Tag: Kolar

  • Kolar | ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ ಬಿದ್ದು 3ನೇ ತರಗತಿ ವಿದ್ಯಾರ್ಥಿ ಸಾವು

    Kolar | ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ ಬಿದ್ದು 3ನೇ ತರಗತಿ ವಿದ್ಯಾರ್ಥಿ ಸಾವು

    ಕೋಲಾರ: ಶಾಲೆ ಆವರಣದಲ್ಲಿದ್ದ ಸಂಪ್‌ನಲ್ಲಿ (Sump)  ಬಿದ್ದು 3ನೇ ತರಗತಿ ವಿದ್ಯಾರ್ಥಿ (Student) ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಕಡದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನರೇಂದ್ರ (9) ಮೃತ ವಿದ್ಯಾರ್ಥಿ. ಕಡದನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದ ನರೇಂದ್ರ ಇಂದು ಬೆಳಗ್ಗೆ ಶಾಲೆಗೆಂದು ಬಂದು ಬಳಿಕ ನಾಪತ್ತೆಯಾಗಿದ್ದ. ಇದನ್ನೂ ಓದಿ: ಬೆಟ್ಟದಿಂದ ಉರುಳಿ ಕಾರಿನೊಳಕ್ಕೆ ಬಿದ್ದ ಬಂಡೆ ಕಲ್ಲು – ಮಹಿಳೆ ಸಾವು

    ಗ್ರಾಮದಲ್ಲೆಲ್ಲಾ ಹುಡುಕಾಟ ನಡೆಸಿದ ಪೋಷಕರು ಆತಂಕಗೊಂಡು ಎಲ್ಲೆಡೆ ವಿಚಾರಣೆ ನಡೆಸಿದರು. ಬಳಿಕ ಶಾಲೆ ಆವರಣದಲ್ಲಿರುವ ಸಂಪ್‌ನಲ್ಲಿ ವಿದ್ಯಾರ್ಥಿ ನರೇಂದ್ರ ಶವ ಪತ್ತೆಯಾಗಿದೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬರ್ತ್‌ಡೇ ಆಚರಿಸಲು ಬಂದ ಸ್ನೇಹಿತರಿಂದ್ಲೇ ಡೆತ್ ಡೇ – ಪಾರ್ಟಿಯ ಬಿಲ್ ಕಟ್ಟೋ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ

  • ಕೋಲಾರ | ಬಾರ್‌ನಲ್ಲಿ ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಕ್ಯಾಷಿಯರ್‌ನ ಬರ್ಬರ ಹತ್ಯೆ

    ಕೋಲಾರ | ಬಾರ್‌ನಲ್ಲಿ ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಕ್ಯಾಷಿಯರ್‌ನ ಬರ್ಬರ ಹತ್ಯೆ

    ಕೋಲಾರ: ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್‌ನ್ನು ಹೆಂಡತಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಲೂರು (Maluru) ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ.

    ಮೃತನನ್ನು ಹಾಸನ (Hassan) ಮೂಲದ ಕುಮಾರ್ (45) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಸುಭಾಷ್ ಎಂದು ಗುರುತಿಸಲಾಗಿದೆ. ಕೊಲೆಯಾದ ಕುಮಾರ್ ಲಕ್ಕೂರು ಗ್ರಾಮದ ಅಶೋಕ ವೈನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಬಂದಿದ್ದ ಆರೋಪಿ ಕುಡಿಯುವ ವೇಳೆ, ಮಿಕ್ಸ್ಚರ್ ಕೇಳಿದ್ದಾನೆ. ನೀಡದ ಹಿನ್ನೆಲೆ ಗಲಾಟೆಯಾಗಿತ್ತು. ಇದನ್ನೂ ಓದಿ: ಬೆಂಗಳೂರು | ಪತಿಯ ಚಿತ್ರಹಿಂಸೆ ತಾಳಲಾರದೇ 3ನೇ ಮಹಡಿಯಿಂದ ಜಿಗಿದ ಮಹಿಳೆ

    ಬಾರ್ ಬಂದ್ ಮಾಡಿ ಮನೆಗೆ ತೆರಳುತ್ತಿದ್ದ ಕುಮಾರ್‌ನನ್ನು ಆರೋಪಿ ಹಿಂಬಾಲಿಸಿದ್ದ. ಮನೆ ಬಳಿ ಬರುತ್ತಿದ್ದಂತೆ ಪತ್ನಿ, ಮಕ್ಕಳ ಎದುರೇ ಚುಚ್ಚಿ ಕೊಂದಿದ್ದಾನೆ.

    ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರೋಪಿ ಸುಭಾಷ್‍ಗಾಗಿ ಪೊಲೀಸರ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನಲ್ಲಿ ಭಾರತೀಯ ಮೂಲದ 20ರ ಯುವತಿ ಮೇಲೆ ಅತ್ಯಾಚಾರ

  • ಕೋಲಾರದ ಮಾಲೂರಿನಲ್ಲಿ ಯಶಸ್ವಿ RSS ಶತಾಬ್ದಿ ಪಥಸಂಚಲನ – ಮಹಿಳೆಯರಿಂದ ಗಣ ವೇಷಧಾರಿಗಳ ಮೇಲೆ ಪುಷ್ಪಾರ್ಚನೆ

    ಕೋಲಾರದ ಮಾಲೂರಿನಲ್ಲಿ ಯಶಸ್ವಿ RSS ಶತಾಬ್ದಿ ಪಥಸಂಚಲನ – ಮಹಿಳೆಯರಿಂದ ಗಣ ವೇಷಧಾರಿಗಳ ಮೇಲೆ ಪುಷ್ಪಾರ್ಚನೆ

    ಕೋಲಾರ: ರಾಜ್ಯದಲ್ಲಿ ಹಲವು ಗೊಂದಲ, ಪರ-ವಿರೋಧದ ನಡುವೆಯೂ ಕೋಲಾರ (Kolar) ಜಿಲ್ಲೆ ಮಾಲೂರು (Malur) ಪಟ್ಟಣದಲ್ಲಿ ಆರ್‌ಎಸ್‌ಎಸ್ ಪಥಸಂಚಲನ (RSS Parade) ಅದ್ಧೂರಿಯಾಗಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಜಿಲ್ಲಾಡಳಿತದ ಅನುಮತಿ ಪಡೆದು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಕ್ರೀಡಾಂಗಣದಲ್ಲೇ ಜಮಾವಣೆಗೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಪಥಸಂಚಲನ ನಡೆಸಲಾಯಿತು.

    ಹಲವು ಗೊಂದಲ ವಾದ-ವಿವಾದಗಳ ನಡುವೆಯೂ ಇಂದು ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅನುಮತಿ ಪಡೆದು ಆರ್‌ಎಸ್‌ಎಸ್ ಪಥಸಂಚಲನ ಎಂದಿಗಿಂತಲೂ ಅದ್ಧೂರಿಯಾಗಿ ನಡೆಯಿತು. ಸುಮಾರು ಮೂರು ಸಾವಿರಕ್ಕೂ ಅಧಿಕ ಆರ್‌ಎಸ್‌ಎಸ್ ಗಣವೇಷಧಾರಿಗಳು ಜಮಾವಣೆಗೊಂಡು ನಗರದಲ್ಲಿ ನಾಲ್ಕು ಕಿ.ಮೀ ಪಥಸಂಚಲನಕ್ಕೆ ಅನುಮತಿ ಪಡೆದು ಪೊಲೀಸರು ನೀಡಿದ ರೂಟ್ ಪ್ರಕಾರವಾಗಿಯೇ ಪಥಸಂಚಲನ ನಡೆಸಲಾಯಿತು.

