Tag: Kodi Sri

  • ರಾಜ್ಯವಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲೂ ರಾಜಕೀಯ ಧ್ರುವೀಕರಣ ಸಾಧ್ಯತೆ: ಕೋಡಿಶ್ರೀ

    ರಾಜ್ಯವಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲೂ ರಾಜಕೀಯ ಧ್ರುವೀಕರಣ ಸಾಧ್ಯತೆ: ಕೋಡಿಶ್ರೀ

    ಹಾಸನ: ರಾಜ್ಯವಷ್ಟೇ ಅಲ್ಲ ಭಾರತ ಮತ್ತು ಜಾಗತಿಕ ಮಟ್ಟದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ಶ್ರೀ ಕ್ಷೇತ್ರ ಕೋಡಿಮಠದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಜೊತೆಗೆ ಜಾಗತಿಕ ಮಟ್ಟದಲ್ಲಿಯೂ ಕೂಡ ಬದಲಾವಣೆಯ ಸಾಧ್ಯತೆ ಇದೆ. ಇದಕ್ಕೆಲ್ಲ ಕಾರಣ ಈಗ ಬಂದಿರುವ ಗ್ರಹಣಗಳ ಸಂಕೇತವೇ ಸಾಕ್ಷಿಯಾಗಿದೆ ಎಂದರು.

    ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಭವಿಷ್ಯ ಗೋಚರವಾಗಿರುವ ಪ್ರಕಾರ ನನ್ನ ಕಣ್ಣ ಮುಂದೆ ನೀರು ಕಾಣುತ್ತಿದೆ. ಅಂದರೆ ಅಕಾಲಿಕ ಮಳೆ ಅನಾಹುತಗಳ ಆಗುವ ಸಾಧ್ಯತೆ ಇದೆ. ಯಾವಾಗ ಬೇಕಾದರೂ ಮಳೆ ಆಗುವ ಸಂಭವವಿದೆ. ಕೊರೊನಾ ರೂಪಾಂತರ ಬಗ್ಗೆ ನಾನು ಎರಡು ತಿಂಗಳ ಹಿಂದೆಯೇ ಹೇಳಿದ್ದೆ. ಕೊರೊನಾ ಎಂಬ ಹೆಮ್ಮಾರಿ ಸಂಪೂರ್ಣವಾಗಿ ಹೋಗಲು ಇನ್ನೂ 10 ವರ್ಷ ಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

    ಭೂಮಿ ನಿಸ್ಸಾರಗೊಂಡಿದೆ ಅಂದರೆ ಅದರ ಸತ್ವವನ್ನು ಕಳೆದುಕೊಳ್ಳುತ್ತಿದೆ. ಈಗಿನ ಔಷಧಿಗಳು ಮನುಷ್ಯನ ಆರೋಗ್ಯಕ್ಕೆ ಮಾರಕವಾಗಲಿದೆ. ಪ್ರತಿ ಕೃಷಿ ಚಟುವಟಿಕೆಗಳಿಗೂ ರಾಸಾಯನಿಕ ಔಷಧಿಗಳನ್ನು ಹಾಕುತ್ತಿರುವುದು ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲು ಮತ್ತೊಂದು ಕಾರಣ. ಯಂತ್ರಗಳು ಭೂಮಿಗೆ ಎಷ್ಟು ಮಲ ಸುರಿಸುತ್ತವೆ. ಗೋವುಗಳ ಮಲಮೂತ್ರದಿಂದ ಬೆಳೆದ ಆಹಾರ ರಾಸಾಯನಿಕ ಮುಕ್ತವಾಗಿದ್ದು, ಅದು ಮಾತ್ರ ಮನುಷ್ಯನನ್ನು ಕಾಪಾಡಬಲ್ಲದು, ಇಲ್ಲದಿದ್ದರೆ ಮತ್ತೊಂದು ಮಾರಣಾಂತಿಕ ಕಾಯಿಲೆ ಬಂದರೂ ಬರಬಹುದು ಎಂದು ಆಂತಕವಾಗಿಯೇ ನುಡಿದರು.

