Tag: KKRTC

  • ಕಲಬುರಗಿ | ದಸರಾ ಹಬ್ಬದ ಪ್ರಯುಕ್ತ 500 ಹೆಚ್ಚುವರಿ ಬಸ್ ನಿಯೋಜನೆ

    ಕಲಬುರಗಿ | ದಸರಾ ಹಬ್ಬದ ಪ್ರಯುಕ್ತ 500 ಹೆಚ್ಚುವರಿ ಬಸ್ ನಿಯೋಜನೆ

    – 4ಕ್ಕಿಂತ ಹೆಚ್ಚು ಟಿಕೆಟ್‌ ಒಟ್ಟಿಗೆ ಬುಕ್‌ ಮಾಡಿದ್ರೆ ಡಿಸ್ಕೌಂಟ್‌

    ಕಲಬುರಗಿ: ದಸರಾ ಹಬ್ಬ, ವಾರಾಂತ್ಯ ಹಾಗೂ ಸಾಲು ರಜೆ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (KKRTC_ ಪ್ರದೇಶದ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು ಮತ್ತು ಸೋಲಾಪೂರದ ತುಳಜಾಪುರಕ್ಕೆ ಹೋಗಿ ಬರಲು ಪ್ರಯಾಣಿಕರ ಅನುಕೂಲಕ್ಕಾಗಿ 500 ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ ಸುಶೀಲಾ ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆಪ್ಟೆಂಬರ್ 29ರ ವರೆಗೆ ಸಂಸ್ಥೆ ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು (Bengaluru), ತುಳಜಾಪೂರ ಸೇರಿದಂತೆ ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಸೆಪ್ಟೆಂಬರ್ 26 (ಇಂದಿನಿಂದ) ರಿಂದ ಸೆ.27 ಹಾಗೂ ಸೆ.30 ರಂದು ಬೆಂಗಳೂರಿನಿಂದ ಇತರೆ ಸ್ಥಳಗಳಿಗೆ ಹೆಚ್ಚುವರಿ ವಾಹನಗಳನ್ನ ಕಾರ್ಯಾಚರಣೆಗೆ ನಿಯೋಜಿಸಲಾಗುತ್ತಿದೆ. ಇನ್ನು ಹಬ್ಬ ಮತ್ತು ರಜೆ ಮುಗಿದ ನಂತರ ಅಕ್ಟೋಬರ್ 3 ರಿಂದ 5ರ ವರೆಗೆ ಸಹ ಸಂಚಾರ ದಟ್ಟಣೆಗೆ ಅನುಗುಣವಾಗಿ ವಾಹನಗಳ ಕಾರ್ಯಾಚರಣೆ ನಡೆಯಲಿದೆ ಎಂದಿದ್ದಾರೆ.

    ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಬಸ್ ನಲ್ಲಿ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅವಕಾಶವಿದ್ದು, ಪ್ರಯಾಣಿಕರು ಕರ್ನಾಟಕ ಹಾಗೂ ಅಂತರ ರಾಜ್ಯದಲ್ಲಿರುವ 18 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮುಖಾಂತರ ಆಸನ ಬುಕಿಂಗ್‌ ಮಾಡಬಹುದಾಗಿದೆ. 4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5ರಷ್ಟು ಅಥವಾ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಟ್ಟಿಗೆ ಕಾಯ್ದಿರಿಸಿದಲ್ಲಿ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯತಿ ನೀಡಲಾಗುತ್ತಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ, ಪಿಕ್ ಅಪ್ ಪಾಯಿಂಟ್ ಸ್ಥಳ ಮತ್ತು ಹೆಸರು ಗಮನಿಸಬೇಕೆಂದು ಅವರು ತಿಳಿಸಿದ್ದಾರೆ.

  • ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು – ಸಾರಿಗೆ ಇಲಾಖೆ ಆದೇಶ

    ಇಂದಿನಿಂದಲೇ ಸಾರಿಗೆ ನೌಕರರ ರಜೆ ರದ್ದು – ಸಾರಿಗೆ ಇಲಾಖೆ ಆದೇಶ

    – ಡ್ಯೂಟಿ ಮಾಡಿಲ್ಲ ಅಂದ್ರೆ ಸಂಬಳ ಕೊಡಲ್ಲ
    – ಅಗತ್ಯಬಿದ್ದರೆ ವಾರದ ರಜೆಗಳೂ ಕಟ್‌

    ಬೆಂಗಳೂರು: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆ.5 ರಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು (Transport Employees) ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಸಾರಿಗೆ ಇಲಾಖೆ ನೌಕರರಿಗೆ ಬಿಗ್‌ ವಾರ್ನಿಂಗ್‌ ಕೊಟ್ಟಿದೆ. ಆ.4ರಿಂದಲೇ ಅನ್ವಯವಾಗುವಂತೆ ಅನಿರ್ದಿಷ್ಟಾವಧಿವರೆಗೆ ಸಾರಿಗೆ ನೌಕರರ ರಜೆಯನ್ನ ರದ್ದುಗೊಳಿಸಿ ಸಾರಿಗೆ ಇಲಾಖೆ (Karnataka Transport Department) ಸುತ್ತೋಲೆ ಹೊರಡಿಸಿದೆ.

    ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ, ಉಳಿಯದ ಯಾವುದೇ ರೀತಿಯ ರಜೆಗಳನ್ನು ಮಂಜೂರು ಮಾಡದಂತೆ ಆಯಾ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದೆ, ಅಗತ್ಯಬಿದ್ದರೆ ವಾರದ ರಜೆ ಕೂಡ ರದ್ದು ಮಾಡಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಇಂದಿನಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರಾಗುವ ನೌಕರರ ವೇತನವನ್ನೂ ಕಡಿತಗೊಳಿಸುವುದಾಗಿ ಸುತ್ತೋಲೆಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ದಸರಾ ಶುರು ಮಾಡಿದ್ದು ಟಿಪ್ಪು ಅಂತ ಹೇಳ್ಬಿಡಿ: ಮಹದೇವಪ್ಪ ವಿರುದ್ಧ ಪ್ರತಾಪ್ ಸಿಂಹ ಕಿಡಿ

    ಸಾರಿಗೆ ಇಲಾಖೆ ಸುತ್ತೋಲೆಯಲ್ಲಿ ಏನಿದೆ?
    * ಆಗಸ್ಟ್‌ 4ರಿಂದಲೇ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಅನುಸೂಚಿಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಆಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು.
    * ಆ.4ರಿಂದಲೇ ಜಾರಿಗೆ ಬರುವಂತೆ ಅನಿವಾರ್ಯ ಸಂದರ್ಭ ಹೊರತುಪಡಿಸಿ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದು.
    * ಆ.4ರಿಂದ ಜಾರಿಗೆ ಬರುವಂತೆ ಮುಷ್ಕರದ ಅವಧಿಯಲ್ಲಿ ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ʻಕೆಲಸ ಮಾಡದಿದ್ದಾಗ ವೇತನವಿಲ್ಲʼ ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳುವುದು.
    * ಈ ಸೂಚನೆಗಳು ವಾರದ ರಜೆ ಮತ್ತು ಧೀರ್ಘಾವಧಿ ರಜೆಯಲ್ಲಿರುವ ನೌಕರರಿಗೆ ಅನ್ವಯಿಸುವುದಿಲ್ಲ. ಆದ್ರೆ ಅನಿವಾರ್ಯ ಸಂದರ್ಭದಲ್ಲಿ ಅವಶ್ಯವಿದ್ದಲ್ಲಿ ನೌಕರರ ವಾರದ ರಜೆಯನ್ನೂ ರದ್ದುಗೊಳಿಸಿ ಕರ್ತವ್ಯದ ಮೇಲೆ ನಿಯೋಜಿಸುವುದು.
    * ಇಂದು (ಆ.4) ಮತ್ತು ನಂತರದ ಮುಷ್ಕರದ ದಿನಗಳಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರ ಪಟ್ಟಿಯಲ್ಲಿ ದಿನವಹಿ/ ಘಟಕವಾರು/ ವರ್ಗಾವಾರು ಸಿದ್ಧಪಡಿಸಿ, ಕೆಲಸ ಮಾಡದಿದ್ದ ದಿನಗಳ ವೇತನ ಕಡಿತಗೊಳಿಸುವುದು. ಅಲ್ಲದೇ, ವಿಶೇಷ ಸೂಚನೆಯಡಿ ನೀಡಿರುವ ನಿರ್ದೇಶನದನ್ವಯ ಕರ್ತವ್ಯಕ್ಕೆ ಗೈರುಹಾಜರಾದ ನೌಕರರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ನಾಲ್ಕು ನಿಗಮಗಳಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ: ನಾಳೆಯಿಂದ ರಸ್ತೆಗಿಳಿಯಲ್ಲ ಬಸ್? – ಇಂದು ಸಿಎಂ ಸಭೆ, ಖಾಸಗಿ ಬಸ್‌ಗಳನ್ನ ರಸ್ತೆಗಿಳಿಸಲು ಜಿಲ್ಲಾಡಳಿತ ಕ್ರಮ

