Tag: KM Shivalinge Gowda

  • ಸಚಿವ ಸ್ಥಾನಕ್ಕೆ ಆಗ್ರಹ – ಶಿವಲಿಂಗೇಗೌಡ ಬೆಂಬಲಿಗರ ವಿರುದ್ಧ ವೇದಿಕೆಯಲ್ಲೇ ಸಿಎಂ ಗರಂ

    ಸಚಿವ ಸ್ಥಾನಕ್ಕೆ ಆಗ್ರಹ – ಶಿವಲಿಂಗೇಗೌಡ ಬೆಂಬಲಿಗರ ವಿರುದ್ಧ ವೇದಿಕೆಯಲ್ಲೇ ಸಿಎಂ ಗರಂ

    ಹಾಸನ: ಇಲ್ಲಿನ ಅರಸೀಕೆರೆ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಿಡಿಮಿಡಿಗೊಂಡ ಪ್ರಸಂಗ ನಡೆಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ, ಶಿವಲಿಂಗೇಗೌಡರಿಗೆ (KM Shivalinge Gowda) ಕ್ಯಾಬಿನೆಟ್‌ನಲ್ಲಿ ಭವಿಷ್ಯ ಇದೆ, ರಾಜಕೀಯ ಭವಿಷ್ಯ ಇದೆ ಎಂದು ಹೇಳುತ್ತಿದ್ದರು. ಈ ವೇಳೆ ಬೆಂಬಲಿಗರು ಶಿವಲಿಂಗೇಗೌಡರಿಗೆ ಸಚಿವ ಸ್ಥಾನ ಕೊಡಿ ಎಂದು ಒತ್ತಾಯಿಸಿದರು. ಸಿಎಂ ಮಾತನ್ನೂ ಕೇಳದೇ ಸಚಿವ ಸ್ಥಾನ ನೀಡುವಂತೆ ಘೋಷಣೆ ಕೂಗುತ್ತಲೇ ಇದ್ದರು. ಇದರಿಂದ ಸಿಟ್ಟಾದ ಸಿಎಂ, ಭಾಷಣ ನಿಲ್ಲಿಸಿ ಹೊರಡಲು ಮುಂದಾದರು. ವೇದಿಕೆ ಮೇಲಿದ್ದ ಶಾಸಕ ಕೆ.ಎಂ ಶಿವಲಿಂಗೇಗೌಡರ ವಿರುದ್ಧವೂ ಅಸಮಾಧಾನಗೊಂಡರು. ಮಂತ್ರಿ ಮಾಡೋದು ಸರ್ಕಾರ, ಬಹಿರಂಗವಾಗಿ ಹೇಳಲು ಆಗಲ್ಲ. ಎಲ್ಲವನ್ನೂ ಬಹಿರಂಗವಾಗಿ ಚರ್ಚೆ ಮಾಡಲು ಆಗಲ್ಲ ಅಂತ ಹೇಳಿದ್ರು. ಇದನ್ನೂ ಓದಿ: ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

    ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಕೆ.ಎನ್ ರಾಜಣ್ಣ ಹಾಗೂ ಶಾಸಕ ಶಿವಲಿಂಗೇಗೌಡ ಬೆಂಬಲಿಗರ ಮೇಲೆ ಗರಂ ಆದರು. ಮುಖ್ಯಮಂತ್ರಿಗಳನ್ನ ಸಮಾಧಾನಪಡಿಸಿದ್ರು. ಬಳಿಕ ಸಿಎಂ ಭಾಷಣ ಮುಂದುವರಿಸಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

    ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌, ಸಚಿವರಾದ ಕೆ.ಎನ್ ರಾಜಣ್ಣ, ಭೈರತಿ ಸುರೇಶ್, ಜಮೀರ್ ಅಹಮದ್, ಗೃಹಮಂಡಳಿ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ: ಯತೀಂದ್ರ ಹೇಳಿಕೆಗೆ ವಿಪಕ್ಷ ನಾಯಕರು ಕೆಂಡ

  • ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲ ಪ್ರದರ್ಶಿಸಿದ ಮಕ್ಕಳು – ಶಾಸಕ ಶಿವಲಿಂಗೇಗೌಡ ಗರಂ

    ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಮಲ ಪ್ರದರ್ಶಿಸಿದ ಮಕ್ಕಳು – ಶಾಸಕ ಶಿವಲಿಂಗೇಗೌಡ ಗರಂ

    – ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಅಂತಾ ಶಿಕ್ಷಕರಿಗೆ ತರಾಟೆ

    ಹಾಸನ: ಅರಸೀಕೆರೆಯ (Arasikere) ಶಾಲೆಯೊಂದರಲ್ಲಿ (School) ನಡೆದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಗರಂ ಆಗಿದ್ದಾರೆ.