    ಅರಸ ಪ್ರಜಾ ವಿರೋಧಿ ಕಾಯ್ದೆ ತರುತ್ತಾನೆಂದು ಪ್ರಜೆ ವಿರೋಧ ಮಾಡಿ ಅರಸನ ಸಿಂಹಾಸನಕ್ಕೆ ತೊಂದರೆ ಕೊಡುತ್ತಾನೆ ಎಂದು ಹಿಂದೆಯೇ ಹೇಳಿದ್ದೆ. ಅದರಂತೆ ರೈತ ವಿರೋಧಿ ಕಾಯ್ದೆ ಜಾರಿ ಮಾಡಲು ಆಗುತ್ತಲೇ ಇಲ್ಲ ಎಂದು ತಮ್ಮ ಭವಿಷ್ಯವಾಣಿಯನ್ನು ಸಮರ್ಥನೆ ಮಾಡಿಕೊಂಡರು.

  • ನಾನೂ ಭವಿಷ್ಯ ಹೇಳ್ತೀನಿ, ಮುಂದಿನ 15 ವರ್ಷ ಬಿಜೆಪಿ ಸರ್ಕಾರ ಇರುತ್ತೆ- ಪ್ರೀತಂ ಗೌಡ

    ನಾನೂ ಭವಿಷ್ಯ ಹೇಳ್ತೀನಿ, ಮುಂದಿನ 15 ವರ್ಷ ಬಿಜೆಪಿ ಸರ್ಕಾರ ಇರುತ್ತೆ- ಪ್ರೀತಂ ಗೌಡ

    ಹಾಸನ: ನಾನು ಕೂಡ ಭವಿಷ್ಯ ಹೇಳುತ್ತೇನೆ. ಮುಂದಿನ 15 ವರ್ಷದ ಬಿಜೆಪಿ ಸರ್ಕಾರವೇ ಇರುತ್ತದೆ ಎಂದು ಹೇಳುವ ಮೂಲಕ ಕೋಡಿ ಶ್ರೀಗಳಿಗೆ ಶಾಸಕ ಪ್ರೀತಂ ಗೌಡ ಟಾಂಗ್ ನೀಡಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಭವಿಷ್ಯ ನುಡಿದಿದ್ದು ನಿಜವಾಗಿದೆ. ನಾನು ಗೆಲ್ತೀನಿ, ನಮ್ಮ ಸರ್ಕಾರ ಬರುತ್ತೆ ಎಂದಿದ್ದೆ. ಎಲ್ಲಾ ನಿಜವಾಗಿದೆ. ಮುಂದೆಯೂ ನಮ್ಮ ಸರ್ಕಾರ ಬರುತ್ತದೆ ಎಂದು ಹೇಳುತ್ತಿದ್ದೇನೆ. ಈಗ ಸರ್ಕಾರ ಪತನದ ಭವಿಷ್ಯ ಹೇಳಿರೋ ಸ್ವಾಮೀಜಿ ಹಿಂದಿನ ವಿಚಾರಗಳನ್ನ ನೋಡಿ. ಅವರದ್ದು ಗಾಳಿ ಬಂದಕಡೆ ತೂರಿಕೊಳ್ಳುವ ಗುಣವಾಗಿದೆ. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಕಿಡಿ ಕಾರಿದರು.

