Tag: KKR vs SRH

  • ಹೈದರಾಬಾದ್‌ಗೆ ಸನ್‌ಸ್ಟ್ರೋಕ್‌, 120ಕ್ಕೆ ಆಲೌಟ್‌ – ಕೆಕೆಆರ್‌ಗೆ 80 ರನ್‌ಗಳ ಭರ್ಜರಿ ಗೆಲುವು

    ಹೈದರಾಬಾದ್‌ಗೆ ಸನ್‌ಸ್ಟ್ರೋಕ್‌, 120ಕ್ಕೆ ಆಲೌಟ್‌ – ಕೆಕೆಆರ್‌ಗೆ 80 ರನ್‌ಗಳ ಭರ್ಜರಿ ಗೆಲುವು

    – 4 ಪಂದ್ಯಗಳಲ್ಲಿ ಆರೆಂಜ್‌ ಆರ್ಮಿಗೆ 3ನೇ ಸೋಲು

    ಕೋಲ್ಕತ್ತಾ: ವೆಂಕಟೇಶ್‌ ಅಯ್ಯರ್‌ ಸ್ಫೋಟಕ ಅರ್ಧಶತಕ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 80 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಪ್ರಸಕ್ತ ಆವೃತ್ತಿಯಲ್ಲಿ ತನ್ನ 2ನೇ ಗೆಲುವು ದಾಖಲಿಸಿದೆ. ಇನ್ನೂ ಮೊದಲ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಆರೆಂಜ್‌ ಆರ್ಮಿ ಈ ಆವೃತ್ತಿಯಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ 3ನೇ ಸೋಲು ಕಂಡಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಕೋಲ್ಕತ್ತಾ ನಿಗದಿತ ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 200 ರನ್‌ ಕಲೆ ಹಾಕಿತು. ಈ ಗುರಿಯನ್ನು ಬೆನ್ನಟ್ಟಿದ್ದ ಸನ್‌ರೈಸರ್ಸ್‌ ಹೈದರಾಬಾದ್‌ 16.4 ಓವರ್‌ಗಳಲ್ಲಿ 120 ರನ್‌ ಕಲೆ ಹಾಕಿ ಆಲೌಟ್‌ ಆಯಿತು.

    ಕೋಲ್ಕತ್ತಾ ಪರ ವೆಂಕಟೇಶ್ ಅಯ್ಯರ್ 29 ಎಸೆತಗಳಲ್ಲಿ 3 ಸಿಕ್ಸರ್‌, 7 ಬೌಂಡರಿ ನೆರವಿಂದ 60 ರನ್‌, ಆಂಗ್ಕ್ರಿಶ್ ರಘುವಂಶಿ 32 ಎಸೆತಗಳಲ್ಲಿ 2 ಸಿಕ್ಸರ್‌, 5 ಬೌಂಡರಿ ನೆರವಿಂದ 50 ರನ್‌, ಅಜಿಂಕ್ಯ ರಹಾನೆ 27 ಎಸೆತಗಳಲ್ಲಿ 4 ಸಿಕ್ಸರ್‌, 1 ಬೌಂಡರಿ ನೆರವಿನಿಂದ 38 ರನ್‌, ರಿಂಕು ಸಿಂಗ್ 17 ಎಸೆತಗಳಲ್ಲಿ 1 ಸಿಕ್ಸರ್‌, 4 ಬೌಂಡರಿ ನೆರವಿನಿಂದ 32 ರನ್‌ ಕಲೆ ಹಾಕಿದರು.

    ಹೈದರಾಬಾದ್‌ ಪರ ಮೊಹಮ್ಮದ್ ಶಮಿ, ಪ್ಯಾಟ್ ಕಮ್ಮಿನ್ಸ್, ಜೀಶನ್ ಅನ್ಸಾರಿ, ಹರ್ಷಲ್ ಪಟೇಲ್, ಕಮಿಂಡು ಮೆಂಡಿಸ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

    ಹೈದರಾಬಾದ್‌ ಪರ ಹೆನ್ರಿಕ್ ಕ್ಲಾಸೆನ್ 21 ಎಸೆತಗಳಲ್ಲಿ 2 ಸಿಕ್ಸರ್‌, 2 ಬೌಂಡರಿ ನೆರವಿಂದ 33, ಕಮಿಂಡು ಮೆಂಡಿಸ್ 20 ಎಸೆತಗಳಿಲ್ಲ 2 ಸಿಕ್ಸರ್‌, 1 ಬೌಂಡರಿ ನೆರವಿನಿಂದ 27 ರನ್‌, ನಿತಿಶ್‌ ಕುಮಾರ್‌ ರೆಡ್ಡಿ 15 ಎಸೆತಗಳಲ್ಲಿ 19 ರನ್‌ ಕಲೆ ಹಾಕಿದರು.

    ವೈಭವ್ ಅರೋರಾ, ವರುಣ್ ಚಕ್ರವರ್ತಿ ತಲಾ 3 ವಿಕೆಟ್‌, ಆಂಡ್ರೆ ರಸೆಲ್ 2 ವಿಕೆಟ್‌, ಹರ್ಷಿತ್ ರಾಣಾ, , ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್‌ ಕಲೆ ಉರುಳಿಸಿದರು.