    ಮೊದಲಿಗೆ ಮಾಲೂರು ಹೊಂಡಾ ಸ್ಟೇಡಿಯಂನಲ್ಲಿ ಜಮಾವಣೆಗೊಂಡು ನಂತರ ಆರ್‌ಎಸ್‌ಎಸ್ ಗೀತೆ ಹಾಡಿ ಅಲ್ಲಿಂದ ಮಾಲೂರಿನ ಬಿಇಓ ಕಚೇರಿ ವೃತ್ತ, ಕುವೆಂಪು ವೃತ್ತ, ಧರ್ಮರಾಯ ಸ್ವಾಮಿ ದೇವಾಲಯ, ಅಗ್ರಹಾರ ಬೀದಿ, ಕುಂಬಾರಪೇಟೆ ವೃತ್ತ, ದೊಡ್ಡಪೇಟೆ, ಮಹಾರಾಜ ಸರ್ಕಲ್, ಬಾಬುರಾವ್ ರಸ್ತೆ, ಕೆಂಪೇಗೌಡ ಸರ್ಕಲ್, ಮಾರಿಕಾಂಭಾ ಸರ್ಕಲ್, ಬ್ರಹ್ಮಕುಮಾರಿ ರಸ್ತೆ, ಅರಳೇರಿ ರಸ್ತೆಯ ಮೂಲಕ ಮತ್ತೆ ಹೋಂಡಾ ಸ್ಟೇಡಿಯಂವರೆಗೆ ನಾಲ್ಕು ಕಿ.ಮೀ ಪಥಸಂಚಲನ ನಡೆಯಿತು. ಪಥಸಂಚಲನದ ದಾರಿಯುದ್ದಕ್ಕೂ ಸಾವಿರಾರು ಜನರು ರಸ್ತೆ ಬದಿಯಲ್ಲಿ ನಿಂತು ಪಥಸಂಚಲನವನ್ನು ಕಣ್ತುಂಬಿಕೊಂಡರು. ಜನರು ತಮ್ಮ ಮೊಬೈಲ್‌ಗಳಲ್ಲಿ ಫೋಟೋ ವಿಡಿಯೋ ಮಾಡಿಕೊಂಡರು. ಇನ್ನು ಪಥಸಂಚಲನ ಸಾಗಿದ ದಾರಿಯುದ್ದಕ್ಕೂ ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಪಥ ಸಂಚಲನದ ಗಣವೇಷಧಾರಿಗಳ ಮೇಲೆ ಹೂವಿನ ಸುರಿಮಳೆಗೈದರು. ಇನ್ನು ನಗರದ ಮಸೀದಿ ಬೀದಿಯಲ್ಲೂ ಕೂಡಾ ಜನರು ಗಣವೇಷಧಾರಿಗಳು ಸಾಗುವ ರಸ್ತೆಯಲ್ಲಿ ಹೂ ಹಾಕಿ ಸ್ವಾಗತಿಸಿದರು. ಪಥಸಂಚಲನದ ನಂತರ ಮಾತನಾಡಿದ ಮಾಜಿ ಸಂಸದ ಮುನಿಸ್ವಾಮಿ ಯಾರು ಎಷ್ಟೇ ವಿರೋಧ ಮಾಡಿದಷ್ಟು ಜನ ಬೆಂಬಲ ಜಾಸ್ತಿಯಾಗುತ್ತದೆ, ಯಾರೋ ಕೆಲವು ಕುನ್ನಿಗಳು ಆರ್‌ಎಸ್‌ಎಸ್ ಬಗ್ಗೆ ಮಾತನಾಡುತ್ತಾರೆ, ಜನರ ಬೆಂಬಲ ಆರ್‌ಎಸ್‌ಎಸ್ ಪರ ಇದೆ ಅನ್ನೋದಕ್ಕೆ ಮಾಲೂರಿನ ಪಥಸಂಚಲನವೇ ಸಾಕ್ಷಿ ಎಂದರು.

