೊಸ್ರಲ್ಲಿ ಕಲ್ಲು ಹುಡುಕ್ಬೇಡಿ ಅಂತಲೂ ಜಾರ್ಜ್ ಹೇಳಿದ್ದಾರೆ. ಇನ್ನೂ ಗ್ಯಾರಂಟಿ ಯೋಜನೆಗಳ ಜಾರಿಯಾದ ಹೊತ್ತಲ್ಲಿಯೇ ಇಂಧನ ಇಲಾಖೆ ಸದ್ದಿಲ್ಲದೇ ವಿದ್ಯುತ್ ಶುಲ್ಕ ಹೆಚ್ಚಿಸಿ ಆದೇಶ ಹೊರಡಿಸಿದೆ. ಬೆಸ್ಕಾ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಮೇಲೆ ಹೆಚ್ಚುವರಿಯಾಗಿ 51 ಪೈಸೆ ಹೊಂದಾಣಿಕೆ ಶುಲ್ಕವನ್ನು ವಿಧಿಸಲಾಗಿದೆ. ಇದು ಜುಲೈನಿಂದ ಸೆಪ್ಟೆಂಬರ್‍ವರೆಗೆ ಮಾತ್ರ ಅಕ್ಟೋಬರ್‍ನಿಂದ ಮತ್ತೆ ಈ ಶುಲ್ಕವನ್ನು ಪರಿಷ್ಕರಣೆ ಮಾಡಲಾಗುತ್ತದೆ. ಇದನ್ನೂ ಓದಿ: 200 ಯೂನಿಟ್‌ ವಿದ್ಯುತ್‌ ಫ್ರೀ – ಷರತ್ತುಗಳು ಅನ್ವಯ

    ಆಗ 50 ಪೈಸೆಗೆ ಈ ಶುಲ್ಕ ಇಳಿಯಲಿದೆ. ಅದೇ ರೀತಿ, ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‍ಗೆ ಹೆಚ್ಚುವರಿಯಾಗಿ 47 ಪೈಸೆ, ಚೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‍ಗೆ 41 ಪೈಸೆ, ಹೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‍ಗೆ 50 ಪೈಸೆ, ಜೆಸ್ಕಾಂ ವ್ಯಾಪ್ತಿಯಲ್ಲಿ 34 ಪೈಸೆ ಹೆಚ್ಚಳ ಮಾಡಲಾಗಿದೆ. ಆದರೆ ಗೃಹಜ್ಯೋತಿ ಯೋಜನೆಗೂ ಇದಕ್ಕೂ ಸಂಬಂಧವಿಲ್ಲ. ಕಲ್ಲಿದ್ದಲು ಖರೀದಿಯ ವೆಚ್ಚವನ್ನು ಹೊಂದಾಣಿಕೆ ಮಾಡಲಾಗಿದೆ ಅಷ್ಟೇ ಗೃಹಜ್ಯೋತಿ ಫಲಾನುಭವಿಗಳ ಮೇಲೆ ಇದು ಪರಿಣಾಮ ಕೂಡ ಬೀರಲ್ಲ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸರ್ಕಾರದಿಂದ ಕರ್ನಾಟಕ ಯುವ ನಿಧಿ ಯೋಜನೆ ಜಾರಿ- ಷರತ್ತುಗಳೇನು?