    ಗಣರಾಜ್ಯೋತ್ಸವ (Republic Day) ಅಂಗವಾಗಿ ಶಾಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಶಾಲಾ ಮಕ್ಕಳು ನೃತ್ಯ ಪ್ರದರ್ಶನವೊಂದರಲ್ಲಿ ಭಾರತದ ರಾಷ್ಟ್ರೀಯ ಹೂವು ಕಮಲದ ಚಿತ್ರವನ್ನು ಪ್ರದರ್ಶಿಸಿದ್ದರು. ಇದರಿಂದ ಶಾಸಕ ಶಿವಲಿಂಗೇಗೌಡ, ತಹಸೀಲ್ದಾರ್ ಸಂತೋಷ್ ಹಾಗೂ ಸಾರ್ವಜನಿಕರು ಕೆಂಡಾಮಂಡಲವಾಗಿದ್ದು, ಶಾಲಾ ಶಿಕ್ಷಕಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; ಮೊದಲ ಪಟ್ಟಿ ರಿಲೀಸ್

    ಶಾಲಾ ಶಿಕ್ಷಕಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕ, ಕಮಲ ಯಾವ ಪಕ್ಷದ ಚಿಹ್ನೆ? ಯಾವ ಸೀಮೆ ನಾಗರಿಕರು ನೀವು? ಮಕ್ಕಳನ್ನು ಹೇಗೆ ಉದ್ಧಾರ ಮಾಡ್ತೀರಾ ಎಂದು ಕೋಪಗೊಂಡಿದ್ದಾರೆ. ಈ ವೇಳೆ ಶಾಲಾ ಶಿಕ್ಷಕಿ, ಕಮಲ ಒಂದು ಪಕ್ಷದ ಚಿಹ್ನೆ ಹೇಗೆ ಆಗುತ್ತೆ ಸರ್? ನೀವು ಹೀಗೆ ಮಾತನಾಡಿದರೆ ಸರಿ ಹೋಗಲ್ಲ ಸರ್ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: 2024ರಲ್ಲಿ ಅಣು ಬಾಂಬ್ ಸ್ಫೋಟಗೊಳ್ಳುವ ಸಾಧ್ಯತೆ ಇದೆ: ಕೋಡಿಮಠ ಸ್ವಾಮೀಜಿ ಭವಿಷ್ಯ

    ಇದರಿಂದ ಸಿಟ್ಟುಗೊಂಡ ಶಾಸಕರು, ಏನು ಸರಿ ಹೋಗಲ್ಲ? ನಿಮಗೆ ನೋಟಿಸ್ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ತಹಸೀಲ್ದಾರ್ ಸಂತೋಷ್ ಮಧ್ಯಪ್ರವೇಶಿಸಿ ಒಂದು ಧರ್ಮ, ಒಂದು ಪಕ್ಷದ ಚಿಹ್ನೆ ಹೈಲೆಟ್ ಮಾಡಬಾರದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಕಿ ಲಕ್ಷ್ಮಿ, ನಿನ್ನೆ-ಮೊನ್ನೆ ನೃತ್ಯ ನೋಡಿದವರು ನೋಡಿದರೆ ಅದನ್ನು ಬಳಸುತ್ತಿರಲಿಲ್ಲ. ಸಭೆಯಲ್ಲಿ ಸೂಚನೆ ನೀಡಿದ್ದರೆ ಚಿಹ್ನೆ ಬಳಸುತ್ತಿರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

    ಇದಕ್ಕೆ ಪ್ರತ್ಯುತ್ತರ ಕೊಟ್ಟ ಶಾಸಕ ಶಿವಲಿಂಗೇಗೌಡ, ಇವರು ಎಂತದ್ದಾನ್ನಾದರೂ ತೋರಿಸಿಕೊಳ್ಳಲಿ ನನಗೇನು? ಅಲ್ಲಿ ಯಾವನೋ ಕುಳಿತಿರುತ್ತಾನೆ. ಬಿಜೆಪಿ ಚಿಹ್ನೆ ತೋರಿಸುತ್ತಿದ್ದಾರೆ ಎಂದು ಕಲ್ಲು ತೂರಿದರೆ ಮುಂದೆ ಆಗುವುದನ್ನು ನೋಡಬೇಕು. ಇದು ರಾಷ್ಟ್ರೀಯ ಹಬ್ಬ ಎಂದು ಸಿಡಿಮಿಡಿಗೊಂಡಿದ್ದಾರೆ. ಅತ್ಯುತ್ತಮ ನೃತ್ಯಕ್ಕಾಗಿ ಶಾಲಾ ಮಕ್ಕಳು ಮೊದಲ ಬಹುಮಾನ ಪಡೆದಿದ್ದರು. ಶಾಸಕರ ಆಕ್ಷೇಪದ ನಂತರ ತಾಲೂಕು ಆಡಳಿತ ನಾಲ್ಕನೇ ಬಹುಮಾನ ನೀಡಿದೆ. ಇದನ್ನೂ ಓದಿ: ಗಣೇಶ್ ಭಟ್ ಕೆತ್ತಿರೋ ವಿಗ್ರಹವನ್ನು ರಾಮದೇವರ ಬೆಟ್ಟಕ್ಕೆ ನೀಡುವಂತೆ ಇಕ್ಬಾಲ್ ಹುಸೇನ್ ಪತ್ರ

