Tag: kohima

  • ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ

    ನಾಗಾಲ್ಯಾಂಡ್‌ನಲ್ಲಿ ಭಾರೀ ಮಳೆಗೆ ಹೆದ್ದಾರಿ ಕುಸಿತ – ಮೃತರ ಸಂಖ್ಯೆ 6ಕ್ಕೆ ಏರಿಕೆ

    ದಿಮಾಪುರ: ನಾಗಾಲ್ಯಾಂಡ್‌ನಲ್ಲಿ (Nagaland) ಭಾರೀ ಮಳೆಗೆ (Rain) ಚುಮೌಕೆಡಿಮಾ (Chumoukedima) ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-29ರ ಒಂದು ಭಾಗ ಸಂಪೂರ್ಣ ಕುಸಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ.

    ಕೊಹಿಮಾದಾ (Kohima) ನ್ಯೂ ಚುಮೌಕೆಡಿಮಾ ಮತ್ತು ಫೆರಿಮಾ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದೆ. ಭೂಕುಸಿತದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿದ್ದ ಆರು ಮೃತದೇಹಗಳನ್ನು ರಾಜ್ಯ ವಿಪತ್ತು ಪಡೆ ಹೊರತೆಗೆದಿದೆ. ಇನ್ನು ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ಭೂ ಕುಸಿತದಿಂದ ಅನೇಕರು ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ನ್ಯಾಯಾಲಯದ ತೀರ್ಪು ಬರುವ ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಎಸ್‌ವೈ

    ಎಸ್‌ಡಿಆರ್‌ಎಫ್ ತಂಡದಿಂದ ಶೋಧಕಾರ್ಯ ಮುಂದುವರೆದಿದ್ದು, ಸ್ಥಳೀಯರು ಕೂಡ ಇವರೊಂದಿಗೆ ಕೈಜೋಡಿಸಿದ್ದಾರೆ. ರಾತ್ರೋರಾತ್ರಿ ಹೆದ್ದಾರಿಯ ಒಂದು ಭಾಗ ಕೊಚ್ಚಿ ಹೋಗಿದ್ದು, ದಿಮಾಪುರ ಮತ್ತು ನಾಗಾಲ್ಯಾಂಡ್ ರಾಜಧಾನಿ ಕೊಹಿಮಾ ನಡುವೆ ಸಂಪರ್ಕ ಕಡಿತಗೊಂಡಿದೆ. ಹೆದ್ದಾರಿ ಕುಸಿತದಿಂದ ರಾಜಧಾನಿಗೆ ಅಗತ್ಯ ವಸ್ತುಗಳ ಪೂರೈಕೆ ಸ್ಥಗಿತಗೊಂಡಿದೆ. ಈ ಹಿನ್ನೆಲೆ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ತರಕಾರಿ ಮತ್ತು ದಿನಸಿ ಅಂಗಡಿಗಳ ಎದುರು ದೊಡ್ಡ ಸಾಲು ಏರ್ಪಟ್ಟಿದೆ. ಅಲ್ಲದೇ ಪೆಟ್ರೋಲ್ ಬಂಕ್‌ಗಳ ಬಳಿಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಇದನ್ನೂ ಓದಿ: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ

    ಇನ್ನು ಘಟನೆಯ ಕುರಿತು ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೋ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಭಾರೀ ಮಳೆಗೆ ಎನ್‌ಹೆಚ್-29ರ ಒಂದು ಭಾಗ ಕುಸಿದಿರುವುದರಿಂದ ನಾನು ಕಳವಳಗೊಂಡಿದ್ದೇನೆ. ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದು, ಸಂತ್ರಸ್ತರಿಗೆ ನೆರವು ನೀಡುತ್ತಿದ್ದಾರೆ. ಕುಸಿದಿರುವ ಹೆದ್ದಾರಿ ಪುನರ್ ನಿರ್ಮಾಣ ಮಾಡುವ ಮೂಲಕ ಆದಷ್ಟು ಬೇಗ ಸಂಚಾರ ಆರಂಭಿಸಲು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

  • ವ್ಯಕ್ತಿಯ ಹಿಂಬದಿಗೆ ಗೂಡು ಕಟ್ಟಿದ ಜೇನು ನೊಣ: ವಿಡಿಯೋ

    ವ್ಯಕ್ತಿಯ ಹಿಂಬದಿಗೆ ಗೂಡು ಕಟ್ಟಿದ ಜೇನು ನೊಣ: ವಿಡಿಯೋ

    ಕೊಹಿಮ: ವ್ಯಕ್ತಿಯ ಹಿಂಬದಿಗೆ ಜೇನು ನೊಣ ಗೂಡು ಕಟ್ಟಿದ ಘಟನೆಯೊಂದು ನಾಗಾಲ್ಯಾಂಡ್​ನಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

    ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ತಮ್ಮ ಟ್ವಿಟ್ಟರಿನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ಇಂತಹ ಜಾಗದಲ್ಲಿ ಜೇನು ಗೂಡು ಕಟ್ಟಿದೆ. ಇದು ಕೇವಲ ನಾಗಾಲ್ಯಾಂಡ್​ನಲ್ಲಿ ಆಗಲು ಸಾಧ್ಯ” ಎಂದು ಟ್ವೀಟ್ ಮಾಡಿಕೊಂಡಿದ್ದಾರೆ.

    ವಿಡಿಯೋದಲ್ಲಿ ವ್ಯಕ್ತಿ ಜನಗಳ ಮಧ್ಯೆ ಮೆಟ್ಟಿಲ ಮೇಲೆ ನಿಂತಿದ್ದಾರೆ. ಈ ವೇಳೆ ಅವರ ಸ್ಥಿತಿ ನೋಡಿ ಅಕ್ಕಪಕ್ಕದ ಜನರು ನಗುತ್ತಿರುವ ಸದ್ದು ವಿಡಿಯೋದಲ್ಲಿ ಕೇಳಿಸಿದೆ. ಈ ವೇಳೆ ಕ್ಯಾಮೆರಾವನ್ನು ಅವರ ಮುಂದೆ ತೆಗೆದುಕೊಂಡು ಹೋದಾಗ ಅವರು ತಮ್ಮ ಮುಖವನ್ನು ಮುಚ್ಚಿಕೊಂಡಿದ್ದಾರೆ.

    ಈ ವಿಡಿಯೋವನ್ನು ಮೊದಲು ನಾಗಾಲ್ಯಾಂಡ್​ ಶಾಸಕ ತಮ್ಮ ಟ್ವಿಟ್ಟರಿನಲ್ಲಿ ಅಪ್ಲೋಡ್ ಮಾಡಿಕೊಂಡಿದ್ದರು. ಬಳಿಕ ಸಚಿವ ಕಿರಣ್ ರಿಜಿಜು ಅವರು ಈ ವಿಡಿಯೋವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದುವರೆಗೂ 38 ಸಾವಿರಕ್ಕೂ ಹೆಚ್ಚು ವ್ಯೂ ಬಂದಿದೆ.

    ನೆಟ್ಟಿಗರು ಈ ವಿಡಿಯೋವನ್ನು ನೋಡಿ ತಮ್ಮ ವಿವಿಧವಾಗಿ ಕಮೆಂಟ್ ಮಾಡಿದ್ದಾರೆ. ಕೆಲವರು “ಈ ವಿಡಿಯೋ ನೋಡಿ ನಗಬೇಕೋ, ಅಳಬೇಕೋ ಗೊತ್ತಾಗುತ್ತಿಲ್ಲ” ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು “ಅವರು ಬಹುಶಃ ತಿಂಡಿಯಲ್ಲಿ ಸಿಹಿಯನ್ನು ತಿಂದಿದ್ದರು ಎನಿಸುತ್ತದೆ” ಎಂದು ಹಾಸ್ಯವಾಗಿ ಕಮೆಂಟ್ ಮಾಡಿದ್ದಾರೆ.

    ನಾಗಾಲ್ಯಾಂಡ್ ವಿವಿಧ ರೀತಿಯ ಜೇಣು ನೊಣಗಳಿಗೆ ನೆಲೆಯಾಗಿದೆ. ಜೇನು ಸಾಕಣೆ ಕ್ಷೇತ್ರದಲ್ಲಿ ಜನರನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಪ್ರತಿ ವರ್ಷ ಡಿಸೆಂಬರ್ 5ರಂದು ‘ನಾಗಾಲ್ಯಾಂಡ್ ಹನಿ ಬೀ ದಿನ’ ಆಚರಿಸುತ್ತದೆ.