    ಇತ್ತ ಇನ್ನು ಅಕ್ಕಿ ಜೊತೆ ರಾಗಿ, ಗೋಧಿ ಕೊಡ್ತೀವಿ ಎಂದು ಆಹಾರ ಮಂತ್ರಿ ಕೇಳ್ತಿದ್ದಾರೆ. ಪ್ರತಾಪ್ ಸಿಂಹ ಮಾತ್ರ ಗೃಹಲಕ್ಷ್ಮಿ ವಿಚಾರದಲ್ಲಿ ತಗಾದೆ ತೆಗೆದಿದ್ದಾರೆ. ಮುಸ್ಲಿಮರ ಮನೆಲಿ ಇಬ್ರು ಮೂವರು ಪತ್ನಿಯರಿದ್ರೆ ಏನು ಮಾಡ್ಬೇಕು. ಕುಟುಂಬದೊಳಗೆ ತಂದಿಡೊ ಕೆಲಸ ಮಾಡ್ತಿದ್ದೀರಿ ಎಂದು ಟೀಕಿಸಿದ್ದಾರೆ. ಇತ್ತ ಡಕೋಟಾ ಬಸ್‍ಗಳಲ್ಲಿ ಮಾತ್ರ ಹೆಣ್ಮಕ್ಕಳು ಫ್ರೀಯಾಗಿ ಓಡಾಡ್ಬೇಕಾ ಎಂದು ಕೇಂದ್ರ ಮಂತ್ರಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ ಮಾಡಲಾಗುತ್ತಿದೆ: ಅರಗ ಜ್ಞಾನೇಂದ್ರ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ಚಿಂತನೆ ಮಾಡಲಾಗುತ್ತಿದೆ: ಅರಗ ಜ್ಞಾನೇಂದ್ರ

    ಬೆಂಗಳೂರು: ರಾಜ್ಯದಲ್ಲಿ ಬಲವಂತದ ಹಾಗೂ ಆಮಿಷವೊಡ್ಡಿ ಮತಾಂತರ ನಡೆಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ‘ಮತಾಂತರ ನಿಷೇಧ’ ಕಾಯಿದೆಯೊಂದನ್ನು ತರುವ ಚಿಂತನೆ ಇದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

    ವಿಧಾನ ಸಭೆಯಲ್ಲಿ ಶೂನ್ಯ ವೇಳೆ ಬಿಜೆಪಿ ಸದಸ್ಯ ಗೂಳಿಹಟ್ಟಿ ಶೇಖರ್ ಅವರು, ತಮ್ಮ ಜಿಲ್ಲೆ ಹಾಗೂ ಮತಕ್ಷೇತ್ರದಲ್ಲಿ ಕೆಲವು ಕ್ರಿಶ್ಚಿಯನ್ ಮಿಷನರೀಸ್ ಹಾಗೂ ಸಂಘಟನೆಗಳು ವ್ಯಾಪಕವಾಗಿ ಬಲವಂತದ ಹಾಗೂ ಆಮಿಷಗಳನ್ನೊಡ್ಡಿ ಮುಗ್ಧ ಜನರನ್ನು ಮತಾಂತರಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆ ಕೆಲವು ಕುಟುಂಬಗಳೇ ಮುರಿದು ಬಿದ್ದಿವೆ. ಇದನ್ನು ತಡೆಯಲು ಸರ್ಕಾರವು ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ:  ಯುವತಿಯಿಂದ ಕಾರು ಚಾಲನೆ- ಆಟೋ ಸಂಪೂರ್ಣ ನಜ್ಜುಗುಜ್ಜು

    ಶಾಸಕರು ಸ್ವತಃ ತಮ್ಮದೇ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದು, ನನ್ನ ತಾಯಿಯನ್ನೇ ಅವರು ಮತಾಂತರಗೊಳಿಸಿದ್ದಾರೆ. ಈ ಪರಿಣಾಮ ಕುಟುಂಬದ ಸದಸ್ಯರಲ್ಲಿ ಕಳವಳವುಂಟಾಗಿದೆ ಎಂದು ಹೇಳಿದರು.

    ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ಜನರನ್ನು ಮತಾಂತರಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ದಲಿತ, ಹಿಂದುಳಿದ ಹಾಗೂ ಮುಸ್ಲಿಂ ಸಮುದಾಯದ ಜನರೂ ಮತಾಂತರಗೊಂಡಿದ್ದಾರೆ. ಮತಾಂತರ ಪ್ರಕ್ರಿಯೆಯನ್ನು ವಿರೋಧಿಸುವವರಿಗೆ ಬೆದರಿಕೆ ಹಾಕಲಾಗುತ್ತಿದ್ದು, ಪೊಲೀಸರನ್ನು ಉಪಯೋಗಿಸಿ ಸುಳ್ಳು ಕೇಸುಗಳನ್ನು ಹಾಕಲಾಗುತ್ತಿದೆ ಎಂದೂ ಸದಸ್ಯರು ತಿಳಿಸಿದರು. ಇದನ್ನೂ ಓದಿ:  ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಲು ಕ್ರಮವಹಿಸಬೇಕು: ಕಾರಜೋಳ

