Tag: Kolar

  • ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    ಪರಪ್ಪನ ಅಗ್ರಹಾರ ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರು ಶಂಕಿತ ಉಗ್ರರ ಬಂಧನ

    * ಬೆಂಗಳೂರು, ಕೋಲಾರದಲ್ಲಿ ಎನ್‌ಐಎ ಬೇಟೆ
    * 2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ ಪತ್ತೆ ಪ್ರಕರಣದಲ್ಲಿ ನಡೆದಿತ್ತು ಶೋಧ

    ಬೆಂಗಳೂರು: ಎಲ್‌ಇಟಿ ಭಯೋತ್ಪಾದಕ ಚಟುವಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಕೋಲಾರದಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಐಎ, ಜೈಲು ಎಎಸ್‌ಐ, ಮನೋವೈದ್ಯ ಸೇರಿ ಮೂವರನ್ನು ಬಂಧಿಸಿದೆ.

    ಬೆಂಗಳೂರಿನ ಪರಪ್ಪನ ಅಗ್ರಹಾರದ ಮನೋವೈದ್ಯ ಡಾ. ನಾಗರಾಜ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಚಾನ್ ಪಾಷಾ ಮತ್ತು ತಲೆಮರೆಸಿಕೊಂಡಿರುವ ಆರೋಪಿಯ ತಾಯಿ ಅನೀಸ್ ಫಾತಿಮಾರನ್ನು ಬಂಧಿಸಲಾಗಿದೆ. ಶೋಧನಾ ಸಮಯದಲ್ಲಿ, ಬಂಧಿತ ಆರೋಪಿಗಳು ಮತ್ತು ಇತರ ಶಂಕಿತರ ಮನೆಗಳಿಂದ ವಿವಿಧ ಡಿಜಿಟಲ್ ಸಾಧನಗಳು, ನಗದು, ಚಿನ್ನ ಮತ್ತು ಅಪರಾಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

    2023 ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೈಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್‌ ಜೈಲಿನಲ್ಲಿದ್ದಾನೆ.

    ಕೋರ್ಟ್‌ಗಳಲ್ಲಿ ಹಣ ಎಕ್ಸ್‌ಚೇಂಜ್ ಮಾಡಲು‌ ಎಎಸ್‌ಐ ಚಾನ್‌ ಪಾಷಾ ಸಹಾಯ ಮಾಡಿದ್ದ. ನಾಸೀರ್ ವೈದ್ಯರಿಂದ ಮೊಬೈಲ್‌ ಪಡೆಯುತ್ತಿದ್ದ. ಜೀವಂತ ಗ್ರೆನೇಡ್‌ ಕೇಸ್‌ನಲ್ಲಿ ಜುನೈದ್‌ ಎಸ್ಕೇಪ್‌ ಆಗಿದ್ದಾನೆ.

  • ಪ್ರಿಯಕರನ ನಂಬಿ ಗಂಡನ ಬಿಟ್ಟು ಬಂದ ಮಹಿಳೆ – ಗರ್ಭಿಣಿ ಮಾಡಿ ಪರಾರಿಯಾದ ಯುವಕ!

    ಪ್ರಿಯಕರನ ನಂಬಿ ಗಂಡನ ಬಿಟ್ಟು ಬಂದ ಮಹಿಳೆ – ಗರ್ಭಿಣಿ ಮಾಡಿ ಪರಾರಿಯಾದ ಯುವಕ!

    • ನ್ಯಾಯಕ್ಕಾಗಿ ಮಹಿಳೆಯಿಂದ ಏಕಾಂಗಿ ಪ್ರತಿಭಟನೆ 

    ಕೋಲಾರ: ಪ್ರಿಯಕರನ ನಂಬಿ ಗಂಡನನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಗರ್ಭಿಣಿ ಮಾಡಿ, ಈಗ ಪರಾರಿಯಾಗಿರುವುದು ಕೋಲಾರದಲ್ಲಿ (Kolar) ನಡೆದಿದೆ. ಮಹಿಳೆ ನ್ಯಾಯಕ್ಕಾಗಿ ಅಂಬೇಡ್ಕರ್‌ ಫೋಟೋ ಹಿಡಿದು, ಯುವಕನ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾಳೆ.

