Tag: Kodagu Police

  • ಕೊಡಗಿನಲ್ಲಿ ವೇಶ್ಯಾವಾಟಿಕೆ ದಂಧೆ – ಕೇರಳ ಮೂಲದ ಇಬ್ಬರು ಅರೆಸ್ಟ್‌

    ಕೊಡಗಿನಲ್ಲಿ ವೇಶ್ಯಾವಾಟಿಕೆ ದಂಧೆ – ಕೇರಳ ಮೂಲದ ಇಬ್ಬರು ಅರೆಸ್ಟ್‌

    ಕೊಡಗು: ಇಲ್ಲಿನ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ.

    ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಬಂಧಿತರು. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್‌ (Beauty Parlour) ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನ ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಇದನ್ನೂ ಓದಿ: ವರ್ಷದ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಮಾತುಕತೆ – ಸ್ಫೋಟಕ ವಿಡಿಯೋ ರಿಲೀಸ್‌

    ಈ ಕುರಿತು ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಮಣಿಪುರ | ಅಸ್ಸಾಂ ರೈಫಲ್ಸ್‌ನ ಸೇನಾ ವಾಹನದ ಮೇಲೆ ಗುಂಡಿನ ದಾಳಿ – ಇಬ್ಬರು ಯೋಧರು ಹುತಾತ್ಮ, ಐವರಿಗೆ ಗಾಯ

  • ಮಡಿಕೇರಿ ದಸರಾ ವೇಳೆ ಯುವತಿಯರನ್ನ ಕೆಣಕ್ಕಿದ್ರೆ ಹುಷಾರ್‌; ಮದುವೆ ಮಂಟಪಕ್ಕೆ ಕರೆತಂದು ಕೇಸ್‌ ದಾಖಲು

    ಮಡಿಕೇರಿ ದಸರಾ ವೇಳೆ ಯುವತಿಯರನ್ನ ಕೆಣಕ್ಕಿದ್ರೆ ಹುಷಾರ್‌; ಮದುವೆ ಮಂಟಪಕ್ಕೆ ಕರೆತಂದು ಕೇಸ್‌ ದಾಖಲು

    ಮಡಿಕೇರಿ: ಮೈಸೂರು ದಸರಾ ಬಿಟ್ಟರೆ ರಾಜ್ಯದಲ್ಲಿ ಪ್ರಸಿದ್ಧಿ ಪಡೆದ ದಸರಾ ಅಂದ್ರೆ ಅದು ಮಂಜಿನ ನಗರಿ ದಸರಾ. ಮಡಿಕೇರಿಯ ದಸರಾ (Madikeri Dasara) ಉತ್ಸವಕ್ಕೆ ಎಲ್ಲಾ ಕಡೆಯಿಂದಲೂ ಜನರು ಆಗಮಿಸ್ತಾರೆ. ಇದೀಗ ದಸರಾಕ್ಕೆ ಆಗಮಿಸುವ ಮಹಿಳೆಯರು, ಯುವತಿಯರನ್ನು ಕೆಣಕಿದ್ರೆ ಅಂತಹವರನ್ನು ಮದುವೆ ಮಂಟಪಕ್ಕೆ ಕರೆತಂದು ಪ್ರಕರಣ ದಾಖಲಿಸುವುದಾಗಿ ಕೊಡಗು ಪೊಲೀಸರು (Kodagu Police) ಖಡಕ್ ವಾರ್ನಿಂಗ್ ನೀಡಿದ್ದಾರೆ.