  • Photos Gallery: ಚಾಂಪಿಯನ್ಸ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸಂಭ್ರಮಿಸಿದ ಕ್ಷಣ ಹೀಗಿತ್ತು…

    Photos Gallery: ಚಾಂಪಿಯನ್ಸ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಸಂಭ್ರಮಿಸಿದ ಕ್ಷಣ ಹೀಗಿತ್ತು…

    17ನೇ ಆವೃತ್ತಿಯ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕೋಲ್ಕತ್ತಾ ನೈಟ್ ರೈರ‍್ಸ್ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. 2012 ಮತ್ತು 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್ ತಂಡ 10 ವರ್ಷಗಳ ಬಳಿಕ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಂಣದಲ್ಲಿ ಸೂಪರ್ ಸಂಡೇ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಕೆಕೆಆರ್ ಗೆದ್ದ ಬಳಿಕ ಇಡೀ ಕ್ರೀಡಾಂಗಣದ ತುಂಬ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಕ್ರೀಡಾಳುಗಳು ಕುಣಿದು ಕುಪ್ಪಳಿಸಿದರು. ಟ್ರೋಫಿ ಎತ್ತಿ ಮುದ್ದಾಡಿದರು, ಒಬ್ಬರನ್ನೊಬ್ಬರು ಅಪ್ಪಿಕೊಂಡು ಭಾವುಕರಾದರು. ಈ ಸಂಭ್ರಮದ ಪ್ರತಿಯೊಂದು ಕ್ಷಣವೂ ಕ್ಯಾಮೆರಾ ಕಣ್ಣಿಗೆ ಸೆರೆಯಾಗಿದೆ. ಅವುಗಳನ್ನು ಕಣ್ತುಂಬಿಕೊಳ್ಳಲು ಮುಂದೆ ನೋಡಿ…

  • ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಫೈನಲ್‌ನಲ್ಲಿ ಕೋಲ್ಕತ್ತಾ ವಿರುದ್ಧ ಹೈದರಾಬಾದ್‌ಗೆ ಸೋಲು; ದುಃಖ ತಡೆಯಲಾರದೇ ಕಣ್ಣೀರಿಟ್ಟ ಕಾವ್ಯ ಮಾರನ್‌

    ಚೆನ್ನೈ: 2024ರ 17ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಫೈನಲ್‌ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ ಹೀನಾಯ ಸೋಲನುಭವಿಸಿತು. ತಂಡದ ಸೋಲಿನ ದುಃಖ ತಡೆಯಲಾರದೇ ಕಾವ್ಯ ಮಾರನ್‌ ಅವರು ಕಣ್ಣೀರಿಟ್ಟರು.

    ಚೆಪಕ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್‌ ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೆಕೆಆರ್‌ ಗೆಲುವು ದಾಖಲಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಕಳಪೆ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಪ್ರದರ್ಶನದಿಂದಾಗಿ ಪ್ಯಾಟ್‌ ಕಮಿನ್ಸ್‌ ನಾಯಕತ್ವದ ಎಸ್‌ಆರ್‌ಎಚ್‌ ಸೋಲೊಪ್ಪಿಕೊಂಡಿತು.‌ ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿ ಹೈದರಾಬಾದ್‌ ಕಳಪೆ ಬ್ಯಾಟಿಂಗ್‌ ಪ್ರದರ್ಶನ ನೀಡಿತು. ಯಾವೊಬ್ಬ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಬ್ಯಾಟರ್‌ಗಳು ಒಬ್ಬೊಬ್ಬರಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಇದನ್ನು ಕಂಡು ಫ್ರಾಂಚೈಸಿ ಮಾಲೀಕರಾದ ಕಾವ್ಯ ಮಾರನ್‌ ಸಪ್ಪೆ ಮೋರೆ ಹಾಕಿಕೊಂಡು ಕೂತಿದ್ದರು. ಪಂದ್ಯದ ಆರಂಭದಿಂದ ಕೊನೆ ವರೆಗೂ ಅವರ ಮುಖದಲ್ಲಿ ಬೇಸರ ಆವರಿಸಿತ್ತು.

    ಕೊನೆ ಕ್ಷಣದಲ್ಲಿ ಹೈದರಾಬಾದ್‌ ಸೋಲು ಖಚಿತವಾಗುತ್ತಿದ್ದಂತೆ ಕಾವ್ಯ ಮಾರನ್‌ ಅವರ ಮನದಲ್ಲಿದ್ದ ದುಃಖದ ಕಟ್ಟೆಯೊಡೆಯಿತು. ಎಷ್ಟೇ ಪ್ರಯತ್ನಿಸಿದರೂ ಅಳು ತಡೆಯಲಾಗಲಿಲ್ಲ. ಕಣ್ಣಲ್ಲಿ ನೀರು ಹರಿಯಿತು. ಈ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಂಡ ಸೋತರೂ ರನ್ನರ್‌ ಅಪ್‌ ವರೆಗೂ ಉತ್ತಮ ಪ್ರದರ್ಶನ ನೀಡಿದ್ದಕ್ಕೆ ಚಪ್ಪಾಳೆ ತಟ್ಟುವ ಮೂಲಕ ಆಟಗಾರರನ್ನು ಅಭಿನಂದಿಸಿದರು. ಇದನ್ನೂ ಓದಿ: IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

    2024ರ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಎಸ್‌ಆರ್‌ಹೆಚ್‌ ವಿರುದ್ಧ ಅದ್ಧೂರಿ ಜಯ ಸಾಧಿಸುವ ಮೂಲಕ 17ನೇ ಆವೃತ್ತಿಯ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಇನ್ನೂ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು 2ನೇ ಬಾರಿಗೆ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದೆ.

