Tag: KLE

  • ಮೂರುಸಾವಿರ ಮಠದ ಆಸ್ತಿ ಕೆಎಲ್ಇಗೆ ದಾನ – ಲಿಂಗಾಯತ ಮುಖಂಡರ ವಿಶೇಷ ಸಭೆ

    ಮೂರುಸಾವಿರ ಮಠದ ಆಸ್ತಿ ಕೆಎಲ್ಇಗೆ ದಾನ – ಲಿಂಗಾಯತ ಮುಖಂಡರ ವಿಶೇಷ ಸಭೆ

    ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಗೆ ಮೂರು ಸಾವಿರ ಮಠದ ಆಸ್ತಿ ಪರಭಾರೆ ಮಾಡಿರುವುದಕ್ಕೆ ಲಿಂಗಾಯತ ಸಮುದಾಯದ ನಾಯಕರು ಈಗ ಜಾಗೃತರಾಗುತ್ತಿದ್ದಾರೆ. ನೂರಾರು ಕೋಟಿ‌ ರೂಪಾಯಿ ಬೆಲೆಬಾಳುವ ಮೂರುಸಾವಿರ ಮಠದ ಆಸ್ತಿಯನ್ನು ಮರಳಿ ಶ್ರೀ ಮಠಕ್ಕೆ ಪಡೆಯಬೇಕೆಂಬ ಉದ್ದೇಶದಿಂದ ಲಿಂಗಾಯತ ಮುಖಂಡರು ಗೋಕುಲ ರಸ್ತೆಯಲ್ಲಿರುವ ಮಾಜಿ‌‌ ಎಂಎಲ್‌ಸಿ ನಾಗರಾಜ ಛಬ್ಬಿ ಅವರ ಕಾರ್ಯಾಲಯದಲ್ಲಿ ವಿಶೇಷ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.

    ಮೂರುಸಾವಿರ ಮಠದ ಆಸ್ತಿ ಕೆಎಲ್‌ಇ ಸಂಸ್ಥೆಗೆ ಪರಭಾರೆ ಮಾಡುವುದರಿಂದ ಶ್ರೀಮಠಕ್ಕೆ ಆಗುವ ಒಳಿತಾದರೂ ಏನು ಎಂಬುದರ ಬಗ್ಗೆ ಮುಖಂಡರು ವಿಸ್ತೃತವಾಗಿ ಚರ್ಚಿಸಿದರು. ಶ್ರೀಮಠದ ಆಸ್ತಿ ಉಳಿಸಿಕೊಂಡು ಹೋಗುವುದು ಕೇವಲ ಮಠಾಧಿಪತಿಗಳಿಗೆ ಸೇರಿದ ವಿಷಯ ಮಾತ್ರವಲ್ಲ. ಇದಕ್ಕೆ ಎಲ್ಲ ಭಕ್ತರೂ ಸಹಕಾರ ಅತ್ಯವಶ್ಯ. ಶ್ರೀಮಠದ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕೈಂಕರ್ಯಗಳು ದೊಡ್ಡ ಪ್ರಮಾಣದಲ್ಲಿ ನಡೆಯಬೇಕಿದೆ. ಇದಕ್ಕೆ ಶ್ರೀಮಠದ ಆಸ್ತಿ ಸಂದಾಯವಾಗುವ ಹಣದಿಂದ ಈ ಎಲ್ಲ ಸಾಮಾಜಿಕ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದೂ ಅನೇಕರು ಅನಿಸಿಕೆ ವ್ಯಕ್ತಪಡಿಸಿದರು.

    ಯಾವುದೇ ಒಂದು ಸಂಸ್ಥೆಗೆ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ದಾನದ ರೂಪದಲ್ಲಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆ ಅನೇಕರು ಮುಂದಿಟ್ಟರೇ, ಸಮಾಜದಲ್ಲಿರುವ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ಶ್ರೀಮಠದಿಂದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅವರುಗಳ ಬದುಕು ಕಟ್ಟಿಕೊಡುವ ಕೆಲಸ ಮುಂಬರುವ ದಿನಗಳಲ್ಲಿ ಶ್ರೀಮಠದಿಂದ ಮಾಡಬೇಕಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

    ಸದ್ಯ ಕೆಎಲ್‌ಇ ಸಂಸ್ಥೆಗೆ ದಾನದ ರೂಪದಲ್ಲಿ ನೀಡಿರುವ ಕೋಟ್ಯಂತರ ರೂ. ಬೆಲೆಬಾಳುವ ಶ್ರೀಮಠದ ಆಸ್ತಿಯನ್ನು ಮರಳಿ ಮಠಕ್ಕೆ ಹಸ್ತಾಂತರಿಸಬೇಕು ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಮುಖಂಡರು ಒತ್ತಾಯಿಸಿದರು.