    ಮಡಿಕೇರಿ ದಸರಾವನ್ನು ನೋಡಲು ಆಗಮಿಸುವ ಹೆಣ್ಣುಮಕ್ಕಳ ಮೇಲೆ ಕೆಲ ಕಿಡಿಗೇಡಿಗಳು ದೈಹಿಕ ದೌರ್ಜನ್ಯ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಬಂದಿತ್ತು. ಈ ಹಿನ್ನಲೆ ಈ ವರ್ಷದ ದಸರಾ ಸಂದರ್ಭದಲ್ಲಿ ಮಹಿಳಾ ಪೊಲೀಸರ ಜಂಬೋ ತಂಡಗಳನ್ನು ರಚನೆ ಮಾಡುತ್ತೇವೆ. ದಸರಾ ಉತ್ಸವದ ಶೋಭಾಯಾತ್ರೆಯ ಸಂದರ್ಭ ಜನಸಂದಣಿ ಹೆಚ್ಚಾಗಿರುವ ಕಡೆ ಕಿಡಿಗೇಡಿಗಳ ಬಗ್ಗೆ ನಿಗಾ ಇಡಲು ಒಬ್ಬರು ಎಸ್‌ಐ ನೇತೃತ್ವದ 15 ಸಿಬ್ಬಂದಿ ಒಳಗೊಂಡ ಜಂಬೋ ತಂಡಗಳನ್ನು ರಚಿಸಲಾಗುತ್ತಿದೆ. ಮಹಿಳೆಯರಿಗೆ ಕಿರುಕುಳ ನೀಡುವುದು ಖಾತ್ರಿಯಾದರೆ ಅಂತಹವರನ್ನು ನೇರವಾಗಿ ಮದುವೆ ಮಂಟಪಕ್ಕೆ ಕರೆತಂದು ಪ್ರಕರಣ ದಾಖಲು ಮಾಡುತ್ತೇವೆ ಎಂದು ಕೊಡಗು ಎಸ್ಪಿ ರಾಮರಾಜನ್ ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ -‌ NIAಗೆ ಸ್ವಯಂಪ್ರೇರಿತ ಕೇಸ್‌ ದಾಖಲಿಸಿಕೊಳ್ಳೋಕೆ ಅವಕಾಶ ಇದೆ: ಡಿವಿಎಸ್‌

    ಒಟ್ಟಿನಲ್ಲಿ ಐತಿಹಾಸಿಕ ಮಡಿಕೇರಿ ದಸರಾ ಆಚರಣೆ ದಿನಗಣನೆ ಆರಂಭವಾಗಿದ್ದು, ಕೆಲ ನಿಯಮಗಳ ಸಡಿಲಿಕೆ ಮಾಡಬೇಕು ಎಂದು ಮಡಿಕೇರಿ ದಸರಾ ಸಮಿತಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಆದರೆ ಇತ್ತ ಪೊಲೀಸರು, ದಸರಾ ಸಂದರ್ಭದಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ ಕಿರುಕುಳ ನೀಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.‌

  • ಕೊಡಗು | 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಪುತ್ರ ಬೆಂಗಳೂರಿನಲ್ಲಿ ಆತ್ಮಹತ್ಯೆ

    ಕೊಡಗು | 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಪುತ್ರ ಬೆಂಗಳೂರಿನಲ್ಲಿ ಆತ್ಮಹತ್ಯೆ

    ‌- ತಾಯಿ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ ಮಗ

    ಮಡಿಕೇರಿ: ಕೊಡಗು (Kodagu) ಜಿಲ್ಲೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ಯುವಕ ಬೆಂಗಳೂರಿನಲ್ಲಿ (Bengaluru) ವಾಸವಿದ್ದ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ಗಗನ್‌ (21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ. ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಚಂದ್ರಾವತಿ ದಂಪತಿ ಪುತ್ರ. ಇದನ್ನೂ ಓದಿ: ಮಲೆನಾಡಲ್ಲಿ ಉತ್ತಮ ಮಳೆ – ತುಂಗಭದ್ರಾ ಜಲಾಶಯಕ್ಕೆ 51,654 ಕ್ಯುಸೆಕ್ ಒಳಹರಿವು

    ತಾಯಿ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ
    ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡ್ತಿದ್ದ ಗಗನ್ ಸೋಷಿಯಲ್‌ ಮೀಡಿಯಾದಲ್ಲೂ ಆಗಾಗ್ಗೆ ರೀಲ್ಸ್‌ ಮಾಡ್ತಿದ್ದ. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ. ಹೀಗಾಗಿ ಚಂದ್ರಾವತಿರವರು ನೆನ್ನೆ ರಾತ್ರಿಯೇ ಬೆಂಗಳೂರಿಗೆ ಬಸ್‌ ಹತ್ತಿದ್ದರು. ಇದನ್ನೂ ಓದಿ: ವಯನಾಡಲ್ಲಿ ಮಳೆಯಬ್ಬರ – ಕಬಿನಿ ಜಲಾಶಯಕ್ಕೆ 22 ಸಾವಿರ ಕ್ಯುಸೆಕ್ ಒಳಹರಿವು