    2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್‌ ಗಂಭೀರ್‌ ಈ ಬಾರಿ ತಂಡದ ಕೋಚ್‌ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ. ಇದನ್ನೂ ಓದಿ: ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ಕರಗಿದ ಸನ್‌ ತಾಪ – 113ಕ್ಕೆ ಹೈದರಾಬಾದ್‌ ಆಲೌಟ್‌; ಕೋಲ್ಕತ್ತಾಗೆ 114 ರನ್‌ಗಳ ಗುರಿ!

  • ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಅಂದು ಕ್ಯಾಪ್ಟನ್, ಇಂದು ಮೆಂಟರ್‌ ಆಗಿ ಟ್ರೋಫಿ‌ ಗೆದ್ದುಕೊಟ್ಟ ಗಂಭೀರ್‌; ಹಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡ ಬಾದ್‌ ಷಾ

    ಚೆನ್ನೈ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ನೂತನ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಆದ್ರೆ ಕೆಕೆಆರ್‌ ಗೆಲುವಿನ ಹಿಂದೆ ಟೂರ್ನಿಯುದ್ಧಕ್ಕೂ ಕೋಚ್‌ ಗೌತಮ್‌ ಗಂಭೀರ್‌ (Gautam Gambhir) ಅವರ ಪಾತ್ರ ಅಷ್ಟೇ ಪ್ರಮುಖವಾಗಿದೆ.

    ಹೌದು. ಮೊದಲಿನಿಂದಲೂ ಕೆಕೆಆರ್‌ ತಂಡದೊಂದಿಗೆ (KKR Team) ಅವಿನಾಭಾವ ಸಂಬಂಧ ಹೊಂದಿರುವ ಗೌತಮ್‌ ಗಂಭೀರ್‌ 2022, 2023ರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಕೋಚ್‌ ಆಗಿ ಕಾರ್ಯನಿರ್ವಹಿಸಿದ್ದರು. 2024ರಲ್ಲಿ ಮತ್ತೆ ತವರು ತಂಡಕ್ಕೆ ಮೆಂಟರ್‌ ಆಗಿ ಮರಳಿದ ಗಂಭೀರ್‌ ಟ್ರೋಫಿ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆಕೆಆರ್‌ ತಂಡದ ನಾಯಕನಾಗಿ ಮತ್ತು ಕೋಚ್‌ ಆಗಿ ಕೆಕೆಆರ್‌ ತಂಡಕ್ಕೆ ಮೂರು ಟ್ರೋಫಿ ಗೆದ್ದುಕೊಟ್ಟಿರುವುದು ಮತ್ತೊಂದು ವಿಶೇಷ.

    2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ ತಮ್ಮ ನಾಯಕತ್ವದಲ್ಲಿ ಕೆಕೆಆರ್‌ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದರು. ಇದೀಗ 10 ವರ್ಷಗಳ ಬಳಿಕ ಕೋಚ್‌ ಆಗಿ ತಂಡವನ್ನು ಮುನ್ನಡೆಸಿದ ಗಂಭೀರ್‌ ತಂಡವನ್ನು ಚಾಂಪಿಯನ್‌ ಆಗಿ ಮಾಡಿದ್ದಾರೆ. ಇದನ್ನೂ ಓದಿ: ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಹಣೆಗೆ ಮುತ್ತಿಟ್ಟ ಶಾರುಖ್‌:
    ಕೆಕೆಆರ್‌ ಗೆಲುವಿನ ಸಂಭ್ರಮಾಚರಣೆ ವೇಳೆ ಫ್ರಾಂಚೈಸಿ ಮಾಲೀಕರೂ ಆದ ನಟ ಶಾರುಖ್ ಖಾನ್, ಕೆಕೆಆರ್‌ ತಂಡದ ಮೆಂಟರ್‌ ಗೌತಮ್‌ ಗಂಭೀರ್‌ ಅವರ ಹಣೆಗೆ ಮುತ್ತಿಟ್ಟು ಅಭಿನಂದನೆ ಸಲ್ಲಿಸಿದ್ದಾರೆ. ಕೆಕೆಆರ್‌ ತಂಡ ಗೆಲುವು ಸಾಧಿಸುತ್ತಿದ್ದಂತೆ ಮೈದಾನಕ್ಕೆ ಧುಮುಕಿದ ಬಾದ್‌ ಶಾ, ಅಭಿಮಾನಿಗಳೊಂದಿಗೆ ಫೋಟೋಗೆ ಪೋಸ್‌ ಕೊಟ್ಟಿದ್ದಾರೆ. ಬಳಿಕ ತಂಡದ ಪ್ರತಿಯೊಬ್ಬ ಆಟಗಾರರಿಗೂ ಪ್ರೀತಿಯ ಅಪ್ಪುಗೆ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಮತ್ತೆ ತವರಿಗೆ ಮರಳಿ ಚಾಂಪಿಯನ್‌ ಕಿರೀಟ ಗೆದ್ದುಕೊಟ್ಟ ಗೌತಮ್‌ ಗಂಭೀರ್‌ ಅವರ ಗಣೆಗೆ ಮುತ್ತಿಟ್ಟು ಖುಷಿ ಹಂಚಿಕೊಂಡಿದ್ದಾರೆ.

