Tag: kochimul

  • ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಹೈಕೋರ್ಟ್ ಆಸ್ತು – ಸತ್ಯಕ್ಕೆ ಸಂದ ಜಯ ಎಂದ ಸಂಸದ ಸುಧಾಕರ್

    ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಹೈಕೋರ್ಟ್ ಆಸ್ತು – ಸತ್ಯಕ್ಕೆ ಸಂದ ಜಯ ಎಂದ ಸಂಸದ ಸುಧಾಕರ್

    ಚಿಕ್ಕಬಳ್ಳಾಪುರ: ಸಂಸದ ಸುಧಾಕರ್ ಸಚಿವರಾಗಿದ್ದಾಗ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಚಿಮುಲ್ (Kochimul) ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪಿಸಿದ್ದ ಆದೇಶವನ್ನ ಮರುಸ್ಥಾಪನೆ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ. ಇದು ಕೋಲಾರ ಮತ್ತು ಚಿಕ್ಕಳ್ಳಾಪುರ ಜಿಲ್ಲೆಯ ರೈತರ (Chikkaballapura Farmers) ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಸಂಸದ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಅಲ್ಪಸಂಖ್ಯಾತ ಅಭ್ಯರ್ಥಿಗೆ ಶಿಗ್ಗಾಂವಿ ಟಿಕೆಟ್‌ ನೀಡಿದ ಕಾಂಗ್ರೆಸ್‌

    ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಸುಧಾಕರ್ (Dr. K Sudhakar), ಆಡಳಿತಾತ್ಮಕ ದೃಷ್ಟಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ದ್ವೇಷದ ರಾಜಕಾರಣಕ್ಕಾಗಿ, ನನ್ನ ಮೇಲಿನ ಸೇಡಿಗಾಗಿ ಬಿಜೆಪಿ ಸರ್ಕಾರದ (BJP Government) ಆದೇಶವನ್ನು ಏಕಾಏಕಿ ರದ್ದು ಮಾಡಿ ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸ ಮಾಡಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ 16.17 ಕೋಟಿ ಆಸ್ತಿ ಒಡೆಯ; ಆದ್ರೂ ಸ್ವಂತ ಕಾರು ಇಲ್ಲ!

    ‘ಬೆಟ್ಟ ಅಗೆದು ಇಲಿ ಹಿಡಿದರು’ ಎನ್ನುವ ಹಾಗೆ ರಾಜಕೀಯ ಸ್ವಾರ್ಥಕ್ಕಾಗಿ, ದ್ವೇಷ ರಾಜಕಾರಣಕ್ಕಾಗಿ 17 ತಿಂಗಳ ಹಿಂದೆ ಪ್ರತ್ಯೇಕ ಹಾಲು ಒಕ್ಕೂಟ ರಚನೆಯ ಅದೇಶವನ್ನ ರದ್ದು ಮಾಡಿದ್ದ ಕಾಂಗ್ರೆಸ್ ಸರ್ಕಾರ ಈಗ ನ್ಯಾಯಾಲಯದಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೋಚಿಮುಲ್ ಹಾಲು ಒಕ್ಕೂಟವನ್ನು ವಿಭಜನೆ ಮಾಡಿದ್ದ ಆದೇಶವೇ ಸರಿ ಇದೆ ಎಂದು ಒಪ್ಪಿಕೊಂಡಿದೆ. ಕಾಂಗ್ರೆಸ್ ಸರ್ಕಾರದ ಈ ದ್ವಂದ್ವ ನೀತಿಯಿಂದ, ಎಡಬಿಡಂಗಿ ನಡೆಯಿಂದ 17 ತಿಂಗಳು ಅನಗತ್ಯವಾಗಿ ವ್ಯರ್ಥವಾಗಿದೆ. ಕೆಲವೇ ಕೆಲವು ನಾಯಕರ ಸ್ವಾರ್ಥ ರಾಜಕಾರಣಕ್ಕೆ 17 ತಿಂಗಳ ಕಾಲ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಇಂಡಿಗೋ, ಏರ್‌ ಇಂಡಿಯಾ, ಸ್ಪೈಸ್‌ಜೆಟ್‌ ಸೇರಿ ಮತ್ತೆ 95 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ

    ರೈತರಿಗಾದ ಈ ನಷ್ಟಕ್ಕೆ ಯಾರು ಹೊಣೆ? ಇಂದಿನ ಕೋರ್ಟ್ ತೀರ್ಪು ಕಾಂಗ್ರೆಸ್ ನಾಯಕರಿಗೆ ಕಪಾಳ ಮೋಕ್ಷ ಮಾಡಿದ್ದು, ಇನ್ನು ಮುಂದಾದರೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡದೆ ಜನಪರವಾಗಿ ಕೆಲಸ ಮಾಡಲಿ ಎಂದು ಆಶಿಸುತ್ತೇನೆ. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಉದ್ದುದ್ದ ಭಾಷಣ, ನೀತಿ ಪಾಠ ಹೇಳುವ ಕಾಂಗ್ರೆಸ್ ನಾಯಕರು ಕೋಚಿಮುಲ್ ಆಡಳಿತ ಮಂಡಳಿಯ ಅವಧಿಯು 2024ರ ಮೇ 12ಕ್ಕೆ ಮುಕ್ತಾಯವಾಗಿದ್ದರೂ ಇನ್ನೂ ಚುನಾವಣೆ ನಡೆಸಿಲ್ಲ. ಈ ಬಗ್ಗೆ ಹೈಕೋರ್ಟ್‍ನಲ್ಲಿ ಹೂಡಲಾಗಿದ್ದ ದಾವೆಗೆ ಕೋರ್ಟ್ ತೀರ್ಪು ನೀಡಿದ್ದು, ಆಡಳಿತ ಮಂಡಳಿ ರಚನೆಗಾಗಿ 90 ದಿನಗಳ ಒಳಗಾಗಿ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳಿಸಬೇಕೆಂದು ಜುಲೈ 17ರಂದು ಹೈಕೋರ್ಟ್ ಆದೇಶಿಸಿತ್ತು. ಅಕ್ರಮ ನೇಮಕಾತಿ, ಭ್ರಷ್ಟಾಚಾರದ ಮೂಲಕ ರೈತರ ಹಣ ಲೂಟಿ ಮಾಡಲು ಚುನಾವಣೆ ನಡೆಸದೇ ಅಧಿಕಾರಕ್ಕೆ ಅಂಟಿಕೊಂಡಿರುವ ಕಾಂಗ್ರೆಸ್ ನಾಯಕರು, ಈ ಕೂಡಲೇ ಹಾಲು ಒಕ್ಕೂಟದ ವಿಭಜನೆಯ ಪ್ರಕ್ರಿಯೆ ಆರಂಭಿಸಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

  • ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

    ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

    – ಇಂದಿನಿಂದಲೇ ಜಾರಿ, ಹಾಲು ಉತ್ಪಾದಕರು ಕಂಗಾಲು

    ಕೋಲಾರ: ಕೆಎಂಎಫ್ (KMF) ಹಾಲಿನ ದರ (Milk Price) ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ (Farmers) ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ (KOCHIMUL) ರೈತರಿಗೆ ಬಿಗ್ ಶಾಕ್ ನೀಡಿದೆ.

    ಈಗಷ್ಟೇ ಮುಂಗಾರು ಆರಂಭವಾಗಿ ರೈತರು ನಿಟ್ಟುಸಿರು ಬಿಡುತ್ತಿದ್ದ ವೇಳೆ ಕೋಚಿಮುಲ್ ಆಡಳಿತ ಮಂಡಳಿ ದಿಢೀರ್‌ 2 ರೂ. ಕಡಿಮೆ ಮಾಡಿದ್ದರಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರೂ. ಕಡಿತ ಮಾಡಿದ್ದು, ಇಂದು ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಆದೇಶ ಆದೇಶ ಹೊರಡಿಸಿದೆ.