    ತಾನು ಕೊಡಗಿನಿಂದ ಬರುತ್ತಿರುವ ವಿಷಯವನ್ನು ಕೂಡ ಮಗನಿಗೆ ತಿಳಿಸಿದ್ದರು. ಆದ್ರೆ ಚಂದ್ರಾವತಿ ಅವರು ಬೆಂಗಳೂರು ತಲುಪುವ ಮೊದಲೇ ಪ್ರೀತಿಯ ಪುತ್ರ ಗಗನ್ ನೇಣು ಬಿಗಿದು ಇಹಲೋಕ ತ್ಯಜಿಸಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಹನಿಮೂನ್ ಹಂತಕಿಯ ಮತ್ತೊಂದು ರಹಸ್ಯ ಬಯಲು – 3 ವಾರಗಳಲ್ಲಿ ಆ ಸಂಖ್ಯೆಗೆ 234 ಬಾರಿ ಫೋನ್‌ ಕಾಲ್‌ ಮಾಡಿದ್ದ ಸೋನಂ

  • ಕೊಡಗಿನಲ್ಲಿ ಕಳೆದ 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ – 14 ಬಾಲಕಿಯರಿಗೆ ಹೆರಿಗೆ!

    ಕೊಡಗಿನಲ್ಲಿ ಕಳೆದ 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ – 14 ಬಾಲಕಿಯರಿಗೆ ಹೆರಿಗೆ!

    ಮಡಿಕೇರಿ: ತನ್ನ ಪ್ರಾಕೃತಿಕ ಸೌಂದರ್ಯದಿಂದಲ್ಲೇ ದೇಶ-ವಿದೇಶಗಳ ಜನರನ್ನು ಕೈಬೀಸಿ ಕರೆಯುತ್ತಿರುವ ಕೊಡಗು (Kodagu) ಜಿಲ್ಲೆಗೆ ಅಪಖ್ಯಾತಿ ತರುತ್ತಿದೆ. ಇತ್ತೀಚೆಗೆ ಕೊಡಗಿನಲ್ಲಿ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ.

    ಇದರ ಪರಿಣಾಮವಾಗಿ ಕಳೆದ 9 ತಿಂಗಳ ಅವಧಿಯಲ್ಲಿ 30 ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದು (Minor girl pregnant), 59 ಪೋಕ್ಸೋ ಪ್ರಕರಣಗಳು ದಾಖಲಾಗಿವೆ, ಇದು ಜಿಲ್ಲಾಡಳಿತದ ನಿದ್ದೆಗಡಿಸಿದೆ. ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

    ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 59 ಪ್ರಕರಣಗಳು, 9 ತಿಂಗಳಲ್ಲಿ ನೋಡಿದ್ರೆ 30 ಅಪ್ರಾಪ್ತೆಯರು ಗರ್ಭಿಣಿಯಾಗಿರುವುದು ಕಂಡುಬಂದಿದೆ. 30 ಅಪ್ರಾಪ್ತೆಯರ ಪೈಕಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆ ಆಗಿದೆ. ಓರ್ವ ಅಪ್ರಾಪ್ತೆಗೆ ಗರ್ಭಪಾತ ಆಗಿರುವುದು ಕೂಡ ಪತ್ತೆಯಾಗಿದೆ.

    ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲೇ 43 ಸಂತ್ರಸ್ತೆಯರು ಪತ್ತೆಯಾಗಿದ್ದಾರೆ. 43 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ತೋಟದ ಮನೆಗಳಲ್ಲಿ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬುವುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವರದಿಯಲ್ಲಿ ಗೊತ್ತಾಗಿದೆ.

    ಈ ಅಂಕಿ-ಅಂಶಗಳನ್ನು ನೋಡಿದ ಜಿಲ್ಲೆಯ ಜನರು ಬೆಚ್ಚಿಬಿಳುತ್ತಿದ್ದಾರೆ. ಅಷ್ಟೇ ಅಲ್ಲದೇ ‌ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೋರ ಹಾಕುತ್ತಿದ್ದಾರೆ. ಜಿಲ್ಲೆಯಲ್ಲಿರುವ ಅಧಿಕಾರಿಗಳು ಹಾಡಿ ಅಥವಾ ಕಾಫಿ ತೋಟಗಳಲ್ಲಿ ಇರುವ ಅನರಕ್ಷ ಪೋಷಕರಿಗೆ ಜಾಗೃತಿ ಮೂಡಿಸಬೇಕು. ಆದ್ರೆ ಇಲ್ಲಿರುವ ಅಧಿಕಾರಿಗಳು ಕಚೇರಿಯಲ್ಲೇ ದಿನ ಕಳೆಯುತ್ತಿದ್ದಾರೆ. ಹೀಗಾಗಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಅಮಿತ್ ಶಾ ಭೇಟಿ – ಕೊಯಮತ್ತೂರಿನಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿದ ಅಮಿತ್ ಶಾ