  • ಮದ್ಯದಂಗಡಿ ಲೈಸೆನ್ಸ್ ವಿವಾದ- ವೇದಿಕೆ ಮೇಲೆಯೇ ಶಿವಲಿಂಗೇಗೌಡ, ಸುರೇಶ್ ಕಿತ್ತಾಟ

    ಮದ್ಯದಂಗಡಿ ಲೈಸೆನ್ಸ್ ವಿವಾದ- ವೇದಿಕೆ ಮೇಲೆಯೇ ಶಿವಲಿಂಗೇಗೌಡ, ಸುರೇಶ್ ಕಿತ್ತಾಟ

    – ಕಕ್ಕಾಬಿಕ್ಕಿಯಾದ ಸಚಿವ ಕೆ.ಎನ್ ರಾಜಣ್ಣ

    ಹಾಸನ: ಮದ್ಯದಂಗಡಿ ಲೈಸೆನ್ಸ್ ವಿವಾದ ಸಂಬಂಧ ವೇದಿಕೆ ಮೇಲೆಯೇ ಶಾಸಕ ಕೆ.ಎಂ ಶಿವಲಿಂಗೇಗೌಡ (K M Shivalinge Gowda) ಹಾಗೂ ಎಚ್.ಕೆ ಸುರೇಶ್ (H.K Suresh) ಪರಸ್ಪರ ಕಿತ್ತಾಡಿಕೊಂಡ ಪ್ರಸಂಗ ನಡೆದಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರ ಕಿತ್ತಾಡಿಕೊಂಡಿದ್ದನ್ನು ಕಂಡು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ (KN Rajanna) ಕಕ್ಕಾಬಿಕ್ಕಿಯಾಗಿದ್ದಾರೆ.

    ಕರಗುಂದ ಗ್ರಾಮದಲ್ಲಿ ಮದ್ಯದಂಗಡಿ ತೆರೆದು ಹೆಣ್ಣುಮಕ್ಕಳ ತಾಳಿ ಕಿತ್ತುಕೊಳ್ಳುತ್ತಿದ್ದಾರೆ ಎಂದು ಶಾಸಕ ಎಚ್.ಕೆ.ಸುರೇಶ್ ಭಾಷಣ ಮಾಡುತ್ತಿದ್ದರು. ಇದಕ್ಕೆ ಉತ್ತರ ನೀಡಲು ಶಾಸಕ ಕೆ.ಎಂ.ಶಿವಲಿಂಗೇಗೌಡ ಮುಂದಾಗಿದ್ದಾರೆ. ಜನ ಸೇರಿಸುವವನು ನಾನು, ನೀನು 15 ಜನ ಕರೆದುಕೊಂಡು ಬಂದು ಸಭೆ ಹಾಳು ಮಾಡಲು ಬಂದಿದ್ದೀಯಾ ಎಂದು ಶಾಸಕ ಸುರೇಶ್ ವಿರುದ್ಧ ಶಿವಲಿಂಗೇಗೌಡ ಕಿಡಿಕಾರಿದರು.