    ಈ ಮೊದಲು ಪ್ರತಿ ಲೀಟರ್‌ ಹಾಲಿಗೆ 33.40 ರೂ. ನೀಡಲಾಗುತ್ತಿತ್ತು. ಕೋಚಿಮುಲ್‌ ಆದೇಶದಿಂದ ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್ ಗೆ 31.40 ರೂ. ಸಿಗಲಿದೆ.

    ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್‌ಗೆ 9.65 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್‌ಗೆ 12.37 ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ಇದನ್ನೂ ಓದಿ: Champions: ವಿಶ್ವ ಚಾಂಪಿಯನ್ಸ್‌ಗೆ ಬಂಪರ್‌ ಗಿಫ್ಟ್‌ – 125 ಕೋಟಿ ರೂ. ಬಹುಮಾನ ಚೆಕ್‌ ವಿತರಣೆ

    ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ ಎರಡೂವರೆ ಲಕ್ಷ ಲೀಟರ್‌ ಹಾಲು ಹೆಚ್ಚಳವಾದ ಕಾರಣ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ.

    ಈಗಾಗಲೇ ಲೀಟರ್‌ಗೆ 2 ರೂ. ಹೆಚ್ಚಳ ಮಾಡಿ ಕೆಎಂಎಫ್‌ ಆದೇಶ ಹೊರಡಿಸಿದೆ. ಈಗ ರೈತರಿಗೆ 2 ರೂ. ಕಡಿತ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

     

  • ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

    ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಶಂಕೆ – ಇಡಿ ವಿಚಾರಣೆ

    – ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟವಾಗಿರುವ ಅನುಮಾನ
    – ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ವಿಚಾರಣೆ

    ಮಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಮಂಗಳೂರು ವಿವಿ (Mangaluru University) ನೇರವಾಗಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

    ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ (Kochimul) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟವಾಗಿದೆ ಅನ್ನೋ ಬಗ್ಗೆ ಸಂಶಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಜ.20) ಮಂಗಳೂರು ವಿವಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ಭೇಟಿ ನೀಡಿ ತೀವ್ರ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಮೋದಿ ಕಠಿಣ ವ್ರತ – ಪ್ರತಿದಿನ 1 ಗಂಟೆ ವಿಶೇಷ ಮಂತ್ರ ಪಠಣ

    ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ತಾಲೂಕಿನ ಕೊಣಾಜೆಯಲ್ಲಿರುವ ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನ ವಿಚಾರಣೆ ನಡೆಸಿದೆ. ಇದನ್ನೂ ಓದಿ: ರಾಮಮಂದಿರದ ಮಂಡಲೋತ್ಸವ ಪೂಜೆಗೆ ರಾಯಚೂರಿನ ವೈದಿಕರಿಬ್ಬರು ಆಯ್ಕೆ

    ಕೋಚಿಮುಲ್ ನೇಮಕಾತಿ ಹಗರಣ ಸಂಬಂಧ ಈ ಹಿಂದೆಯೇ ವಿವಿ ಪರೀಕ್ಷಾಂಗ ಕುಲಸಚಿವರಿಗೆ ನೋಟಿಸ್ ನೀಡಲಾಗಿತ್ತು. ಶನಿವಾರ ವಿವಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ವಿವಿ ಅಧಿಕಾರಿಗಳೇ ಅಭ್ಯರ್ಥಿಗಳಿಗೆ ಲಕ್ಷಾಂತರ ರೂ.ಗಳಿಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಅಲ್ಲದೇ ವಿವಿ ಅಧಿಕಾರಿಗಳ ಇ-ಮೇಲ್, ದೂರವಾಣಿ ಕರೆಗಳ ವಿವರ ಹಾಗೂ ಬ್ಯಾಂಕಿಂಗ್ ವ್ಯವಹಾರಗಳ ಕುರಿತು ತೀವ್ರ ತಪಾಸಣೆ ನಡೆಸಿದೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ

  • ಕೋಚಿಮುಲ್‌ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್‌

    ಕೋಚಿಮುಲ್‌ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್‌

    ಬೆಂಗಳೂರು: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ(KOCHIMUL) ನೇಮಕಾತಿ ಪಡೆಯಲು ಶಿಫಾರಸು ಪತ್ರ ಕೊಟ್ಟವರಿಗೆ ಜಾರಿ ನಿರ್ದೇಶನಾಲಯ (ED) ಶಾಕ್‌ ನೀಡಿದೆ.

    ಮಾಲೂರು ಕಾಂಗ್ರೆಸ್‌ ಶಾಸಕ ನಂಜೇಗೌಡ ಮನೆಯ ಮೇಲೆ ದಾಳಿ ಮಾಡಿದಾಗ 30ಕ್ಕೂ ಹೆಚ್ಚು ಸಚಿವರು, ಶಾಸಕರ ಶಿಫಾರಸು ಪತ್ರ ಪತ್ತೆಯಾಗಿದೆ ಎಂದು ಇಡಿ  ಅಧಿಕೃತವಾಗಿ ತಿಳಿಸಿತ್ತು. ಇದನ್ನೂ ಓದಿ: ಮೇಯರ್‌ ಚುನಾವಣೆ : ಮಾಲ್ಡೀವ್ಸ್‌ ಆಡಳಿತ ಪಕ್ಷಕ್ಕೆ ಹೀನಾಯ ಸೋಲು – ಭಾರತದ ಪರ ಪಕ್ಷಕ್ಕೆ ಭರ್ಜರಿ ಜಯ

    ಈಗ ನೇಮಕಾತಿಯಾದ 10 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಪ್ರತಿಯೊಬ್ಬ ಅಭ್ಯರ್ಥಿಗಳ ಬಳಿ 20 ರಿಂದ 30 ಲಕ್ಷ ರೂ. ಹಣವನ್ನು ಪಡೆಯಲಾಗಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆಯ್ಕೆಯಾದ ಎಲ್ಲರಿಗೂ ಇಡಿ ನೋಟಿಸ್‌ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ. ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು – ಪಾಕಿಸ್ತಾನದಲ್ಲಿ 1 ಮೊಟ್ಟೆಯ ಬೆಲೆ 33 ರೂ. – ಈರುಳ್ಳಿ ಪ್ರತಿ ಕೆಜಿಗೆ 250 ರೂ.

    ಮೊದಲ ಹಂತದಲ್ಲಿ 10 ಮಂದಿಯನ್ನು ಇಡಿ ವಿಚಾರಣೆ ನಡೆಸಲಿದ್ದು ಶಿಫಾರಸು ಪತ್ರ ಕೊಟ್ಟ ಎಲ್ಲರನ್ನು ವಿಚಾರಣೆ ನಡೆಸಲಿದೆ. ಲೋಕಸಭೆ ಚುನಾವಣೆ ಮುನ್ನವೇ ವಿಚಾರಣಾ ಮ್ಯಾರಥಾನ್‌ ನಡೆಯಲಿದೆ.

     

  • ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ

    ಮಾಲೂರು ಶಾಸಕ ನಂಜೇಗೌಡ ಮನೆ ಮೇಲೆ ಇಡಿ ದಾಳಿ

    ಕೋಲಾರ: ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಮನೆ ಮೇಲೆ ದಾಳಿ ನಡೆಸಿದ್ದಾರೆ.