  • Kalaburagi | ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರಿಂದ ಕಂಡಕ್ಟರ್ ಮೇಲೆ ಹಲ್ಲೆ

    Kalaburagi | ಆಧಾರ್ ಕಾರ್ಡ್ ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರಿಂದ ಕಂಡಕ್ಟರ್ ಮೇಲೆ ಹಲ್ಲೆ

    ಕಲಬುರಗಿ: ಆಧಾರ್ ಕಾರ್ಡ್ (Aadhar Card) ಕೇಳಿದ್ದಕ್ಕೆ ಮಹಿಳೆಯ ಸಂಬಂಧಿಕರು ಸರ್ಕಾರಿ ಬಸ್ ಕಂಡಕ್ಟರ್ (Conductor) ಮೇಲೆ ಹಲ್ಲೆ ಮಾಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.

    ಕೆಕೆಆರ್‌ಟಿಸಿ (KKRTC) ಕಂಡಕ್ಟರ್ ಅರ್ಜುನ್ ಕಟ್ಟಿಮನಿ ಹಲ್ಲೆಗೆ ಒಳಗಾಗಿದ್ದಾರೆ. ಯಾದಗಿರಿಯಿಂದ ಕಲಬುರಗಿಗೆ ಬಸ್ ಬರುವಾಗ, ವಾಡಿಯ ರಾವೂರ್ ಬಳಿ ಮಹಿಳೆಯೊಬ್ಬರು ಬಸ್ ಹತ್ತಿದ್ದು, ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟೆಕೆಟ್ ಪಡೆಯಲು ಮುಂದಾಗಿದ್ದಾರೆ. ಇದನ್ನು ಕಂಡ ನಿರ್ವಾಹಕ ನಿಮ್ಮ ಆಧಾರ್ ಕಾರ್ಡ್ ಕೊಡಿ, ಇದು ಬೇರೆಯವರ ಆಧಾರ್ ಕಾರ್ಡ್ ಎಂದು ಹೇಳಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದನ್ನೂ ಓದಿ: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು – ಒಂದು ತಿಂಗಳ ಅಂತರದಲ್ಲಿ 17 ಮಂದಿ ಬಲಿ

    ಈ ವೇಳೆ ಮಹಿಳೆ ತನ್ನ ಸಂಬಂಧಿಕರಿಗೆ ಕರೆ ಮಾಡಿದ್ದಾಳೆ. ವಾಡಿ ಪಟ್ಟಣ ಆಗಮಿಸುತ್ತಿದ್ದಂತೆ ಮಹಿಳೆಯ ಸಂಬಂಧಿಕರು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಕೆಲಕಾಲ ಪ್ರಜ್ಞೆ ತಪ್ಪಿದ ನಿರ್ವಾಹಕ ಬಳಿಕ ಎಚ್ಚೆತ್ತುಕೊಂಡು ಬಳಿಕ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ ಡ್ಯಾಂ ಐತಿಹಾಸಿಕ ದಾಖಲೆಗೆ 1 ಅಡಿಯಷ್ಟೇ ಬಾಕಿ

  • Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

    Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

    ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ (KKRTC) ಬಸ್ಸಿಗೆ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನೆಲಮಂಗಲ (Nelamangala) ತಾಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾದ ಬಳಿ ನಡೆದಿದೆ.

    ವೇಗವಾಗಿ ಬಂದ ಕಾರು (Car) ಹಿಂಬದಿಯಿಂದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಓಬಳಾರೆಡ್ಡಿ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಸುನಿಲ್ ಮತ್ತು ದಿವ್ಯ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

    ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

  • ರಾಜ್ಯದ 4 ಸಾರಿಗೆ ಸಂಸ್ಥೆಗಳಲ್ಲಿ ಆರ್ಥಿಕ ಮುಗ್ಗಟ್ಟು – 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮೋದನೆ

    ರಾಜ್ಯದ 4 ಸಾರಿಗೆ ಸಂಸ್ಥೆಗಳಲ್ಲಿ ಆರ್ಥಿಕ ಮುಗ್ಗಟ್ಟು – 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮೋದನೆ

    ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ (Transportation Agency) ಆರ್ಥಿಕ ಮುಗ್ಗಟ್ಟು ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹಣಕಾಸಿನ ಸಂಸ್ಥೆಗಳಿಂದ ಸಾಲ (Loan) ತೆಗೆದುಕೊಳ್ಳಲು ಸರ್ಕಾರ ಅನುಮೋದನೆ ನೀಡಿದೆ.

