Tag: kogadu

  • ಕೊಡಗಿನಲ್ಲಿದೆ ರತನ್ ಟಾಟಾ ಒಡೆತನದ ಸಾವಿರಾರು ಎಕರೆ ಕಾಫಿ, ಚಹಾ ತೋಟ!

    ಕೊಡಗಿನಲ್ಲಿದೆ ರತನ್ ಟಾಟಾ ಒಡೆತನದ ಸಾವಿರಾರು ಎಕರೆ ಕಾಫಿ, ಚಹಾ ತೋಟ!

    ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್ ಟಾಟಾ (Ratan Tata) ನಿಧನರಾಗಿದ್ದಾರೆ. ಕೊಡಗಿನಲ್ಲಿ (Kodagu) ರತನ್ ಟಾಟಾ ಅವರ ಒಡೆತನದಲ್ಲಿ ಸಾವಿರ ಎಕರೆ ಕಾಫಿ ಹಾಗೂ ಚಹಾ ತೋಟವಿದೆ.

    ಪ್ರಸಿದ್ಧ ಟಾಟಾ ಸಂಸ್ಥೆ ಕೊಡಗು ಸೇರಿ ಹಾಸನ, ಚಿಕ್ಕಮಗಳೂರು, ಪಕ್ಕದ ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಸುಮಾರು 33 ಸಾವಿರ ಎಕರೆ ಕೃಷಿ ಭೂಮಿ ಹೊಂದಿದ್ದು, ಇಲ್ಲಿ ಕಾಫಿ ಹಾಗೂ ಚಹಾ ಬೆಳೆಯನ್ನು ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಇಲ್ಲಿ ಸಾವಿರಾರು ಮಂದಿ ಕೆಲಸ ಮಾಡಿ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ.ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಹತ್ತರ ಬದಲಾವಣೆ: ಜೈಲನ್ನು 3 ವಿಭಾಗ ಮಾಡಲಿರುವ ಗೃಹ ಇಲಾಖೆ

    ಟಾಟಾ ಕಾಫಿ ಸಂಸ್ಥೆ ಟಾಟಾ ಸಮೂಹದ ಒಂದು ಭಾಗ. ಟಾಟಾ ಕಾಫಿ ವಿಶ್ವದ ಅತಿದೊಡ್ಡ ಸಮಗ್ರ ಕಾಫಿ ಕೃಷಿ ಮತ್ತು ಸಂಸ್ಕರಣಾ ಕಂಪನಿಗಳಲ್ಲಿ ಒಂದಾಗಿದೆ. ಭಾರತೀಯ ಮೂಲದ ಕಾಳು ಮೆಣಸು ಉತ್ಪಾದಿಸುವ ಅತಿದೊಡ್ಡ ಸಂಸ್ಥೆಯಾಗಿದೆ. ಕನ್ಸಲ್ಟೆಂಟ್ ಕಾಫಿ ಸಂಸ್ಥೆಯೊಂದಿಗೆ 2000 ಇಸವಿಯಲ್ಲಿ ಕೊಡಗು ಸೇರಿ ಹಲವು ಕಡೆ ಟಾಟಾ ಸಂಸ್ಥೆ ಕಾಫಿ ತೋಟವನ್ನು ಖರೀದಿಸಿತ್ತು.

    ಕೊಡಗಿನಲ್ಲಿ ಸುಮಾರು 13 ಕಾಫಿ ತೋಟಗಳನ್ನು ಹೊಂದಿದ್ದು, 18 ಸಾವಿರ ಎಕರೆ ಜಮೀನನ್ನು ಸಂಸ್ಥೆ ಹೊಂದಿದೆ ಎನ್ನಲಾಗುತ್ತಿದೆ. ಟಾಟಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಅರೇಬಿಕಾ ಹಾಗೂ ರೊಬೆಸ್ಟಾ ಕಾಫಿಯನ್ನು ಬೆಳೆಯಲಾಗುತ್ತಿದ್ದು, ಟಾಟಾ ಕಾಫಿಯ ಅರೇಬಿಕಾ ಕಾಫಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಬೇಡಿಕೆಯಿದೆ.

