Tag: Kodekal

  • ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ

    ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ

    ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕೊಡೇಕಲ್‌ನಲ್ಲಿ (Yadgiri) ಇದೇ ಏಪ್ರಿಲ್ 6 ರಂದು ಕಲ್ಲು ತೂರಾಟದ (Stone Pelting) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ್ದ ನಿಷೇಧಾಜ್ಞೆಯನ್ನು (Prohibition) ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.

    ಏಪ್ರಿಲ್ 8 ರವರೆಗೂ ಇದ್ದ 144 ಸೆಕ್ಷನ್ ಅನ್ನು ಏಪ್ರಿಲ್ 12ರ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಆದೇಶ ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ಬಿಜೆಪಿ ಶಾಸಕ ರಾಜೂಗೌಡ ಸ್ವಗ್ರಾಮ ಕೊಡೇಕಲ್‌ನಲ್ಲಿ ಕೆಲ ದಿನಗಳ ಹಿಂದೆ ಕಲ್ಲು ತೂರಾಟದ ಜೊತೆಗೆ ಮಾರಕಾಸ್ತ್ರಗಳಿಂದ ದಾಳಿ ನಡೆದಿತ್ತು. ಕಾಂಗ್ರೆಸ್-ಬಿಜೆಪಿ (Congress-BJP) ಕಾರ್ಯಕರ್ತರ ಪರಸ್ಪರ ಕಲ್ಲು ತೂರಾಟ ಪ್ರಕರಣದಲ್ಲಿ 4-5 ಜನರಿಗೆ ಗಂಭೀರ ಗಾಯಗಳಾಗಿದ್ದವು.

    ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 5 ಪ್ರಕರಣಗಳು ದಾಖಲಾಗಿವೆ. 25 ಆರೋಪಿಗಳ ಬಂಧನವಾಗಿದೆ. ಸದ್ಯ ಕ್ಷೇತ್ರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಜೊತೆಗೆ ಇನ್ನುಳಿದ ಆರೋಪಿಗಳ ಪತ್ತೆಗಾಗಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

  • ಕಾಂಗ್ರೆಸ್, ಬಿಜೆಪಿ ಘರ್ಷಣೆ – 4 ಎಫ್‌ಐಆರ್, 18 ಜನರ ವಶಕ್ಕೆ ಪಡೆದ ಖಾಕಿ ಪಡೆ

    ಕಾಂಗ್ರೆಸ್, ಬಿಜೆಪಿ ಘರ್ಷಣೆ – 4 ಎಫ್‌ಐಆರ್, 18 ಜನರ ವಶಕ್ಕೆ ಪಡೆದ ಖಾಕಿ ಪಡೆ

    ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಸ್ವಗ್ರಾಮ ಯಾದಗಿರಿಯ (Yadgiri) ಕೊಡೇಕಲ್‌ನಲ್ಲಿ (Kodekal) ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ (BJP – Congress Clash) ಏರ್ಪಟ್ಟಿದೆ. ಈ ಹಿನ್ನೆಲೆ ಕೊಡೇಕಲ್, ಹುಣಸಗಿ (Hunasagi) ಹಾಗೂ ಸುರಪುರದಲ್ಲಿ (Surapura) ಖಾಕಿ ಪಡೆ ಸುತ್ತುವರಿದಿದೆ. ಗಲಾಟೆ ನಿಯಂತ್ರಣಕ್ಕಾಗಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಈಗಾಗಲೇ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದು, ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸೆಕ್ಷನ್ 144 ಕಲಂ ಜಾರಿಯಾಗಿದೆ.

    ಸಂಘರ್ಷ ಹಿನ್ನೆಲೆ ಗುರುವಾರ ರಾತ್ರಿ ಕೊಡೇಕಲ್‌ಗೆ ಆಗಮಿಸಿರುವ ಕಲಬುರಗಿ ಈಶಾನ್ಯ ವಲಯ ಐಜಿಪಿ ಅನುಪಮ ಅಗರವಾಲ್ ಹಾಗೂ ಯಾದಗಿರಿ ಎಸ್‌ಪಿ ಡಾ. ಸಿಬಿ ವೇದಮೂರ್ತಿ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಇದನ್ನೂ ಓದಿ: 1 ಕೋಟಿ 5 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಜಪ್ತಿ

    ನಿಷೇಧಾಜ್ಞೆ ಜಾರಿ ಹಿನ್ನೆಲೆ ಇಡೀ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ 3 ಕೆಎಸ್‌ಆರ್‌ಪಿ ತುಕಡಿ, 1 ಪ್ಯಾರಾ ಮಿಲಿಟರಿ ಫೋರ್ಸ್ ಕಂಪನಿ, 2 ಡಿಎಸ್‌ಪಿ, 5 ಸಿಪಿಐ, 10 ಸಿಪಿಐ 100 ಕಾನ್ಸ್ಟೇಬಲ್ ನಿಯೋಜನೆ ಮಾಡಲಾಗಿದೆ.

    ಗಲಾಟೆ ಹಿನ್ನೆಲೆ ಈಗಾಗಲೇ 4 ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು 18 ಜನರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ 4 ಪ್ರಕರಣ ದಾಖಲಿಸಿಕೊಂಡು ಗಲಾಟೆಯಲ್ಲಿ ಭಾಗಿಯಾದ 118 ಜನರ ಮೇಲೆ ಸಿಆರ್‌ಪಿಸಿ 107 ಕಲಂನಡಿ ಪ್ರಕರಣ ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ವರುಣಾಗೆ ಬಿ.ವೈ ವಿಜಯೇಂದ್ರ ಹೆಸರು ಶಿಫಾರಸ್ಸಿಲ್ಲ!