    ಸರ್ಕಾರದ ಗ್ಯಾರಂಟಿಯೊಂದಿಗೆ ಷರತ್ತುಬದ್ಧ ಅನುಮತಿಯನ್ನು ಸರ್ಕಾರ ಕೊಟ್ಟಿದೆ. ನಾಲ್ಕೂ ಸಾರಿಗೆ ಸಂಸ್ಥೆಗಳಿಂದ ಒಟ್ಟು 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮತಿ ನೀಡಿದೆ. ಸಾರಿಗೆ ನೌಕರರ ಭವಿಷ್ಯನಿಧಿ ಹಾಗೂ ಇಂಧನ ಪಾವತಿಗೆ ಸಾಲ ಪಡೆಯಲು ಅನುಮೋದನೆ ನೀಡಲಾಗಿದೆ. ಇದನ್ನೂ ಓದಿ: ಮೋದಿ ಮೆಚ್ಚಿದ ಗಾಯಕಿಯನ್ನು ಮದ್ವೆಯಾಗಲಿದ್ದಾರೆ ತೇಜಸ್ವಿ ಸೂರ್ಯ

    ಯಾವ ಸಾರಿಗೆ ಸಂಸ್ಥೆಗೆ ಎಷ್ಟು ಸಾಲ?
    ಕೆಎಸ್‌ಆರ್‌ಟಿಸಿ – 623 ಕೋಟಿ ರೂ.
    ಬಿಎಂಟಿಸಿ – 589 ಕೋಟಿ ರೂ.
    ಎನ್‌ಡಬ್ಲ್ಯೂಕೆಆರ್‌ಟಿಸಿ – 646 ಕೋಟಿ ರೂ.
    ಕೆಕೆಆರ್‌ಟಿಸಿ – 141 ಕೋಟಿ ರೂ.

  • ಕೆನರಾ ಬ್ಯಾಂಕ್ ಜೊತೆಗೆ KKRTC ಒಪ್ಪಂದ – ಸಾರಿಗೆ ನೌಕರರಿಗೆ 1 ಕೋಟಿ ಅಪಘಾತ ವಿಮೆ ಯೋಜನೆ ಜಾರಿ

    ಕೆನರಾ ಬ್ಯಾಂಕ್ ಜೊತೆಗೆ KKRTC ಒಪ್ಪಂದ – ಸಾರಿಗೆ ನೌಕರರಿಗೆ 1 ಕೋಟಿ ಅಪಘಾತ ವಿಮೆ ಯೋಜನೆ ಜಾರಿ

    ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು (KKRTC) ತನ್ನ ನೌಕರರಿಗೆ ಪ್ರೀಮಿಯಮ್ ರಹಿತ 1 ಕೋಟಿ ರೂ. ಮೊತ್ತದ ಅಪಘಾತ ವಿಮೆ ಯೋಜನೆಗೆ ಕೆನರಾ ಬ್ಯಾಂಕ್‌ನೊಂದಿಗೆ (Canara Bank) ಒಪ್ಪಂದ ಮಾಡಿಕೊಂಡಿದೆ.

    ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿಯವರ (Ramalinga Reddy) ಬೆಂಗಳೂರಿನ ಗೃಹ ಕಚೇರಿಯಲ್ಲಿ ಸಚಿವ ಸಮಕ್ಷಮ ಕೆನರಾ ಬ್ಯಾಂಕ್‌ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪಾ ಮತ್ತು ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ವಿಜಯಕುಮಾರ ಪರಸ್ಪರ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಇದನ್ನೂ ಓದಿ: ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಈ ಸಂದರ್ಭದಲ್ಲಿ ಸಚಿವ ರಮಾಲಿಂಗಾರೆಡ್ಡಿ ಮಾತನಾಡಿ, ಸಾರಿಗೆ ನಿಗಮದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತದಿಂದಾಗುತ್ತಿರುವ ಸಾವು-ನೋವುಗಳ ಪ್ರಮಾಣವನ್ನು ಗಮನಿಸಿ ಕೆ.ಕೆ.ಆರ್.ಟಿ.ಸಿ. ನಿಗಮವು ವೈಯಕ್ತಿಕ ಮತ್ತು ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ನೌಕರರು ನಿಧನರಾದಲ್ಲಿ 1 ಕೋಟಿ ರೂ. ಗಳ ಪ್ರೀಮಿಯಮ್ ರಹಿತ ಅಪಘಾತ ವಿಮೆ ಯೋಜನೆ ಜಾರಿಗೊಳಿಸಿದಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಹೋಟೆಲ್‌, ರೆಸ್ಟೋರೆಂಟ್‌, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಮಾರಾಟ, ಸೇವನೆ ನಿಷೇಧ!