    ಸದಸ್ಯರು ಪ್ರಸ್ತಾಪಿಸಿದ ವಿಷಯಕ್ಕೆ ಅರಗ ಜ್ಞಾನೇಂದ್ರ ಅವರು ಉತ್ತರ ನೀಡಿದ್ದು, ರಾಜ್ಯದಲ್ಲಿ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ. ಆಮಿಷವೊಡ್ಡಿ ಮತಾಂತರ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ. ಪೊಲೀಸರಿಗೆ ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ ಎಂದರು.

    ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ!

    ಜನತೆಯ ಮುಗ್ಧತೆ ಅಥವಾ ಇನ್ನಿತರ ಸನ್ನಿವೇಶಗಳನ್ನು ಉಪಯೋಗಿಸಿಕೊಂಡು ಯಾವುದೇ ಸಂಘಟನೆ ಅಥವಾ ಸಂಸ್ಥೆಗಳು ಮತಾಂತರ ಮಾಡುವುದರಿಂದ, ಸಮಾಜದಲ್ಲಿ, ಶಾಂತಿ ಕದಡುವ ಸಂಭವವೂ ಇದೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕಾನೂನನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಸದನಕ್ಕೆ ತಿಳಿಸಿದರು. ಇದನ್ನೂ ಓದಿ:  ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಗಣಿಗಾರಿಕೆ ಪ್ರದೇಶದಲ್ಲಿ ಸ್ಪೋಟಕ್ಕೆ ಜೀವಗಳು ಬಲಿ

    ಆಮಿಷ ನೀಡಿ ಜನರನ್ನು ಮತಾಂತರ ಗೊಳಿಸುವ ಪ್ರಕ್ರಿಯೆಯಲ್ಲಿ ಒಂದು ವ್ಯವಸ್ಥಿತ ಜಾಲವೇ ಇದೆ. ಅದನ್ನು ಯಾವ ರೀತಿ ತಡೆಗಟ್ಟಲು ಸಾಧ್ಯ ಎಂಬುದರ ಬಗ್ಗೆ ಚರ್ಚೆ ಆಗುತ್ತಿದೆ. ಮುಂದಿನ ದಿನಗಳಲ್ಲಿ ಸೂಕ್ತ ಕಾನೂನನ್ನು ತರಲಾಗುವುದು. ಶಾಂತಿ ಭಂಗಕ್ಕೆ ಕಾರಣವಾಗುವ ಯಾವುದೇ ಸಂಘಟನೆಗಳ ಅಥವಾ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸದನಕ್ಕೆ ತಿಳಿಸಿದರು.

    ಕಾಂಗ್ರೆಸ್ ಸದಸ್ಯ ಕೆ.ಜೆ.ಜಾರ್ಜ್ ಮಧ್ಯ ಪ್ರವೇಶಿಸಿ ಈ ಕುರಿತು ಮಾತನಾಡಿದ್ದು, ಬಲವಂತವಾಗಿ ಮತಾಂತರಿಸುವ ಯಾವುದೇ ಪ್ರಯತ್ನಕ್ಕೆ ನಮ್ಮ ವಿರೋಧವಿದೆ. ಆದರೆ ಯಾವೊದೋ ಒಂದು ಸಂಘಟನೆ ತಪ್ಪು ಮಾಡಿದರೆ ಅದನ್ನು ಸಾರ್ವತ್ರಿಕವಾಗಿ ದೂಷಿಸುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಹೆಚ್‍ಡಿಕೆ 

    ಈ ವೇಳೆ ಜೆಡಿಎಸ್ ಶಾಸಕ ದೇವಾನಂದ್ ಮಾತನಾಡಿ, ತಮ್ಮ ವಿಜಯಪುರ ಜಿಲ್ಲೆಯಲ್ಲಿಯೂ ಮತಾಂತರ ಹಾವಳಿ ಅವ್ಯಾಹತವಾಗಿದೆ. ಬಂಜಾರ ಸಮುದಾಯವನ್ನು ಗುರಿ ಮಾಡಿಕೊಂಡಿರುವ ಕೆಲವು ಸಂಘಟನೆಗಳು ಈ ಕೃತ್ಯ ಮಾಡುತ್ತಿದೆ. ಈ ಸಂಬಂಧ ಶಾಂತಿ ಹಾಗೂ ಕುಟುಂಬದ ಸದಸ್ಯರ ನಡುವೆಯೇ ಸಮನ್ವಯ ಕದಡಿ ಹೋಗಿದೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಹೇಳಿದರು.