    ಶ್ರೀನಿವಾಸಪುರ (Srinivasapura) ಪಟ್ಟಣದ ಸುಭಾಶ್ ನಗರದ ಯುವಕ ವಂಚಿಸಿದ್ದಾನೆ ಎಂದು ಆರ್.ತಿಮ್ಮಸಂದ್ರ ಗ್ರಾಮದ ಮಹಿಳೆಯೊಬ್ಬಳು ಆರೋಪಿಸಿದ್ದಾಳೆ. ಬೆಂಗಳೂರಿನಲ್ಲಿ (Bengaluru) ಪತಿ ಜೊತೆಗೆ ವಾಸವಿದ್ದಾಗ, ಗಂಡನ ಸ್ನೇಹಿತನ ಪರಿಚಯವಾಗಿತ್ತು. ಬಳಿಕ ಇಬ್ಬರ ನಡುವೆ ಸಂಬಂಧ ಬೆಳೆದು, ಗಂಡನ ಬಿಟ್ಟು ಬಂದಿದ್ದಳು. ಈಗ ಮಹಿಳೆ 5 ತಿಂಗಳ ಗರ್ಭಿಣಿಯಾಗಿದ್ದು, ಮದುವೆಗೆ ನಿರಾಕರಿಸಿದ್ದಾನೆ ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

    ಗಂಡನನ್ನು ಬಿಟ್ಟು ಆತನ ಸ್ನೇಹಿತನ ಲವ್ ಬಲೆಗೆ ಬಿದ್ದಿದ್ದ ವಿವಾಹಿತ ಮಹಿಳೆ ಇದೀಗ ಬೀದಿ ಪಾಲಾಗಿದ್ದಾಳೆ. ಅತ್ತ ಗಂಡನನ್ನು ಬಿಟ್ಟು ಬಂದಿದ್ದ ಮಹಿಳೆಗೆ ಪ್ರಿಯಕರ ಸಹ ಕೈಕೊಟ್ಟಿದ್ದಾನೆ. ಇದರಿಂದ ಮಹಿಳೆ ಕಂಗಾಲಾಗಿದ್ದು, ಪ್ರತಿಭಟನೆ ಹಾದಿ ಹಿಡಿದಿದ್ದಾಳೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ. ಇದನ್ನೂ ಓದಿ: Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು

  • ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

    ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

    ಕೋಲಾರ: ಶಾಲೆಯ ಆವರಣದ ಪಕ್ಕದಲ್ಲಿದ್ದ ನೇರಳೆ ಹಣ್ಣು (Jamun Fruit) ತಿಂದು 7 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪುತ್ರಸೊನ್ನೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ವೇಳೆ ಊಟದ ಬಳಿಕ ಶಾಲೆಯ ಆವರಣದಲ್ಲಿದ್ದ ನೇರಳೆ ತಿನ್ನುತ್ತಿದ್ದಂತೆ 7 ಜನ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದೆ. ಕೂಡಲೆ ಎಚ್ಚೆತ್ತ ಪೋಷಕರು ಹಾಗೂ ಶಿಕ್ಷಕರು ಮಕ್ಕಳಿಗೆ ಚಿಕಿತ್ಸೆ ಕೊಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

    ಅದರಂತೆ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ 6 ಜನ ವಿದ್ಯಾರ್ಥಿಗಳನ್ನು ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಒರ್ವ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೈದ್ಯರು ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದು, ಮಕ್ಕಳನ್ನ ವೈದ್ಯರು ಪರಿವೀಕ್ಷಣೆಯಲ್ಲಿರಿಸಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಿಇಓ ಗುರುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ

    ಶಾಲೆಯ ಪಕ್ಕದಲ್ಲಿರುವ ರೈತರು ಅದನ್ನು ಕಡಿದು ಅಲ್ಲಿ ಹಾಕಿದ್ದಾರೆ. ಹಾಗಾಗಿ ಕೆಂಪಾಗಿದ್ದ ನೇರಳೆ ತಿಂದು ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೂಡಲೇ ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಮಕ್ಕಳಿಗೆ ಯಾವುದೆ ತೊಂದರೆ ಇಲ್ಲ. ನಾಲ್ಕು ಗಂಟೆ ಮಕ್ಕಳ ಮೇಲೆ ನಿಗಾ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.  ಇದನ್ನೂ ಓದಿ: ರಂಭಾಪುರಿ ಶ್ರೀಗಳು ಹೇಳಿದ ಮಾತು ನಿಜ ಆಗುತ್ತೆ, ಭಗವಂತನೇ ಶ್ರೀಗಳ ಬಾಯಲ್ಲಿ ಇದನ್ನು ಹೇಳಿಸಿರಬಹುದು: ಇಕ್ಬಾಲ್ ಹುಸೇನ್

  • ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

    ಬೆಳಿಗ್ಗೆ ಮದುವೆ, ರಾತ್ರಿ ನೇಣು ಬಿಗಿದು ಆತ್ಮಹತ್ಯೆ – ಡೇಟಾ ಆಪರೇಟರ್ ಸಾವಿನ ಸುತ್ತ ಅನುಮಾನದ ಹುತ್ತ

    ಕೋಲಾರ: ಬೆಳಿಗ್ಗೆ ಮದುವೆಯಾಗಿದ್ದ ವ್ಯಕ್ತಿ ಅದೇ ದಿನ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಬಂಗಾರಪೇಟೆ (Bangarpete) ತಾಲೂಕಿನ ನಾಯಕರಹಳ್ಳಿ ಮೂಲದ ಹರೀಶ್ ಬಾಬು (33) ನೇಣಿಗೆ ಶರಣಾಗಿದ್ದು, ಕಳೆದ 8 ವರ್ಷಗಳಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.ಇದನ್ನೂ ಓದಿ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿ ಆಗಲಿ: ಸಂಸದ ಯದುವೀರ್

    ಕಳೆದ ಮೂರು ದಿನಗಳಿಂದ ರಜೆಯಲ್ಲಿದ್ದ ಹರೀಶ್ ಬಾಬು, ಬುಧವಾರ ಬೆಳಿಗ್ಗೆ ರಿಜಿಸ್ಟಾರ್ ಮ್ಯಾರೇಜ್ ಆಗಿದ್ದರು. ಆದರೆ ಅದೇ ದಿನ ರಾತ್ರಿ 11:30ರ ಸುಮಾರಿಗೆ ಆಸ್ಪತ್ರೆಯ ಇಎನ್‌ಟಿ ವಿಭಾಗದ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

    ಈ ಕುರಿತು ಮೃತ ಹರೀಶ್ ಬಾಬು ತಾಯಿ ಮಾತನಾಡಿ, ಒಂದು ತಿಂಗಳ ಹಿಂದೆ ಯುವತಿಯೊಬ್ಬಳು ನಮ್ಮ ಮನೆಗೆ ಬಂದು ನಾನು ಹಾಗೂ ಹರೀಶ್ ಮದುವೆಯಾಗುತ್ತೇವೆ ಎಂದಳು. ಅದಕ್ಕೆ ಕೆಲ ದಿನಗಳ ನಂತರ ನಾನೇ ಮಾಡುತ್ತೇನೆ ಎಂದು ಹೇಳಿದ್ದೆ. ಆದರೆ ಬುಧವಾರ ಬೆಳಿಗ್ಗೆ ಯುವತಿ ಕಡೆಯವರು ಬಂದು ನನ್ನ ಮಗನನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಮದುವೆ ಮಾಡಿಸಿದ್ದಾರೆ ಎಂದು ತಿಳಿಸಿದರು.

    ಮೃತ ಹರೀಶ್ ಬುಧವಾರ ರಾತ್ರಿ 11:15ರ ಸುಮಾರಿಗೆ ಆಸ್ಪತ್ರೆಯೊಳಗೆ ಹೋಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮದ್ಯ ಸೇವನೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಲ್ಯಾಂಬೋರ್ಗಿನಿ ಭೀಕರ ಅಪಘಾತ; ಫುಟ್ಬಾಲ್‌ ಆಟಗಾರ ಡಿಯೋಗೊ ದುರಂತ ಸಾವು