    ಇನ್ನು ಆರ್‌ಎಸ್‌ಎಸ್ ಮೊದಲಿನಿಂದಲೂ ರಾಜ್ಯದಲ್ಲಿ ಹಲವು ಗೊಂದಲಗಳಿದ್ದರೂ ಕೂಡಾ ಜಿಲ್ಲಾಡಳಿತದ ಅನುಮತಿ ಪಡೆದು, ಪೊಲೀಸ್ ಇಲಾಖೆಯ ಅನುಮತಿ ಪಡೆದು ಯಶಸ್ವಿಯಾಗಿ ನಿರೀಕ್ಷೆಗೂ ಮೀರಿದ ಗಣವೇಷಧಾರಿಗಳನ್ನು ಸೇರಿಸಿಕೊಂಡು ಪಥಸಂಚಲ ನಡೆಸಲಾಗಿದೆ. ಆರ್‌ಎಸ್‌ಎಸ್ ಅಸ್ಥಿತ್ವಕ್ಕೆ ಬಂದು ನೂರು ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಶತಾಬ್ದಿ ಪಥಸಂಚಲನ ನಡೆಸುವ ಮೂಲಕ ದೇಶದಾಂದ್ಯಂತ ಒಂದು ಸಂಚಲನ ಮೂಡಿಸುವ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಪರೋಕ್ಷವಾಗಿ ಮೂಗುದಾರ ಹಾಕುವ ಪ್ರಯತ್ನ ಮಾಡಿತಾದರೂ, ಇಂದು ಮಾಲೂರಿನಲ್ಲಿ ಪೊಲೀಸ್ ಸರ್ಪಗಾವಲಿನಲ್ಲಿ ಯಶಸ್ವಿಯಾಗಿ ನಡೆಯಿತು. ಇನ್ನು ಪಥಸಂಚಲದಲ್ಲಿ ವಿಶೇಷ ಆಕರ್ಷಣೆ ಎನ್ನುವಂತೆ ಪುಟಾಣಿ ಮಕ್ಕಳು ಕೂಡಾ ಗಣವೇಷ ಧರಿಸಿ ಕೋಲು ಹಿಡಿದು ಪಥಸಂಚಲದಲ್ಲಿ ಸಾಗಿ ಗಮನ ಸೆಳೆದರು. ಇನ್ನು ಪಥಸಂಚಲನದಲ್ಲಿ ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ, ಮಾಜಿ ಶಾಸಕ ಮಂಜುನಾಥಗೌಡ, ಮಾಜಿ ಸಂಸದ ಮುನಿಸ್ವಾಮಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

  • ಕೋಲಾರದಲ್ಲಿಂದು ಸಾವಿರಾರು ಗಣವೇಷಧಾರಿಗಳಿಂದ ಪಥಸಂಚಲನ – ಪೊಲೀಸ್‌ ಬಿಗಿ ಬಂದೋಬಸ್ತ್

    ಕೋಲಾರದಲ್ಲಿಂದು ಸಾವಿರಾರು ಗಣವೇಷಧಾರಿಗಳಿಂದ ಪಥಸಂಚಲನ – ಪೊಲೀಸ್‌ ಬಿಗಿ ಬಂದೋಬಸ್ತ್

    ಕೋಲಾರ: ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನ (RSS Route March) ಪ್ರಕರಣ ದಿನದಿಂದ ದಿನಕ್ಕೆ ಜಟಿಲವಾಗುತ್ತಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ಇಂದು ಜಿಲ್ಲಾಡಳಿತ ಆರ್‌ಎಸ್‌ಎಸ್ ಸೇರಿ 8 ಸಂಘಟನೆಗಳಿಗೆ ಶಾಂತಿ ಸಭೆಗೆ ಆಗಮಿಸಲು ನೋಟಿಸ್ ನೀಡುತ್ತಿದೆ. ಹೀಗಾಗಿ ಜಿಲ್ಲಾಡಳಿತದ ಶಾಂತಿ ಸಭೆಯ ನಿರ್ಧಾರದತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ. ಈ ನಡುವೆ ಆರ್‌ಎಸ್‌ಎಸ್‌ ಶತಮಾನೋತ್ಸವದ ಪ್ರಯುಕ್ತ ಕೋಲಾರದ (Kolara) ಮಾಲೂರಿನಲ್ಲಿ ಇಂದು ಪಥಸಂಚಲನ ಹಮ್ಮಿಕೊಳ್ಳಲಾಗಿದೆ.

    ಪಥಸಂಚಲನಕ್ಕೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅನುಮತಿ ಪಡೆಯಲಾಗಿದೆ. ಹೀಗಾಗಿ ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಥಸಂಚಲನ ಆರಂಭವಾಗಲಿದ್ದು, ಒಟ್ಟು 4 ಕಿಮೀ ಪಥಸಂಚನ ನಡೆಯಲಿದೆ. ಸಾವಿರಾರು ಗಣವೇಶಧಾರಿಗಳು ಇದರಲ್ಲಿ ಭಾಗಿಯಾಗುವ ಸಾಧ್ಯತೆಯಿದೆ.