  • ಬೆಂಗಳೂರಿನಲ್ಲಿ ತಲೆ ಎತ್ತಿರುವ ಅಕ್ರಮ ಕ್ಯಾಸಿನೋ ಅಡ್ಡೆಗಳನ್ನು ಕೂಡಲೇ ನಿಲ್ಲಿಸಿ – ಕೆಜೆ ಜಾರ್ಜ್ ಪತ್ರ

    ಬೆಂಗಳೂರಿನಲ್ಲಿ ತಲೆ ಎತ್ತಿರುವ ಅಕ್ರಮ ಕ್ಯಾಸಿನೋ ಅಡ್ಡೆಗಳನ್ನು ಕೂಡಲೇ ನಿಲ್ಲಿಸಿ – ಕೆಜೆ ಜಾರ್ಜ್ ಪತ್ರ

    ಬೆಂಗಳೂರು: ಡ್ರಗ್ಸ್ ಕೇಸ್ ನಲ್ಲಿ ಗೋವಾ/ ಶ್ರೀಲಂಕಾ ಕ್ಯಾಸಿನೋ ಜೂಜು ಅಡ್ಡೆ ಬಿಸಿನೆಸ್ ಪಾಯಿಂಟ್ ಆಗಿ ಸ್ಯಾಂಡಲ್‍ವುಡ್ ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈಗ ಬೆಂಗಳೂರಿನ ಅಕ್ರಮ ಕ್ಯಾಸಿನೋ ಅಡ್ಡೆ ಬಾರಿ ಕೋಲಾಹಾಲ ಸೃಷ್ಟಿಸುವ ಸಂಕೇತಗಳು ಕಾಣುತ್ತಿದೆ.

    ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಕ್ಯಾಸಿನೋ ಅಡ್ಡ ತಲೆಯೆತ್ತಿದೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ವೀಸ್ ರಸ್ತೆ ಹೆಚ್ ಆರ್ ಬಿ ಆರ್ ಬಡಾವಣೆ ಹಾಗೂ ಕಮ್ಮನಹಳ್ಳಿ ಮುಖ್ಯ ರಸ್ತೆಗಳಲ್ಲಿ ಕ್ಯಾಸಿನೋ ಜೂಜು ಅಡ್ಡೆ ಈಗ ಆರಂಭವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ 

     

    ಕೋವಿಡ್ ಆರ್ಥಿಕ ದುಸ್ಥಿತಿಯಲ್ಲಿ ಬಡವರು ಜೂಜು ಆಟವಾಡಿ ಮತ್ತಷ್ಟು ಗಂಭೀರ ಸನ್ನಿವೇಶಕ್ಕೆ ಕಾರಣವಾಗಬಹುದು ಎಂದು ಖುದ್ದು ಶಾಸಕ ಜಾರ್ಜ್ ಪೊಲೀಸ್ ಮಹಾ ನಿರ್ದೇಶಕರು, ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಅಕ್ರಮ ಕ್ಯಾಸಿನೋ ನಿಲ್ಲಿಸಲು ಪತ್ರ ಮೂಲಕ ಮಾಹಿತಿ ಕೊಡಲಾಗಿದೆ.