    ನಂಜೇಗೌಡ ಅವರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (KOCHIMUL) ಅಧ್ಯಕ್ಷರಾಗಿದ್ದು, ಮಾಲೂರು ತಾಲೂಕಿನ ಕೊಮ್ಮನಹಳ್ಳಿಯಲ್ಲಿರುವ ಅವರ ಮನೆಯಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

    ಹುತ್ತೂರು ಹೋಬಳಿಯಲ್ಲಿರುವ ಕೋಚಿಮುಲ್‌ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಇತ್ತೀಚೆಗೆ ಕೋಚಿಮುಲ್‌ ನೇಮಕಾತಿ ವಿಚಾರದಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ನಡೆದಿರುವ ಅರೋಪ ಕೇಳಿ ಬಂದಿತ್ತು. ಇದನ್ನೂ ಓದಿ: ಇನ್ಮುಂದೆ ಮದುವೆ, ಪ್ರವಾಸಕ್ಕೆ ಸಿಗಲಿದೆ ಬಿಎಂಟಿಸಿ ಬಸ್ – ಯಾವ್ಯಾವ ಬಸ್‍ಗೆ ಎಷ್ಟು ರೇಟ್?

    25 ಜನ ಅಧಿಕಾರಿಗಳ ತಂಡ ಬೆಳಗಿನ ಜಾವ 5 ಗಂಟೆಗೆ ಡೈರಿಗೆ ಆಗಮಿಸಿ ದಾಖಲೆ ಪರಿಶೀಲಿಸುತ್ತಿದೆ. ಹಾಲು ಒಕ್ಕೂಟದ ಸುತ್ತಮುತ್ತ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ಏಕ ಕಾಲದಲ್ಲಿ 10 ಕಡೆಗಳಲ್ಲಿ ಇಡಿ ತಂಡ ದಾಳಿ ಮಾಡಿದೆ. ಮಾಲೂರು ತಾಲೂಕಿನ ದೊಡ್ಡಮಲೆ ಗ್ರಾಮದಲ್ಲಿರುವ ಆಪ್ತ ಸಹಾಯಕ ಹರೀಶ್ ಮನೆ ಮೇಲೂ ದಾಳಿ ನಡೆದಿದೆ.

     

    ಕೋಚಿಮುಲ್ ಎಂಡಿ ಗೋಪಾಲ ಮೂರ್ತಿ ಕೋಲಾರ ನಿವಾಸ, ಕೋಚಿಮುಲ್ ಅಡ್ಮಿನ್ ಮ್ಯಾನೇಜರ್ ನಾಗೇಶ್ ಅವರ ಬೆಂಗಳೂರು ರಾಮಮೂರ್ತಿ ನಗರದಲ್ಲಿರುವ ಮನೆ ಮೇಲೂ ದಾಳಿ ನಡೆದಿದೆ.

     

  • ಬಿಜೆಪಿ, ಕಾಂಗ್ರೆಸ್ ನಾಯಕರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕವಾಯ್ತು ಕೋಚಿಮುಲ್

    ಬಿಜೆಪಿ, ಕಾಂಗ್ರೆಸ್ ನಾಯಕರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕವಾಯ್ತು ಕೋಚಿಮುಲ್

    ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘ ಕೋಚಿಮುಲ್ ಕೊನೆಗೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕವಾಗಿದೆ.

    ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸಿ ಸಚಿವ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. ಕೆಲ ನಿರ್ದೇಶಕರು ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಒತ್ತಾಸೆಯಂತೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಜಿಲ್ಲೆಯ ಕೆಲ ನಾಯಕರಿಗೆ ಇದರಿಂದ ಹಿನ್ನೆಡೆಯಾಗಿದೆ. ಇದನ್ನೂ ಓದಿ: 119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ಕಳೆದ ಒಂದು ವರ್ಷದಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ನಾಯಕರ ಮಧ್ಯೆ ಒಕ್ಕೂಟ ವಿಭಾಗದ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸುವ ತೀರ್ಮಾನ ಮಾಡಿದ್ದು, ಲಕ್ಷಾಂತರ ರೈತರಿಂದ ಕಟ್ಟಿದ ಒಕ್ಕೂಟ ಇಂದು ಪ್ರತ್ಯೇಕವಾಗುವ ಮೂಲಕ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