    ಕುಶಾಲನಗರದಲ್ಲಿ ಕಾಫಿ ಕ್ಯೂರಿಂಗ್ ಮಾಡಲಾಗುತ್ತಿದ್ದು, ಜಿಲ್ಲೆಯ ವಿವಿಧೆಡೆ ಕೊಯ್ಲು ಮಾಡಿದ ಕಾಫಿಯನ್ನು ಇಲ್ಲಿ ಕ್ಯೂರಿಂಗ್ ಮಾಡಲಾಗುತ್ತದೆ. ಟಾಟಾ ಕಾಫಿ ತೋಟದಲ್ಲಿ ಗೆಸ್ಟ್ ಹೌಸ್ ಕೂಡ ಇದೆ. ಇನ್ನೂ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿರುವ ಟೀ ಎಸ್ಟೇಟ್ ಸರ್ಕಾರದಿಂದ ಲೀಸ್‌ಗೆ ಪಡೆಯಲಾಗಿದೆ. ಟಾಟಾ ಕಾಫಿಯಲ್ಲಿ ಕೂರ್ಗ್ ಫೌಂಡೇಷನ್ ಸ್ಥಾಪನೆ ಮಾಡಲಾಗಿದ್ದು, ಸಿಆರ್‌ಎಸ್ ಫಂಡ್ ಮೂಲಕ ಆರೋಗ್ಯ ಶಿಬಿರ ಸೇರಿ ಹಲವು ಚಟುವಟಿಕೆ ನಡೆಸಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ರತನ್ ಟಾಟಾ ತಮ್ಮದೇ ಆದ ಪಾಲುದಾರ ಟಾಟಾ ಕಾಫಿ ಸಂಸ್ಥೆಯ ಸಾವಿರಾರು ಎಕರೆ ಕಾಫಿ ತೋಟವನ್ನು ಹೊಂದಿದ್ದರೂ, ತಮ್ಮ ಸಂಸ್ಥೆಗೆ ಯಾವತ್ತೂ ಭೇಟಿ ನೀಡಿರಲಿಲ್ಲ.ಇದನ್ನೂ ಓದಿ: ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಟೀಂ ಇಂಡಿಯಾ ವೇಗಿ ಸಿರಾಜ್‌

  • ಕುಶಾಲನಗರದ ಹೃದಯ ಭಾಗದ ವೃತ್ತದಲ್ಲಿ ಅಡ್ಡಾದಿಡ್ಡಿ ವಾಹನಗಳ ಓಡಾಟ- ನಿತ್ಯವೂ ಟ್ರಾಫಿಕ್ ಕಿರಿಕಿರಿ

    ಕುಶಾಲನಗರದ ಹೃದಯ ಭಾಗದ ವೃತ್ತದಲ್ಲಿ ಅಡ್ಡಾದಿಡ್ಡಿ ವಾಹನಗಳ ಓಡಾಟ- ನಿತ್ಯವೂ ಟ್ರಾಫಿಕ್ ಕಿರಿಕಿರಿ

    ಮಡಿಕೇರಿ: ನೂತನ ಕೇಂದ್ರವಾಗಿ ಸರ್ಕಾರ ಘೋಷಣೆ ಮಾಡಿರುವ ಕುಶಾಲನಗರದಲ್ಲಿ ಕಾನೂನು ಸುವ್ಯವಸ್ಥೆ ಸೇರಿದಂತೆ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಹೆಚ್ಚುವರಿಯಾಗಿ ಗ್ರಾಮಾಂತರ ಹಾಗೂ ಸಂಚಾರ ಪೊಲೀಸ್ ಠಾಣೆ ಸ್ಥಾಪಿಸಲಾಗಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆ ಕಂಡುಬಂದಿಲ್ಲ.