    ಇನ್ನೂ ಕೊಡಗು ಜಿಲ್ಲೆಯಲ್ಲಿ 2024ರ ಏಪ್ರಿಲ್ ತಿಂಗಳಿನಿಂದ- ಡಿಸೆಂಬರ್‌ ವರೆಗೆ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ 59 ಹೆಣ್ಣು ಮಕ್ಕಳು ದೌರ್ಜನ್ಯಕ್ಕೊಳಗಾಗಿದ್ದಾರೆ. ಈ ಪೈಕಿ 10 ಪ್ರಕರಣಗಳು ತನಿಖಾ ಹಂತದಲ್ಲಿದ್ದು, 48 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಇವೆ. ದಾಖಲಾಗಿದ್ದ ಒಂದು ಪ್ರಕರಣ ಖುಲಾಸೆಯಾಗಿದೆ. ಇದನ್ನೂ ಓದಿ: ಶಿಶು ಕಿಡ್ನ್ಯಾಪ್‌ ಕೇಸ್ – ಅಪರಾಧಿಗೆ 10 ವರ್ಷ ಸಜೆ, 1 ಲಕ್ಷ ರೂ. ದಂಡ

  • ಕೊಡಗಿನ ಕಟ್ಟೆಮಾಡು ದೇವಾಲಯದ ಅರ್ಚಕನ ಮೇಲೆ ಹಲ್ಲೆ ಕೇಸ್‌ – ಆರೋಪಿಗಳ ಪತ್ತೆಗೆ ತೀವ್ರ ಶೋಧ

    ಕೊಡಗಿನ ಕಟ್ಟೆಮಾಡು ದೇವಾಲಯದ ಅರ್ಚಕನ ಮೇಲೆ ಹಲ್ಲೆ ಕೇಸ್‌ – ಆರೋಪಿಗಳ ಪತ್ತೆಗೆ ತೀವ್ರ ಶೋಧ

    ಮಡಿಕೇರಿ: ಸಾಂಪ್ರದಾಯಿಕ ವಸ್ತ್ರ ಧರಿಸುವ ವಿಚಾರದಲ್ಲಿ ವಿವಾದದ ಕೇಂದ್ರವಾಗಿ ಮಾರ್ಪಟ್ಟಿರುವ ಮಡಿಕೇರಿ (Madikeri) ತಾಲ್ಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಾಲಯದ‌ ವಿಚಾರ ಸಾಮರಸ್ಯದ ಕೊರತೆಗೆ ಕಾರಣವಾಗಿದೆ. ಇದೀಗ ಮಹಾಮೃತ್ಯುಂಜಯ ದೇವಾಲಯದ‌ ಅರ್ಚಕನ (Priest) ಮೇಲೆ ಮಾರಣಾಂತಿಕ ಹಲ್ಲೇ ಆಗಿರುವುದರಿಂದ ಜಿಲ್ಲೆಯಲ್ಲಿ ಮತ್ತೆ ಅಶಾಂತಿಯ ವಾತಾವರಣ ಸೃಷ್ಟಿ ಅಗುತ್ತೋ ಅನ್ನೋ ಅನುಮಾನ ಸ್ಥಳೀಯರನ್ನು ಕಾಡುತ್ತಿದೆ.

    ಹೌದು. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಇಂದಿಗೂ ಮುಂದುವರೆದಿದೆ. ಅಲ್ಲದೇ ದೇವಾಲಯದ 200 ಮೀಟರ್‌ ಸುತ್ತ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಈ ನಡುವೆ ದೇವಾಲಯದ ಪ್ರದಾನ ಅರ್ಚಕರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಇದನ್ನೂ ಓದಿ: ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ವಿಘ್ನೇಶ್ ಭಟ್ ಹಲ್ಲೆಗೊಳಗಾದ ಅರ್ಚಕರಾಗಿದು, ಕಾಕೋಟು ಪರಂಬು ಗ್ರಾಮದ ಅನಿಲ್ ಮತ್ತು ಸಹಚರರು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿರುವ ಅರ್ಚಕರನ್ನ ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ನಡುವೆ ಕೊಡವ ಜನಾಂಗದ ಅನಿಲ್ ಮತ್ತು ಸಹಚರರು ದೇವಾಲಯ ವಿಚಾರವಾಗಿ ಅರ್ಚಕರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದ ಮೂವರು ಅರೋಪಿಗಳನ್ನು ಅದಷ್ಟು ಬೇಗ ಬಂಧನ ಮಾಡಬೇಕು ಇಲ್ಲದೇ ಹೋದ್ರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ದೇವಾಲಯದ ಸಮಿತಿ ಸದಸ್ಯರು ತಿಳಿಸಿದ್ದಾರೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ನಡುವೆ ಕೊಡಗು ಎಸ್ಪಿ ರಾಮರಾಜನ್ ಮಾಧ್ಯಮಗಳೊಂದಿಗೆ ಮಾತಾನಾಡಿ‌, ಕಟ್ಟೆಮಾಡು ದೇವಾಲಯ ವಿವಾದ ಮುಂದಿರಿಸಿಕೊಂಡು ಸಮಾಜದಲ್ಲಿ ಶಾಂತಿ ಭಂಗಕ್ಕೆ ಮುಂದಾಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ| ಶಾಸಕರನ್ನು ಕೇಳಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯ: ಕೆ.ಎನ್.ರಾಜಣ್ಣ