    ಈ ವೇಳೆ ಶಿವಲಿಂಗೇಗೌಡರ ಮೇಲೆ ಸಿಟ್ಟಾದ ಶಾಸಕ ಎಚ್.ಕೆ.ಸುರೇಶ್, ನನಗೂ ಜಾವಗಲ್ ಗ್ರಾಮ ಸೇರುತ್ತದೆ, ನನಗೂ ಹಕ್ಕಿದೆ ಎಂದು ಆಕ್ರೋಶ ಹೊರಹಾಕಿದರು. ಮದ್ಯದಂಗಡಿ ತೆರೆದಿರುವವನು ಕೆ.ಎಂ.ಶಿವಲಿಂಗೇಗೌಡರ ಸ್ನೇಹಿತ ಎಂದು ಸುರೇಶ್ ಮೈಕ್‍ನಲ್ಲಿ ಹೇಳಿದÀ್ರು. ಇದರಿಂದ ಕೆರಳಿದ ಶಿವಲಿಂಗೇಗೌಡ, ಓವರ್ ಆಗಿ ಆಡಬೇಡ. ನಮ್ಮ ಸರ್ಕಾರ ಬಂದು ಐದು ತಿಂಗಳು ಆಯ್ತು ಒಂದು ಮದ್ಯದಂಗಡಿಗೂ ಅನುಮತಿ ನೀಡಿಲ್ಲ. ಕಳೆದ ಸರ್ಕಾರದಲ್ಲಿ ಮದ್ಯದಂಗಡಿಗಳನ್ನು ತೆರೆದಿದ್ದಾರೆ.

    ಒಂದೆಡೆ ಶಿವಲಿಂಗೇಗೌಡರ ಪರ ಕಾರ್ಯಕರ್ತರು ಜೈಕಾರ ಕೂಗಿದರು. ಮತ್ತೊಂದೆಡೆ ಬಿಜೆಪಿ ಕಾರ್ಯಕರ್ತರು ಸುರೇಶ್ ಪರ ಜೈಕಾರ ಕೂಗಿದರು. ಈ ವೇಳೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಧ್ಯಪ್ರವೇಶಿಸಿ, ಶಾಸಕರನ್ನು ಸಮಾಧಾನಪಡಿಸಿದರು. ಇದನ್ನೂ ಓದಿ: ತೆಲಂಗಾಣ ಚುನಾವಣೆ – ‘ಕೈ’ ಪ್ರಣಾಳಿಕೆಯಲ್ಲಿ ವಧುವಿಗೆ 10 ಗ್ರಾಂ ಚಿನ್ನ, ಮಕ್ಕಳಿಗೆ ಉಚಿತ ಇಂಟರ್ನೆಟ್?

    ವೇದಿಕೆ ಮೇಲೆ ಶಾಸಕರ ನಡುವೆ ಕಿತ್ತಾಟದ ನಂತರ ಸಚಿವ ಕೆ.ಎನ್.ರಾಜಣ್ಣ ಭಾಷಣ ಮಾಡಿ ಶಾಸಕರಿಗೆ ಕಿವಿಮಾತು ಹೇಳಿದರು. ಶಾಸಕರು ಕೆಲವು ವಿಷಯಗಳನ್ನು ಪ್ರಸ್ತಾಪ ಮಾಡಿದ್ದಾರೆ. ಬೇಲೂರಿನಲ್ಲೂ ಒಂದು ಜನತಾದರ್ಶನ ಕಾರ್ಯಕ್ರಮ ಮಾಡೋಣ. ಅಲ್ಲಿಗೂ ಅಧಿಕಾರಿಗಳು ಬರ್ತಾರೆ, ನಿಮ್ಮ ಸಮಸ್ಯೆಯೂ ಬಗೆ ಹರಿಯುತ್ತೆ. ಜನರ ಚಪ್ಪಾಳೆ ಹೊಡೆಸಲು ಭಾಷಣ ಮಾಡುವುದೇ ಬೇರೆ. ಅದನ್ನು ರಾಜಕೀಯ ಭಾಷಣದಲ್ಲಿ ಮಾಡೋಣ ಎಂದರು.

    ನೀವೂ ಎಷ್ಟು ಜನರ ಪರವಾಗಿ ಕೆಲಸ ಮಾಡಬೇಕು ಅಂದುಕೊಂಡಿದ್ದಾರೋ ಅದಕ್ಕಿಂತ ಎರಡು ಪಟ್ಟು ಹೆಚ್ಚು ಕೆಲಸ ಮಾಡಬೇಕು ಅಂತಾ ನಾವು ಅಂದುಕೊಂಡಿದ್ದೇವೆ. ಏನೇ ಹೇಳಿದರೂ ಸಮಾಧಾನದಿಂದ ಹೇಳಬೇಕು. ನೀವು ಎರಡು ಲಕ್ಷ ಜನರ ಜನಪ್ರತಿನಿಧಿ. ಶಿವಲಿಂಗೇಗೌಡ ನಾಲ್ಕು ಬಾರಿ ಗೆದ್ದಿದ್ದಾರೆ, ಸೀನಿಯರ್ ಇದ್ದಾರೆ. ಆವೇಷ, ಆಕ್ರೋಶದಿಂದ ಮಾತನಾಡಿದರೆ ಏನೂ ಆಗಲ್ಲ. ಎಲ್ಲಾ ಸಮಸ್ಯೆಗೂ ಪರಿಹಾರ ಇರುತ್ತೆ ಬಗೆ ಹರಿಯುತ್ತೆ. ಸಮಾಧಾನದಿಂದ ವ್ಯಕ್ತಪಡಿಸಿದರೆ ಆಯ್ತು ಎಂದು ತಿಳಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿಕೆಶಿ ಭೇಟಿಯಾದ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ – ಕಾಂಗ್ರೆಸ್‌ ಸೇರಲು ಸಿದ್ಧತೆ