    ಕುಶಾಲನಗರವು ಕೊಡಗು ಜಿಲ್ಲೆಯ ಪ್ರಮುಖ ವಾಣಿಜ್ಯ ನಗರವಾಗಿದ್ದು, ಇಲ್ಲಿನ ಹೃದಯಭಾಗದಲ್ಲಿ ಮೈಸೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮತ್ತು ಹಾಸನ, ಕೇರಳ ಕಣ್ಣೂರು ರಾಜ್ಯ ಹೆದ್ದಾರಿ ಹಾದು ಹೋಗಿವೆ. ಇದರೊಂದಿಗೆ ನಗರದ ನಾಲ್ಕು ದಿಕ್ಕುಗಳಿಂದ ಕುಶಾಲನಗರಕ್ಕೆ ಬಂದು ಸೇರುವ ರಸ್ತೆಗಳಲ್ಲಿ ನಿತ್ಯವೂ ಹೆಚ್ಚು ಹೆಚ್ಚು ವಾಹನಗಳ ಸಂಚರಿಸುತ್ತಿರುತ್ತವೆ. ಇದರೊಂದಿಗೆ ಕುಶಾಲನಗರದ ಸುತ್ತಮುತ್ತಲ ಪ್ರೇಕ್ಷಣೀಯ ಸ್ಥಳಗಳಾದ ಕಾವೇರಿ ನಿಸರ್ಗಧಾಮ, ಹಾರಂಗಿ ಜಲಾಶಯ, ದುಬಾರೆ ಆನೆ ಕ್ಯಾಂಪ್, ಕಾವೇರಿ ರಿವರ್ ರ‍್ಯಾಫ್ಟಿಂಗ್, ಬೈಲುಕುಪ್ಪೆ ಗೋಲ್ಡನ್ ಟೆಂಪಲ್‍ಗಳಿಗೆ ಪ್ರವಾಸಿಗರು ಆಗಮಿಸುತ್ತಾರೆ.

    ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನ ಅಪಘಾತಗಳು ಸಂಭವಿಸಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಯೋವೃದ್ಧರು, ಹಿರಿಯ ನಾಗರಿಕರು, ಪಾದಚಾರಿಗಳಿಗೆ ಪ್ರಾಣಹಾನಿ ಹಾಗೂ ಗಾಯ, ನೋವು ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ಅನೇಕ ಮಾರ್ಪಾಡು ಮಾಡಿದೆ.

    ಪಟ್ಟಣದಲ್ಲಿ ನಿತ್ಯವೂ ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆಯೊಂದಿಗೆ ಸಂಚಾರ ನಿಯಮಗಳನ್ನು ಪಾಲಿಸಲು ಅನುಕೂಲವಾಗುವಂತೆ ಕಳೆದ ಎರಡು ವರ್ಷಗಳ ಹಿಂದೆ ಕೂಡ್ಲೂರು ಕೈಗಾರಿಕಾ ಬಡಾವಣೆ ಬಳಿ ಪ್ರತ್ಯೇಕವಾಗಿ ಸಂಚಾರಿ ಪೊಲೀಸ್ ಠಾಣೆ ತೆರೆಯಲಾಗಿದೆ. ಅದೇ ರೀತಿ ಪಟ್ಟಣದ ಕಾರ್ಯಪ್ಪ ವೃತ್ತದಲ್ಲಿ 10 ಲಕ್ಷ ರೂ. ವೆಚ್ಚದಲ್ಲಿ ಟ್ರಾಫಿಕ್ ಸಿಗ್ನಲ್‍ಗಳನ್ನು ಅಳವಡಿಸಲಾಗಿದೆ. ಇದರೊಂದಿಗೆ ಪಟ್ಟಣದ ರಥಬೀದಿ, ಕಿತ್ತೂರು ರಾಣಿ ಚೆನ್ನಮ್ಮ (ಕನ್ನಿಕಾ) ರಸ್ತೆಯಲ್ಲಿ ಬೆಳಗ್ಗೆ 8ರಿಂದ ರಾತ್ರಿ 9 ಗಂಟೆಯವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೆ ತರಲಾಗಿದೆ. ಆದರೂ ದಿನನಿತ್ಯ ವಾಹನ ದಟ್ಟಣೆಯಿಂದ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಮೇಲೆ ಪರಿಣಾಮ ಉಂಟಾಗುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

    ಕುಶಾಲನಗರದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹಾಗೂ ವಾಹನ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದ್ದು, ಪಟ್ಟಣದಲ್ಲಿ ಒಂದೂವರೆ ಸಾವಿರಕ್ಕೂ ಅಧಿಕ ಆಟೋರಿಕ್ಷಾಗಳಿವೆ. ನಿಗದಿತ ಆಟೋ ಸ್ಟ್ಯಾಂಡ್‍ಗಳ ಕೊರತೆ ಕೂಡ ಇದೆ. ಎಲ್ಲೆಂದರಲ್ಲಿ ಆಟೋರಿಕ್ಷಾ ನಿಲ್ಲಿಸಲಾಗುತ್ತಿದೆ. ಇದರಿಂದ ಕೂಡ ಸುಗಮ ಸಂಚಾರ ವ್ಯವಸ್ಥೆಗೆ ತೊಂದರೆ ಉಂಟಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.