     

    ಸಭೆಯಲ್ಲಿ ಮುಖಂಡರಾದ ವಿಧಾನಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಪ್ರಫುಚಂದ್ರ ರಾಯನಗೌಡ್ರ, ಎಂ.ಎಸ್. ಅಕ್ಕಿ, ಅನಿಲಕುಮಾರ ಪಾಟೀಲ್, ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಬಳಿಗಾರ, ನಾಗರಾಜ ಗೌರಿ, ಪ್ರಕಾಶ ಬೆಂಡಿಗೇರಿ, ಜಗನಾಥ್‌ಗೌಡ ಪಾಟೀಲ್, ವಿಜಯನ್‌ಗೌಡ ಪಾಟೀಲ್, ಬಾಬು ಬಟ್ಟೂರ, ನ್ಯಾಯವಾದಿಗಳಾದ ನೀರಲಗಿ, ವಿ.ಕೆ. ಪಾಟೀಲ್, ರಜತ್ ಉಳ್ಳಾಗಡ್ಡಿಮಠ, ರವಿ ದಾಸನೂರ ಸೇರಿದಂತೆ ಇನ್ನೂ ಅನೇಕ ಮುಖಂಡರು ಪಾಲ್ಗೊಂಡಿದ್ದರು.

  • ಸರ್ಕಾರಿ ಶಾಲೆಯ ಗೋಡೆಯಲ್ಲಿ ಪಾಕಿಸ್ತಾನ ಜಿಂದಾಬಾದ್

    ಸರ್ಕಾರಿ ಶಾಲೆಯ ಗೋಡೆಯಲ್ಲಿ ಪಾಕಿಸ್ತಾನ ಜಿಂದಾಬಾದ್

    – ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

    ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆಎಲ್‍ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂಬ ಬರಹವನ್ನು ಬರೆಯಲಾಗಿದ್ದು, ದುಷ್ಕರ್ಮಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

    ಹುಬ್ಬಳ್ಳಿ ತಾಲೂಕಿನ ಬುಡರಶಿಂಗಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಯಾರೋ ದುಷ್ಕರ್ಮಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದಾರೆ. ಕೈ ಬರಹದಿಂದಲೇ ಬರೆದಿರುವ ಬರಹಗಳಾಗಿದ್ದು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆಡಳಿತ ಮಂಡಳಿ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ನೀಡಿದೆ.

    ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಗೆ ದೂರು ದಾಖಲಾಗಿದ್ದು, ಮಾಹಿತಿ ನೀಡಿದ ನಂತರವೂ ಸ್ಥಳಕ್ಕೆ ಭೇಟಿ ನೀಡದ ಪೊಲೀಸರ ಕಾರ್ಯವೈಖರಿಯ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಪುಲ್ವಾಮಾ ದಾಳಿಯಾಗಿ ಫೆ 14ಕ್ಕೆ ಒಂದು ವರ್ಷವಾದ ಬೆನ್ನಲ್ಲೇ ಕಾಶ್ಮೀರ ಮೂಲದ ಅಮೀರ್, ತಾಲೀಬ್ ಮತ್ತು ಬಸೀತ್ ಪಾಕಿಸ್ತಾನ ಸೇನೆಯ ಹಾಡಿಗೆ ಧ್ವನಿಗೂಡಿಸಿ ಪಾಕಿಸ್ತಾನ ಜಿಂದಾಬಾದ್ ಎನ್ನುವ ವಿಡಿಯೋ ಮಾಡಿ ಮೊಬೈಲ್ ಸ್ಟೇಟಸ್ ಹಾಕಿಕೊಂಡಿದ್ದರು. ಈ ಮೂವರು ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಶನಿವಾರ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಿ, ವಿದ್ಯಾರ್ಥಿಗಳನ್ನು ಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆ ಮಾಡಿದಲ್ಲದೇ ವಿದ್ಯಾರ್ಥಿಗಳನ್ನ ಥಳಿಸಿದ್ದರು.

    ಬಂಧಿತ ಅಮೀರ್ ಸಿವಿಲ್ ಎಂಜಿನಿಯರಿಂಗ್‍ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದವನು ಎಂದು ತಿಳಿದು ಬಂದಿದೆ. ಅಲ್ಲದೇ ತಾಲೀಬ್ ಹಾಗೂ ಬಸೀತ್ ಇಬ್ಬರು ಸಿವಿಲ್ ಇಂಜಿನಿಯರಿಂಗ್ ಮೊದಲ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು. ತಾಲೀಬ್ ದಕ್ಷಿಣ ಕಾಶ್ಮೀರದ ಅನಂತನಾಗ್ ಭಾಗದ ವಿದ್ಯಾರ್ಥಿಯಾದರೆ, ಬಸೀತ್ ಉತ್ತರ ಕಾಶ್ಮೀರದ ಸಂಪೂರೆಯವನು ಎಂದು ತಿಳಿದು ಬಂದಿತ್ತು.

  • ಸೈಕಲ್‍ನಲ್ಲೇ ಬಂದು ಪರಿಸರ ಜಾಗೃತಿ ಮೂಡಿಸ್ತಾರೆ ಕೆಎಲ್‍ಇ ಕಾಲೇಜಿನ ಪ್ರಿನ್ಸಿಪಾಲ್!

    ಸೈಕಲ್‍ನಲ್ಲೇ ಬಂದು ಪರಿಸರ ಜಾಗೃತಿ ಮೂಡಿಸ್ತಾರೆ ಕೆಎಲ್‍ಇ ಕಾಲೇಜಿನ ಪ್ರಿನ್ಸಿಪಾಲ್!

    ಬೆಳಗಾವಿ: ರಾಜ್ಯದ ಪ್ರತಿಷ್ಠಿತ ಖಾಸಗಿ ಕಾಲೇಜ್‍ನ ಪ್ರಾಂಶುಪಾಲರಾಗಿ ಲಕ್ಷಾಂತರ ರೂಪಾಯಿ ಸಂಬಳ ಪಡೆದರೂ ಇವರು ಮಾತ್ರ ಸೈಕಲ್‍ನಲ್ಲೇ ಕಾಲೇಜ್‍ಗೆ ಬರುತ್ತಾರೆ.

    ಹೌದು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೆಎಲ್‍ಇ ಎಂಜಿನಿಯರ್ ಕಾಲೇಜ್‍ನ ಪ್ರಿನ್ಸಿಪಾಲ್ ಇವತ್ತಿನ ನಮ್ಮ ಪಬ್ಲಿಕ್ ಹೀರೋ. ಪ್ರತಿನಿತ್ಯ ಸೈಕಲ್ ನಲ್ಲಿ ಬಂದು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ. ಕಾಲೇಜ್‍ಗೆ ಬಂದ ಮೇಲೂ ಕ್ಯಾಂಪಸ್ ನಲ್ಲಿ ಸೈಕಲ್ ನಲ್ಲಿ ಒಂದು ರೌಂಡ್ ಹೋಗಿ ಕೆಲಸ ಕಾರ್ಯಗಳ ಪರಿಶೀಲನೆ ನಡೆಸುತ್ತಾರೆ.

    ಖಾಸಗಿ ಕಾಲೇಜಿನಲ್ಲಿ ಲಕ್ಷ-ಲಕ್ಷ ಸಂಬಳ ಪಡೆದು ಜುಂ ಅಂತ ಕಾರ್‍ನಲ್ಲಿ ಬರದ ಸಿದ್ದರಾಮಪ್ಪ ಇಟ್ಟ ಅವರು, ಸೈಕಲ್‍ನಲ್ಲಿ ಬಂದು ಸಮಾಜದ ಆರೋಗ್ಯ, ಸ್ವಂತ ಆರೋಗ್ಯ ಎರಡನ್ನೂ ಕಾಪಾಡುತ್ತಿದ್ದಾರೆ.