    ಡಿಕೆಶಿ ಭೇಟಿಯಾದ ಜೆಡಿಎಸ್‌ ಶಾಸಕ ಶಿವಲಿಂಗೇಗೌಡ – ಕಾಂಗ್ರೆಸ್‌ ಸೇರಲು ಸಿದ್ಧತೆ

    ಹಾಸನ: ಚುನಾವಣೆ ಹೊತ್ತಲ್ಲೇ ಜೆಡಿಎಸ್‌ (JDS) ಭದ್ರಕೋಟೆಯಲ್ಲಿ ಈಗ ತಳಮಳ ಶುರುವಾಗಿದೆ. ಹಾಲಿ ಶಾಸಕರ ಪಕ್ಷಾಂತರ ಹಾಗೂ ಟಿಕೆಟ್ ಗೊಂದಲದಿಂದ ಈ ಭಾರಿ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುತ್ತದೆಯೇ ಎಂಬ ಚರ್ಚೆಗಳು ಶುರುವಾಗಿವೆ.

    ಅರಸೀಕೆರೆಯ ಜೆಡಿಎಸ್‌ ಶಾಸಕ ಕೆ.ಎಂ.ಶಿವಲಿಂಗೇಗೌಡ (Shivalinge Gowda) ಅವರು ಕಾಂಗ್ರೆಸ್ (Congress) ಪಕ್ಷ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ: ಸಿಟಿ ರವಿ ಆಪ್ತ ಹೆಚ್‌ಡಿ ತಮ್ಮಯ್ಯ ಕಾಂಗ್ರೆಸ್ ಸೇರ್ಪಡೆ

    ಶೀಘ್ರದಲ್ಲಿಯೇ ತಮ್ಮ ಬೆಂಬಲಿಗರು, ಅಭಿಮಾನಿಗಳ ಸಭೆ ಕರೆದು ಶಿವಲಿಂಗೇಗೌಡ ಅವರು ಚರ್ಚಿಸಲಿದ್ದಾರೆ. ಆನಂತರ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕ್ರಿಯೆಗಳ ಬಳಿಕ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಶಿವಲಿಂಗೇಗೌಡರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

    ಇನ್ನೊಂದೆಡೆ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ಬಿಜೆಪಿ-ಕಾಂಗ್ರೆಸ್ ಮುಖಂಡರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಕಾಂಗ್ರೆಸ್‌ನಲ್ಲೇ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಇದರಿಂದ ರಾಮಸ್ವಾಮಿ ಅವರಿಗೆ ಟಿಕೆಟ್ ಸಿಗುವುದು ಅನುಮಾನ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಜೊತೆಯೂ ರಾಮಸ್ವಾಮಿ ಅವರು ಚರ್ಚೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ತಮ್ಮನ್ನು ನರಕದಲ್ಲಿಟ್ಟಿದ್ದಕ್ಕೆ ಕಾಂಗ್ರೆಸ್‍ನ್ನು ಜನ ಮನೆಗೆ ಕಳಿಸಿದ್ರು: ಬೊಮ್ಮಾಯಿ ಕಿಡಿ