    ರಾಜ್ಯದ ವಿಚಾರದಲ್ಲಿ ಮೀಡಿಯಾ ಅಟ್ರಾಕ್ಷನ್ ಗೆ ಬಾಯಿಗೆ ಬಂದಹಾಗೆ ಮಾತಾಡೋದು ಬೇಡ. ಅವರು ಹಿರಿಯರು ಪಾದಕ್ಕೆ ನಮಸ್ಕಾರ ಮಾಡಿ ಹೇಳುತ್ತೇನೆ. ನೀವು ರಾಜಕಾರಣದ ಬಗ್ಗೆ ಸ್ವಲ್ಪ ದಿನ ಭವಿಷ್ಯ ಹೇಳೋದನ್ನ ಕಡಿಮೆ ಮಾಡಿದರೆ ಸಾರ್ವಜನಿಕ ಹಿತದಿಂದ ಒಳ್ಳೆಯದು ಎಂದು ಅಸಮಧಾನ ಹೊರ ಹಾಕಿದರು.

    ಇತ್ತ ಮಧ್ಯಂತರ ಚುನಾವಣೆಗೆ ತಯಾರಾಗಿ ಎಂದಿದ್ದ ಸಿದ್ದರಾಮಯ್ಯ ಅವರಿಗೂ ತಿರುಗೇಟು ನೀಡಿದ ಪ್ರೀತಂಗೌಡ, ತಿಂಗಳು ಲೆಕ್ಕದಲ್ಲಾದರೆ 48 ರಿಂದ 50 ತಿಂಗಳಲ್ಲಿ ಚುನಾವಣೆ ಬರುತ್ತದೆ. ವರ್ಷದ ಲೆಕ್ಕದಲ್ಲಿ ನಾಲ್ಕು ವರ್ಷ ಕಳೆದ ಬಳಿಕ ಚುನಾವಣೆ ಬರುತ್ತದೆ. ಸಿದ್ದರಾಮಯ್ಯ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಲು ಹಾಗೆ ಹೇಳಿರಬೇಕು ಎಂದು ಟಾಂಗ್ ನಿಡಿದರು.

    ನಾವೇನು ಐವತ್ತು ವರ್ಷ ಅಧಿಕಾರಕ್ಕೆ ಅಂಟಿಕೊಂಡು ಕೂತಿರಲ್ಲ. 2023ಕ್ಕೆ ಚುನಾವಣೆ ಬರುತ್ತದೆ ಬಿಜೆಪಿ ಒಳ್ಳೆಯ ಕೆಲಸ ಮಾಡಿದರೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ರಾಜ್ಯದಲ್ಲಿ ಮತ್ತೆ ದೊಡ್ಡ ಜಲಾಘಾತವಾಗಲಿದೆ- ಕೋಡಿಮಠದ ಶ್ರೀ ಭವಿಷ್ಯ

    ರಾಜ್ಯದಲ್ಲಿ ಮತ್ತೆ ದೊಡ್ಡ ಜಲಾಘಾತವಾಗಲಿದೆ- ಕೋಡಿಮಠದ ಶ್ರೀ ಭವಿಷ್ಯ

    ಗದಗ: ಮಹಾಮಳೆಯಿಂದ ಕರುನಾಡು ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಆದರೆ ರಾಜ್ಯದಲ್ಲಿ ಮತ್ತೆ ವಿಪತ್ತು ಸಂಭವಿಸುತ್ತದೆ ಎಂದು ಗದಗದಲ್ಲಿ ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಸ್ವಾಮೀಜಿ, ರಾಜ್ಯ ಅಪಘಾತಕ್ಕೊಳಗಾಗಿದೆ. ಜಲ, ಭೂ, ವಾಯು ಆಘಾತದ ಲಕ್ಷಣಗಳು ಇನ್ನೂ ಬಹಳ ನಡೆಯಲಿವೆ. ಶ್ರಾವಣ ಮಾಸ ಮುಗಿಯುವುದರೊಳಗೆ ಮತ್ತೊಮ್ಮೆ ದೊಡ್ಡ ಜಲ ಆಘಾತವಾಗಲಿದೆ. ಕಾರ್ತಿಕ ಮಾಸದವರೆಗೆ ಅಲ್ಲಲ್ಲಿ ಆಗಾಗ ಅಪಘಾತಗಳು ಬಂದು ಹೋಗುವ ಸಾಧ್ಯತೆ ಎಂದು ಹೇಳಿದ್ದಾರೆ.