    ಎಲ್ಲೆಲ್ಲಿ ಪಥಸಂಚಲನ?
    ಮಾಲೂರು ಹೋಂಡಾ ಸ್ಟೇಡಿಯಂ ನಿಂದ ಆರಂಭವಾಗಿ ಪಥಸಂಚನಲ ಶುರುವಾಗಿ ಬಿಇಓ ಆಫೀಸ್ ರಸ್ತೆ ಮಾರ್ಗವಾಗಿ ಕುವೆಂಪು ವೃತ್ತ, ಧರ್ಮರಾಯ ಸ್ವಾಮಿ ದೇವಾಲಯ, ಅಗ್ರಹಾರ ಬೀದಿ, ಕುಂಬಾರಪೇಟೆ ವೃತ್ತ. ದೊಡ್ಡಪೇಟೆ, ಮಹಾರಾಜ ಸರ್ಕಲ್, ಬಾಬುರಾವ್ ರಸ್ತೆ, ಕೆಂಪೇಗೌಡ ಸರ್ಕಲ್, ಮಾರಿಕಾಂಭಾ ಸರ್ಕಲ್, ಬ್ರಹ್ಮಕುಮಾರಿ ರಸ್ತೆ, ಅರಳೇರಿ ರಸ್ತೆಯ ಮೂಲಕ ಮತ್ತೆ ಹೋಂಡಾ ಸ್ಟೇಡಿಯಂ ನಲ್ಲಿ ಕೊನೆಗೊಳ್ಳಲಿದೆ.

    ಬಿಗಿ ಬಂದೋಬಸ್ತ್‌
    ಆರ್‌ಎಸ್‌ಎಸ್ ಪಥ ಸಂಚಲನ ಹಿನ್ನೆಲೆ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸುಮಾರು 250 ಹೆಚ್ಚು ಪೊಲೀಸರಿಂದ ಭದ್ರತೆ ನೀಡಲಾಗಿದೆ. ಮಾಜಿ ಶಾಸಕರು, ಮಾಜಿ ಸಂಸದರು ಸೇರಿ ನೂರಾರು ಮುಖಂಡರು ಪಥಚಂದಲನದಲ್ಲಿ ಪಾಲ್ಗೊಳ್ಳಲಿದ್ದಾರೆ.

  • Kolar | ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ

    Kolar | ಶಾಲೆಗೆ ಹೋದ ವಿದ್ಯಾರ್ಥಿನಿಯರು ನಾಪತ್ತೆ

    ಕೋಲಾರ: ಶಾಲೆಗೆಂದು (School) ಹೋದ ಇಬ್ಬರು ವಿದ್ಯಾರ್ಥಿನಿಯರು (Students) ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ನರಸಾಪುರ ಗ್ರಾಮದ ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿತರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ. ಇತ್ತ ಶಾಲೆಗೂ ಹೋಗದೆ ಮನೆಗೂ ಬಾರದೆ ಕಣ್ಮರೆಯಾಗಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಇನ್ನೂ ಬೆಳಗ್ಗೆ ಶಾಲೆಗೆ ಹೋದವರು ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಆತಂಕಗೊಂಡ ಪೋಷಕರು ಶುಕ್ರವಾರ ಇಡೀ ದಿನ ಮಕ್ಕಳಿಗಾಗಿ ಹುಡಕಾಟ ನಡೆಸಿದ್ದಾರೆ. ಇದನ್ನೂ ಓದಿ: ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿ ಬ್ಲ್ಯಾಕ್‌ಮೇಲ್‌ ಆರೋಪ; ಕಿರುತೆರೆ ನಟಿ ವಿರುದ್ಧ FIR

    ರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆ ಮಕ್ಕಳನ್ನ ಹುಡುಕಿಕೊಡಿ ಎಂದು ಕೋಲಾರದ ಮಹಿಳಾ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇನ್ನೂ ಇಬ್ಬರು ವಿದ್ಯಾರ್ಥಿನಿಯರು ಹತ್ತನೇ ತರಗತಿ ಓದುತ್ತಿದ್ದು, ಎಲ್ಲಿಗೆ ಹೋಗಿದ್ದಾರೆ ಅನ್ನೋ ಮಾಹಿತಿ 24 ಗಂಟೆಯಾದರೂ ಇನ್ನೂ ಲಭ್ಯವಾಗಿಲ್ಲ. ಹೀಗಾಗಿ ಪೋಷಕರು ಹಾಗೂ ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಇದನ್ನೂ ಓದಿ: Mysuru | ಬಾತ್‌ರೂಂನಲ್ಲಿ ಗ್ಯಾಸ್ ಗೀಸರ್ ಸೋರಿಕೆ; ಉಸಿರುಗಟ್ಟಿ ಅಕ್ಕ-ತಂಗಿ ಸಾವು