  • ಕೋಚಿಮುಲ್‍ನಿಂದ ಹಾಲಿನ ದರ 4 ರೂ. ಕಡಿತ ಖಂಡಿಸಿ ರೈತರ ಪ್ರತಿಭಟನೆ

    ಕೋಚಿಮುಲ್‍ನಿಂದ ಹಾಲಿನ ದರ 4 ರೂ. ಕಡಿತ ಖಂಡಿಸಿ ರೈತರ ಪ್ರತಿಭಟನೆ

    ಚಿಕ್ಕಬಳ್ಳಾಪುರ: ಕೊರೊನಾ ಸಂಕಷ್ಟದ ಸಮಯದಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಿಂದ ಹಾಲಿನ ದರ 4 ರೂಪಾಯಿ ಕಡಿತ ಮಾಡಿರೋದನ್ನ ಖಂಡಿಸಿ, ಚಿಕ್ಕಬಳ್ಳಾಪುರ ತಾಲೂಕು ನಂದಿ ಕ್ರಾಸ್ ಬಳಿಯ ಮೆಗಾಡೈರಿ ಬಳಿ ರೈತರು ಪ್ರತಿಭಟನೆ ನಡೆಸಿದರು.

    ಇಷ್ಟು ದಿನ ತಲಾ ಒಂದು ಲೀಟರ್ ಗೆ 28 ರೂಪಾಯಿ ಕೊಡುತ್ತಿದ್ದು, ಈಗ 4 ರೂಪಾಯಿ ಕಡಿತಗೊಳಿಸಿದ್ದು, ಸದ್ಯ ರೈತರಿಗೆ ತಲಾ ಒಂದು ಲೀಟರ್ ಗೆ 24 ರೂಪಾಯಿ ಕೊಡಲಾಗುತ್ತಿದೆ. ಜುಲೈ 23 ರಿಂದ ನೂತನ ಪರಿಷ್ಕೃತ ದರ ಅನ್ವಯವಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಹಾಲಿನ ದರ ಕಡಿತಗೊಳಿಸಿರೋದು ಹೈನುಗಾರರಿಗೆ ಬರೆ ಎಳೆದಂತಾಗಿದೆ.

    ಪ್ರತಿ ದಿನ ಜಿಲ್ಲೆಯಲ್ಲಿ ಸರಿಸಮಾರು 10 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಹೈನುಗಾರಿಕೆಯನ್ನೇ ನಂಬಿ ಜೀವನ ನಡೆಸುತ್ತಿದ್ದ ಜಿಲ್ಲೆಯ ರೈತರಿಗೆ ದರ ಕಡಿತ ಸಮಸ್ಯೆಗಳನ್ನ ತಂದೊಡ್ಡಿದೆ. ಕೋವಿಡ್-19 ನಿಂದ ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾರಾಟ ಕುಸಿತಗೊಂಡಿದ್ದು, ಇದರಿಂದ ಹಾಲಿನ ದರ ಕಡಿತಗೊಳಿಸಲಾಗಿದೆ ಎನ್ನಲಾಗಿದೆ. ಆದರೆ ಒಕ್ಕೂಟದ ಈ ತೀರ್ಮಾನದ ವಿರುದ್ಧ ಆಕ್ರೋಶ ಹೊರಹಾಕಿರುವ ರೈತರು ಮೆಗಾ ಡೈರಿ ಎದುರು ಧರಣಿ ನಡೆಸಿ, ಸಾಂಕೇತಿಕವಾಗಿ ಹಾಲು ಕರೆಯುವ ಮೂಲಕ ಪ್ರತಿಭಟನೆ ನಡೆಸಿದರು.