    ಅಕ್ರಮ ಜೂಜು ಅಡ್ಡೆಗಳಿಂದ ಕಾನೂನು ಅಪರಾಧಗಳು ಹೆಚ್ಚಾಗಿವೆ. ಹೀಗಾಗಿ ತುರ್ತಾಗೆ ಈ ಜೂಜು ಅಡ್ಡೆಗಳನ್ನು ನಿಲ್ಲಿಸಬೇಕೆಂದು ಜಾರ್ಜ್ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನೀನು ಹುಟ್ಟಿದ್ಮೇಲೆ ಸೌಂದರ್ಯ ಹಾಳಾಯ್ತು – ಚಪ್ಪಲಿಯಿಂದ ಮಗುವಿನ ಮೇಲೆ ತಾಯಿ ಹಲ್ಲೆ

  • ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್‍ಗೆ ಸಮನ್ಸ್ ಜಾರಿ

    ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ- ಜಾರ್ಜ್‍ಗೆ ಸಮನ್ಸ್ ಜಾರಿ

    ಮಡಿಕೇರಿ: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಗೆ ಸಿಬಿಐ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆ. ಈ ವಿಚಾರ ಖುಷಿ ತಂದಿದೆ. ಮತ್ತೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಡಿವೈಎಸ್‍ಪಿ ಗಣಪತಿ ತಂದೆ ಕುಶಾಲಪ್ಪ ಹಾಗೂ ಗಣಪತಿ ಸಹೋದರ ಮಚ್ಚಯ್ಯ ಸಂತಸ ವ್ಯಕ್ತಪಡಿಸಿದರು.

    ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಮಾತಾನಾಡಿದ ಅವರು, ಗಣಪತಿ ಅವರು ಮರಣ ಹೊಂದಿದ ನಂತರ ನ್ಯಾಯಕ್ಕಾಗಿ ಗಣಪತಿ ಕುಟುಂಬಸ್ಥರು ಹೋರಾಟ ನಡೆಸಿದ್ದೆವು. ಇದರ ಫಲವಾಗಿ ಇದೀಗ ಸಿಬಿಐ ತಂಡ ಮತ್ತೆ ತನಿಖೆ ಅರಂಭ ಮಾಡಿದೆ. ಮತ್ತೆ ನಮಗೆ ನ್ಯಾಯ ಸಿಗುವ ಭರವಸೆ ಮೂಡಿದೆ. ನ್ಯಾಯ ಸಿಗೋವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

    ಇಂದು ವಿಧಾನಸೌಧಕ್ಕೆ ಹೋಗಿ ಕೆ.ಜೆ.ಜಾರ್ಜ್ ಅವರಿಗೆ ನೋಟಿಸ್ ನೀಡಿದ್ದಾರೆ. ನ್ಯಾಯ ಹಾಗೂ ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ಗಣಪತಿ ತಮ್ಮ ಮಾಚಯ್ಯ ಮತ್ತು ತಂದೆ ಕುಶಾಲಪ್ಪ ತಿಳಿಸಿದರು.

    ಮರು ತನಿಖೆ ಯಾಕೆ?
    2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸಿಬಿಐ ನ್ಯಾಯಲಾಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿತ್ತು. ಆದರೆ ಆತ್ಮಹತ್ಯೆಗೆ ಕಾರಣವೆಂದು ಹಲವರ ಮೇಲೆ ಮಾಡಿದ್ದ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್‍ನ್ನು ನ್ಯಾಯಾಲಯ ತಿರಸ್ಕರಿಸಿ, ಮರು ತನಿಖೆಗೆ ಆದೇಶಿಸಿತ್ತು. ಹೀಗಾಗಿ ಪ್ರಕರಣಕ್ಕೆ ಮರುಜೀವ ಬಂದಿದೆ. ಸಿಬಿಐ ‘ಬಿ’ ರಿಪೋರ್ಟ್ ಸಲ್ಲಿಸಿರುವುದನ್ನು ಗಣಪತಿ ಅವರ ಪುತ್ರ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಪ್ರಕರಣದ ಆರೋಪಿಗಳಾದ ಕೆ.ಜೆ.ಜಾರ್ಜ್, ಪ್ರಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್‍ಗೆ ಸೆ.28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