  • ಫ್ಯಾಮಿಲಿ ಪ್ಲ್ಯಾನಿಂಗ್‌ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಅಸ್ವಸ್ಥಗೊಂಡು ಸಾವು

    ಫ್ಯಾಮಿಲಿ ಪ್ಲ್ಯಾನಿಂಗ್‌ ಚಿಕಿತ್ಸೆಗೆ ದಾಖಲಾಗಿದ್ದ ಬಾಣಂತಿ ಅಸ್ವಸ್ಥಗೊಂಡು ಸಾವು

    ಮಡಿಕೇರಿ: ಎರಡೇ ಮಕ್ಕಳು ಸಾಕು ಇನ್ಮುಂದೆ ಮಕ್ಕಳು ಮಾಡಿಕೊಳ್ಳೋದು ಬೇಡವೆಂದು ಲ್ಯಾಪ್ರೊಸ್ಕೋಪಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯೊಬ್ಬರು ಆಪರೇಷನ್ ಥಿಯೆಟರ್‌ಗೆ ಹೋಗಿದ್ದ ವೇಳೆ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ (Kodagu Community Health Center) ನಡೆದಿದೆ.

    ಶಾಂತಿ (27) ಮೃತಪಟ್ಟ ಬಾಣಂತಿ. ಮೂಲತಃ ಪಿರಿಯಾಪಟ್ಟಣ ತಾಲೂಕಿನ ಬೂದಿತಿಟ್ಟು ಗ್ರಾಮದ ಚೇಳಾದೋರೆ ಎಂಬುವವರ ಪತ್ನಿ ಶಾಂತಿ ಅವರು, ಮಂಗಳವಾರ ತಮ್ಮ ಗಂಡ ಹಾಗೂ 2 ತಿಂಗಳು 10 ದಿನದ ಮಗುವಿನೊಂದಿಗೆ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗಮಿಸಿದ್ದಾರೆ. ಲ್ಯಾಪ್ರೊಸ್ಕೋಪಿ (ಉದರ ದರ್ಶಕ) ಎಂಬ ಶಸ್ತ್ರಚಿಕಿತ್ಸೆಯಾಗುತ್ತಿದ್ದ ಹಿನ್ನೆಲೆ ಫ್ಯಾಮಿಲಿ ಪ್ಲ್ಯಾನಿಂಗ್‌ ಮಾಡಿಸಲು ಮುಂದಾಗಿದ್ದಾರೆ. ಇದೇ ದಿನ ಸುಮಾರು 14 ಬಾಣಂತಿಯರು ಫ್ಯಾಮಿಲಿ ಪ್ಲ್ಯಾನಿಂಗ್‌ಗೆ (family planning) ನೋಂದಣಿ ಮಾಡಿಕೊಂಡಿದ್ದಾರೆ.

    ಮಂಗಳವಾರ ಬೆಳಗ್ಗೆ ಆಪರೇಷನ್ ಮಾಡಿಸಲು ಶಾಂತಿ ಅವರು ಮುಂದಾದ ವೇಳೆ ಅಸ್ವಸ್ಥತೆಯಿಂದ ಕುಸಿದು ಬಿದ್ದಿದ್ದಾರೆ. ತಕ್ಷಣವೇ ವೈದ್ಯಾಧಿಕಾರಿಗಳು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲು ಮುಂದಾಗಿದ್ದಾರೆ. ಬಾಣಂತಿ ಮಹಿಳೆ ಶಾಂತಿಯನ್ನು ಮಡಿಕೇರಿ ಆಸ್ಪತ್ರೆಗೆ ರವಾನೆ ಮಾಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಲಾಗಿದೆ‌.

    ಸದ್ಯ ಮೃತ ಮಹಿಳೆ ಶವವನ್ನ ಮರಣೋತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಕೊಡಗು ಎಸ್ಪಿ ರಾಮರಾಜನ್ ಪ್ರತಿಕ್ರಿಯಿಸಿದ್ದಾರೆ. ವೈದ್ಯಾಧಿಕಾರಿ ಸತೀಶ್ ಸಹ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

  • ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು

    ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು

    ಮಡಿಕೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ವ್ಯಕ್ತಿಯೊಬ್ಬನಿಗೆ ಮಡಿಕೇರಿ ನಗರದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ (Kodagu District and Sessions court) ದಂಡ ಸಹಿತ 20 ವರ್ಷಗಳ ಕಠಿಣ ಸಜೆ ವಿಧಿಸಿ ತೀರ್ಪು ಪ್ರಕಟಿಸಿದೆ.

    ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಪೊಲೀಸ್ ಠಾಣಾ (Suntikoppa Police Station) ವ್ಯಾಪ್ತಿಯ ಹರದೂರು ಗ್ರಾಮದ ಎಸ್ಟೇಟ್‌ವೊಂದರ ಲೈನ್ ಮನೆಯಲ್ಲಿ ವಾಸವಿದ್ದ ಎಂ.ವಿ ರಮೇಶ ಎಂಬಾತನೆ ಶಿಕ್ಷೆಗೆ ಗುರಿಯಾಗಿರುವ ಕಾಮುಕ. ಇದನ್ನೂ ಓದಿ: ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರದಿಂದ ಸಮ್ಮತಿ

    2021ರ ಆಗಸ್ಟ್‌ 5 ರಂದು ರಮೇಶ್‌ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪೋಷಕರು ಸುಂಟಿಕೊಪ್ಪ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪೋಕ್ಸೋ ಕಾಯ್ಡೆ ಅಡಿ ಪ್ರಕರಣ (Pocso Case) ದಾಖಲಿಸಿಕೊಂಡಿದ್ದ ಪೊಲೀಸರು ಆ.7ರಂದು (ಪ್ರಕರಣ ನಡೆದ ಎರಡು ದಿನಗಳ ನಂತರ) ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಇದನ್ನೂ ಓದಿ: ಮಾರುತಿ ಸುಜುಕಿಯ ಮೊದಲ ಎಲೆಕ್ಟ್ರಿಕ್ ಕಾರ್ ಇ ವಿಟಾರಾ ಅನಾವರಣ; 500 ಕಿಮೀ ರೇಂಜ್

    ಪ್ರಕರಣದ ತನಿಖಾಧಿಕಾರಿ ಕುಶಾಲನಗರ ವೃತ್ತದ ಸಿಪಿಐ ಎಂ. ಮಹೇಶ್ ಹಾಗೂ ತನಿಖಾ ಸಹಾಯಕ ಹೆಚ್‌.ಎಸ್ ಲೋಕೇಶ್ ಅವರು 2021ರ ಸೆಪ್ಟಂಬರ್‌ 16 ರಂದು ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಆರೋಪಿ ರಮೇಶ್‌ನನ್ನು ದೋಷಿ ಎಂದು ಗುರುತಿಸಿ ಒಟ್ಟು 20 ವರ್ಷಗಳ ಕಠಿಣ ಜೈಲು ಶಿಕ್ಷೆ, 5,000 ರೂ. ದಂಡ ಮತ್ತು ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದೆ. ಇದನ್ನೂ ಓದಿ: ಕಾಂಗ್ರೆಸ್ ಆಡಳಿತದಿಂದ ಕರ್ನಾಟಕ ದರೋಡೆಕೋರರ ಸ್ವರ್ಗವಾಗಿದೆ- ಆರ್.ಅಶೋಕ್ 

  • ಅಸ್ಸಾಂ ಮೂಲದವರಿಂದ ಕೊಡಗಿನಲ್ಲಿ ಗಾಂಜಾ ದಂಧೆ – ಮಾಲು ಸಹಿತ ನಾಲ್ವರು ಅರೆಸ್ಟ್‌

    ಅಸ್ಸಾಂ ಮೂಲದವರಿಂದ ಕೊಡಗಿನಲ್ಲಿ ಗಾಂಜಾ ದಂಧೆ – ಮಾಲು ಸಹಿತ ನಾಲ್ವರು ಅರೆಸ್ಟ್‌

    ಮಡಿಕೇರಿ: ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಕ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ (Ganja Sale) ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಹೊಕ್ಕೇರಿ ಗ್ರಾಮದಲ್ಲಿ ನೆಲೆಸಿರುವ ಅಸ್ಸಾಂ ರಾಜ್ಯ ಮೂಲದ ಸೋಫಿಕುಲ್ ಇಸ್ಲಾಂ (24) ವರ್ಷ, ಇಮ್ಮಿಯಾಜ್ ಆಲಿ (20) ರೋಹಿಥಾನ್ (50) ಹಾಗೂ ಕೋಣನಕಟ್ಟೆ-ಸುಳುಗೋಡು ಗ್ರಾಮದ ನಿವಾಸಿ ಯೂಸೂಫ್ ಆಲಿ (32) ಬಂಧಿತ ಆರೋಪಿಗಳು. ಇವರ ಬಳಯಿಂದ 2 ಕೆಜಿ 481 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಗಾಂಜಾ ಮಾರಾಟದ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆ ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ ಕುಮಾರ್, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ, ಸಿದ್ದಾಪುರ ಪಿಎಸ್‌ಐ ರಾಘವೇಂದ್ರ ದಾಳಿ ನಡೆಸಿ. ಆರೋಪಿಗಳನ್ನು ಬಂಧಿಸಿದ್ದಾರೆ.

    ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಶ್ಲಾಘಿಸಿದ್ದಾರೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳ ಸಾಗಾಟ ಅಥವಾ ಮಾರಾಟದ ಕುರಿತು ಮಾಹಿತಿ ಇದ್ದರೆ ಪೊಲೀಸರ ಗಮನಕ್ಕೆ ತರುವಂತೆ ಎಸ್‌ಪಿ ಮನವಿ ಮಾಡಿದ್ದಾರೆ.

  • ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ಬಾಲಕನ ತಂದೆಗೆ ಬಿತ್ತು 25,000 ರೂ. ದಂಡ!

    ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ಬಾಲಕನ ತಂದೆಗೆ ಬಿತ್ತು 25,000 ರೂ. ದಂಡ!

    ಮಡಿಕೇರಿ: ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಕೊಟ್ಟ ತಪ್ಪಿಗೆ ಇಲ್ಲೊಬ್ಬ ಪಿತಾಮಹಾ ಬರೋಬ್ಬರಿ 25 ಸಾವಿರ ರೂ. ದಂಡ ತೆತ್ತಿದ್ದಾನೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸ್ ಠಾಣಾ (Somwarpet Police Station) ವ್ಯಾಪ್ತಿಯ ರೇಂಜರ್ ಬ್ಲಾಕಿನ ಬಿ.ಎಸ್ ಮಂಜುನಾಥ ಎಂಬುವವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ್ದರು. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮ್ಮೆ ಸಂಖ್ಯೆ 116/24 ರಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 1 ತಿಂಗಳ ಹಿಂದೆಯಷ್ಟೇ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ನಿಂದ ರಿಲೀಫ್‌ ಪಡೆದಿದ್ದ ಅಲ್ಲು ಅರ್ಜುನ್‌

    ಪ್ರಕರಣದ ವಿಚಾರಣೆ ನಡೆಸಿದ ಸೋಮವಾರಪೇಟೆ ಜೆಎಂಎಫ್‌ಸಿ ಕೋರ್ಟ್‌ (Somwarpet JMFC Court), ಮಂಜುನಾಥ್‌ ಅವರಿಗೆ 25,000 ರೂ. ದಂಡ ವಿಧಿಸಿದೆ. ಇದರೊಂದಿಗೆ ದ್ವಿಚಕ್ರ ವಾಹನದ ಎಫ್‌ಸಿ ನವೀಕರಿಸದಕ್ಕೆ ಹೆಚ್ಚುಬರಿ 2,000 ರೂ. ಸೇರಿ ಒಟ್ಟು 27,000 ರೂ. ದಂಡ ವಿಧಿಸಿದೆ. ಇದನ್ನೂ ಓದಿ: ಬಲಿಷ್ಠ ಸಮುದಾಯ 2ಎ ಮೀಸಲಾತಿ ಕೇಳುತ್ತಿರುವುದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರ: ಲೇಖಕ ಕುಂ.ವೀರಭದ್ರಪ್ಪ ಕಿಡಿ

  • ʻಕೊಡಗು ಬಂದ್‌ʼಗೆ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನ ಸಂಚಾರ

    ʻಕೊಡಗು ಬಂದ್‌ʼಗೆ ನೀರಸ ಪ್ರತಿಕ್ರಿಯೆ – ಎಂದಿನಂತೆ ಜನ ಸಂಚಾರ

    ಮಡಿಕೇರಿ: ವೀರ ಸೇನಾನಿಗಳಿಗೆ ಅಪಮಾನ ಹೇಳಿಕೆಯನ್ನು ಖಂಡಿಸಿ ಸರ್ವಜನಾಂಗಗಳ ಒಕ್ಕೂಟ ಕರೆ ನೀಡಿದ್ದ ʻಕೊಡಗು ಬಂದ್ʼಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಕಳೆದ ಕೆಲ ದಿನಗಳ‌ ಹಿಂದೆ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ (Field Marshal Cariappa), ಜನರಲ್ ತಿಮ್ಮಯ್ಯ ಅವರ ಬಗ್ಗೆ ವಕೀಲರೊಬ್ಬರು ಆಕ್ಷೇಪರ್ಹ ಸಂದೇಶವನ್ನು ವಾಟ್ಸಪ್ ಗ್ರೂಪ್‌ನಲ್ಲಿ ಹರಿ ಬಿಟ್ಟಿದ್ದು, ಕೊಡಗಿನ ಸೇನಾನಿಗಳಿಗೆ ಮಾಡಿದ ಅಪಮಾನ ಎಂದು ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬಳಿಕ ವಕೀಲರನ್ನ ಬಂಧಿಸಿ ಕೆಲವೇ ಸಮಯದಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರಿಂದ ಕೊಡಗಿನ ಮುಂಖಡರು ಪ್ರತಿಭಟನೆಗಿಳಿದಿದ್ದರು. ಇಂದು ಸಹ ವಕೀಲರನ್ನ ಗಡಿಪಾರು ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್ವಜನಾಂಗಗಳ ಒಕ್ಕೂಟ ಅರ್ಧದಿನದ ʻಕೊಡಗು ಬಂದ್ʼಗೆ ಕರೆ ನೀಡಿತ್ತು. ಆರಂಭದಲ್ಲಿ ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದವು. ಆದ್ರೆ ಇಂದು ಕೆಲವರು ಬಂದ್ ನೈತಿಕ ಬೆಂಬಲ‌ ಮಾತ್ರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತುಮಕೂರು | ಕಾಂಗ್ರೆಸ್‌ನ ಮಾಜಿ ಶಾಸಕ ಆರ್. ನಾರಾಯಣ ನಿಧನ

    ಸರ್ವಜನಾಂಗಗಳ ಒಕ್ಕೂಟ ನೀಡಿದ ಬಂದ್‌ಗೆ ಮಡಿಕೇರಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂಜಾನೆಯಿಂದಲೇ ಅಂಗಡಿ ಮುಂಗಟ್ಟುಗಳು ಓಪನ್ ಆಗಿದ್ದು ಜನತೆ ವ್ಯಾಪಾರ ವ್ಯವಹಾರದಲ್ಲಿ ತೊಡಗಿದ್ದಾರೆ. ಇನ್ನೂ ಸರ್ಕಾರಿ ಬಸ್ ಕಚೇರಿಗಳು ಶಾಲೆಗಳು ಎಂದಿನಂತೆ ಆರಂಭವಾಗುತ್ತಿದೆ. ಆದ್ರೆ ಖಾಸಗಿ ವಲಯದ ಶಾಲೆಗಳು ಬಸ್‌ಗಳು ಗೊಂದಲದಲ್ಲಿಯೆ ರಸ್ತೆಗಿಳಿಯುತ್ತಿವೆ‌.

    ಸದ್ಯದ ಮಟ್ಟಿಗೆ ಜಿಲ್ಲೆಗೆ ಬಂದ್ ಬೀಸಿ ತಟ್ಟಿಲ್ಲ ಯಥಾ ಸ್ಥಿತಿ ಕಾಯ್ದುಕೊಂಡಿದ್ದು ಹತ್ತು ಗಂಟೆಯ ನಂತರ ಯಾವ ರೀತಿ ಬಂದ್ ವಾತವರಣ ಇರುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಸದ್ಯ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಿದ್ದು ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿದೆ. ಇದನ್ನೂ ಓದಿ: ಜೈಲಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ಹತ್ಯೆ – ಮೃತದೇಹ ಕತ್ತರಿಸಿ ನದಿಗೆಸೆದ ಹಂತಕ