  • ಅನುದಾನದಲ್ಲಿ ತಾರತಮ್ಯ – ಹೈಕೋರ್ಟ್ ಮೊರೆ ಹೋದ ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

    ಅನುದಾನದಲ್ಲಿ ತಾರತಮ್ಯ – ಹೈಕೋರ್ಟ್ ಮೊರೆ ಹೋದ ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

    – ಬಿಜೆಪಿ, ಜೆಡಿಎಸ್ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ

    ಕೋಲಾರ: ಕೋಲಾರದ (Kolar) ಶ್ರೀನಿವಾಸಪುರ ಜೆಡಿಎಸ್ ಶಾಸಕ ತನ್ನ ಕ್ಷೇತ್ರದ ಅಭಿವೃದ್ಧಿಗೆ ಅನುದಾನ (Grant) ನೀಡದ ಸರ್ಕಾರದ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    ಸರ್ಕಾರದ ತಾರತಮ್ಯ ನೀತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜೆಡಿಎಸ್ ಶಾಸಕ ರಿಟ್ ಅರ್ಜಿ ಸಲ್ಲಿಸಿದ್ದು, ಇದು ಅನುದಾನ ಗೊಂದಲ ಹಾಗೂ ಗಲಾಟೆಗೆ ಕಾರಣವಾಗಿದೆ. ಶ್ರೀನಿವಾಸಪುರ ಜೆಡಿಎಸ್ ಶಾಸಕ ವೆಂಕಟಶಿವಾರೆಡ್ಡಿ (Venkatashiva Reddy) ಹೈಕೋರ್ಟ್‌ನಲ್ಲಿ (High Court) ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ ನಮಗೂ ಸರ್ಕಾರ ಅನುದಾನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    ಕಾಂಗ್ರೆಸ್ ಶಾಸಕರಿಗೆ ಮಾತ್ರ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿರುವ ಸರ್ಕಾರ, ಜೆಡಿಎಸ್ ಹಾಗೂ ಬಿಜೆಪಿ ಶಾಸಕರಿರುವ ಕಡೆಗಳಲ್ಲಿ ಅನುದಾನ ನೀಡುತ್ತಿಲ್ಲ ಎಂದು ಈ ಮೊದಲೇ ಕಿಡಿಕಾರಿದ್ದರು. ಅದರಂತೆ ಕ್ಷೇತ್ರದ ಅಭಿವೃದ್ಧಿಗಾಗಿ ಪದೇ ಪದೇ ಮನವಿ ಮಾಡಿದರೂ ಸಹ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಸರ್ಕಾರ ಸಂವಿಧಾನದ ಆರ್ಟಿಕಲ್ 14ರ ಸಮಾನತೆಯ ನೀತಿ ಉಲ್ಲಂಘಿಸಿದೆ ಎಂದು ಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಅನುದಾನ ಬಿಡುಗಡೆ ಮಾಡದಿದ್ರೆ ರಾಜಕೀಯ ನಿವೃತ್ತಿ, ಯಾವ ಪಕ್ಷಕ್ಕೂ ಹೋಗಲ್ಲ: ಶಾಸಕ ಸತೀಶ್ ಸೈಲ್

    ಜೆಡಿಎಸ್, ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಈ ಮೊದಲು ವಿಧಾನಸಭೆ ಅಧಿವೇಶನದಲ್ಲೂ ಪ್ರಸ್ತಾಪ ಮಾಡಿದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಜೆಡಿಎಸ್ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಈ ಹಿಂದೆಯೂ ಹಲವು ಬಾರಿ ಅನುದಾನ ನೀಡದೆ ತಾರತಮ್ಯ ಮಾಡಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಪದೆಪದೇ ಕೆಂಡ ಕಾರಿದ್ದರು. ಇದನ್ನೂ ಓದಿ: ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

  • ಬಾಳೆದಿಂಡು ತರಲು ಹೋದ ಬಾಲಕ ನಾಪತ್ತೆ – ಹೊಳೆ ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ

    ಬಾಳೆದಿಂಡು ತರಲು ಹೋದ ಬಾಲಕ ನಾಪತ್ತೆ – ಹೊಳೆ ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ

    ಕೋಲಾರ: ಬಾಳೆದಿಂಡು (Banana Stem) ತರಲು ಹೋದ ಬಾಲಕ (Boy) ನಾಪತ್ತೆಯಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ತಾಲೂಕು ವಿಟ್ಟಪನಹಳ್ಳಿಯ ರಾಜಣ್ಣ ಎಂಬವರ ಮಗ ಸ್ನೇಹಿತ್ ಗೌಡ (14) ನಾಪತ್ತೆಯಾದ ಬಾಲಕ. ಸ್ನೇಹಿತ್ ಕಳೆದ 2 ದಿನಗಳ ಹಿಂದೆ ತನ್ನ ಸೈಕಲ್‌ನಲ್ಲಿ ಬಾಳೆದಿಂಡು ತರಲು ಮನೆಯಿಂದ ಹೋದವನು ಇದುವರೆಗೂ ಪತ್ತೆಯಾಗಿಲ್ಲ. ಇದನ್ನೂ ಓದಿ: Uttara Kannada | ಬೇಲಿಕೇರಿ ಬಂದರಿನಲ್ಲಿ ಬೋಟ್ ಮುಳುಗಡೆ

    ಬಾಲಕನಿಗಾಗಿ ಕಳೆದ ಮೂರು ದಿನಗಳಿಂದ ಪೋಷಕರು ಮತ್ತು ಕುಟುಂಬಸ್ಥರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ತೋಟದ ಬಳಿ ಸೈಕಲ್ ಇದೆ, ಆದರೆ ಬಾಲಕ ಪತ್ತೆಯಾಗದಿರುವುದು ಪೋಷಕರಲ್ಲಿ ಆತಂಕವನ್ನು ಉಂಟು ಮಾಡಿದೆ. ಇದನ್ನೂ ಓದಿ: ಗ್ರೇಟರ್‌ ಬೆಂಗಳೂರು ಚುನಾವಣೆ – 50% ಮಹಿಳಾ ಮೀಸಲಾತಿ ಮಾಡೋಣ: ಡಿಕೆ ಶಿವಕುಮಾರ್‌

    ಇನ್ನು ಪಕ್ಕದಲ್ಲೇ ಹೊಳೆ ನೀರು ಹರಿಯುತ್ತಿದ್ದು, ಬಾಲಕ ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲು ಮಾಡಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: BETL ಅಧಿಕಾರಿಗಳ ನಿರ್ಲಕ್ಷ್ಯ – ಹೊಸೂರು ರಸ್ತೆಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

  • Kolar | ಮದುವೆ ಮುಗಿಸಿ ವಾಪಸ್ ಹೋಗುತ್ತಿದ್ದ ಬಸ್ ಪಲ್ಟಿ – 30ಕ್ಕೂ ಹೆಚ್ಚು ಮಂದಿಗೆ ಗಾಯ

    Kolar | ಮದುವೆ ಮುಗಿಸಿ ವಾಪಸ್ ಹೋಗುತ್ತಿದ್ದ ಬಸ್ ಪಲ್ಟಿ – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಕೋಲಾರ: ಮದುವೆ ಆರತಕ್ಷತೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಬಸ್ (Bus) ನಿಯಂತ್ರಣ ತಪ್ಪಿ ಕಾಲುವೆಗೆ (Canal) ಬಿದ್ದ ಪರಿಣಾಮ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೋಲಾರ (Kolar) ತಾಲೂಕು ಸುಗಟೂರು (Sugatur) ಗ್ರಾಮದ ಬಳಿ ನಡೆದಿದೆ.