    ಪಕ್ಷದ ಟಿಕೆಟ್ ಆಕಾಂಕ್ಷಿಗಳ ಮನವೊಲಿಸಿ ರಾಮಸ್ವಾಮಿ ಅವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕುತ್ತಾ ಎನ್ನುವುದು ಪ್ರಶ್ನೆಯಾಗಿದೆ. ಈ ವಿಚಾರದಲ್ಲಿ ರಾಮಸ್ವಾಮಿ ನಡೆಯೂ ತೀವ್ರ ಕುತೂಹಲ ಮೂಡಿಸಿದೆ. ಈಗಾಗಲೇ ತಮ್ಮ ಬೆಂಬಲಿಗರು ಹಾಗೂ ಅಭಿಮಾನಿಗಳ ಜೊತೆ ರಾಮಸ್ವಾಮಿ ಅವರು ಎರಡು ಸುತ್ತಿನ ಸಭೆ ನಡೆಸಿದ್ದಾರೆ. ಜೆಡಿಎಸ್‌ ವಿರುದ್ಧ ಸೆಣಸಲು ಇಬ್ಬರು ಹಾಲಿ ಶಾಸಕರು ರಣತಂತ್ರ ರೂಪಿಸುತ್ತಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಾಸನದಲ್ಲಿ ಮತ್ತೆ ಅಭ್ಯರ್ಥಿ ಗೊಂದಲ – ಕುತೂಹಲ ಮೂಡಿಸಿದ ಶಿವಲಿಂಗೇಗೌಡರ ನಡೆ

    ಹಾಸನದಲ್ಲಿ ಮತ್ತೆ ಅಭ್ಯರ್ಥಿ ಗೊಂದಲ – ಕುತೂಹಲ ಮೂಡಿಸಿದ ಶಿವಲಿಂಗೇಗೌಡರ ನಡೆ

    ಹಾಸನ: ಜೆಡಿಎಸ್ (JDS) ಭದ್ರಕೋಟೆ ಹಾಸನ (Hassan) ಜಿಲ್ಲೆಯಲ್ಲಿ ತಳಮಳ ಶುರುವಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿರುವಾಗಲೇ ಮತ್ತೊಂದು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಗೊಂದಲ ಶುರುವಾಗಿದೆ.

    ಹಾಲಿ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಹಲವು ತಿಂಗಳುಗಳಿಂದ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು ಅವರ ನಡೆ ತೀವ್ರ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬ ವದಂತಿಗಳು ದಟ್ಟವಾಗಿ ಹಬ್ಬಿದ್ದು, ಶಿವಲಿಂಗೇಗೌಡರ ಆಪ್ತ ಮೂಲಗಳು ಇದನ್ನು ನಿಜ ಎನ್ನುತ್ತಿವೆ. ಇದರ ನಡುವೆ ಅರಸೀಕೆರೆ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಹೆಚ್‌ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಎಂಎಲ್‌ಸಿ ಸೂರಜ್ ರೇವಣ್ಣ ನಿರಂತರವಾಗಿ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ.

    ಬುಧವಾರ ಅರಸೀಕೆರೆಯಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಭೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ (Suraj Revanna) ನಮಗೆ ವಿಶ್ವಾಸವಿದೆ, ಶಿವಲಿಂಗೇಗೌಡರು ಇಲ್ಲೇ ಉಳಿದುಕೊಂಡರೆ ಸುಲಭವಾಗಿ ಗೆಲ್ಲುತ್ತಾರೆ. ಅಲ್ಲಿ ಹೋಗೋದು ಅವರ ಇಷ್ಟ. ನಮ್ಮ ಪಕ್ಷದ ಕಾರ್ಯಕ್ರಮ, ನಮ್ಮ ಹೋರಾಟ ನಾವು ಮಾಡಬೇಕಾಗುತ್ತದೆ ಸಾಕಷ್ಟು ಬಾರಿ ಮನವೊಲಿಸುವ ಪ್ರಯತ್ನ ಮಾಡಿದ್ದೇವೆ. ನಾವು ಎಲ್ಲೇ ಹೋದರು, ಯಾವುದೇ ಸಾರ್ವಜನಿಕ ಕಾರ್ಯಕ್ರಮಕ್ಕೆ ಹೋದರು ನಾವು ತಟಸ್ಥವಾಗಿಯೇ ಮಾತನಾಡಿದ್ದೇವೆ. ಎಲ್ಲೂ ಕೂಡ ಶಾಸಕರ ಬಗ್ಗೆ ಯಾವುದೇ ರೀತಿಯಾದ ಹೇಳಿಕೆಗಳನ್ನು ಕೊಟ್ಟಿಲ್ಲ. ಯಾವುದೇ ರೀತಿ ಅವರಿಗೆ ತೊಂದರೆ ಆಗುವ ಹಾಗೆ ನಡೆದುಕೊಂಡಿಲ್ಲ, ಮುಂದೆಯೂ ಅದೇ ರೀತಿ ನಡೆದುಕೊಳ್ಳುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಯಾಗಲು ಪೊಲೀಸ್ ಹುದ್ದೆಗೆ ರಾಜೀನಾಮೆ