    ಯಾರಿಗೆ ಅನುಕೂಲ?
    ಕೆ.ಕೆ.ಆರ್.ಟಿ.ಸಿ ಸಾರಿಗೆ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ನಿಗಮದ ನೌಕರರಿಗೆ ಈ ವಿಮಾ‌‌ ಸೌಲಭ್ಯ ಸಿಗಲಿದೆ. ವೇತನ ಖಾತೆಗಳನ್ನು ಕೆನರಾ ಬ್ಯಾಂಕಿನ ʻಪೇ-ರೋಲ್ ಪ್ಯಾಕೇಜ್ ಸ್ಟೀಮ್ʼ ಅಡಿಯಲ್ಲಿ ತೆರೆದು ಈ ವಿಮಾ ಸೌಲಭ್ಯ ಶುಲ್ಕ ರಹಿತವಾಗಿ ಪಡೆಯಬಹುದಾಗಿದೆ. ಇದನ್ನೂ ಓದಿ: ಮುಡಾದಲ್ಲಿ ನಡೆದಿರೋದು 4-5 ಸಾವಿರ ಕೋಟಿ ಹಗರಣ: ಆರ್‌. ಅಶೋಕ್‌ ಬಾಂಬ್‌

    ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ, ಸುರಕ್ಷಿತ, ಮಿತವ್ಯಯ ಸಾರಿಗೆ ಸೌಲಭ್ಯ ಕಲ್ಪಿಸುವುದರ ಜೊತೆಗೆ ನೌಕರರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಈಗಾಗಲೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನಿಗಮದ ನೌಕರರು ಅಪಘಾತ ವಿಮೆಗೆ ಒಳಪಟ್ಟಿರುತ್ತಾರೆ. ಇದೀಗ ಆ‌ ಸಾಲಿಗೆ ಕೆನರಾ ಬ್ಯಾಂಕ್‌ ಸೇರ್ಪಡೆಯಾಗಿದೆ. ಅಪಘಾತ ಹೊರತುಪಡಿಸಿ ಇತರೇ ನೈರ್ಸಗಿಕ ಸಾವುಗಳಿಗೆ ಕೆನರಾ ಬ್ಯಾಂಕ್ ಪ್ರೀಮಿಯಂ ರಹಿತ 6 ಲಕ್ಷ ರೂ. ವರೆಗೆ ಉಚಿತ ʻಟರ್ಮ್ ಇನ್ಶುರೆನ್ಸ್ʼ ಪಾಲಿಸಿ ಸಹ ನಿಡುತ್ತಿದೆ. ಇದಲ್ಲದೇ ನೌಕರರ ಮಕ್ಕಳ ವಿಧ್ಯಾಭ್ಯಾಸ, ಗೃಹ ಸಾಲ ಹಾಗೂ ವೈಯಕ್ತಿಕ ಮತ್ತು ವಾಹನ ಸಾಲಗಳಿಗೆ ವಿಶೇಷ ಬಡ್ಡಿ ದರ ನಿಗದಿಪಡಿಸಿದ್ದು, ನೌಕರ ವರ್ಗಕ್ಕೆ ಅನುಕೂಲವಾಗಲಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪಾ ಅವರು ಸಚಿವರ ಗಮನಕ್ಕೆ ತಂದರು.

    ಈ‌ ಸಂದರ್ಭದಲ್ಲಿ ಕೆ.ಕೆ.ಆರ್.ಟಿ.ಸಿ. ನಿಗಮ ಮತ್ತು ಕೆನರಾ ಬ್ಯಾಂಕಿನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಮಹಾರಾಷ್ಟ್ರಕ್ಕೆ ಕೆಕೆಆರ್‌ಟಿಸಿ ಬಸ್ ಸಂಚಾರ ಸ್ಥಗಿತ – ಕನ್ನಡಿಗರ ಪರದಾಟ