    ಕೋಲಾರದ ವಧು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವರನ ಮದುವೆ ಆರತಕ್ಷತೆ ಕೋಲಾರ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿತ್ತು. ಆರತಕ್ಷತೆಗೆ ಮೂರು ಖಾಸಗಿ ಬಸ್‌ಗಳಲ್ಲಿ ಬಂದಿದ್ದ ಜನರು ಆರತಕ್ಷತೆ ಮುಗಿಸಿಕೊಂಡು ಸಂಭ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು ದಿಬ್ಬೂರಹಳ್ಳಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 55 ಜನರಿದ್ದು, ಆ ಪೈಕಿ 30 ಜನರಿಗೆ ಗಾಯಗಳಾಗಿದೆ. ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಈ ಪೈಕಿ 15 ಜನ ಮಹಿಳೆಯರು ಸೇರಿದ್ದಾರೆ. ಭೀಕರ ಅಪಘಾತದಲ್ಲಿ ಬಸ್ ಕಾಲುವೆಗೆ ಉರುಳಿದ ಪರಿಣಾಮ ಬಸ್ ನಲ್ಲಿದ್ದ ಜನರೆಲ್ಲರೂ ಬಹುತೇಕ ನೀರಿಗೆ ಬಿದ್ದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಘಟನೆ ನಡೆದ ವೇಳೆ ಬಸ್‌ನಲ್ಲಿದ್ದ ಜನರು ಗಾಬರಿಯಾಗಿ ಕಿರುಚಾಡಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಬಸ್‌ನಲ್ಲಿದ್ದ ಜನರನ್ನು ರಕ್ಷಣೆ ಮಾಡಿ ಕೂಡಲೇ ಗಾಯಳುಗಳನ್ನು ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲವು ಮಹಿಳೆಯರು ಮದುವೆಗೆಂದು ಹಾಕಿಕೊಂಡು ಬಂದಿದ್ದ ಚಿನ್ನದ ಒಡವೆ ಹಾಗೂ ಮೊಬೈಲ್‌ಗಳು ನೀರಿನಲ್ಲಿ ಬಿದ್ದಿವೆ ಎನ್ನಲಾಗಿದೆ. ಸದ್ಯ ಅಪಘಾತದಿಂದ ಮದುವೆ ಮನೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮದುವೆಯ ಸಂಭ್ರಮದಲ್ಲಿದ್ದ ಸಂಬಂಧಿಗಳು ಆಸ್ಪತ್ರೆಗೆ ಬಂದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

  • Koalr | ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ಸಾವು, ನಾಲ್ವರಿಗೆ ಗಾಯ

    Koalr | ಸೇತುವೆ ಮೇಲಿಂದ ಕಾರು ಬಿದ್ದು ಓರ್ವ ಸಾವು, ನಾಲ್ವರಿಗೆ ಗಾಯ

    ಕೋಲಾರ: ಸೇತುವೆ (Bridge) ಮೇಲಿಂದ ಕಾರೊಂದು (Car) ಕೆಳಗೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಕೋಲಾರ (Kolar) ಜಿಲ್ಲೆ ಕೆಜಿಎಫ್‌ನ (KGF) ಕೃಷ್ಣಾವರಂ ಬಳಿ ನಡೆದಿದೆ.

    ಕರ್ಣ (48) ಮೃತ ವ್ಯಕ್ತಿ. ಫೋರ್ಡ್ ಇಕೋಸ್ಪೋರ್ಟ್ ಕಾರು ಸೇತುವೆ ಮೇಲಿಂದ ಬಿದ್ದು ಘಟನೆ ಸಂಭವಿಸಿದೆ. ಘಟನೆಯಲ್ಲಿ ಉಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: `ಶಕ್ತಿ’ ಚಂಡಮಾರುತ ಎಫೆಕ್ಟ್ – ಗಡಿಜಿಲ್ಲೆ ಬೀದರ್‌ನಲ್ಲಿ ವರುಣನ ಅಬ್ಬರ ಜೋರು

    ಬೆಮೆಲ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಚಿತ್ರದುರ್ಗ | ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್‌ಗೆ ಲಾರಿ ಡಿಕ್ಕಿ – ಗಂಭೀರ ಗಾಯ

  • ಕೋಲಾರ | ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ

    ಕೋಲಾರ | ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ

    – ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯರು

    ಕೋಲಾರ: ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು (Mulbagal) ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.

    ಪತ್ತೆಯಾದ ಮೃತದೇಹಗಳನ್ನು ಧನ್ಯಬಾಯಿ (13), ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ. ಗುರುವಾರ (ಅ.2) ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇದನ್ನೂ ಓದಿ: ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಸದ್ಯ ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.