  • ಮಹಿಳಾ ಮೀಸಲಾತಿ ವಿಚಾರವಾಗಿ ಹೊತ್ತಿ ಉರಿದ ನಾಗಾಲ್ಯಾಂಡ್- ಸರ್ಕಾರಿ ಕಚೇರಿಗಳಿಗೆ ಬೆಂಕಿ

    ಕೊಹಿಮಾ: ನಾಗಾಲ್ಯಾಂಡ್‍ನಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

    ಸರ್ಕಾರಿ ಕಚೇರಿಗಳು ವಾಹನಗಳಿಗೆ ಜನ ಬೆಂಕಿಹಚ್ಚಿದ್ದಾರೆ. ಪ್ರತಿಭಟನೆ ಹತ್ತಿಕ್ಕಲು ಪೊಲೀಸರು ಗೋಲಿಬಾರ್ ಮಾಡಿದ್ದು ಎರಡು ದಿನಗಳ ಹಿಂದೆ ಇಬ್ಬರು ನಾಗರೀಕರು ಸಾವನ್ನಪ್ಪಿದ್ದಾರೆ. ನಾಗಾಲ್ಯಾಂಡ್‍ನಲ್ಲಿ ಧೀಮ್‍ಪುರ್‍ನಲ್ಲಿ ಇಂಥದ್ದೊಂದು ದುರ್ಘಟನೆ ನಡೆದುಹೋಗಿದೆ.

    ಸಂವಿಧಾನದ ಅನುಸೂಚಿ 371(ಎ) ಅನ್ವಯ ಸಾಂಪ್ರದಾಯಿಕ ಕಾನೂನುಗಳನ್ನು ಅನುಸರಿಸಲು ನಮಗೆ ಹಕ್ಕಿದೆ. ನಮ್ಮ ಕಾನೂನಿನಲ್ಲಿ ಮಹಿಳೆಯರಿಗೆ ಯಾವುದೇ ರಾಜಕೀಯ ಹಕ್ಕು ಕೊಡುವುದಿಲ್ಲ. ಅವರು ಚುನಾವಣೆಗಳಲ್ಲಿ ಭಾಗವಹಿಸಲು ಆಕ್ಷೇಪವಿಲ್ಲ. ಆದರೆ ಯಾವುದೇ ಮೀಸಲಾತಿ ನೀಡಬಾರದು. ಇದರಿಂದ ನಮ್ಮ ಸಾಂವಿಧಾನಿಕ ಹಕ್ಕನ್ನು ಉಲ್ಲಂಘಿಸಿದಂತಾಗುತ್ತದೆ ಅಂತ ಬುಡಕಟ್ಟು ಜನಾಂಗದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪುರಸಭೆ ಕಚೇರಿ, ಸಾರಿಗೆ ಕಚೇರಿ, ಡೆಪ್ಯೂಟಿ ಕಮೀಷನರ್ ಕಚೇರಿ, ಪ್ರೆಸ್ ಕ್ಲಬ್, ಸರ್ಕಾರಿ ಕಾರುಗಳಿಗೆ ಬೆಂಕಿ ಹಚ್ಚಿದ್ದಾರೆ. ಕಳೆದ ಬುಧವಾರ 12 ಟೌನ್‍ಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದ ವೇಳೆ ಮಹಿಳೆಯರಿಗೆ ಮೀಸಲಾತಿ ನೀಡುವವರೆಗೂ ಚುನಾವಣೆ ರದ್ದು ಮಾಡಬೇಕು ಅಂತ ಆಗ್ರಹಿಸಿದ್ರು. ಗೋಲಿಬಾರ್ ಖಂಡಿಸಿ ಸಿಎಂ ಟಿ.ಆರ್.ಜೀಲಿಯಾಂಗ್ ಗುರುವಾರ ಸಂಜೆ 4 ಗಂಟೆಯೊಳಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು. ಸಿಎಂ ರಾಜೀನಾಮೆ ನೀಡದ ಕಾರಣ ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ಬೀದಿಗಿಳಿದ ಪ್ರತಿಭಟನಕಾರರು ರೊಚ್ಚಿಗೆದ್ದು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಾಕಿದ್ದಾರೆ.

    ಇದ್ರಿಂದ 2 ತಿಂಗಳ ಮಟ್ಟಿಗೆ ಚುನಾವಣೆಯನ್ನ ಸರ್ಕಾರ ಮುಂದೂಡಿದೆ. ಪರಿಸ್ಥಿತಿ ನಿಯಂತ್ರಿಸಲು ಸೇನಾಪಡೆಗಳನ್ನ ನಿಯೋಜಿಸಲಾಗಿದೆ.