    ಮಹಾರಾಷ್ಟ್ರಕ್ಕೆ ಕೆಕೆಆರ್‌ಟಿಸಿ ಬಸ್ ಸಂಚಾರ ಸ್ಥಗಿತ – ಕನ್ನಡಿಗರ ಪರದಾಟ

    ಕಲಬುರಗಿ: ಕರ್ನಾಟಕದಿಂದ (Karnataka) ಮಹಾರಾಷ್ಟ್ರಕ್ಕೆ (Maharashtra) ಕೆಕೆಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಂಡ ಹಿನ್ನಲೆ, ತುಳಜಾಪುರದ ಅಂಬಾಭವಾನಿ ದೇವಿ ದರ್ಶನಕ್ಕೆ ತೆರಳಿದ ನೂರಾರು ಕನ್ನಡಿಗರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಕರ್ನಾಟಕದಿಂದ ಮಹಾರಾಷ್ಟ್ರದ ತುಳಜಾಪುರಕ್ಕೆ ಬಸ್ (Bus) ಸೇವೆ ಸ್ಥಗಿತವಾಗಿರುವುದರಿಂದ ನೂರಾರು ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ತುಳಜಾಪುರದ ಬಸ್ ನಿಲ್ದಾಣದಲ್ಲಿಯೇ ಕುಳಿತಿದ್ದಾರೆ. ನಮ್ಮ ಊರಿಗೆ ಹೋಗಲು ಬಸ್ ಬಿಡಿ ಎಂದು ಮಹಿಳೆಯರು ಆಗ್ರಹಿಸುತ್ತಿದ್ದಾರೆ.

    ನಾವು ಫ್ರೀ ಬಸ್ ಎಂಬ ಕಾರಣಕ್ಕೆ ಹೆಚ್ಚಿನ ದುಡ್ಡು ಕೂಡ ತಂದಿಲ್ಲ. ಈಗ ಖಾಸಗಿ ವಾಹನದವರು 500 – 600 ರೂ. ಹಣವನ್ನು ಕೇಳುತ್ತಿದ್ದು, ಎಲ್ಲಿಂದ ಕೋಡೊದು? ಬೆಳಗ್ಗೆಯಿಂದ ಉಪವಾಸ ಇದ್ದೇವೆ. ನಮ್ಮ ಕಷ್ಟ ಯಾರಿಗೆ ಹೇಳಬೇಕು? ನಾವು ನಮ್ಮ ಊರುಗಳಿಗೆ ಹೋಗಬೇಕು. ದಯವಿಟ್ಟು ಬಸ್ ಬಿಡಿ ಎಂದು ಮಹಿಳೆಯರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕೋವಿಡ್‌ನಿಂದ ಹೆಚ್ಚುತ್ತಿದ್ಯಾ ಹೃದಯಾಘಾತ?- ಹೃದ್ರೋಗ ತಜ್ಞರು ಹೇಳೋದು ಏನು?

    ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ನಡೆಯುತ್ತಿರುವ ಹೋರಾಟದಲ್ಲಿ ಪ್ರತಿಭಟನಾಕರರು ಸೋಮವಾರ ಬೀದರ್ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಹೊರಟಿದ್ದ ಕೆಕೆಆರ್‌ಟಿಸಿಯ ಬಸ್ ಅನ್ನು ಉಮರ್ಗಾ ಬಳಿಯ ತರುರಿ ಗ್ರಾಮದಲ್ಲಿ ತಡೆದು ಪ್ರಯಾಣಿಕರನ್ನು ಕೆಳಗಿಳಿಸಿ ಬೆಂಕಿ ಹಚ್ಚಿದ್ದರು. ಈ ಹಿನ್ನೆಲೆಯಲ್ಲಿ ತುಳಜಾಪುರ ಯಾತ್ರೆ ಸೇರಿದಂತೆ ಮಹಾರಾಷ್ಟ್ರಕ್ಕೆ ಅಂತರಾಜ್ಯ ಕಾರ್ಯಾಚರಣೆಯನ್ನು ಕೆಕೆಆರ್‌ಟಿಸಿ ತಾತ್ಕಲಿಕವಾಗಿ ಸ್ಥಗಿತಗೊಳಿಸಿದೆ. ಇದನ್ನೂ ಓದಿ: ನನ್ನ ಹೆಸರು ಕೆಡಿಸಿದ್ದಕ್ಕೆ ಬರಗಾಲ ಬಂದಿದೆ: ರಮೇಶ್ ಜಾರಕಿಹೊಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹಿಳಾ ಪ್ರಯಾಣಿಕರಿಂದ ಕೆಕೆಆರ್‌ಟಿಸಿ ಆದಾಯ ಭಾರೀ ಏರಿಕೆ

    ಮಹಿಳಾ ಪ್ರಯಾಣಿಕರಿಂದ ಕೆಕೆಆರ್‌ಟಿಸಿ ಆದಾಯ ಭಾರೀ ಏರಿಕೆ

    – ಶಕ್ತಿಯೋಜನೆ ಜಾರಿ ಬಳಿಕ 190 ಕೋಟಿ ರೂ. ಆದಾಯ

    ರಾಯಚೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ (Shakti Scheme) ರಾಯಚೂರು (Raichur) ವಿಭಾಗ ಸೇರಿದಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಕಳೆದ ಮೂರು ತಿಂಗಳಿಂದ ಉತ್ತಮ ಆದಾಯ (Income) ಪಡೆಯುತ್ತಿದೆ.

    ಶಕ್ತಿ ಯೋಜನೆ ಆರಂಭವಾದಾಗಿನಿಂದ ಅಂದರೆ ಜೂನ್ 11ರಿಂದ ಆಗಸ್ಟ್ 20ರವರೆಗೆ ಕೇವಲ ಮಹಿಳಾ ಪ್ರಯಾಣಿಕರ ಶಕ್ತಿ ಆದಾಯವೇ 190 ಕೋಟಿ ರೂ. ಆಗಿದೆ. ಈ ಮೊದಲು ಇಡೀ ಕೆಕೆಆರ್‌ಟಿಸಿಯ ತಿಂಗಳ ಆದಾಯ ಸರಾಸರಿ 150 ಕೋಟಿ ರೂ. ಇತ್ತು. ಈಗ ಸರಾಸರಿ ಆದಾಯ ಹೆಚ್ಚಾಗಿದೆ. ಯೋಜನೆ ಆರಂಭವಾದಾಗಿನಿಂದ ಒಟ್ಟು 11.48 ಕೋಟಿ ಜನ ಪ್ರಯಾಣಿಸಿದ್ದಾರೆ. ಇದರಲ್ಲಿ 5.78 ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದನ್ನೂ ಓದಿ: ಅಪರೇಷನ್ ಹಸ್ತ ಬೆನ್ನಲ್ಲೇ ಯಶವಂತಪುರ ಕ್ಷೇತ್ರಕ್ಕೆ ಬಂಪರ್

    ರಾಯಚೂರು ವಿಭಾಗದ ಆದಾಯ ನೋಡುವುದಾದರೆ ಮಹಿಳಾ ಪ್ರಯಾಣಿಕರಿಂದಲೇ 26.85 ಕೋಟಿ ರೂ. ಬಂದಿದೆ. ಬಸ್‌ಗಳ ಸರಾಸರಿ ಲೋಡ್ ಫ್ಯಾಕ್ಟರ್ 68%ನಿಂದ 86%ಗೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಯೋಜನೆ ಜಾರಿಗಿಂತ ಮೊದಲು ಪ್ರತಿನಿತ್ಯ 61 ಲಕ್ಷ ರೂ. ಇದ್ದು, ಸರಾಸರಿ ಆದಾಯ ಈಗ 79 ಲಕ್ಷ ರೂ. ಆಗಿದೆ. ಪ್ರತಿನಿತ್ಯ ಮಹಿಳಾ ಪ್ರಯಾಣಿಕರಿಂದಲೇ ಸರಾಸರಿ 37 ಲಕ್ಷ ರೂ. ಆದಾಯ ಬರುತ್ತಿದೆ. ಇದನ್ನೂ ಓದಿ: ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಬಿಲ್ ಗೇಟ್ಸ್ ಫಿದಾ – ಡಿಜಿಟಲೀಕರಣಕ್ಕೆ ಮನಸೋತ ಪೋಸ್ಟ್ ವೈರಲ್

    ಈಗಾಗಲೇ ಸರ್ಕಾರ ರಾಯಚೂರು ವಿಭಾಗದ ಜೂನ್ ತಿಂಗಳಿನ ಆದಾಯ 6.78 ಕೋಟಿ ರೂ. ಬಿಡುಗಡೆ ಮಾಡಿದ್ದು, ಜುಲೈ ತಿಂಗಳಿನ 12.33 ಕೋಟಿ ರೂ. ಹಾಗೂ ಆಗಸ್ಟ್ 20ರ ವರೆಗಿನ 7.73 ಕೋಟಿ ಬಿಡುಗಡೆ ಮಾಡಬೇಕಿದೆ. ಜಿಲ್ಲೆಗೆ 69 ಹೊಸ ಬಸ್‌ಗಳನ್ನು ಬಿಡಲಾಗಿದ್ದು, 27 ಹೊಸ ಮಾರ್ಗಗಳನ್ನು ಆರಂಭಿಸಲಾಗಿದೆ. ಶ್ರಾವಣ ಮಾಸ ಇರುವುದರಿಂದ ಮಹಿಳಾ ಪ್ರಯಾಣಿಕರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಾಣುತ್ತಿದೆ. ಈ ಮೊದಲು ಕಿರಿಕಿರಿ ಅನುಭವಿಸುತ್ತಿದ್ದ ಚಾಲಕ ಹಾಗೂ ನಿರ್ವಾಹಕರು ಸಹ ಈಗ ನಿರಾಳತೆಯಿಂದ ಬಸ್ ಓಡಿಸುತ್ತಿದ್ದಾರೆ. ಇದನ್ನೂ ಓದಿ: ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಕೆಆರ್‌ಟಿಸಿ ಪರೀಕ್ಷೆಯಲ್ಲೂ ಅಕ್ರಮ – ತೂಕ ಹೆಚ್ಚಳಕ್ಕೆ ಒಳ ಉಡುಪಿನಲ್ಲಿ ಕಬ್ಬಿಣದ ಕಲ್ಲಿಟ್ಟುಕೊಂಡ ಅಭ್ಯರ್ಥಿಗಳು