    ಏನಿದು ಪ್ರಕರಣ?
    2016ರ ಜುಲೈ 7 ರಂದು ಬೆಳಗ್ಗೆ ಮಡಿಕೇರಿಯ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ವಿನಾಯಕ ಲಾಡ್ಜ್ ಗೆ ಬಂದ ಗಣಪತಿ ಅವರು ರೂಮು ಪಡೆದುಕೊಂಡಿದ್ದರು. ಸಾವಿಗೂ ಮುನ್ನ ಖಾಸಗಿ ವಾಹಿನಿ ಸ್ಟುಡಿಯೋದಲ್ಲಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದ ಗಣಪತಿ, ಸಚಿವ ಕೆ. ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಾಂತಿ ಹಾಗೂ ಎ. ಎಂ. ಪ್ರಸಾದ್ ಅವರುಗಳಿಂದ ಕಿರುಕುಳ ಅನುಭವಿಸಿದ್ದಾಗಿ ಹೇಳಿಕೊಂಡಿದ್ದರು. ನಂತರ ಲಾಡ್ಜ್ ನಲ್ಲಿ ಪೊಲೀಸ್ ಯೂನಿಫಾಂನಲ್ಲಿಯೇ ನೇತಾಡುತ್ತಿದ್ದ ಅವರ ದೇಹ ಪತ್ತೆಯಾಗಿತ್ತು.

  • ಡಿವೈಎಸ್‍ಪಿ ಗಣಪತಿ ಕೇಸಲ್ಲಿ ಜಾರ್ಜ್‍ಗೆ ನೋಟಿಸ್

    ಡಿವೈಎಸ್‍ಪಿ ಗಣಪತಿ ಕೇಸಲ್ಲಿ ಜಾರ್ಜ್‍ಗೆ ನೋಟಿಸ್

    ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆಜೆ ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ.

    ಸಿಬಿಐ ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿದೆ. ಆರೋಪಿಗಳಾದ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೋಹಂತಿ ಮತ್ತು ಎ.ಎಂ ಪ್ರಸಾದ್ ವಿಚಾರಣೆಗೆ ನೊಟೀಸ್ ನೀಡಿದೆ.

    ಪ್ರಕರಣದಲ್ಲಿ ಕೆ.ಜೆ.ಜಾರ್ಜ್, ಪ್ರಣಬ್ ಮೋಹಂತಿ, ಎ.ಎಂ.ಪ್ರಸಾದ್ ಆತ್ಮಹತ್ಯೆಗೆ ಪ್ರಚೋದನೆ ನೀಡಿಲ್ಲ ಎಂದು ಸಿಬಿಐ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನ ಪ್ರಶ್ನಿಸಿ ಮೃತ ಗಣಪತಿ ಪುತ್ರ ನೆಹಾಲ್ ಅರ್ಜಿ ಹಾಕಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶ ತ್ಯಾಜರಾಜ್ ಎನ್ ಇನವಳ್ಳಿ ಅವರು, ಆರೋಪಿಗಳ ವಿಚಾರಣೆಗೆ ನೋಟಿಸ್ ನೀಡಿದ್ದಾರೆ.

    ಜಾರ್ಜ್ ಅವರು ನಮ್ಮ ತಂದೆಗೆ ಯಾವ ರೀತಿಯಲ್ಲಿ ಹಿಂಸೆ ನೀಡುತ್ತಿದ್ರು. ಸೂಸೈಡ್‍ಗೆ ಮುನ್ನ ಏನು ಮಾತಾನಾಡಿದ್ರು ಎಂಬ ಬಗ್ಗೆ ಸಿಬಿಐ ಮುಂದೆ ನಿಹಾಲ್ ಕೊಟ್ಟ ಹೇಳಿಕೆ ಪ್ರತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    2016ರ ಜುಲೈ 7ರಂದು ಮಂಗಳೂರು ಐಜಿ ಕಚೇರಿಯಲ್ಲಿ ಡಿವೈಎಸ್‍ಪಿ ಆಗಿದ್ದ ಗಣಪತಿ ಮಡಿಕೇರಿಯ ಲಾಡ್ಜ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೂ ಮೊದಲು ಮಾಧ್ಯಮದ ಮುಂದೆ ಮಾತನಾಡಿದ್ದ ಗಣಪತಿ ಅವರು, ತನಗೆ ಸಚಿವ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್, ಪ್ರಣವ್ ಮೊಹಂತಿ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದರು. ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಕೆಲವೇ ತಿಂಗಳುಗಳಲ್ಲಿ ಸಿಐಡಿ ಮೂವರಿಗೂ ಕ್ಲೀನ್‍ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಕುಟುಂಬ ಸುಪ್ರೀಂಕೋರ್ಟ್ ಮೊರೆ ಹೋಗಿ ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿತ್ತು. 2017ರ ಸೆ. 5ರಂದು ಸುಪ್ರೀಂಕೋರ್ಟ್ ಸಿಬಿಐಗೆ ವಹಿಸಿತ್ತು.