    ಚುನಾವಣೆ ಬಂದರೂ ಅಷ್ಟೇ, ಚುನಾವಣೆ ನಂತರವೂ ಅಷ್ಟೇ, ಶಾಸಕರ ಬಗ್ಗೆ ನಾವೆಲ್ಲೂ ಪ್ರತಿಕ್ರಿಯೆ ಕೊಡಲ್ಲ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷದಿಂದಲೇ ಶಕ್ತಿ ಪಡೆದುಕೊಂಡು, ಪಕ್ಷದಿಂದಲೇ 3 ಬಾರಿ ಶಾಸಕರಾಗಿ ಕಾರ್ಯಕರ್ತರು ಹಾಗೂ ನಗರಸಭೆ ಸದಸ್ಯರ ವಿಶ್ವಾಸ ಉಳಿಸಿಕೊಂಡಿದ್ದಾರೆ. ಅವರಿಗೆ ಪಕ್ಷದ ಮೇಲೆ ವಿಶ್ವಾಸವಿದೆ. ಪಕ್ಷದಲ್ಲೇ ಇರುತ್ತಾರೆ, ಇರಲೂ ಬಯಸುತ್ತಿದ್ದಾರೆ. ಅವರು ಪಕ್ಷದಲ್ಲೇ ಉಳಿದು ಪಕ್ಷಕ್ಕಾಗಿ ದುಡಿಯುತ್ತಾರೆ. ಆ ನಂಬಿಕೆ ನಮಗಿದೆ ಎಂದು ಹೇಳಿದ್ದಾರೆ.

    ಅರಸೀಕೆರೆಯಲ್ಲಿ ಫೆಬ್ರವರಿ 3 ರಂದು ಕಾರ್ಯಕರ್ತರ ಸಭೆ ಹಾಗೂ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಕಾರ್ಯಕ್ರಮ ಮುಂದೂಡಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಹಾಸನ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ. ಕುಮಾರಣ್ಣ ಅವರು ಬೀದರ್, ವಿಜಯಪುರ, ಉತ್ತರ ಕರ್ನಾಟಕ ಭಾಗದಲ್ಲಿ ಪಂಚರತ್ನ ಯಾತ್ರೆ ಮಾಡುತ್ತಿದ್ದಾರೆ. ಒಂದು ವಾರ ಅವರು ಸ್ವಲ್ಪ ರೆಸ್ಟ್ ತೆಗೆದುಕೊಳ್ಳಲಿ. ಆನಂತರ ಮಂಡ್ಯ, ಮೈಸೂರು, ಚಿಕ್ಕಮಗಳೂರು, ನಮ್ಮ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಕಾರ್ಯಕ್ರಮ ನಡೆಯಬೇಕಿದೆ. ಅದನ್ನು 2ನೇ ಹಂತದಲ್ಲಿ ಶುರು ಮಾಡುತ್ತಾರೆ ಎಂದರು. ಇದನ್ನೂ ಓದಿ: ರಾಜ್ಯ ರಾಜಕೀಯ ಪ್ರವೇಶಿಸಲು ರೆಡಿಯಾಗಿದ್ದ ಸುಮಲತಾಗೆ ಬಿಗ್‌ ಶಾಕ್‌ – ಸಂಸದೆ ಸ್ಪರ್ಧೆಗೆ ರೈತ ಸಂಘದಿಂದ ವಿರೋಧ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜಕೀಯ ಜಂಜಾಟದ ನಡುವೆ ಯುವಕರೊಂದಿಗೆ ಕಬಡ್ಡಿ ಆಡಿದ ಶಾಸಕ ಶಿವಲಿಂಗೇಗೌಡ

    ರಾಜಕೀಯ ಜಂಜಾಟದ ನಡುವೆ ಯುವಕರೊಂದಿಗೆ ಕಬಡ್ಡಿ ಆಡಿದ ಶಾಸಕ ಶಿವಲಿಂಗೇಗೌಡ

    ಹಾಸನ: ಅಧಿವೇಶನ, ಬಿಡುವಿಲ್ಲದ ಕಾರ್ಯಕ್ರಮ, ರಾಜಕೀಯ ಜಂಜಾಟದ ನಡುವೆ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಕೆಎಂ ಶಿವಲಿಂಗೇಗೌಡ (KM Shivalinge Gowda) ಯುವಕರೊಂದಿಗೆ ಕಬಡ್ಡಿ (Kabaddi) ಆಡಿ ನಲಿದಿದ್ದಾರೆ.