  • ನನಗೆ ಸಿಎಂ, ಡಿಸಿಎಂ ವಿರುದ್ಧ ಅಸಮಾಧಾನ ಇಲ್ಲ: ಕೆವೈ ನಂಜೇಗೌಡ

    ನನಗೆ ಸಿಎಂ, ಡಿಸಿಎಂ ವಿರುದ್ಧ ಅಸಮಾಧಾನ ಇಲ್ಲ: ಕೆವೈ ನಂಜೇಗೌಡ

    – ನನ್ನ ಅಸಮಾಧಾನ ಜಿಲ್ಲೆಯ ಕೆಲ ಶಾಸಕರ ವಿರುದ್ಧ ಎಂದ ಶಾಸಕ

    ಕೋಲಾರ: ನನಗೆ ಸರ್ಕಾರ, ಮಂತ್ರಿಗಳ ವಿರುದ್ಧ ಬೇಸರ ಇಲ್ಲ. ನನ್ನ ಅಸಮಾಧಾನ ಏನಿದ್ದರೂ ಜಿಲ್ಲೆಯ ಕೆಲ ಶಾಸಕರ ವಿರುದ್ಧ ಎಂದು ಮಾಲೂರು ಶಾಸಕ ಕೆವೈ ನಂಜೇಗೌಡ (KY Nanjegowda) ಹೇಳಿದ್ದಾರೆ.

    ಕೋಲಾರದಲ್ಲಿ (Kolar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾದಿಯಾಗಿ ಡಿಸಿಎಂ, ಸಚಿವರು ನನಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಯಾವುದೇ ಮಂತ್ರಿಗಳು ಸಹ ನನಗೆ ಅನುದಾನ ನೀಡದೆ ಇಲ್ಲ. ಸರ್ಕಾರದಲ್ಲಿ ಮಂತ್ರಿ ಮಂಡಲದಲ್ಲಿ ಎಲ್ಲರೂ ನನಗೆ ಸಹಕಾರ ನೀಡಿದ್ದಾರೆ ಎಂದರು. ಇದನ್ನೂ ಓದಿ: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿದ್ದರಾಮಯ್ಯ

    ನಾಳೆ ಬೆಳಗ್ಗೆ ನನಗೆ ಸುರ್ಜೇವಾಲ ಅವರು ಬುಲಾವ್ ನೀಡಿದ್ದಾರೆ. ಪಕ್ಷಕ್ಕೆ ಡ್ಯಾಮೇಜ್ ಆಗುವ ಕೆಲ ಶಾಸಕರ ವರ್ತನೆ ಜೊತೆಗೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಬೆಳವಣಿಗೆಗಳ ಕುರಿತು ತಿಳಿಸುವೆ. ಪಕ್ಷಕ್ಕಿಂತ ನಾವ್ಯಾರು ದೊಡ್ಡವರಲ್ಲ, ಪಕ್ಷಕ್ಕೆ ನಾವೆಲ್ಲರೂ ಬದ್ಧ. ಅಂತಹ ವಿಚಾರಗಳನ್ನು ನಾನು ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡುವೆ ಎಂದು ಹೇಳಿದರು. ಇದನ್ನೂ ಓದಿ: 60 ವರ್ಷದಿಂದ ಉಳುಮೆ ಮಾಡ್ತಿದ್ದ ರೈತನಿಗೆ ಶಾಕ್ – ತಹಶೀಲ್ದಾರ್ ಸಹಿ ನಕಲಿಸಿ, 8 ಎಕರೆ ಬೇರೆಯವ್ರ ಹೆಸರಿಗೆ ವರ್ಗ

    ಪಕ್ಷ ಇಂತಹ ದೊಡ್ಡ ಅವಕಾಶ ಮಾಡಿಕೊಟ್ಟಿರುವುದು ನನ್ನ ಪುಣ್ಯ. ಹಾಗಾಗಿ ನಾಳೆ ಸುರ್ಜೇವಾಲ ಅವರನ್ನ ಭೇಟಿಯಾಗಿ ಎಲ್ಲಾ ವಿಚಾರಗಳ ಕುರಿತು ಚರ್ಚಿಸುವೆ. ಅಲ್ಲದೇ ಡಿಸಿಸಿ ಬ್ಯಾಂಕ್ ಹಾಗೂ ಕೋಮುಲ್ ಬೆಳವಣಿಗೆಗಳ ಕುರಿತು ಮಾತನಾಡುವೆ ಎಂದು ತಿಳಿಸಿದರು. ಇದನ್ನೂ ಓದಿ: ಹೃದಯಾಘಾತವಲ್ಲ ಟ್ರ್ಯಾಕ್ಟರ್ ಅಪಘಾತದಲ್ಲಿ ಹಾಸನದ ಯೋಧ ಸಾವು