  • ಮಾಜಿ ಗೃಹ ಸಚಿವ ಜಾರ್ಜ್‌ ಜೊತೆ ಸುತ್ತಾಡಿದ ಬೆಂಗಳೂರು ಗಲಭೆಯ ಆರೋಪಿ

    ಮಾಜಿ ಗೃಹ ಸಚಿವ ಜಾರ್ಜ್‌ ಜೊತೆ ಸುತ್ತಾಡಿದ ಬೆಂಗಳೂರು ಗಲಭೆಯ ಆರೋಪಿ

    ಬೆಂಗಳೂರು: ಎಫ್‌ಬಿ ಪೋಸ್ಟ್‌ನಿಂದ ಹೊತ್ತಿ ಉರಿದ ಬೆಂಗಳೂರು ಪ್ರಕರಣದ ಮುಖ್ಯ ಆರೋಪಿಯೊಬ್ಬ ಮಾಜಿ ಗೃಹ ಸಚಿವ ಕೆಜೆ ಜಾರ್ಜ್‌ ಅವರ ಜೊತೆ ಸುತ್ತಾಡಿದ ವಿಡಿಯೋ ಈಗ ಲಭ್ಯವಾಗಿದೆ.

    ಹೌದು. ನಾಗವಾರ ವಾರ್ಡ್‌ನ ಕಾಂಗ್ರೆಸ್‌ ಪಾಲಿಕೆ ಸದಸ್ಯೆ ಇರ್ಷಾದ್‌ ಬೇಗಂ ಪತಿ ಖಲೀಂ ಪಾಷಾ ಬೆಂಗಳೂರು ಗಲಭೆಯ 7ನೇ ಆರೋಪಿಯಾಗಿದ್ದಾನೆ. ಗಲಾಟೆ ನಡೆದ ರಾತ್ರಿ ಈತನ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಈತ ಮನೆಯಲ್ಲಿ ಇರಲಿಲ್ಲ. ಆದರೆ ಖಲೀಂ ಜಾರ್ಜ್‌ ಜೊತೆ ಸುತ್ತಾಡಿದ್ದಾನೆ.

    ಅಷ್ಟೇ ಅಲ್ಲದೇ ಆರೋಪಿ ಜಾರ್ಜ್‌ ಹೊತೆ ಪೊಲೀಸ್‌ ಠಾಣೆಗೆ ಬಂದಿದ್ದಾನೆ. ಠಾಣೆಗೆ ಬಂದಿದ್ದರೂ ಪೊಲೀಸರು ಆತನನ್ನು ಬಂಧಿಸಿಲ್ಲ.

    ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಖಲೀಂ ಪಾಷಾ, ನಾನು ಗಲಭೆಯಲ್ಲಿ ಭಾಗಿಯಾಗಿಲ್ಲ. ನನ್ನ ವಿರುದ್ಧ ಎಫ್‌ಐಆರ್‌ ಆಗಿರುವುದು ನನಗೆ ಗೊತ್ತಿಲ್ಲ. ಪೊಲೀಸರು ಬಂದಾಗ ನಾನು ಮನೆಗೆ ಬೀಗ ಹಾಕಿರಲಿಲ್ಲ. ಹೆಂಡತಿ ಮನೆಯಲ್ಲಿ ಇದ್ದೆ ಅದಕ್ಕೆ ಪೊಲೀಸರು ತಪ್ಪು ತಿಳಿದುಕೊಂಡಿದ್ದಾರೆ. ನನಗೂ ಗಲಭೆಗೂ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾನೆ.