Tag: Kodagu Soldier

  • ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಕೊಡಗಿನ ಯೋಧ ಅಜ್ಜಮಾಡ ದೇವಯ್ಯ ಸಾಹಸಗಾಥೆಯ ʻಸ್ಕೈ ಫೋರ್ಸ್ʼ ಬಾಲಿವುಡ್ ಸಿನಿಮಾ‌ ಜ.24 ರಂದು ತೆರೆಗೆ

    ಮಡಿಕೇರಿ: 1965ರಲ್ಲಿ ಭಾರತ-ಪಾಕ್ (Indo – Pak war 1965) ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಪ್ರಾಣತೆತ್ತ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ತೆರೆಯಮೇಲೆ ಬರಲು ಸಜ್ಜಾಗಿದೆ. ನೈಜ ಘಟನೆಯನ್ನಾಧರಿಸಿದ ʻಸ್ಕೈ ಫೋರ್ಸ್ʼ (Sky Force) ಬಾಲಿವುಡ್ ಸಿನಿಮಾ ಇದೇ ಜ.24 ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸೈನಿಕರ ತವರು ಜಿಲ್ಲೆ ಕೊಡಗಿನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

    ಕೊಡಗು ಯೋಧರ (Kodagu Soldier) ಪರಂಪರೆಯ ನಾಡು. ಪ್ರತೀ ಕುಟುಂಬದಲ್ಲಿ ಒಬ್ಬನಾದ್ರೂ ಯೋಧನಾಗಿ ದೇಶ ಸೇವೆ ಮಾಡಬೇಕು ಅನ್ನೋದು ಇಲ್ಲಿನ ಜನರ ಮನೋಭಾವ. ಈ ಪುಣ್ಯ ಭೂಮಿಯಲ್ಲಿ ಹುಟ್ಟಿ ದೇಶಕ್ಕಾಗಿ ಪ್ರಾಣಕೋಡುವ ಯೋಧರು ಕೊಡಗು ಜಿಲ್ಲೆಯಲ್ಲಿ ಇಂದಿಗೂ ಇದ್ದಾರೆ. ಈ ನಡುವೆ 1965ರಲ್ಲಿ ಭಾರತ-ಪಾಕ್ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಯೋಧ ಸ್ಕ್ವಾಡ್ರನ್‌ ಲೀಡರ್‌ ಅಜ್ಜಮಾಡ ದೇವಯ್ಯ ಅವರ ಸಾಹಸಗಾಥೆ ಸಿನಿಮಾ ರೂಪದಲ್ಲಿ ತೆರೆಮೇಲೆ ಬರುತ್ತಿದೆ. ದೇಶಾದ್ಯಂತ ಚಿತ್ರ ಜ.24ರಂದು ರಿಲೀಸ್‌ ಆಗಲಿದೆ.

    ಈ ಚಿತ್ರದಲ್ಲಿ ಪಾಕಿಸ್ತಾನದ ಸರ್ಗೋಧಾ ವಾಯುನೆಲೆ ಮೇಲೆ ಭಾರತೀಯ ವಾಯುಸೇನೆ ವೈಮಾನಿಕ ದಾಳಿ ನಡೆಸಿತು. ಇದು ಭಾರತೀಯ ವಾಯುಪಡೆಯ ಮೊದಲ ಮತ್ತು ಅತ್ಯಂತ ಮಾರಣಾಂತಿಕ ದಾಳಿ ಎಂದು ಪರಿಗಣಿಸಲಾಗಿದೆ. ಚಿತ್ರದಲ್ಲಿ ದೇಶಪ್ರೇಮದ ಜೊತೆಗೆ ಸಾಹಸ ದೃಶ್ಯಗಳಿಗೆ ಆದ್ಯತೆ ನೀಡಲಾಗಿದ್ದು, ಭಾರತೀಯ ವಾಯುಪಡೆಯ ಧೈರ್ಯದ ಪ್ರತೀಕ ಎಂಬಂತೆ ಚಿತ್ರಿಸಲಾಗಿದೆ. 1965ರ ಭಾರತ-ಪಾಕ್ ಯುದ್ಧದಲ್ಲಿ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರು ಬದುಕಿ ಹಿಂದಕ್ಕೆ ಬರುವ ಅವಕಾಶಗಳಿತ್ತು. ಆದರೂ ಜೀವದಮೇಲಿನ ಹಂಗು ತೊರೆದು, ಶತ್ರು ರಾಷ್ಟ್ರ ಪಾಕ್‌ನ ಅತ್ಯಾಧುನಿಕ ಯುದ್ಧವಿಮಾನವನ್ನು ಹೊಡೆದುರುಳಿಸಿ ಹುತಾತ್ಮರಾದರು.

    ಈ ಘಟನೆಯು ಹಲವು ವರ್ಷಗಳ ಬಳಿಕ ಪಾಕ್ ಸೇನೆಯ ಅಧಿಕಾರಿಯೊಬ್ಬರನ್ನ ಬಿಬಿಸಿ ಸಂದರ್ಶನ ಮಾಡಿದಾಗ ಬೆಳಕಿಗೆ ಬಂದಿತು. ಶೌರ್ಯ ಮೆರೆದು ಹುತಾತ್ಮರಾದ ಸ್ಕ್ವಾಡ್ರನ್‌ ಲೀಡ‌ರ್ ಅಜ್ಜಮಾಡ ದೇವಯ್ಯ ಅವರಿಗೆ ಮರಣೋತ್ತರವಾಗಿ ಮಹಾವೀರ ಚಕ್ರ ಪುರಸ್ಕಾರ ನೀಡಲಾಯಿತು. ಇವರ ಸಾಹಸಗಾಥೆಯ ನೈಜ ಘಟನೆಯ ಚಿತ್ರವಾಗಿರುವುದರಿಂದ ಜಿಲ್ಲೆಯ ಜನರು ಹರ್ಷ ವ್ಯಕ್ತ ಪಡಿಸುತ್ತಿದ್ದಾರೆ.

    ಅಜ್ಜಮಾಡ ಬಿ.ದೇವಯ್ಯ ಅವರ ಜೀವನಾಧರಿತ ಪುಸ್ತಕ ʻ1965ರ ಯುದ್ಧ ಹಾಗೂ ಮಹಾವೀರʼ ಆಧರಿಸಿ ʻಸ್ಕೈ ಫೋರ್ಸ್‌ʼ ಚಿತ್ರ ನಿರ್ಮಿಸಲಾಗಿದೆ. ಮ್ಯಾಡಾಕ್ ಫಿಲ್ಕ್ ಮತ್ತು ಜಿಯೋ ಸ್ಟುಡಿಯೋಸ್ ಬ್ಯಾನ‌ರ್ ಅಡಿಯಲ್ಲಿ ದಿನೇಶ್ ವಿಜನ್, ಅಮರ್ ಕೌಶಿಕ್ ಹಾಗೂ ಜ್ಯೋತಿ ದೇಶಪಾಂಡೆ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಸಂದೀಪ್‌ ಕೇವಾಲಾನಿ ಹಾಗೂ ಅಭಿಷೇಕ್ ಅನಿಲ್ ಕಪೂರ್ ಜಂಟಿಯಾಗಿ ಸಿನಿಮಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್ (Akshay Kumar) ಹಾಗೂ ವೀರ್ ಪಹಾಡಿಯಾ ಪ್ರಮುಖ ಪಾತ್ರಗಳಲ್ಲಿದ್ದಾರೆ. ಸಾರಾ ಅಲಿ ಖಾನ್, ನಿಮ್ರತ್‌ ಕೌರ್ ಮತ್ತು ಶರದ್ ಕೇಳ್ಳ‌ರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ಕನ್ನಡದ ಸೂಪರ್ ಹಿಟ್‌ ಚಿತ್ರ ʻಮುತ್ತಿನಹಾರʼ ನೋಡಿ ರಾಜ್ಯದ ನಾನಾ ಭಾಗದ ನೂರಾರು ಯುವಕರು ಸೈನ್ಯಕ್ಕೆ ಸೇರಲು ಮುಂದಾಗಿದ್ರು.

  • Kodagu | ಹುಟ್ಟೂರಿನಲ್ಲಿ ಬುಧವಾರ ಸೇನಾ ಗೌರವದೊಂದಿಗೆ ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ

    Kodagu | ಹುಟ್ಟೂರಿನಲ್ಲಿ ಬುಧವಾರ ಸೇನಾ ಗೌರವದೊಂದಿಗೆ ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ

    – ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ವ್ಯವಸ್ಥೆ

    ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್‌ನಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಗಾಯಗೊಂಡು ಕೊನೆಯುಸಿರೆಳೆದ ಯೋಧ ಕೊಡಗಿನ ದಿವಿನ್ (28) ಅಂತ್ಯಕ್ರಿಯೆ ಬುಧವಾರ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದಲ್ಲಿ ನಡೆಯಲಿದೆ.

    ಶ್ರೀನಗರ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿವಿನ್‌ ಕಳೆದ ಎರಡು ದಿನಗಳ ಹಿಂದಷ್ಟೇ ಹುತಾತ್ಮರಾದರು. ಇಂದು (ಡಿ.31) ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ ದಿವಿನ್‌ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ತರಲಾಯಿತು. ಈ ಸಂದರ್ಭ ಮೈಸೂರು – ಕೊಡಗು ಸಂಸದ ಯದುವೀರ್ ಒಡೆಯರ್‌ ಅವರು ವೀರ ಯೋಧನಿಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಹುತಾತ್ಮ ಯೋಧ ದಿವಿನ್‌ ಮದುವೆಗೆ ಇನ್ನೆರಡು ತಿಂಗಳು ಬಾಕಿಯಿತ್ತು, ಲಗ್ನಪತ್ರಿಕೆಯೂ ಪ್ರಿಂಟ್‌ ಆಗಿತ್ತು!

    ಆಲೂರು ಸಿದ್ದಾಪುರಕ್ಕೆ ಇಂದು ರಾತ್ರಿಯೇ ಪಾರ್ಥಿವ ಶರೀರ ತಲುಪಲಿದ್ದು, ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರ ಇರಿಸಲಾಗುತ್ತದೆ. ಬುಧವಾರ ಬೆಳಗ್ಗೆ 8:30ರ ಸುಮಾರಿಗೆ ಅಲ್ಲಿಂದ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲಾಗುತ್ತದೆ. ನಂತರ 10:30ರ ಸುಮಾರಿಗೆ ಸಿದ್ದಾಪುರದ ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸುಮಾರು ಎರಡೂವರೆ ಗಂಟೆಗಳ ಕಾಲ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ದರ್ಶನ ಮುಗಿಯುತ್ತಿದ್ದಂತೆ ಸೇನಾ ಗೌರವದೊಂದಿಗೆ ದಿವಿನ್‌ ಅವರ ತೋಟದಲ್ಲಿರುವ ತಂದೆಯ ಸಮಾಧಿ ಬಳಿಯೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಶ್ರೀನಗರದ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಹುತಾತ್ಮ!

  • ಹುತಾತ್ಮ ಯೋಧ ದಿವಿನ್‌ ಮದುವೆಗೆ ಇನ್ನೆರಡು ತಿಂಗಳು ಬಾಕಿಯಿತ್ತು, ಲಗ್ನಪತ್ರಿಕೆಯೂ ಪ್ರಿಂಟ್‌ ಆಗಿತ್ತು!

    ಹುತಾತ್ಮ ಯೋಧ ದಿವಿನ್‌ ಮದುವೆಗೆ ಇನ್ನೆರಡು ತಿಂಗಳು ಬಾಕಿಯಿತ್ತು, ಲಗ್ನಪತ್ರಿಕೆಯೂ ಪ್ರಿಂಟ್‌ ಆಗಿತ್ತು!

    – ದಿವಿನ್‌ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಹುಟ್ಟೂರಿಗೆ ಬರುವ ನಿರೀಕ್ಷೆ

    ಮಡಿಕೇರಿ: ಒಂದು ದಿನದ ಹಿಂದೆಯಷ್ಟೇ ಹುತಾತ್ಮರಾದ ಕೊಡಗಿನ ವೀರಯೋಧ ದಿವಿನ್ ಅವರು 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ದಿವಿನ್ ಅವರಿಗೆ ನಿಶ್ಚಿತಾರ್ಥ ಕೂಡ ನೆರವೇರಿತ್ತು. 2025ರ ಫೆಬ್ರವರಿಯಲ್ಲಿ ದಿವಿನ್ ವಿವಾಹ ನಿಶ್ಚಯವಾಗಿತ್ತು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

    ಕುಟುಂಬಸ್ಥರು ಲಗ್ನ ಪತ್ರಿಕೆಯನ್ನೂ ಪ್ರಿಂಟ್​ ಮಾಡಿಸಿದ್ದರಂತೆ. ಆದ್ರೆ ಸೇನಾ ವಾಹನ ಪ್ರಪಾತಕ್ಕೆ ಉರುಳಿ ದುರಂತ ಸಂಭವಿಸಿದೆ. ಕೂಡಲೇ ದಿವಿನ್‌ರನ್ನ ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗ್ತಿತ್ತು. ಎರಡು ದಿನದ ಹಿಂದೆಯಷ್ಟೇ ದಿವಿನ್ ತಾಯಿ ಜಯಾ ಅವರು ಶ್ರೀನಗರದ ಸೇನಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಅಮ್ಮನ ಕರೆಗೆ ದಿವಿನ್ ಕಣ್ಣು ಬಿಡುವ ಪ್ರಯತ್ನ ಮಾಡಿದ್ದರಂತೆ. ಆದರೆ ಶ್ವಾಸಕೋಶಕ್ಕೆ ತೀವ್ರ ಹಾನಿಯಾಗಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ. ಹೀಗಾಗಿ ಮದುವೆ ಆಸೆ, ಜೀವನದ ನೂರಾರು ಕನಸು ನುಚ್ಚುನೂರಾಗಿದೆ. ಇದನ್ನೂ ಓದಿ: ಸಿಂಗ್ ಶೋಕಾಚರಣೆ ವೇಳೆ ರಾಹುಲ್ ವಿಯೆಟ್ನಾಂ ಪ್ರವಾಸ – ಬಿಜೆಪಿ ಆರೋಪಕ್ಕೆ ಕಾಂಗ್ರೆಸ್‌ ಗರಂ

    ಗ್ರಾಮದಲ್ಲಿ ಒಳ್ಳೆಯ ಹುಡುಗನಾಗಿದ್ದ ದಿವಿನ್‌ ಇತ್ತಿಚೆಗೆ ತಂದೆಯನ್ನ ಕಳೆದುಕೊಂಡಿದ್ದರು. ತಾಯಿ ಮಗ ಮಾತ್ರ ನೂತನವಾಗಿ ನಿರ್ಮಾಣಗೊಂಡ ಮನೆಯಲ್ಲಿ ವಾಸ ಮಾಡುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಯೇಸುವಿನ ಕುರಿತು ಅವಹೇಳನ – ಕೊಡಗಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲು

    ಇನ್ನೂ ಯೋಧ ದಿವಿನ್ ಪಾರ್ಥಿವ ಶರೀರ ಜಮ್ಮುವಿನಿಂದ ಫ್ಲೈಟ್‌ನಲ್ಲಿ ನೇರವಾಗಿ ಬೆಂಗಳೂರಿಗೆ ಬಂದು ನಂತರ ಹುಟ್ಟೂರು ಆಲೂರು ಸಿದ್ದಾಪುರಕ್ಕೆ ರವಾನಿಸಲಾಗುತ್ತದೆ. ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಗ್ಗೆ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತರುವ ನಿರೀಕ್ಷೆಯಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಶಾಸಕ ಮಂಥರ್ ಗೌಡ ಹುಟ್ಟೂರಿನ ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ಅಂತ್ಯಕ್ರಿಯೆ ನೆರವೇರಿಸಲು ಅಗತ್ಯ ಸಿದ್ಧತೆ ಮತ್ತು ಸ್ಥಳ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ರೈತರಿಂದ ಬಂದ್ – 221 ರೈಲುಗಳ ಸಂಚಾರ ವ್ಯತ್ಯಯ – 163 ರೈಲುಗಳು ಕ್ಯಾನ್ಸಲ್

  • ಶ್ರೀನಗರದ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಹುತಾತ್ಮ!

    ಶ್ರೀನಗರದ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಹುತಾತ್ಮ!

    ಮಡಿಕೇರಿ: ಜಮ್ಮು-ಕಾಶ್ಮೀರ (Jammu Kashmir) ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಹುತಾತ್ಮರಾಗಿದ್ದರು. ಈ ನಡುವೆ ಗಂಭೀರ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಕೊಡಗಿನ ಯೋಧ (Kodagu soldier) ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ.

    ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದರು. ಕೊಡಗು ಜಿಲ್ಲೆಯ‌ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಶುಕ್ರವಾರ ಮಧ್ಯಾಹ್ನದ ವೇಳೆಗೆ ದಿವಿನ್‌ ಹುಟ್ಟೂರು ಸೋಮವಾರಪೇಟೆ ತಾಲೂಕಿನಲ್ಲಿ ಸಿದ್ದರಾಪುರದಲ್ಲಿರುವ ದಿವಿನ್‌ ಅವರ ತಾಯಿಗೆ (ಜಯ) ಸೇನಾಧಿಕಾರಿಗಳು ಕರೆ ಮಾಡಿ ಮಗನ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದರು.

    ಮಾಹಿತಿ ಪಡೆದ ನಂತರ ದಿವಿನ್ ಅವರ ತಾಯಿ ಹಾಗೂ ಕುಟುಂಬಸ್ಥರು ಶುಕ್ರವಾರ ಶ್ರೀನಗರಕ್ಕೆ ಹೋರಟ್ಟಿದ್ದರು. ಶ್ರೀನಗರದ ಆಸ್ಪತ್ರೆಗೆ ತೆರಳಿ ಮಗನ ಪರಿಸ್ಥಿತಿ ಕಂಡು ದುಃಖ ಹೋರ ಹಾಕಿದ್ರು. ಈ ಸಂದರ್ಭದಲ್ಲಿ ತಾಯಿಯ ಧ್ವನಿ ಕೇಳಿ ಚಿಕಿತ್ಸೆಗೆ ಸ್ಪಂದಿಸುವ ರೀತಿಯಲ್ಲಿ ದಿವಿನ್‌ ಕಣ್ಣಿನ ರೆಪ್ಪೆ ತೆರೆದು ನೋಡಿದ್ದರಂತೆ, ಬಳಿಕ ಹಾಗೆಯೇ ಮಲಗಿದ್ದರಂತೆ. ಇದನ್ನು ಕಂಡ ಜಯ ಅವರು ಮಗನ ಆರೋಗ್ಯದಲ್ಲಿ ಸ್ವಲ್ಪ ಚೇತರಿಗೆ ಆಗುತ್ತಿದೆ ಎಂದು ಸಮಾಧಾನಪಟ್ಟುಕೊಂಡಿದ್ದರು.

    ದಿವಿನ್‌ ತಾಯಿ ಮಗನ ಆರೈಕೆ ಮಾಡುತ್ತಿದ್ದರು. ಆದ್ರೆ ಶ್ವಾಸಕೋಶದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಿವಿನ್‌ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಯೋಧ ದಿವಿನ್ ಮೃತದೇಹ ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಸೋಮವಾರ (ಡಿ.30) ಬೆಳಗ್ಗೆ ಯೋಧನ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳಿಸುವ ಪ್ರಕ್ರಿಯೆ ನಡೆಯಲಿದೆ.

  • ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ

    ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ

    – ಸೈನಿಕ ಬೇಗ ಗುಣಮುಖರಾಗಿ ಬರಲೆಂದು ಪ್ರಾರ್ಥಿಸಿದ ಗ್ರಾಮಸ್ಥರು

    ಮಡಿಕೇರಿ: ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಮತ್ತೋರ್ವ ಕೊಡಗಿನ ಯೋಧ ದಿವಿನ್ (28) ಅವರ ಸ್ಥಿತಿ ಚಿಂತಾಜನಕವಾಗಿದೆ.

    ಹೌದು, ಜಮ್ಮು ಕಾಶ್ಮೀರದಲ್ಲಿ ಮೊನ್ನೆ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದಾರೆ. ಕೊಡಗು ಜಿಲ್ಲೆಯ‌ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯೋಧನಾಗಿದ್ದಾರೆ. ಇದನ್ನೂ ಓದಿ: ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ

    ಯೋಧನ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ಬಂದಿದೆ. ಸೇನೆಯಿಂದ ದಿವಿನ್ ತಾಯಿ ಅವರಿಗೆ ಕರೆ ಬಂದಿತ್ತು. ಜಯ ಅವರು ನಿನ್ನೆ ಸಂಜೆಯೇ ಕೊಡಗಿನಿಂದ ಶ್ರೀನಗರಕ್ಕೆ ತೆರಳಿದ್ದಾರೆ. ಅಲ್ಲಿಗೆ ತೆರಳಿದ ಬಳಿಕವಷ್ಟೇ ದಿವಿಲ್ ಆರೋಗ್ಯದ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

    ದಿವಿನ್ ‌10 ವರ್ಷದ ಹಿಂದೆ ಸೈನ್ಯಕ್ಕೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿತು. ಇದೇ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗಾ ಕುಟುಂಬಸ್ಥರು, ಗ್ರಾಮಸ್ಥರು ದಿವಿನ್‌ ಅದಷ್ಟು ಬೇಗಾ ಹುಶಾರಾಗಿ ಬರುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಪೂಂಚ್‌ನಲ್ಲಿ ದುರಂತ – 300 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