    ಕೆಕೆಆರ್‌ಟಿಸಿ ಪರೀಕ್ಷೆಯಲ್ಲೂ ಅಕ್ರಮ – ತೂಕ ಹೆಚ್ಚಳಕ್ಕೆ ಒಳ ಉಡುಪಿನಲ್ಲಿ ಕಬ್ಬಿಣದ ಕಲ್ಲಿಟ್ಟುಕೊಂಡ ಅಭ್ಯರ್ಥಿಗಳು

    ಕಲಬುರಗಿ: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮ (PSI Recruitment Scam) ಪ್ರಕರಣ ಮರೆಮಾಚುವ ಮುನ್ನವೇ ಕಲಬುರಗಿಯಲ್ಲಿ (Kalaburagi) ಮತ್ತೊಂದು ನೇಮಕಾತಿಯಲ್ಲಿ ಅಭ್ಯರ್ಥಿಗಳು ಅಕ್ರಮವೆಸಗಿರುವುದು ಪತ್ತೆಯಾಗಿದೆ.

    ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ (KKRTC) ಡ್ರೈವರ್ ಕಂ ಕಂಡಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಿಟ್ಟಿಸಲು ಅಭ್ಯರ್ಥಿಗಳು ವಾಮಮಾರ್ಗ ಹಿಡಿದಿದ್ದಾರೆ. ತಮ್ಮ ತೂಕ ಹೆಚ್ಚಳಕ್ಕೆ ಒಳ ಉಡುಪುಗಳಲ್ಲಿ ಕಬ್ಬಿಣದ ರಾಡ್, ಕಲ್ಲು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾಗಿರುವುದು ನೇಮಕಾತಿಯ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ – ಡಿಕೆಶಿಗೆ ಬಿಗ್ ರಿಲೀಫ್

    ಕೆಕೆಆರ್‌ಟಿಸಿಯಲ್ಲಿ ಚಾಲಕ ಕಂ ಕಂಡಕ್ಟರ್ ಹುದ್ದೆಗೆ ಆಯ್ಕೆಯಾಗಬೇಕಾದರೆ ಅಭ್ಯರ್ಥಿ 55 ಕೆಜಿ ತೂಕ ಇರುವುದು ಕಡ್ಡಾಯವಾಗಿದೆ. ಆದರೆ ಕಡಿಮೆ ತೂಕ ಇರುವ ಅಭ್ಯರ್ಥಿ ತೂಕ ಹೆಚ್ಚಿಸಿಕೊಳ್ಳಲು ವಾಮಮಾರ್ಗ ಅನುಸರಿಸಿ, ಒಳ ಉಡುಪಿನಲ್ಲಿ ಭಾರವಾದ ಕಬ್ಬಿಣದ ರಾಡ್‌ಗಳು, ತಕ್ಕಡಿಯಲ್ಲಿ ಬಳಸುವ ಕಬ್ಬಿಣದ ಕಲ್ಲುಗಳನ್ನು ಕಟ್ಟಿಕೊಂಡು ದೇಹದಾರ್ಢ್ಯ ಪರೀಕ್ಷೆಗೆ ಹಾಜರಾಗಿದ್ದಾರೆ.

    ಇದನ್ನು ದೇಹದಾರ್ಢ್ಯ ಪರೀಕ್ಷೆ ಸಂದರ್ಭದಲ್ಲಿ ಜಾಗೃತ ದಳದ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. 5-10 ಕೆಜಿ ತೂಕದ ಕಲ್ಲುಗಳನ್ನು ಅಭ್ಯರ್ಥಿಗಳು ಒಳ ಉಡುಪಿನಲ್ಲಿ ಹಲವು ಗಂಟೆಗಳ ಕಾಲ ಇಟ್ಟುಕೊಂಡಿರುವುದೇ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಫೆ.14 ಗೋವುಗಳನ್ನು ಅಪ್ಪಿಕೊಳ್ಳುವ ದಿನ ರದ್ದು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k