    ಐಪಿಎಲ್‌ನಲ್ಲಿ ಗೌತಮ್‌ ಗಂಭೀರ್‌ ಸಾಧನೆ:
    ಐಪಿಎಲ್‌ನಲ್ಲಿ ಗೌತಮ್‌ ಗಂಭೀರ್‌ ಅವರು ತಮ್ಮದೇ ವಿಶೇಷ ಸಾಧನೆ ಮಾಡಿದ್ದಾರೆ. ತಂಡವೊಂದರ ನಾಯಕನಾಗಿ 2 ಬಾರಿ ಹಾಗೂ ತಂಡವೊಂದರ ಕೋಚ್‌ ಆಗಿ 1 ಬಾರಿ ಐಪಿಎಲ್‌ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ನಾಯಕನಾಗಿ 3 ಬಾರಿ ಪ್ಲೇ ಆಫ್‌ ವರೆಗೆ ತಂಡವನ್ನು ಮುನ್ನಡೆಸಿದ್ದರೆ, ಕೋಚ್‌ ಆಗಿಯೂ ಮೂರು ಬಾರಿ ತಂಡವೊಂದನ್ನು ಮುನ್ನಡೆಸಿದ ಕೀರ್ತಿ ಇವರ ಹೆಸರಿಗಿದೆ.

    2022ರ ಆವೃತ್ತಿಯಲ್ಲಿ ಐಪಿಎಲ್‌ ಪ್ರವೇಶಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ಗೌತಮ್‌ ಗಂಭೀರ್‌ ಅವರ ನೇತೃತ್ವದಲ್ಲಿ ಮೊದಲ ಎರಡೂ ಆವೃತ್ತಿಗಳಲ್ಲಿ ಪ್ಲೇ ಆಫ್‌ ಪ್ರವೇಶಿಸಿತ್ತು. ಇದನ್ನೂ ಓದಿ:  IPL 2024 Champions: 10 ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌! 

  • ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಕೆಕೆಆರ್‌ ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ – ನೂತನ ಚಾಂಪಿಯನ್ಸ್‌ಗೆ ದೀದಿ ವಿಶ್‌

    ಚೆನ್ನೈ: 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಚಾಂಪಿಯನ್‌ (IPL 2024 Champions) ಪಟ್ಟ ಮುಡಿಗೇರಿಸಿಕೊಂಡ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee )ಅಭಿನಂದನೆ ಸಲ್ಲಿಸಿದ್ದಾರೆ.

    ಕೆಕೆಆರ್‌ ತಂಡ ಗೆಲುವು ಸಾಧಿಸುತ್ತಿದ್ದಂತೆ ಮಮತಾ ಬ್ಯಾನರ್ಜಿ ತಮ್ಮ ಎಕ್ಸ್‌ ಖಾತೆ ಮೂಲಕ ವಿಜೇತ ತಂಡಕ್ಕೆ ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ (KKR) ಗೆಲುವು ಬಂಗಾಳದಾದ್ಯಂತ ಸಂಭ್ರಮ ತಂದಿದೆ. ಐಪಿಎಲ್‌ನ ಈ ಋತುವಿನಲ್ಲಿ ದಾಖಲೆಯ ಪ್ರದರ್ಶನ ನೀಡಿದ್ದಕ್ಕಾಗಿ ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಫ್ರಾಂಚೈಸಿಗೆ ನಾನು ವೈಯಕ್ತಿಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಮುಂಬರುವ ವರ್ಷಗಳಲ್ಲಿ ಇನ್ನಷ್ಟು ಇಂತಹ ಮೋಡಿಮಾಡುವ ಗೆಲುವು ಸಿಗಲೆಂದು ಹಾರೈಸುತ್ತೇನೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಶುಭ ಹಾರೈಸಿದ್ದಾರೆ.

    10 ವರ್ಷಗಳ ಬಳಿಕ ಐಪಿಎಲ್‌ ಕಿರೀಟ:
    17ನೇ ಆವೃತ್ತಿಯ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿದೆ. 2012 ಮತ್ತು 2014ರಲ್ಲಿ ಗೌತಮ್‌ ಗಂಭೀರ್‌ (Gautam Gambhir) ನಾಯಕತ್ವದಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡ 10 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ಅವರ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಅಲ್ಲದೇ ಹಿಂದೆ ತಂಡದ ನಾಯಕನಾಗಿ ಟ್ರೋಫಿ ಗೆದ್ದುಕೊಟ್ಟಿದ್ದ ಗೌತಮ್‌ ಗಂಭೀರ್‌ ಈ ಬಾರಿ ತಂಡದ ಕೋಚ್‌ ಆಗಿ ಟ್ರೋಫಿ ತಂದುಕೊಟ್ಟಿರುವುದು ವಿಶೇಷ.

    ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ 18.3 ಓವರ್‌ಗಳಲ್ಲಿ 113 ರನ್‌ಗಳಿಗೆ ಸರ್ವಪತನ ಕಂಡಿತ್ತು. ಅಲ್ಪ ಮೊತ್ತ ಗುರಿ ಪಡೆದ ಕೆಕೆಆರ್‌ ಕೇವಲ 10.3 ಓವರ್‌ಗಳಲ್ಲೇ 114 ರನ್‌ ಗಳಿಸಿ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

  • ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ಕರಗಿದ ಸನ್‌ ತಾಪ – 113ಕ್ಕೆ ಹೈದರಾಬಾದ್‌ ಆಲೌಟ್‌; ಕೋಲ್ಕತ್ತಾಗೆ 114 ರನ್‌ಗಳ ಗುರಿ!

    ಕೆಕೆಆರ್‌ ಬೌಲರ್‌ಗಳ ಅಬ್ಬರಕ್ಕೆ ಕರಗಿದ ಸನ್‌ ತಾಪ – 113ಕ್ಕೆ ಹೈದರಾಬಾದ್‌ ಆಲೌಟ್‌; ಕೋಲ್ಕತ್ತಾಗೆ 114 ರನ್‌ಗಳ ಗುರಿ!

    ಚೆನ್ನೈ: ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ಬೌಲರ್‌ಗಳ ಅಬ್ಬರಕ್ಕೆ ತತ್ತರಿಸಿದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡ ಕೇವಲ 113 ರನ್‌ಗಳಿಗೆ ಆಲೌಟ್‌ ಆಗಿದೆ. ಈ ಮೂಲಕ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡದ ಗೆಲುವಿಗೆ 114 ರನ್‌ಗಳ ಗುರಿ ನೀಡಿದೆ.

    ಚೆನ್ನೈನ ಎಂ.ಎ ಚಿದಂಬರಂ (ಚೆಪಾಕ್‌) ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ಫೀಲ್ಡಿಂಗ್ ‌ಮಾಡುವ ಅವಕಾಶವನ್ನು ಕೆಕೆಆರ್‌ಗೆ ಬಿಟ್ಟುಕೊಟ್ಟಿತ್ತು.

    ಕ್ವಾಲಿಫೈಯರ್‌ 1ನಲ್ಲಿ ಕೋಲ್ಕತ್ತಾ ವಿರುದ್ಧ ಹೀನಾಯ ಸೋಲು ಕಂಡಿದ್ದ ಹೈದರಾಬಾದ್‌ ತಂಡವಿಂದು ಸ್ಫೋಟಕ ಆರಂಭ ಪಡೆಯುವ ನಿರೀಕ್ಷೆಯಲ್ಲಿತ್ತು. ಆದ್ರೆ ಮೊದಲ ಓವರ್‌ನಿಂದಲೇ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು.

    ಸ್ಫೋಟಕ ಬ್ಯಾಟ್ಸ್‌ಮನ್‌ ಅಭಿಷೇಕ್‌ ಶರ್ಮಾ (Abhishek Sharma) 2 ರನ್‌ಗಳಿಗೆ ಔಟಾದರೆ ಟ್ರಾವಿಸ್‌ ಹೆಡ್‌ ತಾವು ಎದುರಿಸಿದ ಮೊದಲ ಎಸೆತದಲ್ಲೇ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಈ ಬೆನ್ನಲ್ಲೇ ರಾಹುಲ್‌ ತ್ರಿಪಾಠಿ, ಏಡನ್‌ ಮಾರ್ಕ್ರಮ್‌, ನಿತೀಶ್‌ ಕುಮಾರ್‌ ಸೇರಿದಂತೆ ಇತರ ಬ್ಯಾಟರ್‌ಗಳು ಪೆವಿಲಿಯನ್‌ ಪರೇಡ್‌ ನಡೆಸಿದರು.

    ಅಭಿಷೇಕ್‌ ಕೇವಲ 2 ರನ್‌ ಗಳಿಸಿದ್ರೆ, ತ್ರಿಪಾಠಿ 9 ರನ್‌, ಮಾರ್ಕ್ರಮ್‌ 20 ರನ್‌, ನಿತೀಶ್‌ ಕುಮಾರ್‌ ರೆಡ್ಡಿ 13 ರನ್‌, ಹೆನ್ರಿಚ್‌ ಕ್ಲಾಸೆನ್‌ 16 ರನ್‌, ಶಹಬಾಜ್‌ ಅಹ್ಮದ್‌ 8 ರನ್‌, ಅಬ್ದುಲ್‌ ಸಮದ್‌, ಜಯದೇವ್‌ ಉನದ್ಕಟ್‌ ತಲಾ 4 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರೆ ಪ್ಯಾಟ್‌ ಕಮ್ಮಿನ್ಸ್‌ (Pat Cummins) 19 ಎಸೆತಗಳಲ್ಲಿ 24 ರನ್‌ಗಳಿಸಿ ಔಟಾದರು. ಅಂತಿಮವಾಗಿ ಹೈದರಾಬಾದ್‌ ತಂಡ 113 ರನ್‌ಗಳಿಗೆ ಆಲೌಟ್‌ ಆಯಿತು.

    ಕೆಕೆಆರ್‌ ಪರ ಮಾರಕ ಬೌಲಿಂಗ್‌ ದಾಳಿ ನಡೆಸಿದ ಆಂಡ್ರೆ ರಸ್ಸೆಲ್‌ 3 ವಿಕೆಟ್‌ ಕಿತ್ತರೆ, ಮಿಚೆಲ್‌ ಸ್ಟಾರ್ಕ್‌, ಹರ್ಷಿತ್‌ ರಾಣಾ, ತಲಾ 2 ವಿಕೆಟ್‌, ವರುಣ್‌ ಚಕ್ರವರ್ತಿ, ವೈಭವ್‌ ಅರೋರಾ, ಸುನೀಲ್‌ ನರೇನ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • IPL 2024 Final: ಟಾಸ್‌ ಗೆದ್ದ ಸನ್‌ ರೈಸರ್ಸ್‌ ಬ್ಯಾಟಿಂಗ್‌ ಆಯ್ಕೆ!

    IPL 2024 Final: ಟಾಸ್‌ ಗೆದ್ದ ಸನ್‌ ರೈಸರ್ಸ್‌ ಬ್ಯಾಟಿಂಗ್‌ ಆಯ್ಕೆ!

    ಚೆನೈ: 2024ರ ಐಪಿಎಲ್‌ ಆವೃತ್ತಿಯು ಮುಕ್ತಾಯ ಹಂತಕ್ಕೆ ಬಂದಿದೆ. ಇಲ್ಲಿನ ಎಂ.ಎ ಚಿದಂಬರಂ (ಚೆಪಾಕ್‌) ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ವಿರುದ್ಧ ನಡೆಯುತ್ತಿರುವ 17ನೇ ಆವೃತ್ತಿಯ ಐಪಿಎಲ್‌ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಸನ್‌ ರೈಸರ್ಸ್‌ ಹೈದರಾಬಾದ್‌ (Sunrisers Hyderabad) ತಂಡ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದೆ.

    2016ರಲ್ಲಿ ಡೇವಿಡ್‌ ವಾರ್ನರ್‌ ನಾಯಕತ್ವದಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ (SRH) ತಂಡ 3ನೇ ಬಾರಿಗೆ ಐಪಿಎಲ್‌ ಫೈನಲ್‌ (IPL 2024 Final) ಪ್ರವೇಶಿಸಿದೆ. ಇನ್ನೂ 2012 ಮತ್ತು 2014ರ ಐಪಿಎಲ್‌ ಆವೃತ್ತಿಯಲ್ಲಿ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡಿದ್ದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ 4ನೇ ಬಾರಿಗೆ ಫೈನಲ್‌ ಪ್ರವೇಶಿಸಿದೆ. ಇಂದಿನ ಗೆಲುವು ಯಾರ ಕೈ ಹಿಡಿಯಲಿದೆ ಎಂಬುದನ್ನು ಕಾದುನೋಡಬೇಕಿದೆ.

    ಉಭಯ ತಂಡಗಳ ಪ್ಲೇಯಿಂಗ್ XI:
    ಕೋಲ್ಕತಾ ನೈಟ್‌ ರೈಡರ್ಸ್‌:
    ಸುನೀಲ್‌ ನರೇನ್‌, ರೆಹಮಾನುಲ್ಲಾ ಗುರ್ಬಾಝ್ (ವಿಕೆಟ್‌ ಕೀಪರ್‌), ವೆಂಕಟೇಶ್‌ ಅಯ್ಯರ್‌, ಶ್ರೇಯಸ್‌ ಅಯ್ಯರ್‌ (ನಾಯಕ), ರಿಂಕು ಸಿಂಗ್‌, ಆಂಡ್ರೆ ರಸೆಲ್‌, ರಮಣ್‌ದೀಪ್ ಸಿಂಗ್‌, ಮಿಚೆಲ್ ಸ್ಟಾರ್ಕ್‌, ವೈಭವ್‌ ಅರೋರಾ, ಹರ್ಷಿತ್‌ ರಾಣಾ, ವರುಣ್‌ ಚಕ್ರವರ್ತಿ

    ಸನ್‌ರೈಸರ್ಸ್‌ ಹೈದರಾಬಾದ್‌:
    ಟ್ರಾವಿಸ್‌ ಹೆಡ್‌, ಅಭಿಷೇಕ್‌ ಶರ್ಮಾ, ರಾಹುಲ್‌ ತ್ರಿಪಾಠಿ, ಏಡನ್‌ ಮಾರ್ಕ್ರಮ್‌. ನಿತೀಶ್‌ ಕುಮಾರ್‌ ರೆಡ್ಡಿ, ಹೆನ್ರಿಕ್‌ ಕ್ಲಾಸೆನ್‌ (ವಿಕೆಟ್‌ ಕೀಪರ್‌), ಶಹಬಾಜ್‌ ಅಹ್ಮದ್‌, ಪ್ಯಾಟ್‌ ಕಮ್ಮಿನ್ಸ್‌ (ನಾಯಕ), ಭುವನೇಶ್ವರ್‌ ಕುಮಾರ್‌, ಜಯದೇವ್‌ ಉನದ್ಕಟ್‌, ಟಿ ನಟರಾಜನ್.

  • ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ – ಈ ಸಲ ಕಪ್ ಯಾರಿಗೆ?

    ಇಂದು ಚೆನ್ನೈನಲ್ಲಿ ರೈಡರ್ಸ್ vs ರೈಸರ್ಸ್ ಫೈನಲ್ ಹಣಾಹಣಿ – ಈ ಸಲ ಕಪ್ ಯಾರಿಗೆ?

    ಚೆನ್ನೈ: ಐಪಿಎಲ್ 2024ರ ಫೈನಲ್ ಪಂದ್ಯಕ್ಕೆ ಚೆನ್ನೈನ (Chennai) ಚೆಪಾಕ್ ಮೈದಾನ (Chepauk Stadium) ಸಜ್ಜಾಗಿದ್ದು, ಈ ಬಾರಿ ಕಿರೀಟ ಯಾರ ಮುಡಿಗೇರಲಿದೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳಲಿದೆ. 17ನೇ ಆವೃತ್ತಿಯ ಪ್ರಶಸ್ತಿ ತಮ್ಮದಾಗಿಸಿಕೊಳ್ಳಲು ಇಂದು ಕೋಲ್ಕತ್ತಾ ನೈಟ್ ರೈಡರ್ಸ್‌ (KKR) ಮತ್ತು ಸನ್ ರೈಸರ್ಸ್ ಹೈದರಾಬಾದ್ (SRH) ಮಧ್ಯೆ ರೋಚಕ ಕಾದಾಟ ನಡೆಯಲಿದೆ.

    ಐಪಿಎಲ್ 2024ರ (IPL 2024) ಲೀಗ್ ಹಂತದ ಅಗ್ರ ಎರಡು ತಂಡಗಳಾಗಿರುವ ಕೆಕೆಆರ್ ಮತ್ತು ಎಸ್‌ಆರ್‌ಹೆಚ್, ಮತ್ತೊಮ್ಮೆ ರನ್ ಮಳೆ ಹರಿಸಲು ಸಜ್ಜಾಗಿವೆ. ಆದರೆ, ಚೆನ್ನೈನ ನಿಧಾನ ಗತಿಯ ಪಿಚ್ ಉಭಯ ತಂಡಗಳ ಸ್ಫೋಟಕ ಆಟಕ್ಕೆ ಹೇಗೆ ವರ್ತಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: USAಗೆ ಹಾರಿದ ಟೀಂ ಇಂಡಿಯಾ ಮೊದಲ ಬ್ಯಾಚ್‌ – ವಿಶ್ವಕಪ್‌ ಗೆದ್ದುಬರುವಂತೆ ಕೋಟ್ಯಂತರ ಅಭಿಮಾನಿಗಳ ಹಾರೈಕೆ!

    ಅಹಮದಾಬಾದ್‌ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಎಸ್‌ಆರ್‌ಹೆಚ್ ತಂಡದ ವಿರುದ್ಧ ಗೆದ್ದ ಕೆಕೆಆರ್, ನೇರವಾಗಿ ಫೈನಲ್ ಪ್ರವೇಶಿಸಿತು. ಇದೇ ವೇಳೆ ಕೆಕೆಆರ್ ವಿರುದ್ಧ ಸೋತ ಸನ್‌ರೈಸರ್ಸ್, ಆ ಬಳಿಕ ಎರಡನೇ ಕ್ವಾಲಿಫೈಯರ್ ಕದನದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್‌ಗಳಿಂದ ಗೆದ್ದು ಮತ್ತೆ ಕೆಕೆಆರ್ ತಂಡವನ್ನು ಎದುರಿಸಲು ಸಜ್ಜಾಗಿದೆ. ಶುಕ್ರವಾರವಷ್ಟೇ ಚೆಪಾಕ್ ಮೈದಾನದಲ್ಲಿ ರಾಜಸ್ಥಾನವನ್ನು ಸೋಲಿಸಿದ ಹೈದರಾಬಾದ್‌ಗೆ ಈ ಪಿಚ್ ಹೇಗೆ ವರ್ತಿಸುತ್ತದೆ ಎಂಬುದರ ಅರಿವಾಗಿದೆ. ಎರಡೂ ತಂಡಗಳ ಬ್ಯಾಟಿಂಗ್, ಬೌಲಿಂಗ್ ವಿಭಾಗ ಬಲಿಷ್ಟವಾಗಿದೆ. ಇದನ್ನೂ ಓದಿ: Malaysia Masters: ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಸಿಂಧು!

    ಫೈನಲ್ ಪಂದ್ಯಕ್ಕೂ ಮುನ್ನ ಅದ್ಧೂರಿ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ನಟ-ನಟಿಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದನ್ನೂ ಓದಿ: IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಕೆಕೆಆರ್ ತಂಡ 14 ಪಂದ್ಯಗಳಲ್ಲಿ 9 ಪಂದ್ಯವನ್ನು ಗೆದ್ದು, 3 ಪಂದ್ಯದಲ್ಲಿ ಸೋಲನ್ನು ಅನುಭವಿಸಿದೆ. ಇನ್ನೂ 2 ಪಂದ್ಯ ಮಳೆಗೆ ಬಲಿಯಾಗಿದೆ. ಒಟ್ಟು 20 ಅಂಕಗಳನ್ನು ಗಳಿಸಿ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇನ್ನು ಎಸ್‌ಆರ್‌ಹೆಚ್ ತಂಡ 14 ಪಂದ್ಯಗಳಲ್ಲಿ 8 ಪಂದ್ಯ ಗೆದ್ದು, 5 ಪಂದ್ಯದಲ್ಲಿ ಸೋಲುಂಡಿದೆ. ಒಟ್ಟು 17 ಅಂಕಗಳನ್ನು ಗಳಿಸಿರುವ ಹೈದರಾಬಾದ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ. ಇದನ್ನೂ ಓದಿ: Divorce Rumours: ಪತ್ನಿ ನತಾಶಾಗೆ ವಿಚ್ಛೇದನ ನೀಡಿದ್ರೆ 70% ಕರಗಲಿದೆ ಪಾಂಡ್ಯ ಸಂಪತ್ತು!

  • IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಚೆನ್ನೈ: ಸನ್‌ ರೈಸರ್ಸ್‌ ಹೈದರಾಬಾದ್‌ ಹಾಗೂ ಕೆಕೆಆರ್‌ ನಡುವಿನ ಐಪಿಎಲ್‌ ಫೈನಲ್‌ (IPL Final) ಪಂದ್ಯವು ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಸೂಪರ್‌ ಸಂಡೇ (ಮೇ 26) ನಡೆಯಲಿದೆ. ಅಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಆದ್ರೆ ಫೈನಲ್‌ ಪಂದ್ಯಕ್ಕೆ ಇದೀಗ ʻರೆಮಲ್‌ʼ ಚಂಡಮಾರುತದ (Cyclone Remal) ಆತಂಕ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರಿತ್ಯದಿಂದ ತೀವ್ರ ಚಂಡಮಾರುತ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

    ಫೈನಲ್‌ ಪಂದ್ಯವು ಮಳೆಗೆ ಬಲಿಯಾದರೆ ವಿಜೇತರು ಯಾರಾಗ್ತಾರೆ? ನಿಯಮಗಳು ಹೇಗೆ ಅನ್ವಯವಾಗುತ್ತದೆ ಅನ್ನೋ ಬಗ್ಗೆ ತಿಳಿಯುವ ಕುತೂಹಲ ನಿಮಿಗಿದ್ದರೆ ಮುಂದೆ ಓದಿ..

    ಭಾನುವಾರ ಚೆನ್ನೈ ಹವಾಮಾನ ಹೇಗಿರಲಿದೆ?
    ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ತಮಿಳುನಾಡಿನ ಚೆನ್ನೈನಲ್ಲಿ (Chennai weather) ಭಾನುವಾರ ಬಿಸಿಲು ಹಾಗೂ ಮೋಡ ಮುಸುಕಿದ ವಾತಾವರಣ ಇರಲಿದೆ. 20% ಮಳೆ ಸಾಂದ್ರತೆಯಿರಲಿದ್ದು, 56% ತೇವಾಂಶ ಇರಲಿದೆ. ಗಂಟೆಗೆ 23 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 2024ರ ಐಪಿಎಲ್‌ಗೆ ವಿದಾಯ; ಅಭಿಮಾನಿಗಳೊಂದಿಗೆ ಸಿಹಿ-ಕಹಿ ನೆನಪು ಹಂಚಿಕೊಂಡ ಆರ್‌ಸಿಬಿ!

    ಮಳೆ ಅಡ್ಡಿಯಾದ್ರೆ ಮೀಸಲು ದಿನ ಇದೆಯೇ?
    ಲೀಗ್‌ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನ ಇರಲಿಲ್ಲ. ಫೈನಲ್​ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ಲೂಯಿಸ್‌ (DSL) ನಿಯಮದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ. ಕಳೆದ ವರ್ಷ ಏಕದಿನ ಏಷ್ಯಾಕಪ್‌ (ODI Asia Cup) ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈ ನಿಯಮವನ್ನು ಅನ್ವಯಿಸಲಾಗಿತ್ತು. ಇದನ್ನೂ ಓದಿ: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

    ಮೀಸಲು ದಿನಕ್ಕೂ ಮಳೆ ಬಂದರೆ ಕಥೆ ಏನು?
    ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾಗಿ ಮೀಸಲು ದಿನಕ್ಕೂ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವುಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಪಡೆದ ರನ್‌ರೇಟ್‌, ಅಂಕಗಳ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ. ಒಂದು ವೇಳೆ ಪಾಯಿಂಟ್ಸ್‌ ಪಟ್ಟಿಯಲ್ಲಿ ವಿಜೇತರನ್ನ ನಿರ್ಧರಿಸುವುದಾದರೆ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವೇ ಚಾಂಪಿಯನ್‌ ಆಗಲಿದೆ, ಸನ್‌ ರೈಸರ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಲಿದೆ. ಏಕೆಂದರೆ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ 17 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.