  • ಸಿಗದ ಬೆಂಬಲ ಬೆಲೆ – ಕೋಲಾರದಲ್ಲಿ ಹೆದ್ದಾರಿಗೆ ಮಾವು ಸುರಿದು ರೈತರ ಪ್ರತಿಭಟನೆ

    ಸಿಗದ ಬೆಂಬಲ ಬೆಲೆ – ಕೋಲಾರದಲ್ಲಿ ಹೆದ್ದಾರಿಗೆ ಮಾವು ಸುರಿದು ರೈತರ ಪ್ರತಿಭಟನೆ

    ಕೋಲಾರ: ಮಾವಿನ ಹಣ್ಣಿಗೆ (Mango Crop) ಬೆಂಬಲ ಬೆಲೆ ಸಿಗದ ಹಿನ್ನೆಲೆ, ಕೋಲಾರದಲ್ಲಿ (Kolar) ಮಾವು ಬೆಳೆಗಾರರು (Mango Growers) ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

    ನಗರದ ಹೊರ ವಲಯದ ಕೊಂಡರಾಜನಹಳ್ಳಿ ಬಳಿ ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿ ತಡೆದು, ಮಾವಿನ ಹಣ್ಣನ್ನು ರಸ್ತೆಯಲ್ಲಿ ಸುರಿದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೆಂಬಲ ಬೆಲೆ ನೀಡದ ಹಿನ್ನೆಲೆ, ಕಳೆದ 22 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಬಂದ್, ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಇದರಿಂದ ಹೆದ್ದಾರಿ ತಡೆದು ರೈತರು ಪ್ರತಿಭಟನೆ ಆರಂಭಿಸಿದ್ದಾರೆ. ಇದನ್ನೂ ಓದಿ: ಮಾವು ಬೆಳೆಗೆ ಬೆಂಬಲ ಬೆಲೆ ಇಂದು ಸಂಪುಟದಲ್ಲಿ ನಿರ್ಧಾರ: ಬೈರತಿ ಸುರೇಶ್

    ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ನೀಡುವಂತೆ ರೈತರು ಒತ್ತಾಯಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ. ಮಾವು ಬೆಳೆಗಾರರನ್ನು ಸರ್ಕಾರ ಬೀದಿಗೆ ತಳ್ಳಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರಹಾಕಿದ್ದಾರೆ.

    ಇತ್ತೀಚೆಗೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು. ಇದನ್ನೂ ಓದಿ: Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

  • ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ: ರಾಮಲಿಂಗಾರೆಡ್ಡಿ

    ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ: ರಾಮಲಿಂಗಾರೆಡ್ಡಿ

    ಬೆಂಗಳೂರು: ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಬೆಂಬಲ ಬೆಲೆ ಕೊಡುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ, ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.ಇದನ್ನೂ ಓದಿ: ಮುನೀರ್‌ಗೆ ಟ್ರಂಪ್‌ ಡಿನ್ನರ್‌ – ಪಾಕ್‌ ನೆಲದಿಂದ ಅಮೆರಿಕ ಇರಾನ್‌ ಮೇಲೆ ದಾಳಿ ಮಾಡುತ್ತಾ?

    ಮಾವು ಬೆಲೆ ಕುಸಿತದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಪ್ರಾರಂಭದಲ್ಲಿ ಮಾವು ಮೇಳ ಮಾಡಿದಾಗ ನಾನು ಹೋಗಿದ್ದೆ. ಆಗ ಬೆಲೆ ಜಾಸ್ತಿಯಿತ್ತು. ಈಗ ದಿಢೀರ್ ಅಂತ ಕಡಿಮೆ ಆಗಿದೆ. ಈ ಬಾರಿ ಬೆಳೆ ಜಾಸ್ತಿಯಾಗಿ, ಫಸಲು ಜಾಸ್ತಿ ಬಂದಿದೆ. ಕೋಲಾರದ (Kolar) ಹಣ್ಣು ಆಂಧ್ರಪ್ರದೇಶಕ್ಕೆ (Andhra Pradesh) ಹೋಗುತ್ತಿತ್ತು. ಈಗ ಆಂಧ್ರಪ್ರದೇಶದ ಸಿಎಂ ಕೋಲಾರದ ಹಣ್ಣಿಗೆ ಬ್ಯಾನ್ ಮಾಡಿದ್ದಾರೆ. ಹೀಗಾಗಿ ಬೆಲೆ ಕುಸಿತವಾಗಿದೆ ಎಂದು ತಿಳಿಸಿದರು.

    ಬೆಲೆ ಕುಸಿತದ ಬಗ್ಗೆ ಕಳೆದ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿದ್ದೆವು. ಇವತ್ತು ಮತ್ತೆ ಚರ್ಚೆ ಮಾಡುತ್ತೇವೆ. ರೈತರು ಬೆಂಬಲ ಬೆಲೆ ಕೇಳುತ್ತಿದ್ದಾರೆ. ಇದರ ಬಗ್ಗೆ ಇವತ್ತು ಚರ್ಚೆ ಮಾಡಿ, ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.ಇದನ್ನೂ ಓದಿ: ಮಲೆ ಮಾದಪ್ಪ ಮತ್ತೆ ಕೋಟಿ ಒಡೆಯ – 34 ದಿನದಲ್ಲಿ 15 ವಿದೇಶಿ ಕರೆನ್ಸಿ ಸೇರಿ 2.6 ಕೋಟಿ ಸಂಗ್ರಹ

  • ಮಾವು ಬೆಳೆಗೆ ಬೆಂಬಲ ಬೆಲೆ ಇಂದು ಸಂಪುಟದಲ್ಲಿ ನಿರ್ಧಾರ: ಬೈರತಿ ಸುರೇಶ್

    ಮಾವು ಬೆಳೆಗೆ ಬೆಂಬಲ ಬೆಲೆ ಇಂದು ಸಂಪುಟದಲ್ಲಿ ನಿರ್ಧಾರ: ಬೈರತಿ ಸುರೇಶ್

    ಬೆಂಗಳೂರು: ಮಾವು ಬೆಳೆಗೆ (Mango Crop) ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ (Byrathi Suresh) ತಿಳಿಸಿದ್ದಾರೆ.

    ಕೋಲಾರ (Kolar) ಜಿಲ್ಲೆಯಲ್ಲಿ ಅತಿ ಹೆಚ್ಚು ಮಾವನ್ನು ಬೆಳೆಯುತ್ತಾರೆ. ಈ ಬಾರಿ ಮಾವು ಬೆಲೆ ತೀವ್ರ ಕುಸಿತ ಉಂಟಾಗಿರುವುದರಿಂದ ರೈತರು (Farmers) ಕಂಗಾಲಾಗಿದ್ದಾರೆ. ಈ ರೈತರ ನೆರವಿಗೆ ಧಾವಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬ್ರೇಕ್ – ಓಲಾ ಸೇರಿ ಅಗ್ರಿಗೇಟರ್‌ ಕಂಪನಿಗಳಿಂದ ಸುಲಿಗೆ

    ರಾಜ್ಯದಲ್ಲಿ ಅದರಲ್ಲೂ ಕೋಲಾರದಲ್ಲಿ ಬೆಳೆಯುತ್ತಿರುವ ತೋತಾಪುರಿ ಸೇರಿದಂತೆ ಇತರೆ ಮಾವು ಬೆಳೆ ಪ್ರವೇಶವನ್ನು ಆಂಧ್ರಪ್ರದೇಶ ಸರ್ಕಾರ ನಿರ್ಬಂಧಿಸಿರುವುದರಿಂದ ರೈತರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಈ ನಿರ್ಬಂಧವನ್ನು ತೆರವುಗೊಳಿಸುವಂತೆ ನಮ್ಮ ಮುಖ್ಯಮಂತ್ರಿಗಳು ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ಎರಡು ಬಾರಿ ಪತ್ರ ಬರೆದು ಮನವಿ ಮಾಡಿದ್ದರೂ ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: Bengaluru | ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ ಸ್ಕೂಲ್ ವ್ಯಾನ್ – ಸವಾರ ಬಚಾವ್

    ಆಂಧ್ರ ಪ್ರದೇಶ ಸರ್ಕಾರ ರಾಜ್ಯದ ಮಾವು ಬೆಳೆಗೆ ನಿರ್ಬಂಧ ಹೇರುವ ಮೂಲಕ ನಮ್ಮ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಇದು ಅಮಾನವೀಯ ಕ್ರಮವಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಕೊಡುಕೊಳ್ಳುವಿಕೆ ಇರಬೇಕು. ಆದರೆ, ಆಂಧ್ರ ಪ್ರದೇಶ ನಮ್ಮ ಬೆಳೆಗೆ ನಿರ್ಬಂಧ ಹೇರಿರುವುದರಿಂದ ಮುಂದಿನ ದಿನಗಳಲ್ಲಿ ನಮ್ಮ ರಾಜ್ಯವೂ ಆ ರಾಜ್ಯದ ಬೆಳೆಗಳ ಪ್ರವೇಶಕ್ಕೆ ನಿರ್ಬಂಧಿಸುವ ಕುರಿತು ಗಂಭೀರ ಚಿಂತನೆ ನಡೆಸಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೊಡಗು | 7ನೇ ಹೊಸಕೋಟೆ ಗ್ರಾಪಂ ಸದಸ್ಯೆ ಪುತ್ರ ಬೆಂಗಳೂರಿನಲ್ಲಿ ಆತ್ಮಹತ್ಯೆ

    ಇಂದು ಬೆಂಬಲ ಬೆಲೆ ನಿರ್ಧಾರ:
    ಕೋಲಾರದ ಮಾವು ಬೆಳೆಗಾರರೊಂದಿಗೆ ಸಭೆ ನಡೆಸಿ ಅವರ ಸಂಕಷ್ಟಗಳನ್ನು ಆಲಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಬೆಳೆಗಾರರ ನೆರವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬೆಳೆಗಾರರನ್ನು ಬೆಲೆ ಕುಸಿತದಿಂದ ಪಾರು ಮಾಡುವ ಉದ್ದೇಶದಿಂದ ಅವರಿಗೆ ಮಾವು ಬೆಳೆಗೆ ಬೆಂಬಲ ಬೆಲೆ ನೀಡಲು ನಿರ್ಧರಿಸಲಾಗಿದೆ. ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಅಸ್ಸಾಂ | ಧುಬ್ರಿಯಲ್ಲಿ ಗೋವಿನ ತಲೆ ಪತ್ತೆ ಕೇಸ್ – 30ಕ್ಕೂ ಹೆಚ್ಚು ಜನ ಅರೆಸ್ಟ್‌

  • ಕೋಲಾರದಲ್ಲಿ ಎಟಿಎಂ ದರೋಡೆ – 27 ಲಕ್ಷ ದೋಚಿದ ಕಳ್ಳರು

    ಕೋಲಾರದಲ್ಲಿ ಎಟಿಎಂ ದರೋಡೆ – 27 ಲಕ್ಷ ದೋಚಿದ ಕಳ್ಳರು

    ಕೋಲಾರ: ಇಲ್ಲಿನ (Kolar) ಸಹಕಾರ ನಗರದ ಎಸ್‍ಬಿಐ (SBI) ಬ್ಯಾಂಕ್‍ನ ಎಟಿಎಂನಲ್ಲಿದ್ದ (ATM) ಸುಮಾರು 27 ಲಕ್ಷ ರೂ. ಹಣವನ್ನು (Money) ಕಳ್ಳರು ದೋಚಿದ್ದಾರೆ.

    ಕೋಲಾರ ನಗರದ ಗಲ್ ಪೇಟೆ ಪೊಲೀಸ್ ಠಾಣೆಯ ಸಮೀಪ ಈ ಘಟನೆ ನಡೆದಿದೆ. ಎಟಿಎಂನಲ್ಲಿ ಸುಮಾರು 27 ಲಕ್ಷ ರೂ. ಹಣ ಇತ್ತು. ಕಳ್ಳರು ಎಲ್ಲಾ ಹಣವನ್ನು ದೋಚಿದ್ದಾರೆ. ಇದನ್ನೂ ಓದಿ: ರ‍್ಯಾಪಿಡೊ ಚಾಲಕನಿಂದ ಹಲ್ಲೆ – ಒಂದೇ ಏಟಿಗೆ ಕೆಳಗೆ ಬಿದ್ದ ಯುವತಿ, ಸ್ಥಳೀಯರಿಂದ ರಕ್ಷಣೆ

    ಸ್ಥಳಕ್ಕೆ ಕೋಲಾರ ಎಸ್‍ಪಿ ನಿಖಿಲ್ ಸೇರಿದಂತೆ ಬೆರಳಚ್ವು ತಜ್ಞರು, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರದ ಇಂದ್ರಯಾಣಿ ನದಿ ಸೇತುವೆ ಕುಸಿತ – ಕರ್ನಾಟಕದ ಟೆಕ್ಕಿ ಸಾವು

  • Kolar | ಜಮೀನು ವಿವಾದ – ಅಣ್ಣಂದಿರಿಂದಲೇ ತಮ್ಮನ ಕೊಲೆ

    Kolar | ಜಮೀನು ವಿವಾದ – ಅಣ್ಣಂದಿರಿಂದಲೇ ತಮ್ಮನ ಕೊಲೆ

    ಕೋಲಾರ: ಜಮೀನು ವಿವಾದ (Land Dispute) ಹಿನ್ನೆಲೆ ಅಣ್ಣ ತಮ್ಮನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಕೆಜಿಎಫ್ (KGF) ತಾಲೂಕು ಎನ್‌ಜಿ ಹುಲ್ಕರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ಆಸ್ತಿಯಲ್ಲಿ ನಾಲ್ಕು ಗುಂಟೆ ಪಾಲು ಬೇಕೆಂದು ಮೂವರು ಅಣ್ಣ ತಮ್ಮಂದಿರು ನ್ಯಾಯಾಲಯದ ಮೊರೆ ಹೋಗಿದ್ದರು. ಜಮೀನು ವಿವಾದ ಸದ್ಯ ನ್ಯಾಯಾಲಯದಲ್ಲಿ ಬಾಕಿ ಇದ್ದು, ಸದರಿ ಜಮೀನಿನಲ್ಲಿ ತಮ್ಮ ರಮೇಶ್ ಶೆಡ್ ನಿರ್ಮಿಸಲು ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

    ಈ ಬಗ್ಗೆ ವಿಚಾರ ತಿಳಿದ ಸೀನಪ್ಪ (ಶ್ರೀನಿವಾಸ್) ಮತ್ತು ಸಂಪಂಗಿ ಇಬ್ಬರೂ ರಮೇಶ್ ಬಳಿ ತಕರಾರು ತೆಗೆದಿದ್ದಾರೆ. ಸೀನಪ್ಪ ಮತ್ತು ರಮೇಶ್ ನಡುವೆ ಮಾತಿನ ಚಕಮಕಿ ನಡೆದು ಕೋಪಾವೇಶದಲ್ಲಿ ಸೀನಪ್ಪ ಪಕ್ಕದಲ್ಲಿದ್ದ ದೊಣ್ಣೆಯನ್ನು ತೆಗೆದು ರಮೇಶ್‌ಗೆ ಬಲವಾಗಿ ಹೊಡೆದ ಪರಿಣಾಮ ರಮೇಶ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಘಟನೆ ನಡೆಯುವಾಗ ಅಕ್ಕಪಕ್ಕದ ಜನರೂ ಗುಂಪುಗೂಡಿದ್ದು, ತಮ್ಮ ಮೃತನಾದ ಎಂದು ತಿಳಿಯುತ್ತಿದ್ದಂತೆ ಭಯದಿಂದ ಸೀನಪ್ಪ ಮತ್ತು ಸಂಪಂಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

    ವಿಷಯ ತಿಳಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಆರೋಪಿ ಸೀನಪ್ಪನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂಪಂಗಿ ಪರಾರಿಯಾಗಿದ್ದು, ಬೇತಮಂಗಳ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬ್ರಿಟನ್‌ನ F-35 ಫೈಟರ್‌ ಜೆಟ್‌ ಕೇರಳದಲ್ಲಿ ತುರ್ತು ಭೂಸ್ಪರ್ಶ – ಕಾರಣ ಏನು?