    ಅಲ್ಲದೆ ಭೂಕಂಪನದಿಂದ ಭೂ ಕುಸಿತ ನಡೆಯಲಿದೆ. ದೊಡ್ಡ ದೊಡ್ಡ ನಗರಗಳಲ್ಲಿ ಕಟ್ಟಡಗಳು ಆಘಾತವಾಗುತ್ತವೆ. ಈ ಸಂವತ್ಸರದಲ್ಲಿ ವಾಯು ಆಘಾತ ನಡೆಯಲಿದೆ. ಈಗಾಗಲೇ ಗಾಳಿಯಿಂದ ಆಘಾತವಾಗಿದೆ, ಬಹಳ ಎಚ್ಚರದಿಂದ ಇರಬೇಕು. ಜಗತ್ತು ಕಂಡರಿಯದ ಆಘಾತವೊಂದು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

    ಈಗಾಗಲೇ ರಾಜ್ಯದ ಸುಮಾರು 17 ಜಿಲ್ಲೆಗಳಲ್ಲಿ ಜಲಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಜನ ತತ್ತರಿಸಿ ಹೋಗಿದ್ದಾರೆ. ಈ ಮಧ್ಯೆ ಶ್ರೀಗಳ ಭವಿಷ್ಯ ಜನರನ್ನು ಮತ್ತೆ ಆತಂಕಕ್ಕೀಡು ಮಾಡಿದೆ.

  • ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಕೋಡಿ ಶ್ರೀ ಭವಿಷ್ಯ

    ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ: ಕೋಡಿ ಶ್ರೀ ಭವಿಷ್ಯ

    ಹಾಸನ: ಶುಕ್ರವಾರ ಸಂಭವಿಸಲಿರುವ ಚಂದ್ರ ಗ್ರಹಣದಿಂದಾಗಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಎಚ್.ಡಿ.ರೇವಣ್ಣನವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಅರ್ಥವಿರುವ ಭವಿಷ್ಯವನ್ನು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದಾರೆ.

    ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳು `ಅರಸನ ಆಯಸ್ಸು ಉಸಿರಲ್ಲಿ ನಿಂತೀತು, ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭಾತೃ ಬೆಂಕಿ ಹಿಡಿದಾನು’ ಎಂದು ಒಗಟಾಗಿ ತಿಳಿಸಿದ್ದಾರೆ. ಅಂದರೆ `ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಈ ಭವಿಷ್ಯ ಅರ್ಥ ಮೂಡಿಸುತ್ತದೆ.

    ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದ್ದಾರೆ.

    ವಿಧಾನಸಭಾ ಚುನಾವಣೆಗೂ ಮುನ್ನ “ಬಿತ್ತಿದ ಬೆಳಸು ಪೈರು ಕುಯ್ದಾರು, ಬಿತ್ತಿದ ಬೀಜ ಒಂದು ಬೆಳೆದ ಪೈರೋಂದು” ಎಂದು ಭವಿಷ್ಯ ನುಡಿದಿದ್ದರು. ಅಂದರೆ ಮುಂದಿನ ಚುನಾವಣೆ ಫಲಿತಾಂಶದಲ್ಲಿ ಅನಿರೀಕ್ಷಿತ ಬದಲಾವಣೆಗಳಾಗುವ ಸಾಧ್ಯತೆ ಇದೆ. ಯಾರೋ ಹಾಕಿದ ಶ್ರಮದ ಫಲವನ್ನ ಇನ್ನೊಬರು ಅನುಭವಿಸಲಿದ್ದಾರೆ. ಹಾಗೇ ಅನಿರೀಕ್ಷಿತ ಅಧಿಕಾರ ಚುಕ್ಕಾಣಿ ಹಿಡಿಯುವ ಸನ್ನಿವೇಶಗಳಿವೆ ಅನ್ನೊದನ್ನ ಹೇಳಿದ್ದಾರೆ.