    ಅರಸೀಕೆರೆ ತಾಲೂಕಿನ ತಾಂಡ್ಯ ಗ್ರಾಮ ಹಾಗೂ ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಆಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಲು ಶಿವಲಿಂಗೇಗೌಡರು ಆಗಮಿಸಿದ್ದರು. ಪಂದ್ಯಾವಳಿಗೆ ಚಾಲನೆ ನೀಡಿದ ಬಳಿಕ ಶಿವಲಿಂಗೇಗೌಡ ಪಂಚೆಯಲ್ಲಿಯೇ ಎರಡು ಕಡೆ ರೈಡ್ ಮಾಡಿದರು. ಎರಡು ಕಡೆಗಳಲ್ಲೂ ಯುವಕರು ಶಾಸಕರನ್ನು ಟ್ಯಾಕಲ್ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಸೆಡ್ಡು ಹೊಡೆದು ಹೊಸ ಪಕ್ಷ ಸ್ಥಾಪಿಸಿದ ರೆಡ್ಡಿ

    ಶಾಸಕರು ಕಬಡ್ಡಿ ಆಡಿರುವುದಕ್ಕೆ ಯುವಕರು ಫಿದಾ ಆಗಿ ಶಿಳ್ಳೆ, ಚಪ್ಪಾಳೆ ಹೊಡೆದು ಸಂತಸಪಟ್ಟಿದ್ದಾರೆ. ಬ್ಯುಸಿ ಶೆಡ್ಯೂಲ್ ನಡುವೆ ರಿಲಾಕ್ಸ್ ಮೂಡ್‌ನಲ್ಲಿ ಶಾಸಕ ಕೆಎಂ ಶಿವಲಿಂಗೇಗೌಡ ಆಡುವ ಮೂಲಕ ಇತರ ಶಾಸಕರಿಗಿಂತ ಭಿನ್ನ ಎನಿಸಿಕೊಂಡರು. ಇದನ್ನೂ ಓದಿ: ಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿ : ಸಹೋದರ ಮಹಮ್ಮದ್

    Live Tv
    [brid partner=56869869 player=32851 video=960834 autoplay=true]

  • ಗದೆ ಹಿಡಿದು ಭೀಮನಾದ ಶಾಸಕ ಕೆ.ಎಂ.ಶಿವಲಿಂಗೇಗೌಡ

    ಗದೆ ಹಿಡಿದು ಭೀಮನಾದ ಶಾಸಕ ಕೆ.ಎಂ.ಶಿವಲಿಂಗೇಗೌಡ

    ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಗದೆ ಹಿಡಿದು ಭೀಮನ ಪಾತ್ರದ ಡೈಲಾಗ್ ಹೊಡೆದು ಆಭಿಮಾನಿಗಳನ್ನು ರಂಜಿಸಿದ್ದಾರೆ.

    ತಾಲೂಕಿನ ಬಾಗೇಶಪುರ ಎಂಬ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ಕುರುಕ್ಷೇತ್ರ ನಾಟಕದಲ್ಲಿ ಗದೆ ಹಿಡಿದು ಭೀಮನ ಪಾತ್ರದಲ್ಲಿ ಕೆ.ಎಂ.ಶಿವಲಿಂಗೇಗೌಡ ಅವರು ಘರ್ಜಿಸಿದ್ದಾರೆ.

    ಈ ಜಾತ್ರಾ ಮಹೋತ್ಸವಕ್ಕೆ ಕೆ.ಎಂ.ಶಿವಲಿಂಗೇಗೌಡ ಅವರನ್ನು ಮುಖ್ಯ ಆತಿಥಿಯಾಗಿ ಆಹ್ವಾನ ನೀಡಲಾಗಿತ್ತು. ಆ ಜಾತ್ರೆಯ ಪ್ರಯುಕ್ತ ಕುರುಕ್ಷೇತ್ರ ನಾಟಕವನ್ನು ಗ್ರಾಮಸ್ಥರು ಆಯೋಜಿಸಿದ್ದರು. ಜಾತ್ರೆಯಲ್ಲಿ ಭಾಗವಹಿಸಿದ ಶಾಸಕರು ನಂತರ ವೇದಿಕೆಯ ಮೇಲೆ ಹೋಗಿ ಗದೆ ಹಿಡಿದು ಭೀಮನ ಡೈಲಾಗ್ ಹೊಡೆದು ಜನರನ್ನು ರಂಜಿಸಿದ್ದಾರೆ. ತಮ್ಮ ನೆಚ್ಚಿನ ಶಾಸಕರು ಅಭಿನಯ ನೋಡಿದ ಊರಿನ ಗ್ರಾಮಸ್ಥರು ಮತ್ತು ಆಭಿಮಾನಿಗಳು ಶಿಳ್ಳೆ ಚಪ್ಪಾಳೆ ಹೊಡೆದರು.